Tag: ಅಪೌಷ್ಟಿಕತೆ

  • ಮಕ್ಕಳಲ್ಲಿ ಹೆಚ್ಚಿದ ಅಪೌಷ್ಟಿಕತೆ: 3 ವಾರಗಳಲ್ಲಿ ವರದಿ ಸಲ್ಲಿಸುವಂತೆ `ಹೈ’ ಸೂಚನೆ

    ಮಕ್ಕಳಲ್ಲಿ ಹೆಚ್ಚಿದ ಅಪೌಷ್ಟಿಕತೆ: 3 ವಾರಗಳಲ್ಲಿ ವರದಿ ಸಲ್ಲಿಸುವಂತೆ `ಹೈ’ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ನೇಮಕ ಮಾಡಲಾಗಿರುವ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

    ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠವು, ರಾಜ್ಯದಲ್ಲಿ ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ 2011ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಹೈಕೋರ್ಟ್ ಆದೇಶ

    high court (1)

    ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್ ಅವರು `ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಿತ್ತು. ಆ ವರದಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

    ಕೇಂದ್ರ ಸರ್ಕಾರದ ಪರ ವಕೀಲ ಉನ್ನಿಕೃಷ್ಣನ್ ಅವರು `ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದು ವೇಳೆ ಉನ್ನತ ಮಟ್ಟದ ಸಮಿತಿ ಆ ಕುರಿತು ಶಿಫಾರಸ್ಸು ಮಾಡಿದರೆ, ಅದಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.

    ರಾಜ್ಯ ಸರ್ಕಾರದ ಪರ ವಕೀಲರು, ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ, ಶೌಚಗೃಹ ನಿರ್ಮಾಣ ಸೇರಿ ಇತರ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಗಳನ್ನು ಪಾಲನೆ ಮಾಡಲಾಗಿದೆ. ಆ ಸಂಬಂಧ ಅನುಪಾಲನಾ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ ಆದೇಶ ಪಾಲಿಸಬೇಕು: ಖರ್ಗೆ

    ಅಪೌಷ್ಟಿಕತೆ ನಿವಾರಿಸಲು ಕ್ರಮಕ್ಕೆ ಸೂಚನೆ: ಅಮರಾವತಿ ಜಿಲ್ಲೆಯ ಮೆಲ್ಘಾಟ್ ಪ್ರದೇಶದ ಮಕ್ಕಳಲ್ಲಿ ಅಪೌಷ್ಟಿಕತೆಯ ವಿರುದ್ಧದ ದೂರುಗಳ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ. 2007ರಿಂದ ಪಿಐಎಲ್‌ಗಳನ್ನು ಸಲ್ಲಿಸಿದಾಗಿನಿಂದ ಈ ಪ್ರದೇಶದಲ್ಲಿ ಅಪೌಷ್ಟಿಕತೆ ನಿಭಾಯಿಸಲು ಸಹಕಾರಿ ಪ್ರಯತ್ನವಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ರಾಜ್ಯ ಇಲಾಖೆಗಳಿಗೆ ನಿರ್ದೇಶನ ನೀಡಿದೆ.

    COURT NEW

    ಇದೇ ವೇಳೆ ಮಕ್ಕಳು ಅಪೌಷ್ಟಿಕತೆಯಿಂದ ಸಾಯುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ತಜ್ಞ ವೈದ್ಯರನ್ನು ಮೇಲ್ಘಾಟ್ ಪ್ರದೇಶ ಮತ್ತು ಇತರ ಬುಡಕಟ್ಟು ಪ್ರದೇಶಗಳಿಗೆ ಕಳುಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಎರಡು ವಾರಗಳಲ್ಲಿ ವರದಿ ನೀಡುವಂತೆ ಪೀಠವು ರಾಜ್ಯ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಎಚ್ಚರಿಕೆ ನೀಡಿದೆ.

