Tag: ಅಪ್ರಾಪ್ತ ಬಾಲಕಿ

  • ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    -ಮೃತ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ಪರಿಹಾರ ನೀಡುವಂತೆ ಆದೇಶ

    ಶಿವಮೊಗ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ (Penalty) ವಿಧಿಸಿ ಶಿವಮೊಗ್ಗ (Shivamogga) ನ್ಯಾಯಾಲಯ ತೀರ್ಪು ನೀಡಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಸಾದಾ ಶಿಕ್ಷೆ ಅನುಭವಿಸುವಂತೆ ಹಾಗೂ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ (Court) ಆದೇಶಿಸಿದೆ.

    2020ರಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಳು. ಘಟನೆಯ ಬಳಿಕ ಬಾಲಕಿ ತಂದೆ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್

    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ

  • ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ (Rape) ಆಘಾತಕಾರಿ ಘಟನೆ ಕಲಬುರಗಿ (Kalaburagi) ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್‌ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗರ್ಲ್‌ಫ್ರೆಂಡ್ಸ್‌ ನಿಭಾಯಿಸಿ, ಶೋಕಿ ಮಾಡಲು ಹೈಟೆಕ್ ಬೈಕ್‌ಗಳ ಕಳ್ಳತನ

    ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಟೆರರಿಸ್ಟ್‌ಗಳು ಬಾಂಬ್ ಇಟ್ಟಿದ್ದಾರೆ – ಪೊಲೀಸ್ರ ನಿದ್ದೆಗೆಡಿಸಿದ ಫೇಕ್‌ ಕಾಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

    ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

    ನವದೆಹಲಿ: 16 ವರ್ಷದ ಅಪ್ರಾಪ್ತ ಬಾಲಕಿಯ (Minor girl) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಆತನ ಶರ್ಟ್ ಸುಳಿವಿನಿಂದ ಬಂಧಿಸಿದ (Arrest) ಪ್ರಕರಣ ದೆಹಲಿಯಲ್ಲಿ (Delhi) ನಡೆದಿದೆ. ಆರೋಪಿಯನ್ನು ಮೋನು ಎಂದು ಗುರುತಿಸಲಾಗಿದೆ. ಕೃತ್ಯ ಎಸಗುವಾಗ ಧರಿಸಿದ್ದ ಹಳದಿ ಬಣ್ಣದ ಶರ್ಟ್ ನಿಂದ ಆರೋಪಿ ಸಿಕ್ಕಿಬಿದ್ದಿದ್ದಾನೆ.

    ಬಾಲಕಿಯ ಪೋಷಕರು ಶಾಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ (Contractual labourers) ಕೆಲಸ ಮಾಡುತ್ತಿದ್ದರು. ಅವರ ಕುಟುಂಬ ಶಾಲೆಯ ಒಂದು ಕೊಠಡಿಯಲ್ಲಿ ಉಳಿದುಕೊಂಡಿತ್ತು. ಕೆಲವು ದಿನಗಳಿಂದ ಶಾಲೆಗೆ ರಜೆ ಘೋಷಿಸಲಾಗಿತ್ತು. ಬಾಲಕಿಯ ಪೋಷಕರು ವೇತನ ಪಡೆಯಲು ಮಂಗಳವಾರ ತೆರಳಿದ್ದರು. ಈ ವೇಳೆ ಸಂತ್ರಸ್ತೆ ಮತ್ತು ಆಕೆಯ 18 ವರ್ಷದ ಸಹೋದರಿ ಇಬ್ಬರೇ ಮನೆಯಲ್ಲಿದ್ದರು. ಇದನ್ನು ಗಮನಿಸಿದ ಆರೋಪಿ ಮನೆಗೆ ನುಗ್ಗಿದ್ದ. ಇದನ್ನೂ ಓದಿ: ರಥಕ್ಕೆ ಕಳಸ ಕಟ್ಟುತ್ತಿದ್ದಾಗ ಆಯಾತಪ್ಪಿ ಬಿದ್ದು ವ್ಯಕ್ತಿ ಸಾವು – ಜಾತ್ರೆ ಮುಂದೂಡಿದ ಗ್ರಾಮಸ್ಥರು

