ಬಿಗ್ ಬಾಸ್ ಸೀಸನ್ -12 (Bigg Boss Season 12) ಆರಂಭದಲ್ಲಿ ಆತಂಕ ಶುರುವಾಗಿದೆ. ಯಶಸ್ವಿಯಾಗಿ 11 ಸೀಸನ್ ಗಳನ್ನ ನಡೆಸಿಕೊಂಡು ಬರುತ್ತಿದ್ದ ರಿಯಾಲಿಟಿ ಶೋಗೆ ಬಿಗ್ ಶಾಕ್ ನೀಡಿದ್ದಾರೆ ಅಧಿಕಾರಿಗಳು. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮ ಉಲ್ಲಂಘನೆ ಆಗಿರುವ ಹಿನ್ನೆಲೆ ಬಿಗ್ ಬಾಸ್ ನಡೆಯುತ್ತಿದ್ದ ಜಾಗ ಅಂದರೆ ಜಾಲಿವುಡ್ ಸ್ಟುಡಿಯೋಗೆ (Jollywood Studio) ಬೀಗ ಜಡಿಯಲಾಗಿದೆ.
ಬಿಗ್ ಬಾಸ್ ಮನೆಗೆ ಬೀಗ ಜಡಿದ ಬಳಿಕ ಅಲ್ಲಿದ್ದ ಸ್ಪರ್ಧಿಗಳನ್ನ ಈಗಲ್ ಟನ್ ರೆಸಾರ್ಟ್ ಗೆ ಸ್ಥಳಾಂತರ ಮಾಡಲಾಯಿತು. ರಾತ್ರಿಯಿಂದಲೇ ವಾಸ್ತವ್ಯ ಹೂಡಿರುವ ಸ್ಪರ್ಧಿಗಳು ಬೆಳಗ್ಗೆ ರೆಸಾರ್ಟ್ ಬಾಲ್ಕನಿಯಲ್ಲಿ ನಿಂತು ಮಾತಾಡಿಕೊಳ್ಳುತ್ತಿದ್ದರು. ಈ ಘಟನೆಯ ಅರಿವಿಲ್ಲದೇ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. ಜೊತೆಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧನುಷ್ ಗೌಡ (Dhanush Gowda) ಹಾಗೂ ಅಭಿಷೇಕ್ (Abhishek) ಧೂಮಪಾನ ಮಾಡುತ್ತಾ ಮಾತ್ನಾಡುತ್ತಾ ನಿಂತಿರುವ ವಿಡಿಯೋ ಪಬ್ಲಿಕ್ ಟಿವಿಗೆ ಸಿಕ್ಕಿದೆ.
ಅಂದಹಾಗೆ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಡಿಸಿ 10ದಿನಗಳ ಕಾಲಾವಕಾಶ ನೀಡಿದ್ದಾರೆ. 10 ದಿನಗಳಲ್ಲಿ ಒಳಗಡೆ ಆದ ಲೋಪ-ದೋಷಗಳನ್ನ ಸರಿಪಡಿಸಿಕೊಳ್ಳುವಂತೆ ಸೂಚಿಸಿ 10ದಿನ ತಾತ್ಕಾಲಿಕ ರಿಲೀಫ್ ನೀಡಲಾಗಿದೆ. ಆದರೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ದೊರೆಯದ ಕಾರಣ ಬಿಗ್ ಬಾಸ್ ಮನೆಗೆ ಬಹುತೇಕ ಇಂದು (ಅ.8) ಶಿಫ್ಟ್ ಆಗೋದು ಡೌಟ್ ಎನ್ನಲಾಗ್ತಿದೆ.
