Tag: ಅಪ್ರಾಪ್ತ ಬಾಲಕರು

  • ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

    ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

    ಶಿವಮೊಗ್ಗ: ಅಪ್ರಾಪ್ತ ಬಾಲಕರು ಕಣ್ಣು ಕಾಣದ, ಕಿವಿ ಕೇಳದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಶರಾವತಿ ನಗರ ಬಡಾವಣೆಯಲ್ಲಿ ನಡೆದಿದೆ.

    ಮೇ 25 ರಿಂದ 27 ರವರೆಗೆ ಪ್ರತಿದಿನ ರಾತ್ರಿ ನಾಲ್ವರು ಬಾಲಕರು 70 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುವ ಅವರು ಮನೆ ಮನೆಗೆ ತೆರಳಿ, ಭಿಕ್ಷೆ ಬೇಡಿಕೊಂಡು, ಜೀವನ ನಿರ್ವಹಣೆ ಮಾಡುತ್ತಿದ್ದರು.

    ವೃದ್ಧೆ ಎರಡು ಕಣ್ಣು ಮಂಜಾಗಿದ್ದು, ಕಿವಿ ಕೂಡ ಕೇಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ರಾತ್ರಿ ವೇಳೆ ಕುಡಿದು ಬಂದ ಅಪ್ರಾಪ್ತ ಬಾಲಕರು ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ವೃದ್ಧೆ ಕೂಗಿಕೊಂಡ ಪರಿಣಾಮ ನೆರೆಹೊರೆಯವರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವ ಅಪ್ರಾಪ್ತನ್ನು ವಶಕ್ಕೆ ಪಡೆಯಲಾಗಿದೆ.

    ಶಿವಮೊಗ್ಗದ ವಿನೋಭನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಇನ್ನುಳಿದ ಆರೋಪಿಗಳ ಶೋಧ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

  • ಅಪ್ರಾಪ್ತ ಸಹೋದರರಿಂದ 2 ವರ್ಷದ ಬಾಲಕಿಯ ಮೇಲೆ ರೇಪ್!

    ಅಪ್ರಾಪ್ತ ಸಹೋದರರಿಂದ 2 ವರ್ಷದ ಬಾಲಕಿಯ ಮೇಲೆ ರೇಪ್!

    ಮುಂಬೈ: ಎರಡು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಸಹೋದರರು ಅತ್ಯಾಚಾರ ಮಾಡಿರುವ ಘಟನೆ ಮುಂಬೈನ ಪಲ್ಘರ್ ಎಂಬಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ:
    2 ವರ್ಷದ ಪುಟ್ಟ ಬಾಲಕಿ ಮನೆ ಹೊರಗಡೆ ಆಟವಾಡುತ್ತಿದ್ದಳು. ಬಾಲಕಿಯ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ಕೆಲಸದಲ್ಲಿ ತೊಡಗಿದ್ದರು. ಇತ್ತ ತಾಯಿ ಕೂಡ ಅಡುಗೆ ಮನೆಯಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಬಂದ 14 ಮತ್ತು 15 ವರ್ಷದ ಸಹೋದರರಿಬ್ಬರು, ಬಾಲಕಿ ಜೊತೆ ಆಟವಾಡುತ್ತಾ ಮನೆಯಿಂದ ಸ್ವಲ್ಪ ದೂರಲ್ಲಿದ್ದ ಕೊಠಡಿಗೆ ಬರುವಂತೆ ಹೇಳಿದ್ದಾರೆ. ಅವರ ಮಾತನ್ನು ನಂಬಿದ ಪುಟ್ಟ ಬಾಲಕಿ, ಬಾಲಕರ ಹಿಂದೆ ಹೆಜ್ಜೆ ಹಾಕಿದ್ದಾಳೆ. ಕೂಡಲೇ ಅಪ್ರಾಪ್ತರಿಬ್ಬರೂ ಬಾಲಕಿಯನ್ನು ಕೋಣೆಯೊಳಗೆ ಬರಮಾಡಿಕೊಂಡು ಬಾಗಿಲು ಹಾಕಿದ್ದಾರೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

    ಬಾಲಕರಿಬ್ಬರೂ ಪೋಷಕರೂ ಕೂಡ ದಿನಗೂಲಿ ಕೆಲಸಗಾರರಾಗಿದ್ದು, ಘಟನೆ ನಡೆದ ಸಂದರ್ಭದಲ್ಲಿ ಅವರೂ ಕೆಲಸಕ್ಕೆ ತೆರಳಿದ್ದರು. ಇತ್ತ ಕೋಣೆಯೊಳಗೆ ಬಾಲಕಿ ಅಳುತ್ತಿರುವುದನ್ನು ಕೇಳಿಸಿಕೊಂಡ ನೆರೆಹೊರೆಯವರು ಆಕೆಯ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೋಷಕರು ಹಾಗೂ ಸ್ಥಳೀಯರು ಕೊಠಡಿಯ ಬಾಗಿಲು ಬಡಿದಿದ್ದಾರೆ. ಬಾಗಿಲು ತೆಗೆದಾಗ ಇಬ್ಬರು ಬಾಲಕರೊಂದಿಗೆ ಬಾಲಕಿ ಕೋಣೆಯೊಳಗಿದ್ದು. ಅಳುತ್ತಿದ್ದಳು. ಇದನ್ನು ಕಂಡ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಗಾಬರಿಗೊಂಡಿದ್ದಾರೆ.