    CRIME

    ಬೆಳಗ್ಗೆ 11.30 ರ ಸುಮಾರಿಗೆ ಆರೋಪಿ ನುಗ್ಗಿ ಬಾಲಕಿಯ ಮನೆಯನ್ನು ದರೋಡೆ (Robbery) ಮಾಡಿದ್ದಾನೆ. ಬಳಿಕ ಅಡುಗೆ ಮನೆಯಿಂದ ಚಾಕುವನ್ನು ಎತ್ತಿಕೊಂಡು 16 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಎಫ್‍ಐಆರ್ (FIR) ದಾಖಲಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಆರೋಪಿ ಹಳದಿ ಶರ್ಟ್ ಧರಿಸಿದ್ದಾನೆ ಎಂದು ಅಪ್ರಾಪ್ತ ಬಾಲಕಿ ತಿಳಿಸಿದ್ದಾಳೆ. ಸುತ್ತಮತ್ತಲಿನ ಸಿಸಿಟಿವಿ ಪರಿಶೀಲಿಸಿದಾಗ ಹಳದಿ ಶರ್ಟ್‍ನಲ್ಲಿ ಆರೋಪಿಯ ಮಸುಕಾದ ಚಿತ್ರ ಕಂಡುಬಂದಿದೆ. ಇದರ ಆಧಾರದ ಮೇಲೆ ಸಂತ್ರಸ್ತೆ ಆರೋಪಿಯನ್ನು ಗುರುತಿಸಿದ್ದು ಬಂಧನಕ್ಕೆ ನೆರವಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್-ಟೆಂಪೋ ನಡುವೆ ಡಿಕ್ಕಿ – ತಂದೆ, ಮೂವರು ಮಕ್ಕಳ ದುರ್ಮರಣ

  • ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ

    ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿ- ವಿಷ ಕುಡಿದು ಆತ್ಮಹತ್ಯೆ

    ಹಾಸನ: ಹದಿಹರಿಯದ ಪ್ರೇಮಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ.

    ಬಾಲಕಿ ಇತ್ತೀಚೆಗೆ ಮತ್ತೋರ್ವ ಅಪ್ರಾಪ್ತ ಬಾಲಕನೊಂದಿಗೆ ಸುತ್ತಾಡುತ್ತಿದ್ದಳು. ಮಂಗಳವಾರ ತನ್ನ ಅಪ್ರಾಪ್ತೆ ಸ್ನೇಹಿತೆ, ಅಪ್ರಾಪ್ತ ಬಾಲಕನೊಂದಿಗೆ ಬೈಕ್‍ನಲ್ಲಿ ಜಾಲಿ ರೈಡ್ ಹೋಗಿದ್ದಳು. ಇದನ್ನು ಲೋಕೇಶ್ ಪ್ರಶ್ನಿಸಿದ್ದನು. ಇದಾದ ಬಳಿಕ ಆತ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅನುಮಾನಗೊಂಡು ಜಗಳವಾಡುತ್ತಿದ್ದ.

    ಇತ್ತ ಜಾಲಿ ರೈಡ್ ಹೋಗಿದ್ದಕ್ಕೆ ಅಪ್ರಾಪ್ತ ಬಾಲಕಿಗೆ ಪೋಷಕರು ಕೂಡ ಬುದ್ಧಿ ಹೇಳಿದ್ದರು. ಇದರಿಂದ ಮನನೊಂದು ಬಾಲಕಿ ಬುಧವಾರ ವಿಷ ಕುಡಿದಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಹಾಸನದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸ್ವಚ್ಛತೆ ಮರೆತ ಹಾಸ್ಟೆಲ್ ಸಿಬ್ಬಂದಿ- 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಂಟಿದ ಚರ್ಮರೋಗ!

    ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಲೋಕೇಶ್ ವಿರುದ್ಧ ಕೇಸ್ ದಾಖಲಿಸಿ ಬಂಧಿಸಿದ್ದಾರೆ. ಈ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ವ್ಯಕ್ತಿಯ ಬರ್ಬರ ಕೊಲೆ

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ವ್ಯಕ್ತಿಯ ಬರ್ಬರ ಕೊಲೆ

    ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರ ಕೊಲೆ ಮಾಡಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಹೆಣ್ಣೂರಿನಲ್ಲಿ ನಡೆದಿದೆ.

