Tag: ಅಪ್ರಾಪ್ತ ಬಾಲಕಿ

  • ಮಂಡ್ಯ ಗರ್ಭಿಣಿ ಬಾಲಕಿಯ ಸಾವಿನ ಸುತ್ತ ಅನುಮಾನದ ಹುತ್ತ

    ಮಂಡ್ಯ ಗರ್ಭಿಣಿ ಬಾಲಕಿಯ ಸಾವಿನ ಸುತ್ತ ಅನುಮಾನದ ಹುತ್ತ

    ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಘಟನೆ ನಡೆದಿದೆ. ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.

     

    ಬಾಲಕಿಯು ಕಳೆದ 15 ದಿನಗಳ ಹಿಂದೆ ಹೊಟ್ಟೆ ನೋವಿನ ಎಂದು ನರಳುತ್ತಿದ್ದಳು. ಇದರಿಂದಾಗಿ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರದೊಯ್ದಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಗರ್ಭಿಣಿ ಎಂಬುದನ್ನು ವೈದ್ಯರು ದೃಢಪಡಸಿದ್ದರು. ಈ ವಿಷಯ ತಿಳಿದ ತಾಯಿ ತನ್ನ ಅಪ್ರಾಪ್ತ ಮಗಳು ಗರ್ಭಿಣಿ ಎಂಬ ವಿಚಾರ ತಿಳಿದು ಕುಸಿದು ಬಿದ್ದಿದ್ದಳು. ನಂತರ ಸುಧಾರಿಸಿಕೊಂಡು ಈ ವಿಷಯದ ಬಗ್ಗೆ ಮಗಳನ್ನು ಕೇಳಿದಾಗ ಪಕ್ಕದ ಮನೆಯ ನಿವಾಸಿ ನೀಡಿದ್ದ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೊಂಡಿದ್ದಳು. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ 4 ಗಂಟೆ ದಾಳಿ ನಂತರ 60 ಲಕ್ಷ ರೂ. ಪತ್ತೆ

     

    ಪರಮೇಶ್(50) ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆರೋಪಿ ಸವರ್ಣೀಯ ಎಂಬ ಕಾರಣಕ್ಕೆ ಮರ್ಯಾದೆಗೆ ಹೆದರಿ ವಿಚಾರವನ್ನು ತಾಯಿ ಮುಚ್ಚಿಟ್ಟಿದ್ದರು. ಮೃತ ಬಾಲಕಿಯ ತಾಯಿ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಮೊನ್ನೆ ಕೆಲಸದಿಂದ ವಾಪಸ್ ಆದಾಗ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: 20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ

  • ಕಬ್ಬಿನ ಗದ್ದೆಯಲ್ಲಿ ಶವವಾದ ಅಪ್ರಾಪ್ತ ಬಾಲಕಿ – ನ್ಯಾಯಕ್ಕಾಗಿ ಕಿಚ್ಚನ ಆಗ್ರಹ

    ಕಬ್ಬಿನ ಗದ್ದೆಯಲ್ಲಿ ಶವವಾದ ಅಪ್ರಾಪ್ತ ಬಾಲಕಿ – ನ್ಯಾಯಕ್ಕಾಗಿ ಕಿಚ್ಚನ ಆಗ್ರಹ

    ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ ರೀತಿ ಕ್ರೂರ ಕೃತ್ಯ ಮಾಡಲು ಯೋಚಿಸುವವರಿಗೆ ಒಂದು ಎಚ್ಚರಿಕೆ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಏನಿದು ಪ್ರಕರಣ?: ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಬಾಲಕಿ ಕುಟುಂಬಸ್ಥರ ಜೊತೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗ್ರಾಮಕ್ಕೆ ಬಂದಿದ್ದಳು. ಬುಧವಾರ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದರು.

    ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಕೊಲೆಯಾದ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನು ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ ಸಂಬಂಧಿಕರು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

  • ಉಡುಪಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಣ – ಠಾಣೆಗೆ ಹಿಂದೂ ಸಂಘಟನೆಗಳ ಮುತ್ತಿಗೆ

    ಉಡುಪಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಣ – ಠಾಣೆಗೆ ಹಿಂದೂ ಸಂಘಟನೆಗಳ ಮುತ್ತಿಗೆ

    ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟಿಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನ ಕಳೆದರೂ ಬಾಲಕಿ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ.

    ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ. ಈ ಘಟನೆಗೆ ಯಾರೆಲ್ಲಾ ಕುಮ್ಮಕ್ಕು ನೀಡಿದ್ದಾರೆ ಎಲ್ಲರನ್ನೂ ತಕ್ಷಣಕ್ಕೆ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಲಾಯ್ತು.

    ಮನವಿ ಸ್ವೀಕರಿಸಿ ಉಪ ಪೊಲೀಸ್ ಅಧೀಕ್ಷಕ ಜೈಶಂಕರ್ ಮಾತನಾಡಿ, ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಸಿಸಿಟಿವಿ ಫುಟೇಜ್ ಲಭ್ಯವಾಗಿದ್ದು ಆರೋಪಿಯ ಚಲನವಲನಗಳ ಬಗ್ಗೆ ನಿಗಾ ಇರಿಸಲಾಗಿದೆ. ತನಿಖೆಯ ಬಗ್ಗೆ ಈಗಾಲೇ ಏನು ಹೇಳಲಿಕ್ಕೆ ಆಗುವುದಿಲ್ಲ. ಇದರಿಂದ ಆರೋಪಗಳಿಗೆ ಅನುಕೂಲವಾಗಬಹುದು ಆರೋಪಿಯನ್ನು ತಕ್ಷಣ ಬಂಧಿಸುವ ವಿಶ್ವಾಸ ನಮಗಿದೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

    ಆರೋಪಿ ಬಂಧನ ಶೀಘ್ರ ಆಗದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ಕೊಟ್ಟರು. ಬಜರಂಗದಳ ಪ್ರಾಂತ ಸಂಚಾಲಕರು ಸುನಿಲ್ ಕೆ.ಆರ್. ಇದು ಲವ್ ಜಿಹಾದ್ ಷಡ್ಯಂತ್ರ ಇದರ ಹಿಂದೆ ಮತಾಂಧ ಸಂಘಟನೆಗಳ ಪಾತ್ರ ಇದೆ. ಯುವಕನ ಜೊತೆ ಕೈಜೋಡಿಸಿರುವ ವ್ಯಕ್ತಿಗಳನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಿದ್ದರೆ ಬಾಲಕಿಯನ್ನು ಪತ್ತೆಹಚ್ಚಲು ಸುಲಭವಾಗುತ್ತದೆ. ಇನ್ನೆರಡು ದಿನದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

  • ಅಪ್ರಾಪ್ತ ಬಾಲಕಿಯ ರೇಪ್, ಮರ್ಡರ್ ಆರೋಪ – ಸ್ಥಳೀಯರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ

    ಅಪ್ರಾಪ್ತ ಬಾಲಕಿಯ ರೇಪ್, ಮರ್ಡರ್ ಆರೋಪ – ಸ್ಥಳೀಯರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ

    – ಪೊಲೀಸ್ ವಾಹನ ಸೇರಿ ಮೂರು ಬಸ್ಸುಗಳಿಗೆ ಬೆಂಕಿ

    ಕೋಲ್ಕತ್ತಾ: ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಮರ್ಡರ್ ಮಾಡಿದ್ದಾರೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳದ ಚೋಪ್ರಾ ಗ್ರಾಮದವರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದ್ದಾರೆ.

    ಈಗ ತಾನೇ ಹತ್ತನೇ ತರಗತಿ ಪಾಸ್ ಆಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮತ್ತು ಗ್ರಾಮಸ್ಥರು ಸೇರಿಕೊಂಡು ಕೋಲ್ಕತಾ ಮತ್ತು ಸಿಲಿಗುರಿ ನಡುವಿನ ನ್ಯಾಷನಲ್ ಹೈವೇ 32ನ್ನು ಬ್ಲಾಕ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ವಾಹನ ಸೇರಿ ಮೂರು ಬಸ್ಸುಗಳಿಗೆ ಪ್ರತಿಭಟನಾಕರರು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

