Tag: ಅಭಿಷೇಕ್

  • ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ ಗಾಳ – ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?

    ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ ಗಾಳ – ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?

    ಬೆಂಗಳೂರು: ಇವತ್ತಿನಿಂದ ಆಪರೇಷನ್ ಹಳೆ ಮೈಸೂರು ಚಾಪ್ಟರ್ 1 ಶುರುವಾಗಿದೆ. ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ ಗಾಳ ಹಾಕಿದ್ದು, ಮತ್ತೆ ಅಂಬಿ ಫ್ಯಾಮಿಲಿ ಮಂಡ್ಯ ಅಖಾಡಕ್ಕೆ ಇಳಿದರೆ ರಣಕಣ ಗ್ಯಾರಂಟಿ. ಹಾಗಾದರೆ ಸುಮಲತಾ ನಡೆ ಏನು? ಪುತ್ರನನ್ನ ರಾಜಕೀಯಕ್ಕೆ ಎಂಟ್ರಿ ಕೊಡಿಸ್ತಾರಾ ಎಂಬ ಕುತೂಹಲ ಇದೆ.

    ಮಂಡ್ಯದಲ್ಲಿ ಯುವ ನಾಯಕತ್ವ ಬರುತ್ತೆ ಎಂದು ಸಿಎಂ ಸುಳಿವು ಕೊಟ್ಟ ಬೆನ್ನಲ್ಲೇ ಸಕ್ಕರೆ ನಗರಿಯಲ್ಲೀಗ ಅಂಬಿ ನೆನಪು. ಅಂಬರೀಷ್ ಚುನಾವಣೆ ಅಖಾಡದಲ್ಲಿ ಇರ್ತಾರೆ ಅಂದರೆ ಅದರ ಖದರ್ ಬೇರೆಯೇ ಇರುತ್ತಿತ್ತು. ಅಂಬಿ ಮಂಡ್ಯದ ಗಂಡಾಗಿ ರಾಜಕೀಯದಲ್ಲಿ ಹಲವು ಏಳುಬೀಳುಗಳನ್ನು ಸಹ ಕಂಡಿದ್ದರು. ಇದೀಗ ಅಂಬರೀಷ್ ಫ್ಯಾಮಿಲಿಯನ್ನೇ ಬಿಜೆಪಿ ಕರೆತರಲು ನಾನಾ ರೀತಿಯ ತಂತ್ರಗಾರಿಕೆ ಶುರುವಾಗಿದೆ. ಅಭಿಷೇಕ್ ಕೂಡ ರಾಜಕೀಯಕ್ಕೆ ಎಂಟ್ರಿ ಮಾಡಿಸಲು ಬಿಜೆಪಿಯಿಂದ ಮಹಾ ಪ್ಲ್ಯಾನ್ ನಡೆದಿದೆ. ಮಂಡ್ಯದಲ್ಲಿ ಯುವ ನಾಯಕತ್ವ ಬರಲಿದೆ ಎಂದು ಸಿಎಂ ಹೇಳಿರುವುದರ ಹಿಂದೆ ಅಂಬರೀಷ್ ಅವರ ಮಗ ರಾಜಕೀಯ ಎಂಟ್ರಿ ಇದೆಯಾ ಎಂಬ ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಿಎಂ ಸಚಿವ ಸ್ಥಾನ ಲಾಭಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಚಾರ್ಯ

    sumalatha ambarish

    ಅಂದಹಾಗೆ ತಂದೆಯ ಜಾಗಕ್ಕೆ ಪುತ್ರನಿಗೆ ಪಟ್ಟಾಭಿಷೇಕ ಮಾಡಲು ಬಿಜೆಪಿ ಪ್ಲ್ಯಾನ್ ಮಾಡಿದ್ದರೂ ಬಿಜೆಪಿಯ ಆ ಆಪರೇಷನ್‍ಗೆ ಅಂಬಿ ಫ್ಯಾಮಿಲಿ ಒಪ್ಪಿಬಿಡುವುದು ಅಷ್ಟು ಸುಲಭವೂ ಅಲ್ಲ. ಮದುವೆ ವೇಳೆ ಸಿಎಂ ಜೊತೆ ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗಿದ್ದಾಗ ಬಿಜೆಪಿ ಆಹ್ವಾನವನ್ನು ಕೊಟ್ಟಿರೋದನ್ನ ಸುಮಲತಾ ಒಪ್ಪಿಕೊಂಡಿದ್ದರು. ಆದರೆ ಕ್ಷೇತ್ರದ ಕಾರ್ಯಕರ್ತರು, ಜನರ ಅಭಿಪ್ರಾಯ ಪಡೆದು ತೀರ್ಮಾನ ಎಂದಿದ್ದರು. ಇದನ್ನೂ ಓದಿ: ಸಾಹುಕಾರ ಪಾಪರ್ ಆಗ್ತಿದ್ದಾರೆ: ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ವಾಗ್ದಾಳಿ