    ಅರ್ಜಿದಾರರಾದ ಡಾ.ರಾಜೇಂದ್ರ ಬರ್ಮಾ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಜುಗಲ್‌ಗಿಲ್ಡಾ ಅವರು, ಮೆಲ್ಘಾಟ್ ಪ್ರದೇಶ ಮಾತ್ರವಲ್ಲದೆ ನೆರೆಯ ಇತರ ಬುಡಕಟ್ಟು ಪ್ರದೇಶಗಳ ಮಕ್ಕಳು ಮತ್ತು ತಾಯಂದಿರಿಗೆ ನಿರೀಕ್ಷಿತ ವೈದ್ಯಕೀಯ ನೆರವು ಸಿಗುತ್ತಿಲ್ಲ. ಕೋವಿಡ್ ಸಾಂಕ್ರಾಮಿಕ ಅವಧಿಯ ನಂತರ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ಅರ್ಜಿದಾರ ಬಾನುಸಾನೆ, ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಮೆಲ್ಘಾಟ್ ಪ್ರದೇಶದಲ್ಲಿ ಇನ್ನೂ 900 ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು. ಈಗಾಗಲೇ ಅಪೌಷ್ಟಿಕತೆಯಿಂದ 70ಕ್ಕೂ ಹೆಚ್ಚು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 11,000ಕ್ಕೂ ಹೆಚ್ಚು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಆದರೂ ಅಲ್ಲಿನ ಅಭಿವೃದ್ಧಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ. ಇಲ್ಲಿ ಶಿಶುವೈದ್ಯರು ಅಥವಾ ಸ್ತ್ರೀ ರೋಗತಜ್ಞರು ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಸರ್ಕಾರಿ ಆಸ್ಪತ್ರೆಗಳ ಸ್ತ್ರೀರೋಗತಜ್ಞರು, ಶಿಶುವೈದ್ಯರು ಮತ್ತು ರೇಡಿಯಾಲಜಿಸ್ಟ್‌ಗಳನ್ನು ರಾಜ್ಯಾದ್ಯಂತ ಬುಡಕಟ್ಟು ಪ್ರದೇಶಗಳಲ್ಲಿ ನಿಯಮಿತ ಭೇಟಿಗಾಗಿ ನಿಯೋಜಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

     

  • ರಾಯಚೂರು ಜಿಲ್ಲೆಯನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ

    ರಾಯಚೂರು ಜಿಲ್ಲೆಯನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ

    ರಾಯಚೂರು: ಅಪೌಷ್ಟಿಕತೆಯಿಂದ ತಾಂಡವವಾಡುತ್ತಿದ್ದ ಜಿಲ್ಲೆ ಈಗ ಪೌಷ್ಟಿಕತೆ ವಿಚಾರದಲ್ಲಿ ಪ್ರಗತಿ ಕಾಣುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

     

    ನೀತಿ ಆಯೋಗದ ಸಭೆಯಲ್ಲಿ ರಾಯಚೂರು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ ಮೋದಿ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಶ್ಲಾಘಿಸಿದ್ದಾರೆ. 70% ಇದ್ದ ಪೌಷ್ಟಿಕತೆ ಈಗ 97% ರಷ್ಟು ತಲುಪಿದೆ.  ಮಹತ್ವಾಕಾಂಕ್ಷೆ ಯೋಜನೆಯಡಿ ಒಳ್ಳೆ ಕೆಲಸಗಳನ್ನು ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದರು. ಇದನ್ನೂ ಓದಿ: ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಡಳಿತವನ್ನು ಶ್ಲಾಘಿಸಿದ್ದಾರೆ. ರಾಯಚೂರು ಜಿಲ್ಲೆ ಅಪೌಷ್ಟಿಕತೆ ವಿಚಾರದಲ್ಲಿ ಗಂಭೀರ ಸಮಸ್ಯೆಯನ್ನ ಎದುರಿಸುತ್ತಿದ್ದು , 5 ವರ್ಷ ಒಳಗಿನ ಮಕ್ಕಳ ಸಾವಿನ ಸಂಖ್ಯೆ ಈಗಲೂ ಹೆಚ್ಚಿದೆ. ಹಿಂದಿಗಿಂತಲೂ ಪೌಷ್ಠಿಕತೆಯಲ್ಲಿ ಜಿಲ್ಲೆ ಈಗ ಅಭಿವೃದ್ಧಿ ಸಾಧಿಸಿರುವ ಹಿನ್ನೆಲೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಸುಳ್ಳು ಸುದ್ದಿ ಪ್ರಚಾರ- 19 ಯೂಟ್ಯೂಬ್ ಚಾನೆಲ್ ಬಂದ್

  • ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ

    ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ

    ರಾಯಚೂರು: ಕ್ಷೀರಭಾಗ್ಯ ಯೋಜನೆಯಡಿ ಶಾಲೆಗಳಿಗೆ ಹಾಲಿನ ಪುಡಿ ಸರಬರಾಜು ಮಾಡದೇ ಲಕ್ಷಾಂತರ ರೂ. ಗೋಲ್‍ಮಾಲ್ ಮಾಡಿರುವ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

    ಆಕಾಶ್ ಎಂ ಗಾಣಿಗ ಗೋಲ್‍ಮಾಲ್ ಮಾಡಿದ ಆರೋಪಿ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಸಮತೋಲನ ಆಹಾರ ನೀಡುವ ಉದ್ದೇಶದಿಂದ ಜಾರಿಗೆ ಬಂದ ಕ್ಷೀರಭಾಗ್ಯ ಯೋಜನೆ ರಾಯಚೂರಿನಲ್ಲಿ ಕಳ್ಳಕಾಕರಿಗೆ ಅನುಕೂಲವಾಗಿದೆ. ದೇವದುರ್ಗ ತಾಲೂಕಿನ ಶಾಲೆಗಳಿಗೆ ಕೆನೆಭರಿತ ಹಾಲಿನ ಪುಡಿ ಸರಬರಾಜು ಮಾಡಲು ಕೆಎಂಎಫ್‍ನಿಂದ ಗುತ್ತಿಗೆ ಪಡೆದಿದ್ದ ಆಕಾಶ್, ಹಾಲಿನ ಪುಡಿ ಸರಬರಾಜು ಮಾಡದೇ ಗೋಲ್‍ಮಾಲ್ ಮಾಡಿದ್ದಾನೆ. ತಾಲೂಕಿನ 14 ಶಾಲೆಗಳಿಗೆ 1,768 ಕೆಜಿ ತೂಕದ 5.10 ಲಕ್ಷ ರೂ. ಮೌಲ್ಯದ ಹಾಲಿನ ಪುಡಿಯನ್ನು ಸರಬರಾಜು ಮಾಡದೇ ವಂಚಿಸಿದ್ದಾನೆ.