ಗಾಯಕಿ ಪೃಥ್ವಿ ಭಟ್ (Prithwi Bhat) ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ (Father) ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:ಆ್ಯನಿವರ್ಸರಿ ದಿನವೇ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟ ವಿಷ್ಣು ವಿಶಾಲ್, ಜ್ವಾಲಾ ಗುಟ್ಟಾ ದಂಪತಿ
ಕಳೆದ ಎರಡು ದಿನದಿಂದ ಹವ್ಯಕ ಸಮುದಾಯದ ವಾಟ್ಸಪ್ ಗ್ರೂಪಿನಲ್ಲಿ ಮತ್ತೆ ಬೇರೆ ಬೇರೆ ಗ್ರೂಪ್‌ನಲ್ಲಿ ಮಗಳ ಮದುವೆ ಹಾಗೂ ನರಹರಿ ದೀಕ್ಷಿತ್ ಬಗ್ಗೆ ಆರೋಪಿಸಿ ಪೃಥ್ವಿ ತಂದೆ ಆಡಿಯೋವೊಂದನ್ನು ಹಂಚಿಕೊಂಡಿಕೊಂಡಿದ್ದರು. ಇದಕ್ಕೆ ಗಾಯಕಿ ಪ್ರತಿಕ್ರಿಯಿಸಿ, ನನ್ನ ಮದುವೆ ವಿಚಾರದಲ್ಲಿ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಯಾವುದೇ ಕೈವಾಡವಿಲ್ಲ. ಮದುವೆ ಆಗುವ ದಿನ ನರಹರಿ ದೀಕ್ಷಿತ್ ಅವರಿಗೆ ವಿಷಯ ತಿಳಿಸಿ, ಅವರಿಂದ ಆಶೀರ್ವಾದ ಪಡೆದೆವು. ಇದರಲ್ಲಿ ಅವರ ತಪ್ಪೇನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಅಂತ ಆಡಿಯೋ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಯಕಿ ಪೃಥ್ವಿ ಭಟ್ ಪ್ರೇಮವಿವಾಹ: ‘ಸರಿಗಮಪ’ ಜ್ಯೂರಿ ಮೇಲೆ ಆರೋಪ
ಮಾರ್ಚ್ 7ರಂದು ಅಭಿಷೇಕ್‌ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಪಾಲಕರಿಗೆ ತಿಳಿಸಿದ್ದೆ. ಅಂದು ತಂದೆ ತಾಯಿಯ ಭಯಕ್ಕೆ ಸುಮ್ಮನಾದೆ ಎಂದಿದ್ದಾರೆ. ಪ್ರೀತಿ ವಿಚಾರ ತಿಳಿಸಿದ ನಂತರ ನನಗೆ ಕಡಿವಾಣ ಹಾಕುವ ಪ್ರಯತ್ನ ಮಾಡಿದರು. ಯಾವುದೇ ಕಾರ್ಯಕ್ರಮ, ಶೋಗಳಿಗೂ ಕಳುಹಿಸಿ ಕೊಡಲು ನಿರಾಕರಿಸಿದರು. ನನ್ನನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಿದ್ದರಿಂದ ಅನಿವಾರ್ಯವಾಗಿ ಮನೆಯಿಂದ ಆಚೆ ಹೋಗಿ ಮದುವೆ ಆಗಿರೋದಾಗಿ ಆಡಿಯೋ ಮೂಲಕ ಉತ್ತರಿಸಿದ್ದಾರೆ ಪೃಥ್ವಿ ಭಟ್ ಹೇಳಿಕೊಂಡಿದ್ದಾರೆ.
ಪೃಥ್ವಿ ಭಟ್ ತಂದೆ ಹೇಳಿದ್ದೇನು?
ಜೀ ವಾಹಿನಿಯಲ್ಲೇ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೆಲಸ ಮಾಡುತ್ತಿರುವ ಅಭಿಷೇಕ್ (Abhishek) ಜೊತೆ ಮಗಳು ಪೃಥ್ವಿ ಮದುವೆಯಾಗಿದ್ದಕ್ಕೆ (Wedding) ಶಿವಪ್ರಸಾದ್ ಅಸಮಾಧಾನ ವ್ತಕ್ತಪಡಿಸಿದ್ದರು. ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ ಆಡಿಯೋ ಮೂಲಕ ಹೊರಹಾಕಿದ್ದರು.
ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆ ಹೇಳಿದ್ದಾರೆ.
ಹವ್ಯಕ ಸಮಾಜವು ನರಹರಿ ದೀಕ್ಷಿತ್ ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದರು. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದರು ಪೃಥ್ವಿ ತಂದೆ. ಆ ಆಡಿಯೋ ಈಗ ವೈರಲ್ ಆಗಿದೆ.
ಬಿಗ್ ಬಾಸ್ ಮನೆಯ 11ರ (Bigg Boss Kannada 11) ಆಟ ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಿದ್ದಾರೆ. ಇದೀಗ ಗೌತಮಿ (Gouthami) ಪತಿ ಅಭಿಷೇಕ್ (Abhishek Kasaragod) ಆಗಮಿಸಿದ್ದಾರೆ. ತಮ್ಮ ಮದುವೆ ಆ್ಯನಿವರ್ಸರಿಯನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ನಿನ್ನೆ (ಡಿ.31) ಭವ್ಯಾ, ತ್ರಿವಿಕ್ರಮ್ ಹಾಗೂ ರಜತ್ ಕುಟುಂಬ ಆಗಮಿಸಿತ್ತು. ಇಂದು ಮೋಕ್ಷಿತಾ, ಮಂಜು ಹಾಗೂ ಗೌತಮಿ ಕುಟುಂಬ ಆಗಮಿಸಿದೆ. ಮನೆಗೆ ಎಂಟ್ರಿ ಕೊಡುವಾಗಲೇ ಅಭಿಷೇಕ್ ಕೇಕ್ ಹಿಡಿದು ಬಂದರು. ಪತಿಯನ್ನು ನೋಡುತ್ತಿದ್ದಂತೆ ಗೌತಮಿ ಭಾವುಕರಾಗಿದ್ದಾರೆ. ಇದನ್ನೂ ಓದಿ:BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ
ಬಳಿಕ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಹಾಗೂ ಮೋಕ್ಷಿತಾ, ಮಂಜು ಕುಟುಂಬದ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ವೇಳೆ, ಪತಿ ಜೊತೆ ನಟಿ ತರಲೆ ಮಾಡಿದ್ದಾರೆ. ಆ ನಂತರ ಮಂಜು ತಂದೆಯ ಕಾಲಿಗೆ ಬಿದ್ದು ಗೌತಮಿ ದಂಪತಿ ಆಶೀರ್ವಾದ ಪಡೆದಿದ್ದಾರೆ. ಪತ್ನಿ ಗೌತಮಿಗೆ ಕಾಲಿಗೆ ಗೆಜ್ಜೆ ಮತ್ತು ಸರವನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ವೇಳೆ ಪತಿಯನ್ನು ತಬ್ಬಿ ಮುದ್ದಾಡಿದ್ದಾರೆ.
ಇನ್ನೂ ಅಭಿಷೇಕ್ ಕಾಸರಗೋಡು ಅವರನ್ನು 2018ರ ಡಿ.31 ಗೌತಮಿ ಮದುವೆಯಾದರು. ಚಿತ್ರರಂಗದಲ್ಲಿ ಕ್ಯಾಮರಾಮ್ಯಾನ್ ಆಗಿ ಗುರುತಿಸಿಕೊಂಡಿರುವ ಅಭಿಷೇಕ್ ಅವರು ಪುನೀತ್ ರಾಜ್‌ಕುಮಾರ್ ನಿರ್ಮಾಣದ ಮಾಯಾ ಬಜಾರ್, ಗ್ರಾಮಾಯಣ, ಕೃಷ್ಣ ಟಾಕೀಸ್ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಕೆಲಸ ಮಾಡಿದ್ದಾರೆ.
ಅಭಿಷೇಕ್ (Abhishek) ಪತ್ನಿ ಅಂಬರೀಶ್ ಸೊಸೆ ಅವಿವಾ ಬಿದಪ್ಪ (Aviva) ಗರ್ಭಿಣಿ ಎಂಬುದಾಗಿ ವದಂತಿ ಆಗಿತ್ತು. ಆದರೆ ಈ ವಿಚಾರವಾಗಿ ಅವರ ಕುಟುಂಬಕ್ಕೆ ಸಂಬಂಧಪಟ್ಟ ಯಾರೊಬ್ಬರೂ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಈ ನಡುವೆ ಇನ್ಸ್ಟಾದಲ್ಲಿ ಹೊಸ ಫೋಟೋವೊಂದನ್ನ ಹಂಚಿಕೊಂಡು ಹೊಸ ಸುದ್ದಿ ಕೊಡುವ ನಿರೀಕ್ಷೆ ಹುಟ್ಟುಹಾಕಿದ್ದಾರೆ ಸುಮಲತಾ ಸೊಸೆ ಅವಿವಾ.
ಗುಲಾಬಿ ಬಣ್ಣದ ರೇಷ್ಮೆ ಸೀರೆಯುಟ್ಟು ಅಭಿ ಪತ್ನಿ ಅವಿವಾ ತಮ್ಮ ಸೆಲ್ಫಿ ಫೋಟೋಗಳನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಇತ್ತೀಚೆಗೆ ಅವಿವಾ ಹೊಟ್ಟೆ ಕಾಣದಂತೆ ಫೋಟೋಗಳನ್ನ ಪೋಸ್ಟ್ ಮಾಡುವುದರಿಂದಲೇ ಗರ್ಭಿಣಿ ಅನ್ನುವ ಅನುಮಾನ ಹೆಚ್ಚಾಗುತ್ತಿರುವುದಕ್ಕೆ ಮುಖ್ಯ ಕಾರಣ. ಅವಿವಾ ಮುಖದ ಗ್ಲೋ ಗಮನಿಸಿದ ಫಾಲೋವರ್ಸ್ ಅಂತೂ `ಗ್ಲೋ ಸೂಪರ್’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಹೆಚ್ಚಾಗಿ ಮಾಡರ್ನ್ ಲುಕ್‌ನಲ್ಲಿ ಕಾಣಿಸ್ಕೊಳ್ಳುವ ಅವಿವಾ ಈಗ ಸಾಂಪ್ರದಾಯಿಕ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ಸಾಮಾನ್ಯ ಗೃಹಿಣಿಯಂತೆ ಸೀರೆಯುಟ್ಟು ಸಿಂಧೂರವಿಟ್ಟು ಸರಳವಾಗಿ ಕಾಣಿಸ್ಕೊಂಡಿರೋ ಅವಿವಾಗೆ ಲೈಕ್ಸ್ ಸುರಿಮಳೆ ಬರ್ತಿದೆ. ಇತ್ತೀಚೆಗೆ ಅವಿವಾ-ಅಭಿಷೇಕ್ ವಿದೇಶದಲ್ಲಿ ಟ್ರಿಪ್ ಹೋಗಿದ್ದ ವೀಡಿಯೋವನ್ನ ಶೇರ್ ಮಾಡಿದ್ದರು. ಆ ವೀಡಿಯೋದಲ್ಲೂ ಅವಿವಾ ಸೆಲ್ಫಿ ಹೊರತಾಗಿ ಹೊಟ್ಟೆ ಭಾಗವನ್ನ ಕಾಣಿಸಿರಲಿಲ್ಲ. ಹೀಗಾಗಿ ಅವಿವಾ ಗರ್ಭಿಣಿ ಅನ್ನೋ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.
ಅದೇನೇ ಆದ್ರೂ ಸೆಲೆಬ್ರಿಟಿಗಳು ಘೋಷಣೆ ಮಾಡೋವರೆಗೂ ಅವರ ಅಭಿಮಾನಿಗಳು ಕಾಯಲೇಬೇಕಾಗುತ್ತೆ. ಯಾಕೆಂದರೆ ಪ್ರೆಗ್ನೆನ್ಸಿ ರಿವೀಲ್‌ಗೆ ಪ್ಲ್ಯಾನ್ ಮಾಡಿಕೊಂಡ ಪ್ರಕಾರವೇ ಘೋಷಣೆ ಮಾಡಬೇಕು ಎಂದು ಅವರು ಕಾದಿರುತ್ತಾರೆ.
