Tag: ಅಮೂಲ್ಯಾ

  • ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ತುಂಬು ಗರ್ಭಿಣಿ ಅಮೂಲ್ಯ

    ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ತುಂಬು ಗರ್ಭಿಣಿ ಅಮೂಲ್ಯ

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಇಂದು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಇಂದು ವಿಜಯನಗರದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಂದ ಭಗವದ್ಗೀತೆ ಗ್ರಂಥವನ್ನು ಪಡೆದಿದ್ದು, ಮನಸ್ಸಿಗೆ ಸಂತೋಷ ನೀಡಿತು ಎಂದು ತಿಳಿಸಿದ್ದಾರೆ.

    2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್ ದಂಪತಿ ತಿಳಿಸಿದ್ದರು. ಇದನ್ನೂ ಓದಿ:  ಬಿಕಿನಿ ಫೋಟೋಗೆ ಕಾಮೆಂಟ್ ಮಾಡಿದ್ದ ಅರ್ಜುನ್‍ಗೆ ಚೋರ್ ಎಂದ ಮಲೈಕಾ

    ಕೆಲವು ದಿನಗಳ ಹಿಂದೆ ಅಮೂಲ್ಯ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದರು. ಅದ್ದೂರಿಯಾಗಿ ಸೀಮಂತ ಶಾಸ್ತ್ರ ನಡೆದಿದೆ. ಸೀಮಂತದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ:  ಸಖತ್ ಹಾಟ್ ಫೋಟೋಗಳಿಂದ ಮೋಡಿ ಮಾಡಿದ ರಾಯ್ ಲಕ್ಷ್ಮೀ

  • ತುಂಬು ಗರ್ಭಿಣಿ ಅಮೂಲ್ಯಾ ಜೊತೆ ಗೋಲ್ಡನ್ ಸ್ಟಾರ್ ಪತ್ನಿ -ಫೋಟೋ ವೈರಲ್

    ತುಂಬು ಗರ್ಭಿಣಿ ಅಮೂಲ್ಯಾ ಜೊತೆ ಗೋಲ್ಡನ್ ಸ್ಟಾರ್ ಪತ್ನಿ -ಫೋಟೋ ವೈರಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯಾ ಅವರು ತುಂಬು ಗರ್ಭಿಣಿಯಾಗಿದ್ದಾರೆ. ಅಮೂಲ್ಯಯವರ ಜೊತೆಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಫೋಟೋಗಳಿಗೆ ಪೋಸ್ ಕೊಟ್ಟಿದ್ದು, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ನಟಿ ಅಮೂಲ್ಯ ಮತ್ತು ಶಿಲ್ಪಾ ಗಣೇಶ್ ನಡುವೆ ಉತ್ತಮ ಬಾಂಧವ್ಯ ಇದೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅಮೂಲ್ಯ ಜೊತೆ ಶಿಲ್ಪಾ ಗಣೇಶ್ ಅವರು ಫೋಟೋ ಕ್ಲಿಕ್ಕಿಸಿಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್ ದಂಪತಿ ತಿಳಿಸಿದ್ದರು. ಇದನ್ನೂ ಓದಿ: ದೀಪಿಕಾ ಪಡುಕೋಣೆಯನ್ನು ಸಮರ್ಥಿಸಲು ಬಂದಿಲ್ಲ: ಕಂಗನಾ ರಣಾವತ್

    ವಿಶೇಷ ಫೋಟೋಶೂಟ್ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಅಮೂಲ್ಯ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದರು. ಅದ್ದೂರಿಯಾಗಿ ಸೀಮಂತ ಶಾಸ್ತ್ರ ನಡೆದಿದೆ. ಸೀಮಂತದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ನಮ್ಮಲ್ಲೇ ಒಳ್ಳೊಳ್ಳೆಯ ನಟಿಯರಿದ್ದಾರೆ, ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ: ಶಿವಣ್ಣ

    ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಟಿ ಅಮೂಲ್ಯ ಕುಟುಂಬದ ನಡುವೆ ಒಡನಾಟ ಇದೆ. ಹಲವು ವಿಶೇಷ ಸಂದರ್ಭಗಳಲ್ಲಿ ಈ ಎರಡೂ ಕುಟುಂಬದ ಸದಸ್ಯರು ಜೊತೆಯಾಗಿ ಸೇರುತ್ತಾರೆ. ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಅಮೂಲ್ಯ ಚೆಲುವಿನ ಚಿತ್ತಾರ, ನಾನು ನನ್ನ ಕನಸು, ಗಜ ಕೇಸರಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

  • ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

    ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

    ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಸ್ಯಾಂಡಲ್‍ವುಡ್ ಚೆಲುವೆ ನಟಿ ಅಮೂಲ್ಯಾ ಅವರೂ ಸಾಮಾಜಿಗ ಹೊಣೆಗಾರಿಕೆಯನ್ನು ತೋರಿದ್ದು, ಹಲವರಿಗೆ ಈಗಾಗಲೇ ನೆರವು ನೀಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ನೆರವನ್ನು ನೀಡಿದ್ದಾರೆ. ಬಡವರಿಗೆ, ನಿರ್ಗತಿಕರಿಗೆ, ಅಸಹಾಯಕರಿಗೆ ಆರ್‍ಎಸ್‍ಎಸ್ ಈಗಾಗಲೇ ಸಹಾಯ ಮಾಡುತ್ತಿದ್ದು, ಇದೀಗ ನಟಿ ಅಮೂಲ್ಯ ಸಂಘದ ಮೂಲಕ ಸಹಾಯ ಮಾಡಿದ್ದಾರೆ.

    ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಕೆಲಸವಿಲ್ಲದಂತಾಗಿದ್ದು, ಹಲವು ಬಡವರು ಊಟವಿಲ್ಲದೆ ಕಷ್ಟಪಡುತ್ತಿದ್ದಾರೆ. ಅಂತಹ ಅಸಹಾಯಕರಿಗೆ ಹಲವು ದಿನಗಳಿಂದ ನಟ, ನಟಿಯರು, ಧನಿಕರು, ಸಹಾಯ ಹಸ್ತ ಚಾಚುತ್ತಿದ್ದಾರೆ. ಕೆಲವರು ನೇರವಾಗಿ ಸಹಾಯ ಮಾಡಿದರೆ, ಇನ್ನೂ ಕೆಲವರು, ಸಂಘ, ಸಂಸ್ಥೆಗಳು, ಸಿಎಂ ಪರಿಹಾರ ನಿಧಿ, ಪಿಎಂ ಕೇರ್ಸ್ ಫಂಡ್‍ಗಳ ಮೂಲಕ ಧನ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದಾರೆ. ಇದರ ಮಧ್ಯೆ ಅಲ್ಲಲ್ಲಿ ಆಹಾರ ಧಾನ್ಯ ವಿತರಿಸುವ ಕಾರ್ಯ ಸಹ ನಡೆಯುತ್ತಿದೆ.

    ಇದೀಗ ನಟಿ ಅಮೂಲ್ಯಾ ಜಗದೀಶ್ ದಂಪತಿ ಆರ್‌ಎಸ್‌ಎಸ್ ಗೆ ಸುಮಾರು 1 ಟನ್ ಅಕ್ಕಿಯನ್ನು ನೀಡಿದ್ದು, ಈ ಮೂಲಕ ಬಡವರ ಹೊಟ್ಟೆ ತುಂಬಿಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಆರ್‌ಎಸ್‌ಎಸ್ ನ ಅಭ್ಯುದಯ ಉಚಿತ ಕಲಿಕಾ ಕೇಂದ್ರಕ್ಕೆ ತೆರಳಿ ಅಕ್ಕಿ ಹಾಗೂ ಮಾಸ್ಕ್ ಗಳನ್ನು ನೀಡಿದ್ದಾರೆ. ಅಲ್ಲದೆ ಅವರ ಪತಿ ಸಹ ಹಲವು ದಿನಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಅಂದಹಾಗೆ ಇವರು ಸಹಾಯ ಮಾಡುತ್ತಿರುವುದು ಇದೇ ಮೊದಲ್ಲ ಹುಟ್ಟುಹಬ್ಬದಂತಹ ವಿಶೇಷ ಸಂದರ್ಭಗಳಲ್ಲಿ ಅನಾಥಾಶ್ರಮದ ಮಕ್ಕಳಿಗೆ ಪುಸ್ತಕ, ಬ್ಯಾಗ್ ನೀಡಿ, ಅವರೊಂದಿಗೆ ಕಾಲ ಕಳೆಯುತ್ತಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದಲ್ಲಿ ಪ್ರವಾಹ, ಭೂಕಂಪದಂತಹ ಪ್ರಕೃತಿ ವಿಕೋಪಗಳಾದಾಗ ಮತ್ತು ಈಗಿನ ಕೋರೋನಾ ವಿಪತ್ತಿನ ಸಂದರ್ಭದಲ್ಲಿಯೂ ಯಾವುದೇ ಜಾತಿ, ಧರ್ಮ ಎಂದು ಭೇದ ಮಾಡದೆ ಪ್ರತಿಯೊಬ್ಬರೂ ಭಾರತೀಯರು ಎಂದು ಸಹಾಯ ಮಾಡುವ ಆರ್‌ಎಸ್‌ಎಸ್ ಸಂಘಟನೆಗೆ ನಮ್ಮ ಕಿರು ಸಹಾಯ ನೀಡಿದ ಕ್ಷಣ. ಬಿ ಗುಡ್ ಡು ಗುಡ್ ಎಂದು ಬರೆದುಕೊಂಡಿದ್ದಾರೆ.

