Tag: ಅಫ್ತಾಬ್ ಪೂನಾವಾಲಾ

  • ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ನವದೆಹಲಿ: 2022 ರಲ್ಲಿ ತನ್ನ ಲಿವ್ ಇನ್ ಪಾಲುದಾರ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ಹೇಳಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಈ ಮಾಹಿತಿ ಹೊರ ಬಂದಿದೆ.

    ಸದ್ಯ ತಿಹಾರ್ ಜೈಲಿನಲ್ಲಿರುವ ಆರೋಪಿ ಅಫ್ತಾಬ್ ಪೂನಾವಾಲಾ (Aftab Poonawalla) ಕೊಠಡಿಯ ಸುತ್ತ ಭದ್ರತೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ಆದರೆ ಮುಂಬೈ ಪೊಲೀಸರಿಂದ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ದೆಹಲಿಯಲ್ಲಿ 27 ವರ್ಷದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಶ್ರದ್ಧಾ ಮದುವೆಯಾಗುವಂತೆ ಒತ್ತಡ ಹೇರಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯು ದೇಶಾದ್ಯಂತ ಆಘಾತ ಮೂಡಿಸಿತ್ತು.

    ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಬಿಷ್ಣೋಯ್ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದೆ. ಇದು ಸೇಡು ಮತ್ತು ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿದೆ. ಅವರ ಪ್ರಾಥಮಿಕ ಗುರಿಗಳಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದ್ದಾರೆ. ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಇನ್ನು ಅಫ್ತಾಬ್ ಜೊತೆಗೆ ಹಿಟ್ ಲಿಸ್ಟ್‌ನಲ್ಲಿರುವ ಇತರರಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಸಿಂಗ್ ಸೇರಿದ್ದಾರೆ. ಪ್ರಸ್ತುತ ಗುರುಗ್ರಾಮ್‌ನಲ್ಲಿ ಜೈಲಿನಲ್ಲಿರುವ ದರೋಡೆಕೋರ ಕೌಶಲ್ ಚೌಧರಿ ಮತ್ತು ಪ್ರತಿಸ್ಪರ್ಧಿ ದರೋಡೆಕೋರ ಅಮಿತ್ ದಾಗರ್ ಕೂಡ ಬಿಷ್ಣೋಯಿ ತನ್ನ ಶತ್ರುಗಳ ಲಿಸ್ಟ್‌ನಲ್ಲಿ ಇಟ್ಟುಕೊಂಡಿದೆ.

  • ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ನವದೆಹಲಿ: ಲಿವ್ ಇನ್ ಗೆಳತಿ (Live-In Partner) ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಅಫ್ತಾಬ್ ಬಾಣಸಿಗನಾಗಿದ್ದು, ಮಾಂಸವನ್ನು ಹೇಗೆ ಸಂರಕ್ಷಿಸಬೇಕು ಎಂಬುದನ್ನು ತರಬೇತಿ ಪಡೆದಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯಲ್ಲಿ (Delhi) ಶ್ರದ್ಧಾ ವಾಕರ್ (Shraddha Walkar) ಹತ್ಯೆಗೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯ್ಬಿಟ್ಟಿದ್ದು, ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಫ್ತಾಬ್ ತಾಜ್ ಹೋಟೆಲ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಮಾಂಸವನ್ನು ಹೇಗೆ ರಕ್ಷಿಸಬೇಕು ಎನ್ನುವುದನ್ನು ತಿಳಿದಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ತನ್ನ ಗೆಳತಿ ಶ್ರದ್ಧಾಳನ್ನು ಕೊಂದ ನಂತರ ನೆಲವನ್ನು ಸ್ವಚ್ಛಗೊಳಿಸಲು ಡ್ರೈ ಐಸ್, ಅಗರ ಬತ್ತಿ ಹಾಗೂ ರಾಸಾಯನಿಕಗಳನ್ನು ಬಳಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಲ್ಕರ್ ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ವಿಧಾನಸೌಧದಲ್ಲಿನ ಎಣ್ಣೆ ಬಾಟ್ಲಿ ಹಿಂದಿನ ಕಥೆ ರಿವೀಲ್

