Tag: ಅಮೇಥಿ

  • Amethi Horror | `ಐವರು ಸಾಯ್ತಾರೆʼ – ಕೊಲೆಗೂ ಮುನ್ನವೇ ವಾಟ್ಸಾಪ್‌ನಲ್ಲಿ ಶಂಕಿತನ ವಾರ್ನಿಂಗ್‌!

    Amethi Horror | `ಐವರು ಸಾಯ್ತಾರೆʼ – ಕೊಲೆಗೂ ಮುನ್ನವೇ ವಾಟ್ಸಾಪ್‌ನಲ್ಲಿ ಶಂಕಿತನ ವಾರ್ನಿಂಗ್‌!

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಅಮೇಥಿಯಲ್ಲಿ (Amethi Horror) ನಡೆದ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳ ಹತ್ಯೆಯ ಶಂಕಿತ ಆರೋಪಿ ಸುಮಾರು ಒಂದು ತಿಂಗಳಿನಿಂದ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಕೊಲೆ ಮಾಡುವ ಉದ್ದೇಶವನ್ನು ವಾಟ್ಸಾಪ್‌ನ ( WhatsApp) ಬಯೋದಲ್ಲಿ ಹಾಕಿಕೊಂಡಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸುನೀಲ್ ಕುಮಾರ್, ಅವರ ಪತ್ನಿ ಪೂನಂ ಭಾರತಿ ಮತ್ತು ಅವರ ಕೇವಲ ಒಂದು ಮತ್ತು ಆರು ವರ್ಷದವರು ಇಬ್ಬರು ಹೆಣ್ಣುಮಕ್ಕಳನ್ನು ಗುರುವಾರ ಅಮೇಥಿಯ ಭವಾನಿ ನಗರದಲ್ಲಿರುವ ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ನಂತರ ಹತ್ಯೆಗೀಡಾದ ಭಾರತಿ 2 ತಿಂಗಳ ಹಿಂದೆ ಚಂದನ್ ವರ್ಮಾ ಎಂಬಾತನ ವಿರುದ್ಧ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಅದರಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆತ ಕೊಲೆ ಬೆದರಿಕೆ ಹಾಕಿದ್ದ, ಏನಾದರೂ ಜೀವ ಹಾನಿ ಸಂಭವಿಸಿದರೆ ಆತನೆ ಹೊಣೆಗಾರ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

    ಅಲ್ಲದೇ ಭಾರತಿ ಅವರು ಆಗಸ್ಟ್ 18 ರಂದು ರಾಯ್ ಬರೇಲಿಯ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವರ್ಮಾ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ತನ್ನ ಮತ್ತು ತನ್ನ ಪತಿಗೆ ಕಪಾಳಮೋಕ್ಷ ಮಾಡಿದ್ದ. ಇದನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಸಾಯಿಸುತ್ತೇನೆ ಎಂದಿದ್ದ. ಇದಕ್ಕೂ ಮೊದಲು ಸಹ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ಅಪಾಯದಲ್ಲಿದೆ ಎಂದು ದೂರು ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

    ಪೊಲೀಸರು ಚಂದನ್ ವರ್ಮಾನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಸೆಪ್ಟೆಂಬರ್ 12 ಆತನ ವಾಟ್ಸಾಪ್ ಬಯೋದಲ್ಲಿ ʻ5 ಜನರು ಸಾಯುತ್ತಾರೆ, ನಾನು ಶೀಘ್ರದಲ್ಲೇ ನಿಮಗೆ ತೋರಿಸುತ್ತೇನೆʼಎಂದು ಬರೆದುಕೊಂಡಿರುವುದು ಪತ್ತೆಯಾಗಿದೆ. ಹತ್ಯೆ ಬಳಿಕ ಅದನ್ನು ಆತ ಸ್ಕ್ರೀನ್‌ಶಾಟ್ ಮಾಡಿ ಇಟ್ಟುಕೊಂಡಿದ್ದ. ಇದು ಆತನ ಯೋಜನೆಯನ್ನು ಬಯಲು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆ ನಡೆಯುವ ಮುನ್ನ ಅಮೇಥಿಯ ಪ್ರಸಿದ್ಧ ದೇವಸ್ಥಾನಕ್ಕೂ ಭೇಟಿ ನೀಡಿದ್ದ. ಅಲ್ಲದೇ ಹತ್ಯೆ ಬಳಿಕ ಆತ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಸೋಲು- ಗಾಂಧಿ ಕುಟುಂಬದ ಆಪ್ತನಿಗೆ ಗೆಲುವು

    ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಸೋಲು- ಗಾಂಧಿ ಕುಟುಂಬದ ಆಪ್ತನಿಗೆ ಗೆಲುವು

    ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದಿಂದ (Amethi Loksabha constituency) ಎರಡು ಬಾರಿ ಸಂಸದೆಯಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಈ ಬಾರಿ ಸೋಲನುಭವಿಸಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಅವರು  1,10,684 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಿಶೋರಿ ಲಾಲ್‌ ಅವರಿಗೆ 3,76,983 ಮತಗಳು ಬಿದ್ದರೆ, ಸ್ಮೃತಿ ಇರಾನಿಯವರಿಗೆ 2,66,299 ಮತಗಳು ಬಿದ್ದಿವೆ. ಇದು ಇನ್ನೂ ಬದಲಾಗಬಹುದು.