    ದೇವದುರ್ಗ ತಾಲೂಕಿನ ಜಾಡಲದಿನ್ನಿ, ಕಮದಾಳ, ಜಾಲಹಳ್ಳಿ, ಸಮುದ್ರ, ರಾಮದುರ್ಗ, ಮಲ್ಲಾಪುರ ಸೇರಿ 14 ಶಾಲೆಗಳ ಮುಖ್ಯೋಪಾಧ್ಯಾಯರ ಸಹಿ ನಕಲು ಮಾಡಿ, ನಕಲಿ ಸೀಲ್ ಬಳಸಿ, ನಕಲಿ ಸ್ವೀಕೃತಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡಿದ್ದಾನೆ. ಒಟ್ಟು 49,017 ಕೆಜಿ ತೂಕದ 1.41 ಕೋಟಿ ರೂ. ಮೌಲ್ಯದ ಹಾಲಿನ ಪುಡಿಯನ್ನು ಜುಲೈ, ಅಗಸ್ಟ್ ತಿಂಗಳ ಅವಧಿಯಲ್ಲಿ ಸರಬರಾಜು ಮಾಡಲು ಗುತ್ತಿಗೆ ನೀಡಲಾಗಿತ್ತು. ಆದರೆ 47,249 ಕೆಜಿ ಹಾಲಿನ ಪುಡಿಯನ್ನು ವಿವಿಧ ಶಾಲೆಗಳಿಗೆ ಸರಬರಾಜು ಮಾಡಿ 1,768 ಕೆಜಿ ಹಾಲಿನ ಪುಡಿಯನ್ನು ವಿತರಿಸದೇ ಗೋಲ್‍ಮಾಲ್ ಮಾಡಿದ್ದಾನೆ. ಒಕ್ಕೂಟ, ಅಕ್ಷರ ದಾಸೋಹ ಅಧಿಕಾರಿಗಳು ಹಾಗೂ 14 ಶಾಲಾ ಮುಖ್ಯೋಪಾಧ್ಯಾಯರು ಸಭೆ ನಡೆಸಿದಾಗ ಅಕ್ರಮ ಬಯಲಾಗಿದೆ. ಇದನ್ನೂ ಓದಿ:  ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    ವಿದ್ಯಾರ್ಥಿಗಳಲ್ಲಿ ಕಂಡುಬರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಿಸಲು, ದೈಹಿಕ ಹಾಗೂ ಮಾನಸಿಕವಾಗಿ ಮಕ್ಕಳನ್ನು ಸದೃಢಗೊಳಿಸಲು ಪ್ರೋಟಿನ್ ಮತ್ತು ಕೊಬ್ಬಿನಂಶಗಳನ್ನೊಳಗೊಂಡ ಸಮತೋಲಿತ ಆಹಾರ ನೀಡುವ ಉದ್ದೇಶದಿಂದ ಹಾಗೂ ರಾಜ್ಯದ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಜಾರಿಗೆ ಬಂದ ಕ್ಷೀರ ಭಾಗ್ಯ ಯೋಜನೆ ಕಳ್ಳಕಾಕರಿಂದ ಹಳ್ಳ ಹಿಡಿಯುತ್ತಿದೆ. ಇನ್ನೊಂದೆಡೆ ತಾಂತ್ರಿಕ ಸಮಸ್ಯೆಗಳನ್ನು ಹೇಳಿ ಜಿಲ್ಲೆಯ ಅಂಧ, ಅಂಗವಿಕಲ ಮಕ್ಕಳಿರುವ ವಿಶೇಷ ಶಾಲೆಗಳಿಗೆ ಅಧಿಕಾರಿಗಳು ಹಾಲಿನ ಪುಡಿ ಸರಬರಾಜು ಮಾಡುತ್ತಿಲ್ಲ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ

    ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಟಿ.ತಿರುಪತೆಪ್ಪ ದೂರು ದಾಖಲಿಸಿದ್ದಾರೆ. ರಾಯಚೂರಿನ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರ ಆಕಾಶ್ ಎಂ ಗಾಣಿಗ ವಿರುದ್ಧ ಪ್ರಕರಣ ದಾಖಲಾಗಿದೆ.

  • ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

    ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

    ಆನೇಕಲ್: ಕೊರೊನಾ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲೂಕು ಆರೋಗ್ಯ ಇಲಾಖೆ ವತಿಯಿಂದ 0-18 ವರ್ಷ ವಯಸ್ಸಿನ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

    ಆನೇಕಲ್ ಪಟ್ಟಣದ ಹಳೆಯ ಮಾಧ್ಯಮಿಕ ಪಾಠಶಾಲೆಯ ಆವರಣದಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಕ್ಕಳು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಮಕ್ಕಳಿಗೆ ನೂರಿತ ವಿಶೇಷ ತಜ್ಞರು ಪರೀಕ್ಷಿಸಿದರು. ಅವರಿಗೆ ಸೂಕ್ತ ಔಷಧ ಹಾಗೂ ಚಿಕಿತ್ಸೆಯನ್ನು ನೀಡಿದರು. ಇದನ್ನೂ ಓದಿ:  ವಿಗ್ರಹಗಳ ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣಗಳ ಲೂಟಿ

    ಸ್ಥಳೀಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಆಯಾ ಏರಿಯಾಗಳಲ್ಲಿನ ಮಕ್ಕಳನ್ನು ಗುರುತಿಸಿ ತೂಕ, ಎತ್ತರ ಸೇರಿದಂತೆ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ನಂತರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳನ್ನು ಗುರುತಿಸಿ ಇಂದು ಆರೋಗ್ಯ ತಪಾಸಣೆಗೆ ಕರೆತರಲಾಗಿದೆ.

    ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಟಿಕತೆಗೆ ತುತ್ತಾಗುತ್ತಿದ್ದಾರೆ. ಈ ಮಕ್ಕಳಲ್ಲಿ ಅಂಗವೈಕಲ್ಯ, ಕಡಿಮೆ ಬುದ್ಧಿಶಕ್ತಿ, ಕುರುಡುತನ, ಹೃದಯ ಸಂಬಂಧಿ ಸಮಸ್ಯೆ, ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತ ಈ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ತುತ್ತಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸೂಚನೆಯಂತೆ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ:  ಚಿನ್ನದ ಪದಕ ಗೆದ್ದ ಜಮ್ಮು ಬಿಯರ್

    ತಾಲೂಕಿನಲ್ಲಿ 47 ಅಪೌಷ್ಟಿಕತೆಯ(ಸ್ಯಾಮ್) ಮಕ್ಕಳಿದ್ದು, 120 ಸಾಧಾರಣ ಅಪೌಷ್ಟಿಕತೆಯ (ಮ್ಯಾಮ್) ಮಕ್ಕಳಿದ್ದಾರೆ. ಅವರ ಸಂಪೂರ್ಣ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ತೆಗೆದುಕೊಂಡು ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಹಾರವನ್ನು ನೀಡಿತ್ತಾರೆ. ಅಪೌಷ್ಟಿಕತೆಯಿಂದ ಮಕ್ಕಳು ಕೂಡಲೇ ಪಾರಾಗಲು ತಜ್ಞ ವೈದ್ಯರು ಚಿಕಿತ್ಸೆಯನ್ನು ನೀಡುತ್ತಾರೆಂದು ಆನೇಕಲ್ ತಾಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.

  • ಅಪೌಷ್ಟಿಕತೆ ನಿವಾರಣೆಗೆ 35  ಬೆಳೆ ತಳಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

    ಅಪೌಷ್ಟಿಕತೆ ನಿವಾರಣೆಗೆ 35 ಬೆಳೆ ತಳಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

    ನವದೆಹಲಿ: ಅಪೌಷ್ಟಿಕತೆ ನಿವಾರಣೆಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್) ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ 35 ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದಾರೆ.

    ಐಸಿಎಆರ್ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಕೃಷಿ ವಿಶ್ವವಿದ್ಯಾನಿಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ಮೋದಿ ಹೊಸ ಬೆಳೆ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

    ಪ್ರಧಾನಿ ಕಚೇರಿಯ ಪ್ರಕಾರ, 2021ರ ತಾಪಮಾನ ಬದಲಾವಣೆ ಸವಾಲು ಎದುರಿಸಲು ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೌಷ್ಟಿಕಾಂಶದಂತಹ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ:  ಸ್ಟೈಲಿಷ್ ಕೇಶ ವಿನ್ಯಾಸ, ಕ್ಲೀನ್ ಶೇವ್, ಟ್ರಿಮ್‍ಗೂ ತಾಲಿಬಾನ್ ನಿಷೇಧ

