ವಿಷ್ಣುವರ್ಧನ್ (Vishnuvardhan) ಹಾಗೂ ಸುದೀಪ್ (Sudeep) ಅಭಿಮಾನಿಗಳಿಂದ ತಯಾರಾಗುತ್ತಿರುವ ನೂತನ ಸ್ಮಾರಕದ ನೀಲನಕ್ಷೆ ಬಿಡುಗಡೆಯಾಗಿದೆ.
ಅಭಿಮಾನ್ ಸ್ಟುಡಿಯೋದಲ್ಲಿ(Abhiman Studio) ವಿಷ್ಣುವರ್ಧನ್ ಸಮಾಧಿ ಧ್ವಂಸವಾದ ಬಳಿಕ ಬೇಸರಗೊಂಡಿದ್ದ ಅಭಿಮಾನಿಗಳು ಪರ್ಯಾಯ ಸ್ಮಾರಕ ನಿರ್ಮಾಣ ಮಾಡಿಕೊಳ್ಳುವುದಾಗಿ ಸವಾಲು ಹಾಕಿದ್ದರು. ವಿಷ್ಣುವರ್ಧನ್ ಅಭಿಮಾನಿಗಳೊಂದಿಗೆ ವಿಷ್ಣುಸೇನೆ ಹಾಗೂ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivasa) ಜೊತೆ ನಟ ಸುದೀಪ್ ಕೈ ಜೋಡಿಸಿ ಹೊಸ ಸ್ಮಾರಕ ಘೋಷಿಸಿದ್ದರು. ಅದರಂತೆ ಕೆಂಗೇರಿ ಬಳಿಯಲ್ಲೇ ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ನಯಾ ಸ್ಮಾರಕದ ನೀಲನಕ್ಷೆ ಲೋಕಾರ್ಪಣೆ ಮಾಡಲಾಗಿದೆ.
ವಿಷ್ಣುವರ್ಧನ್ 75ನೇ ಜಯಂತೋತ್ಸವನ್ನು ವಿಷ್ಣುಸೇನೆ ಬೃಹತ್ ಮಟ್ಟದಲ್ಲಿ ಮಾಡಲು ತಯಾರಿ ಮಾಡಿಕೊಂಡಿತ್ತು. ಅಭಿಮಾನ್ ಸ್ಟುಡಿಯೋ ಜಾಗ ಗಲಾಟೆಯಿದ ಬೇಸರಗೊಂಡ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋದಲ್ಲಿ ಕೊಡುವ ಜಾಗಕ್ಕಾಗಿ ಕಾಯದೇ ತಾವೇ ನಿರ್ಮಿಸಲು ಮುಂದಾಗಿದ್ದಾರೆ. ಇದನ್ನೂಓದಿ: ‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?
ಈ ಜಾಗವನ್ನು ಕಿಚ್ಚ ಸುದೀಪ್ ಮುಂದಾಳತ್ವದಲ್ಲಿ ಖರೀದಿಸಿ ಕೊಡಲಾಗಿದೆ. ಈ ಜಾಗಕ್ಕೆ ಡಾ.ವಿಷ್ಣುವರ್ಧನ್ ಅಭಿಮಾನ ಕ್ಷೇತ್ರ ಎಂದು ಹೆಸರಿಡಲು ಯೋಜನೆಯಾಗಿದ್ದು ಮುಂದಿನ ವರ್ಷದ ವಿಷ್ಣುವರ್ಧನ್ ಜನ್ಮದಿನದ ಒಳಗಾಗಿ ಯೋಜನೆ ಪೂರ್ಣಗೊಳಿಸುವ ಪ್ಲ್ಯಾನ್ ಹಾಕಲಾಗಿದೆ.
ವಿಷ್ಣುವರ್ಧನ್ ಪ್ರತಿಮೆಯನ್ನೊಳಗೊಂಡ ಸ್ಮಾರಕದಲ್ಲಿ ಚಿತ್ರಗಳ ನೆನಪು ಹಾಗೂ ಕೆಲವು ವಸ್ತುಗಳನ್ನ ಇಟ್ಟು ಅಭಿಮಾನಿಗಳ ದರ್ಶನಕ್ಕೆ ಸದಾ ನೆರವಾಗುವಂತೆ ರೂಪುರೇಷೆ ಸಿದ್ಧ ಮಾಡಲಾಗಿದೆ. ಇದು ದೇಶದಲ್ಲೇ ಅಭಿಮಾನಕ್ಕಾಗಿ ಅಭಿಮಾನಿಗಳು ಕಟ್ಟಿಸಲಿರುವ ಮೊಟ್ಟಮೊದಲ ಬೃಹತ್ ಸ್ಮಾರಕ ಎಂದು ವಿಷ್ಣುಸೇನೆ ಘೋಷಿಸಿಕೊಂಡಿದೆ.
ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್ (Dr.Vishnuvardhan) ಅವರ 75ನೇ ಹುಟ್ಟುಹಬ್ಬ ಆಚರಿಸಲು ಸಜ್ಜಾಗಿರುವ ಫ್ಯಾನ್ಸ್‌ಗೆ ಖುಷಿ ಸುದ್ದಿ ಸಿಕ್ಕಿದೆ. ವಿಷ್ಣು ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ (Abhiman Studio) ಅಕ್ಕಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆಗೆ ಕೊನೆಗೂ ಪೊಲೀಸರು ಅನುಮತಿ ಕೊಟ್ಟಿದ್ದಾರೆ.
ಸಮಾಧಿ ಜಾಗ ವಿವಾದ ಕೋರ್ಟ್‌ನಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬೆಳಗ್ಗೆ ಪೊಲೀಸರು ಅನುಮತಿ ಕೊಡಲು ನಿರಾಕರಿಸಿದ್ದರು. ಈ ಸಂಬಂಧ ಡಾ. ವಿಷ್ಣುಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಡಿಸಿಪಿ ಅನಿತಾರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಸಂಜೆ ಹೊತ್ತಿಗೆ ಷರತ್ತು ಬದ್ಧ ಅನುಮತಿ ಕೊಟ್ಟಿದ್ದು, ಅಭಿಮಾನ್ ಸ್ಟುಡಿಯೋ ಬಳಿ ಯಾರೂ ಹೋಗದೇ ನಿಗದಿ ಮಾಡಿರುವ ಜಾಗದಲ್ಲೇ ಸಂಭ್ರಮಾಚರಣೆ ಮಾಡುವಂತೆ ಡಿಸಿಪಿ ಸೂಚಿಸಿದ್ದಾರೆ.
