Tag: ಅಮಿತ್ ಮಾಳವಿಯಾ

  • ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ಮುಂಬೈ: ಕಾಂಗ್ರೆಸ್ (Congress) ಪಕ್ಷದ ಹಿರಿಯ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಹಾಗೂ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ (Bharat Jodo Nyay Yatre) ಕುರಿತು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ವ್ಯಂಗ್ಯವಾಡಿದ್ದಾರೆ.

    ಮಿಲಿಂದ್ ದಿಯೋರಾ ಅವರ ರಾಜೀನಾಮೆ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಹುಲ್ ಗಾಂಧಿ (Rahul Gandhi) ಮೊದಲು ತಮ್ಮ ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಬೇಕು. ನಂತರ ನ್ಯಾಯ ಯಾತ್ರೆ ಮಾಡಲಿ ಎಂದು ಹೇಳಿದ್ದಾರೆ.

    ಮಿಲಿಂದ್‌ ಹೇಳಿದ್ದೇನು..?: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಹಿರಿಯ ನಾಯಕ ಮಿಲಿಂದ್ ದಿಯೋರಾ, ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ನಾನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಹಾಗೂ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: 55 ವರ್ಷಗಳ ಬಾಂಧವ್ಯ ಅಂತ್ಯಗೊಳಿಸಿದ್ದೇನೆ – ಕಾಂಗ್ರೆಸ್‌ಗೆ ಮಿಲಿಂದ್‌ ದಿಯೋರಾ ಗುಡ್‌ಬೈ

    ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ (Manipura) ಮಹಾರಾಷ್ಟ್ರದ (Maharastra) ಕಡೆಗೆ ರಾಗಾ ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್‍ನಿಂದ ಮುಂಬೈಗೆ ಯಾತ್ರೆ ಪ್ರಯಾಣಿಸಲಿದೆ. ಇದೇ ಹೊತ್ತಲ್ಲಿ ಮಿಲಿಂದ್ ದಿಯೋರಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗುತ್ತಾರೆ ಎಂಬ ಗುಮಾನಿ ಇದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

  • ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ನವದೆಹಲಿ: ಕೇರಳದಲ್ಲಿ ಅಸ್ತಿತ್ವದಲ್ಲಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷವನ್ನು ಜಾತ್ಯಾತೀತ ಪಕ್ಷ (Secular Party) ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gamdhi) ಬಣ್ಣಿಸಿರುವುದು ಬಿಜೆಪಿ (BJP) ಆಕ್ರೋಶಕ್ಕೆ ಕಾರಣವಾಗಿದೆ.

    ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣವಾಗಿ ಲೌಕಿಕವಾದದ ಪಕ್ಷವಾಗಿದೆ. ಮುಸ್ಲಿಂ ಲೀಗ್‌ನಲ್ಲಿ ನಾನ್ ಸೆಕ್ಯುಲರ್ ಅಂಶಗಳು ಇಲ್ಲ ಎಂದು ತಿಳಿಸಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.

    ನಮ್ಮ ದೇಶ ಧಾರ್ಮಿಕವಾಗಿ ಬೇರ್ಪಡಲು ಕಾರಣಕರ್ತರಾದ ಮಹ್ಮದ್ ಆಲಿ ಜಿನ್ನಾಗೆ ಸಂಬಂಧಿಸಿದ ಮುಸ್ಲಿಂ ಲೀಗ್ ಅನ್ನು ರಾಹುಲ್ ಗಾಂಧಿ ಜಾತ್ಯಾತೀತ ಎನ್ನುತ್ತಿದ್ದಾರೆ. ಅವರ ಮಾತುಗಳಲ್ಲಿ ಕಪಟತ್ವವೇ ತುಂಬಿದೆ. ವಯನಾಡ್ ಸಂಸದ ಸ್ಥಾನವನ್ನು ಮರುಸ್ಥಾಪಿಸಿಕೊಳ್ಳಲು ಹೀಗೆಲ್ಲಾ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ರೈಲಿಗೆ ಯಶವಂತಪುರದಿದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಇದಕ್ಕೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿರುಗೇಟು ನೀಡಿದ್ದಾರೆ. ಏನ್ ಬ್ರದರ್ ಓದಿಕೊಂಡಿಲ್ವಾ? ಕೇರಳದ ಮುಸ್ಲಿಂ ಲೀಗ್‌ಗೂ, ಜಿನ್ನಾ ಸ್ಥಾಪಿಸಿದ್ದ ಮುಸ್ಲಿಂ ಲೀಗ್‌ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. 2012ರಲ್ಲಿ ನಾಗ್ಪುರ ಪಾಲಿಕೆಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ ಇದೇ ಐಯುಎಂಎಲ್ ಜೊತೆ ಕೈಜೋಡಿಸಿರಲಿಲ್ವಾ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಅಮಿತ್ ಮಾಳವೀಯ ಸುಳ್ಳು ಸುದ್ದಿ ಹಬ್ಬಿಸುವ ವ್ಯಕ್ತಿ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

