Tag: ಅಬಕಾರಿ ಪೊಲೀಸ್

  • ಪುಷ್ಪಾ ಸಿನಿಮಾ ರೀತಿ ಲಿಕ್ಕರ್ ಸ್ಮಗ್ಲಿಂಗ್ – 54 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ ಅಬಕಾರಿ ಪೊಲೀಸರು

    ಪುಷ್ಪಾ ಸಿನಿಮಾ ರೀತಿ ಲಿಕ್ಕರ್ ಸ್ಮಗ್ಲಿಂಗ್ – 54 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ ಅಬಕಾರಿ ಪೊಲೀಸರು

    ಬೆಳಗಾವಿ: ಪುಷ್ಪಾ ಸಿನಿಮಾ ಮಾದರಿಯಲ್ಲಿ ಲಿಕ್ಕರ್ ಸ್ಮಗ್ಲಿಂಗ್ (Liquor Smuggling) ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 54 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು (Excise Police) ಜಪ್ತಿ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಸುವರ್ಣಸೌಧ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಖದೀಮರ ಕೈಚಳಕಕ್ಕೆ ಅಬಕಾರಿ ಪೊಲೀಸರೇ ಹೌಹಾರಿದ್ದಾರೆ. ಪುಷ್ಪಾ ಸಿನಿಮಾದಲ್ಲಿ ಹಾಲು ಪೂರೈಸುವ ಟ್ಯಾಂಕರ್‌ನಲ್ಲಿ ರಕ್ತ ಚಂದನ ಸಾಗಾಟ ಮಾಡಿದರೆ ಈ ಗ್ಯಾಂಗ್ ಪ್ಲೈವುಡ್ ಸಾಗಿಸುವ ಲಾರಿಯಲ್ಲಿ ಲಿಕ್ಕರ್ ಸ್ಮಗ್ಲಿಂಗ್ ಮಾಡಿದೆ.

    ಹೈಟೆಕ್ ಲಿಕ್ಕರ್ ಸ್ಮಗ್ಲಿಂಗ್ ಜಾಲ ಭೇದಿಸಿದ ಬೆಳಗಾವಿ ಅಬಕಾರಿ ಪೊಲೀಸರು ಲಾರಿ ಸೇರಿ 54 ಲಕ್ಷ ರೂ. ಮೌಲ್ಯದ ಬೆಳೆಬಾಳುವ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಗೋವಾದಲ್ಲಿ ಚೀಪ್ ರೇಟ್‌ಗೆ ಮದ್ಯ ಖರೀದಿಸಿ ಅಕ್ರಮವಾಗಿ ಬೇರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿತ್ತು. ಗೋವಾದಿಂದ ಈ ಮದ್ಯವನ್ನು ಯಾವ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್

    ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬನಾರಸ್ ಮೂಲದ ವೀರೇಂದ್ರ ಮಿಶ್ರಾ (34) ಬಂಧನ ಮಾಡಲಾಗಿದೆ. ಪ್ರಕರಣ ಕುರಿತು ಅಬಕಾರಿ ಅಪರ ಆಯುಕ್ತ ಮಂಜುನಾಥ್ ಮಾಹಿತಿ ನೀಡಿದ್ದು ಹೈಟೆಕ್ ಆಗಿ ಗೋವಾದಿಂದ ಲಿಕ್ಕರ್ ಸ್ಮಗ್ಲಿಂಗ್ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ್ದೇವೆ. ಇದು ಹೈಪ್ರೋಲ್ ಹಾಗೂ ವಿಶೇಷ ಪ್ರಕರಣವಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಬೆಲೆಬಾಳುವ ಮದ್ಯದ ಬಾಟಲಿಗಳನ್ನೇ ಪ್ಲೈವುಡ್ ಮಧ್ಯದಲ್ಲಿಟ್ಟು ಸಾಗಾಟ ಮಾಡುತ್ತಿದ್ದರು. ಇದು ಯಾರೂ ಪತ್ತೆ ಮಾಡದ ವಿಶೇಷ ಪ್ರಕರಣವಾಗಿದೆ. ಕಳೆದ 20 ದಿನಗಳ ಹಿಂದೆ ನಮ್ಮಿಂದ ವಾಹನ ತಪ್ಪಿಸಿಕೊಂಡಿತ್ತು. ಸದ್ಯ ವಿಶೇಷ ಕಾರ್ಯಾಚರಣೆ ಮೂಲಕ ಪ್ರಕರಣ ಭೇದಿಸಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    ವಿಜಯಪುರ: ಜಿಲ್ಲೆಯ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮನ್ನ ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರದ ವಿಜಯಪುರ ಜಿಲ್ಲೆಯ ಗಡಿ ಶಿರಾಡೋಣ ಗ್ರಾಮದ ಹತ್ತಿರ ರಾಜಸ್ಥಾನಕ್ಕೆ ಸೇರಿದ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಫೀಮನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ 12.50 ಕೆಜೆ ಅಫೀಮು ಪುಡಿ ಸಿಕ್ಕಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನ ಬಂಧಿಸಲಾಗಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಅಫೀಮು ಮತ್ತು 25 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