    ಈ ನಡುವೆ ಮದ್ದೂರಿನಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆಗೆ ಕಳೆದ 2021 ಸೆಪ್ಟಂಬರ್‍ನಲ್ಲಿ ಮಾತನಾಡಿದ್ದ ಅಭಿಷೇಕ್ ಅಂಬರೀಷ್ ಅಭಿಮಾನಿಗಳ ಜೊತೆಯಲ್ಲಿ ಇರಬೇಕು ಎಂಬ ಆಸೆ ಇರುತ್ತೆ. ಇಲ್ಲಿ ತನಕ ಅಭಿಮಾನಿಗಳು ನಮ್ಮನ್ನ ಬೆಳೆಸಿದ್ದಾರೆ, ಮುಂದೆಯೂ ಬೆಳೆಸ್ತಾರೆ. ಮುಂದೇನಾಗುತ್ತೋ ನೋಡೋಣ ದೇವರ ಇಚ್ಛೆ ಎಂದು ಹೇಳುವ ಮೂಲಕ ಕುತೂಹಲ ಹುಟ್ಟು ಹಾಕಿದ್ದಾರೆ.

    ಒಟ್ಟಿನಲ್ಲಿ ಅಂಬಿ ಅಡ್ಡಾದಿಂದಲೇ ಆಪರೇಷನ್ ಓಲ್ಡ್ ಮೈಸೂರು ಶುರುವಾಗಿದ್ದು, ಇವತ್ತು ಮಂಡ್ಯದಿಂದ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಮುಂದೆ ಎರಡನೇ ಹಂತದಲ್ಲಿ ಅಭಿಷೇಕ್ ರಾಜಕೀಯ ಎಂಟ್ರಿಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

  • ರೆಬಲ್ ಸ್ಟಾರ್ ಅಂಬರೀಶ್ ಸಹೋದರಿಯ ಮಗ ಸಿನಿ ರಂಗಕ್ಕೆ ಎಂಟ್ರಿ

    ರೆಬಲ್ ಸ್ಟಾರ್ ಅಂಬರೀಶ್ ಸಹೋದರಿಯ ಮಗ ಸಿನಿ ರಂಗಕ್ಕೆ ಎಂಟ್ರಿ

    ನಿರ್ಮುಕ್ತ ಸಿನಿಮಾದ ಮೂಲಕ ರೆಬಲ್ ಸ್ಟಾರ್ ಅಂಬರೀಶ್ ಅವರ ಸಹೋದರಿಯ ಪುತ್ರ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ರಮ್ಯ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಮೂಲಕ ಅಭಿಷೇಕ್ ಸ್ಯಾಂಡಲ್ ವುಡ್ ಎಂಟ್ರಿ ಕೊಟ್ಟಿದ್ದಾರೆ. ಅಂಬರೀಶ್ ಪುತ್ರನ ಹೆಸರು ಮತ್ತು ಸಹೋದರಿಯ ಮಗನ ಹೆಸರು ಅಭಿಷೇಕ್ ಎಂದೇ ಇರುವುದು ವಿಶೇಷ. ಇದನ್ನೂ ಓದಿ : ಇನ್‌ಸ್ಟಾಗ್ರಾಮ್‌ ಪ್ರಭಾವಿ ಪಟ್ಟಿಯಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ – ದಕ್ಷಿಣದ ಸ್ಟಾರ್‌ಗಳಿಗೂ ಇಲ್ಲ ಪಟ್ಟ

    ನಿರ್ದೇಶಕರೆ, ಈ ಸಿನಿಮಾ ಕಥೆ, ಚಿತ್ರಕಥೆ ಬರೆದಿದ್ದು, ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ : ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಭಯಂಕರ ಬೇಡಿಕೆ ಇಟ್ಟ ಫ್ಯಾನ್ಸ್

    ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ. ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೊ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು. ಸಂಗೀತ ಕ್ಷೇತ್ರದಲ್ಲಿ ಅವರದೇ ಹೆಸರು. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ  ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು ಸುಮಲತಾ ಅಂಬರೀಶ್.  ಇದನ್ನೂ ಓದಿ : ಹಿಂದಿ ಬದಲು ಸಂಸ್ಕೃತ ರಾಷ್ಟ್ರ ಭಾಷೆಯಾಗಲಿ: ಕಂಗನಾ ರಣಾವತ್

    ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು.  ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು. ಇದೊಂದು ಮೆಡಿಕಲ್ ಕಾಲೇಜ್ ನಲ್ಲಿ ನಡೆಯುವ ಕಥೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ. ನಾನು ನಿರ್ದೇಶನ ಮಾಡಲು ಸಹಕಾರ ನೀಡಿದವರು ನನ್ನ ಪತಿ ಶ್ರೀನಿವಾಸ್. ಬಂದಿರುವ ಗಣ್ಯರಿಗೆ , ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕಿ ರಮ್ಯ ಶ್ರೀನಿವಾಸ್. ಹಾಡು ಬರೆದಿರುವ ಸ್ವಾಮಿ ಹಾಗೂ ಸಂಗೀತ ನೀಡಿರುವ ಸಾಮ್ರಾಟ್ “ನಿರ್ಮುಕ್ತ” ಚಿತ್ರದ ಬಗ್ಗೆ ಮಾತನಾಡಿದರು.

  • ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.

    ಶುಕ್ರವಾರ ಬೆಳಗ್ಗೆ 10:15ಕ್ಕೆ ದ್ವಿತೀಯ ಪಿಯುಸಿಯ ಮೊದಲ ಪರೀಕ್ಷೆ ಎದುರಿಸಲಿರುವ ಅಭಿಷೇಕ್ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಕಾಮರ್ಸ್ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮಹೇಶ್ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಸ್ಟಡೀಸ್ ಪರೀಕ್ಷೆ ಬರೆಯಲಿದ್ದಾನೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರು

    ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಅಶೋಕನಗರದ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಸುಪ್ರಭಾತ ಸೇವೆಗೆ ಅನುಮತಿ ನೀಡಿ- ಹಿಂದೂ ಮುಖಂಡರಿಂದ ಮತ್ತೊಂದು ಬೇಡಿಕೆ

     

  • ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ಗೆ 14 ದಿನ ನ್ಯಾಯಾಂಗ ಬಂಧನ

    ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ಗೆ 14 ದಿನ ನ್ಯಾಯಾಂಗ ಬಂಧನ

    ಹುಬ್ಬಳ್ಳಿ: ವಿವಾದಿತ ಪೋಸ್ಟ್ ಮಾಡಿ ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹುಬ್ಬಳ್ಳಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

    ವಿವಾದಿತ ಪೋಸ್ಟ್ ಮಾಡಿದ್ದ ಅಭಿಷೇಕ್ ಹಿರೇಮಠ ಪರ ವಕೀಲರ ಸಂಜಯ ಬಡಾಸಕರ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಭಿಷೇಕ್‍ನನ್ನು ಏಪ್ರಿಲ್ 30 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ನಾಳೆ ಸರ್ಕಾರದ ಪರ ವಕೀಲರು ಜಾಮೀನಿಗೆ ತಕರಾರು ಸಲ್ಲಿಸಲಿದ್ದಾರೆ.

    ಅಭಿಷೇಕ್ ಪಿಯುಸಿ 2 ನೇ ವರ್ಷದ ಪರೀಕ್ಷೆ ಬರೆಯಲಿರುವ ಕಾರಣ ನ್ಯಾಯಾಲಯದ ಗಮನಕ್ಕೆ ತಂದಿದ್ದೆವೆ, ನಾಳೆ ಈ ಬಗ್ಗೆ ಅರ್ಜಿ ಕೂಡ ಕೊಡಲಿದ್ದೇವೆ ಎಂದು ವಕೀಲರು ತಿಳಿಸಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    Hubballi Riot

    ಗಲಭೆ ಪ್ರಕರಣ ಸಂಬಂಧ ಖಾಕಿ ತನಿಖೆ ಇಂದು ಮತ್ತಷ್ಟು ಚುರುಕಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಗಲಾಟೆ ಮಾಡಿ ಎಸ್ಕೇಪ್ ಆಗಿದ್ದವರ ಹೆಡೆಮುರಿ ಕಟ್ಟೋಕೆ ಎರಡೂ ಟೀಂಗಳು ಕಾರ್ಯಾಚರಣೆ ನಡೆಸಿವೆ. ಗಲಭೆ ಮಾಡಿದ್ದ ಕೆಲ ಪುಂಡರು ಎಸ್ಕೇಪ್ ಆದ ಹಿನ್ನೆಲೆಯಲ್ಲಿ ಅವರ ಪತ್ತೆ ಕಾರ್ಯ ಚುರುಕಾಗಿದೆ.

  • ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

    ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

    ಬೆಂಗಳೂರು: ಚಂದನವನದ ಹಿರಿಯ ನಟ ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದರು.

    ಇಂದು ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯತಿಥಿ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಪತ್ನಿ ಸುಮಲತಾ ಅಂಬರೀಶ್ ಅವರು, ಅಂಬರೀಶ್ ಇಲ್ಲವಾಗಿ 3 ವರ್ಷವಾಗಿದೆ. ಅವರ ಹೆಸರಲ್ಲಿ ಏನೂ ಮಾಡಿಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿದೆ. ಸ್ಮಾರಕ ಸೇರಿ ಎಲ್ಲೂ ಅಂಬರೀಶ್ ಅವರ ಹೆಸರು ಕೇಳಿಬಂದಿಲ್ಲ ಎಂದು ಅಭಿಮಾನಿಗಳ ಬೇಸರದ ಬಗ್ಗೆ ಹೇಳಿದರು. ಇದನ್ನೂ ಓದಿ: ಕಾವೇರಿದ ಮಂಡ್ಯ ಎಂಎಲ್‍ಸಿ ಚುನಾವಣೆ – ಯಾರಿಗೆ ಸಿಗುತ್ತೆ ಸುಮಲತಾ ಬೆಂಬಲ?

    ಅಭಿಮಾನಿಗಳಿಗೆ ಈ ಬಗ್ಗೆ ನೋವಿದೆ. ಅದಕ್ಕೆ ಹೋರಾಟ ಮಾಡ್ತೀವಿ ಅಂತಿದ್ದಾರೆ. ಆದರೆ ಹೋರಾಟದ ಸಮಯ ಇದಲ್ಲ ಎಂದು ಹೇಳಿದ್ದೀನಿ. ಅಪ್ಪು ಅಗಲಿಕೆಯ ನೋವು ಎಲ್ಲರನ್ನೂ ಕಾಡಿದೆ. ಈ ಸಮಯದಲ್ಲಿ ಹೋರಾಟ ಮಾಡಬಾರದು ಎಂದಿದ್ದೇನೆ ಎಂದು ತಿಳಿಸಿದರು.

    ಅಂಬರೀಶ್ ಅವರು ಯಾವ ಪ್ರಶಸ್ತಿ, ಹೆಸರನ್ನು ಕೇಳಿ ಪಡೆದಿರಲಿಲ್ಲ. ನಾವೂ ಸಹ ಅಂಬರೀಶ್ ಅವರಿಗೆ ಪ್ರಶಸ್ತಿ ಕೊಡಿ, ಅದು ಮಾಡಿ, ಇದು ಮಾಡಿ ಎಂದು ಕೇಳಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಂಬಿ ತುಂಬಾ ಒಳ್ಳೇಯ ಸ್ನೇಹಿತರಾಗಿದ್ದರು. ಈಗ ಅವರೇ ಸಿಎಂ ಆಗಿರೋದ್ರಿಂದ ಮಾಡ್ತಾರೆ ಅನ್ನೋ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ಮಗ ಅಭಿಷೇಕ್ ಹಾಗೂ ಸುಮಲತಾ ಅಂಬರೀಶ್ ಅಂಬರೀಶ್ 3ನೇ ಪುಣ್ಯತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ.

  • ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ

    ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ

    ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

    ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಆಪ್ತ ಹನಕೆರೆ ಶಶಿಕುಮಾರ್ ಅವರ ಮುಕ್ಕಾಲು ಎಕರೆ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಲು ಭೂಮಿ ಪೂಜೆ ನೆರವೇರಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

    ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿಯೇ ಮನೆ ನಿರ್ಮಾಣ ಮಾಡಿ ವಾಸವಿರುವುದಾಗಿ ಮಾತು ನೀಡಿದ್ದರು. ಅದರಂತೆ ಮುಕ್ಕಾಲು ಎಕರೆ ಜಮೀನು ಖರೀದಿಸಲಾಗಿದ್ದು, ಇನ್ನು 6 ತಿಂಗಳಲ್ಲಿಯೇ ಮನೆ ನಿರ್ಮಾಣ ಪೂರ್ಣಗೊಳಿಸಲು ಸಜ್ಜಾಗಿದ್ದಾರೆ. ಈಗಾಗಲೇ ಮಂಡ್ಯ ನಗರದ ಚಾಮುಂಡೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿರುವ ಸುಮಲತಾ ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