    ಶ್ರದ್ಧಾಳನ್ನು ಕೊಂದ ವಾರದೊಳಗೆ ಅಫ್ತಾಬ್ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ತನ್ನ ಹೊಸ ಗೆಳತಿಗೆ ಶ್ರದ್ಧಾಳ ಉಂಗುರವನ್ನೇ ನೀಡಿದ್ದನೆಂದು ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡರಿಂದ ಭರಪೂರ ಕೊಡುಗೆ – ಬಾಗಿನ ಹೆಸರಲ್ಲಿ ಸೀರೆ, ಬೆಳ್ಳಿಯ ದೇವರ ಫೋಟೋ ಹಂಚಿಕೆ

  • ಶ್ರದ್ಧಾ ಹತ್ಯೆ ಕೇಸ್ – ಕಾಡಿನಲ್ಲಿ ದೊರೆತ ಮೂಳೆಗಳು ತಂದೆಯ ಡಿಎನ್‌ಎಗೆ ಮ್ಯಾಚ್

    ಶ್ರದ್ಧಾ ಹತ್ಯೆ ಕೇಸ್ – ಕಾಡಿನಲ್ಲಿ ದೊರೆತ ಮೂಳೆಗಳು ತಂದೆಯ ಡಿಎನ್‌ಎಗೆ ಮ್ಯಾಚ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭೀಕರ್ ಹತ್ಯೆಯ ಪ್ರಕರಣಕ್ಕೆ ಇದೀಗ ದೊಡ್ಡ ಸಾಕ್ಷ್ಯ ದೊರೆತಿದೆ. ಕೊಲೆಗಾರ ಅಫ್ತಾಬ್ ಪೂನಾವಾಲಾ (Aftab Poonawala) ದೆಹಲಿಯ (Delhi) ಮೆಹ್ರೌಲಿ ಹಾಗೂ ಗುರುಗ್ರಾಮದ ಕಾಡುಗಳಲ್ಲಿ ಪೊಲೀಸರನ್ನು ಕರೆದೊಯ್ದಾಗ ದೊರೆತಿರುವ ಮೂಳೆಗಳು ಯುವತಿ ಶ್ರದ್ಧಾ ವಾಕರ್‌ದು (Shraddha Walkar) ಎಂಬುದು ದೃಢವಾಗಿದೆ.

    ಅಫ್ತಾಬ್ ಪೂನಾವಾಲಾ ಶ್ರದ್ಧಾ ಕೊಲೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಕಾಡುಗಳಲ್ಲಿ ಹೂತು ಹಾಕಿದ್ದ. ಈ ದೇಹದ ಭಾಗಗಳನ್ನು ತನಿಖೆಯ ವೇಳೆ ಪೊಲೀಸರು ಸಂಗ್ರಹಿಸಿದ್ದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಗೆ ಹೋಲಿಕೆಯಾಗುತ್ತದೆ ಎಂಬುದು ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ.

    ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದ. ಕಳೆದ ಒಂದು ತಿಂಗಳ ಹಿಂದೆ ಶ್ರದ್ಧಾ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಶ್ರದ್ಧಾ ಹತ್ಯೆಯ ಹಿಂದಿನ ಭಯಾನಕ ಸತ್ಯವನ್ನು ಒಂದೊಂದಾಗಿಯೇ ಪೊಲೀಸರು ಬಯಲಿಗೆಳೆದಿದ್ದಾರೆ.

    ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರದ್ದೂ ಅಂತರ್ ಧರ್ಮೀಯ ಸಂಬಂಧ ಎಂಬ ಕಾರಣಕ್ಕೆ ಇಬ್ಬರ ಕುಟುಂಬದವರೂ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೋಡಿ ಮುಂಬೈನಿಂದ ದೆಹಲಿಗೆ ಸ್ಥಳಾಂತರಗೊಂಡು ಮೆಹ್ರೌಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸವಿದ್ದರು. ಇತ್ತೀಚೆಗೆ ಶ್ರದ್ಧಾ ಹಲವು ತಿಂಗಳುಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಆಕೆಯ ತಂದೆ ದೆಹಲಿಗೆ ತೆರಳಿ ಆಕೆಯ ಹುಡುಕಾಟ ನಡೆಸಿದ್ದರು. ಆದರೆ ಆಕೆಯ ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ

    ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕಾಸ್ ವಾಕರ್, 2 ವರ್ಷಗಳ ಹಿಂದೆ ನನ್ನ ಮಗಳು ಅಫ್ತಾಬ್‌ನಿಂದ ಕಿರುಕುಳ ಅನುಭವಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಪೊಲೀಸರು ಅಂದೇ ಈ ಬಗ್ಗೆ ಕ್ರಮ ತೆಗೆದುಕೊಂಡಿದ್ದರೆ ಇಂದು ಆಕೆ ಬದುಕಿರುತ್ತಿದ್ದಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಪುಂಡಾಟ- ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ

    Live Tv
    [brid partner=56869869 player=32851 video=960834 autoplay=true]

  • ಅಫ್ತಾಬ್‌ನನ್ನು ಗಲ್ಲಿಗೇರಿಸಿ, ಪೋಷಕರಿಗೂ ಕಠಿಣ ಶಿಕ್ಷೆ ನೀಡಿ: ಶ್ರದ್ಧಾ ತಂದೆ ಆಕ್ರೋಶ

    ಅಫ್ತಾಬ್‌ನನ್ನು ಗಲ್ಲಿಗೇರಿಸಿ, ಪೋಷಕರಿಗೂ ಕಠಿಣ ಶಿಕ್ಷೆ ನೀಡಿ: ಶ್ರದ್ಧಾ ತಂದೆ ಆಕ್ರೋಶ

    ಮುಂಬೈ: ನನ್ನ ಮಗಳನ್ನು ಕೊಂದ ಅಫ್ತಾಬ್ ಪೂನಾವಾಲಾನಿಗೆ (Aftab Poonawala) ಗಲ್ಲು ಶಿಕ್ಷೆ ನೀಡಿ. ಆತನ ಪೋಷಕರಿಗೂ ಕಠಿಣ ಶಿಕ್ಷೆ ನೀಡಿ ಎಂದು ದೆಹಲಿಯಲ್ಲಿ ಭೀಕರವಾಗಿ ಹತ್ಯೆಯಾದ (Delhi Murder) ಯುವತಿ ಶ್ರದ್ಧಾ ವಾಕರ್ (Shraddha Walkar)  ತಂದೆ ವಿಕಾಸ್ ವಾಕರ್ (Vikas Walkar) ಒತ್ತಾಯಿಸಿದ್ದಾರೆ.

    ಶ್ರದ್ಧಾ ವಾಕರ್ ಹತ್ಯೆಯ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಸಾಕೇತ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ಶ್ರದ್ಧಾ ತಂದೆ ವಿಕಾಸ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಗಳನ್ನು ಕಳೆದುಕೊಂಡ ದುಃಖದಲ್ಲಿ ವಿಕಾಸ್ ವಾಕರ್, ನನ್ನ ಮಗಳನ್ನು ಕೊಂದ ಅಫ್ತಾಬ್‌ಗೆ ಗಲ್ಲು ಶಿಕ್ಷೆಯಾಗಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

    ಶ್ರದ್ಧಾ ಅಫ್ತಾಬ್ ಬಗ್ಗೆ ಪೊಲೀಸರಿಗೆ ಈ ಮೊದಲೇ ದೂರು ನೀಡಿದ್ದಳು. ಪೊಲೀಸರು ನನ್ನ ಮಗಳ ದೂರನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ, ಆಕೆ ಇಂದು ಬದುಕಿರುತ್ತಿದ್ದಳು. ಆಕೆಯ ದೂರಿನ ತನಿಖೆಯನ್ನು ವಿಳಂಬಗೊಳಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಯಬೇಕು ಎಂದರು.