    ಉತ್ತರ ಪ್ರದೇಶದ 80 ಸಂಸದೀಯ ಕ್ಷೇತ್ರಗಳಲ್ಲಿ ಒಂದಾದ ಅಮೇಥಿ ಲೋಕಸಭಾ ಕ್ಷೇತ್ರವು ಐತಿಹಾಸಿಕವಾಗಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಬಿಜೆಪಿಯ ಕೇಂದ್ರ ಸಚಿವೆ ಸ್ಮೃತಿ ಇರಾನಿ 2019 ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರು. ನೆಹರೂ-ಗಾಂಧಿ ಭದ್ರಕೋಟೆಯಾದ ಅಮೇಥಿಯಿಂದ ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 50 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು.

    ಸ್ಮೃತಿ ಇರಾನಿ ಅವರು ಗುಜರಾತ್‌ನಿಂದ 2011 ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದರು. ನಂತರ ಆಗಸ್ಟ್ 2017 ರಲ್ಲಿ ಮರು ಆಯ್ಕೆಯಾದರು. ಪ್ರಸ್ತುತ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಖಾತೆ ಸಚಿವರಾಗಿದ್ದಾರೆ. ಮೇ 2014 ಮತ್ತು ಜುಲೈ 2016 ರ ನಡುವೆ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜುಲೈ 2017 ರಿಂದ ಮೇ 2018 ರವರೆಗೆ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ನಿರ್ವಹಿಸಿದರು.

    ಅಮೇಥಿ ಕ್ಷೇತ್ರವು ಐದು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಮೇ 20 ರಂದು ಆರನೇ ಹಂತದಲ್ಲಿ ಅಮೇಥಿ ಸ್ಥಾನಕ್ಕೆ ಮತದಾನ ನಡೆಯಿತು. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ವಿಚಾರದಲ್ಲಿ ಅಮೇಥಿ ಮತ್ತು ರಾಯ್ ಬರೇಲಿಯನ್ನು ಸಮಾನವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದರು.

  • ಅಮೇಥಿಯಲ್ಲಿ ಗಾಂಧಿ ಕುಟುಂಬಯೇತರ ಅಭ್ಯರ್ಥಿ – ಯಾರಿದು ಕಿಶೋರಿ ಲಾಲ್ ಶರ್ಮಾ?

    ಅಮೇಥಿಯಲ್ಲಿ ಗಾಂಧಿ ಕುಟುಂಬಯೇತರ ಅಭ್ಯರ್ಥಿ – ಯಾರಿದು ಕಿಶೋರಿ ಲಾಲ್ ಶರ್ಮಾ?

    ನವದೆಹಲಿ: ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನು ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೆಣಸಲಿದ್ದಾರೆ.

    ಗಾಂಧಿ ಕುಟುಂಬದ ಭದ್ರ ಕೋಟೆ ಎನಿಸಿಕೊಂಡಿದ್ದ ಕ್ಷೇತ್ರದಲ್ಲಿ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಿರುವುದು ಅಚ್ಚರಿಕೆ ಬೆಳವಣಿಯಾಗಿದೆ. ಈಗ ಕಿಶೋರಿ ಲಾಲ್ ಶರ್ಮಾ ಯಾರು? ಅವರ ಹಿನ್ನಲೆ ಏನು? ಎನ್ನುವ ಚರ್ಚೆ ಶುರುವಾಗಿದೆ.

    ನಾಲ್ಕು ದಶಕಗಳಿಂದ ಗಾಂಧಿ ಕುಟುಂಬದ ಜೊತೆಗೆ ನಂಟು ಹೊಂದಿರುವ ಕಿಶೋರಿ ಲಾಲ್ ಶರ್ಮಾ, ಮೂಲತಃ ಪಂಜಾಬ್‍ನ ಲೂಧಿಯಾನದವರು. 1983ರಲ್ಲಿ ರಾಜೀವ್ ಗಾಂಧಿಯವರೊಂದಿಗೆ ರಾಯ್‍ಬರೇಲಿ ಮತ್ತು ಅಮೇಥಿ ಪ್ರವೇಶಿಸಿದ ಅವರು, ಈಗಲೂ ಕ್ಷೇತ್ರದ ನಿರಂತರ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ: ಸಿಪಿಐ ನಾಯಕ ಅತುಲ್‌ ಕುಮಾರ್‌ ಅಂಜಾನ್‌ ನಿಧನ

    ಮೇ 1991ರಲ್ಲಿ ರಾಜೀವ್ ಗಾಂಧಿಯವರ ಮರಣದ ನಂತರ, ಗಾಂಧಿ ಕುಟುಂಬದೊಂದಿಗಿನ ಅವರ ಒಡನಾಟ ಇನ್ನೂ ಹೆಚ್ಚಾಯಿತು. ಸೋನಿಯಾ ಗಾಂಧಿ ಅವರು ರಾಜಕೀಯಕ್ಕೆ ಪ್ರವೇಶಿಸಿ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಕಿಶೋರಿ ಲಾಲ್ ಶರ್ಮಾ ಅವರ ಜೊತೆಗಿದ್ದರು. ಸೋನಿಯಾ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟು ರಾಯ್‍ಬರೇಲಿಯಲ್ಲಿ ಸ್ಪರ್ಧಿಸಿದ ಬಳಿಕ ಎರಡು ಕ್ಷೇತ್ರಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.

    ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಹಿನ್ನಲೆ ಅವರಿಗೆ ಟಿಕೆಟ್ ನೀಡಲಾಗಿದೆ. ಇಂದು (ಶುಕ್ರವಾರ) ಶರ್ಮಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಿಯಾಂಕ ಗಾಂಧಿ ರೋಡ್ ಶೋನಲ್ಲಿ ಸಾಥ್ ನೀಡುವ ಮೂಲಕ ಬಲ ತುಂಬುವ ಪ್ರಯತ್ನ ಮಾಡಿದ್ದಾರೆ. ಮೇ 20 ರಂದು, ಏಳು ಹಂತದ ಸಾರ್ವತ್ರಿಕ ಚುನಾವಣೆಯ 5ನೇ ಸುತ್ತಿನಲ್ಲಿ ಅಮೇಥಿ ಮತ್ತು ರಾಯ್‍ಬರೇಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: 200 ಮಂದಿ ಪಾಕಿಸ್ತಾನಿಗಳು ಇಂದು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ

  • ಹೆದರಬೇಡಿ, ಹೆದರಿ ಓಡಿಹೋಗ್ಬೇಡಿ – ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ

    ಹೆದರಬೇಡಿ, ಹೆದರಿ ಓಡಿಹೋಗ್ಬೇಡಿ – ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ

    ನವದೆಹಲಿ: ಕೇರಳದ ವಯನಾಡಿನಲ್ಲಿ ಚುನಾವಣೆ ಬಳಿಕ ರಾಹುಲ್ ಗಾಂಧಿ (Rahul Gandhi) ಬೇರೇಡೆ ಮುಖ ಮಾಡಲಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ಅವರು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ವ್ಯಂಗ್ಯ ಮಾಡಿದ್ದಾರೆ.

    ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ವಯನಾಡಿನಲ್ಲಿ ಸೋಲಿನ ಬಗ್ಗೆ ತಿಳಿದಿರುವ ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರಕ್ಕೆ‌ ಹೋಗಿದ್ದಾರೆ. ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದರು. ಆದರೆ ಅವರು ಆಯ್ಕೆ ಮಾಡಿಕೊಂಡಿರುವುದು ಯಾವ ಕ್ಷೇತ್ರ? ರಾಯ್‌ಬರೇಲಿ (Raebareli), ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೊಕೆ ರಾಹುಲ್‌ಗೆ ಭಯ ಹೀಗಿದ್ದರೂ ಸಹ ರಾಹುಲ್ ಗಾಂಧಿ ಹೇಳೋದು ಹೆದರಬೇಡಿ ಅಂತಾ, ನಾನು ರಾಹುಲ್ ಗಾಂಧಿಗೆ ಹೇಳುತ್ತೇನೆ ಹೆದರಬೇಡಿ, ಓಡಿ ಹೋಗಬೇಡಿ ಎಂದು ಕುಟುಕಿದ್ದಾರೆ.

    ಗಾಂಧಿ ಕುಟುಂಬದ ನಡೆಯಿಂದ ಚುನಾವಣಾ ಫಲಿತಾಂಶ ಸ್ಪಷ್ಟವಾಗಿದೆ, ಯಾವುದೇ ಸಮೀಕ್ಷೆ ನಡೆಸುವ ಅಗತ್ಯ ಇಲ್ಲ. ಕಾಂಗ್ರೆಸ್‌ ಮೊದಲೇ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ, ಕಳೆದ ಬಾರಿಯಷ್ಟೂ ಸ್ಥಾನಗಳು ಈ ಬಾರಿ ʻಕೈʼಗೆ ಸಿಗಲ್ಲ ಎಂದಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ನಿಜವಾಗಿಯೂ ಲವ್‌ ಜಿಹಾದ್‌ ಕೇಸ್‌, ನಾವು ಬಣ್ಣ ಕಟ್ಟಿಲ್ಲ: ಅಮಿತ್‌ ಶಾ

    ಸಂವಿಧಾನವನ್ನು ಬದಲಾಯಿಸಿ ದಲಿತ ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾಗಳನ್ನು ಕಸಿದುಕೊಂಡು ‘ಜಿಹಾದಿ’ ವೋಟ್ ಬ್ಯಾಂಕ್‌ಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ. ಅವರಿಗೆ (ವಿರೋಧ ಪಕ್ಷಗಳಿಗೆ) ಅಭಿವೃದ್ಧಿಯನ್ನು ತರಲು ಸಾಧ್ಯವಿಲ್ಲ. ಅವರು ಮತಕ್ಕಾಗಿ ಸಮಾಜವನ್ನು ವಿಭಜಿಸುವುದು ಹೇಗೆಂಬುದು ತಿಳಿದಿರುವುದಾಗಿ ವಾಗ್ದಾಳಿ ನಡೆಸಿದ್ದಾರೆ.

