Tag: ಅಪ್ರಾಪ್ತ ಬಾಲಕಿ

  • ಅಪ್ರಾಪ್ತ ಬಾಲಕಿಗೆ ಶೌಚಾಲಯದಲ್ಲಿ ಲೈಂಗಿಕ ಕಿರುಕುಳ – ಕಾಮುಕ ವಿದ್ಯಾರ್ಥಿ ಬಂಧನ

    ಅಪ್ರಾಪ್ತ ಬಾಲಕಿಗೆ ಶೌಚಾಲಯದಲ್ಲಿ ಲೈಂಗಿಕ ಕಿರುಕುಳ – ಕಾಮುಕ ವಿದ್ಯಾರ್ಥಿ ಬಂಧನ

    ಬೆಂಗಳೂರು: ಅಪ್ರಾಪ್ತ ಬಾಲಕಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವಿದ್ಯಾರ್ಥಿಯೊಬ್ಬನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು ಪೂರ್ವ ತಾಲೂಕಿನ ಬೊಮ್ಮನಹಳ್ಳಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಲೈಂಗಿಕ ಕಿರುಕುಳ ನೀಡಿದ್ದಾನೆ.

    ವಿದ್ಯಾರ್ಥಿನಿ ಶೌಚಾಲಯದಲ್ಲಿ ಕಿರುಚಾಡಿದ್ದನ್ನು ಗಮನಿಸಿದವರು ವಿದ್ಯಾರ್ಥಿಯನ್ನು ಹಿಡಿದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಆವಲಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ಹೊಸಕೋಟೆ ತಾಲೂಕಿನ ಕುರುಬರಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಸದ್ಯ ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ನವದೆಹಲಿ: ಇನ್ನು ಮುಂದೆ ಅತ್ಯಾಚಾರ ಸಂತ್ರಸ್ತ ಮಕ್ಕಳ ಫೋಟೋವನ್ನು ಬ್ಲರ್ ಮಾಡಿ ಮಾಧ್ಯಮಗಳು ಸುದ್ದಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ.

    ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಮಕ್ಕಳ ಗುರುತು ಬಹಿರಂಗ ಕುರಿತು ಸ್ವಯಃ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ ನ್ಯಾಯಾಲಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.

    ಕಳೆದ ಕೆಲ ದಿನಗಳ ಬಿಹಾರದ ಅಪ್ರಾಪ್ತ ಬಾಲಕಿಯರ ಮೇಲೆ ವಸತಿ ನಿಯಲಯದ ಅಧಿಕಾರಿಗಳೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದ ಬಳಿಕ ನ್ಯಾಯಾಲಯ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರ ಸರ್ಕಾರ ಹಾಗೂ ಬಿಹಾರ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ.

    ಬಿಹಾರದ ಸ್ವಯಂ ಸೇವಾ ಸಂಸ್ಥೆಯೊಂದು ನಡೆಸುತ್ತಿದ್ದ ವಸತಿ ನಿಲಯದಲ್ಲಿದ್ದ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿತ್ತು. ಅಲ್ಲದೇ ಈ ಕುರಿತು ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ಸಹ ಲೈಂಗಿಕ ದೌಜನ್ಯ ನಡೆದಿರುವುದನ್ನು ಖಚಿತ ಪಡಿಸಿತ್ತು. ಈ ವರದಿಯ ಅನ್ವಯ ಎನ್‍ಜಿಒ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ವಸತಿ ನಿಲಯದಲ್ಲಿದ್ದ ಎಲ್ಲಾ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ರಾಜ್ಯಪಾಲರು ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಇಂತಹ ಇತರೇ ಎನ್‍ಜಿಒ ಗಳ ವಿರುದ್ಧ ನೇರ, ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು.

