Tag: ಅಯೋಧ್ಯ

  • ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

    ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

    ಬೆಂಗಳೂರು: ದೇವರನ್ನು ಆಟಿಕೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಬಾಲಿಶತನ ತೋರಿದೆ. ಮಾತಿನಲ್ಲಿ ಹಿಡಿತವಿಲ್ಲದೆ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಕಾಂಗ್ರೆಸ್‌ನ (Congress) ಅವನತಿಗೆ ಅಡಿಗಲ್ಲಾಗಲಿದೆ. ಇದು ಮಾರಣಾಂತಿಕ ಕಲ್ಲಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಎಚ್ಚರಿಕೆ ನೀಡಿದ್ದಾರೆ.

    ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರಿಗೆ ರಾಮ, ಸೀತೆ ಎಲ್ಲರೂ ಟೂರಿಂಗ್ ಟಾಕೀಸ್ ಬೊಂಬೆಗಳಂತೆಯೇ ಕಾಣುತ್ತಾರೆ. ಹಿಂದೆ ಇವರೇ ರಾಮನನ್ನು ಕಾಲ್ಪನಿಕ ವ್ಯಕ್ತಿ, ಜನ್ಮ ಪ್ರಮಾಣ ಪತ್ರ ಇಲ್ಲ ಎಂದಿದ್ದರು. ಗುಜರಾತ್‌ನ ಸೋಮನಾಥ ದೇವಾಲಯ ಪುನರುಜ್ಜೀವನಗೊಂಡಾಗ ಅದಕ್ಕೆ ಪ್ರಧಾನಿ ನೆಹರು ಹೋಗಲಿಲ್ಲ. ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಂಡು, ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಗುಣ ಕಾಂಗ್ರೆಸ್‌ನ ರಕ್ತದಲ್ಲೇ ಇದೆ. ವಕೀಲರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಸುಪ್ರಿಂ ಕೋರ್ಟ್ ತೀರ್ಪಿಗೆ ಬೆಲೆ ಕೊಡುವುದಿಲ್ಲ ಎನ್ನುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ 12,400 ಕೋಟಿ ಹೂಡಿಕೆ: ಅದಾನಿ ಗ್ರೂಪ್‌ ಘೋಷಣೆ

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಆರಾಮವಾಗಿ ಗೊರಕೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ನಿದ್ರೆ ಮಾಡುವ ವ್ಯಂಗ್ಯಚಿತ್ರಗಳು ಹರಿದಾಡುತ್ತಿವೆ. ಆದರೆ ಪ್ರಧಾನಿ ಎಲ್ಲೂ ನಿದ್ರೆ ಮಾಡುವುದಿಲ್ಲ. ಮುಖ್ಯಮಂತ್ರಿ ಬರ ಪ್ರದೇಶಗಳಿಗೆ ಹೋಗಿ ಕೆಲಸ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ತಾವು ನಿದ್ರೆ ಮಾಡುವ ಚಿತ್ರವನ್ನು ಫ್ರೇಮ್ ಮಾಡಿಕೊಂಡು ಮನೆ ಮುಂದೆ ಹಾಕಿಕೊಳ್ಳಲಿ. ಇವರ ಹೆಸರೇ ನಿದ್ದೆರಾಮಯ್ಯ ಎಂದು ಬ್ರ‍್ಯಾಂಡ್ ಆಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಮಣಿಸಬೇಕಿದೆ. ಕಳೆದ ಏಳು ತಿಂಗಳಲ್ಲಿ ಕೊಲೆ, ಸುಲಿಗೆ ಹೆಚ್ಚಿದ್ದು, ಅಪರಾಧಿಗಳಿಗೆ ಪ್ರೀತಿ ತೋರಿಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರೇ ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಬ್ರದರ್ ಎಂದು ಹೇಳಿಕೊಳ್ಳುತ್ತಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವಾಪಸ್‌ನಂತಹ ಘಟನೆ ನಡೆಯುತ್ತಿದೆ. ಕಾಂಗ್ರೆಸ್‌ನ ಮೃದು ಧೋರಣೆಯಿಂದ ಅಪರಾಧಿಗಳು ಎದ್ದು ಕುಳಿತಿದ್ದಾರೆ. ಹಾನಗಲ್‌ನ ಅತ್ಯಾಚಾರ ಪ್ರಕರಣದಲ್ಲೂ ಕಠಿಣ ಕ್ರಮ ವಹಿಸಿಲ್ಲ. ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

