Tag: ಅಬಯಾ

  • ಫ್ರಾನ್ಸ್‌ನ ಶಾಲೆಗಳಲ್ಲಿ ಶೀಘ್ರವೇ ಅಬಯಾ ಬ್ಯಾನ್

    ಫ್ರಾನ್ಸ್‌ನ ಶಾಲೆಗಳಲ್ಲಿ ಶೀಘ್ರವೇ ಅಬಯಾ ಬ್ಯಾನ್

    ಪ್ಯಾರಿಸ್: ಮುಸ್ಲಿಂ ಮಹಿಳೆಯರು (Muslim Women) ಧರಿಸುವ ಅಬಯಾ (Abaya) ಉಡುಪನ್ನು ಶಾಲೆಗಳಲ್ಲಿ ಧರಿಸುವುದನ್ನು ಫ್ರೆಂಚ್ (French) ಅಧಿಕಾರಿಗಳು ನಿಷೇಧಿಸಲಿದ್ದಾರೆ ಎಂದು ಅಲ್ಲಿನ ಶಿಕ್ಷಣ ಸಚಿವರು ಭಾನುವಾರ ತಿಳಿಸಿದ್ದಾರೆ.

    ಅಬಯಾ ಉಡುಪು ಫ್ರಾನ್ಸ್‌ (France) ಶಿಕ್ಷಣದಲ್ಲಿ ಕಟ್ಟುನಿಟ್ಟಾದ ಜಾತ್ಯತೀತ ಕಾನೂನನ್ನು ಉಲ್ಲಂಘಿಸಿದೆ ಎಂದು ವಾದಿಸಿದ ಅವರು, ಇನ್ನು ಮುಂದೆ ಶಾಲೆಗಳಲ್ಲಿ ಅಬಯಾ ಧರಿಸಲು ಅವಕಾಶವಿರುವುದಿಲ್ಲ. ಸೆಪ್ಟೆಂಬರ್ 4 ರಂದು ರಾಷ್ಟ್ರವ್ಯಾಪಿ ವಿದ್ಯಾರ್ಥಿಗಳು ಶಾಲೆಗೆ ಹಿಂದಿರುಗುವುದಕ್ಕೂ ಮೊದಲು ರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಸ್ಪಷ್ಟವಾದ ನಿಯಮಗಳನ್ನು ತರುವುದಾಗಿ ಹೇಳಿದ್ದಾರೆ.

    ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುವುದನ್ನು ದೀರ್ಘಕಾಲದಿಂದ ನಿಷೇಧಿಸಿರುವ ಫ್ರೆಂಚ್ ಶಾಲೆಗಳಲ್ಲಿ ಅಬಯಾಗಳನ್ನು ಧರಿಸುವ ಕುರಿತು ಹಲವು ತಿಂಗಳಿನಿಂದ ಚರ್ಚೆ ನಡೆದಿದೆ. ಬಲಪಂಥೀಯರು ಅಬಯಾ ನಿಷೇಧಕ್ಕೆ ಒತ್ತಾಯಿಸಿದರೆ, ಎಡಪಂಥೀಯರು ಇದು ನಾಗರಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಕುಟುಂಬದ ಯಜಮಾನನ ಕನಸಲ್ಲಿ ದೇವಿ- ದರ್ಗಾ ಪಕ್ಕದಲ್ಲೇ ದೇಗುಲ ನಿರ್ಮಿಸಿ, ಪೂಜೆ

    ಈ ವಿಚಾರವಾಗಿ ಶಿಕ್ಷಕರು ಮತ್ತು ಪೋಷಕರ ನಡುವೆ ಶಾಲೆಗಳಲ್ಲಿ ಉದ್ವಿಗ್ನತೆ ಉಂಟಾಗಿರುವ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿಗಳು ತರಗತಿಗೆ ಪ್ರವೇಶಿಸಿದಾಗ ಅವರ ಉಡುಪುಗಳಿಂದಾಗಿ ಧರ್ಮವನ್ನು ಗುರುತಿಸಲು ಸಾಧ್ಯವಾಗಬಾರದು. ಈ ಹಿನ್ನೆಲೆ 2004ರ ಮಾರ್ಚ್‌ನಲ್ಲಿ ಕಾನೂನು ಶಾಲೆಗಳಲ್ಲಿ ವಿದ್ಯಾರ್ಥಿಗಳು ಧಾರ್ಮಿಕ ಸಂಬಂಧಿತ ಚಿಹ್ನೆಗಳನ್ನು ತೋರ್ಪಡಿಸುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿತು. ಇದನ್ನೂ ಓದಿ: World Athletics Championships- ಚಿನ್ನದ ಪದಕಕ್ಕೆ ಮುತ್ತಿಟ್ಟು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

    ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

    ಶ್ರೀನಗರ: ಶಾಲೆಯಲ್ಲಿ ವಸ್ತ್ರಸಂಹಿತೆ (Dress Code) ಅನ್ನು ಅನುಸರಿಸಬೇಕಾಗಿ ಆದೇಶಿಸಿದ ಪ್ರಾಂಶುಪಾಲೆಗೆ (Principal) ಭಯೋತ್ಪಾದಕರ (Terrorists) ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ (Srinagar) ನಡೆದಿದೆ. ಇದಾದ ಬಳಿಕ ತಕ್ಷಣವೇ ಪ್ರಾಂಶುಪಾಲರು ಕ್ಷಮೆಯಾಚಿಸಿ ವಿದ್ಯಾರ್ಥಿನಿಯರಿಗೆ ಅಬಯಾ (Abaya) ಧರಿಸಲು ಅನುಮತಿ ನೀಡಿದ್ದಾರೆ.