    ಬಿಹಾರದ ಮುಜಾಫರ್ ನಗರದ ಬ್ರಿಜೆಷ್ ಠಾಕೂರ್ ಎಂಬಾತ ತನ್ನ ಎನ್‍ಜಿಒ ಅಡಿ ಎರಡು ಬಾಲಕಿಯರ ವಸತಿ ನಿಲಯಗಳನ್ನು ನಡೆಸುತ್ತಿದ್ದ. ಈ ವಸತಿ ನಿಲಯದಲ್ಲಿದ್ದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೇ 11 ಬಾಲಕಿಯರು ವಸತಿ ನಿಲಯದಿಂದ ನಾಪತ್ತೆಯಾಗಿದ್ದರು.

    ವಿಚಾರಣೆ ವೇಳೆ ದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಉದಾಹಣೆಯಾಗಿ ನೀಡಿದ ನ್ಯಾಯಾಲಯ, ಅಪ್ರಾಪ್ತ ಮಕ್ಕಳ ಗುರುತು ಬಹಿರಂಗವಾದ ಬಳಿಕ ಬಾಲಕಿಯರ ಭವಿಷ್ಯ ಮೇಲೆ ಬೀಳುವ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿತು.

    ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ವೇಳೆ ಬಾಲಕಿಯ ಫೋಟೋ ಹಾಗೂ ಧರ್ಮವನ್ನು ಕೆಲ ಮಾಧ್ಯಮಗಳು ಬಹಿರಂಗಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸದಂತೆ ದೆಹಲಿ ಹೈಕೋರ್ಟ್ 12 ಮಾಧ್ಯಮಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿ ಆದೇಶಿಸಿತ್ತು. ದಂಡ ಹಣವನ್ನು ಜಮ್ಮು ಕಾಶ್ಮೀರದ ಸಂತ್ರಸ್ತ ಪರಿಹಾರ ನಿಧಿಗೆ ನೀಡುವಂತೆ ಸೂಚಿಸಿತ್ತು.

    ಈ ವಿಚಾರಣೆ ವೇಳೆ ಮಾಧ್ಯಮಗಳ ಪರ ವಕೀಲರು ಕಾನೂನನ್ನು ಅರ್ಥ ಮಾಡಿಕೊಳ್ಳುವಲ್ಲಿ ಲೋಪವಾಗಿದೆ. ಸಂತ್ರಸ್ತ ಬಾಲಕಿ ಮೃತಪಟ್ಟ ಕಾರಣ ನಾವು ಆಕೆಯ ಫೋಟೋವನ್ನು ಪ್ರಕಟಿಸಿದ್ದೇವೆ. ನಾವು ಎಸಗಿರುವ ತಪ್ಪಿಗೆ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದರು. ಆದರೆ ಹೈಕೋರ್ಟ್ ಮಾಧ್ಯಮಗಳ ಕ್ಷಮೆಯನ್ನು ಒಪ್ಪದೇ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು. ಈ ಪ್ರಕರಣ ಬಳಿಕ ನ್ಯಾಯಾಲಯ ಮತ್ತೊಮ್ಮೆ ಮಾಧ್ಯಮಗಳಿಗೆ ಸೂಚನೆ ರವಾನಿಸಿದೆ.

    ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ. ಈ ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲಾದರೆ ಸಂತ್ರಸ್ತರ ವಿವರ, ಫೋಟೋ ಸೇರಿದಂತೆ ಯಾವುದೇ ಮಾಹಿತಿಯನ್ನು ಪ್ರಕಟಿಸುವಂತಿಲ್ಲ.

  • ಫೇಸ್‍ಬುಕ್‍ನಿಂದ ಎಚ್ಚರಿಕೆ ಸಂದೇಶ – ಆತ್ಮಹತ್ಯೆ ಪೋಸ್ಟ್ ಮಾಡಿದ್ದ ಅಪ್ರಾಪ್ತೆಯನ್ನು 30 ನಿಮಿಷದಲ್ಲಿ ರಕ್ಷಿಸಿದ ಪೊಲೀಸರು

    ಫೇಸ್‍ಬುಕ್‍ನಿಂದ ಎಚ್ಚರಿಕೆ ಸಂದೇಶ – ಆತ್ಮಹತ್ಯೆ ಪೋಸ್ಟ್ ಮಾಡಿದ್ದ ಅಪ್ರಾಪ್ತೆಯನ್ನು 30 ನಿಮಿಷದಲ್ಲಿ ರಕ್ಷಿಸಿದ ಪೊಲೀಸರು