    ತೃಣಮೂಲ ಶಾಸಕ ಹುಮಾಯೂನ್ ಕಬೀರ್ ಅವರನ್ನು ಉಲ್ಲೇಖಿಸಿದ ಪ್ರಧಾನಿ, ಟಿಎಂಸಿ ಶಾಸಕರೊಬ್ಬರು ಬಹಿರಂಗ ಬೆದರಿಕೆ ಹಾಕಿದರು. ಅವರು ಕೇವಲ ಎರಡು ಗಂಟೆಗಳಲ್ಲಿ ಭಾಗೀರಥಿಯಲ್ಲಿ ಹಿಂದೂಗಳನ್ನು ಮುಳುಗಿಸುತ್ತಾರೆ ಎಂದು ಹೇಳಿದರು. ಇದು ಏನು ಭಾಷೆ? ಇದು ಯಾವ ರಾಜಕೀಯ ಸಂಸ್ಕೃತಿ? ಬಂಗಾಳದಲ್ಲಿ ಹಿಂದೂಗಳಿಗೆ ಏನಾಗುತ್ತಿದೆ? ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಹಿಂದೂಗಳನ್ನು 2ನೇ ಪ್ರಜೆಯನ್ನಾಗಿ ಮಾಡಿದೆ ಎಂದು ತೋರುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ – ಕುಸಿದು ಸತ್ತರೆಂದು ಕಥೆ ಕಟ್ಟಿದ್ದ ಸೊಸೆ ಅರೆಸ್ಟ್‌

    ಎಡಪಕ್ಷಗಳು, ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿಯ ದೃಷ್ಟಿ ಇಲ್ಲ, ಎಡಪಕ್ಷಗಳು ತ್ರಿಪುರಾವನ್ನು ಸಂಪೂರ್ಣವಾಗಿ ನಾಶಪಡಿಸಿದರು ಅವರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಕಳೆದ 5 ವರ್ಷಗಳಲ್ಲಿ ಬಿಜೆಪಿ ತ್ರಿಪುರವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ನಿಮ್ಮ ಕನಸುಗಳನ್ನು ನನಸಾಗಿಸುವುದು ನನ್ನ ಕನಸು, ನಿಮ್ಮೆಲ್ಲರಿಗೂ ಮತ್ತು ದೇಶಕ್ಕೂ ಸೇವೆ ಸಲ್ಲಿಸಲು ನನಗೆ ಆಶೀರ್ವಾದಿಸಬೇಕು. ನನ್ನ ಬಳಿ ಏನೂ ಇಲ್ಲ ನೀವೆಲ್ಲರೂ ಕುಟುಂಬದವರು, ನಿಮ್ಮಗಾಗಿ ನಿಮ್ಮ ಮಕ್ಕಳಿಗಾಗಿ ಮಾತ್ರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

  • ಅಮೇಥಿ, ರಾಯ್‌ಬರೇಲಿ ಹೈವೋಲ್ಟೇಜ್‌ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಘೋಷಣೆ ಸಾಧ್ಯತೆ!

    ಅಮೇಥಿ, ರಾಯ್‌ಬರೇಲಿ ಹೈವೋಲ್ಟೇಜ್‌ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಘೋಷಣೆ ಸಾಧ್ಯತೆ!

    – ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ
    – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಯುತ್ತಾ ರಾಯ್‌ ಬರೇಲಿ?

    ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್‌ಬರೇಲಿಯಿಂದ (Amethi, Raebareli) ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಪಕ್ಷದ ಮೂಲಗಳು ತಿಳಿಸಿವೆ. ನಾಮಪತ್ರ ಸಲ್ಲಿಕೆಗೆ ಇನ್ನು ಒಂದು ದಿನ ಮಾತ್ರ ಬಾಕಿ ಇರುವುದರಿಂದ ಇಂದೇ ಈ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೈಕಮಾಂಡ್‌ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ.