    ಶ್ರೀನಗರದ ವಿಶ್ವ ಭಾರತಿ ಎಂಬವರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾಗಿದ್ದಾರೆ. ಕೆಲ ವಿದ್ಯಾರ್ಥಿನಿಯರಿಗೆ ಶಾಲೆಯೊಳಗೆ ಅಬಯಾ (ಉದ್ದನೆಯ ನಿಲುವಂಗಿ) ಧರಿಸದಂತೆ ಹೇಳಿದ್ದರು. ಆದರೂ ಸಮವಸ್ತçದೊಂದಿಗೆ ಹಿಜಬ್ (ತಲೆಯ ಸ್ಕಾರ್ಫ್) ಧರಿಸಲು ಅನುಮತಿ ನೀಡಿದ್ದರು. ಆದರೆ ಕೆಲವು ವಿದ್ಯಾರ್ಥಿನಿಯರು ಡ್ರೆಸ್ ಕೋಡ್ ಅನ್ನು ಒಪ್ಪಿಕೊಳ್ಳಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ.

    ಪ್ರಾಂಶುಪಾಲರು ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಿದ್ದಾರೆ. ಇದು ತಮ್ಮ ಧಾರ್ಮಿಕ ಆಚರಣೆಗಳ ಪ್ರಕಾರ ಧರಿಸಲು ಬಯಸುವ ತಮ್ಮ ಆಯ್ಕೆಯ ವಿರುದ್ಧವಾಗಿದೆ ಎಂದು ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ. ಅಬಯಾ ಧರಿಸಲೇಬೇಕಾದರೆ ನೀವು ಶಾಲೆಗೆ ಬರುವುದು ಬೇಡ. ಮದರಸಾಗೆ ಸೇರಿಕೊಳ್ಳಿ ಎಂದು ಪ್ರಿನ್ಸಿಪಾಲ್ ಹೇಳಿರುವುದಾಗಿ ಕೆಲವರು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಪ್ರಾಂಶುಪಾಲರು ನಿರಾಕರಿಸಿದ್ದಾರೆ.

    ಈ ವಿಷಯ ದೊಡ್ಡ ವಿವಾದಕ್ಕೆ ಕಾರಣವಾಗಿ ಬಳಿಕ ಪ್ರತಿಭಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿತು. ಸುದ್ದಿ ವಾಹಿನಿಗಳಲ್ಲೂ ಪ್ರಸಾರ ಮಾಡಲಾಯಿತು. ರಾಜಕೀಯ ಮುಖಂಡರು ಶಾಲೆಯ ಅಧಿಕಾರಿಗಳನ್ನು ಟೀಕಿಸಿದರು ಮಾತ್ರವಲ್ಲದೇ ಕರ್ನಾಟಕದಲ್ಲಿ ಹಿಜಬ್ ನಿಷೇಧವಾದ ಘಟನೆಗೆ ಹೋಲಿಸಿದರು. ಇದನ್ನೂ ಓದಿ: ರೈಲು ದುರಂತದ ಬಳಿಕ ಒಡಿಶಾದಲ್ಲಿ ಒಂದಿಲ್ಲೊಂದು ಅವಘಡ – ರೈಲು ಬೋಗಿಯಲ್ಲಿ ಆಕಸ್ಮಿಕ ಬೆಂಕಿ

    ಬಳಿಕ ಪ್ರಾಂಶುಪಾಲರು ಶಾಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಹಿಜಬ್ ಧರಿಸುತ್ತಾರೆ. ಆದರೆ ಅಬಯಾ ಧರಿಸುವವರು ಕೆಲವೇ ಹುಡುಗಿಯರು ಇದ್ದಾರೆ. ಹೀಗಾಗಿ ಶಾಲೆಯೊಳಗೆ ಅಬಯಾ ಧರಿಸದಂತೆ ಹೇಳಿರುವುದಾಗಿ ಅವರು ಸ್ಪಷ್ಟಪಡಿಸಲು ಯತ್ನಿಸಿದರು. ಆದರೆ ಈ ವಿಚಾರ ಅಲ್ಲಿಗೇ ತಣ್ಣಗಾಗದೇ ಭಯೋತ್ಪಾದಕರು ಕೂಡಾ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದರು.