    ಕುಪ್ಪಣ್ಣ(72) ಎಂಬಾತನನ್ನು ಮಧು ಎನ್, ಸಹಬಾಸ್ ಎಂಬವರು ಕೊಲೆ ಮಾಡಿದ್ದಾರೆ. ಕುಪ್ಪಣ್ಣ ಹಾಗೂ ಅಪ್ರಾಪ್ತೆ ಅಕ್ಕಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯು (Girl) ಒಣ ಹಾಕಿದ್ದ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದ ಸಂದರ್ಭದಲ್ಲಿ ಆಕೆಯನ್ನು ಕರೆಸಿ ಕುಪ್ಪಣ್ಣ ಜ್ಯೂಸ್ ನೀಡಿದ್ದ. ಈ ಜ್ಯೂಸ್‍ನಲ್ಲಿ ನಶೆ ಪದಾರ್ಥ ಬೆರಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ವೇಳೆಗೆ ಬಾಲಕಿಯನ್ನು ಹುಡುಕಿಕೊಂಡು ಬಂದ ಪೋಷಕರಿಗೆ ಕೃತ್ಯ ಬೆಳಕಿಗೆ ಬಂದಿದೆ.

    ವಿಚಾರ ತಿಳಿದ ಬಾಲಕಿಯ ಮನೆಯವರು ಕುಪ್ಪಣ್ಣನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಕುಪ್ಪಣ್ಣನಿಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ನಂತರ ಪೊಲೀಸ್ ಠಾಣೆಗೆ (Police Station) ವಿಚಾರ ತಿಳಿದು ಸ್ಥಳಕ್ಕೆ ಹೋಗುವಷ್ಟರಲ್ಲಿ ಕುಪ್ಪಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಗೆ ಸಂಬಂಧಿಸಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತೆ ಮೇಲೆ ಅತ್ಯಾಚಾರ- ಆರೋಪಿಗಳ ಮನೆಗೆ ನುಗ್ಗಿದ ಬುಲ್ಡೋಜರ್

    ಅಪ್ರಾಪ್ತೆ ಮೇಲೆ ಅತ್ಯಾಚಾರ- ಆರೋಪಿಗಳ ಮನೆಗೆ ನುಗ್ಗಿದ ಬುಲ್ಡೋಜರ್

    ಭೋಪಾಲ್: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಆರು ಮಂದಿ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ(Madhya Pradesh) ರೇವಾ ಜಿಲ್ಲೆಯಲ್ಲಿ ನಡೆದಿದೆ.

    ರೇವಾ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ನೈಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತೆಯು ತನ್ನ ಸ್ನೇಹಿತನೊಂದಿಗೆ(Friend) ದೇವಸ್ಥಾನಕ್ಕೆ(Temple) ಹೋಗಿದ್ದಳು. ಇಬ್ಬರೂ ಹರಟೆ ಹೊಡೆಯುತ್ತಿದ್ದಾಗ ಅಲ್ಲಿಗೆ ಬಂದ ನಾಲ್ವರು ವ್ಯಕ್ತಿಗಳು ಹಾಗೂ ಇಬ್ಬರು ಅಪ್ರಾಪ್ತರು ಸ್ನೇಹಿತನ ಮುಂದೆ ಬಾಲಕಿಯನ್ನು ಎಳೆದೊಯ್ದಿದ್ದಾರೆ. ಆ ಬಳಿಕ ನದಿಯ ಬಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬಾಲಕಿಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರಿನ ಪ್ರಕಾರ, ಬಾಲಕಿ ಹಾಗೂ ಆಕೆಯ ಸ್ನೇಹಿತ ಎಷ್ಟೇ ಬೇಡಿಕೊಂಡರೂ, ಆರೋಪಿಗಳು ಆಕೆಯನ್ನು ಬಿಡಲಿಲ್ಲ. ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಬಳಿಕ ಆಕೆಯ ಮೊಬೈಲ್ ಹಾಗೂ ಕಾಲ್ಗೆಜ್ಜೆಯನ್ನು ಕಿತ್ತುಕೊಂಡರು. ಅದಾದ ನಂತರ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಆಪರೇಷನ್‌ ಬುಲ್ಡೋಜರ್‌ – ದೊಡ್ಡ ಕಟ್ಟಡಗಳು, ವಿಲ್ಲಾಗಳನ್ನು ಕೆಡವುತ್ತಾ BBMP?