    ಸೋನಿಯಾ ಗಾಂಧಿ (Sonia Gandhi) ರಾಜ್ಯಸಭೆಗೆ ಆಯ್ಕೆಯಾಗಿದ್ದು, ವಯನಾಡ್ ನಿಂದ ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆಗಳು ಹುಟ್ಟುಕೊಂಡಿದ್ದವು. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಕುತೂಹಲ ಹೆಚ್ಚಿಸಿತ್ತು. ಈ ಹಿಂದೆ ಅಮೇಥಿಯಿಂದ ರಾಹುಲ್‌ ಗಾಂಧಿ ಹೆಸರು ಕೇಳಿಬಂದಿದ್ದರೂ, ಬಳಿಕ ಅವರು ಸ್ಪರ್ಧಿಸುವುದಿಲ್ಲ ಎಂಬ ಮಾತುಗಳು ಪಕ್ಷದಲ್ಲಿ ಕೇಳಿಬಂದಿತ್ತು. ಇದೀಗ ರಾಗಾ ಅವರೇ ಸೂಕ್ತ ಎಂದು ಪಕ್ಷ ನಿರ್ಧರಿಸಿದೆ, ಇಂದು ಅಧಿಕೃತವಾಗಿ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    2019ರ ಚುನಾವಣೆಯಲ್ಲಿಯೂ ರಾಹುಲ್‌ ಗಾಂಧಿ ಅಮೇಥಿಯಿಂದ ಸ್ಪರ್ಧಿಸಿದ್ದರು. ಆದ್ರೆ ಬಿಜೆಪಿಯ ಸ್ಮೃತಿ ಇರಾನಿ ಅವರ ವಿರುದ್ಧ ಸೋಲು ಎದುರಿಸಬೇಕಾಯಿತು. ಈ ಬಾರಿಯೂ ಬಿಜೆಪಿಯಿಂದ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ಪ್ರಬಲ ಅಭ್ಯರ್ಥಿಯಾಗಿದ್ದಾರೆ.

    ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಯುತ್ತಾ ರಾಯ್‌ಬರೇಲಿ?
    1960 ರಿಂದ ರಾಯ್‌ಬರೇಲಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 1952 ಮತ್ತಯ 1957 ರಲ್ಲಿ ರಾಯ್‌ಬರೇಲಿ ಕ್ಷೇತ್ರದಿಂದ ಫಿರೋಜ್‌ ಗಾಂಧಿ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊಮ್ಮಗ ಅರುಣ್ ನೆಹರು ಅವರು 1980ರ ಉಪಚುನಾವಣೆ ಮತ್ತು 1984ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನೆಹರೂ ಸಹೋದರಿ ಶೀಲಾ ಕೌಲ್ 1989 ಮತ್ತು 1991 ರಲ್ಲಿ ಗೆಲುವು ಸಾಧಿಸಿದರು.

    ಅಲ್ಲದೇ 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕಾ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಈ ನಡುವೆ ಅಭ್ಯರ್ಥಿಯ ಘೋಷಣೆ ವಿಳಂಭವಾದರೂ ಪಕ್ಷಕ್ಕೆ ಆತಂಕ ಇಲ್ಲ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

  • ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂಬುದು ದೇಶದ ಕರೆಯಾಗಿದೆ: ರಾಬರ್ಟ್ ವಾದ್ರಾ

    ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂಬುದು ದೇಶದ ಕರೆಯಾಗಿದೆ: ರಾಬರ್ಟ್ ವಾದ್ರಾ

    ನವದೆಹಲಿ: ಅಮೇಥಿಯ (Amethi) ಜನರು ನನ್ನ ಸ್ಪರ್ಧೆ ಬಯಸಿದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ, ಕೈಗಾರಿಕೋದ್ಯಮಿ ರಾಬರ್ಟ್ ವಾದ್ರಾ (Robert Vadra) ಈಗ ನಾನು ಸಕ್ರಿಯ ರಾಜಕಾರಣಕ್ಕೆ (Politics) ಬರಬೇಕೆಂಬುದು ದೇಶದ ಕರೆಯಾಗಿದೆ ಎಂದು ಹೇಳಿದ್ದಾರೆ.

    ಋಷಿಕೇಶ್ ತ್ರಿವೇಣಿ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಮಾಡುತ್ತಿರುವ ರಾಜಕೀಯ ತಪ್ಪು, ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡಬೇಕು. ಬಿಜೆಪಿ (BJP) ಆಡಳಿತದಲ್ಲಿ ಸಾಮಾನ್ಯ ನಾಗರಿಕರ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಜನರಲ್ಲಿ ಭಯವನ್ನು ಹರಡುವುದು ಬಿಜೆಪಿಯ ಆಡಳಿತದ ವಿಧಾನವಾಗಿದೆ. ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿ ನಂತರ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ: ಸಿದ್ದರಾಮಯ್ಯ

    ಅಮೇಥಿಯಿಂದ ಚುನಾವಣೆಗೆ (Lok Sabha Election) ಸ್ಪರ್ಧಿಸುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಬರ್ಟ್ ವಾದ್ರಾ, ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬುದು ಇಡೀ ದೇಶದ ಕರೆಯಾಗಿದೆ. ನಾನು ಯಾವಾಗಲೂ ದೇಶದ ಜನರಿಗಾಗಿ ಹೋರಾಡುತ್ತೇನೆ. ನಾನು ಜನರ ನಡುವೆ ಬದುಕುತ್ತೇನೆ. ಸಮಾಜಕ್ಕಾಗಿ ದುಡಿಯುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿನಾಯಕಿಯಿಂದ್ಲೇ ಏನೂ ಮಾಡೋಕೆ ಆಗಲಿಲ್ಲ- ತಂಗಡಗಿಗೆ ರೆಡ್ಡಿ ಟಾಂಗ್