    ಬರಗಾಲದ ಸಹಿಷ್ಣು ಮಾದರಿಯ ಕಡಲೆ, ಬೀಜ ನಿರೋಧಕ ಗುಣವುಳ್ಳ ತೊಗರಿ, ತ್ವರಿತವಾಗಿ ಫಸಲು ನೀಡುವ ಸೋಯಾಬೀನ್, ರೋಗನಿರೋಧಕ ಸಾಮಥ್ರ್ಯದ ಭತ್ತ, ಜೈವಿಕ ಬಲವರ್ಧಿತವಾದ ಗೋಧಿ, ಜೋಳ, ತೊಗರಿ, ರಾಗಿ, ನವಣೆ ಅಕ್ಕಿ, ಹುರುಳಿ ಬೆಳೆಗಳ ತಳಿಗಳು ಇವುಗಳಲ್ಲಿ ಸೇರಿವೆ. ವಿಶೇಷ ಗುಣಗಳಿರುವ ಈ ತಳಿಗಳು ಪೌಷ್ಟಿಕಾಂಶ ನಿರೋಧಕ ಶಕ್ತಿಯನ್ನೂ ಹೊಂದಿವೆ. ಕೆಲವು ತಳಿಗಳಲ್ಲಿರುವ ಅಂಶಗಳು ಮನುಷ್ಯ, ಪ್ರಾಣಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದವು. ಇದು ಆ ಕೊರತೆ ನೀಗಿಸಲಿದೆ. ಇದನ್ನೂ ಓದಿ:  ಹೋಟೆಲ್‍ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಇನ್ಸ್​ಪೆಕ್ಟರ್ ಎಸಿಬಿ ಬಲೆಗೆ!

    ವಿಶೇಷ ಗುಣಲಕ್ಷಣಗಳುಳ್ಳ 35 ತಳಿಯ ಬೆಳೆಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಬೆಳೆಗಳ ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ರೈತರಲ್ಲಿ ಅರಿವು ಮೂಡಿಸುವಂತೆ ಶಿಕ್ಷಣ ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎನ್‍ಜಿಒಗಳಿಗೆ ಕರೆ ನೀಡಿದರು. ಇದನ್ನೂ ಓದಿ:  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ನೇತೃತ್ವ

    ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ದೇಶದಲ್ಲಿ ಶೇ 86ರಷ್ಟು ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರೇ ಆಗಿದ್ದಾರೆ. ಈ ಸಮೂಹದ ಕೃಷಿಕರ ಆದಾಯವನ್ನು ಹೆಚ್ಚಿಸುವುದು ಪ್ರಧಾನಮಂತ್ರಿಗಳ ಆದ್ಯತೆಯಾಗಿದೆ ಎಂದು ಹೇಳಿದರು.

  • ಹುಡುಗಿಯ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರತೆಗೆದ ವೈದ್ಯರು..!

    ಹುಡುಗಿಯ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರತೆಗೆದ ವೈದ್ಯರು..!

    ಹೈದರಾಬಾದ್: 17 ವರ್ಷದ ಹುಡುಗಿಯ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರ ತೆಗೆದು ಆಕೆಯ ಪ್ರಾಣ ರಕ್ಷಣೆ ಮಾಡುವಲ್ಲಿ ತೆಲಂಗಾಣದ ಉಸ್ಮಾನಿಯಾ ಜನರಲ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.