    ಕೂಡಲೇ ಬಾಲಕರಿಬ್ಬರನ್ನೂ ಹಿಡಿದುಕೊಂಡ ಸ್ಥಳೀಯರು ಅವರಿಗೆ ಚೆನ್ನಾಗಿ ಥಳಿಸಿದ್ದಾರೆ. ನಂತರ ತಾರಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತ ಅಳುತ್ತಿದ್ದ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಸದ್ಯ ಬಾಲಕಿ ಆರಾಮಾಗಿದ್ದಾಳೆ ಅಂತ ವರದಿಯಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಬಾಲಕರ ವಿರುದ್ಧ ಐಪಿಸಿ ಸೆಕ್ಷನ್ 376(2) ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಇಬ್ಬರನ್ನೂ ಭಿವಾಂಡಿಯಲ್ಲಿರುವ ರಿಮಾಂಡ್ ಹೋಮ್ ಗೆ ಇಂದು ಕಳುಹಿಸಲು ಪೊಲೀಸರು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 9ರ ಬಾಲಕನ ಮೇಲೆ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ

    9ರ ಬಾಲಕನ ಮೇಲೆ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ

    ಬೆಳಗಾವಿ: 9 ವರ್ಷದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

    ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ನಡೆದು ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    3 ದಿನಗಳ ಹಿಂದೆ ಬಾಲಕ ಶಾಲೆಯಿಂದ ಮನೆಗೆ ಹೋಗುವಾಗ ಅಪ್ರಾಪ್ತ ಬಾಲಕರು ಮೀನು ಹಿಡಿಯಲು ಕರೆದುಕೊಂಡು ಹೋಗಿದ್ದಾರೆ. ಹೀಗೆ ಪುಸಲಾಯಿಸಿ ಕರೆದುಕೊಂಡು ಹೋಗಿ ಅಪ್ರಾಪ್ತರಿಬ್ಬರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದಾಗಿ ಬಾಲಕನಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ನೋವು ಸಹಿಸಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಅಪ್ರಾಪ್ತ ಬಾಲಕರು ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮನೆಯವರಿಗೆ ತಿಳಿಸಿದ್ದಾನೆ.

    ಕೂಡಲೇ ಪೋಷಕರು ಅಸ್ವಸ್ಥ ಬಾಲಕನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆ ದಾಖಲಿಸಿದ್ದು, ಸದ್ಯ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೀಗ ಅಪ್ರಾಪ್ತ ಬಾಲಕರ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಡುರಸ್ತೆಯಲ್ಲೇ ಅಪ್ರಾಪ್ತೆಯ ಬಟ್ಟೆ ಬಿಚ್ಚಿ ಬಾಲಕರಿಂದ ಲೈಂಗಿಕ ಕಿರುಕುಳ – ವಿಡಿಯೋ ವೈರಲ್

    ನಡುರಸ್ತೆಯಲ್ಲೇ ಅಪ್ರಾಪ್ತೆಯ ಬಟ್ಟೆ ಬಿಚ್ಚಿ ಬಾಲಕರಿಂದ ಲೈಂಗಿಕ ಕಿರುಕುಳ – ವಿಡಿಯೋ ವೈರಲ್

    ಪಾಟ್ನಾ: 6ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಅಪ್ರಾಪ್ತೆಯ ಬಟ್ಟೆಯನ್ನು ಬಿಚ್ಚಿಸಿ ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬಿಹಾರದ ಜಹಾನಬಾದ್‍ನಲ್ಲಿ ನಡೆದಿದೆ.

    ಅಪ್ರಾಪ್ತೆಯ ಕೈ ಹಿಡಿದು ಎಳೆದುಕೊಂಡು ಹೋಗುತ್ತಾ ಹುಡುಗರು ಆಕೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಬಾಲಕಿ ಆ ಹುಡುಗರಿಂದ ತಪ್ಪಿಸಿಕೊಳ್ಳಲು ಹರಸಹಾಸ ಪಡುತ್ತಿದ್ದಳು ಎಂದು ವರದಿಯಾಗಿದೆ.

    ಈ ವೇಳೆ ಬಾಲಕರು ಅಪ್ರಾಪ್ತೆಯ ಬಟ್ಟೆ ಬಿಚ್ಚಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಕಿ ‘ಅಣ್ಣ ಕಾಪಾಡಿ, ಅಣ್ಣ ಕಾಪಾಡಿ’ ಎಂದು ಗೋಗರೆದಿದ್ದಾಳೆ. ಬೈಕಿನಲ್ಲಿ ಬೇರೊಬ್ಬನ ಜೊತೆ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಬೈಕನ್ನು ಬೀಳಿಸಿ ಅಪ್ರಾಪ್ತ ಬಾಲಕರು ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ.

     

    ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಶನಿವಾರ ವೈರಲ್ ಆಗಿದ್ದು, ಪೊಲೀಸರವರೆಗೂ ಈ ವಿಡಿಯೋ ತಲುಪಿದೆ. ಸದ್ಯ ಪೊಲೀಸರು ಈ ವಿಡಿಯೋ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

    ಸದ್ಯ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ಪೊಲೀಸರು ರಚಿಸಿದ್ದು, ಇಬ್ಬರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.