    ಮೃತಪಟ್ಟ ಬಾಲಕಿಯ ಸಹೋದರಿ ಮಾತನಾಡಿ, ಆಕೆ ಈಗ ತಾನೇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಳು. ಆದರೆ ಕಳೆದ ರಾತ್ರಿ ಆಕೆ ಕಾಣೆಯಾಗಿದ್ದಳು ಎಂದು ಹೇಳಿದ್ದಾರೆ. ಗ್ರಾಮದಲ್ಲಿ ಹುಡುಕಾಡಿದ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿಲ್ಲ. ಆದರೆ ಆಕೆಯ ಮೃತದೇಹ ಊರಹೊರಗಿನ ಮರದ ಕೆಳಗೆ ದೊರಕಿತ್ತು. ಘಟನಾ ಸ್ಥಳದಲ್ಲಿ ಎರಡು ಬೈಕ್ ಮತ್ತು ಮೊಬೈಲ್ ಫೋನ್ ಸಿಕ್ಕ ಕಾರಣ ಸ್ಥಳೀಯರು ಯಾರೋ ರೇಪ್ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪಶ್ಚಿಮ ಬಂಗಾಳದ ಪೊಲೀಸರು, ನಾವು ಸ್ಥಳಕ್ಕೆ ಹೋಗಿ ಮೃತ ಬಾಲಕಿಯ ಶವವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೆವು. ಆದರೆ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಹುಡುಗಿಯ ದೇಹದಲ್ಲಿ ವಿಷ ಇರುವುದು ಪತ್ತೆಯಾಗಿದೆ. ಜೊತೆಗೆ ಆಕೆ ಮೃತದೇಹದ ಮೇಲೆ ಯಾವುದೇ ಗಾಯಗಳಿಲ್ಲ. ಆದ್ದರಿಂದ ಈಕೆಯ ಮೇಲೆ ಅತ್ಯಾಚಾರ ಆಗಿರುವುದಿಲ್ಲ. ಆದರೆ ಗ್ರಾಮಸ್ಥರು ಅನುಮಾನಗೊಂಡು ಈ ರೀತಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಘಟನಾ ಸ್ಥಳದಲ್ಲಿ ಬೈಕ್ ಮತ್ತು ಫೋನ್ ಸಿಕ್ಕ ಕಾರಣ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಅದಕ್ಕೆ ಪ್ರತಿಭಟನೆ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸ್ ಲಾಠಿ ಚಾರ್ಜ್ ಮಾಡಿ ಸತತ ಮೂರು ಗಂಟೆಯ ನಂತರ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಾಲಕಿ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

  • ವಿಡಿಯೋ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ

    ವಿಡಿಯೋ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ

    ಚಿಕ್ಕಬಳ್ಳಾಪುರ: 6ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿದ ಇಬ್ಬರು ಕಿಡಿಗೇಡಿಗಳು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಅದನ್ನು ವಿಡಿಯೋ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

    ರಜಾದಿನದಂದು ಯಾರೂ ಇಲ್ಲದ ವೇಳೆ ಶಾಲೆಯ ಬಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿರುವ ಪಿಯುಸಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ನಡೆಸಿದ್ದಾರೆ. ಒಬ್ಬ ವಿದ್ಯಾರ್ಥಿ ಅಪ್ರಾಪ್ತೆಯ ಜೊತೆ ಲೈಂಗಿಕ ದೌರ್ಜನ್ಯ ನಡೆಸುತ್ತ ಅತ್ಯಾಚಾರಕ್ಕೆ ಯತ್ನಿಸಿದ್ದು, ಮತ್ತೋರ್ವ ವಿದ್ಯಾರ್ಥಿ ಅದನ್ನ ತನ್ನ ಮೊಬೈಲ್ ಮೂಲಕ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾನೆ.

    ಈ ಘಟನೆ ನಡೆದ ಹಲವು ದಿನಗಳ ನಂತರ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದು, ವಿಡಿಯೋ ಬಯಲಿಗೆ ಬಂದ ನಂತರ ವಿಡಿಯೋ ಕಂಡ ಅಪ್ರಾಪ್ತ ಬಾಲಕಿಯ ಪೋಷಕರು ಕೃತ್ಯ ಎಸಗಿದ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಕೃತ್ಯ ನಡೆಸಿದ ಇಬ್ಬರು ಬಾಲಕರು ಹಾಗೂ ಸಂತ್ರಸ್ತೆ ಸಹಿತ ಅಪ್ರಾಪ್ತರಾಗಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

  • ಡ್ರಾಪ್ ಕೊಡೋ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ- ಆರೋಪಿ ಬಂಧನ

    ಡ್ರಾಪ್ ಕೊಡೋ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ- ಆರೋಪಿ ಬಂಧನ

    – ವಿಷ ಸೇವಿಸಿ ಬಾಲಕಿ ತಂದೆ ಆತ್ಮಹತ್ಯೆ

    ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಿಗಿದ್ದ ಆರೋಪಿ ಕೊನೆಗೂ ಸೆರೆಸಿಕ್ಕಿದ್ದಾನೆ. ಮಸ್ಕಿ ತಾಲೂಕಿನ ಸಣ್ಣ ಪಾಮಣ್ಣ ಬಂಧಿತ ಆರೋಪಿ.