ಡಿಸಿಪಿ ಒಪ್ಪಿಗೆಯ ಬೆನ್ನಲ್ಲೇ ಅಭಿಮಾನ ಸ್ಟುಡಿಯೋಗೆ 200 ಮೀಟರ್ ಅಂತರದಲ್ಲಿ 2 ಎಕರೆ ಜಾಗ ಬಾಡಿಗೆ ಪಡೆದು ವಿಷ್ಣು ಹುಟ್ಟುಹಬ್ಬ ಆಚರಣೆಗೆ ಫ್ಯಾನ್ಸ್ ಸಿದ್ಧತೆ ನಡೆಸಿದ್ದಾರೆ. ರಕ್ತದಾನ, ಅನ್ನದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಹಿರಿಯ ನಟ ಬಾಲಣ್ಣ ಅವರ ಅಭಿಮಾನ್ ಸ್ಟುಡಿಯೋಗೆ (Abhiman Studio) ಸರ್ಕಾರ ನೀಡಿದ್ದ ಜಾಗವನ್ನು ವಶಪಡಿಸಿಕೊಳ್ಳಬೇಕು ಅಂತ ಬೆಂಗಳೂರಿನ ಜಿಲ್ಲಾಧಿಕಾರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಪತ್ರ ಬರೆದ ಬೆನ್ನಲ್ಲೇ ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ಭೇಟಿ ಮಾಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಅಂತ ಮನವಿ ನೀಡಿದ್ದಾರೆ.
ಭಾರಿ ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಡುಡಿಯೋ ಮುಟ್ಟುಗೋಲಿಗೆ ಆಗ್ರಹ ಕೇಳಿ ಬಂದಿತ್ತು. ಅಭಿಮಾನ್ ಸ್ಡುಡಿಯೋಗಾಗಿ ಬಾಲಕೃಷ್ಣಗೆ ನೀಡಿದ್ದ ಪ್ರದೇಶವನ್ನ ಹಿಂಪಡೆಯಲು ಹೋರಾಟ ಕೂಡ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಸಹಜವಾಗಿಯೇ ಇದು ಕುತೂಹಲಕ್ಕೆ ಕಾರಣವಾಗಿದೆ.ಇದನ್ನೂ ಓದಿ: ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!
ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಏನಿದೆ?
ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.
ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದುಪಡಿಸಿ ಜಾಗ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಅವರು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಆದೇಶದ ಅನ್ವಯ 09-04-1969 ರಂದು ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ರವರಿಗೆ ಅಭಿಮಾನ್ ಚಿತ್ರ ಸ್ಡುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್ ಸ್ಡುಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಿ ಆದೇಶ ನೀಡಲಾಗಿತ್ತು. ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಇದೀಗ ವಿಷ್ಣು ಅಭಿಮಾನಿಗಳಿಂದ ಮೇಲಿಂದ ಮೇಲೆ ಮರು ತನಿಖೆಗೆ ಆದೇಶ, ಅಭಿಮಾನ್ ಸ್ಡುಡಿಯೋ ಉದ್ದೇಶ ಉಲ್ಲಂಘನೆ ವಿಚಾರವಾಗಿ ಕಾನೂನು ಹೋರಾಟ ಜಾರಿಯಲ್ಲಿರುವ ವೇಳೆಯೇ ಪ್ರದೇಶವನ್ನ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಕೋರಿದೆ. ಅಂದಹಾಗೆ ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಡುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಆದರೆ ಸ್ಡುಡಿಯೋ ಅಭಿವೃದ್ಧಿಪಡಿಸದೆ ವೈಯಕ್ತಿಕವಾಗಿ ಉಪಯೋಗಿಸಿಕೊಂಡಿದ್ದಾರೆ. ಹೀಗಾಗಿ ಇಲ್ಲಿಯೂ ಉದ್ದೇಶವನ್ನ ಉಲ್ಲಂಘನೆ ಮಾಡಿದ್ದಾರೆ ಅನ್ನೋದು ಕೂಡ ಅರ್ಜಿ ಪತ್ರದಲ್ಲಿ ದಾಖಲಾಗಿದೆ. ಹೀಗಾಗಿ ಕೂಡಲೇ ಅಭಿಮಾನ್ ಸ್ಡುಡಿಯೋ ಆಸ್ತಿಯನ್ನ ಮುಟ್ಟುಗೋಲು ಹಾಕಬೇಕೆನ್ನುವುದು ಅರಣ್ಯ ಇಲಾಖೆಯ ಬೇಡಿಕೆಯಾಗಿದೆ.ಇದನ್ನೂ ಓದಿ: ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ
1970ರಲ್ಲಿ ಬೆಂಗಳೂರಿನಲ್ಲಿ (Bengaluru) ಸ್ಟುಡಿಯೋ ನಿರ್ಮಾಣ ಮಾಡುವ ಸಲುವಾಗಿ ಸರ್ಕಾರ ಅರಣ್ಯ ಪ್ರದೇಶದ ಆದೇಶ ಜಾರಿ ಮಾಡಿ ಕೆಲವು ನಿಯಮಗಳಡಿ 20 ಎಕರೆ ಜಾಗವನ್ನ ಹಿರಿಯ ನಟ ಟಿ.ಎನ್ ಬಾಲಣ್ಣ ಅವರ ಕುಟುಂಬಕ್ಕೆ ನೀಡಿತ್ತು. ಬಳಿಕ ಬಾಲಣ್ಣ ಕುಟುಂಬಸ್ಥರು ಸರ್ಕಾರ ವಿಧಿಸಿದ್ಧ ನಿಯಮಗಳ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಡಿ ಆ ಜಾಗವನ್ನ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರವನ್ನ ಬರೆದಿದೆ. ಈ ಬಗ್ಗೆ ನಟ ಹಾಗೂ ಡಾ.ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಜಟ್ಕರ್ (Aniruddha Jatkar) ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಸರ್ಕಾರ ಅಭಿಮಾನ್ ಸ್ಟುಡಿಯೋ (Abhiman Studio) ಜಾಗ ವಶಪಡಿಸಿಕೊಳ್ಳಬಹುದು ಅಂತಾ ಮೊದಲೇ ನನಗೆ ಗೊತ್ತಿತ್ತು. ಆ ನಿಟ್ಟಿನಲ್ಲಿ 6 ವರ್ಷದಿಂದ ನಾವು ಸಾಕಷ್ಟು ಪ್ರಯತ್ನ ಪಟ್ಟೆವು, ಆದ್ರೆ ಅದು ಆಗ್ಲಿಲ್ಲ. ಈಗ ನಮಗೆ ತುಂಬಾ ಖುಷಿ ಕೊಟ್ಟಿದೆ. ಅಪ್ಪಾಜಿ ಅಂತ್ಯ ಸಂಸ್ಕಾರ ಆದ ಜಾಗದಲ್ಲಿ ಭಾರತಿ ಅಮ್ಮ ಸ್ಮಾರಕವನ್ನ ಕಟ್ಟಿದರು. ಆದರೆ ಹಬ್ಬದ ದಿನವೇ ರಾತ್ರೋ ರಾತ್ರಿ ಅಲ್ಲಿ ನೆಲಸಮ ಮಾಡಲಾಯಿತು. ಅದು ಅಭಿಮಾನಿಗಳಿಗೆ ಹಾಗೂ ನಮ್ಮ ಕುಟುಂಬಕ್ಕೆ ಬೇಸರ ತಂದಿತ್ತು. ಈಗ ಅರಣ್ಯ ಪ್ರದೇಶ ಅಂತಾ ಹೇಳಿದೆ. ಸರ್ಕಾರಕ್ಕೆ ಅಲ್ಲಿ 10 ಗುಂಟೆ ಜಾಗ ಕೊಡಿ ಸ್ಮಾರಕ ಕಟ್ಟಿಕೊಡೋದು ಬೇಡ ಅಂತಾ ಮನವಿ ಮಾಡ್ತೀವಿ. ಸರ್ಕಾರ ಈ ಮನವಿಗೆ ಖಂಡಿತ ಸ್ಪಂದಿಸುತ್ತೆ ಅನ್ನೋ ಭರವಸೆ ಇದೆ ಅಂತಾ ಅನಿರುದ್ಧ ಹೇಳಿದ್ದಾರೆ.