ಹೆಸರಾಂತ ಹಿರಿಯ ನಟ ಅಂಬರೀಶ್ (Ambarish) ಅವರ ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ಮತ್ತು ಅವರ ಕುಟುಂಬ ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಂಬಿ ಸಮಾಧಿ ಬಳಿ ಆಚರಿಸಿದರು. ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಬೆಳಗ್ಗೆ ಅಂಬರೀಶ್ ಸಮಾಧಿ ಬಳಿ ಆಗಮಿಸಿದ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ಅಸಂಖ್ಯಾತ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಸಮಾಧಿಗೆ ಪೂಜೆ ಸಲ್ಲಿಸಿದರು.
ಅಂಬರೀಶ್ ಅವರ ಹುಟ್ಟು ಹಬ್ಬದ ನಿಮಿತ್ತ ಮಂಡ್ಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ (Dixit Shetty) ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” (Bank of Bhagyalakshmi) ಚಿತ್ರದ ಅನಿಮೇಷನ್ ಟೀಸರ್ (Animation Teaser) ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ. ಅನಿಮೇಷನ್ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ “ಪ್ರೇಮಂ ಪೂಜ್ಯಂ” ಹಾಗೂ “ಕೌಸಲ್ಯ ಸುಪ್ರಜಾ ರಾಮ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ಹೆಸರಾಂತ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ “ಪಿನಾಕ” ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟೀಸರ್ ನ ಅನಿಮೇಷನ್ ವರ್ಕ್ ನಡೆದಿದೆ.
ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.
ಮಂಡ್ಯ (Mandya) ಲೋಕಸಭಾ ಕ್ಷೇತ್ರ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲ, ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ದಾಖಲೆ ಸೃಷ್ಟಿ ಮಾಡಿದ್ದ ನಟಿ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಂತೆ ಅವರು ನಾಳೆ ತಮ್ಮ ನಿರ್ಧಾರವನ್ನು ಪ್ರಕಟ ಮಾಡಲಿದ್ದಾರಂತೆ. ಈ ಕುರಿತಂತೆ ಅವರು ಫೇಸ್ ಬುಕ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್ (Darshan), ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ.
ರಂಗಿ ತರಂಗ, ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್, ಈ ಬಾರಿ ಮತ್ತೆ ಹೊಸ ತಂಡದೊಂದಗೆ ಹಾಸ್ಯ ಪ್ರಧಾನ ಚಿತ್ರ ನಿರ್ಮಿಸುತ್ತಿದ್ದಾರೆ. ದಿಯಾ ಖ್ಯಾತಿಯ ಹಾಗೂ ತೆಲುಗಿನ ದಸರಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ದೀಕ್ಷಿತ್ ಶೆಟ್ಟಿ (Dixit Shetty) ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಹಾಸ್ಯ ಪಾತ್ರದ ಹುಡುಕಾಟದಲ್ಲಿದ ದೀಕ್ಷಿತ್ ಶೆಟ್ಟಿ ಬಯಸಿದಂತೆ ಇದೇ ಮೊದಲ ಬಾರಿಗೆ ಹಾಸ್ಯ ಪ್ರಧಾನ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸುತ್ತಿದ್ದಾರೆ.
ದಿಯಾ ಹಾಗೂ ದಸರಾ ಅಭಿನಯಕ್ಕೆ ಹೆಸರು ಮಾಡಿದ ಮೇಲೆ ತಮಿಳು ,ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ, ಸದಾ ಹೊಸ ಪ್ರತಿಭೆಗೆ ಅವಕಾಶ ನೀಡುವ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಸಿನಿಮಾಗೆ ನವ ಹಾಗೂ ಪ್ರತಿಭಾವಂತ ನಿರ್ದೇಶಕ ಅಭಿಷೇಕ್ ಎಂ (Abhishek) ಅವರ ನಿರ್ದೇಶನ ಜವಾಬ್ದಾರಿ ನೀಡಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ (Bank of Bhagyalakshmi) ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ
ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಬಹುದೊಡ್ಡ ನವ ತಾರಾಗಣ ಚಿತ್ರದಲ್ಲಿದೆ. ನಾಯಕಿಯಾಗಿ ಬೃಂದಾ ಆಚಾರ್ಯ ನಟಿಸುತ್ತಿದ್ದಾರೆ. ತಾರಾಗಣದಲ್ಲಿ ಅಶ್ವಿನ್ ರಾವ್ ಹಾಸ್ಟೇಲ್ ಹುಡುಗರು ಖ್ಯಾತಿಯ ಶ್ರೀ ವತ್ಸ, ಶ್ರೇಯಸ್ ಶರ್ಮಾ , ವಿನುತ ಇನ್ನಿತರು ಇದ್ದಾರೆ. ಸದ್ಯ ಮೊದಲ ಹಂತದ ಚಿತ್ರೀಕರಣ ಬೆಂಗಳೂರು ಹಾಗೂ ಚಿತ್ರದುರ್ಗ ಸುತ್ತ ಮುತ್ತ ಮುಗಿಸಿದ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದು, ಜನವರಿ ಮೊದಲ ವಾರ ಆರಂಭವಾಗಲಿದೆ. ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗು, ತಮಿಳು, ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಮೇಲೆ ಬರಲಿದೆ.
ಮಂಡ್ಯದ ಗಂಡು ಅಂಬರೀಶ್ ಅವರು ಅಗಲಿ ಇಂದಿಗೆ ಐದು ವರ್ಷಗಳಾಗಿವೆ. ಅವರ ಪುಣ್ಯ ಸ್ಮರಣೆಯ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಅಂಬರೀಶ್ ಅವರ ಕುಟುಂಬ ಮತ್ತು ಅಭಿಮಾನಿಗಳು ಆಯೋಜಿಸಿದ್ದಾರೆ. ಬೆಳಗ್ಗೆ ಸುಮಲತಾ ಅಂಬರೀಶ್ (Sumalatha), ಅಭಿಷೇಕ್ ಅಂಬರೀಶ್ (Abhishek), ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವಾರು ಚಿತ್ರೋದ್ಯಮದ ಗಣ್ಯರು ಮತ್ತು ಅಂಬಿ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಬಂದು ಪೂಜೆ ಸಲ್ಲಿಸಿದ್ದಾರೆ.
ಅಂಬಿ ಸ್ಮರಣೆ (Punyasmarane) ಕುರಿತಂತೆ ಸುಮಲತಾ ಅಂಬರೀಶ್ (Ambarish) ಅವರು ಭಾವುಕ ಪೋಸ್ಟ್ ಮಾಡಿದ್ದಾರೆ. ‘ಇರುವುದೊಂದೇ ಜೀವನ ಅದೆಷ್ಟು ವ್ಯತ್ಯಾಸವಿದೆ. ಎಂದೆಂದಿಗೂ ನಮ್ಮ ನೆನಪುಗಳಲ್ಲಿ, ಸುಖ, ದುಃಖ, ನಗು, ಕಣ್ಣೀರು. ಪ್ರತಿಯೊಂದು ಕ್ಷಣವೂ ನೀವು ಬಿಟ್ಟ ನಿರ್ವಾತವನ್ನು ಅಳೆಯಲಾಗದು.ನಾನು ಆ ಪ್ರೀತಿಯನ್ನು ಕಾಪಿಟ್ಟುಕೊಳ್ಳುತ್ತೇನೆ, ನಷ್ಟವನ್ನಲ್ಲ. ಅನೇಕರನ್ನು ಒಳಗೊಂಡ ಜೀವನವನ್ನು ಎಂದಿಗೂ ಕಳೆದುಕೊಳ್ಳಲು ಆಗುವುದಿಲ್ಲ. ನೀವು ಶಾಶ್ವತವಾಗಿರುತ್ತೀರಿ.ನೀವೊಂದು ಜೀವ ಮೀರಿದ, ಒಂದು ಪ್ರಪಂಚ. ಇಂದು ನನಗೆ ಖಾತ್ರಿಯಿದೆ, ನೀವು ಅತ್ಯಂತ ಹೆಮ್ಮೆಯಿಂದ ಸಂಭ್ರಮದಲ್ಲಿರುವಿರಿ ಮತ್ತು ನಿಮ್ಮ ಆ ಪ್ರಪಂಚದಿಂದ ಅಭಿಷೇಕ್ ಅವರ ಚಲನಚಿತ್ರವನ್ನು ಆಶೀರ್ವದಿಸುತ್ತೀರಿ’ ಎಂದು ಬರೆದುಕೊಂಡಿದ್ದಾರೆ.
