Tag: ಅಪ್ಪಾಜಿಗೌಡ

  • ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ: ನಿಖಿಲ್‍

    ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ: ನಿಖಿಲ್‍

    ಮಂಡ್ಯ: 2019ರ ಲೋಕಸಭಾ ಚುನಾವಣೆಯ ಸೋಲನ್ನು ಅರಗಿಸಿಕೊಳ್ಳದ ಜೆಡಿಎಸ್ ಯುವ ನಾಯಕ ನಿಖಿಲ್‍ ಕುಮಾರಸ್ವಾಮಿ ಪದೇ ಪದೇ ತಮ್ಮ ಸೋಲನ್ನು ನೆನೆಯುತ್ತಿದ್ದಾರೆ. ಸಿನಿಮಾದಲ್ಲಿ ನಾನು ಮಾಡಿದ ಪಾತ್ರದಂತೆ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ ಎಂದು ಎದುರಾಳಿಗಳ ವಿರುದ್ಧ ನಿಖಿಲ್ ಕಿಡಿಕಾರಿದ್ದಾರೆ.

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲಾ ಸೇರಿ ಸಂಚು ಮಾಡಿ ನನ್ನನ್ನು ಸೋಲಿಸಿದರು. ಈ ಮೂಲಕ ಕುಮಾರಣ್ಣನ ನಾಯಕತ್ವದ ಮೇಲೆ ಪ್ರಶ್ನೆ ತರುವಂತೆ ಮಾಡಿದರು. ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನನಗೆ ರಾಜಕೀಯದಲ್ಲಿ ತಂದೆಯ ಹೆಸರಿನಲ್ಲಿ ಸ್ಥಾನಮಾನ ಬೇಕೆಂಬ ಹುಚ್ಚು ಇಲ್ಲ. ಜೆಡಿಎಸ್‍ನ ಎಲ್ಲ ಶಾಸಕರು, ಸಂಸದರು ಮತ್ತು ಪಕ್ಷದ ಕಾರ್ಯಕರ್ತರ ಮಾತಿನ ಮೇರೆಗೆ ಚುನಾವಣೆಗೆ ನಿಂತಿದ್ದೆ ನನಗೆ ಸೋಲಾಗಿತ್ತು. ಆ ದುಖಃವನ್ನು ಹೋಗಲಾಡಿಸಲು ಮತ್ತೊಂದು ಅವಕಾಶ ಬಂದಿದೆ. ಎಂಎಲ್‍ಸಿ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರನ್ನು ಗೆಲ್ಲಿಸುವ ಹೊಣೆ ನನ್ನ ಮೇಲೆ ಇದೆ. ಎಲ್ಲರೂ ಸಹಕರಿಸಿ ಅಪ್ಪಾಜಿಗೌಡರನ್ನು ಗೆಲ್ಲಿಸೋಣ ಎಂದು ಕರೆ ನೀಡಿದರು. ಇದನ್ನೂ ಓದಿ: ನೀವು ನನಗೆ ವೋಟ್ ಹಾಕಲ್ಲ- ಹೆಚ್.ಡಿ.ರೇವಣ್ಣ ತಮಾಷೆ

    ಈ ವಿಧಾನಪರಿಷತ್ ಚುನಾವಣೆ 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗಬೇಕು. ಕುರುಕ್ಷೇತ್ರ ಸಿನಿಮಾದಲ್ಲಿ ನಾನಗೆ ಅಭಿಮನ್ಯು ಪಾತ್ರ ಮಾಡಿ ಅಭ್ಯಸವಿದೆ. ಇದೀಗ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ. ಅಪ್ಪಾಜಿ ಗೌಡರಂತಹ ಒಳ್ಳೆಯ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿಮಾಡಿಕೊಂಡರು. ಇದನ್ನೂ ಓದಿ: ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ

  • ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಶಿವಮೊಗ್ಗ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.

    ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಗೌಡರ ಪುತ್ಥಳಿ ಅನಾವರಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ನನಗೆ ಅವರ ಹೆಸರು ಹೇಳೋಕೆ ಬೇಜಾರಾಗುತ್ತೆ – ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ

    ಇದೇ ತಿಂಗಳ 27 ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದು, ನಿರ್ಧಾರ ಮಾಡ್ತೇವೆ. 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರವನ್ನು ಮಾಡುತ್ತಿದ್ದೇವೆ. ಅಲ್ಲಿ ಎಲ್ಲ ವಿಷಯವನ್ನು ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ಚರಂಡಿ ನೀರು ಮೈಮೇಲೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

    ದೇವಾಲಯಗಳ ತೆರವು ಕುರಿತು ಮಾತನಾಡಿದ ಅವರು, ಬಿಜೆಪಿ ಹಿಂದೂಗಳ ಭಾವನೆಗೆ ಬೆಲೆಕೊಡಬೇಕಾಗಿತ್ತು. ಅದು ಅಲ್ಲದೇ ಹಿಂದೂತ್ವದ ಹೆಸರು ಹೇಳಿ ಅವರು ಸರ್ಕಾರಕ್ಕೆ ಬಂದಿದ್ದರು. ಅವರ ಸರ್ಕಾರ ಇರಬೇಕಾದರೆ ದೇವಾಲಯಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ಅವರು ಈ ನಡೆ ತೆಗೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿತ್ತು. ಆದರೆ ಅವರು ಅದರಲ್ಲಿ ಎಡವಿದ್ದಾರೆ ಎಂದು ಹೇಳಿದ್ದಾರೆ.

