Tag: ಅಪ್ರಾಪ್ತೆ

  • ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ಮುಂಬೈ: ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರ ಸಮ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ತೀರ್ಪು ನೀಡಿದೆ.

    ನ್ಯಾಯಮೂರ್ತಿ ಗೋವಿಂದ ಸನಾಪ್ ಅವರ ಏಕಸದಸ್ಯ ಪೀಠವು, ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧ ಎಂದು ಪರಿಗಣಿಸಲಾಗುವುದು. ಹಾಗಾಗಿ ಇದಕ್ಕೆ ಒಪ್ಪಿಗೆ ಸೂಚಿಸಿದಲ್ಲಿ ಆ ಅಪರಾಧಕ್ಕೆ ಕಾನೂನು ರಕ್ಷಣೆಯನ್ನು ನೀಡಿದಂತಾಗುತ್ತದೆ. ಪತ್ನಿಯ ವಯಸ್ಸು 18 ಮೀರಿರಬೇಕು, ಅದಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯ ಜೊತೆ ಲೈಂಗಿಕ ಸಂಪರ್ಕ ಹೊಂದಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಿ, ಪ್ರಕರಣ ದಾಖಲಿಸಬಹುದು ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ: Ranji Trophy: ಇನ್ನಿಂಗ್ಸ್‌ನ ಎಲ್ಲಾ 10 ವಿಕೆಟ್‌ ಕಿತ್ತು ದಾಖಲೆ ಬರೆದ ಅಂಶುಲ್‌ ಕಾಂಬೋಜ್‌

    ವಾರ್ಧಾ ಜಿಲ್ಲಾ ನ್ಯಾಯಾಲಯವು ಅಪ್ರಾಪ್ತೆಯ ದೂರಿನ ಆಧಾರದ ಮೇಲೆ ಓರ್ವ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿತ್ತು. ಆರೋಪಿ ಈ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಈ ವಿಚಾರಣೆಯ ಸಂದರ್ಭದಲ್ಲಿ ಬಾಂಬೆ ಹೈಕೋರ್ಟ್ ತೀರ್ಪನ್ನು ನೀಡಿದೆ.

    ಏನಿದು ಪ್ರಕರಣ?
    ಆರೋಪಿಯು ದೂರುದಾರೆಯನ್ನು ಪ್ರೀತಿಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ. ಬಳಿಕ ಆಕೆ ತಾನು ಗರ್ಭಿಣಿಯಾಗಿರುವುದಾಗಿ ತಿಳಿದು ಆರೋಪಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು. ಒತ್ತಾಯದ ಮೇರೆಗೆ ಹಾರ ಬದಲಾಯಿಸುವ ಮೂಲಕ ಮದುವೆಯಾದಂತೆ ನಂಬಿಸಿದ್ದ. ನಂತರ ಆಕೆಗೆ ಗರ್ಭಪಾತ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದ. ಇದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಆತನ ಹಿಂಸೆ ಸಹಿಸಲಾಗದೇ ಆಕೆ ತವರು ಮನೆಗೆ ತೆರಳಿದ್ದಳು. ಬಳಿಕ ಅಲ್ಲಿಗೆ ತೆರಳಿ ಅಲ್ಲಿಯೂ ಕೂಡ ಹಲ್ಲೆ ನಡೆಸಿದ್ದ. ಈ ವೇಳೆ ಆರೋಪಿ ಮದುವೆಯ ನಾಟಕವಾಡಿ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ ಆಕೆಯ ಹೊಟ್ಟೆಯಲ್ಲಿರುವ ಮಗು ತನ್ನದಲ್ಲ ಎಂದು ಕೂಡ ವಾದಿಸಿದ್ದಾನೆ. ಇದರಿಂದ ತನ್ನ ಗಂಡನ ನಿಂದನೆಯನ್ನು ಸಹಿಸಲಾಗದೇ ಆಕೆ 2019ರ ಮೇನಲ್ಲಿ ವಾರ್ಧಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