    ಈ ಎಲ್ಲಾ ಘಟನೆಗಳಿಗೂ ಮೊದಲೇ ಕೊಲೆಗಾರನ ಕುಟುಂಬ ನನ್ನನ್ನು ಅವಮಾನಿಸಿ ತಮ್ಮ ಮನೆಯಿಂದ ಹೊರಹಾಕಿತ್ತು. ಅಫ್ತಾಬ್ ತಂದೆ ಸೇರಿದಂತೆ ಆತನ ಕುಟುಂಬದ ಸದಸ್ಯರನ್ನು ಈ ಅಪರಾಧಕ್ಕೆ ಸಂಬಂಧಿಸಿದ ತನಿಖೆಗೆ ಒಳಪಡಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಸ್ಲಿಂ ವಿದ್ಯಾವಂತರ‍್ಯಾರೂ ನಾಲ್ಕು ಮದುವೆಯಾಗಲ್ಲ – ನಿತಿನ್ ಗಡ್ಕರಿ

    ಮಕ್ಕಳ ಹಾದಿ ತಪ್ಪಿಸುತ್ತಿರುವ ಡೇಟಿಂಗ್ ಅಪ್ಲಿಕೇಶನ್‌ಗಳ ಮೇಲೆ ಆದಷ್ಟು ನಿರ್ಬಂಧ ಹೇರಬೇಕು. 18 ವರ್ಷ ಮೇಲ್ಪಟ್ಟ ಮಕ್ಕಳನ್ನು ಪೋಷಕರು ಸ್ವಲ್ಪಮಟ್ಟಿಗೆ ನಿಯಂತ್ರಿಸಬೇಕು. ಶ್ರದ್ಧಾ ಮನೆ ಬಿಟ್ಟು ಹೋಗುವುದಕ್ಕೂ ಮೊದಲು ನಾನು ಮಗುವಲ್ಲ, ನಾನು ವಯಸ್ಕಳು ಎಂದು ಹೇಳಿದ್ದಳು. ಆಕೆ ಹೊರಟು ಹೋದ ಮೇಲೆ ನಾನು ಆಕೆಯೊಂದಿಗೆ ಮಾತನಾಡಲು ಪ್ರಯತ್ನಿಸಿದ್ದೆ. ಕಳೆದ 2 ವರ್ಷ ನನ್ನ ಕರೆಗಳಿಗೆ ಆಕೆ ಪ್ರತಿಕ್ರಿಯೆಯನ್ನೇ ನೀಡಿಲ್ಲ. ಆಕೆಯ ಜೀವನದಲ್ಲಿ ಏನಾಗುತ್ತಿದೆ ಎಂಬುದನ್ನು ಆಕೆ ಎಂದಿಗೂ ಹೇಳಿಕೊಳ್ಳಲಿಲ್ಲ ಎಂದು ಭಾವನಾತ್ಮಕವಾಗಿ ವಿಕಾಸ್ ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಆ್ಯಕ್ಟಿವ್ ಇದ್ದಾರೆ, ರಾತ್ರಿ-ಹಗಲು ಪಕ್ಷಕ್ಕಾಗಿ ಕೆಲಸ ಮಾಡ್ತಿದ್ದಾರೆ: ಸತೀಶ್ ಜಾರಕಿಹೊಳಿ

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಮಾಡಿದ್ದು ನಾನೇ. ಆ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ (Aftab Poonawala) ಹೇಳಿದ್ದಾನೆ. ಪಾಲಿಗ್ರಾಫ್ ಪರೀಕ್ಷೆ (Polygraph Test) ವೇಳೆ ಆತ ತಪ್ಪೊಪ್ಪಿಕೊಂಡಿದ್ದು, ಕೊಲೆಯ ಎಲ್ಲಾ ಸಂಗತಿಗಳನ್ನು ವಿವರವಾಗಿ ಹಂಚಿಕೊಂಡಿದ್ದಾನೆ ಎಂದು ಎಫ್‌ಎಸ್‌ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರದ್ಧಾ ಹತ್ಯೆ ಮಾಡಿದ್ದ ಅಫ್ತಾಬ್ ಪೂನವಾಲಾ ವಿಚಾರಣೆ ವೇಳೆ ಪೊಲೀಸರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆ ಕೋರ್ಟ್ ಅನುಮತಿ ಮೇರೆಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಫ್ತಾಬ್ ಹತ್ಯೆಯನ್ನು ಒಪ್ಪಿಕೊಂಡಿದ್ದು, ಕೊಲೆ ಮಾಡಿ ದೇಹವನ್ನು ತುಂಡರಿಸಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಇದನ್ನೂ ಓದಿ: ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ ಪ್ರಿಯತಮೆ ಕೊಲೆಗೈದ ಪ್ರಿಯಕರ