    6-7 ತಿಂಗಳಲ್ಲಿ ಮನೆ ನಿರ್ಮಿಸಿ ಅಲ್ಲಿಂದಲೇ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸುವ ಚಿಂತನೆ ನಡೆಸಲಾಗುತ್ತಿದೆ. ಸ್ವಂತ ಮನೆ ನಿರ್ಮಾಣದಲ್ಲಿ ಪುತ್ರ ಹಾಗೂ ನಟ ಅಭಿಷೇಕ್ ಅಂಬರೀಶ್ ರಾಜಕೀಯ ಭವಿಷ್ಯ ಅಡಗಿದೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಹಲವು ದಿನಗಳ ಹಿಂದೆ ಮದ್ದೂರಿಗೆ ಭೇಟಿ ನೀಡಿದ್ದ ಅಭಿಷೇಕ್ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಮದ್ದೂರಿನಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ

    ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟೂರು ಕೂಡ ಮದ್ದೂರಿನ ದೊಡ್ಡರಸಿನಕೆರೆ ಗ್ರಾಮವಾಗಿದ್ದು, ತಂದೆ ಹುಟ್ಟೂರು ಕ್ಷೇತ್ರದಿಂದಲೇ ಮಗನ ಸ್ಪರ್ಧೆಗೆ ಸಿದ್ಧತೆ ನಡೆಸಲು ಮನೆ ಕಟ್ಟುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‍ನನ್ನು ಕಣಕ್ಕಿಸಲು ಸುಮಲತಾ ರಾಜಕೀಯ ಸಿದ್ಧತೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕಾರಣಕ್ಕೆ ಜಿಲ್ಲಾಕೇಂದ್ರ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡದೆ ಹನಕೆರೆಯಲ್ಲೇ ಸ್ವಂತ ಮನೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಸುಮಲತಾ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದ್ದರೂ ಇದರ ಹಿಂದೆ ರಾಜಕೀಯ ತಂತ್ರವೂ ಅಡಗಿದೆ.

  • ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ – ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡದಿಂದ ಗಿಫ್ಟ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ – ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡದಿಂದ ಗಿಫ್ಟ್

    – ಪ್ರೀತಿಯ ಸಹೋದರನಿಗೆ ದರ್ಶನ್ ವಿಶ್

    ಬೆಂಗಳೂರು: ದಿವಂಗತ ಹಿರಿಯ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡದಿಂದ ಸರ್ಪ್ರೈಸ್ ಗಿಫ್ಟ್ ನೀಡಿದೆ.

    ಅಭಿಷೇಕ್ ಅಂಬರೀಶ್ 27ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಜೆಪಿ ನಗರದ ನಿವಾಸದಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಅಭಿಮಾನಿಗಳು ನೆಚ್ಚಿನ ನಟನಿಗಾಗಿ ದೊಡ್ಡ ಕೇಕ್ ತಯಾರಿಸಿ ಅಂಬಿಯ ಮುಂದೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆಯೇ ಬೆಳಗ್ಗೆ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವ ಮೂಲಕ ಅಭಿಷೇಕ್ ಸಂಭ್ರಮಿಸಿದ್ದಾರೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್ ಮೂಲಕ ಅಭಿಷೇಕ್‍ಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. “ನನ್ನ ಪ್ರೀತಿಯ ತಮ್ಮ ಅಭಿಷೇಕ್‍ಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ. ಬೆಸ್ಟ್ ಆಫ್ ಲಕ್ ಫಾರ್ ಬ್ಯಾಡ್ ಮ್ಯಾನರ್ಸ್” ಎಂದು ಶುಭಾಶಯ ಕೋರಿದ್ದಾರೆ.

    ಮತ್ತೊಂದೆಡೆ ಅಭಿಷೇಕ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್ ಮಾಡುವ ಮೂಲಕ ಉಡುಗೊಡೆ ನೀಡಿದೆ. ಈ ಸಿನಿಮಾಗೆ ನಿರ್ದೇಶಕ ಸೂರಿ ಆಕ್ಷನ್ ಕಟ್ ಹೇಳಿದ್ದು, ಕೆ.ಎಂ.ಸುದೀರ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ನಟ ಅಭಿಷೇಕ್‍ಗೆ ಇದು ಎರಡನೇ ಸಿನಿಮಾವಾಗಿದೆ. ಈ ಹಿಂದೆ ‘ಅಮರ್’ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