ಈ ವಿಚಾರದಲ್ಲಿ ನಾನು ಏನು ಹೇಳ್ತಿದಿನೋ ಅದನ್ನ ಅಮ್ಮನೂ ಹೇಳೋದು. ಸಿಎಂ ಕಳೆದ ಬಾರಿ ಹೋದಾಗಲೂ ಈ ಬಾರಿ ಹೋದಾಗಲೂ ಕರ್ನಾಟಕ ರತ್ನ ಗೌರವದ ನೀಡುವ ಬಗ್ಗೆ ಭರವಸೆ ಕೊಟ್ಟಿದ್ದಾರೆ. ನಾನು ಅಲ್ಲಿ ಬೇಡಿಕೊಂಡಿಲ್ಲ ಬದಲಾಗಿ ನೆನಪಿಸಿದ್ದೇನೆ. ಅವರ ಗಮನಕ್ಕೆ ತಂದಿದ್ದೇನೆ. ಬಾಲಣ್ಣ ಅವರ ಬಗ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಸಾಕಷ್ಟು ಗೌರವ ಇದೆ. ಆ ಜಾಗದಲ್ಲಿ ಅಭಿವೃದ್ಧಿ ಆಗಿದ್ರೆ ಚೆನ್ನಾಗಿರ್ತಿತ್ತು. ಅಲ್ಲಿ ಅಪ್ಪಾಜಿ ಅವರ ಸಮಾಧಿಗೆ ಅವಕಾಶ ಕೊಟ್ಟಿದ್ದರು ಅವರಿಗೂ ಗೌರವ ಇರ್ತಿತ್ತು. ಈಗ ಸರ್ಕಾರ ಮುಟ್ಟುಗೋಲು ಹಾಕಿಕೊಳ್ತಿದೆ ಎಂದಿದ್ದಾರೆ ಅನಿರುದ್ಧ.
ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ (Abhiman Studio) ಮುಟ್ಟುಗೋಲು ಹಾಕಲು ಅರಣ್ಯ ಇಲಾಖೆ (Forest Department) ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.
ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ (Dr Vishnuvardhan) ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ.
ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಅವರು ಪತ್ರ ಬರೆದಿದ್ದಾರೆ. ಇದನ್ನೂಓದಿ: ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
ಪತ್ರದಲ್ಲಿ ಏನಿದೆ?
ಸರ್ಕಾರಿ ಆದೇಶದ ಅನ್ವಯ ಏಪ್ರಿಲ್ 09, 1969 ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ಅವರಿಗೆ ಅಭಿಮಾನ್ ಚಿತ್ರ ಸ್ಟುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್ ಸ್ಟಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಲಾಗಿತ್ತು. ಇದನ್ನೂಓದಿ: ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ಸಹಾಯಕ್ಕೆ ನಿಂತ ಧ್ರುವ ಸರ್ಜಾ
ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಟುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಇಲ್ಲಿಯೂ ಉದ್ದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ಪತ್ರದಲ್ಲಿ ಉಲೇಖವಾಗಿದೆ.
ಅಭಿಮಾನಿ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ (Vishnuvardhan) ಸಮಾಧಿ ನೆಲಸಮ ಆಗುತ್ತಿದ್ದಂತೆಯೇ ಭಾರೀ ಆಕ್ರೋಶ ವ್ಯಕ್ತವಾಯಿತು. ನಟ ಸುದೀಪ್ (Sudeep) ಸೇರಿದಂತೆ ಹಲವರು ಸಮಾಧಿ ನೆಲಸಮ ಆದ ಕುರಿತಂತೆ ಆವೇಶ ಭರಿತ ಮಾತುಗಳನ್ನು ಆಡಿದರು. ಸಮಾಧಿಯ ಜಾಗವನ್ನು ದುಡ್ಡು ಕೊಟ್ಟ ಖರೀದಿಸುವ ಮಾತುಗಳನ್ನು ಸುದೀಪ್ ಆಡಿದರು. ಈ ಕುರಿತಂತೆ ಇವತ್ತು ವಿಷ್ಣು ಮನೆಯಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಸುದೀಪ್ ಅವರ ಹೆಸರನ್ನು ತಗೆದುಕೊಳ್ಳದೇ, ಈವರೆಗೂ ಜಾಗ ಖರೀದಿ ಯಾಕೆ ಮಾಡಿಲ್ಲ? ಅಂತ ಅನಿರುದ್ಧ ಪ್ರಶ್ನೆ ಮಾಡಿದರು. ಈ ಮೂಲಕ ಸುದೀಪ್ ಅವರಿಗೆ ಅನಿರುದ್ಧ (Aniruddha) ಟಾಂಗ್ ಕೊಟ್ಟರಾ? ಅನ್ನುವ ಚರ್ಚೆ ಶುರುವಾಗಿದೆ.
ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆದ ಕುರಿತು ಸಾಕಷ್ಟು ಟೀಕೆಗಳು ಕೇಳಿ ಬಂದವು. ಸಮಾಧಿ ನೆಲಸಮ ಆಗಿದ್ದರ ಹಿಂದೆ ಸ್ವತಃ ವಿಷ್ಣುವರ್ಧನ್ ಕುಟುಂಬವೂ ಇದೆ ಅಂತ ಕೆಲವರು ಆರೋಪ ಮಾಡಿದ್ದರು. ಸಮಾಧಿ ಉಳಿಸಿಕೊಳ್ಳಲು ಅಭಿಮಾನಿಗಳು ಮಾಡಿದ ಹೋರಾಟಕ್ಕೆ ವಿಷ್ಣು ಕುಟುಂಬದ ಬೆಂಬಲವಿರಲಿಲ್ಲ ಅನ್ನೋ ಆರೋಪ ಕೂಡ ಕೇಳಿ ಬಂದಿತ್ತು. ದೂರ ಉಳಿಯುವುದಕ್ಕಾಗಿಯೇ ವಿಷ್ಣು ಕುಟುಂಬ ಹಣ ಪಡೆದಿದೆ ಅಂತಾನೂ ಆರೋಪ ಹೊರಸಲಾಗಿತ್ತು. ಈ ಎಲ್ಲದರ ಕುರಿತು ಮಾತನಾಡಲು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಅಭಿಮಾನಿಗಳ ಸಭೆ ಕರೆದಿದ್ದರು. ತಮ್ಮ ಮೇಲಿನ ಆರೋಪಗಳ ಬಗ್ಗೆ ಮಾತಾಡಿದರು. ವಿಷ್ಣು ಸಮಾಧಿ ಕುರಿತಾದ ಹೋರಾಟಕ್ಕೆ ತಮ್ಮ ಬೆಂಬಲವನ್ನೂ ಅವರು ವ್ಯಕ್ತಪಡಿಸಿದರು.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ (Abhiman Studio) ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿಷ್ಣುವರ್ಧನ್ ಸಮಾಧಿ ಉಳಿವಿಗಾಗಿ ಹೋರಾಟ ಮಾಡುತ್ತಿದ್ದು, ವಿಷ್ಣು ಅಭಿಮಾನಿಗಳು ಅಕ್ಷರಶಃ ಕಣ್ಣೀರಿಟ್ಟಿದ್ದರು. ಜೊತೆಗೆ ವಿಷ್ಣುವರ್ಧನ್ ಕುಟುಂಬದ ಮೇಲೆಯೇ ಹರಿಹಾಯ್ದಿದ್ದರು. ವಿಷ್ಣು ಸಮಾಧಿ ನೆಲಸಮ ಆಗುವ ವಿಚಾರ, ವಿಷ್ಣು ಕುಟುಂಬಕ್ಕೆ ಮೊದಲೇ ಗೊತ್ತಿತ್ತು. ಅವರು ಅದಕ್ಕಾಗಿ ಹಣ ಪಡೆದಿದ್ದರಿಂದ, ಮೌನಕ್ಕೆ ಜಾರಿದ್ದಾರೆ ಅಂತ ಆರೋಪ ಮಾಡಲಾಗಿತ್ತು. ಸಮಾಧಿ ನೆಲಸಮ ಆಗುವುದರ ಹಿಂದೆ ಸ್ವತಃ ವಿಷ್ಣು ಕುಟುಂಬವೇ ಇದೆ ಅನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತು ಅನಿರುದ್ಧ ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನೂಓದಿ: ನಟಅಜಯ್ರಾವ್ದಾಂಪತ್ಯದಲ್ಲಿಬಿರುಕು–ಮತ್ತೆಒಂದಾಗೋಕೆಬಯಸಿದಪತ್ನಿಸಪ್ನ
ವಿಷ್ಣುವರ್ಧನ್ ಅವರ ಸಮಾಧಿಯು ನೆಲಸಮ ಆಗಿದ್ದಕ್ಕೆ ವಿಷ್ಣು ಕುಟುಂಬ ಸಂಭ್ರಮಿಸುತ್ತಿದೆ ಅಂತ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡರು. ಸಮಾಧಿ ಜಾಗಕ್ಕೆ ಕುಟುಂಬದವರು ಕಾಲಿಡದೇ ಇರುವ ಕಾರಣಕ್ಕಾಗಿ, ಕೋರ್ಟ್ನಲ್ಲೂ ತಮ್ಮ ಹೋರಾಟಕ್ಕೆ ಹಿನ್ನೆಡೆ ಆಯಿತು ಅಂತ ಕೆಲ ಅಭಿಮಾನಿಗಳು ಮಾಧ್ಯಮಗಳ ಜೊತೆ ಮಾತಾಡಿದ್ದರು. ಈ ಎಲ್ಲದರ ಕುರಿತು ಅನಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗಿದ್ದು ನಮಗೂ ಅಪಾರ ನೋವನ್ನುಂಟು ಮಾಡಿದೆ. ಸಂಭ್ರಮಿಸುವ ವಿಕೃತ ಮನಸ್ಸು ನಮ್ಮದಲ್ಲ ಅಂತ ಅನಿರುದ್ಧ ತಿರುಗೇಟು ನೀಡಿದ್ದಾರೆ. ಕುಟುಂಬದ ಘನತೆಯನ್ನು ಹಾಳು ಮಾಡಲು ಹೊರಟರೆ, ಕಾನೂನು ಮೂಲಕ ಉತ್ತರ ಕೊಡುತ್ತೇವೆ ಅಂತ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ.
ಬೆಂಗಳೂರಿನ ವಿಷ್ಣುವರ್ಧನ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಭಿಮಾನಿಗಳ ಪ್ರಶ್ನೆಗಳನ್ನು ಆಲಿಸಿದ ಅನಿರುದ್ಧ, ಅಭಿಮಾನಿ ಸ್ಟುಡಿಯೋದಲ್ಲಿ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ತಮ್ಮ ಕುಟುಂಬದ ಬೆಂಬಲವಿದೆ ಎಂದು ಹೇಳಿದ್ದಾರೆ. ಅಭಿಮಾನ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಉಳಿಯಬೇಕು ಅಂತ ಬಯಸಿದ್ದವರಲ್ಲಿ ನಾನೂ ಒಬ್ಬ. ಈಗಲೂ ಹೋರಾಟ ಮುಂದುವರೆಯುತ್ತದೆ ಅಂದರೆ, ಕಂಡಿತಾ ನಮ್ಮ ಕುಟುಂಬದ ಬೆಂಬಲ ಇದ್ದೇ ಇರುತ್ತದೆ ಅಂತ ಅನಿರುದ್ಧ ಘೋಷಿಸಿದ್ದಾರೆ. ಸಮಾಧಿ ನೆಲಸಮ ಆಗಿದ್ದರ ಹಿಂದೆ ತಾವಾಗಲಿ, ತಮ್ಮ ಕುಟುಂಬವಾಗಲಿ ಇಲ್ಲ ಅನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಗೆ ಅಭಿಮಾನ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕು ಅಂತ ತಾವು ಪಟ್ಟಿರುವ ಕಷ್ಟವನ್ನೂ ವಿವರಿಸಿದ್ದಾರೆ. ಅದು ಫಲ ಕೊಡದೇ ಹೋದಾಗ, ಮೈಸೂರಿಗೆ ಶಿಫ್ಟ್ ಮಾಡಲಾಯಿತು ಅಂದಿದ್ದಾರೆ.
ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲೂ ವಿಷ್ಣುವರ್ಧನ್ ಅವರ ಸಮಾಧಿ ಇರಬೇಕು ಅಂತ ಇದೇ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಆಗ್ರಹಿಸಿದರು. ಸರಕಾರದ ವಿರುದ್ಧ ಘೋಷಣೆ ಕೂಡ ಕೂಗಿದರು. ತಮಗೆ ನ್ಯಾಯ ಸಿಗಬೇಕು ಅಂತ ಕೆಲವರು ಆಗ್ರಹಿಸಿದರು. ಅಭಿಮಾನಿಗಳ ಎಲ್ಲ ಪ್ರಶ್ನೆಗಳಿಗೂ ಅನಿರುದ್ಧ ಸಮಾಧಾನದಿಂದಲೇ ಉತ್ತರಿಸಿದರು. ಇನ್ಮುಂದೆ ತಮ್ಮ ಕುಟುಂಬದ ವಿರುದ್ಧ ಮಾತಾಡಬೇಕಾದರೆ, ಎಚ್ಚರಿಕೆಯಿಂದ ಮಾತಾಡಿ ಅಂತ ಗುಡುಗಿದರು. ತಮ್ಮ ಕುಟುಂಬದ ವಿರುದ್ಧ ಮಾತಾಡುವ ಅಭಿಮಾನಿಗಳ ವಿರುದ್ಧ ದೂರು ನೀಡುವುದಾಗಿಯೂ ಅವರು ಹೇಳಿದ್ದಾರೆ. ಸಮಾಧಿ ನೆಲಸಮ ವಿಚಾರದಲ್ಲಿ ಸ್ಯಾಂಡಲ್ವುಡ್ ಕೂಡ ಆಕ್ರೋಶ ವ್ಯಕ್ತ ಪಡಿಸಿದೆ. ವಿಷ್ಣು ಕುಟುಂಬ ಕೂಡ ಹೋರಾಟಕ್ಕೆ ಜೊತೆಯಾಗುವುದಾಗಿ ತಿಳಿಸಿದೆ. ಸಮಾಧಿಗಾಗಿ ಮತ್ತೊಂದು ಸುತ್ತಿನ ಹೋರಾಟ ನಡೆಯುತ್ತಾ? ಕಾದು ನೋಡಬೇಕು.
ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಷ್ಣುವರ್ಧನ್ ಸ್ಮಾರಕ (Vishnuvardhan Memorial) ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ ಎಂದು ನಟ ಅನಿರುದ್ಧ (Actor Anirudh) ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದಾರೆ.
ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗೆ ಹೋರಾಟ ಹಾಗೂ ಸಮಾಧಿ ನೆಲಸಮ ವಿಚಾರವಾಗಿ ಅನಿರುದ್ಧ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನಿವಾಸದಲ್ಲಿ ಸಭೆ ನಡೆಸಿದರು. ಈ ವೇಳೆ ವಿಷ್ಣು ಅಭಿಮಾನಿಗಳು ಹಾಗೂ ಮಾಧ್ಯಮಗಳೊಂದಿಗೆ ಹಲವು ವಿಚಾರಗಳನ್ನ ಪ್ರಸ್ತಾಪಿಸಿದ್ರು.
ಅಭಿಮಾನ್ ಸ್ಟುಡಿಯೋದಲ್ಲಿ (Abhiman Studio) ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ. ನಮ್ಮ ಕುಟುಂಬದ ಮೇಲೆ ಒಂದಷ್ಟು ಜನ ಆರೋಪ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮೊದಲು ನಾನು ಮಾತನಾಡುತ್ತೇನೆ. ಇದೇ ಮೊದಲ ಬಾರಿ ಅಲ್ಲ, ಇದಕ್ಕೂ ಮುನ್ನ ಸಾಕಷ್ಟು ಬಾರಿ ಸಭೆ ಮಾಡಿದ್ದೀನಿ. ಎರಡು ವಿಡಿಯೋ ಇದೆ, ಒಂದು ಮೈಸೂರಲ್ಲಿ ಸ್ಮಾರಕ ಉದ್ಘಾಟನೆಗೂ ಮುಂಚೆ ಹಾಗೂ ಹಳೆ ಮನೆಯಲ್ಲಿ ಸಭೆ ಮಾಡಿದ್ದೇವೆ ಎಂದು ವಿಡಿಯೋ ತೋರಿಸಿದರು.ಇದನ್ನೂ ಓದಿ: ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ
ಇದೆಂಥಾ ವಿಕೃತ ಮನಸ್ಸು?
ಸಮಾಧಿ ತೆರವು ವಿಚಾರ ನಮಗೆ ಗೊತ್ತಿತ್ತು, ಆ ವಿಚಾರದಲ್ಲಿ ದುಡ್ಡು ಬಂದಿದೆ ಅಂತೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ದಾದಾ ಸಮಾಧಿ ತೆರವು ವಿಚಾರದಲ್ಲಿ ನಾವು ಸಂತೋಷಪಡೋಕೆ ಆಗುತ್ತಾ? ಇದೆಂಥಾ ವಿಕೃತ ಮನಸ್ಸು, ತಂದೆ ಸ್ಮಾರಕ ತೆರವುಗೊಳಿಸೋಕೆ ನಾವು ದುಡ್ಡು ತೆಗೆದುಕೊಳ್ತೀವಾ? ಈ ರೀತಿ ಒಂದಷ್ಟು ಜನ ಆರೋಪ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಸಂಸ್ಕಾರ ಮಾಡೋಕೆ ಪ್ಲ್ಯಾನ್ ಮಾಡಿದ್ದೆವು. ಆದರೆ ಸರ್ಕಾರ ಹಾಗೂ ಅಂಬರೀಶ್ ಅವರ ಒತ್ತಾಯದಂತೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ಮಾಡಿದ್ವಿ. ಆದರೆ ಆ ಅವಸರದಲ್ಲಿ ಅದು ವಿವಾದಿತ ಜಾಗ ಅನ್ನೋದು ಅವ್ರಿಗೆ ಗೊತ್ತಾಗಿಲ್ಲ ಅನ್ನಿಸುತ್ತದೆ. 20 ಎಕರೆ ಜಾಗವನ್ನು ಸರ್ಕಾರ ಬಾಲಣ್ಣ ಅವರಿಗೆ ಕೊಟ್ಟಿತ್ತು. ಅದರಲ್ಲಿ 10 ಎಕರೆ ಜಾಗ ಮಾರಿಕೊಂಡಿದ್ದರು. ಉಳಿದ 10 ಎಕರೆ ಜಾಗದಲ್ಲಿ ಸ್ಟುಡಿಯೋ ಮಾಡ್ತೀವಿ ಎಂದು ಒಪ್ಪಿಕೊಂಡಿದ್ದರು. ಆದರೆ ಇದೆಲ್ಲವೂ ಅಕಸ್ಮಾತ್ ಆಗಲಿಲ್ಲ, ಸರ್ಕಾರ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ತೀವಿ ಎಂದು ಉಲ್ಲೇಖ ಮಾಡಿದೆ. ನಾವು ಸ್ಮಾರಕ ಮಾಡ್ಬೇಕು ಅಂದರೆ, 2 ಎಕರೆ ಜಾಗ ಬೇಕು. ಆದರೆ ಜಾಗದ ಗಲಾಟೆ ಇತ್ಯರ್ಥ ಆಗಲಿಲ್ಲ. ಗೀತಾ ಬಾಲಿ ಅವರನ್ನು ಸಾಕಷ್ಟು ಬಾರಿ ಕೇಳಿಕೊಂಡ್ವಿ. ಅವರು ಇತ್ಯರ್ಥ ಮಾಡಬೇಕಂದ್ರೆ ಕೇಸ್ ವಿಥ್ ಡ್ರಾ ಮಾಡ್ಬೇಕು. ಒಂದು ವೇಳೆ ವಿಥ್ ಡ್ರಾ ಮಾಡಿಕೊಂಡರೆ ಅವರ ಸಹೋದರರು ಜಾಗ ಕಿತ್ತುಕೊಳ್ಳುತ್ತಾರೆ ಎನ್ನುವ ಭಯ ಅವರಿಗಿತ್ತು ಅನಿಸುತ್ತದೆ ಎಂದು ಸ್ಪಷ್ಟನೆ ನೀಡಿದರು.