  • ಚುನಾವಣೆ ಬಳಿಕ ವಯನಾಡಿನಿಂದಲೂ ಓಡಿ ಹೋಗ್ತಾರೆ – ರಾಗಾ ವಿರುದ್ಧ ಮೋದಿ ವ್ಯಂಗ್ಯ

    ಚುನಾವಣೆ ಬಳಿಕ ವಯನಾಡಿನಿಂದಲೂ ಓಡಿ ಹೋಗ್ತಾರೆ – ರಾಗಾ ವಿರುದ್ಧ ಮೋದಿ ವ್ಯಂಗ್ಯ

    ನವದೆಹಲಿ: ವಯನಾಡಿನಿಂದಲೂ ಜನ ಬೆಂಬಲ ಸಿಗುವುದು ಕಷ್ಟಕರ ಆಗಿರೋದ್ರಿಂದ ಕಾಂಗ್ರೆಸ್‌ ರಾಜಕುಮಾರ ಅಲ್ಲಿಂದಲೂ ಓಡಿ ಹೋಗ್ತಾರೆ ಎಂದು ಸಂಸದ ರಾಹುಲ್‌ ಗಾಂಧಿ ಅವರನ್ನ ಪ್ರಧಾನಿ ಮೋದಿ (PM Modi) ವ್ಯಂಗ್ಯ ಮಾಡಿದ್ದಾರೆ.

    ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೇಥಿಯಲ್ಲಿ ಜನಬೆಂಬಲ ಸಿಗದೇ ಓಡಿ ಹೋದ ರಾಹುಲ್ ಗಾಂಧಿ (Rahul Gandhi) ವಯನಾಡಿನಿಂದ ಸ್ಪರ್ಧಿಸಿದ್ದಾರೆ. ಇಲ್ಲೂ ಜನ ಬೆಂಬಲ ಸಿಗುವುದು ಕಷ್ಟವಾಗಿದೆ, ಹೀಗಾಗೀ ಅವರ ಗ್ಯಾಂಗ್ ಚುನಾವಣೆ ಮುಗಿಯಲು ಕಾಯುತ್ತಿದೆ. ಚುನಾವಣೆ ಮುಗಿಯುತ್ತಿದ್ದಂತೆ ವಯನಾಡಿನಿಂದಲೂ ಓಡಿ ಹೋಗಲಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ. ಇದನ್ನೂ ಓದಿ: ಎಲೋನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ – ಸದ್ಯಕ್ಕಿಲ್ಲ ಮೋದಿ ಜೊತೆಗೆ ಮಾತುಕತೆ

    ಐ.ಎನ್‌.ಡಿ.ಐ.ಎ (I.N.D.I.A Block) ಒಕ್ಕೂಟದ ನಾಯಕ ಯಾರು? ಎಂದು ಹೇಳಲು ವಿರೋಧ ಪಕ್ಷದ ನಾಯಕರು ವಿಫಲವಾಗಿದ್ದಾರೆ. ಅವರು (ಕಾಂಗ್ರೆಸ್) ಏನು ಬೇಕಾದರೂ ಹೇಳಿಕೊಳ್ಳಬಹುದು. ಆದ್ರೆ ವಾಸ್ತವವೆಂದರೆ ಚುನಾವಣೆಯ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ ಅವರು ದೊಡ್ಡ ಪ್ರಮಾಣ ಮತದಾನ ಮಾಡುವ ಮೂಲಕ ಎನ್‌ಡಿಎ ಒಕ್ಕೂಟ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

    ನಿನ್ನೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಮತದಾನ ಮಾಡಿದ ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿಗೆ ಮತದಾರರಿಗೆ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ಮತದಾನ ಮುಗಿದ ನಂತರ ಬೂತ್ ಮಟ್ಟದಲ್ಲಿ ನಡೆಸಲಾದ ವಿಶ್ಲೇಷಣೆ ಪ್ರಕಾರ ಮೊದಲ ಹಂತದಲ್ಲಿ ಎನ್‌ಡಿಎಗೆ ಏಕಪಕ್ಷೀಯ ಮತದಾನವಾಗಿದೆ ಎಂದು ಹೇಳಿದರು‌. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹೆಸರಲ್ಲಿ ಸಲ್ಮಾನ್‌ ಖಾನ್‌ ಮನೆಯಿಂದ ಕ್ಯಾಬ್‌ ಬುಕ್‌ ಮಾಡಿದ್ದ ವ್ಯಕ್ತಿ ಬಂಧನ

  • ರಾಯ್ ಬರೇಲಿ, ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ?

    ರಾಯ್ ಬರೇಲಿ, ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ?

    ನವದೆಹಲಿ: ಉತ್ತರ ಪ್ರದೇಶದಲ್ಲಿ (Uttar Pradesh) ಸ್ಪರ್ಧಿಸಲಿರುವ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಬಾಕಿ ಉಳಿದಿರುವ ರಾಯ್ ಬರೇಲಿ (Rae bareli) ಮತ್ತು ಅಮೇಥಿ (Amethi) ಕ್ಷೇತ್ರಕ್ಕೆ ಏಪ್ರಿಲ್ ಅಂತ್ಯದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಮೂಲಗಳು ಹೇಳಿವೆ.

