Tag: ಅಮೃತವರ್ಷಿಣಿ ಸಿನಿಮಾ

  • ಕನ್ನಡದ ‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ನಿಧನ

    ಕನ್ನಡದ ‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ನಿಧನ

    ‘ಅಮೃತವರ್ಷಿಣಿ’ (Amruthavarshini)  ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ಶರತ್ ಬಾಬು (Sarath Babu) ಅವರು ನಿಧನರಾಗಿದ್ದಾರೆ. ಮೇ 22ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ರೆಡ್ ಕಲರ್ ಡ್ರೆಸ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಸಾನ್ಯ ಅಯ್ಯರ್

    ನಟ ಶರತ್ ಬಾಬು (Sarath Babu) ಅವರನ್ನು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ನಟ ಶರತ್ ಇಂದು (ಮೇ.22) ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ ಚಿಕಿತ್ಸೆ ನೀಡಿ, ಲಕ್ಷ ಲಕ್ಷ ಖರ್ಚು ಮಾಡಿದ್ರು ಕೂಡ ಶರತ್‌ ಬಾಬು ಅವರನ್ನ ಉಳಿಸಿಕೊಳ್ಳಲು ಆಗಲಿಲ್ಲ.

    ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ‘ಅಮೃತವರ್ಷಿಣಿ’ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದಾಗಿತ್ತು. ಶಕ್ತಿ, ಕಂಪನ, ರಣಚಂಡಿ, ತುಳಸಿದಳ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

    ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ನಟ- ನಟಿಯರು ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಟನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

  • ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

    ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

    ನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು (Sarath Babu) ಅವರ ಆರೋಗ್ಯ ಚಿಂತಾಜನಕವಾಗಿದೆ. ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ (Hospital)  ಚಿಕಿತ್ಸೆ ಪಡೆಯುತ್ತಿದ್ದಾರೆ.

    ʻಅಮೃತವರ್ಷಿಣಿ’ (Amruthavarshini)  ಚಿತ್ರದಲ್ಲಿ ರಮೇಶ್ ಅರವಿಂದ್, ಸುಹಾಸಿನಿ ಜೊತೆ ಶರತ್ ಬಾಬು (Sarath Babu)  ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 71 ವರ್ಷ ವಯಸ್ಸಿನ ಶರತ್ ಬಾಬು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ  ಓದಿ:ರವಿತೇಜ ನಟನೆಯ `ಟೈಗರ್ ನಾಗೇಶ್ವರ್ ರಾವ್’ ರಿಲೀಸ್ ಡೇಟ್ ಫಿಕ್ಸ್

    ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶರತ್ ಬಾಬು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಅಭಿಮಾನಿಗಳು ಕೂಡ ಶರತ್ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

    ಶರತ್ ಬಾಬು ಅವರ ಆರೋಗ್ಯ ಹದಗೆಟ್ಟಿರುವ ಕುರಿತಾಗಿ ತೆಲುಗು ನಟಿ ಕಲ್ಯಾಣಿ ಪಾದಲಾ (ಕರಾಟೆ ಕಲ್ಯಾಣಿ) ಬರೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ನನ್ನ ನೆಚ್ಚಿನ ಹೀರೋ, ಬೇಗ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.