    ಘಟನೆ ಬೆನ್ನಲ್ಲೇ ಮೂವರು ಆರೋಪಿಗಳ ಅಕ್ರಮ ಕಟ್ಟಡವನ್ನು ಜಿಲ್ಲಾಡಳಿತ ನೆಲಸಮಗೊಳಿಸಲಾಗಿದೆ. ಇನ್ನುಳಿದಂತೆ ಘಟನೆಯಲ್ಲಿ ಭಾಗಿಯಾದ ಉಳಿದ ಮೂವರಿಗೂ ಅದೇ ರೀತಿಯ ಶಿಕ್ಷೆಯನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯ ಆರೋಗ್ಯ ಹದಗೆಟ್ಟಿದ್ದರಿಂದ ಪೊಲೀಸ್ ತಂಡ ಆಸ್ಪತ್ರೆಗೆ ಸಾಗಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಜಮೀರ್ ಸಿಎಂ ಆಗ್ತಾರೆ ಎಂದ ಚರ್ಚ್ ಫಾದರ್

    Live Tv
    [brid partner=56869869 player=32851 video=960834 autoplay=true]

  • ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ಪಾಟ್ನಾ: ಅಪ್ರಾಪ್ತ ಬಾಲಕಿಯ ಮೇಲೆ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಚಾರಗೈದಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದಿದೆ.

    ಬಾಲಕಿಯು ಕೋಚಿಂಗ್ ಕ್ಲಾಸ್‍ನಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಆ ಐವರು ಆರೋಪಿಗಳಲ್ಲಿ ವಿದ್ಯಾರ್ಥಿಯೋರ್ವ ಅದೇ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಅವನು ಈ ಹಿಂದೆ ಆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ಬಗ್ಗೆ ಕೋಚಿಂಗ್ ಸೆಂಟರ್‌ನ ಮುಖ್ಯಸ್ಥರಿಗೆ ಬಾಲಕಿಯ ಕುಟುಂಬದವರು ದೂರು ನೀಡಿದ್ದರು. ಈ ಹಿನ್ನೆಲೆ ಇನ್ನು ಮುಂದೆ ಬಾಲಕಿಗೆ ತೊಂದರೆಯಾಗುವುದಿಲ್ಲ ಅಂತಾ ಮುಖ್ಯಸ್ಥ ಭರವಸೆ ನೀಡಿದ್ದರು. ನಂತರ ಕುಟುಂಬವು ಅದೇ ಕೋಚಿಂಗ್ ಸೆಂಟರ್‌ಗೆ ಬಾಲಕಿಯನ್ನು ಕಳುಹಿಸಲು ನಿರ್ಧರಿಸಿದರು. ದೂರಿನ ಮೇರೆಗೆ ಕೋಪಗೊಂಡ ಆರೋಪಿ ಮತ್ತು ಅವನ ಸ್ನೇಹಿತರು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಯೋಜನೆ ರೂಪಿಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯ ನಂತರ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..!

    ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..!

    ಚಂಡೀಗಢ: ವೃದ್ಧನೊಬ್ಬ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದೆ.

    ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಿಂದ ವೃದ್ಧನು ಎಲ್ಲಿ ನಾನು ಸಿಕ್ಕಿ ಬೀಳುತ್ತೇನೆ ಎಂಬ ಭಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕಿಯ ತಾಯಿಯು ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ವಿರುದ್ಧ ದೂರು ನೀಡಲು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದ ನಂತರ ವೃದ್ಧನು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ

    ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಬುಧವಾರ ಫೋಕ್ಸೊ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ವೃದ್ಧನ ಶವವು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೃದ್ಧನ ಶವದ ಹತ್ತಿರ ಯಾವುದೇ ಡೇತ್ ನೋಟ್ ಕಂಡುಬಂದಿಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ

    ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನನ್ವಯ, ಆ ವೃದ್ಧ ಬಾಲಕಿಗೆ ಸಿಹಿತಿಂಡಿ ಕೊಡಿಸುವುದಾಗಿ ನಂಬಿಸಿದ್ದಾನೆ. ನಂತರ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಆತ ಅತ್ಯಾಚಾರ ನಡೆಸಿರುವ ಬಗ್ಗೆ ನನ್ನ ಮಗಳು ಹೇಳಿದಾಗ ನಾನು ಪೊಲೀಸರ ಬಳಿ ಹೋಗಿ ದೂರು ನೀಡಿದೆ ಎಂದು ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

    ಬಿಲಾಸ್‍ಪುರ ಪೊಲೀಸ್ ಠಾಣೆಯ ಹೆಚ್ಚುವರಿ ಠಾಣಾಧಿಕಾರಿ ಕುಂದನ್ ಸಿಂಗ್, ವೃದ್ಧನ ಸಾವಿನ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅದೇ ಸಮಯದಲ್ಲಿ ಅತ್ಯಾಚಾರ ಪ್ರಕರಣದ ತನಿಖೆಯೂ ನಡೆಯುತ್ತಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

  • ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕ, ಮ್ಯಾನೇಜರ್‌ನಿಂದಲೇ ಅತ್ಯಾಚಾರ

    ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕ, ಮ್ಯಾನೇಜರ್‌ನಿಂದಲೇ ಅತ್ಯಾಚಾರ

    ಲಕ್ನೋ: ಎಂಟು ವರ್ಷದ ಬಾಲಕಿಯ ಮೇಲೆ ಶಿಕ್ಷಕ ಮತ್ತು ಶಾಲೆಯ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ.

    ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಬಾಲಕಿ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಶಾಲೆಯಿಂದ ಮನೆಗೆ ಬಂದ ನಂತರ ಬಾಲಕಿ ನಡೆದ ಘಟನೆಯನ್ನೆಲ್ಲಾ ಪೋಷಕರಿಗೆ ವಿವರಿಸಿದ್ದಾಳೆ. ಬಳಿಕ ಬಾಲಕಿ ಪೋಷಕರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ : ನಂದಿಬೆಟ್ಟ, ಚಾಮುಂಡಿ ಬೆಟ್ಟ, ಮುಳ್ಳಯ್ಯನಗಿರಿಯಲ್ಲಿ ರೋಪ್ ವೇ

    ಈ ಸಂಬಂಧ ಸರ್ಕಲ್ ಅಧಿಕಾರಿ ಕುಲದೀಪ್ ಸಿಂಗ್ ಅವರು, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವರದಿಯಲ್ಲಿ ಅತ್ಯಾಚಾರವನ್ನು ದೃಢಪಟ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ

  • ನಾನಾ ವೇಷ ತೊಟ್ಟು ಜನರಿಗೆ ಟೋಪಿ ಹಾಕಿದ್ದ ಸ್ವಾಮೀಜಿ ಪೊಲೀಸರ ಅತಿಥಿ!

    ನಾನಾ ವೇಷ ತೊಟ್ಟು ಜನರಿಗೆ ಟೋಪಿ ಹಾಕಿದ್ದ ಸ್ವಾಮೀಜಿ ಪೊಲೀಸರ ಅತಿಥಿ!

    – ಪೊಲೀಸರಿಗೂ 45 ಸಾವಿರ ರೂ. ವಂಚನೆ

    ಕೊಪ್ಪಳ: ನಾನಾ ವೇಷ ತೊಟ್ಟು ಜನರಿಗೆ ಟೋಪಿ ಹಾಕಿದ್ದ ಸ್ವಾಮೀಜಿಯನ್ನು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಬಂಧಿಸಿದ್ದಾರೆ.

