Tag: ಅಪೇಕ್ಷಾ

  • ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.  ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

    ತನ್ನ ವಿಭಿನ್ನ ಕಂಟೆಂಟ್ ಜೊತೆಗೆ ರಾಷ್ಟ್ರಪ್ರಶಸ್ತಿಗೂ ಭಜನವಾಗಿರುವ, ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದಿರುವ ಡೊಳ್ಳು ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಮೂರನೇ ವಾರ ನಾಮಿನೇಷನ್‌ ಸ್ಟಾರ್ಟ್‌: ಉದಯ್‌ ಸೂರ್ಯಗೆ ಮನೆಯಿಂದ ಗೇಟ್‌ ಪಾಸ್?

    ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಈ ಸಿನಿಮಾವನ್ನು ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್, ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಆಗಸ್ಟ್​ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರವನ್ನು ನೋಡುವಂತೆ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್ ಅವರಿಗೂ ಚಿತ್ರತಂಡ ಇತ್ತೀಚೆಗೆ ಆಮಂತ್ರಣ ನೀಡಿತ್ತು. ಶೀರ್ಘದಲ್ಲಿಯೇ ರಾಜ್ಯಪಾಲರು ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಪ್ತಪದಿ ತುಳಿದ ಪವನ್ ಒಡೆಯರ್, ಅಪೇಕ್ಷಾ ಪುರೋಹಿತ್

    ಸಪ್ತಪದಿ ತುಳಿದ ಪವನ್ ಒಡೆಯರ್, ಅಪೇಕ್ಷಾ ಪುರೋಹಿತ್

    ಬಾಗಲಕೋಟೆ: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ಇಂದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ನಿರ್ದೇಶಕ ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ಇವರಿಬ್ಬರ ಮದುವೆ ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದ್ದು, ಪವನ್ ಒಡೆಯರ್ ಹಿರಿಯ ಸಮ್ಮುಖದಲ್ಲಿ ಇಂದು ಬೆಳಗ್ಗೆ 9.05 ಶುಭ ಮುಹೂರ್ತದಲ್ಲಿ ನಟಿ ಅಪೇಕ್ಷಾ ಪುರೋಹಿತ್ ತಾಳಿ ಕಟ್ಟಿ ಮದುವೆಯಾಗಿದ್ದಾರೆ.

    ಭಾನುವಾರ ಆರತಕ್ಷತೆ ಕಾರ್ಯಕ್ರಮ ಸಹ ಅದ್ಧೂರಿಯಾಗಿ ನೆರವೇರಿದೆ. ಪವನ್ ಒಡೆಯರ್ ಮತ್ತು ಅಪೇಕ್ಷಾ ಅವರ ಮದುವೆಗೆ ನಟ ಪುನೀತ್ ರಾಜ್ ಕುಮಾರ್ ಬಂದಿದ್ದು, ನವವಧು-ವರರಿಗೆ ಶುಭ ಹಾರೈಸಿದ್ದಾರೆ. ಇದೇ ತಿಂಗಳು ಬೆಂಗಳೂರಿನಲ್ಲಿ ಸಿನಿಮಾರಂಗದವರಿಗಾಗಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಚಿಸಲಾಗಿದೆ.

    ಕಳೆದ ಡಿಸೆಂಬರ್ ತಿಂಗಳಲ್ಲಿ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ರವರ ನಿಶ್ಚಿತಾರ್ಥ ಸಮಾರಂಭ ಬಾಗಲಕೋಟೆಯ ಹರಿಪ್ರಿಯಾ ಹೋಟೆಲ್‍ನಲ್ಲಿ ನೆರವೇರಿತ್ತು. ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ ನಡೆದಿದ್ದು, ಪರಸ್ಪರ ಇಬ್ಬರು ಉಂಗುರವನ್ನು ಬದಲಾಯಿಸಿಕೊಂಡಿದ್ದರು.

    ನಿರ್ದೇಶಕ ಪವನ್ ಒಡೆಯರ್ `ರಣವಿಕ್ರಮ’, `ನಟರಾಜ ಸರ್ವಿಸ್’, `ಗೂಗ್ಲಿ’ ಹಾಗೂ `ಗೋವಿಂದಾಯ ನಮಃ’ ಸಿನಿಮಾಗಳನ್ನು ಮಾಡಿದ್ದಾರೆ. ಪವನ್ ಒಡೆಯರ್ ಸದ್ಯ ಪುನೀತ್ ರಾಜ್ ಕುಮಾರ್ ಅವರ `ನಟ ಸಾರ್ವಭೌಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

    ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ಬಿಡುಗಡೆಗೊಂಡ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

    ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

    ಬಾಗಲಕೋಟೆ: ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮತ್ತು ಕಾಫಿತೋಟ ಚಿತ್ರದ ನಾಯಕಿ ಅಪೇಕ್ಷಾ ಪುರೋಹಿತ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ನಗರದ ಹರಿಪ್ರಿಯಾ ಹೋಟೆಲ್‍ನಲ್ಲಿ ಪವನ್ ಮತ್ತು ಅಪೇಕ್ಷಾ ಅವರ ನಿಶ್ಚಿತಾರ್ಥ ನೆರವೇರಿದ್ದು, ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ ನಡೆದಿದೆ. ಪರಸ್ಪರ ಇಬ್ಬರು ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ.

    ಉಂಗುರ ಬದಲಾಯಿಸಿಕೊಂಡ ನಂತರ ನಿರ್ದೇಶಕ ಮತ್ತು ನಟಿ ಪರಸ್ಪರ ಸಿಹಿ ತಿನ್ನಿಸಿ, ಸೆಲ್ಫಿ ತೆಗೆದುಕೊಂಡು ಸಂಭ್ರಮ ಪಟ್ಟಿದ್ದಾರೆ. ಪವನ್ ಒಡೆಯರ್ ಗೋಲ್ಡನ್ ಕಲರ್ ಶೆರ್ವಾನಿಯಲ್ಲಿ ಮಿಂಚಿದ್ದರೆ, ಅಪೇಕ್ಷಾ ಹಸಿರು ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಕುಟುಂಬದ ಆಪ್ತರು, ಸ್ನೇಹಿತರು ಮಾತ್ರ ಸಾಕ್ಷಿಯಾಗಿದ್ದು, ಸ್ಯಾಂಡಲ್ ವುಡ್ ಸದಸ್ಯರು ಈ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

    ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ಬಿಡುಗಡೆಗೊಂಡ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ಅಪೇಕ್ಷಾ ಓದಿದ್ದು ಫ್ಯಾಷನ್ ಡಿಸೈನಿಂಗ್. ಕನ್ನಡ ಖಾಸಗಿ ವಾಹಿನಿಯೊಂದರಲ್ಲಿ ಮೂಡಿ ಬರುತ್ತಿದ್ದ `ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ಕಿರುತೆರೆಯಿಂದ ಬೆಳ್ಳಿ ತೆರೆಗೆ ಬರಲು ಟಿ.ಎನ್. ಸೀತಾರಾಮ್ ನಿರ್ದೇಶನದ `ಕಾಫೀ ತೋಟ’ ಸಿನಿಮಾ ಇವರಿಗೆ ಉತ್ತಮ ಅವಕಾಶವನ್ನು ನೀಡಿತ್ತು. ಸಿನಿಮಾ ರಂಗಕ್ಕೆ ಅಚ್ಚರಿಯಾಗಿ ಬಂದ ಇವರು `ಕಿನಾರೆ’ ಮತ್ತು `ಕಾಣದ ಕಡಲಿಗೆ’ ಎಂಬ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ.