Tag: ಅಮ್ರಿನ್ ಭಟ್

  • ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿದೆ. ಟಿಕ್ ಟಾಕ್ ಮತ್ತು ಟಿವಿ ಕಾರ್ಯಕ್ರಮಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅಮ್ರೀನ್ ಭಟ್ ಎಂಬ ತಾರೆಯರನ್ನು ಕಾಶ್ಮೀರದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಕಾಶ್ಮೀರ ವಲಯದ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಈ ಹತ್ಯೆ ಸಾಯಂಕಾಲ 7.55ಕ್ಕೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಅಮ್ರೀನ್ ಭಟ್ ಟಿಕ್ ಟಾಕ್ ವಿಡಿಯೋ ಮಾಡುವುದರಲ್ಲಿ ಫೇಮಸ್ ಆಗಿದ್ದರು. ಅಲ್ಲದೇ, ಟಿವಿಗಳಲ್ಲೂ ಅವರು ಜನಪ್ರಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಹೀಗಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಅವರ ಮನೆಗೆ ನುಗ್ಗಿರುವ ಭಯೋತ್ಪಾದಕರು ನಟಿಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅಮ್ರೀನ್ ಅವರ ಸಂಬಂಧಿ ಮಗುವಿಗೂ ತೀವ್ರ ಗಾಯವಾಗಿವೆ ಎನ್ನುವ ಸುದ್ದಿ ಇದೆ. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    35ರ ವಯಸ್ಸಿನ ಅಮ್ರೀನ್ ಭಟ್, ಕಾಶ್ಮೀರದ ಬುದ್ಗಾಮ್ ಜಿಲ್ಲೆಯವರು ಎಂದು ಹೇಳಲಾಗುತ್ತಿದ್ದು, ಕಾಶ್ಮೀರ ಕಿರುತೆರೆ ವಲಯದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೇ, ಕೂಡುಕುಟುಂಬದೊಂದಿಗೆ ಅವರು ವಾಸವಾಗಿದ್ದರು. ಸಂಜೆ ಭಯೋತ್ಪಾದಕರು ಅಮ್ರೀನ್ ಮನೆಗೆ ನುಗ್ಗಿದ್ದು, ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ, ಅವರು ಬದುಕುಳಿದಿಲ್ಲ. ಜೊತೆಗೆ ಹತ್ತು ವರ್ಷದ ಫರ್ಹಾನ್ ಜಬೇರ್ ಎನ್ನುವ ಹುಡುಗ ಕೂಡ ಈ ದಾಳಿಯಲ್ಲಿ ಗಾಯಗೊಂಡಿದ್ದಾನೆ.