    ಮೂಲಗಳ ಪ್ರಕಾರ, ಅಫ್ತಾಬ್ ಮೇ 18 ರಂದು ಶ್ರದ್ಧಾಳ ಕತ್ತು ಹಿಸುಕಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 3 ವಾರಗಳ ಕಾಲ ಫ್ರಿಡ್ಜ್‌ನಲ್ಲಿ ಇರಿಸಿ ಬಳಿಕ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಕಾಡಿನಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಇದೇ ವೇಳೆ ಆತ ಡೇಟಿಂಗ್ ಆ್ಯಪ್ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾನೆ. ಅಫ್ತಾಬ್ ಹಲವು ಆ್ಯಪ್‌ಗಳನ್ನು ಬಳಸುತ್ತಿದ್ದು, ಅನೇಕ ಯುವತಿಯರ ಜೊತೆಗೆ ಸಂಪರ್ಕದಲ್ಲಿ ಇದ್ದೆ. ಅವರೊಂದಿಗೆ ಸಂಬಂಧವೂ ಹೊಂದಿದ್ದೆ ಎಂದು ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಗೆಳೆಯನ ವಿಚಾರಕ್ಕೆ ಹುಡುಗಿಯನ್ನು ಥಳಿಸಿದ ಯುವತಿಯರ ಗುಂಪು

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಕೊಲೆ ಆಕಸ್ಮಿಕ, ಇದರಲ್ಲಿ ಹೊಸದೇನಿಲ್ಲ- ಅಶೋಕ್ ಗೆಹ್ಲೋಟ್ ವಿವಾದಿತ ಹೇಳಿಕೆಗೆ ಬಿಜೆಪಿ ಕಿಡಿ

    ಶ್ರದ್ಧಾ ಕೊಲೆ ಆಕಸ್ಮಿಕ, ಇದರಲ್ಲಿ ಹೊಸದೇನಿಲ್ಲ- ಅಶೋಕ್ ಗೆಹ್ಲೋಟ್ ವಿವಾದಿತ ಹೇಳಿಕೆಗೆ ಬಿಜೆಪಿ ಕಿಡಿ

