Tag: ಅಫಿಡವಿತ್

  • ಮಮತಾ ನಾಮಪತ್ರ ತಿರಸ್ಕರಿಸಿ – ದಾಖಲೆಯೊಂದಿಗೆ ಆಯೋಗಕ್ಕೆ ಸುವೇಂದು ದೂರು

    ಮಮತಾ ನಾಮಪತ್ರ ತಿರಸ್ಕರಿಸಿ – ದಾಖಲೆಯೊಂದಿಗೆ ಆಯೋಗಕ್ಕೆ ಸುವೇಂದು ದೂರು

    ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ನಂದಿಗ್ರಾಮದಲ್ಲಿ ದೀದಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

    ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸುವಾಗ ಅಫಿಡವಿತ್‌ನಲ್ಲಿ ತನ್ನ ಮೇಲಿರುವ 6 ಕ್ರಿಮಿನಲ್‌ ಪ್ರಕರಣಗಳನ್ನು ಬಹಿರಂಗಗೊಳಿಸಿಲ್ಲ. ಹೀಗಾಗಿ ನಾಮಪತ್ರವನ್ನು ತಿರಸ್ಕರಿಸುವಂತೆ ಆಯೋಗದ ಮೆಟ್ಟಿಲು ಏರಿದ್ದಾರೆ.

    ಅಸ್ಸಾಂನಲ್ಲಿ ಐದು ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಖಲಿಸಿರುವ ಒಂದು ಪ್ರಕರಣವನ್ನು ಮುಚ್ಚಿಟ್ಟು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಸುವೇಂದು ಅಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ.

    ತನ್ನ ವಿರುದ್ಧ ದಾಖಲಾಗಿದ್ದ ಒಂದು ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಕೋರ್ಟ್‌ ಮಮತಾ ಅರ್ಜಿಯನ್ನು ತಿರಸ್ಕರಿಸಿದೆ. ನಾನು ಎಲ್ಲ ಮಾಹಿತಿಯನ್ನು ಕ್ರೋಢಿಕರಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದೇನೆ. ನಾನು ನೀಡಿದ ದಾಖಲೆಗಳ ಆಧಾರದ ಮೇಲೆ ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರ ನಾಮಪತ್ರ ಪರಿಶೀಲಿಸಲಿ.ಕಾನೂನು ಪ್ರಕಾರ ಈ ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ಒಂದು ವೇಳೆ ನ್ಯಾಯ ಸಿಗದೇ ಇದ್ದಲ್ಲಿ ನಾನು ಮುಂದಿನ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

    2016ರ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸುವೇಂದು ಅಧಿಕಾರಿ ಜಯಗಳಿಸಿದ್ದರು. ಆದರೆ ಈ ಬಾರಿ ಸುವೇಂದು ಅಧಿಕಾರಿಯನ್ನು ಸೋಲಿಸಲೆಂದೇ ಮಮತಾ ಬ್ಯಾನರ್ಜಿ ಈ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

  • ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್

    ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್

    ನವದೆಹಲಿ: ಸಿಎಜಿ ವರದಿಯನ್ನು ಆಧಾರಿಸಿ ಸುಪ್ರೀಂ ಕೋರ್ಟ್ ಉಲ್ಲೇಖಿಸಿದ್ದ ರಫೇಲ್ ತೀರ್ಪಿನಲ್ಲಿ ಕೆಲ ತಿದ್ದುಪಡಿಯಾಗಬೇಕೆಂದು ಹೇಳಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

    ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ ತೀರ್ಪಿನ 25 ಪ್ಯಾರಾದಲ್ಲಿ ಮಹಾಲೆಕ್ಕಪಾಲರ(ಸಿಎಜಿ) ವರದಿಯನ್ನು ಸಾರ್ವಜನಿಕ ಲೆಕ್ಕ ಸಮಿತಿಯ(ಪಿಎಸಿ) ಮುಂದೆ ಇಡಲಾಗಿದೆ. ಅಷ್ಟೇ ಅಲ್ಲದೇ ಇದು ಸಾರ್ವಜನಿಕವಾಗಿ ಲಭ್ಯವಿದೆ ಎಂದು ಉಲ್ಲೇಖಿಸಿತ್ತು. ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ಈ ವಿಚಾರಗಳನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಸುಪ್ರೀಂ ಕೋರ್ಟ್ ಈ ವಿಚಾರವನ್ನು ಉಲ್ಲೇಖಿಸಿದ ಬೆನ್ನಲ್ಲೇ ಪಿಐಎಲ್ ಸಲ್ಲಿಸಿದ ಪ್ರಮುಖ ವ್ಯಕ್ತಿಗಳಾದ ಪ್ರಶಾಂತ್ ಭೂಷಣ್, ಸಾರ್ವಜನಿಕ ಲೆಕ್ಕ ಸಮಿತಿಯ ಮುಂದೆ ಸಿಎಜಿ ವರದಿ ಸಲ್ಲಿಕೆಯಾಗಿಲ್ಲ. ಸಾರ್ವಜನಿಕವಾಗಿಯೂ ಈ ವರದಿ ಲಭ್ಯವಿಲ್ಲ. ಮೋದಿ ಸರ್ಕಾರ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಯನ್ನು ನೀಡಿದೆ ಎಂದು ಹೇಳಿ ಕಿಡಿಕಾರಿದ್ದರು.

    ತೀರ್ಪು ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ಶನಿವಾರ, ಈ ಉಲ್ಲೇಖ ಇರುವ ವಾಕ್ಯದಲ್ಲಿ ಕೆಲವು ತಿದ್ದುಪಡಿಗಳಾಗಬೇಕಿದೆ ಎಂದು ಮನವಿ ಸಲ್ಲಿಸಿ ಅಫಿಡವಿಟ್ ಸಲ್ಲಿಸಿದೆ.ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

    ಕಾನೂನು ಇಲಾಖೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಸಿಎಜಿ ಹಾಗೂ ಪಿಎಸಿ ಗೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ದಾಖಲೆಗಳ ವಿಷಯವನ್ನು ತಪ್ಪಾಗಿ ವ್ಯಾಖ್ಯಾನ ಮಾಡಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