    ಡಿಸ್‍ಪುರ: ಫೇಸ್‍ಬುಕ್ ಸ್ಟೇಟಸ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪೋಸ್ಟ್ ಮಾಡಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು, 30 ನಿಮಿಷದೊಳಗೆ ರಕ್ಷಿಸಿದ ಘಟನೆ ಅಸ್ಸಾಂ ಗುವಾಹಟಿಯಲ್ಲಿ ನಡೆದಿದೆ.

    ಅಮೆರಿಕದ ಫೇಸ್‍ಬುಕ್ ಪ್ರಧಾನ ಕಚೇರಿಯಿಂದ ಎಚ್ಚರಿಕೆ ಸಂದೇಶ ಬಂದ ನಂತರ ಪೊಲೀಸರು ಅಪ್ರಾಪ್ತೆಯನ್ನು ಕಾಪಾಡಿದ್ದಾರೆ. ಬುಧವಾರ ರಾತ್ರಿ ಫೇಸ್‍ಬುಕ್ ನಲ್ಲಿ ಅಪ್ರಾಪ್ತೆ `ನಾನು ಇಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಸ್ಟೇಟಸ್ ಹಾಕಿಕೊಂಡಿದ್ದಾಳೆ. ಇದನ್ನು ಗಮನಿಸಿದ ಫೇಸ್ ಬುಕ್ ಕಚೇರಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದೆ.

    ಫೇಸ್ ಬುಕ್ ಕಚೇರಿಯಿಂದ ಬಂದ ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು 30 ನಿಮಿಷದಲ್ಲಿ ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಕುರಿತು ಬಾಲಕಿಯ ಕುಟುಂಬಕ್ಕೂ ಮಾಹಿತಿ ನೀಡಿದ್ದು, ಸದ್ಯ ಬಾಲಕಿ ಕುಟುಂಬಸ್ಥರ ಬಳಿ ಸುರಕ್ಷಿತವಾಗಿದ್ದಾಳೆ. ಬಾಲಕಿಯನ್ನು ರಕ್ಷಣೆ ಮಾಡಿದ ಬಳಿಕ ಫೇಸ್ ಬುಕ್ ಸ್ಟೇಟಸ್ ಅನ್ನು ಡಿಲೀಟ್ ಮಾಡಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

    ಘಟನೆ ಕುರಿತು ವಿವರಣೆ ನೀಡಿದ ಅಸ್ಸಾಂ ಎಜಿಡಿಪಿ ಹರ್ಮೀತ್ ಸಿಂಗ್, ಫೇಸ್ ಬುಕ್ ಕಚೇರಿಯಿಂದ ಕಳೆದ ರಾತ್ರಿ ನಮ್ಮ ನೋಡಲ್ ಅಧಿಕಾರಿಗೆ ಎಚ್ಚರಿಕೆ ಸಂದೇಶ ಬಂದಿದೆ. ಬಳಿಕ ನಮ್ಮ ಸಾಮಾಜಿಕ ಜಾಲತಾಣ ಕೇಂದ್ರದ ಸಹಾಯದಿಂದ ಬಾಲಕಿಯ ವಿಳಾಸ ಪತ್ತೆ ಮಾಡಿ, ರಕ್ಷಣೆ ಮಾಡಲಾಯಿತು. ಇದು ಸಾಮಾಜಿಕ ಜಾಲತಾಣದ ಬಹುದೊಡ್ಡ ಯಶಸ್ಸು ಎಂದು ಹೇಳಿದ್ದಾರೆ.