    ಒಂದು ಕಡೆ ಡಿ.ಕೆ.ಶಿವಕುಮಾರ್, ಮತ್ತೊಂದು ಕಡೆ ಜಿ.ಪರಮೇಶ್ವರ್, ಇನ್ನೊಂದೆಡೆ ಸತೀಶ್ ಜಾರಕಿಹೊಳಿಗೆ ಜೈ ಎನ್ನುವ ಗ್ಯಾಂಗ್ ಇದೆ. ಅಭಿವೃದ್ಧಿಯ ಕಾರ್ಯ ಇಲ್ಲದೆ ಜನರು ರೊಚ್ಚಿಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮಗ ಶಾಸಕರೂ ಅಲ್ಲ. ಅವರು ತಂದೆಯ ಬಗ್ಗೆ ಕುರುಡು ಪ್ರೇಮ ತೋರಿಸಬೇಕಿಲ್ಲ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ

    ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಲ್ಲಾ ಯೋಜನೆ ಮುಂದೂಡಲಾಗುತ್ತಿದೆ. ನೌಕರರ ವೇತನ ಹೆಚ್ಚಳ ಕೂಡ ಮಾಡಿಲ್ಲ. ಸರ್ಕಾರ ದಿವಾಳಿಯಾಗಿ ಜನರು ಇನ್ನಷ್ಟು ಕಷ್ಟ ಪಡಬೇಕಾಗುತ್ತದೆ. ಯುಪಿಎ ಸರ್ಕಾರವಿದ್ದಾಗ ಪರಿಹಾರ ಸಿಗಲು ಬಹಳ ತಡವಾಗಿದ್ದು, ಆಗ ಮಾತ್ರ ಕಾಂಗ್ರೆಸ್ ನಾಯಕರು ಸುಮ್ಮನಿದ್ದರು. ಈಗ ಕೇಂದ್ರದ ಮೇಲೆ ದೂರು ಹೇಳುತ್ತಿದ್ದಾರೆ. ಹಿಂದಿನ ಯುಪಿಎಗೆ ಹೋಲಿಸಿದರೆ ಮೋದಿ ಸರ್ಕಾರ ಶೇ.243 ರಷ್ಟು ಹೆಚ್ಚು ಪರಿಹಾರ ನೀಡಿದೆ ಎಂದರು. ಇದನ್ನೂ ಓದಿ: ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ

    ವರಿಷ್ಠರೊಂದಿಗೆ ಚರ್ಚೆ:
    ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಕುರಿತು ನೀಲಿನಕ್ಷೆ ತಯಾರಾಗಿದೆ. ಹಿರಿಯ ನಾಯಕರು ಇದಕ್ಕೆ ಅಗತ್ಯ ಕ್ರಮಗಳನ್ನು ವಹಿಸಿದ್ದಾರೆ. ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

     

  • ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?

    ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?

    ಗಾಂಧಿನಗರ: ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್‌ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ (Ayodhya) ನೆಲೆಸಿರುವ ಸೀತಾಮಾತೆಗೆ (Sita Mata) ಅರ್ಪಿಸಲು ವಿಶೇಷ ಸೀರೆಯೊಂದು (Saree) ಸಿದ್ಧವಾಗಿದೆ. ಈ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ (Ram Mandir) ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು ಎಂದು ಜವಳಿ ಉದ್ಯಮಿ ಲಲಿತ್ ಶರ್ಮಾ (Lalith Sharma)ತಿಳಿಸಿದ್ದಾರೆ.

    ಸೀರೆಯ ವಿಶೇಷತೆಯೇನು?
    ಸೀತಾಮಾತೆಗೆಂದು ತಯಾರಿಸಿರುವ ಈ ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆಯ ದೇವಾಲಯದ ಮುದ್ರಣವಿದೆ. ಸೀರೆ ತಯಾರಿಯ ಮೊದಲ ಕಚ್ಚಾ ವಸ್ತುವಿನ ತುಣುಕನ್ನು ಸೂರತ್‌ನ ಸೀತಾ ದೇವಿಯ ದೇವಾಲಯಕ್ಕೆ ಅರ್ಪಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಚಿನ್ನದ ಬಾಗಿಲು – ಇನ್ನು 3 ದಿನದಲ್ಲಿ 13 ಬಾಗಿಲು ಅಳವಡಿಕೆ

    ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭೌತಿಕವಾಗಿ ಇರಲು ಸಾಧ್ಯವಾಗದ ಭಕ್ತರು ತಮ್ಮದೇ ಆದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಂಪರ್ಕ ಸಾಧಿಸಲು ಬಯಸಿದ ಕಾರಣ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಲಲಿತ್ ಶರ್ಮ ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ

    ನಾವು ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆ ದೇವಸ್ಥಾನವನ್ನು ಮುದ್ರಿಸಿದ ವಿಶೇಷ ಸೀರೆಯನ್ನು ಸಿದ್ಧಪಡಿಸಿದ್ದೇವೆ. ನಾವು ಅದನ್ನು ಇಲ್ಲಿ ನೆಲೆಸಿರುವ ಸೀತಾಮಾತೆಯ ದೇವಸ್ಥಾನದಲ್ಲಿ ಅರ್ಪಿಸಿದ್ದೇವೆ. ಬಳಿಕ ಈ ಸೀರೆಯನ್ನು ಅಯೋಧ್ಯೆಯ ರಾಮಮಂದಿರಕ್ಕೆ ಕಳುಹಿಸುತ್ತೇವೆ. ಬೇಡಿಕೆ ಬಂದರೆ ಸೀತಾಮಾತೆ ನೆಲೆಸಿರುವ ಎಲ್ಲಾ ರಾಮನ ದೇವಾಲಯಗಳಿಗೆ ನಾವು ಅದನ್ನು ಉಚಿತವಾಗಿ ಕಳುಹಿಸುತ್ತೇವೆ ಎಂದು ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ಶೀಘ್ರದಲ್ಲೇ ಸಂಚರಿಸಲಿವೆ ನೋಯ್ಡಾದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್‌

  • ರಾಮಮಂದಿರ ಉದ್ಘಾಟನೆಗೆ ರಾಕಿಭಾಯ್ ಗೂ ಆಹ್ವಾನ

    ರಾಮಮಂದಿರ ಉದ್ಘಾಟನೆಗೆ ರಾಕಿಭಾಯ್ ಗೂ ಆಹ್ವಾನ

    ಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ. ಮೊನ್ನೆಯಷ್ಟೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಆಹ್ವಾನ ಬಂದಿತ್ತು. ಇದೀಗ ಮತ್ತೋರ್ವ ನಟ ಯಶ್ (Yash) ಅವರಿಗೂ ಕೂಡ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ರಿಷಬ್ ಮತ್ತು ಯಶ್ ಉದ್ಘಾಟನೆ ಸಮಾರಂಭಕ್ಕೆ ಹೋಗಲಿದ್ದಾರೆ.  ಜೊತೆಗೆ ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

    ಕರ್ನಾಟಕದಿಂದ ಸೇವೆ

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

    2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

     

    ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

  • ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ

    ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ

    ಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

    ಕರ್ನಾಟಕದಿಂದ ಸೇವೆ

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

    2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

     

    ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

  • ‘ತಾರಿಣಿ’ಗೆ ಅಯೋಧ್ಯ ಚಿತ್ರೋತ್ಸವ ಪ್ರಶಸ್ತಿ

    ‘ತಾರಿಣಿ’ಗೆ ಅಯೋಧ್ಯ ಚಿತ್ರೋತ್ಸವ ಪ್ರಶಸ್ತಿ

    ಯೋಧ್ಯದಲ್ಲಿ ನಡೆಯುವ ಪ್ರತಿಷ್ಟಿತ ಅಯೋಧ್ಯ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ‘ತಾರಿಣಿ’ (Tarini) ಚಿತ್ರ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರದರ್ಶನಗೊಂಡು ಅತ್ಯುತ್ತಮ ಸಾಮಾಜಿಕ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಈಗಾಗಲೇ ಈ ಚಿತ್ರ ಹಲವಾರು ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶ್ರೀ ಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿ ಬಂಡವಾಳವನ್ನೂ ಹೂಡಿದ್ದಾರೆ. ಕಥೆ, ಚಿತ್ರಕಥೆ , ಸಂಭಾಷಣೆ ಬರೆದು ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿದ್ದಾರೆ.

    ಈ ಕಥೆ ಗರ್ಭಿಣಿ ಹೆಂಗಸಿನ ಕಥೆಯಾಧಾರಿತ ಚಿತ್ರವಾಗಿರುವುದರಿಂದ ನಾಯಕಿ ಮಮತಾ ರಾಹುತ್ ಗರ್ಭಿಣಿ ಪಾತ್ರಕ್ಕೆ ನೈಜ ಗರ್ಭಿಣಿಯಾಗೇ ಮನೋಜ್ಞವಾಗಿ ಅಭಿನಯಿಸಿದ್ದಾರೆ.   ಆಗಷ್ಟೇ ಹುಟ್ಟಿದ ಮಮತಾ ರಾಹುತ್ ಮಗುವಿನ ದೃಶ್ಯಗಳೂ ‘ತಾರಿಣಿ’ ಚಿತ್ರದಲ್ಲಿರುವುದು ವಿಶೇಷ ಎಂದು ನಿರ್ದೇಶಕರು ತಿಳಿಸಿದ್ದಾರೆ. ಈಗಾಗಲೇ ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್‌ ಅವಾರ್ಡ್ಸ್, ಗ್ಲೋಬಲ್ ತಾಜ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಮೋಕ್ಖೊ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಇಂಡೋಗ್ಮಾ ಫಿಲ್ಮ್ ಫೆಸ್ಟಿವಲ್, ಮುಂಬೈ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್, ಬಾಲಿವುಡ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಜೊತೆಗೆ ಆಂಧ್ರಪ್ರದೇಶದಲ್ಲಿ ನಡೆಯುವ ವಿಂಧ್ಯಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ರಾಜಸ್ಥಾನ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲೂ ಈ ಚಿತ್ರ ಆಯ್ಕೆಯಾಗಿ ಮುಂದಿನ ವಾರ ಪ್ರದರ್ಶನಕ್ಕೆ ರೆಡಿಯಾಗಿದೆ. ಫ್ರಾನ್ಸ್ ನ ಗೋಲ್ಡ್ ಫ್ಲಾಷ್ ಇಂಟರ್‌ನ್ಯಾಷನಲ್ ಫೆಸ್ಟಿವಲ್ ನಲ್ಲಿ ಅಫಿಷಿಯಲ್ ಸೆಲೆಕ್ಷನ್ ಆಗಿದೆ. ಉಳಿದಂತೆ ಇನ್ನೂ ಹಲವಾರು ಚಿತ್ರೋತ್ಸವಗಳಿಗೆ ತಾರಿಣಿ ಚಿತ್ರವನ್ನು ಕಳುಹಿಸಲಾಗಿದೆ ಎಲ್ಲಾ ಕಡೆಯಲ್ಲೂ ಪ್ರದರ್ಶನಗೊಂಡು ಪ್ರಶಸ್ತಿ ಗೆಲ್ಲುವ ನಂಬಿಕೆ ಇದೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈಗೊಂದು ತಿಂಗಳಿಂದಲೂ ನಮ್ಮ ಕರ್ನಾಟಕದಲ್ಲಿ ‘ಹೆಣ್ಣು ಭ್ರೂಣ ಹತ್ಯೆ’ ಕುರಿತಾದ ವಿಷಯಗಳು ಎಲ್ಲಾಕಡೆ ಪ್ರಚಲಿತವಾಗಿ ಕರುಳ ಬಳ್ಳಿಗೆ ಕೊಳ್ಳಿ ಇಡುವ ಕೆಲಸಗಳು ನಿರಂತರವಾಗಿ ನಡೆದು ಈಗ ಅದು ಬಹಿರಂಗವಾಗಿದ್ದು ಎಲ್ಲರಿಗು ಕೋಪ ಮತ್ತು ಕಣ್ಣೀರು ಬರಿಸುವ ಸುದ್ದಿಯಾಗಿ ಹೊರಹೊಮ್ಮಿತ್ತು. ನಾವು ಇದೇ ವಿಷಯವನ್ನು ಕೇಂದ್ರೀಕರಿಸಿ ಸರ್ಕಾರದ ಮತ್ತು ಸ್ವಸ್ತ ನಾಗರೀಕ ಸಮಾಜದ ಪ್ರತಿನಿಧಿಯಾಗಿ ಭವಿಷ್ಯದ ಹಿತಚಿಂತನೆಯಿಂದ ಈ ಕಥೆಯನ್ನು ಸಿದ್ದಪಡಿಸಿದ್ದೇವೆ,  ಖಂಡಿತ ಇದೊಂದು ಉತ್ತಮ ಚಿತ್ರವಾಗಿ ಎಲ್ಲರ ಗಮನಸೆಳೆದು ಯಶಸ್ವಿಯಾಗುತ್ತದೆ. ಇಂತಹ ವಿಭಿನ್ನ ಪ್ರಯತ್ನಕ್ಕೆ ಕನ್ನಡಿಗರು ಯಾವತ್ತೂ ಕೈಜೋಡಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆ ಚಿತ್ರತಂಡ.

    ನಾಯಕನಾಗಿ ರೋಹಿತ್ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿ ಅಭಿನಯಿಸಿದ್ದಾರೆ. ಮುಖ್ಯಪಾತ್ರದಲ್ಲಿ ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ವಿಜಯಲಕ್ಷ್ಮಿ, ಪ್ರಮಿಳಾ ಸುಬ್ರಹ್ಮಣ್ಯ, ಸನ್ನಿ, ಶೀಬಾ, ದೀಪಿಕಾ  ಗೌಡ, ಕವಿತ ಕಂಬಾರ್, ಮಟಿಲ್ಢಾ ಡಿಸೋಜಾ,ತೇಜಸ್ವಿನಿ, ಅರ್ಚನ ಗಾಯಕ್ವಾಡ್, ಮಂಜು ನಂಜನಗೂಡು, ರಘು ಸಮರ್ಥ್, ಪ್ರಿನ್ಸ್ ಜಿತಿನ್ ಕೋಟ್ಯಾನ್, ಬೇಬಿ ರಿಧಿ, ಬೇಬಿ ನಿಶಿತಾ,ಚೈತ್ರ, ಶ್ವೇತ ಮುಂತಾದವರು ಅಭಿನಯಿಸಿದ್ದಾರೆ.  ಈ ಚಿತ್ರಕ್ಕೆಅನಂತ್ ಆರ್ಯನ್ ಸಂಗೀತ ಸಂಯೋಜಿದರೆ, ದೀಪಕ್ ಸಂಕಲನ, ಕಲೆ  ಬಸವರಾಜ್ ಆಚಾರ್ಯ, ಡಿ.ಐ ಕೆಲಸವನ್ನು ನಿಖಿಲ್ ಕಾರಿಯಪ್ಪ ನಿರ್ವಹಿಸಿದ್ದಾರೆ.

  • ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದ ನಟ ರಜನಿಕಾಂತ್

    ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದ ನಟ ರಜನಿಕಾಂತ್

    ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಅಯೋಧ್ಯಗೆ (Ayodhya) ತೆರಳಿ ಶ್ರೀರಾಮನ (Sriram) ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದರು. ಡಲಿದ್ದಾರೆ.

    ಮೊನ್ನೆಯಷ್ಟೇ ರಜನಿಕಾಂತ್ (Rajanikanth) ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ನಿನ್ನೆ  (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಲಕ್ನೋದಲ್ಲಿ ಸಿಎಂ ಮತ್ತು ಅಭಿಮಾನಿಗಳ ಜೊತೆಗೆ ‘ಜೈಲರ್’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಮುಂದಿನ ಚಿತ್ರಕ್ಕೆ ನಾಯಕಿಯಾದ ಬೆಂಗಳೂರಿನ ಬೆಡಗಿ

    ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರಕ್ಕಾಗಿ ಲಕ್ನೋದಲ್ಲಿ ತಲೈವಾ ಬೀಡು ಬಿಟ್ಟಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ನಿನ್ನೆ ಸಂಜೆ 7ಕ್ಕೆ ‘ಜೈಲರ್’ ಸಿನಿಮಾ ನೋಡೋದು ಫಿಕ್ಸ್ ಆಗಿತ್ತು. ಅಷ್ಟೇ ಅಲ್ಲದೇ, ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ಕೂಡ ತಲೈವಾ ಭೇಟಿಯಾಗಿದ್ದರು.