  • ಜೋಡೋ ಯಾತ್ರೆ ವೇಳೆ ಮಾಜಿ ಸಚಿವರಿಂದ ಶೂ ಕಟ್ಟಿಸಿಕೊಂಡ ರಾಗಾ – ಬಿಜೆಪಿ ಆರೋಪ

    ಜೋಡೋ ಯಾತ್ರೆ ವೇಳೆ ಮಾಜಿ ಸಚಿವರಿಂದ ಶೂ ಕಟ್ಟಿಸಿಕೊಂಡ ರಾಗಾ – ಬಿಜೆಪಿ ಆರೋಪ

    ನವದೆಹಲಿ: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕೇಂದ್ರ ಮಾಜಿ ಸಚಿವರೊಬ್ಬರ ಕೈಯಿಂದ ಶೂ ಕಟ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿ (BJP) ಆರೋಪಿಸಿದೆ.

    ಜೋಡೋ ಯಾತ್ರೆ ವೇಳೆ ಮಾಜಿ ಸಚಿವ ಜೀತೇಂದ್ರ ಸಿಂಗ್ ಅಹಿರ್ವಾರ್ (Jitendra Singh Ahirwar) ಅವರು ರಾಹುಲ್ ಗಾಂಧಿ ಅವರ ಕಾಲಿನ ಬಳಿ ಮಂಡಿಯೂರಿ ಶೂ ಕಟ್ಟಿಸಿಕೊಳ್ಳುವಂತೆ ಭಾಸವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಮಾಜಿ ಸಚಿವರ ಕೈಯಿಂದ ಶೂ ಕಟ್ಟಿಸಿಕೊಂಡಿರುವ ರಾಹುಲ್ ಗಾಂಧಿ ಅವರು ಈ ಕೂಡಲೇ ಅಹಿರ್ವಾರ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ (Amit Malviya) ಒತ್ತಾಯಿಸಿದ್ದಾರೆ.

    ಮಾಜಿ ಸಚಿವರು ರಾಗಾ ಅವರ ಶೂ ಕಟ್ಟುತ್ತಿರುವಂತೆ ಕಾಣಿಸಿಕೊಂಡಿರುವ ವೀಡಿಯೋವನ್ನು ಮಾಳವಿಯಾ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಲು ಮಂಡಿಯೂರಿದ್ದಾರೆ. ಆದರೆ ದುರಹಂಕಾರಿ, ದಂಗೆಕೋರ ತನ್ನ ಕೆಲಸ ತಾನು ಮಾಡದೇ ಮಂಡಿಯೂರಿದ ಮಾಜಿ ಸಚಿವರ ಬೆನ್ನು ತಟ್ಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾ ಬ್ಯಾನ್

    ಈ ಬಗ್ಗೆ ಬಳಿಕ ಪ್ರತಿಕ್ರಿಯೆ ನೀಡಿರುವ ಅಹಿರ್ವಾರ್ ಅವರು, ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿ ಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

    ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಹಿರ್ವಾರ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅವರ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರಾ ಅವರು ಗಾಂಧಿಯವರೊಂದಿಗೆ ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ತೆರಳಿದ್ದಾರೆ. ಹರಿಯಾಣದ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ, ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರನ್ನು ಸ್ವಾಗತಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೈಟ್‌ಕ್ಲಬ್ ಪಾರ್ಟಿಯಲ್ಲಿ ರಾಹುಲ್ – ವೀಡಿಯೋ ಫುಲ್ ವೈರಲ್

    ನೈಟ್‌ಕ್ಲಬ್ ಪಾರ್ಟಿಯಲ್ಲಿ ರಾಹುಲ್ – ವೀಡಿಯೋ ಫುಲ್ ವೈರಲ್

    ಕಠ್ಮಂಡು: ಇಲ್ಲಿನ ಕಠ್ಮಂಡುವಿನ ವರ್ಲ್ಡ್‌ಕ್ಲಾಸ್‌ ನೈಟ್‌ಕ್ಲಬ್ ಪಾರ್ಟಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದ್ದಾರೆ.