    ಬಾಲ ನಟಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದರೂ ಅಮೂಲ್ಯಾ ಅವರು ಹೆಚ್ಚು ಪ್ರಚಲಿತಕ್ಕೆ ಬಂದಿದ್ದು ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಅವರ ಐಶು ಪಾತ್ರ ಇನ್ನೂ ಜನಪ್ರಿಯ. 2001ರಲ್ಲಿ ‘ಪರ್ವ’ ಚಿತ್ರದ ಮೂಲಕ ಬಣ್ಣ ಹಚ್ಚಿದ್ದ ಇವರು, ಚಿಕ್ಕವಯಸ್ಸಿನಲ್ಲಿಯೇ ಹೀರೋಯಿನ್ ಸಹ ಆದರು. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಗುಳು ನಗೆ’ ಸಿನಿಮಾ ನಂತರ ಅಮೂಲ್ಯ ಯಾವ ಸಿನಿಮಾದಲ್ಲಿಯೂ ನಟಿಸಿಲ್ಲ. ಜಗದೀಶ್ ಆರ್ ಚಂದ್ರ ಜೊತೆ ಮೂರು ವರ್ಷಗಳ ಹಿಂದೆ ಹಸೆಮಣೆ ಏರಿದ್ದಾರೆ. ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಆದರೆ ಸಾಮಾಜಿಕ ಕೆಲಸಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.

  • ಅಮೂಲ್ಯ ಬೆನ್ನೇರಿದ ಹೊಸ ಖುಷಿ!

    ಅಮೂಲ್ಯ ಬೆನ್ನೇರಿದ ಹೊಸ ಖುಷಿ!

    ಬೆಂಗಳೂರು: ಮದುವೆಯಾದ ನಂತರ ಅಮೂಲ್ಯ ಚಿತ್ರರಂಗದಿಂದ ದೂರ ನಿಂತಿದ್ದರೂ ನಾನಾ ಕಾರಣಗಳಿಂದ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗಷ್ಟೇ ಪತಿಯೊಂದಿಗೆ ವಿದೇಶ ಸಂಚಾರವನ್ನೂ ಮಾಡಿ ಆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಖುಷಿ ಹಂಚಿಕೊಂಡಿದ್ದವರು ಅಮೂಲ್ಯ. ಇದೀಗ ಮತ್ತೊಂದು ಖುಷಿ ಅವರ ಬೆನ್ನೇರಿಕೊಂಡಿದೆ!

    ಅಮೂಲ್ಯ ಹೊಸಾದೊಂದು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಬೆನ್ನಿನ ಮೇಲೆ ಇತ್ತೀಚೆಗಷ್ಟೇ ಹಾಕಿಸಿಕೊಂಡಿರೋ ಈ ಆಂಕರ್ ಟ್ಯಾಟೂ ಫೋಟೋವನ್ನು ಇನ್ ಸ್ಟಾಗ್ರಾಮ್ ಮೂಲಕ ಅಭಿಮಾನಿಗಳ ಮುಂದೆ ಪ್ರದರ್ಶಿಸಿ ಅಮೂಲ್ಯ ಸಂಭ್ರಮಿಸಿದ್ದಾರೆ.

     

    ಇಂಥಾ ಖುಷಿಗಳ ಮೂಲಕವೇ ಅಮೂಲ್ಯ ಮತ್ತೆ ಚಿತ್ರರಂಗದತ್ತಲೂ ಮುಖ ಮಾಡಿದ್ದಾರೆ. ದರ್ಶನ್ ಅವರ ಚಿತ್ರದಲ್ಲಿ ತಂಗಿಯಾಗಿ ನಟಿಸೋ ಮೂಲಕ ಅಮಾಲ್ಯಾ ನಟನೆಗೆ ಮರಳೋ ಸೂಚನೆಗಳಿವೆ. ಮದುವೆಯಾದ ನಂತರ ಒಂದಷ್ಟು ಕಾಲದ ಬಳಿಕವಾದರೂ ಅಮೂಲ್ಯ ನಟಿಸಲು ಶುರು ಮಾಡುತ್ತಾರೆಂಬ ನಿರೀಕ್ಷೆ ಅಭಿಮಾನಿಗಳದ್ದಾಗಿತ್ತು. ಆದರೆ ಅದಾಗಲೇ ಚುನಾವಣೆ ಬಂದಿದ್ದರಿಂದ ಮಾವನ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಅವರು ಇದೀಗ ಪತಿಯೊಂದಿಗೆ ಜಾಲಿ ಟ್ರಿಪ್ಪನ್ನೂ ಮುಗಿಸಿಕೊಂಡು ನಟಿಸಲು ಮನಸು ಮಾಡಿದ್ದಾರೆ.

    ಆದರೆ ಅಮೂಲ್ಯ ಅಭಿಮಾನಿಗಳದ್ದು ಅವರು ಮತ್ತೆ ನಾಯಕಿಯಾಗಿ ಮಿಂಚಬೇಕೆಂಬ ಆಸೆ. ಅಮೂಲ್ಯ ಇದನ್ನು ಮನಗಂಡು ಸಾಕಾರಗೊಳಿಸುತ್ತಾರಾ ಎಂಬುದು ಸದ್ಯದ ಪ್ರಶ್ನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/Bm0LZ3mAkql/?hl=en&taken-by=amulya_moulya