ನಮ್ಮ ಜೇಬಿಗೆ ದುಡ್ಡು ಬರಲ್ಲ
ಇನ್ನೂ ದಾದಾರನ್ನು ಹೂತುಹಾಕಿರಲಿಲ್ಲ, ದಹನ ಮಾಡಿದ್ದು. ಭಾರತಿಯಮ್ಮ ಅವರ ಅಸ್ಥಿಯನ್ನ ಎರಡು ವರ್ಷ ಆಪ್ತರ ಮನೆಯಲ್ಲಿ ಇಟ್ಟಿದ್ದರು. ಮೈಸೂರಿನಲ್ಲಿ ಅಪ್ಪಾಜಿಯವರ ಸ್ಮಾರಕದಲ್ಲಿ ಅವರ ಅಸ್ತಿ ಇದೆ. ಎರಡು ವರ್ಷ ಅಭಿಮಾನ್ ಸ್ಟುಡಿಯೋದಲ್ಲಿ ಯಾವುದೇ ರೀತಿ ಅಭಿವೃದ್ಧಿ ಆಗಿರಲಿಲ್ಲ. ಅಮ್ಮ ಅಭಿವೃದ್ಧಿ ಮಾಡಿದ್ದು, ಅನಂತ್ ಕುಮಾರ್ ನೇತೃತ್ವದಲ್ಲಿ ಅಭಿವೃದ್ಧಿ ಆಯಿತು. ಈ ವಿಚಾರದಲ್ಲಿ ಅದೆಷ್ಟು ದಿನ ಕಚೇರಿಗೆ ಅಲೆದಿದ್ದೇವೆ ಅನ್ನೋದು ನಮಗೆ ಮಾತ್ರ ಗೊತ್ತು. ಮೈಸೂರಿನಲ್ಲಿ ವ್ಯಾಪಾರೀಕರಣ ಆಗ್ತಿದೆ, ನನಗೆ 10ಲಕ್ಷ ರೂ. ಬರುತ್ತೆ ಅಂತ ಆರೋಪಿಸಿದ್ದರು. ಆದ್ರೆ ಹೇಗೆ ಬರುತ್ತೆ? ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್‌ಕುಮಾರ್, ಅಂಬರೀಶ್, ಪುನೀತ್ ರಾಜ್‌ಕುಮಾರ್ ಸ್ಮಾರಕ ಇದೆ. ಅದರ ಆಡಳಿತ ವಿಜಯಾನಂದ ಅವರ ನೇತೃತ್ವದಲ್ಲಿ ಆಗುತ್ತದೆ. ಸರ್ಕಾರದಿಂದ ಇದಕ್ಕೆ ಎಷ್ಟು ದುಡ್ಡು ಮಂಜೂರಾಗುತ್ತದೆ ಎಂದು ಅವರನ್ನು ಕೇಳಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಟ್ರಸ್ಟ್ ನಡೆಯುತ್ತದೆ. ಸ್ಮಾರಕ ನಿರ್ವಹಣೆಗೆ ಸರ್ಕಾರ ದುಡ್ಡು ನೀಡುತ್ತದೆ. ನಮ್ಮ ಜೇಬಿಗೆ ದುಡ್ಡು ಬರುವುದಿಲ್ಲ ಎಂದು ತಿಳಿಸಿದರು.
ಭಾರತಿ ಅಮ್ಮ ಕಣ್ಣೀರಿಟ್ಟು ಕೇಳಿಕೊಂಡಿದ್ದಾರೆ
2016ರಿಂದ ಈ ಜಾಗದ ಬಗ್ಗೆ ಯೋಚನೆ ಬಿಟ್ಟಿದ್ದೆವು. ಇದೇ ವೇಳೆ ಒಂದು ವಾಹಿನಿಯಲ್ಲಿ ಕುಳಿತು ಬಾಲಣ್ಣ ಅವರ ಮಗ ಕೆಟ್ಟದಾಗಿ ಮಾತಾಡಿದ್ದರು. ಸಮಾಧಿ ವಿವಾದ ಬಗೆಹರಿಸೋಕೆ ಭಾರತಿ ಅಮ್ಮ ಕಣ್ಣೀರಿಟ್ಟು ಕೇಳಿಕೊಂಡಿದ್ದಾರೆ. ಭಾರತಿಯವರು ವಿಷ್ಣುವರ್ಧನ್ ಪತ್ನಿ ಅನ್ನೋದಕ್ಕಿಂತ ಮೊದಲು ಹಿರಿಯ ಕಲಾವಿದೆ, ಪಂಚಭಾಷಾ ತಾರೆ. ಅಂತವರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಅದಾದ ಬಳಿಕ ಅಲ್ಲಿಗೆ ಹೋಗೋದನ್ನು ನಿಲ್ಲಿಸಿದ್ವಿ. ಅಭಿಮಾನಿಗಳಿಗಾಗಿ ಆ ಜಾಗ ಬಿಟ್ಟುಕೊಡಿ ಅಂತಾ ಕೇಳಿದಿವಿ. ಇನ್ನೂ ಸರ್ಕಾರ ನಮಗೆ ಮೈಸೂರಿನಲ್ಲಿ ಜಾಗ ಕೊಡುವಾಗ ಒಂದು ಕಡೆ ಕೊಟ್ಟಮೇಲೆ ಮತ್ತೊಂದು ಕಡೆ ಜಾಗ ಕೇಳುವಂತಿಲ್ಲ ಎಂದು ಸೂಚಿಸಿತ್ತು. ಹೀಗಾಗಿ ನಾವು ಈಗ ಸರ್ಕಾರಕ್ಕೆ ಕೇಳುವ ಹಾಗೆ ಇಲ್ಲ. ಸಂಸ್ಕಾರ ಆದ ಜಾಗದಲ್ಲಿ ಸ್ಮಾರಕ ನಿರ್ಮಾಣಕ್ಕೆ ನಿಮ್ಮ ಜೊತೆ ನಾವಿದ್ದೀವಿ ಎಂದರು.
