Tag: ಅಬ್ದುಲ್ ನಜೀರ್

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ಸುಪ್ರೀಂ ನ್ಯಾ.ಅಬ್ದುಲ್ ನಜೀರ್

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ಸುಪ್ರೀಂ ನ್ಯಾ.ಅಬ್ದುಲ್ ನಜೀರ್

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು ಆಶ್ಲೇಷ ಬಲಿ ಪೂಜೆ ಸಲ್ಲಿಸಿದ್ದಾರೆ.

    ಹೈದರಾಬಾದ್‍ನಿಂದ ಮಂಗಳೂರಿಗೆ ಕುಟುಂಬ ಸಮೇತರಾಗಿ ವಿಮಾನದಲ್ಲಿ ಬಂದ ನ್ಯಾಯಮೂರ್ತಿಗಳು ಕಾರಿನಲ್ಲಿ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

    ಆಶ್ಲೇಷ ಪೂಜೆ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯಿಂದ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸಲಾಯಿತು. ನ್ಯಾಯಮೂರ್ತಿಗಳ ಪೂಜಾ ಕಾರ್ಯಗಳ ಛಾಯಾಚಿತ್ರಕ್ಕೆ ನಿರ್ಬಂಧವನ್ನು ಹೇರಲಾಗಿತ್ತು. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು

    ಅಬ್ದುಲ್‌ ನಜೀರ್‌ ಮೂಲತ: ಕರಾವಳಿಯವರು. ಬೆಳುವಾಯಿ, ಮೂಡುಬಿದಿರೆ ಪರಿಸರದಲ್ಲಿ ಬೆಳೆದಿದ್ದಾರೆ. ಮೂಡುಬಿದಿರೆ ಕಡಲಕೆರೆ ಸಂತ ಇಗ್ನೇಶಿಯಸ್ ಹಿರಿಯ ಪ್ರಾಥಮಿಕ ಶಾಲೆ, ಜೈನ್ ಹೈಸ್ಕೂಲ್ ಮತ್ತು ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಹಾಗೂ ಮುಂದೆ ಮಂಗಳೂರಿನ ಎಸ್‍ಡಿಎಂ ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    ಈ ಹಿಂದೆ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ ಅಲ್ಲದೇ ಸಿನಿಮಾ ನಟರು, ರಾಜಕೀಯ ವ್ಯಕ್ತಿಗಳು ನಾಗ ದೋಷ ಪರಿಹಾರಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಆಶ್ಲೇಷ ಪೂಜೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ನಟ ಸುದೀಪ್ ಅವರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.