    ‘ರಾಪುಂಜೆಲ್ ಸಿಂಡ್ರೋಮ್’ ಎಂಬ ಅಪರೂಪದ ಕಾಯಿಲೆಯಿಂದ ಹುಡುಗಿಯ ಹೊಟ್ಟೆಯಲ್ಲಿ ಸುಮಾರು 2 ಕೆಜಿ ಕೂದಲು ಬೆಳೆದಿತ್ತು. ಹೈದರಾಬಾದ್‍ನ ಶಂಶಾಬಾದ್ ಮೂಲದ ಈ ಹುಡುಗಿ ಅಪೌಷ್ಠಿಕತೆಯಿಂದ ಬಳಲುತ್ತಿದ್ದಳು. ಇದಲ್ಲದೆ ಹಸಿವಿನಿಂದ ತನ್ನ ಕೂದಲನ್ನು ಕಳೆದ 5 ತಿಂಗಳಿನಿಂದ ಸೇವಿಸುತ್ತಾ ಬಂದಿದ್ದಾಳೆ. ಬಳಿಕ ಇದೀಗ ಉಸ್ಮಾನಿಯ ಆಸ್ಪತ್ರೆಯ ಅಧೀಕ್ಷಕ ಡಾ.ನಾಗೇಂದರ್ ಬಿ ಅವರನ್ನೊಳಗೊಂಡ ವೈದ್ಯರ ತಂಡವು 150 ಸೆಂ.ಮೀ ಉದ್ದ ಬೆಳೆದಿದ್ದ ಸುಮಾರು 2 ಕೆಜಿ ಕೂದಲನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.ಇದನ್ನೂ ಓದಿ: ಲಸಿಕೆ ಪಡೆದ್ರೆ ಪುರುಷತ್ವ, ಕೈ, ಕಾಲು ಹೋಗುತ್ತೆ- ಕೊರೊನಾ ವ್ಯಾಕ್ಸಿನ್ ಬಗ್ಗೆ ಸುಳ್ಳು ವದಂತಿ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ವೈದ್ಯರಾದ ಡಾ.ನಾಗೇಂದರ್ ಅವರು, ಆಸ್ಪತ್ರೆಯಲ್ಲಿ ನಾವು ಈ ಮೊದಲು ರಾಪುಂಜೆಲ್ ಸಿಂಡ್ರೋಮ್‍ಗೆ ಚಿಕಿತ್ಸೆ ನೀಡಿದ್ದೇವೆ. ಬಾಲಕಿಯ ಹೊಟ್ಟೆಯಲ್ಲಿದ್ದ 150 ಸೆಂ.ಮೀ ಕೂದಲಿನಲ್ಲಿ ಪೈಕಿ 30 ಸೆಂ.ಮೀ ಹೊಟ್ಟೆಯಲ್ಲಿ ಮತ್ತು 120 ಸೆಂ.ಮೀ ಸಣ್ಣ ಕರುಳಿನಿಂದ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದೇವೆ. ವಾಂತಿ ಮತ್ತು ಹೊಟ್ಟೆ ನೋವಿನಿಂದಾಗಿ ಒಂದು ತಿಂಗಳ ಹಿಂದೆ 17 ವರ್ಷದ ಹುಡುಗಿ ಪೂಜಿತಾ ಮಂಡಲ್ ಆಸ್ಪತ್ರೆಗೆ ದಾಖಲಾಗಿದ್ದಳು. ತನ್ನ ಸ್ವಂತ ಕೂದಲನ್ನು ಹುಡುಗಿ ತಿನ್ನುತ್ತಿದ್ದಳು ಎಂದು ಆಕೆಯ ಸಹೋದರಿ ತಿಳಿಸಿದ ಬಳಿಕ ಆಕೆಗೆ ಚಿಕಿತ್ಸೆ ಪ್ರಾರಂಭಿಸಿ ಇದೀಗ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

    ವಿಶ್ವದಾದ್ಯಂತ ಈವರೆಗೆ ಕಂಡುಬಂದಿರುವ 68 ಪ್ರಕರಣಗಳ ಪೈಕಿ ಹೊಟ್ಟೆಯಿಂದ ಹೊರತೆಗೆದಿರುವ ಅತೀ ಉದ್ದದ ಕೂದಲಾಗಿದೆ. ಆಕೆ ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಆಕೆಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆಕೆಗೆ ಮೊದಲು ಕೋವಿಡ್ ಚಿಕಿತ್ಸೆ ಕೊಡಿಸಿ ಅದರಿಂದ ಚೇತರಿಸಿಕೊಂಡ ಬಳಿಕ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡರು.