    ವಿಚಾರಣೆಯ ವೇಳೆ ಹಾರ ಬದಲಾಯಿಸಿರುವ ಫೋಟೋಗಳು, ಜೊತೆಗೆ ಆಕೆ ನನ್ನ ಪತ್ನಿಯಾಗಿದ್ದು, ನಾನು ಆಕೆಯ ಒಪ್ಪಿಗೆಯಿಂದ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದೆ ಎಂದು ಹೇಳಿಕೊಂಡಿದ್ದನು. ಆದರೆ ಅಪರಾಧ ನಡೆದ ದಿನಾಂಕದಂದು ಸಂತ್ರಸ್ತೆಯ ವಯಸ್ಸು 18ಕ್ಕಿಂತ ಕಡಿಮೆ ಇತ್ತು ಎನ್ನುವುದು ತನಿಖೆಯ ವೇಳೆ ದೃಢಪಟ್ಟಿತ್ತು. ಸಂತ್ರಸ್ತೆಗೆ ಜನಿಸಿದ ಗಂಡು ಮಗುವಿನ ತಂದೆ ಆರೋಪಿ ಎನ್ನುವುದು ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತಾಗಿತ್ತು.ಇದನ್ನೂ ಓದಿ: ನಾನು ಯಾವತ್ತೂ ಜಮೀರ್ ಅವ್ರನ್ನ ಕುಳ್ಳ ಅಂತ ಕರೆದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

  • ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ: ಹುಬ್ಬಳ್ಳಿ ಕೇಸ್‌ ಉಲ್ಲೇಖಿಸಿ ಬಿಜೆಪಿ ಆಕ್ರೋಶ

    ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ: ಹುಬ್ಬಳ್ಳಿ ಕೇಸ್‌ ಉಲ್ಲೇಖಿಸಿ ಬಿಜೆಪಿ ಆಕ್ರೋಶ

    ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ವಾಗ್ದಾಳಿ ನಡೆಸಿದೆ.

    ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಜ್ಯ ಬಿಜೆಪಿ, ತಾಲಿಬಾನಿ ಕಾಂಗ್ರೆಸ್‌ (Congress) ಸರ್ಕಾರದಲ್ಲಿ ಹಿಂದೂಗಳಿಗೆ ಇಲ್ಲ ಸುರಕ್ಷತೆ. ಕಾಂಗ್ರೆಸ್ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

    ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

    ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ವಶಕ್ಕೆ ಪಡೆಯುವ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

  • ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

    ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

    ಹುಬ್ಬಳ್ಳಿ: ನೇಹಾ ಪ್ರಕರಣ (Neha Hiremath Murder Case) ಮಾಸುವ ಮುನ್ನವೇ ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕನೊಬ್ಬ ಗರ್ಭಿಣಿ (Minor Pregnant)  ಮಾಡಿ ಅರೆಸ್ಟ್‌ ಆಗಿದ್ದಾನೆ.

    ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗಳನ್ನು‌ ಕಿಮ್ಸ್‌ ಆಸ್ಪತ್ರೆಗೆ (KIMS Hospital) ಕರೆದುಕೊಂಡು ಬಂದಾಗ ಪೋಷಕರು ಗರ್ಭಿಣಿಯಾದ ವಿಚಾರ ತಿಳಿದು ಶಾಕ್‌ ಆಗಿದ್ದಾರೆ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಆರೋಪಿ ಸದ್ದಾಂ ಹುಸೇನ್‌ನನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಸಂತ್ರಸ್ತೆ ಸ್ನೇಹ ಬಳಸಿ ಸದ್ದಾಂ ಬಲವಂತವಾಗಿ ದೈಹಿಕ ಸಂಭೋಗ ಮಾಡಿದ್ದಾನೆ. ಜೊತೆಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಆರೋಪಿಯನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್‌ ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಗೆ ಪೋಷಕರು ಮೊದಲು ದೂರು ನೀಡಿದ್ದರು.  ಪ್ರಕರಣ ಬೆಳಕಿಗೆ ಬಂದು 24 ಗಂಟೆಯಾದರೂ ಎಫ್‌ಐಆರ್‌ (FIR) ದಾಖಲಾಗದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್

    ಅಪ್ರಾಪ್ತೆ ಆಸ್ಪತ್ರೆಗೆ ಬಂದಿದ್ದುನ್ನು ಅರಿತು ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ತಂದೆ-ತಾಯಿ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

     

  • 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

    14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

    ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಸೋಮವಾರ ಮಹತ್ವದ ತೀರ್ಪು ನೀಡಿದೆ. 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ಕೋರ್ಟ್ ಅನುಮತಿ ನೀಡಿದೆ.