    ಜನವರಿ 24 ರಂದು ಬಾಲಕಿಯ ತಂದೆಗೆ ಮದ್ಯಪಾನ ಮಾಡಿಸಿದ್ದ ಆರೋಪಿ ತಾನು ಕಂಠಪೂರ್ತಿ ಕುಡಿದಿದ್ದ. ಆ ಬಳಿಕ ಬಾಲಕಿಯನ್ನು ಮನೆಗೆ ಬೈಕ್ ನಲ್ಲಿ ಬಿಟ್ಟು ಬರಲು ಹೋದಾಗ ಮಾರ್ಗ ಮಧ್ಯೆಯಲ್ಲಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದ. ಜಿಲ್ಲೆಯ ಬಾಲಕಿಯರ ವಸತಿ ನಿಲಯವೊಂದರಲ್ಲಿ ಓದುತ್ತಿದ್ದ ಬಾಲಕಿಯನ್ನು ಅವಳ ತಂದೆ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಆದರೆ ಮರಳಿ ಗ್ರಾಮಕ್ಕೆ ತಲುಪುವುದರೊಳಗೆ ಆರೋಪಿ ಈ ಕೃತ್ಯ ಎಸಗಿದ್ದ.

    ಈ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ಬಾಲಕಿಯ ತಂದೆ ಫೆಬ್ರವರಿ 2 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರೋಪಿ ಬಳಸುತ್ತಿದ್ದ ಬೈಕ್ ಆಧಾರದಲ್ಲಿ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕೈಗೆ ಸಿಕ್ಕಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಅಪ್ರಾಪ್ತೆಯ ಮೇಲೆ 8 ದಿನಗಳ ಕಾಲ ಅತ್ಯಾಚಾರ ಎಸಗಿದ್ದ ಕಾಮುಕನ ಬಂಧನ

    ಅಪ್ರಾಪ್ತೆಯ ಮೇಲೆ 8 ದಿನಗಳ ಕಾಲ ಅತ್ಯಾಚಾರ ಎಸಗಿದ್ದ ಕಾಮುಕನ ಬಂಧನ

    ಬೆಳಗಾವಿ: ಅಪ್ರಾಪ್ತೆಯನ್ನು ಅಪಹರಿಸಿ ಎಂಟು ದಿನಗಳ ಕಾಲ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಕಾಮುಕನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ವಸಿಮ್ ಅಲ್ಲಾಭಕ್ಷ ಬಾಗಿ (22) ಬಂಧಿತ ಆರೋಪಿ. ಅರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಅಲ್ಲಾಭಕ್ಷ ಕೆಲ ತಿಂಗಳಗಳಿಂದ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ಇದಕ್ಕೆ ಬಾಲಕಿ ನಿರಾಕರಿಸಿದ್ದಾಳೆ.

    ಇದರಿಂದ ಆಕ್ರೋಶಗೊಂಡಿದ್ದ ಕಾಮುಕ ಜ.13 ರಂದು ಸಂಜೆ ವೇಳೆಯಲ್ಲಿ ಹೊರಗಡೆ ಬಂದಿದ್ದ ಬಾಲಕಿಗೆ ಚಾಕು ತೋರಿಸಿ ಹೆದರಿಸಿ ಅಪಹರಿಸಿದ್ದಾನೆ. ನಂತರ ಗ್ರಾಮಕ್ಕೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ನಡೆಸಿದ್ದಾಗಿ ಆರೋಪಿ ವಿರುದ್ಧ ಬಾಲಕಿಯ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ಲಕ್ನೋ: ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೇ ಅತ್ಯಾಚಾರಗೊಂಡಿದ್ದ ಅಪ್ರಾಪ್ತ ಮಗಳನ್ನು ತಂದೆಯೋರ್ವ ಬೆನ್ನಿನ ಮೇಲೆ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಮಾರ್ಹೆರಾ ಪ್ರದೇಶದಲ್ಲಿ ನಡೆದಿದೆ.