    ಜೈಪುರ: ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ (Shraddha Walkar murder case) ಅದರ ಭೀಕರ ಹಾಗೂ ಭಯಾನಕ ವಿವರಗಳಿಂದ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ ರಾಜಸ್ಥಾನದ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಶ್ರದ್ಧಾ ಹತ್ಯೆ ಆಕಸ್ಮಿಕವಾದುದು, ಇದರಲ್ಲಿ ಹೊಸದೇನಿಲ್ಲ ಎಂದು ಹೇಳಿಕೆ ನೀಡಿದ್ದು, ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್ ಗೆಹ್ಲೋಟ್, ಶ್ರದ್ಧಾ ಹತ್ಯೆ ಪ್ರಕರಣ ಒಂದು ಆಕಸ್ಮಿಕವಾಗಿದೆ. ಇದು ಸಾಮಾನ್ಯವಾಗಿದ್ದು, ಹೊಸದೇನೂ ಇದರಲ್ಲಿ ಇಲ್ಲ. ಶತಮಾನಗಳಿಂದಲೂ ಅಂತರ್ಜಾತಿ, ಅಂತರ್ ಧರ್ಮದ ಹೆಸರಿನಲ್ಲಿ ವಿವಾಹಗಳು ನಡೆಯುತ್ತಿವೆ. ಇದರಲ್ಲಿ ಹೊಸದೇನಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ಬಿಜೆಪಿಯವರು (BJP) ಒಂದು ಸಮುದಾಯ, ಒಂದು ಧರ್ಮವನ್ನು ಗುರಿಯಾಗಿಸಿಕೊಂಡಿದ್ದೀರಿ. ಅದರ ಆಧಾರದ ಮೇಲೆ ನಿಮ್ಮ ರಾಜಕೀಯ ದೇಶದೊಳಗೆ ನಡೆಯುತ್ತಿದೆ. ನೀವು ಅದರ ಪ್ರಯೋಜನಗಳನ್ನು ಪಡೆಯುತ್ತೀರಿ. ಜನರನ್ನು ಒಟ್ಟುಗೂಡಿಸುವುದು, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಗುಂಪುಗಳನ್ನು ಸೃಷ್ಟಿಸುವುದು ತುಂಬಾ ಸುಲಭ. ಬೆಂಕಿ ಹಚ್ಚುವುದು ಸುಲಭವಾದರೆ, ಆ ಬೆಂಕಿಯನ್ನು ನಂದಿಸುವುದು ತುಂಬಾ ಕಷ್ಟ. ಕಟ್ಟಡ ನಿರ್ಮಿಸಲು ತುಂಬಾ ಸಮಯ ಹಿಡಿಯುತ್ತದೆ. ಆದರೆ ಅದನ್ನು ಕೆಡವಲು ಕೇವಲ ಅರ್ಧ ಗಂಟೆ ಸಾಕು ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ವೋಟರ್‌ಗೇಟ್‌ ಹಗರಣಕ್ಕೆ ಅಡ್ಡ ಆಗಿತ್ತಾ ಪ್ರಭಾವಿ ಶಾಸಕರ ಕಚೇರಿ?

    ಅಶೋಕ್ ಗೆಹ್ಲೋಟ್ ಅವರು ಶ್ರದ್ಧಾ ಹತ್ಯೆ ಪ್ರಕರಣದ ಬಗ್ಗೆ ಬೇಜವಾಬ್ದಾರಿತನದ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಗೆಹ್ಲೋಟ್ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

    ಈ ಘಟನೆಯು ಮನಸ್ಥಿತಿಯ ಕದನವಾಗಿದೆ. ಇದು ಆಲೋಚನೆಗಳ ಯುದ್ಧವಾಗಿದೆ. ಲವ್ ಜಿಹಾದ್, ಧಾರ್ಮಿಕ ಪರಿವರ್ತನೆಗಳನ್ನು ಯೋಜಿತ ಪಿತೂರಿಯ ಮೂಲಕ ಮಾಡಲಾಗುತ್ತದೆ. ಇದರಿಂದ ಅತಿ ಹೆಚ್ಚು ಪರಿಣಾಮ ಬೀರಿರುವುದೇ ರಾಜಸ್ಥಾನದಲ್ಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿಢೀರ್ ಕಾಂಗ್ರೆಸ್‌ಗೆ ಗುಡ್‌ಬೈ – 300ಕ್ಕೂ ಹೆಚ್ಚು ಕಾರ್ಯಕರ್ತರು BJP ಸೇರ್ಪಡೆ

    ಅಫ್ತಾಬ್ ಪೂನಾವಾಲನೊಂದಿಗೆ (Aftab Poonawala) ಲಿವ್‌ಇನ್ ರಿಲೇಶನ್‌ನಲ್ಲಿದ್ದ ಶ್ರದ್ಧಾ ವಾಕರ್ ಮೇ 18 ರಂದು ಕೊಲೆಯಾಗಿದ್ದಳು. ಅಫ್ತಾಬ್ ಶ್ರದ್ಧಾ ಕತ್ತನ್ನು ಹಿಸುಕಿ ಕೊಂದಿದ್ದು, ಬಳಿಕ ಆಕೆಯ ಮೃತ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತುಹಾಕಿದ್ದ.

    Live Tv
    [brid partner=56869869 player=32851 video=960834 autoplay=true]