    ಕಪಟ ಸ್ವಾಮೀಜಿ ಶಿವಾನಂದ ಕಡಿಯನ್ನು ಪೊಲೀಸರು ಬಂಧಿಸಿದ್ದು, ಮೂಲತಃ ಈತನ ಹೆಸರು ಸಿದ್ದರಾಮ ಆಗಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿಯಾಗಿದ್ದಾನೆ. ನಾನು ಸ್ವಾಮೀಜಿ ಎಂದು ಸುಳ್ಳು ಹೇಳಿ ನೂರಾರು ಜನರಿಗೆ ವಂಚನೆ ಮಾಡಿದ್ದನು. ಅಲ್ಲದೆ ಅಪ್ರಾಪ್ತ ಬಾಲಕಿಗೂ ಸಹ ಈ ಸ್ವಾಮೀಜಿ ವಂಚನೆಯನ್ನು ಮಾಡಿದ್ದನು. ಬಾಲಕಿಯನ್ನು ಈತ ನಾನು ಟಿಕೆಟ್ ಕಲೆಕ್ಟರ್ ಎಂದು ವಂಚನೆ ಮಾಡಿದ್ದಾನೆ. ಈ ಹಿನ್ನೆಲೆ ಬಾಲಕಿ ತಂದೆ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!

    ಅಲ್ಲದೆ ಸಿದ್ದರಾಮ ಈ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದನು. ಈ ವಿಷಯ ತಿಳಿದ ಬಾಲಕಿ ತಂದೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಿದ್ದರಾಮನ ಆಟ ಬಯಲಾಗಿದೆ. ಈ ಪರಿಣಾಮ ಸ್ವಾಮೀಜಿಯನ್ನು ಕೊಪ್ಪಳದ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರಿಗೂ ಮೋಸ ಮಾಡಿದ ಈತ, ಪೊಲೀಸ್ ವಾಕಿ ಟಾಕಿಗೆ ಪೂಜೆ ಮಾಡುತ್ತೇನೆ ಎಂಬ ಹೆಸರಲ್ಲಿ 45 ಸಾವಿರ ಹಣ ವಸೂಲಿ ಮಾಡಿದ್ದಾನೆ. ಸಿದ್ದರಾಮ ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ಪೋತಲಕಟ್ಟಿಯಲ್ಲಿ ಮಠ ಮಾಡಿಕೊಂಡಿದ್ದು, ಅಲ್ಲಿಗೆ ಬಂದ ಜನರಿಗೆ ವಂಚನೆ ಮಾಡುತ್ತಿದ್ದಾನೆ ಎಂಬುದು ತನಿಖೆ ಮೂಲಕ ಬೆಳಕಿಗೆ ಬಂದಿದೆ.

    ಅಷ್ಟೇ ಅಲ್ಲದೆ ನಿಧಿ ತಗೆದುಕೊಡೋದಾಗಿ ಹೇಳಿ ನಿಧಿ ತಗೆಯೋದೆಲ್ಲಾ ವೀಡಿಯೋ ಮಾಡಿಸಿಕೊಂಡಿದ್ದಾನೆ ಈ ಕಪಟ ಸ್ವಾಮೀ. ‘ಮಂತ್ರದಿಂದ ಹಣ ಉದುರತ್ತೆ’ ಎಂದು ಜನರಿಗೆ ಟೋಪಿ ಹಾಕಿ ಲಕ್ಷಾಂತರ ಹಣ ವಂಚನೆ ಮಾಡಿದ್ದಾನೆ. ರಾಯಚೂರು, ಕೊಪ್ಪಳ ಮಾತ್ರವಲ್ಲದೆ ರಾಜ್ಯದ ನಾನಾ ಭಾಗದಲ್ಲಿ ಇವನು ಜನರನ್ನು ವಂಚನೆ ಮಾಡಿದ್ದು, ಈಗ ಪೊಲೀಸರ ಬಲೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ

    ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಅಪ್ರಾಪ್ತ ಬಾಲಕಿ ತಂದೆಯ ದೂರಿನ ಆಧಾರದ ಮೇಲೆ ಕೊಪ್ಪಳ ಮಹಿಳಾ ಪೊಲೀಸರು ಕಳ್ಳ ಸ್ವಾಮೀಜಿಯನ್ನು ಬಂಧಿಸಿದ್ದಾರೆ.