    ಘಟನೆ ದೊಡ್ಡ ವಿವಾದವಾಗುತ್ತಿದ್ದಂತೆ ಭಯೋತ್ಪಾದಕರ ಗುಂಪೊಂದು ಶಾಲೆಯ ಪ್ರಾಂಶುಪಾಲರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದೆ. ಆಕೆ ಬಲಪಂಥೀಯಳೆಂದು ಆರೋಪಿಸಿದೆ. ಯಾವಾಗ ವಿಚಾರ ಭಯೋತ್ಪಾದಕರ ವರೆಗೆ ಹೋಯಿತೋ ಅಂದೇ ಸಂಜೆ ವೇಳೆಗೆ ಪ್ರಾಂಶುಪಾಲರು ಕ್ಷಮೆಯಾಚಿಸಿದ್ದಾರೆ.

    ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗಿನ ನನ್ನ ಸಂಭಾಷಣೆಯನ್ನು ತಪ್ಪಾಗಿ ನಿರೂಪಿಸಲಾಗಿದೆ. ಯಾವುದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಅಥವಾ ಪೋಷಕರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಅದಕ್ಕೆ ಬೇಷರತ್ ಕ್ಷಮೆಯಾಚಿಸುತ್ತೇನೆ. ಇಂದಿನಿಂದ ವಿದ್ಯಾರ್ಥಿನಿಯರು ಅಬಯಾ ಧರಿಸಬಹುದು ಮತ್ತು ತರಗತಿಗಳಲ್ಲಿ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

  • ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಅಬಯಾ ಬ್ಯಾನ್

    ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಅಬಯಾ ಬ್ಯಾನ್

    ರಿಯಾದ್: ಮುಸ್ಲಿಂ ಮಹಿಳೆಯರು (Muslim Women) ಧರಿಸುವ ಧಾರ್ಮಿಕ ಉಡುಗೆ ಅಬಯಾವನ್ನು (Abaya) ಸೌದಿ ಅರೇಬಿಯಾದ (Saudi Arabia) ಪರೀಕ್ಷಾ ಕೇಂದ್ರಗಳಲ್ಲಿ (Exam Halls) ನಿಷೇಧಿಸಲಾಗಿದೆ.

    ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ (ETEC) ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ ಹಾಗೂ ತರಬೇತಿ ವ್ಯವಸ್ಥೆಗೆ ಮಾನ್ಯತೆ ನೀಡುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಬಯಾ ಧರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಘೋಷಿಸಿದೆ.

    ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಬೇಕು. ಎಲ್ಲಾ ಉಡುಪುಗಳೂ ಸಾರ್ವಜನಿಕ ಸಭ್ಯತೆಯ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಇಟಿಇಸಿ ಹೇಳಿದೆ. ಆದರೆ ಇಲ್ಲಿ ಹಿಜಬ್ (Hijab) ಬಗ್ಗೆ ಯಾವುದೇ ಪ್ರಸ್ತಾಪ ಮಾಡದೇ ಕೇವಲ ಅಬಯಾವನ್ನು (Abaya) ಮಾತ್ರವೇ ನಿಷೇಧಿಸಲಾಗಿದೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಅಬಯಾ ಎಂಬುದು ಕತ್ತಿನಿಂದ ಕಾಲಿನ ವರೆಗೆ ದೇಹವನ್ನು ಮುಚ್ಚುವ ವಸ್ತ್ರವಾಗಿದೆ. ಇದು ಬುರ್ಖಾವನ್ನೇ ಹೋಲುತ್ತದೆ ಆದರೆ ಇದು ತಲೆಗೆ ಅನ್ವಯಿಸುವುದಿಲ್ಲ. ಹಿಜಬ್ ಎಂಬುವುದು ತಲೆಯನ್ನು ಮುಚ್ಚುವ ವಸ್ತ್ರವಾಗಿದೆ. ಸಾಂಪ್ರದಾಯಿಕವಾಗಿ ಅಬಯಾಗಳು ಕಪ್ಪು ಬಣ್ಣದ್ದಾಗಿದ್ದು, ತಿಳಿ ನೀಲಿ ಮತ್ತು ಗುಲಾಬಿ ಬಣ್ಣಗಳಲ್ಲಿಯೂ ಹೆಚ್ಚಿನ ಮಹಿಳೆಯರು ಗಲ್ಫ್ನಾದ್ಯಂತ ಧರಿಸುತ್ತಾರೆ.

    2018 ರಲ್ಲಿಯೇ ಸೌದಿಯಲ್ಲಿ ಅಬಯಾವನ್ನು ಇನ್ನು ಮುಂದೆ ಕಾನೂನುಬದ್ಧವಾಗಿ ಜಾರಿಗೊಳಿಸಲಾಗುವುದಿಲ್ಲ ಎಂದು ಘೋಷಿಸಲಾಗಿತ್ತು. ಆದರೂ ಹೆಚ್ಚಿನ ಮಹಿಳೆಯರು ಅಬಯಾ ಧರಿಸುವುದನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

     

    Live Tv
    [brid partner=56869869 player=32851 video=960834 autoplay=true]