    ಮಕ್ಕಳ ಕಳ್ಳರ ವದಂತಿ ಸೇರಿದಂತೆ ಸುಳ್ಳು ಮಾಹಿತಿಯನ್ನು ರವಾನಿಸುವವರ ವಿರುದ್ಧ ಕ್ರಮಕೈಗೊಳ್ಳಲು ಅಸ್ಸಾಂ ಪೊಲೀಸರು ಸಾಮಾಜಿಕ ಜಾಲತಾಣಾದಲ್ಲಿ ಹರಿದಾಡುತ್ತಿರುವ ವದಂತಿ ವಿರೋಧಿ ಕೇಂದ್ರವನ್ನು ಸ್ಥಾಪಿಸಿದ್ದರು. ಕಳೆದ ತಿಂಗಳು ಸಾಮಾಜಿಕ ಜಾಲತಾಣಗಳ ಮೂಲಕ ಬಂದ ವದಂತಿ ನಂಬಿ ಸಾರ್ವಜನಿಕರು ಇಬ್ಬರು ವ್ಯಕ್ತಿಗಳನ್ನು ಅಸ್ಸಾಂನ ಕಾರ್ಬಿ ಅಂಗ್ಲೋನ್ಗ ಜಿಲ್ಲೆಯಲ್ಲಿ ಕೊಲೆ ಮಾಡಿದ್ದರು. ಈ ಘಟನೆ ಬಳಿಕ ಅಸ್ಸಾಂ ಪೊಲೀಸರು ಸಾಮಾಜಿಕ ಜಾಲತಾಣ ಕೇಂದ್ರವನ್ನು ಪ್ರಾರಂಭಿಸಿದ್ದರು.

  • ವಿಜಯಪುರದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಸಿಐಡಿಗೆ

    ವಿಜಯಪುರದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಸಿಐಡಿಗೆ

    ವಿಜಯಪುರ: ಅಪ್ರಾಪ್ತ ಬಾಲಕಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರ ಎಸ್‍ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಚರ್ಚಿಸಿ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ವರದಿ ಬಂದಿಲ್ಲ. ವರದಿ ಬಂದ್ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ರು.

    ಈ ಪ್ರಕರಣದಲ್ಲಿ ಬಿಜೆಪಿಯವರು ಸಾವಿನ ಮನೆಯಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ತಾರೆ ಎಂದು ವಾಗ್ದಾಳಿ ಮಾಡಿದರು.

    ಬುಧವಾರದಂದು ಸಚಿವ ಎಂ.ಬಿ.ಪಾಟೀಲ್ ಸ್ಥಳಕ್ಕೆ ತೆರಳಿ ಅಪ್ರಾಪ್ತೆಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದರು.ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರು, ಶೀಘ್ರವೇ ಕಾಮುಕರನ್ನ ಬಂಧಿಸಬೇಕೆಂದು ಆಗ್ರಹಿಸಿದ್ರು. ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕಡೆಗೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಮೂವರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿದ್ರು.

  • ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ವಿಡಿಯೋ ಮಾಡ್ದ 65ರ ವೃದ್ಧ!

    ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ವಿಡಿಯೋ ಮಾಡ್ದ 65ರ ವೃದ್ಧ!

    ತುಮಕೂರು: 65 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಅದರ ವೀಡಿಯೋ ಮಾಡಿ ವಿಕೃತಿ ಮೆರೆದಿರುವ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.

    ತಿಪಟೂರು ನಗರದ ಕೊಬ್ಬರಿ ವ್ಯಾಪಾರಿ ಹರೀಶ್ (65) ಈ ಕೃತ್ಯವನ್ನು ಎಸಗಿದ ಆರೋಪಿ. ಹರೀಶ್ ಕ್ರೀಡಾ ತರಬೇತಿಯನ್ನು ನೀಡುವ ನೆಪದಲ್ಲಿ 15 ವರ್ಷದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಅತ್ಯಾಚಾರವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.

    ತರಬೇತಿ ನೀಡುವ ನೆಪದಲ್ಲಿ ಹಲವಾರು ಬಾಲಕಿಯರನ್ನು ಲೈಂಗಿಕವಾಗಿ ಹರೀಶ್ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಈಗ ಕೇಳಿ ಬಂದಿದೆ.