  • ಯಾವತ್ತೂ ಚಿರು ಕುಟುಂಬದೊಂದಿಗೆ ನಾವಿರುತ್ತೇವೆ: ಅಭಿಷೇಕ್

    ಯಾವತ್ತೂ ಚಿರು ಕುಟುಂಬದೊಂದಿಗೆ ನಾವಿರುತ್ತೇವೆ: ಅಭಿಷೇಕ್

    ಬೆಂಗಳೂರು: ನಾವು ಯಾವತ್ತೂ ಚಿರಂಜೀವಿ ಅವರ ಕುಟುಂಬದ ಜೊತೆಗೆ ಇರುತ್ತೇವೆ. ಅವರ ಜೊತೆ ಇರುವುದು ನಮ್ಮ ಕರ್ತವ್ಯ ಎಂದು ಅಭಿಷೇಕ್ ಅಂಬರೀಶ್ ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ತುಂಬಾನೇ ದುಃಖವಾಗುತ್ತಿದೆ. ಮೊನ್ನೆಯವರೆಗೂ ಚೆನ್ನಾಗಿ ಮಾತನಾಡಿ, ಎಲ್ಲರ ಜೊತೆಯೂ ಫೋನಿನಲ್ಲಿ ಮಾತಾಡಿದ್ದಾರೆ. ಸ್ನೇಹಿತರೆಲ್ಲ ಒಟ್ಟಿಗೆ ಸೇರಿ ಹೊರಗೆ ಹೋಗಿ ಊಟ ಮಾಡಿರುವವರಿಗೆ ಈ ರೀತಿ ಆಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ನಿಜವಾಗಿಯೂ ನಂಬಲು ಸಾಧ್ಯವಾಗುತ್ತಿಲ್ಲ ಎಂದರು.

    ಹಣೆ ಬರಹದಲ್ಲಿ ಏನು ಬರೆದಿರುತ್ತೋ ಗೊತ್ತಿಲ್ಲ. ಆದರೆ ಅನ್ಯಾಯ ಆಗಿದೆ ಎಂದು ನನಗೆ ಅನ್ನಿಸುತ್ತದೆ. ಮೇಘನಾ, ಧ್ರುವರನ್ನು ನೋಡಿದರೆ ತುಂಬಾನೇ ಹೊಟ್ಟೆ ಉರಿಯುತ್ತೆ. ಒಟ್ಟಿಗೆ ಬೆಳೆದು, ಇಷ್ಟು ವರ್ಷ ಒಟ್ಟಿಗೆ ಇದ್ದು, ಎಷ್ಟೋ ಅನುಭವಗಳನ್ನು ಒಟ್ಟಿಗೆ ಹಂಚಿಕೊಂಡಿದ್ದೇವೆ. ಈಗ ನಮ್ಮ ಸ್ನೇಹಿತನಾದ ಚಿರಂಜೀವಿ ಇಂದು ನಮ್ಮ ಜೊತೆ ಇಲ್ಲ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಈ ದುಃಖವನ್ನು ಭರಿಸಲು ಅವರ ಕುಟುಂಬಕ್ಕೆ ದೇವರು ಶಕ್ತಿ ಕೊಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಅಭಿಷೇಕ್ ಚಿರು ಸಾವಿಗೆ ಸಂತಾಪ ಸೂಚಿಸಿದರು.

    ನಾವು ಎಷ್ಟೇ ಸಮಾಧಾನ ಮಾಡಿದರೂ ಅಷ್ಟೆ, ಆ ನೋವು ಕಡಿಮೆಯಾಗಲ್ಲ. ಈ ವಯಸ್ಸಿನಲ್ಲೇ ಮೇಘನಾ ಈ ನೋವನ್ನು ಅನುಭವಿಸಬಾರದಿತ್ತು. ಈ ಬಗ್ಗೆ ಯೋಚನೆ ಮಾಡಿದರೆ ಮನ್ನಸ್ಸಿಗೆ ತುಂಬಾ ನೋವಾಗುತ್ತದೆ. ನಾವು ಯಾವತ್ತೂ ಅವರ ಕುಟುಂಬದ ಜೊತೆಗೆ ಇರುತ್ತೇವೆ. ಅವರ ಜೊತೆ ಇರುವುದು ನಮ್ಮ ಕರ್ತವ್ಯವಾಗಿದೆ. ಇಡೀ ಚಿತ್ರರಂಗದಲ್ಲಿದ್ದವರ ಜೊತೆ ಚಿರಂಜೀವಿ ಒಳ್ಳೆಯ ಸ್ನೇಹ ಇಟ್ಟುಕೊಂಡಿದ್ದರು. ಯಾರೊಬ್ಬರನ್ನು ಅವರು ನಿಷ್ಠುರ ಮಾಡಿಲ್ಲ. ಚಿರುವನ್ನು ಯಾರು ಬೇರೆ ಎಂದುಕೊಂಡಿರಲಿಲ್ಲ ಎಂದು ದುಃಖದಿಂದ ಮಾತನಾಡಿದರು.