ದಾದಾ ಹೆಸರಿನಲ್ಲಿ ವ್ಯಾಪಾರೀಕರಣ ಬೇಡ
ಜಾಗ ಸಿಕ್ಕು ಅದನ್ನು ಕೊಂಡುಕೊಂಡು ಸ್ಮಾರಕ ನಿರ್ಮಾಣ ಮಾಡೋಕೆ ಮುಂದಾದರೆ ಒಳ್ಳೆಯದು. ಅಭಿಮಾನಿಗಳು ಅಂತಾ ಹೆಸರು ಹೇಳಿಕೊಂಡು, ಮುಖವಾಡ ಹಾಕಿಕೊಂಡು ಅಪ್ಪಾಜಿಯವರ ಹೆಸರು ಹೇಳಿಕೊಂಡು ವ್ಯಾಪಾರೀಕರಣ ಮಾಡಬಾರದು. ದುಡ್ಡು ಯಾರು ಕೊಡುತ್ತಾರೆ? ಯಾರೆಲ್ಲ ಇರುತ್ತಾರೆ? ಅಂದರೆ ದುಡ್ಡಿನ ವ್ಯವಹಾರದಲ್ಲಿ ನಾವಿರುವುದಿಲ್ಲ. ಸರ್ಕಾರ ನಿರ್ಮಾಣ ಮಾಡಿದ ಸ್ಮಾರಕಕ್ಕೂ ಇದಕ್ಕೂ ಹೋಲಿಸಬೇಡಿ. ಸುಮಾರು ವರ್ಷಗಳಿಂದ ನಮ್ಮ ತಪ್ಪಿಲ್ಲದೇ ಇಲ್ಲಸಲ್ಲದ ಆರೋಪ ಹೊರಿಸುತ್ತಾ ಬರುತ್ತಿದ್ದಾರೆ. ಆರೋಪ ಹೊರಿಸೋದು ಬೇಡ. ಸುಮಾರು ಆರೋಪ, ಕೆಟ್ಟ ಮಾತು ಕೇಳಿ ಆಗಿದೆ. ಹೀಗಾಗಿ ನಮ್ಮ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕ್ರಮ ಜರುಗಿಸುತ್ತೇವೆ. ಸಾಮಾಜಿಕ ಮಾಧ್ಯಮ, ವೇದಿಕೆಯಲ್ಲಿ ಕೆಟ್ಟದಾಗಿ ಮಾತಾಡಿದ್ರೆ ಕಂಪ್ಲೆಂಟ್ ಕೊಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ನಾವು ಮೈಸೂರಿಗೆ ಹೋಗೋದಕ್ಕೆ ಕಾರಣ ಇದೆ. ನಮಗೆ ಅಭಿಮಾನ್ ಸ್ಟುಡಿಯೋ ಬಳಿ ಜಾಗ ತೋರಿಸಿದರು. ಅದು ಅರಣ್ಯ ಪ್ರದೇಶ ಅಂತಾ ಆಯ್ತು, ಎರಡ್ಮೂರು ಕಡೆ ಜಾಗ ನೋಡಿದ್ರು ಹೊಂದಾಣಿಕೆ ಆಗಲಿಲ್ಲ. ಬೆಂಗಳೂರಿನಲ್ಲಿ ಅವರಿಗೆ ಜಾಗನೇ ಇಲ್ವಾ ಅಂತಾ ನಾವು ಮೈಸೂರಿನಲ್ಲಿ ಸ್ಮಾರಕ ಮಾಡೋಕೆ ಜಾಗ ಕೇಳಿದ್ವಿ. ಸ್ಮಾರಕ ಮತ್ತೆ ನಿರ್ಮಾಣ ಮಾಡೋಕೆ ನಾವು, ನಮ್ಮ ಕುಟುಂಬ ಸದಾ ನಿಮ್ಮ ಜೊತೆ ಇರುತ್ತೇವೆ. ವಿಷ್ಣುವರ್ಧನ್ ಕುಟುಂಬದ ಪರವಾಗಿ ಸಭೆಗೆ ಕರೆದಿದ್ದೆ. ಇಷ್ಟು ಅಭಿಮಾನಿಗಳು ಸಭೆಗೆ ಬಂದು ಗೌರವ ಸಲ್ಲಿಸಿದ್ದೀರಿ ಎಂದು ಹೇಳಿದರು.ಇದನ್ನೂ ಓದಿ: 71 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆ ಬಿಸಿ
ಕನ್ನಡ ಚಿತ್ರರಂಗದ ಧೀಮಂತ ನಾಯಕ ಡಾ.ವಿಷ್ಣುವರ್ಧನ್ ಸಮಾಧಿ (Vishnuvardhan Memorial) ನೆಲಸಮ ಮಾಡಿದ ಹಿನ್ನೆಲೆ ಕರ್ನಾಟಕದಾದ್ಯಂತ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ಇತ್ತ ಕನ್ನಡ ಚಿತ್ರರಂಗದ ಗಣ್ಯರು ಒಬ್ಬೊಬ್ಬರಾಗಿ ದನಿ ಎತ್ತುತ್ತಿದ್ದಾರೆ. ಇಂದು ಫಿಲ್ಮ್ ಚೇಂಬರ್‌ಗೆ ಡಾ.ವಿಷ್ಣುವರ್ಧನ್ ಅಭಿಮಾನಿಗಳು (Vishnuvardhan Fans) ಮನವಿ ಸಲ್ಲಿಸಿದ್ದಾರೆ.