    ಅತ್ಯಾಚಾರದಿಂದ ಅಪ್ರಾಪ್ತೆ ಗರ್ಭಿಣಿಯಾಗಿದ್ದಳು. ಬಳಿಕ ಗರ್ಭಪಾತಕ್ಕೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಇಂದು ಮುಖ್ಯ ನ್ಯಾ. ಡಿವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವೈದ್ಯಕೀಯ ವರದಿಗಳನ್ನು ಆಧರಿಸಿ ಗರ್ಭಪಾತಕ್ಕೆ ಅನುಮತಿ ನೀಡಿದೆ. ಇದೊಂದು ಅತ್ಯಾಚಾರ ಪ್ರಕರಣವಾಗಿದ್ದು, ಸಂತ್ರಸ್ತೆಗೆ 14 ವರ್ಷ ವಯಸ್ಸಾಗಿದೆ. ಈ ಅಸಾಧಾರಣ ಪ್ರಕರಣದಲ್ಲಿ ಗರ್ಭಪಾತವನ್ನು ಅನುಮತಿಸಲಾಗಿದೆ ಎಂದು ಕೋರ್ಟ್ ಹೇಳಿದೆ.

    ಏಪ್ರಿಲ್ 19 ರಂದು ಸುಪ್ರೀಂ ಕೋರ್ಟ್ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತ್ತು. ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರ ಪೀಠವು ಏಪ್ರಿಲ್ 19ರ ಶುಕ್ರವಾರ ಸಂಜೆ 4.30ಕ್ಕೆ ಈ ಪ್ರಕರಣದ ತುರ್ತು ವಿಚಾರಣೆ ನಡೆಸಿತ್ತು. ಇದನ್ನೂ ಓದಿ: 9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?

    ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ವಾದ ಮಂಡಿಸಿದ್ದರು. ವೈದ್ಯಕೀಯ ಗರ್ಭಪಾತಕ್ಕೆ ಒಳಗಾಗಿದ್ದರೆ ಅಥವಾ ಮಾಡದಂತೆ ಸೂಚಿಸಿದರೆ ಬಾಲಕಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಕೋರ್ಟ್ ಮುಂಬೈನ ಸಿಯಾನ್ ಆಸ್ಪತ್ರೆಯಿಂದ ವರದಿಯನ್ನು ಕೇಳಿತ್ತು.

  • ಪ್ರೀತಿಗೆ ಹೆತ್ತವರು ವಿರೋಧ- ಮನನೊಂದು ಅಪ್ರಾಪ್ತೆ ನೇಣಿಗೆ ಶರಣು

    ಪ್ರೀತಿಗೆ ಹೆತ್ತವರು ವಿರೋಧ- ಮನನೊಂದು ಅಪ್ರಾಪ್ತೆ ನೇಣಿಗೆ ಶರಣು

    ರಾಯಚೂರು: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

    ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕಿಮ್ಸ್‌ನ  ಜೂನಿಯರ್ ವೈದ್ಯನಿಂದ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ಆರೋಪ

    ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಮನೆಯಲ್ಲಿದ್ದ ಸೀರೆಯಿಂದ ನೇಣುಬಿಗಿದುಕೊಂಡು ಸಂಗೀತಾ ಸಾವಿಗೆ ಶರಣಾಗಿದ್ದಾಳೆ. ಈಕೆಯ ಮೃತದೇಹವನ್ನು ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪ್ರಾಪ್ತೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

    ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

    ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಆಘಾತಕಾರಿ ಘಟನೆ ಮಂಡ್ಯದ (Mandya) ಮದ್ದೂರು (Maddur) ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಪ್ರಾಪ್ತೆಯನ್ನು ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕಿರಾತಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವೀಡಿಯೋ ಮಾಡಿದ್ದಾರೆ. ವೀಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಪುನೀತ್, ಮಂಜುನಾಥ್ ಹಾಗೂ ಸಿದ್ದರಾಜು ಬಂಧಿತ ಆರೋಪಿಗಳು. ಮೂವರು ಕೂಡಾ ಮದ್ದೂರು ತಾಲೂಕಿನವರಾಗಿದ್ದು, ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

    ಪ್ರಕರಣದ ಎ1 ಆರೋಪಿ ಪುನೀತ್ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಆಕೆಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ. ಬಳಿಕ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪುಂಡರ ಹುಚ್ಚಾಟ – ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ವಾಹನಗಳು ಜಖಂ

    ಈ ವೇಳೆ ಕಿರಾತಕರು ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವೀಡಿಯೋವನ್ನು ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಮಾತ್ರವಲ್ಲದೇ ಕರೆದಾಗಲೆಲ್ಲಾ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.