    ಐದನೇ ಹಂತದ ಮತದಾನದಲ್ಲಿ ಬರುವ ಈ ಕ್ಷೇತ್ರಗಳಿಗೆ ಏಪ್ರಿಲ್ 26 ರಿಂದ ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದೆ. ಈ ಹಿನ್ನಲೆ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ರಾಯ್ ಬರೇಲಿ ಮತ್ತು ಅಮೇಥಿ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ ಯಾವುದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ. ಉತ್ತರ ಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸುವಾಗ ಐದನೇ ಹಂತದ ಮತದಾನದ ಕಾರಣ ರಾಯ್ ಬರೇಲಿ ಮತ್ತು ಅಮೇಥಿಯ ಅಭ್ಯರ್ಥಿಗಳ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‌ ತೆರಿಗೆ ಮೌಲ್ಯಮಾಪನ ಕೇಸ್‌ – ಹೈಕೋರ್ಟ್‌ನಲ್ಲೂ ಹಿನ್ನಡೆ ಅರ್ಜಿ ವಜಾ

    ಸೋನಿಯಾ ಗಾಂಧಿ (Sonia Gandhi) ಅನುಪಸ್ಥಿತಿಯಲ್ಲಿ ರಾಯ್ ಬರೇಲಿಯಲ್ಲಿ ಗಾಂಧಿ ಕುಟುಂಬದ ಸದಸ್ಯರೊಬ್ಬರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಮೂಲಗಳ ಪ್ರಕಾರ ಈ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಗಾಂಧಿ ಕುಟುಂಬದಿಂದ ಯಾರೂ ಮುಂದೆ ಬಂದಿಲ್ಲ. ಆದರೆ ರಾಯ್ ಬರೇಲಿ ಕ್ಷೇತ್ರದಲ್ಲಿ ಮೂರು ಬಾರಿ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ವೈಯಕ್ತಿಕವಾಗಿ ದೂರವಾಣಿ ಮೂಲಕವೂ ಹೆಚ್ಚಿನ ಸಂಖ್ಯೆಯಲ್ಲಿ ಸಮೀಕ್ಷೆ ನಡೆಸಲಾಗಿದೆ. ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಗಾಂಧಿ ಕುಟುಂಬಕ್ಕೆ ಈ ಸ್ಥಾನ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸಮೀಕ್ಷೆಯಲ್ಲೂ ಪರಿಶೀಲಿಸಿದೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿಂದೆಂದೂ ಇಷ್ಟೊಂದು ವಿಳಂಬ ಆಗಿರಲಿಲ್ಲ. ಈ ಬಾರಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಪತ್ರ ಬರೆದ ಕೂಡಲೇ ಗಾಂಧಿ ಕುಟುಂಬದಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಊಹಾಪೋಹ ಶುರುವಾಗಿದೆ. ಇದಲ್ಲದೆ ರಾಹುಲ್ ಗಾಂಧಿ ಚುನಾವಣೆಯಲ್ಲಿ ಸೋತ ನಂತರ ಅಮೇಥಿಯಲ್ಲಿ ರಾಹುಲ್ ಮತ್ತೆ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಊಹಾಪೋಹಗಳಿವೆ. ಇದನ್ನೂ ಓದಿ: 40.94 ಕೋಟಿ ರೂ. ಆಸ್ತಿಗೆ ಒಡೆಯ ಹಾಸನದ ಮೈತ್ರಿ ಅಭ್ಯರ್ಥಿ

    ಉತ್ತರಪ್ರದೇಶದಲ್ಲಿ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಸ್ಥಾನಗಳನ್ನು ಈಗ ನಿರ್ಧರಿಸಲಾಗಿದ್ದು, ಕಾಂಗ್ರೆಸ್ ಈಗಾಗಲೇ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸದಿದ್ದರೆ ಅದು ಕಾರ್ಯಕರ್ತರ ನೈತಿಕತೆಯ ಮೇಲೆ ಪರಿಣಾಮ ಬೀರುವುದು ಖಚಿತ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಲ್ಲಿ ಒಬ್ಬರು ಅಥವಾ ಇಬ್ಬರೂ ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಗೆಲುವು ಅಥವಾ ಸೋಲು ತನ್ನದೇ ಆದ ಸ್ಥಾನವನ್ನು ಹೊಂದಬಹುದು. ಆದರೆ ಚುನಾವಣಾ ಕಣಕ್ಕೆ ಪ್ರವೇಶಿಸುವ ಮೂಲಕ, ಸಕಾರಾತ್ಮಕ ಸಂದೇಶವು ಖಂಡಿತವಾಗಿಯೂ ಕಾರ್ಯಕರ್ತರನ್ನು ತಲುಪುತ್ತದೆ ಎಂದು ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್

  • 7 ವರ್ಷದಲ್ಲಿ ಅವರೇನು ಮಾಡಿದ್ದಾರೆ? – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

    7 ವರ್ಷದಲ್ಲಿ ಅವರೇನು ಮಾಡಿದ್ದಾರೆ? – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