ರಾತ್ರೋ ರಾತ್ರಿ ವಿಷ್ಣು ಸಮಾಧಿ ತೆರವುಗೊಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದಾದಾ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಅವರ ಸ್ಮಾರಕ ಪುನರ್ ನಿರ್ಮಾಣ ಆಗಬೇಕು ಅಂತ ಒತ್ತಾಯಿಸಿ ವಿಷ್ಣು ಅಭಿಮಾನಿಗಳ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
ವಿಷ್ಣುವರ್ಧನ್ ಅಭಿಮಾನಿಗಳ ಮನವಿ ಸ್ವೀಕರಿಸಿದ ಫಿಲ್ಮ್ ಚೇಂಬರ್. ನಾವು ಕೂಡ ಸರ್ಕಾರದ (Government) ಗಮನಕ್ಕೆ ತರುತ್ತೇವೆ. ಈಗಾಗಲೇ ಸರ್ಕಾರ ಪರ್ಯಾಯವಾಗಿ ಮೈಸೂರಿನಲ್ಲಿ ಸ್ಮಾರಕ ಮಾಡಿದೆ. ಆದರೂ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ (Abhiman Studio) ಜಾಗ ಉಳಿಸಿಕೊಳ್ಳುವ ನಿಮ್ಮ ಪ್ರಯತ್ನಕ್ಕೆ ನಾವು ಕೂಡ ಸಾಥ್ ನೀಡುತ್ತೇವೆ. ನಾವು ನಿಮ್ಮ ಜೊತೆ ಇದ್ದೇವೆ. ಎಲ್ಲಾ ಕಲಾವಿದರು ಒಂದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್
ಧೀಮಂತ ನಾಯಕನ ವಿಚಾರದಲ್ಲಿ ಪದೇ ಪದೇ ಇದೆ ರೀತಿ ತಾರತಮ್ಯ ನಡೆಯುತ್ತಿದ್ದು, ಇದಕ್ಕೆ ಸೂಕ್ತ ನ್ಯಾಯ ಸಿಗದೇ ಇದ್ದರೆ ಕರ್ನಾಟಕದಾದ್ಯಂತ ತೀವ್ರ ಹೋರಾಟ ಮಾಡುತ್ತೇವೆ. ಇದಕ್ಕೆ ಸರ್ಕಾರ ಶೀಘ್ರವೇ ನ್ಯಾಯ ಒದಗಿಸಬೇಕು ಎಂದು ಫಿಲ್ಮ್ ಚೇಂಬರ್ ಮೂಲಕ ಮನವಿ ಮಾಡಿದ್ದಾರೆ. ರಾತ್ರೋ ರಾತ್ರಿ ಸಮಾಧಿ ನೆಲಸಮ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಭಿಮಾನಿಗಳು ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ತಾರ್ಕಿಕ ಅಂತ್ಯ ಸಿಗುತ್ತಾ ಅಂತಾ ಕಾದು ನೋಡ್ಬೇಕು. ಇದನ್ನೂ ಓದಿ: ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
– ನಂಬಿಕೆಯುಳ್ಳ ದೇವಸ್ಥಾನ ಒಡೆದಾಗ ಆಗುವಷ್ಟು ನೋವಾಗ್ತಿದೆ – ಸುದೀಪ್ ಕಂಬನಿ
ರಾತ್ರೋ ರಾತ್ರಿ ನಟ ಡಾ. ವಿಷ್ಣುವರ್ಧನ್ ಸಮಾಧಿಯನ್ನ (Vishnuvardhan Memorial) ತೆರವುಗೊಳಿಸಿರೋದ್ರಿಂದ ಅಭಿಮಾನಿಗಳ ಆಕ್ರೋಶ ಕಟ್ಟೆಯೊಡೆದಿದೆ. ವಿಷ್ಣು ಸಮಾಧಿ ಜಾಗವನ್ನ ಉಳಿಸಿಕೊಳ್ಳಲು ಅಭಿಮಾನಿಗಳು ಹೋರಾಟ ನಡೆಸುತ್ತಿದ್ದಾರೆ. ಅಭಿಮಾನಿಗಳ ಹೋರಾಟಕ್ಕೆ ಈಗ ನಟ ಕಿಚ್ಚ ಸುದೀಪ್ (Kichcha Sudeepa) ಕೂಡ ಕೈಜೋಡಿಸಿದ್ದಾರೆ.
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ…
ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಿಚ್ಚ ಸುದೀಪ್, ನಾವು ನಂಬಿಕೆಯಿಟ್ಟಂತಹ ದೇವಸ್ಥಾನ ಒಡೆದಾಗ ಎಷ್ಟು ನೋವಾಗುತ್ತದೋ ಅಷ್ಟೇ ನೋವು ಸಂಕಟ ನನಗಾಗಿದೆ. ವಿಷ್ಣು ಸ್ಮಾರಕ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲ. ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ-ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿಕೊಡಿ ಅಂತ ಮನವಿ ಮಾಡಿದ್ದಾರೆ.
ಸುದೀಪ್ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುವುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈಕೋರ್ಟ್ ಕೂಡ ಆದೇಶ ಮಾಡಿದೆ.
ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನವೊಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರ್ಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ.
ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್‌ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರು ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ.
ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.
– ಹುಟ್ಟು ಹಬ್ಬದ ದಿನವೇ ಸ್ಟೂಡಿಯೋ ಮಾಲೀಕರು-ವಿಷ್ಣು ಫ್ಯಾನ್ಸ್‌ನಡುವೆ ಶೀತಲ ಸಮರ
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ (Abhiman Studio Vishnuvardhan Memorial) ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ತಡೆಯೊಡ್ಡಿದ ಹಿನ್ನೆಲೆ ಅಭಿಮಾನ್ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಅಂಗವಾಗಿ ಸಾವಿರಾರು ಅಭಿಮಾನಿಗಳು (Vishnu Fans) ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೂರದೂರುಗಳಿಂದ ಬೆಳ್ಳಂಬೆಳಗ್ಗೆಯೇ ಬಂದು ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆಯೊಡ್ಡಿದ್ದಾರೆ. ಸ್ಟುಡಿಯೋ ಗೇಟ್ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಖಾರವಾಗಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್ ಸರ್ಜರಿ
ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿ ಸ್ಟುಡಿಯೋದಲ್ಲಿ ಯಾವುದೇ ಕಾರ್ಯಕ್ರಮ, ಸಂಭ್ರಮಾಚಾರಣೆ ಮಾಡದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಆದ್ರೆ ಅಭಿಮಾನಿಗಳು ಪೂಜೆ ಸಲ್ಲಿಸೋಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಇದರ ಹೊರತಾಗಿಯೂ ಕೋರ್ಟ್ ತಡೆಯಾಜ್ಞೆ ನೆಪ ಹೇಳಿ ಕೆಂಗೇರಿ ಪೋಲಿಸರು ಅನುಮತಿಗೆ ನಿರಾಕರಿಸಿದ್ದಾರೆ. ಇದನ್ನೂ ಓದಿ: PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ
ಇದರಿಂದ ಅಸಮಾಧಾನಗೊಂಡ ನೂರಾರು ಸಂಖ್ಯೆಯ ವಿಷ್ಣುವರ್ಧನ್ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋ ಗೇಟ್ ಬಳಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಹುಟ್ಟು ಹಬ್ಬದ ದಿನವೇ ಅಭಿಮಾನ್ ಸ್ಟೂಡಿಯೋ ಮಾಲೀಕರು ಮತ್ತು ವಿಷ್ಣು ಫ್ಯಾನ್ಸ್‌ನಡುವೆ ಶೀತಲ ಸಮರ ಮುಂದುವರಿದಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ: ದಶಕದ ಮೊದಲ ವಿಧಾನಸಭಾ ಚುನಾವಣೆಗೆ ಇಂದು ಮತದಾನ