    ಪೂಜಿತಾ ಮಂಡಲ್ ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ತಿಂದ ಕೂದಲು ಜೀರ್ಣವಾಗದೆ ಇದ್ದುದ್ದರಿಂದ ಈ ಮಟ್ಟಕ್ಕೆ ಸೇರಿಕೊಂಡಿತ್ತು. ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮತ್ತು ಅಧೀಕ್ಷಕ ಡಾ.ಬಿ ನಾಗೇಂದ್ರ, ಸಹಾಯ ಪ್ರಾಧ್ಯಾಪಕ ಡಾ.ಜಿ ಅನಿಲ್ ಕುಮಾರ್, ಸಹಾಯಕ ಪ್ರಾಧ್ಯಾಪಕರಾದ ಡಾ.ಎ ಅಜಿತಾ ಮತ್ತು ಪಿ.ಜಿ ವಿದ್ಯಾರ್ಥಿಗಳು ಸೇರಿದಂತೆ ಅರಿವಳಿಕೆ ವಿಭಾಗದ ಹಿರಿಯ ಪ್ರಾಧ್ಯಾಪಕರು ಡಾ.ಪಾಂಡು ನಾಯಕ್, ಡಾ.ಕೆ.ರಾಣಿ ಮತ್ತು ಡಾ.ಪವನ್ ತಂಡ ಬಾಲಕಿಗೆ ಶಸ್ತ್ರ ಚಿಕಿತ್ಸೆಗೆ ನೆರವಾಗಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಗೆದ್ದ 1 ವರ್ಷದ ಹೆಣ್ಣು ಮಗು

    ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಗೆದ್ದ 1 ವರ್ಷದ ಹೆಣ್ಣು ಮಗು

    ಚಿಕ್ಕಬಳ್ಳಾಪುರ: ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಂದು ವರ್ಷದ ಹೆಣ್ಣು ಮಗು ಕೊರೊನಾದಿಂದ ಗುಣಮುಖವಾಗಿದೆ.

    ಮಹಾರಾಷ್ಟ್ರದಿಂದ ಒಂದು ವರ್ಷದ ಮಗು ಸಮೇತ ದಂಪತಿ ಚಿಕ್ಕಬಳ್ಳಾಪುರ ಜಿಲ್ಲೆಗ ಆಗಮಿಸಿದ್ದರು. ಮೇ 25ರಂದು ಒಂದು ವರ್ಷದ ಹೆಣ್ಣು ಮಗುವಿಗೆ ಕೊರೊನಾ ದೃಢವಾಗಿತ್ತು. ಅಂದೇ ಮಗುವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇದಲ್ಲದೇ ಈ ಮಗುವಿನ ತಂದೆ ತಾಯಿ ಸಹ ಕೊರೊನಾಗೆ ತುತ್ತಾಗಿದ್ದರು. ಅವರು ಸಹ ಕೊರೊನಾದಿಂದ ಗುಣಮುಖರಾಗಿದ್ದಾರೆ.

    ಒಂದಡೆ ಕೊರೊನಾ ಪಾಸಿಟಿವ್ ಮತ್ತು ಅದರ ಜೊತೆಗೆ (ಎಸ್‍ಎಎಮ್) ತೀವ್ರ ತರವಾದ ಅಪೌಷ್ಟಿಕತೆಯಿಂದ ಸಹ ಮಗು ಬಳಲುತ್ತಿತ್ತು. ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ಮಗು ದಾಖಲಾಗುವ 7.4 ಕೆಜಿ ಇದ್ದ ಮಗು ಡಿಸ್ಚಾರ್ಜ್ ವೇಳೆ 8.7 ಕೆಜಿ ತೂಕವಿದ್ದು, ತೂಕದಲ್ಲಿ ಸಹ ಏರಿಕೆ ಆಗಿದೆ. ಅಪೌಷ್ಟಿಕತೆ ನಡುವೆಯೂ ಕೊರೊನಾ ಗೆದ್ದು ಮಗು ಗುಣಮುಖವಾಗಿದೆ. ತಂದೆ ತಾಯಿ ಜೊತೆ ಮಗು ಸಹ ಗುಣಮುಖವಾಗಿ ಸದ್ಯ ಕ್ಷೇಮವಾಗಿ ಮನೆ ಸೇರುವಂತಾಗಿದೆ.