    ನೊಂದ ಬಾಲಕಿಯ ಪೋಷಕರು ಆ ವೀಡಿಯೋ ಸಮೇತವಾಗಿ ತಿಪಟೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರನ್ನ ದಾಖಲಿಸಿಕೊಂಡ ಪೊಲೀಸರು ಈ ತನಿಖೆಯನ್ನು ನಡೆಸುತ್ತಿದ್ದಾರೆ.

  • 11 ವರ್ಷದ ಬಾಲಕಿಯ ಮೇಲೆ 65ರ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ

    11 ವರ್ಷದ ಬಾಲಕಿಯ ಮೇಲೆ 65ರ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ

    ಬೆಂಗಳೂರು: 11 ವರ್ಷದ ಬಾಲಕಿಯ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ನಗರದ ಹೊರವಲಯದ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    65 ವರ್ಷದ ನಾಗಪ್ಪ ಎಂಬಾತನೇ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ವೃದ್ಧ. ಎರಡು ದಿನಗಳ ಹಿಂದೆ ನಾಗಪ್ಪ ತನ್ನ ಪಕ್ಕದ ಮನೆಯ ಬಾಲಕಿಗೆ ಇಟ್ಟಿಗೆಗಳನ್ನು ಎತ್ತಲು ಸಹಾಯ ಮಾಡುವಂತೆ ನಟಿಸಿ ಶೌಚಾಲಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ಈ ವೇಳೆ ಭಯಬೀತಳಾದ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಕೂಡಲೇ ನೆರೆಹೊರೆಯವರು ಬಾಲಕಿಯನ್ನು ರಕ್ಷಿಸಿದ್ದಾರೆ. ಗ್ರಾಮದಲ್ಲಿ 2 ದಿನಗಳ ಕಾಲ ರಾಜಿ-ಪಂಚಾಯ್ತಿ ನಡೆಸಲಾಗಿದೆ. ಪಂಚಾಯ್ತಿ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಗಪ್ಪನ ವಿರುದ್ಧ ದೂರು ದಾಖಲಿಸಿದ್ದಾರೆ.

    ಇದೀಗ ಪೊಲೀಸರು ಆರೋಪಿ ನಾಗಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಗಪ್ಪನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ನಾಗಪ್ಪನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

  • ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು

    ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು

    ಚಿಕ್ಕಬಳ್ಳಾಪುರ: ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಗ್ರಾಮದ 9 ವರ್ಷದ ಬಾಲಕಿಯನ್ನ ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ ಪತ್ತೆಯಾಗಿರಲಿಲ್ಲ. ರಾತ್ರಿ ನಾಪತ್ತೆಯಾದ ಬಾಲಕಿ ಬೆಳಗ್ಗೆ ಗ್ರಾಮದ ಹೊರವಲಯದ ತೋಟವೊಂದರ ಬಳಿಯ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಅರೆ ನಗ್ನ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮೈ ಮೇಲೆ ತರಚಿದ ಗಾಯಗಾಳಗಿದ್ದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರು ಸೇರಿದಂತೆ ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

  • 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬಾಲಕಿ ಈಗ 2 ತಿಂಗಳ ಗರ್ಭಿಣಿ

    7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬಾಲಕಿ ಈಗ 2 ತಿಂಗಳ ಗರ್ಭಿಣಿ

    ತುಮಕೂರು: ಯುವಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಇದೀಗ ಬಾಲಕಿ ಗರ್ಭಿಣಿಯಾಗಿರೋ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಘಟನೆ ತುಮಕೂರು ಜಿಲ್ಲೆ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಿನೇಶ್ ಬಂಧಿತ ಆರೋಪಿ. ಬಿಹಾರ ಮೂಲದವನಾಗಿರೋ ಈತ ಸೂಪರ್ ಸ್ಟೋನ್ ಗ್ರಾನೈಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