  • ಅಭಿಮಾನಿಗಳು ಯಾವತ್ತೂ ನಮ್ಮ ಮನಸ್ಸಲ್ಲೇ ಇರುತ್ತಾರೆ: ಸುಮಲತಾ

    ಅಭಿಮಾನಿಗಳು ಯಾವತ್ತೂ ನಮ್ಮ ಮನಸ್ಸಲ್ಲೇ ಇರುತ್ತಾರೆ: ಸುಮಲತಾ

    – ಮಗನ 2ನೇ ಚಿತ್ರದ ಪೋಸ್ಟರ್ ಲಾಂಚ್

    ಬೆಂಗಳೂರು: ಪ್ರತಿವರ್ಷನೂ ನಮ್ಮ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿ ಜೈಕಾರ ಹಾಕುತ್ತಿದ್ದರು. ಕೇಕ್, ಹೂವಿನ ಹಾರ ತಂದು ಸಂಭ್ರಮಿಸುತ್ತಿದ್ದರು. ಆದರೆ ಈಗ ಅದೆಲ್ಲಾ ಮನಸ್ಸಿನಲ್ಲಿದೆ. ಈ ವರ್ಷ ಅಭಿಮಾನಿಗಳು ಬರಲು ಸಾಧ್ಯವಾಗಿಲ್ಲ. ಆದರೆ ಅಭಿಮಾನಿಗಳು ಯಾವತ್ತೂ ನಮ್ಮ ಮನಸ್ಸಿನಲ್ಲಿಯೇ ಇರುತ್ತಾರೆ ಎಂದು ದಿವಂಗತ ಅಂಬರೀಶ್ ಪತ್ನಿ ಸುಮಲತಾ ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಅಭಿಮಾನಿಗಳು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಆದರೆ ನಿನ್ನೆಯಿಂದಲೇ ಸಾವಿರಾರು ಜನರು ಸೋಶಿಯಲ್ ಮೀಡಿಯಾ, ಫೋನ್ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಆದ್ದರಿಂದ ಅಭಿಮಾನ ಅನ್ನೋದು ಎಲ್ಲೂ ಹೋಗಿಲ್ಲ. ಈ ವರ್ಷ ಅಭಿಮಾನಿಗಳು ಇಂತಹ ಪರಿಸ್ಥಿತಿಯಲ್ಲಿ ಬರಲು ಸಾಧ್ಯವಾಗಿಲ್ಲ. ಪ್ರತಿವರ್ಷನೂ ನಮ್ಮ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿ ಜೈಕಾರ ಹಾಕುತ್ತಿದ್ದರು. ಕೇಕ್, ಹೂವಿನ ಹಾರ ತಂದು ಸಂಭ್ರಮಿಸುತ್ತಿದ್ದರು. ಆದರೆ ಈಗ ಅದೆಲ್ಲಾ ಮನಸ್ಸಿನಲ್ಲಿದೆ. ಅದು ಮರೆಯಲಾಗದ ಕ್ಷಣ, ಆ ನೆನಪು ಎಲ್ಲೂ ಹೋಗಿಲ್ಲ ಎಂದರು.

    ಅಂಬಿ ಹುಟ್ಟುಹಬ್ಬದ ದಿನವೇ ಅಭಿಷೇಕ್ 2ನೇ ಸಿನಿಮಾ ಫಸ್ಟ್ ಲುಕ್ ಲಾಂಚ್ ಆಗಿದ್ದು ಸಂತೋಷವಾಗುತ್ತಿದೆ. ಒಂದು ವರ್ಷದಿಂದ ಅವರ ಸಿನಿಮಾದ ಬಗ್ಗೆ ಅಭಿಮಾನಿಗಳು ಕಾಯುತ್ತಿದ್ದರು. ಮೊದಲ ಸಿನಿಮಾ ಲವ್ ಸ್ಟೋರಿ ಆಗಿತ್ತು. ಹೀಗಾಗಿ ಬೇರೆ ರೀತಿಯ ಪಾತ್ರ ಮಾಡುವಂತಹ ಕಥೆಯನ್ನ ಹುಡುಕುತ್ತಿದ್ದೆವು. ಈ ಬಾರಿ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಸೂರಿ ಅವರು ತುಂಬಾ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹೀಗಾಗಿ ಎರಡನೇ ಸಿನಿಮಾ ಸೂರಿ ಜೊತೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ ಎಂದು ಮಗನ ಸಿನಿಮಾ ಬಗ್ಗೆ ಮಾತನಾಡಿದರು.