    ಡಿಸೆಂಬರ್ 14 ರಂದು ಅತ್ಯಾಚಾರವಾದ ಮಗಳನ್ನು ವೈದ್ಯಕೀಯ ತಪಾಸಣೆಗೆಂದು ಕರೆದುಕೊಂಡ ಬಂದ ತಂದೆಯೋರ್ವ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೋತ್ತುಕೊಂಡು ಹೋಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಡಿ.14 ರಂದು ತನ್ನ ಮನೆಯಲ್ಲಿದ್ದ 15 ವರ್ಷದ ಬಾಲಕಿಯನ್ನು ಆಕೆಯ ಮನೆಯ ಪಕ್ಕದಲ್ಲಿ ವಾಸವಿದ್ದ 19 ವರ್ಷದ ಯುವಕ ಅಂಕಿತ್ ಯಾದವ್ ಮನೆಯಿಂದ ಎಳೆದುಕೊಂಡು ಹೋಗಿ ಹಲವು ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಯು ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ. ಆಗ ಅವಳ ಕಾಲು ಮತ್ತು ಕೈಗೆ ಗಂಭೀರವಾದ ಗಾಯವಾಗಿದ್ದು, ನಡೆಯಲು ಆಗದ ಸ್ಥಿತಿಗೆ ತಲುಪಿದ್ದಾಳೆ.

    ಇದಾದ ನಂತರ ಬಾಲಕಿಯ ತಂದೆ ದೂರು ನೀಡಲು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಆಗ ತಂದೆ ಮತ್ತು ಬಾಲಕಿ ಹಾಗೂ ಅವರ ಜೊತೆ ಒಬ್ಬರು ಮಹಿಳಾ ಪೇದೆ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಗೆ ಬಂದ ಸಮಯದಲ್ಲಿ ನಡೆಯಲಾರದ ಮಗಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ವ್ಹೀಲ್ ಚೇರ್ ಅಥವಾ ಸ್ಟ್ರೆಚರ್ ಸಿಗದೇ ಇದ್ದಾಗ ತಂದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಹೋಗಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

    ಈ ಫೋಟೋವನ್ನು ಸ್ಥಳೀಯರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಈ ಫೋಟೋ ವೈರಲ್ ಆಗಿದೆ. ಹಾಗೆಯೇ ಈ ರೀತಿಯ ಘಟನೆಗಳು ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಯೋಗಿ ಅದಿತ್ಯನಾಥ್ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ನಾವು ಡಿಸೆಂಬರ್ 14 ರಂದು ದೂರು ಪಡೆದ ನಂತರ, ಆರೋಪಿಯಾದ 19 ವರ್ಷದ ಅಂಕಿತ್ ಯಾದವ್ ನನ್ನು ಬಂಧಿಸಿದ್ದೇವೆ ಹಾಗೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿಯನ್ನು ವಿಚಾರಿಸಿದಾಗ ಹಾರಿಕೆಯ ಉತ್ತರ ನೀಡಿರುವ ಅವರು, ಈ ಆಸ್ಪತ್ರೆ ಈಗ ತಾನೇ ಆರಂಭಗೊಂಡಿದೆ. ಆದ ಕಾರಣ ಇಲ್ಲಿ ಸೌಲ್ಯಭ್ಯಗಳು ಕಮ್ಮಿ, ಈ ಕಾರಣದಿಂದಲೇ ಅವರಿಗೆ ಬಾಲಕಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

  • ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಚೆನ್ನೈ: ತನ್ನ ಹುಟ್ಟುಹಬ್ಬದ ಆಚರಣೆಗೆ ಹೊರಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ 6 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

    ತೆಲಂಗಾಣದಲ್ಲಿ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತನ್ನ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕಿಗೆ ಹೋಗಿದ್ದ 11 ನೇ ತರಗತಿಯ ವಿದ್ಯಾರ್ಥಿನಿಯನ್ನು 6 ಜನ ದುಷ್ಕರ್ಮಿಗಳು ಅತ್ಯಾಚಾರ ಮಾಡಿದ್ದಾರೆ,