    ಸಂತ್ರಸ್ತೆ ಸ್ಥಳೀಯ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದು, ಶಾಲೆಗೆ ಹೋಗುತ್ತಿದ್ದ ವೇಳೆ ಆಕೆಯನ್ನು ಪರಿಚಯಿಸಿಕೊಂಡಿದ್ದ ಆರೋಪಿ ದಿನೇಶ್ ಬಳಿಕ ಅತ್ಯಾಚಾರವೆಸಗಿದ್ದಾನೆ. ಇದೀಗ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ತಿಳಿದ ಬಾಲಕಿ, ಪೋಷಕರು ಹಾಗೂ ಸಂಬಂಧಿಕರು ಆರೋಪಿಯನ್ನು ವಿಚಾರಿಸಲೆಂದು ದಿನೇಶ್ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಬಳಿ ಹೋದಾಗ ಆತ ಬಾಲಕಿ ತಲೆಗೆ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಅಲ್ಲದೇ ಸಂಬಂಧಿಕರ ಮೇಲೂ ಹಲ್ಲೆ ಮಾಡಿದ್ದಾನೆ.

    ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

  • ಅಪ್ರಾಪ್ತ ಬಾಲಕಿ ಮದುವೆ: ಮಕ್ಕಳ ರಕ್ಷಣಾ ತಂಡವನ್ನ ಕಂಡು ವಧು-ವರ ಪರಾರಿ

    ಅಪ್ರಾಪ್ತ ಬಾಲಕಿ ಮದುವೆ: ಮಕ್ಕಳ ರಕ್ಷಣಾ ತಂಡವನ್ನ ಕಂಡು ವಧು-ವರ ಪರಾರಿ

    ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮದುವೆ ತಡೆಯಲು ಹೋದ ಮಕ್ಕಳ ರಕ್ಷಣಾ ತಂಡವನ್ನು ಕಂಡು ಮದುವೆ ಮಂಟಪದಿಂದ ವಧು-ವರರಿಬ್ಬರೂ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೆಂಗಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಭೀಮೇಶ್ವರ ದೇವಾಸ್ಥಾನದಲ್ಲಿ ಸೋಮವಾರ ಮಧ್ಯಾಹ್ನ ಗ್ರಾಮದ ಅಪ್ರಾಪ್ತ ಬಾಲಕಿಯೊಂದಿಗೆ ಕಲಬುರ್ಗಿಯ ಶಹಾಬಜಾರ್ ಬಡಾವಣೆ ನಿವಾಸಿಯಾದ 24ರ ಹರೆಯದ ಯುವಕನ ವಿವಾಹ ನಡೆಯುತ್ತಿತ್ತು.

    ಈ ಬಗ್ಗೆ ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ಸಿ.ವಿ.ರಾಮನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಶರಣಪ್ಪ ನೇತೃತ್ವದ ತಂಡ ಪೊಲೀಸರೊಂದಿಗೆ ದಾಳಿ ನಡೆಸಿತ್ತು. ಈ ವೇಳೆ ವಧು-ವರರಿಬ್ಬರೂ ಮಂಟಪದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಥಳದಲ್ಲಿ ಟೆಂಟು, ಸ್ಟೇಜ್, ಕುರ್ಚಿ, ವಿವಿಧ ತರಹದ ಅಡುಗೆ, ಮದುವೆ ದಿಬ್ಬಣ ಇದ್ದ ಆಧಾರದ ಮೇಲೆ ಕಾಳಗಿ ಪೊಲೀಸ್ ಠಾಣೆಯಲ್ಲಿ ವಧುವಿನ ಪಾಲಕರು ಮತ್ತು ವರನ ತಾಯಿ, ದೇವಾಲಯದ ಅರ್ಚಕ ಶರಣಯ್ಯ ಮಠಪತ್ತಿ, ದೇವಾಲಯದ ಸಮಿತಿ ಅಧ್ಯಕ್ಷ ಸೋಮಶೇಖರ ಪಟ್ಟೆದ್ ಹಾಗೂ ಲಗ್ನ ಪತ್ರಿಕೆಯಲ್ಲಿ ಸುಖಾಗಮನ ಬಯಸುವವರ ವಿರುದ್ಧ ಪ್ರಕರಣ ದಾಖಲಾಗಿದೆ.