    ಸುಮಲತಾ ಅವರು ಮಗ ಅಭಿಷೇಕ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಪೋಸ್ಟರ್ ಲಾಂಚ್ ಮಾಡಿದ್ದಾರೆ. ರೆಬೆಲ್‍ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಬಿಡುಗಡೆಯಾಗಿರುವ ಪೋಸ್ಟರಿನಲ್ಲಿ ಅಭಿಷೇಕ್ ಗನ್ ಹಿಡಿದುಕೊಂಡು ಸ್ಟೈಲಿಶ್ ಆಗಿ ಖದರ್ ಪೋಸ್ ಕೊಟ್ಟಿದ್ದಾರೆ.

    ಈ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದು, ಸುಧೀರ್ ಕೆ.ಎಂ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್‍ನಲ್ಲಿ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್ ಲುಕ್ ವಿಡಿಯೋ ರಿಲೀಸ್ ಆಗಿದೆ.

    ನಟ ದಿವಂಗತ ಅಂಬರೀಶ್ ಹುಟ್ಟುಹಬ್ಬ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸಮಾಧಿ ಬಳಿ ಹೂವಿನ ಅಲಂಕಾರ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಪತ್ನಿ ಸುಮಾಲತಾ, ಮಗ ಅಭಿಷೇಕ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಸಚಿವ ಗೋಪಾಲಯ್ಯ, ನಟ ದೊಡ್ಡಣ್ಣ ಸೇರಿ ಕುಟುಂಬದ ಅಪ್ತರು ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

  • ಪ್ರೀತಿಯ ಹೃದಯವಂತನ ಸ್ಮರಣೆ- ಅಂಬಿಗೆ ಸುಮಲತಾ ಶುಭಾಶಯ

    ಪ್ರೀತಿಯ ಹೃದಯವಂತನ ಸ್ಮರಣೆ- ಅಂಬಿಗೆ ಸುಮಲತಾ ಶುಭಾಶಯ

    – ನಿಮ್ಮೊಂದಿಗೆ ಕೆಲವು ಹೆಜ್ಜೆ ಹಾಕಿರೋದಕ್ಕೆ ಹೆಮ್ಮೆ
    – ನಿಮ್ಮ ಸ್ಮರಣೆಯೇ ಅಮರ ಪ್ರೀತಿ

    ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುಗದ ಕರ್ಣ’ ಅಂಬರೀಶ್ ಅವರ ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ.

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ.

    ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ ಅವರನ್ನು ನಮ್ಮಿಂದ ಶಾಶ್ವತವಾಗಿ ದೂರ ಮಾಡಿದೆ. ಅವರ ಹೃದಯ ಬ್ರಹ್ಮಾಂಡದಷ್ಟೇ ತುಂಬಾ ವಿಶಾಲವಾಗಿತ್ತು. ಜೀವನದಲ್ಲಿ ಅವರೊಂದಿಗೆ ನಾನು ಕೆಲವು ಹೆಜ್ಜೆಯನ್ನು ಹಾಕಿದ್ದಕ್ಕೆ ನನಗೆ ಹೆಮ್ಮೆ ಇದೆ” ಎಂದು ಪ್ರೀತಿಯಿಂದ ಅಂಬರೀಶ್ ಬಗ್ಗೆ ಬರೆದುಕೊಂಡಿದ್ದಾರೆ. ಜೊತೆಗೆ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿ ಮೂರು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, “ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.

    ಇನ್ನೂ ರೆಬೆಲ್‍ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ. ಇಂದು ಬೆಳಗ್ಗೆ 9.45ಕ್ಕೆ ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್‍ನಲ್ಲಿ ದುನಿಯಾ ಸೂರಿ ನಿರ್ದೇಶನದ, ಸುಧೀರ್ ಕೆ.ಎಂ ನಿರ್ಮಾಣದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್ ಲುಕ್ ವಿಡಿಯೋ ರಿಲೀಸ್ ಆಗುತ್ತಿದೆ.