    ಇದಾದ ಬಳಿಕ ಅಪ್ರಾಪ್ತೆ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ನಂತರ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಇದರ ಅನ್ವಯ ಮೂವರನ್ನು ಬಂಧಿಸಿದ್ದಾರೆ. ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೇವರಿಗೆ ಕೈ ಮುಗಿದು ದೇವಸ್ಥಾನದ ಹುಂಡಿಯನ್ನೇ ದೋಚಿದ ಖದೀಮರು

  • ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!

    ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!

    ತುಮಕೂರು: ಆಟೋ ಚಾಲಕನೊಬ್ಬ ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಸೈಯದ್ (40) ಎಂದು ಗುರುತಿಸಲಾಗಿದ್ದು, ಈತ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ಸೈಯದ್, ಇಂದು (ಗುರುವಾರ) ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿದ್ದಾನೆ. ಬಳಿಕ ತನ್ನ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಆಟೋದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನೂ ಓದಿ: ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ, ಆದರೆ ಕುರ್ಚಿ ಬಿಡ್ತಿಲ್ಲ: ಅಶೋಕ್ ಗೆಹ್ಲೋಟ್

    ಇತ್ತ ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು ಸಾರ್ವಜನಿಕರು ಆತನನ್ನು ಹಿಂಬಾಲಿಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಇತ್ತ ಬಾಲಕಿಯನ್ನ ರಕ್ಷಿಸಿ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರ ಎಸಗಿ ಅಪ್ರಾಪ್ತೆಯನ್ನು 2 ತಿಂಗಳ ಗರ್ಭಿಣಿ ಮಾಡಿದ 73 ವರ್ಷದ ವೃದ್ಧ!

    ಅತ್ಯಾಚಾರ ಎಸಗಿ ಅಪ್ರಾಪ್ತೆಯನ್ನು 2 ತಿಂಗಳ ಗರ್ಭಿಣಿ ಮಾಡಿದ 73 ವರ್ಷದ ವೃದ್ಧ!

    ಹಾಸನ: 73 ವರ್ಷದ ವೃದ್ಧನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಹಾಸನ (Hasan) ಜಿಲ್ಲೆಯ ಸಕಲೇಶಪುರ (Sakleshura) ತಾಲೂಕಿನಲ್ಲಿ ನಡೆದಿದೆ.

    ಮೀಸೆ ಮಂಜಯ್ಯ ಅತ್ಯಾಚಾರ ಮಾಡಿದ ಕೀಚಕನಾಗಿದ್ದು, ಈತ ಏಕಾಂಗಿ ಸಾಮಾಜಿಕ ಹೋರಾಟಗಾರ. ಈತ 13 ವರ್ಷದವಳ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಇದೀಗ ಆಕೆ 2 ತಿಂಗಳ ಗರ್ಭಿಣಿಯಾಗಿದ್ದಾಳೆ (Pregnant).

    ಸದ್ಯ ಅಪ್ರಾಪ್ತ ಮಗಳಿಗಾದ ಅನ್ಯಾಯ ಕಂಡು ತಾಯಿ ವಿಷ ಸೇವಿಸಿದ್ದು, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮೀಸೆ ಮಂಜಯ್ಯನನ್ನು ವಶಕ್ಕೆ ಪಡೆದ ಪೊಲೀಸರು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಇನ್ನು ಅಪ್ರಾಪ್ತೆಗೂ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ಆಕೆಯನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

    ಆರೋಪಿಯು ವಿಧವಾ ವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹೇಳಿ ಹಲವು ಮಹಿಳೆಯರನ್ನು ಎಮೋಷನಲ್ ಬ್ಲಾಕ್‍ಮೇಲ್ ಮಾಡುತ್ತಿದ್ದ ಪ್ರಕರಣವೂ ಇದರ ಜೊತೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

    ಒಟ್ಟಿನಲ್ಲಿ ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – 7 ಮಂದಿ ಅರೆಸ್ಟ್

    16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – 7 ಮಂದಿ ಅರೆಸ್ಟ್

    ಹೈದರಾಬಾದ್: 16 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ.