    ಲಕ್ನೋ: ಏಳು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಷ್ಟ್ರಕ್ಕೆ ಏನು ಮಾಡಿದೆ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹೋದರ ರಾಹುಲ್ ಗಾಂಧಿಯವರೊಂದಿಗೆ ಉತ್ತರ ಪ್ರದೇಶದ ಅಮೆಥಿಯಲ್ಲಿ ಶನಿವಾರ ರ್‍ಯಾಲಿ ನಡೆಸಿದರು. ಈ ವೇಳೆ ಕೋವಿಡ್-19 ಎರಡನೇ ಅಲೆ ಮತ್ತು ಬೆಲೆ ಏರಿಕೆಯಿಂದಾಗಿ ಜನರ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಮೃತಸಾರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

    ಕೋವಿಡ್-19 ಮೊದಲನೇ ಅಲೆ ವೇಳೆ ಬಿಜೆಪಿ ಏನು ಮಾಡಿದೆ? ಆಕ್ಸಿಜನ್ ಕೊರತೆಗೆ ಪಕ್ಷವು ಕಾರಣವಾಗಿತ್ತು. ಎರಡನೇ ಅಲೆ ವೇಳೆ ಸಾವಿನ ಪ್ರಮಾಣ ಹೆಚ್ಚಾಗಿತ್ತು. ಅದರಲ್ಲಿಯೂ ಆಕ್ಸಿಜನ್ ಮತ್ತು ವೈದ್ಯಕೀಯ ಚಿಕಿತ್ಸೆ ಕೊರತೆ ಹೆಚ್ಚಾಗಿತ್ತು ಎಂದು ಕಿಡಿಕಾರಿದರು.

    ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದು ಕಾಂಗ್ರೆಸ್ ತನ್ನ ಆಡಳಿತದಲ್ಲಿ ಭಾರತಕ್ಕೆ ಕೊಂಚವು ಏನನ್ನು ಸಹ ಮಾಡಿಲ್ಲ ಎಂದು ಬಿಜೆಪಿ ಆಗಾಗ ಆರೋಪಿಸುತ್ತಿರುತ್ತದೆ. ಆದರೆ ಏಳು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಅಮೇಥಿಯಲ್ಲಿ ಏನು ಮಾಡಿದೆ? ಬಿಜೆಪಿ ಪರವಾಗಿ ಏಕಪಕ್ಷೀಯ ಅಭಿವೃದ್ಧಿ ಮಾತ್ರ ನಡೆದಿದೆ ಮತ್ತು ಬೆಲೆ ಏರಿಕೆಯಿಂದ ಜನರು ಕಷ್ಟಪಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ

    ಪ್ರತಿಭಟನಾ ನಿರತ ರೈತರನ್ನು ಕೊಂದ ಆರೋಪ ಹೊತ್ತಿರುವ ಕಿರಿಯ ಗೃಹ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ಇನ್ನೂ ಏಕೆ ವಜಾಗೊಳಿಸಿಲ್ಲ ಎಂದು ಪ್ರಶ್ನಿಸಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ಸುಳ್ಳಿನ ಜಾಲವನ್ನು ಹರಡುತ್ತಿದೆ ಎಂದು ಕೆಂಡಕಾರಿದರು.

  • ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ

    ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ

    ಲಕ್ನೋ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೆಥಿಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಕೋವಿಡ್-19 ಸೋಂಕಿತರಿಗೆ ಅಗತ್ಯವಿರುವ ಮೆಡಿಕಲ್ ಕಿಟ್‍ನನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

    ಪಕ್ಷದ ಸೇವಾ ಸತ್ಯಾಗ್ರಹ ಕಾರ್ಯಕ್ರಮದಡಿ ಸುಮಾರು 10,000 ಮೆಡಿಕಲ್ ಕಿಟ್‍ಗಳು ಬಂದಿದ್ದು, ಅವುಗಳನ್ನು ಅಗತ್ಯವಿರುವ ಜನರಿಗೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮುಖ್ಯಸ್ಥ ಪ್ರದೀಪ್ ಸಿಂಘಾಲ್ ತಿಳಿಸಿದ್ದಾರೆ.

    ಅಮೆಥಿಯ ಮಾಜಿ ಲೋಕಸಭಾ ಸಂಸದರಾಗಿರುವ ರಾಹುಲ್ ಗಾಂಧಿಯವರು ಈ ಮುನ್ನ 20 ಆಮ್ಲಜನಕ ಸಾಂದ್ರಕ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳುಹಿಸಿಕೊಟ್ಟಿದ್ದರು. ಸದ್ಯ ರಾಹುಲ್ ಗಾಂಧಿಯವರು ಕೇರಳದ ವಯನಾಡುವಿನ ಲೋಕಸಭಾ ಸಂಸದರಾಗಿದ್ದಾರೆ. ಇದನ್ನು ಓದಿ: ಪತಿಯ ಸಮ್ಮುಖದಲ್ಲಿಯೇ ಪ್ರೇಮಿಯ ಜೊತೆ ಪತ್ನಿಯ ಮದುವೆ