  • ರಾಜ್ಯ ಒಕ್ಕಲಿಗ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿ

    ರಾಜ್ಯ ಒಕ್ಕಲಿಗ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿ

    ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ ಹಿನ್ನೆಲೆಯಲ್ಲಿ ಸಂಘದಿಂದಲೇ ಅಧ್ಯಕ್ಷ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ.

    ಚಾಮರಾಜಪೇಟೆಯಲ್ಲಿರುವ ಒಕ್ಕಲಿಗ ಸಂಘದಲ್ಲಿ ನಡೆದ ಸಭೆಯಲ್ಲಿ ನಿರ್ದೇಶಕರು, ಪದಾಧಿಕಾರಿಗಳು ಸೇರಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ಇದೇ ತಿಂಗಳ 18 ರಂದು ಅವಿಶ್ವಾಸ ನಿರ್ಣಯ ಪತ್ರಕ್ಕೆ ಸಂಘದ ನಿರ್ದೇಶಕರು ಸಹಿ ಹಾಕಿದ್ದರು.

    ರಾಜ್ಯ ಒಕ್ಕಲಿಗ ಸಂಘಕ್ಕೆ 35 ನಿರ್ದೇಶಕರಿದ್ದು 7 ದಿನಗಳೊಳಗೆ ವಿಶ್ವಾಸಮತ ಸಾಬೀತಿಗೆ ವಿರೋಧಿ ಬಣ ಪಟ್ಟು ಹಿಡಿದಿತ್ತು. ಹೀಗಾಗಿ ಇಂದು ವಿಶ್ವಾತಮತ ಸಾಬೀತು ಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಅಗಸ್ಟ್ 7ರಂದು ಹೊಸ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದ್ದು ಹಂಗಾಮಿ ಕಾರ್ಯಧ್ಯಕ್ಷರಾಗಿ ನಾರಾಯಣ ಮೂರ್ತಿ ನೇಮಕಗೊಂಡಿದ್ದಾರೆ.

    ಹಿಂದಿನ ಅಧ್ಯಕ್ಷರಾಗಿದ್ದ ಡಾ. ಅಪ್ಪಾಜಿಗೌಡ ಅವರನ್ನು 2017ರಲ್ಲಿ ಹುದ್ದೆಯಿಂದ ಪದಚ್ಯುತಗೊಳಿಸಿ ನಿರ್ಣಯ ಕೈಗೊಂಡ ಪರಿಣಾಮ ಬೆಟ್ಟೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ಈಗ ಬೆಟ್ಟೇಗೌಡ ಪದಚ್ಯುತಿಗೊಳ್ಳುವುದರೊಂದಿಗೆ ಒಂದುವರೆ ವರ್ಷದ ಆಡಳಿತ ಅಂತ್ಯಗೊಂಡಿದೆ.

  • ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಾಬಿರುಕು!

    ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಾಬಿರುಕು!

    ಬೆಂಗಳೂರು: ಸದಾ ಒಂದಲ್ಲೊಂದು ವಿಚಾರದಲ್ಲಿ ಸುದ್ದಿಯಾಗಿರೊ ರಾಜ್ಯ ಒಕ್ಕಲಿಗರ ಸಂಘದಲ್ಲಿ ಇದೀಗ ಮಹಾಬಿರುಕು ಬಿಟ್ಟಿದೆ.

    ಅಂದು ಸಂಘದ ಅಧ್ಯಕ್ಷರಾಗಿದ್ದ ಡಾ.ಅಪ್ಪಾಜಿಗೌಡರನ್ನ ಕೆಳಗಿಸಲು ಬಳಸಿದ ರಣತಂತ್ರ, ಈಗಿನ ಅಧ್ಯಕ್ಷರಿಗೆ ಮುಳುವಾಗಿ ಪರಿಣಮಿಸಿದೆ ಎನ್ನಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಜ್ಜಾಗಿದ್ದು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಬೆಟ್ಟೇಗೌಡ ಮತ್ತು ಅವರ ತಂಡದ ವಿರುದ್ಧ ತಿರುಗಿಬಿದ್ದಿದ್ದಾರೆ.