    ಈ ಘಟನೆ ಗುರುವಾರ ನಡೆದಿದ್ದು, ಅಂದು ತನ್ನ ಹುಟ್ಟುಹಬ್ಬ ಇದ್ದ ಕಾರಣ ಬಾಲಕಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕ್ ಗೆ ಹೋಗಿದ್ದಾರೆ. ಪಾರ್ಟಿ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಮತ್ತು ಆಕೆಯ ಸ್ನೇಹಿತರನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಗೆಳೆಯರನ್ನು ಥಳಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಗೈದು ವಿಡಿಯೋ ಕೂಡ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಇದಾದ ನಂತರ ಮನೆಗೆ ಬಂದ ಬಾಲಕಿ ನಡೆದ ಘಟನೆಯ ಬಗ್ಗೆ ಮರುದಿನ ತನ್ನ ತಾಯಿಗೆ ವಿವರಿಸಿದ್ದಾಳೆ. ಆಗ ತಾಯಿ ಪೋಲಿಸ್ ಠಾಣೆಗೆ ದೂರು ನೀಡಿದ್ದು, ದೂರ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

  • 6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    ಭುವನೇಶ್ವರ: 6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿಗೆ ಒಡಿಶಾ ವಿಶೇಷ ಪೋಸ್ಕೋ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

    ಕಳೆದ ವರ್ಷ ಅಪರಾಧಿ ಮುಸ್ತಾಕ್ ಒಡಿಶಾದ ಸಲಿಪುರ ಗ್ರಾಮದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕಲ್ಲಿನಿಂದ ಜಜ್ಜಿ ಬಾಲಕಿಯನ್ನು ಕೊಲೆ ಮಾಡಿದ್ದನು. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ, ಆಕೆಯನ್ನು ಶಾಲೆಯ ಆವರಣಕ್ಕೆ ಕರೆದೊಯ್ದು ಮುಸ್ತಾಕ್ ಅತ್ಯಾಚಾರ ಮಾಡಿದ್ದನು. ಬಳಿಕ ಈ ಬಗ್ಗೆ ಬಾಲಕಿ ಯಾರಿಗಾದರೂ ಹೇಳುತ್ತಾಳೆ ಎಂಬ ಭಯದಿಂದ ಬಾಲಕಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದನು.

    ಮಗಳು ಮನೆಯಲ್ಲಿ ಕಾಣದಿದ್ದಾಗ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ಮುಸ್ತಾಕ್ ಎಂಬುದು ತಿಳಿದುಬಂದು, ಆತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬಗ್ಗೆ ಒಡಿಶಾದ ವಿಶೇಷ ಪೋಸ್ಕೋ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಗುರುವಾರ ಆರೋಪ ಪ್ರಕರಣ ಸಾಬೀತಾಗಿದ್ದು ನ್ಯಾಯಾಧೀಶರು ಅಪರಾಧಿಗೆ ಮರಣದಂಡನೆ ವಿಧಿಸಿದ್ದಾರೆ.

    ಈ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ಮಾತನಾಡಿ, ನನ್ನ ಮಗಳ ಸಾವಿಗೆ ಕಾರಣವಾದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ನೀಡಿರುವುದು ಖುಷಿಯಾಗಿದೆ. ಇದರಿಂದ ನನ್ನ ಮಗಳ ಸಾವಿಗೆ ನ್ಯಾಯ ಸಿಕ್ಕಿದೆ, ನ್ಯಾಯಾಲಯಕ್ಕೆ ಧನ್ಯವಾದ. ಈ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಲಿದೆ ಎಂದು ಹೇಳಿದ್ದಾರೆ.

    ಪೋಸ್ಕೋ ಕಾಯ್ದೆ ಅನ್ವಯ 12 ವರ್ಷದ ಒಳಗಿನ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದರೆ ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡಲಾಗುತ್ತದೆ. ಐಪಿಸಿ ಸೆಕ್ಷನ್ 302(ಕೊಲೆ), 363(ಅಪಹರಣ), 376ಬಿ (12 ವರ್ಷದ ಒಳಗಡೆ ಇರುವ 12 ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ) ಅಡಿಯಲ್ಲಿ ಮುಸ್ತಾಕ್ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ವಾದ, ಪ್ರತಿವಾದ ಹಾಗೂ ಸಾಕ್ಷಿಯ ಆಧಾರದ ಮೇಲೆ ನ್ಯಾಯಾಲಯವು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿದೆ.