Tag: ಅಫಿಡೆವಿಟ್‌

  • ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ: ಕೇಂದ್ರ ಸರ್ಕಾರ

    ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ: ಕೇಂದ್ರ ಸರ್ಕಾರ

    ನವದೆಹಲಿ: ಹಿಂದೂಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಿಮೆ ಪ್ರಮಾಣದಲ್ಲಿರುವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಕೇಂದ್ರ ಸರ್ಕಾರ ಹೇಳಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಿಳಿಸಿದೆ.

    ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರಾಗಿರುವ ಜುದಾಯಿಸಂ, ಬಹಾಯಿಸಂ ಸಮುದಾಯವನ್ನು ಹಿಂದೂ ಧರ್ಮದ ಅನುಯಾಯಿಗಳು ಎಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಮೂಲಕ ಹೀಗೆ ಉತ್ತರಿಸಿದೆ. ಇದನ್ನೂ ಓದಿ: ತರಗತಿಗಳಲ್ಲಿ ಹಿಜಬ್ ನಿಷೇಧ – ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅರ್ಜಿ

    1992 ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಅಡಿ ಭಾಷಾವಾರು ಅಥವಾ ಧಾರ್ಮಿಕ ಸಮುದಾಯಗಳನ್ನು ‘ಅಲ್ಪಸಂಖ್ಯಾತರು’ ಎಂದು ಘೋಷಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ, ಈ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳುವುದಿಲ್ಲ. ರಾಜ್ಯ ಸರ್ಕಾರಗಳು ಈ ರಾಜ್ಯದೊಳಗೆ ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ‘ಅಲ್ಪಸಂಖ್ಯಾತ ಸಮುದಾಯ’ ಎಂದು ಘೋಷಿಸಬಹುದು ಎಂದು ತಿಳಿಸಿದೆ.  ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ

    ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರಗಳು ಸದರಿ ರಾಜ್ಯದಲ್ಲಿ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದು ಮತ್ತು ನಿರ್ವಹಿಸಬಹುದು. ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿರ್ಧರಿಸಬೇಕು ಎಂದು ಅಫಿಡವಿಟ್ ಹೇಳಿದೆ.