    ಸಂಘದ ಅಧ್ಯಕ್ಷ ಡಿಎನ್ ಬೆಟ್ಟೇಗೌಡ, ಕಾರ್ಯದರ್ಶಿ ಪ್ರೋ ಎಂ ನಾಗರಾಜ್, ಖಜಾಂಚಿ ಡಿಸಿಕೆ ಕಾಳೇಗೌಡರಿಂದಲೇ ಒಕ್ಕಲಿಗ ಸಂಘದಲ್ಲಿ ಭಾರಿ ಸಮಸ್ಯೆ ಎದುರಾಗಲು ಕಾರಣವಾಗುತ್ತಿದೆಯಂತೆ. 270 ಜನರನ್ನು ಸಂಘಕ್ಕೆ ನೇಮಕ ಮಾಡಿಕೊಳ್ಳಲು ಸಂಘದ ಸಭೆಯಲ್ಲಿ ತೀರ್ಮಾನವಾಗಿತ್ತು. ಆದ್ರೆ 700ಕ್ಕೂ ಹೆಚ್ಚು ಜನರನ್ನು ಬೆಟ್ಟೇಗೌಡ ಮತ್ತು ಅವರ ತಂಡ ನೇಮಕ ಮಾಡಿಕೊಂಡಿದ್ದಾರೆ. ಈಗಲೇ ಇರೋ ಸಿಬ್ಬಂದಿ, ನೌಕರರುಗಳಿಗೆ ಸಂಬಳವನ್ನು ತಿಂಗಳ ಮಧ್ಯದಲ್ಲಿ ನೀಡುತ್ತಿದ್ದಾರೆ. ಇದರಿಂದಾಗಿ ಸಂಘದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು, ನಿರ್ದೇಶಕರು ಒಕ್ಕಲಿಗರ ಸಂಘಕ್ಕೆ ಇಂದು ಅವಿಶ್ವಾಸ ಪತ್ರ ನೀಡಿ ಆರೋಪಿಸಿದ್ದಾರೆ.

    ಒಕ್ಕಲಿಗ ಸಂಘದ ನಾಲ್ಕು ಜನ ಪದಾಧಿಕಾರಿಗಳು ಸೇರಿದಂತೆ 19 ಜನ ನಿರ್ದೇಶಕರು ಅವಿಶ್ವಾಸ ನಿರ್ಣಯಕ್ಕೆ ಸಹಮತವಿದೆ ಎಂದು ಸಂಘಕ್ಕೆ ಪತ್ರವನ್ನು ಬರೆದಿದ್ದರು. ಇನ್ನೂ ಈ ಬಗ್ಗೆ ಒಕ್ಕಲಿಗರ ಸಂಘ ಕಾರ್ಯದರ್ಶಿ ಪ್ರೊ. ನಾಗರಾಜ್ ಮಾತನಾಡಿದ್ದು, ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ, ಇದು ಪ್ರಜಾಪ್ರಭುತ್ವ ಸಂಘದ ಬೈಲಾ ಪ್ರಕಾರ ಅವಿಶ್ವಾಸ ನಿರ್ಣಯ ಮಂಡನೆಗೆ ಏಳು ದಿನ ಕಾಲಾವಕಾಶವಿದೆ. ಅಷ್ಟರೊಳಗೆ ಅವಿಶ್ವಾಸ ಸಾಬೀತು ಪಡಿಸಬೇಕು. ಇಲ್ಲವಾದಲ್ಲಿ ಕೂಡಲೆ ಸ್ಥಾನ ಬಿಟ್ಟು ಕೊಡುತ್ತೇನೆ. ಅಲ್ಲಿಯವರೆಗೂ ಏನ್ ಬೇಕಾದ್ರೂ ಆಗಬಹುದು, ಕಾದುನೋಡಿ ಎಂದಿದ್ದಾರೆ.

    ಒಕ್ಕಲಿಗರ ಸಂಘದ ಈ ಹಿಂದಿನ ಅಧ್ಯಕ್ಷ ಡಾ ಅಪ್ಪಾಜಿಗೌಡರ ವಿರುದ್ಧ ಬೆಟ್ಟೇಗೌಡ ಅವಿಶ್ವಾಸ ನಿರ್ಣಯ ಮಂಡಿಸಿ ನೂತನವಾಗಿ ಅಧ್ಯಕ್ಷರಾಗಿದ್ದರು. ಈಗ ಅದೇ ಮಾದರಿಯಲ್ಲಿ ಮತ್ತೆ ಬೆಟ್ಟೇಗೌಡರನ್ನು ಇಳಿಸಲು ಸಜ್ಜಾಗುತ್ತಿದೆ. ಡಿಸೆಂಬರ್‍ನಲ್ಲಿ ಸಂಘದ ಚುನಾವಣಾ ನಡೆಯಲಿದ್ದು, ಈ ಹೊತ್ತಿನಲ್ಲಿ ಅವಿಶ್ವಾಸ ನಿರ್ಣಯ ಪತ್ರ ಕುತೂಹಲ ಮೂಡಿಸಿದೆ ಎಂದು ಸಂಘದ ಕಾರ್ಯದರ್ಶಿ ಪ್ರೋ. ನಾಗರಾಜು ಹೇಳಿದ್ದಾರೆ.