ಐದನೇ ವರ್ಷದ ಪುಣ್ಯಸ್ಮರಣೆಗೆ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತ್ತು ಈ ವರ್ಷ ಅಂಬರೀಶ್ ಅವರ ಹೆಸರಿನಲ್ಲಿ ಡಾ.ಅಂಬರೀಶ್ ಫೌಂಡೇಶನ್ ಕೂಡ ಶುರು ಮಾಡಲಾಗುತ್ತಿದ್ದು, ಹಲವಾರು ಜನಪರ ಕೆಲಸಗಳನ್ನು ಈ ಫೌಂಡೇಶನ್ ಮಾಡಲಿದೆ.
ನೆನ್ನೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಅನೇಕ ಕಲಾವಿದರು ಮತ್ತು ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇಂಥದ್ದೊಂದು ಸಂಗತಿಯನ್ನು ಹಂಚಿಕೊಳ್ಳಲು ತುಂಬಾ ನೋವಾಗುತ್ತೆ. ಆದರೂ, ಇಂತಹ ಡೀಪ್ ಫೇಕ್ (DeepFake) ವಿಡಿಯೋ ಬಗ್ಗೆ ಮಾತನಾಡಲೇಬೇಕಿದೆ. ಪ್ರಮಾಣಿಕವಾಗಿ ಹೇಳೋದಾದರೆ, ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದರ ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಈ ರೀತಿ ಆಗಿದ್ದರೆ ಅದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ಊಹಿಸಲೂ ಅಸಾಧ್ಯ. ಡೀಪ್ ಫೇಕ್ ಮಾಡುವವರು ಇತರರ ಮೇಲೆ ಪ್ರಭಾವ ಬೀರುವುದಕ್ಕಿಂತ ಮುಂಚೆ ಅಂಥದ್ದನ್ನು ತಡೆಗಟ್ಟಬೇಕಿದೆ ಎಂದು ಹೇಳಿದ್ದಾರೆ ರಶ್ಮಿಕಾ.
ರಶ್ಮಿಕಾ ವಿಡಿಯೋ
ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯಾ ಅಥವಾ ನಕಲಿಯಾ ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾಸ್ಕ್ ಮಾಡಿ ಹರಿಬಿಟ್ಟಿದ್ದರು ಕಿಡಿಕೇಡಿಗಳು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.
ಅಭಿಷೇಕ್ ಅವರು ಹಂಚಿಕೊಂಡ ಪೋಸ್ಟ್ ಅನ್ನು ಹೆಸರಾಂತ ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಕೂಡ ಶೇರ್ ಮಾಡಿದ್ದರು. ಇದು ಮಹಾಪರಾಧ. ತಕ್ಷಣವೇ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಮಿತಾಭ್ ಹೇಳಿದ್ದಾರೆ. ಈ ರೀತಿ ಯಾರಿಗೂ ಅಪಮಾನ ಮಾಡಬಾರದು ಎಂದು ಅವರು ತಿಳುವಳಿಕೆ ನೀಡಿದ್ದಾರೆ.