    ವಿಜಯಪುರದ ಮೂಲಕ ಬೆಂಗಳೂರಿಗೆ ಅಫೀಮನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜಸ್ಥಾನ-ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಲ್ಲಿಯೂ ತನಿಖೆ ನಡೆಸುವಂತೆ ಕೋರಲಾಗುವುದು. ಜೊತೆಗೆ ಬೆಂಗಳೂರಿನಲ್ಲಿಯೂ ತನಿಖೆ ನಡೆಸಲು ಶಿಫಾರಸು ಮಾಡಲಾಗುವುದು ಎಂದು ವಿಜಯಪುರ ಅಬಕಾರಿ ಡಿಸಿ ಕೆ.ಅರುಣ್‍ಕುಮಾರ್ ಹೇಳಿದ್ದಾರೆ.

  • ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    – ಮಧ್ಯಪ್ರದೇಶದ ಇಬ್ಬರು ಅರೆಸ್ಟ್

    ಚಿಕ್ಕೋಡಿ: ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಅಕ್ರಮವಾಗಿ ಗೋವಾ ರಾಜ್ಯದಿಂದ ಗುಜರಾತ್ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15 ಲಕ್ಷ ರೂ. ಮೌಲ್ಯದ 600 ಅಕ್ರಮ ಮದ್ಯದ ಬಾಟಲಿಗಳನ್ನು ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜೊತೆಗೆ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಮಧ್ಯಪ್ರದೇಶ ರಾಜ್ಯದ ಇಂದೋರಿನ ಧನಪಾಲಸಿಂಗ್ ತೋಮರ್, ರಾಜು ಕಂಠಿ ಬಂಧಿತರು. ಆರೋಪಿಗಳು ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಮದ್ಯದ ಬಾಟಲಿಗಳ ಬಾಕ್ಸ್ ಗಳನ್ನು ತುಂಬಿ ಸಾಗಿಸುತ್ತಿದ್ದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಧಾನಗರ ರಸ್ತೆ ಅಂಡರ್ ಪಾಸ್ ತಿರುವಿನ ಹತ್ತಿರ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿದ್ದಾರೆ.

    ಜಪ್ತಾದ ಗೋವಾ ರಾಜ್ಯದ 15 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನದ ಮೌಲ್ಯ 20 ಲಕ್ಷ ಹೀಗೆ ಒಟ್ಟು 35 ಲಕ್ಷ್ಯದ ಮೌಲ್ಯ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕೋಡಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರು ವಿಜಯಕುಮಾರ ಹೀರೆಮಠ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • 25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    – ನನ್ನ ಕಾರಿನಲ್ಲಿ ಬಾಟಲ್ ಸಾಗಿಸುತ್ತಿಲ್ಲ: ಮದ್ಯದ ಮತ್ತಿನ ವ್ಯಕ್ತಿ ರಂಪಾಟ

    ಬೆಳಗಾವಿ: ಗೋವಾದಿಂದ ಬೆಳಗಾವಿ ಮಾರ್ಗವಾಗಿ ಮಿನಿ ಲಾರಿ, ಕಾರು ಮೂಲಕ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರದೀಪ್, ಶುಭಂ ಸೇರಿದಂತೆ 5 ಜನ ಆರೋಪಿಗಳ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣ ಪ್ರಮುಖ ಆರೋಪಿ, ಕಿಂಗ್‍ಪಿನ್ ಮಹಾರಾಷ್ಟ್ರದ ಚಂದಗಡದ ಬಾಬಾ ಪರಾರಿಯಾಗಿದ್ದಾನೆ ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಕುಖ್ಯಾತ ಆರೋಪಿ ಬಾಬಾ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಾನೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆತನ ಕಾರಿನ ಮೇಲೆ ದಾಳಿ ನಡೆಸಲಾಗಿತ್ತು. ಆದರೆ ಬಾಬಾ ತಪ್ಪಿಸಿಕೊಂಡು ಹೋಗಿದ್ದ. ಬಾಬಾ ತನ್ನ ಕೃತ್ಯ ಮುಂದುವರಿಸಿದ್ದ ಎನ್ನುವುದು ತಿಳಿದು ಗುರುವಾರ ಬಂಧನಕ್ಕೆ ಯತ್ನಿಸಿದ್ದೇವು. ಈ ವೇಳೆ 5 ಜನ ಆರೋಪಿಗಳು ಸಿಕ್ಕಿಬಿದ್ದಿದ್ದು, ಬಾಬಾ ಪರಾರಿಯಾಗಿದ್ದಾನೆ ಬೆಳಗಾವಿ ಅಬಕಾರಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಆರೋಪಿಗಳಿಂದ ಮಿನಿ ಲಾರಿ, ಕಾರು ಹಾಗೂ 360 ಬಾಕ್ಸ್ ನಲ್ಲಿರುವ 25 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಾಬಾನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.

    ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಾನು ಮದ್ಯ ಸಾಗಿಸುತ್ತಿಲ್ಲ. ಅನಾವಶ್ಯಕವಾಗಿ ನನ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ವ್ಯಕ್ತಿಯೊಬ್ಬ ಅಬಕಾರಿ ಪೊಲೀಸ್ ಅಚೇರಿಯಲ್ಲಿ ರಂಪಾಟ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳ್ಳಬಟ್ಟಿ ಕಳ್ಳರನ್ನ ಪೊಲೀಸರು ಹಿಡಿಯಲು ಹೋದಾಗ ಯುವಕ ಬಾವಿಗೆ ಬಿದ್ದು ಸಾವು!

    ಕಳ್ಳಬಟ್ಟಿ ಕಳ್ಳರನ್ನ ಪೊಲೀಸರು ಹಿಡಿಯಲು ಹೋದಾಗ ಯುವಕ ಬಾವಿಗೆ ಬಿದ್ದು ಸಾವು!

    ಬೆಳಗಾವಿ: ಕಳ್ಳಬಟ್ಟಿ ಕಳ್ಳರನ್ನು ಹಿಡಿಯಲೆಂದು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ದಂಧೆಕೋರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನಗಾ ಗ್ರಾಮದ ಬಳಿ ನಡೆದಿದೆ.

    ಅಡಿವೆಪ್ಪಾ (24) ಮೃತ ದುರ್ದೈವಿ. ಇಂದು ಬೆಳಗಿನ ಜಾವ ಮೂರು ಮಂದಿ ಧಂದೆಕೋರರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೈಕಿನಲ್ಲಿ ಕಳ್ಳಬಟ್ಟಿ ಇಟ್ಟುಕೊಂಡೇ ಅರಿವೆಪ್ಪಾ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಪೊಲೀಸರು ಬಿಡದೆ ಚೇಸ್ ಮಾಡಿದ್ದಾರೆ. ಈ ವೇಳೆ ಯುವಕ ಬಾವಿಗೆ ಬಿದ್ದಿದ್ದಾನೆ. ಪರಿಣಾಮ ಬಾವಿಯಲ್ಲೇ ಮೃತಪಟ್ಟಿದ್ದಾನೆ.

    ಧಂದೆಕೋರ ಸಾವನ್ನಪ್ಪಿದ್ದಕ್ಕೆ ಸಂಬಂಧಿಕರು ಅಬಕಾರಿ ಪೊಲೀಸರೇ ಹೊಡೆದು ಬಾವಿಗೆ ಹಾಕಿದ್ದಾರೆ ಎಂದು ಆರೋಪಿಸಿ, ಅಬಕಾರಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಅಬಕಾರಿ ಕಚೇರಿ ಸಹಾಯಕ ಏಕ್‍ನಾಥ್ ಮೇಲೆ ಕಲ್ಲೂ ತೂರಾಟ ಮಾಡಿ ಹಲ್ಲೆ ಮಾಡಿದ್ದು, ಪರಿಣಾಮ ಅವರ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಸದ್ಯಕ್ಕೆ ಗಾಯಾಳುವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಶವಪರಿಕ್ಷೆ ನಡೆಸಲು ಅಡ್ಡಿಯಾಗಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಬಂದು ಧಂದೆಕೋರರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇನ್ನು ಅಬಕಾರಿ ಕಚೇರಿ ಮತ್ತು ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಮಾರ್ಕೆಟ್ ಪೊಲೀಸರು ಮೃತನ ಸಂಬಂಧಿಕರ ಮೇಲೆ ದೂರನ್ನು ದಾಖಲಿಸಿಕೊಂಡಿದ್ದಾರೆ.

  • ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 4 ಬ್ಯಾಗಲ್ಲಿ ಸಾಗಾಟವಾಗ್ತಿತ್ತು 34 ಕೆಜಿ ಚಿನ್ನ!

    ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 4 ಬ್ಯಾಗಲ್ಲಿ ಸಾಗಾಟವಾಗ್ತಿತ್ತು 34 ಕೆಜಿ ಚಿನ್ನ!

