Tag: ಅಯನೂರು ಮಂಜುನಾಥ್

  • ಜು.28ರ ಬಳಿಕ ದೇಶದ ರಾಜಕಾರಣದಲ್ಲಿ ಬದಲಾವಣೆ: ಆಯನೂರು ಮಂಜುನಾಥ್

    ಜು.28ರ ಬಳಿಕ ದೇಶದ ರಾಜಕಾರಣದಲ್ಲಿ ಬದಲಾವಣೆ: ಆಯನೂರು ಮಂಜುನಾಥ್

    ಶಿವಮೊಗ್ಗ: ಈ ಬಾರಿ ಅತಂತ್ರ ವಿಧಾನಸಭೆ ಬರಲಿದ್ದು, ಹೆಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದುಕೊಂಡಿದ್ದೆವು. ಆದರೆ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿದ್ದು, ಅವರು ಸಹ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ತಿಳಿಸಿದ್ದಾರೆ.

    ಶಿವಮೊಗ್ಗದ (Shivamogga) ಜೆಡಿಎಸ್ (JDS) ಕಚೇರಿಯಲ್ಲಿ ನಡೆದ ನೂತನ ಶಾಸಕಿ ಶಾರದ ಪೂರ್ಯನಾಯ್ಕ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಜೆಡಿಎಸ್‌ಗೆ ಬಹಳ ಕಡಿಮೆ ಸ್ಥಾನ ದೊರೆತಿದೆ. ಆದರೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಅವರು ವಿಜೃಂಭಿಸುತ್ತಿದ್ದಾರೆ. ಇದೇ ತಿಂಗಳ 28ರ ನಂತರ ಕುಮಾರಸ್ವಾಮಿ ಅವರು ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗುವ ನಿರೀಕ್ಷೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

    28ರ ನಂತರ ಇಡೀ ದೇಶದ ರಾಜಕೀಯ ವಾತಾವರಣ ಬದಲಾಗಲಿದೆ. ನಾನು ಯಾರನ್ನು ಬಿಟ್ಟು ಬಂದೆನೋ, ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಎದುರಿಸುವುದು ಕಷ್ಟ ಎಂದರು. ಇದನ್ನೂ ಓದಿ: ನಾವು ಹೇಳಿದ ಮಾತನ್ನು ನಿಜ ಮಾಡಲು HDK ಹೊರಟಿದ್ದಾರೆ: ದಿನೇಶ್ ಗುಂಡೂರಾವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ

    ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ

    ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ (BJP) ಮುಖಂಡ ಆಯನೂರು ಮಂಜುನಾಥ್ (Ayanur Manjunath) ರಾಜೀನಾಮೆ (Resignation) ಸಲ್ಲಿಸುವುದಾಗಿ ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

     

    ಈ ಹಿಂದೆ ತಿಳಿಸಿದಂತೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನ ಸಭೆ ಪ್ರವೇಶ ಬಯಸಿದ್ದೇನೆ. ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು

    ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವ ಉದ್ದೇಶ ನನ್ನದು. ಫ್ಲೆಕ್ಸ್ನಲ್ಲಿ ಹೇಳಿದಂತೆ ಹರಕು ಬಾಯಿ ಹೊಲಿದು ಒಡೆದ ಮನಸ್ಸುಗಳನ್ನು ಒಗ್ಗೂಡಿಸುವ ನನ್ನ ಪ್ರಯತ್ನಕ್ಕೆ ಈಗಾಗಲೇ ಸ್ವಲ್ಪ ಮಟ್ಟಿಗೆ ಫಲ ದೊರೆತಿದೆ. ಅಶಾಂತ ನಗರ ಎಂಬ ಅಪಖ್ಯಾತಿಯಿಂದ ಶಿವಮೊಗ್ಗವನ್ನು ಮುಕ್ತವಾಗಿಸಲು ನಾನು ಬದ್ಧ. ಆ ಮೂಲಕ ನಗರಕ್ಕೆ ಉದ್ಯಮಗಳು ಬರುವಂತೆ ಮಾಡಿ ಉದ್ಯೋಗಾವಕಾಶ ಕಲ್ಪಿಸಬಯಸಿದ್ದೇನೆ ಎಂದು ನುಡಿದಿದ್ದಾರೆ.

    ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ ಮಾಡುತ್ತಿದ್ದು ನಗರದ ಜನತೆ ನನ್ನ ಬೆಂಬಲಿಸಲು ಮನವಿ ಮಾಡುತ್ತೇನೆ. ತೆನೆ ಹೊರುತ್ತೇನೋ ಇಲ್ಲವೋ ಎಂಬ ಬಗ್ಗೆ ಕೆಲ ನಾಯಕರ ಜೊತೆ ಮಾತನಾಡಿ ನಿರ್ಧರಿಸುತ್ತೇನೆ. ಅದು ರಾಜ್ಯದ ರಾಜಕೀಯ ಪಕ್ಷದ ನಾಯಕರೊಂದಿಗೆ ಎನ್ನುವ ಮೂಲಕ ಜೆಡಿಎಸ್ ಸೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಪರ ಕಿಚ್ಚ ಸುದೀಪ್ ಕ್ಯಾಂಪೇನ್ – ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