    ಹೈದರಾಬಾದ್‌ನ ನಂದನವನಂ ಕಾಲೋನಿಯಲ್ಲಿ ಘಟನೆ ನಡೆದಿದ್ದು, ರಾಚಕೊಂಡ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬೇದ್ ಬಿನ್ ಖಲೀದ್, ತಹಸೀನ್, ಮಂಕಾಳ ಮಹೇಶ್, ಎಂ ನರಸಿಂಗ್, ಅಶ್ರಫ್, ಫೈಝಲ್ ಮತ್ತು ಇಮ್ರಾನ್ ಎಂದು ಗುರುತಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ (POCSO) ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ

    ಭಾನುವಾರ ಬೆಳಗ್ಗೆ ಬಾಲಕಿಯ ಮನೆಗೆ ನುಗ್ಗಿದ ಅಬೇದ್ ಮತ್ತು ಆತನ ಸ್ನೇಹಿತರು ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಬಲವಂತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟನೆಯ ಬಳಿಕ ಸಂತ್ರಸ್ತೆ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ಮದ್ಯದ ಅಮಲಿನಲ್ಲಿ ಬೆಳಗ್ಗೆ 9:30ರ ಸುಮಾರಿಗೆ ಆಕೆಯ ಮನೆಗೆ ಬಲವಂತವಾಗಿ ನುಗ್ಗಿ ಆಕೆಗೆ ಮತ್ತು ಆಕೆಯ ಸಹೋದರನಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ಉಲ್ಲೇಖಿಸಿ ದೂರನ್ನು ನೀಡಿದ್ದಾಳೆ. ಇದನ್ನೂ ಓದಿ: ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!

    ಈ ಕುರಿತು ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು 11 ವಿಶೇಷ ತಂಡಗಳನ್ನು ರಚಿಸಿ ಪ್ರಮುಖ ಆರೋಪಿ ಅಬೇದ್‌ನನ್ನು ಮಂಗಳವಾರ ಸಂಜೆ 4 ಗಂಟೆಯ ಸುಮಾರಿಗೆ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಬೇದ್ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಪೊಲೀಸರು ಅವನ ಬಳಿಯಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಆಸ್ತಿ ವಿಚಾರಕ್ಕೆ ಹಾರಿತು ಗುಂಡು

    ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಮೂವರು ನೇರ ಅಪರಾಧಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅಶ್ರಫ್ ಮತ್ತು ನರಸಿಂಗ್ ಘಟನಾ ಸ್ಥಳದಲ್ಲಿ ಹಾಜರಿದ್ದು, ದುಷ್ಕರ್ಮಿಗಳಿಗೆ ಸಹಾಯ ಮಾಡಿದ್ದಾರೆ. ಅಲ್ಲದೇ ಫೈಝಲ್ ಮತ್ತು ಇಮ್ರಾನ್ ಆರೋಪಿಗಳ ಹೇಯ ಕೃತ್ಯದ ಬಗ್ಗೆ ತಿಳಿದಿದ್ದರೂ ಅವರಿಗೆ ಸಹಾಯ ಮಾಡಿದ್ದಾರೆ ಎಂದು ರಾಚಕೊಂಡ ಆಯುಕ್ತ ಡಿಎಸ್ ಚೌಹಾಣ್ ತಿಳಿಸಿದ್ದಾರೆ. ಇದನ್ನೂ ಓದಿ: ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಪೊಲೀಸರು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

    ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

    ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ (Minor Girl) ಮದ್ಯ (Alcohol) ಕುಡಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Gang Rape) ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.

    ಸಾಗರದ ಜೆ.ಪಿ.ನಗರ ನಿವಾಸಿಗಳಾದ ಶಾಬಾದ್ (26), ಅಜಯ್ (32) ಅತ್ಯಾಚಾರ ನಡೆಸಿದ ಕಿಡಿಗೇಡಿಗಳು. ಸಾಗರ ನಿವಾಸಿಯಾದ ಅಪ್ರಾಪ್ತ ಬಾಲಕಿಯನ್ನು ಆರೋಪಿಗಳು ಪ್ರವಾಸಕ್ಕೆಂದು ಜೋಗಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದಾರೆ. ಮದ್ಯದ ಅಮಲಿನಲ್ಲೇ ಮನೆಗೆ ವಾಪಸ್ ಬಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ಇದನ್ನೂ ಓದಿ: ಲೇಡಿಸ್‌ ಹಾಸ್ಟೆಲ್‌ ಮುಂದೆಯೇ ಹಸ್ತಮೈಥುನ – ವಿಕೃತ ಕಾಮಿ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸರು

    ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ಬಾಲಕಿಯ ಪೋಷಕರು ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಗಂಡ ಜೈಲಿಗೆ – ಮನನೊಂದು ಪತ್ನಿ ಆತ್ಮಹತ್ಯೆ; ಜೈಲಲ್ಲಿದ್ದ ಪತಿ ಹೃದಯಾಘಾತದಿಂದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]