    ಪ್ರಮುಖ ರಾಜಕೀಯ ವಿದ್ಯಮಾನಗಳ ನಡುವೆ ಸದಾ ಬ್ಯುಸಿ ಶೆಡ್ಯೂಲ್‌ನಲ್ಲಿರುವ ರಾಹುಲ್‌ಗಾಂಧಿ ಈ ನಡುವೆಯೂ ಪಾರ್ಟಿಮೂಡ್‌ನಲ್ಲಿ ಕಾಣಿಸಿಕೊಂಡಿದ್ದು ಟೀಕೆಗೆ ಗುರಿಯಾಗಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರೊಟ್ಟಿಗೆ ಎಂಜಾಯ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    ಈ ವಿಡಿಯೋವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ, `ಯಾರು? ಅವರು ಯಾರು?’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ರಾಹುಲ್ ಗಾಂಧಿ ಮುಂಬೈ ಮೇಲೆ ದಾಳಿ ನಡೆದಾಗಲೂ ನೈಟ್‌ಕ್ಲಬ್‌ನಲ್ಲಿದ್ದರು. ಅವರ ಪಕ್ಷ ಸ್ಫೋಟಗೊಳ್ಳುತ್ತಿರುವ ಸಮಯದಲ್ಲೂ ನೈಟ್‌ಕ್ಲಬ್‌ನಲ್ಲಿದ್ದಾರೆ ಎಂದು ಕಾಲೆಳೆದಿದ್ದಾರೆ. ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ನೇಪಾಳಕ್ಕೆ ಆಗಮಿಸಿದ್ದರು.

  • ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

    ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

    ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

    ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

    ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

    2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

  • ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದ್ರೆ ಯಾರನ್ನೂ ಬಿಡಲ್ಲ: ಆದಿಲ್ ಚೌಧರಿ ವೀಡಿಯೋ ವೈರಲ್

    ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದ್ರೆ ಯಾರನ್ನೂ ಬಿಡಲ್ಲ: ಆದಿಲ್ ಚೌಧರಿ ವೀಡಿಯೋ ವೈರಲ್

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಒಬ್ಬ ವ್ಯಕ್ತಿಯನ್ನೂ ಬಿಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ಆದಿಲ್ ಚೌಧರಿ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವೈರಲ್ ಆದ ವೀಡಿಯೋದಲ್ಲಿ ಏನಿದೆ?
    ವೀಡಿಯೋದಲ್ಲಿ ಹೆಸರಿಲ್ಲದ ವ್ಯಕ್ತಿಯನ್ನು ಉಲ್ಲೇಖಿಸಿ ಆದಿಲ್ ಚೌಧರಿ, ಚಿಂತಿಸಬೇಡಿ, ದೇವರ ಇಚ್ಛೆಯಂತೆ ನಾವು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಸರ್ಕಾರವನ್ನು ರಚಿಸಲಿದ್ದೇವೆ. ಒಂದು ವೇಳೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಒಬ್ಬ ವ್ಯಕ್ತಿಯನ್ನು ಉಳಿಸಲಾಗುವುದಿಲ್ಲ. ಅವರು ನಮ್ಮ ವಿರುದ್ಧ ಅಪರಾಧ ಎಸಗುತ್ತಿರುವ ರೀತಿಯಲ್ಲಿ, ನಾವು ಸೇಡು ತೀರಿಸಿಕೊಳ್ಳುತ್ತೇವೆ. ಅವರು ಏನನ್ನಾದರೂ ಮಾಡುವ ಮೊದಲು 100 ಬಾರಿ ಯೋಚಿಸಬೇಕು ಹಾಗೆಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

    ವೀಡಿಯೋಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವಿಯಾ, ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಎಸ್‍ಪಿ ಅಭ್ಯರ್ಥಿ ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಎಂದು ಆರೋಪಿಸಿದ್ದಾರೆ. ಆದರೆ ಚೌಧರಿ ವೀಡಿಯೊದಲ್ಲಿ ಯಾವುದೇ ಸಮುದಾಯದ ಬಗ್ಗೆ ಮಾತನಾಡಿರುವುದು ಕಂಡುಬಂದಿಲ್ಲ. ಮೀರತ್ ದಕ್ಷಿಣದ ಎಸ್‍ಪಿ ಅಭ್ಯರ್ಥಿ ಚೌಧರಿಯವರು ನಾವು ಸರ್ಕಾರ ರಚಿಸಿದರೆ ಅವರನ್ನು ಬಿಡುವುದಿಲ್ಲ. ಒಬ್ಬೊಬ್ಬರಾಗಿ ಸೇಡು ತೀರಿಸಿಕೊಳ್ಳುತ್ತೇವೆ ಅಂತ ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ನಾಹಿದ್ ಹಸನ್ ಮತ್ತು ಆದಿಲ್ ಚೌಧರಿ ಅವರಂತಹ ಹಿಂದೂ ವಿರೋಧಿ ಗೂಂಡಾಗಳು. ಚುನಾವಣಾ ಅಭ್ಯರ್ಥಿಗಳನ್ನು ಮಾತ್ರ ನಾಮನಿರ್ದೇಶನ ಮಾಡಿದ್ದಾರೆ. ಅವರು ವೀಡಿಯೊದಲ್ಲಿ ಮಾಡಿದ ಕಾಮೆಂಟ್‍ಗಳನ್ನು ಸ್ಪಷ್ಟಪಡಿಸಲು ಕೇಳಿದಾಗ ಚೌಧರಿಯವರು ನೇರ ಉತ್ತರವನ್ನು ನೀಡಲಿಲ್ಲ. ಬಿಜೆಪಿ ವೀಡಿಯೊವನ್ನು ಎಡಿಟ್ ಮಾಡಿದೆ ಅಂತ ಆರೋಪಿಸಿದ್ದಾರೆ. ಕೇಸರಿ ಪಕ್ಷವು ಅಗತ್ಯವಿರುವ ಯಾವುದೇ ವಿಧಾನಗಳನ್ನು ಬಳಸಲು ಸಮರ್ಥವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

    ಈ ಕುರಿತು ಮೀರತ್ ಸಿಟಿ ಎಸ್‍ಪಿ ವಿನೀತ್ ಭಟ್ನಾಗರ್ ಅವರು ಎಸ್ಪಿ ಅಭ್ಯರ್ಥಿ ಬೆದರಿಕೆ ಹಾಕುತ್ತಿರುವ ವೀಡಿಯೋದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ವಿಡಿಯೋವನ್ನು ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಅದರಲ್ಲಿ ಚುನಾವಣಾ ಆಯೋಗದ ನೈತಿಕ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಹೇಳಿಕೆಗಳಿದ್ದರೆ, ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಮುಟ್ಟಬಹುದೇ- ಸಿಎಂ ಬಗ್ಗೆ ಬಿಜೆಪಿ ನಾಯಕ ಅವಹೇಳನ

    ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಮುಟ್ಟಬಹುದೇ- ಸಿಎಂ ಬಗ್ಗೆ ಬಿಜೆಪಿ ನಾಯಕ ಅವಹೇಳನ

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗಳು ಮಹಿಳೆಯರೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವುದು ತಪ್ಪಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಬಿಜೆಪಿ ನಾಯಕರೊಬ್ಬರು ಅದೇ ಫೋಟೋ ಮತ್ತು ವಿಡಿಯೋಗಳನ್ನು ಬಳಸಿಕೊಂಡು ಸಿಎಂ ಸಿದ್ದರಾಮಯ್ಯರನ್ನು ಅವಹೇಳನ ಮಾಡುತ್ತಿದ್ದಾರೆ.

    ಶಿವಮೊಗ್ಗದಲ್ಲಿ ನಡೆದಿದ್ದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಲವು ವಿದ್ಯಾರ್ಥಿನಿಯರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು. ಇಂದು ಅದೇ ವಿಡಿಯೋವನ್ನು ಬಳಸಿ ಬಿಜೆಪಿ ನಾಯಕ, ಐಟಿ ಸೆಲ್‍ನ ಉಸ್ತುವಾರಿ ಅಮಿತ್ ಮಾಳವಿಯಾ ಸಿಎಂರನ್ನು ಅವಹೇಳನ ಮಾಡುತ್ತಿದ್ದಾರೆ.

    ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ವಿದ್ಯಾರ್ಥಿನಿಯ ಕೈ ಹಿಡಿದು ಎಳೆದು ಫೋಟೋ ತೆಗೆದುಕೊಂಡಿದ್ದಾರೆ ಎಂದು ಅಮಿತ್ ಮಾಳವಿಯಾ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಸಿಎಂ ಮಂಗಳೂರಿನಲ್ಲಿ ಮೇಯರ್ ಕವಿತಾ ಸನೀಲ್ ಅವರ ಹೊಟ್ಟೆಗೆ ಪಂಚ್ ಕೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 2016ರಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತರೀಕೆರೆ ತಾಲೂಕು ಪಂಚಾಯ್ತಿ ಸದಸ್ಯೆಯಾಗಿರುವ ಗಿರಿಜಾ ಶ್ರೀನಿವಾಸ್ ಎಂಬವರು ಸಿಎಂಗೆ ಮುತ್ತು ಕೊಟ್ಟಿದ್ದರು.

    ಅಮಿತ್ ಮಾಳವಿಯಾ