    ಬೆಂಗಳೂರು: ಕರ್ನಾಟಕದಿಂದ ಕೇರಳಕ್ಕೆ 34 ಕೆಜಿ ಚಿನ್ನವನ್ನು ಅಕ್ರಮವಾಗಿ ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕೇರಳದ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಸ್ ನಲ್ಲಿ ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಲ್ಲಿನ ತೋಲ್ಪೆಟ್ಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ 11 ಕೋಟಿ ಮೌಲ್ಯದ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಇಂಟೆಲಿಜೆನ್ಸ್ ಇನ್ಸ್ ಪೆಕ್ಟರ್ ಎ.ಜೆ.ಶಾಜಿ ಹೇಳಿದ್ದಾರೆ. ಅಕ್ರಮ ಚಿನ್ನ ಹಾಗೂ ಮಾದಕ ವಸ್ತುಗಳ ಸಾಗಾಟ ರಾತ್ರಿಕಾಲದಲ್ಲೇ ನಡೆಯುತ್ತವೆ. ಕೇರಳ ಹಾಗೂ ಕರ್ನಾಟಕ ಗಡಿಯಲ್ಲಿ ರಾತ್ರಿ ವೇಳೆಯಲ್ಲಿ ತೆರೆದಿರುವ ಚೆಕ್ ಪೋಸ್ಟ್ ತೋಲ್ಪೆಟ್ಟಿ ಮಾತ್ರ. ಹೀಗಾಗಿ ಯಾವುದೇ ಅಕ್ರಮ ಸಾಗಾಟ ನಡೆದರೂ ಈ ಚೆಕ್ ಪೋಸ್ಟ್ ಮೂಲಕವೇ ನಡೆಯಬೇಕು. ಮುಂಜಾನೆ 4 ಗಂಟೆಗೆ ಈ ದಾರಿಯಲ್ಲಿ ಸಂಚರಿಸುತ್ತಿದ್ದ ಲಕ್ಷುರಿ ಬಸ್ ತಪಾಸಣೆ ವೇಳೆ ನಮಗೆ 34 ಕೆಜಿ ಚಿನ್ನ ಸಿಕ್ಕಿದೆ ಎಂದು ಹೇಳಿದ್ದಾರೆ.

    ಬಂಧಿತರನ್ನು ಶಂಕೇಶ್ ಬಿ ಜೈನ್, ಅಭಯ್ ಎಂ ಜೈನ್, ಚಾಂಬರಂ ದೇವಸಿ, ಮದನ್ ಲಾಲ್ ದೇವಸಿ, ವಿಕ್ರಮ್ ಸಿ ಹಾಗೂ ಕಮಲೇಶ್ ಜೈನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ಕಾಲೇಜ್ ಬ್ಯಾಗ್ ಹಾಗೂ 2 ಟ್ರಾವೆಲ್ ಬ್ಯಾಗ್ ಸೇರಿ ಒಟ್ಟು 4 ಬ್ಯಾಗ್ ಗಳಲ್ಲಿ ಯಾರಿಗೂ ಸಂಶಯ ಬಾರದಂತೆ ಪ್ಯಾಕ್ ಮಾಡಿದ್ದರು. ಬಂಧಿತರಲ್ಲಿ ಓರ್ವ ಬೆಂಗಳೂರಿನ ಜ್ಯುವೆಲ್ಲರಿ ಮಳಿಗೆಯೊಂದರ ಮಾಲೀಕರ ಪುತ್ರ ಎಂದು ತನಿಖೆ ವೇಳೆ ಬಯಲಾಗಿದೆ ಎಂದು ಇನ್ಸ್ ಪೆಕ್ಟರ್ ಶಾಜಿ ಹೇಳಿದ್ದಾರೆ.

    ಬಂಧಿತರು ಮಾದಕ ವಸ್ತುಗಳನ್ನು ಕೂಡಾ ಅಕ್ರಮವಾಗಿ ಸಾಗಿಸುತ್ತಿದ್ದರು. ಸದ್ಯ ಬಂಧಿತರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಬೆಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕೇಂದ್ರ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದು ಶಾಜಿ ಹೇಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಚಿನ್ನದ ಅಕ್ರಮ ಸಾಗಾಟ ಕೇರಳದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ತೆರಿಗೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ಚಿನ್ನವನ್ನು ಈ ರೀತಿ ಅಕ್ರಮವಾಗಿ ಸಾಗಾಟ ಮಾಡುತ್ತಾರೆ. 11 ಕೋಟಿ ಮೌಲ್ಯದ ಚಿನ್ನಕ್ಕೆ ಸುಮಾರು 65 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರೆಸಲಿದ್ದಾರೆ.