    ಜೈಲರ್ ಸಿನಿಮಾದಲ್ಲಿ ತಲೈವಾಗೆ ಶಿವಣ್ಣ, ಮೋಹನ್ ಲಾಲ್, ಜಾಕಿ ಶ್ರಾಫ್ ಸಾಥ್ ನೀಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, ನೂರಾರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಮ ಜನ್ಮಭೂಮಿಯಲ್ಲಿ ಫಸ್ಟ್ ಗ್ಲಿಂಪ್ಸ್ ರಿಲೀಸ್ ಮಾಡಿದ ನಟ ಅರು

    ರಾಮ ಜನ್ಮಭೂಮಿಯಲ್ಲಿ ಫಸ್ಟ್ ಗ್ಲಿಂಪ್ಸ್ ರಿಲೀಸ್ ಮಾಡಿದ ನಟ ಅರು

    ಮುದ್ದು ಮನಸ್ಸೆ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ (Arun Ram Gowda), ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು.ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಆನಂತರ ಸಿನಿಮಾ ರಂಗದಿಂದ ದೂರವಾದರು. ಒಳ್ಳೊಳ್ಳೆ ಚಿತ್ರಗಳನ್ನು ಮಾಡಿದ್ದವರು ಸಡನ್ನಾಗಿ ದೂರವಾಗಿದ್ದು ಯಾಕೆ ಎಂಬ ಪ್ರಶ್ನೆ ಮೂಡಿತ್ತು.

    ಇದೀಗ ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬ. ಈ ದಿನದಂದು ತಮ್ಮ ಚಿತ್ರದ ಮೊದಲ ಗ್ಲಿಂಪ್ಸನ್ನು (First Glimpse)  ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಸಿನಿಮಾ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ನುರಿತರವೇ ಇರುತ್ತಾರೆ ಎನ್ನುತ್ತಾರೆ ಅರು ಗೌಡ.

    ಮುಂದುವರೆದು ಮಾತನಾಡಿರುವ ಅವರು, ‘ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ’ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೃದ್ಧ ಮಹಿಳೆಯರನ್ನೇ ರೇಪ್ ಮಾಡಿ, ಕೊಲೆ ಮಾಡ್ತಿದ್ದ 20ರ ಯುವಕ- ಸೈಕೋ ಕಿಲ್ಲರ್ ಅರೆಸ್ಟ್

    ವೃದ್ಧ ಮಹಿಳೆಯರನ್ನೇ ರೇಪ್ ಮಾಡಿ, ಕೊಲೆ ಮಾಡ್ತಿದ್ದ 20ರ ಯುವಕ- ಸೈಕೋ ಕಿಲ್ಲರ್ ಅರೆಸ್ಟ್

    ಲಕ್ನೋ: ಕಳೆದ 50 ದಿನಗಳಲ್ಲಿ ನಾಲ್ವರು ವೃದ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ 20 ವರ್ಷದ ಯುವಕನನ್ನ ಪೊಲೀಸರು (Police) ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಮೃತ ಮಹಿಳೆಯರು (Women) 50 ರಿಂದ 65 ವರ್ಷ ವಯಸ್ಸಿನವರು ಹಾಗೂ ಉತ್ತರ ಪ್ರದೇಶದ ಅಯೋಧ್ಯೆ (Ayodhya) ಹಾಗೂ ಬಾರಾಬಂಕಿ ಜಿಲ್ಲೆಗಳಿಗೆ ಸೇರಿದವರು. ಆರೋಪಿ ಅಮರೇಂದ್ರ (20) ಎಂದು ಗುರುತಿಸಿದ್ದು, ಅಯೋಧ್ಯೆಯ ಮಾವಾಯಿ ಪೊಲೀಸ್ ಠಾಣಾ (Mawai Police Station)  ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಉನ್ಹೌನಾ ಗ್ರಾಮಸ್ಥರ ಗುಂಪೊಂದು `ಸೈಕೋ’ ಕಿಲ್ಲರ್‌ನನ್ನ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ ಎಂದು ಅಯೋಧ್ಯೆ ಹೆಚ್ಚುವರಿ ಎಸ್‌ಪಿ ಅತುಲ್ ಕುಮಾರ್ ಸೋಂಕರ್ ತಿಳಿಸಿದ್ದಾರೆ.

    ಉನ್ಹೌನಲ್ಲಿ (Unhauna) 5ನೇ ಮಹಿಳೆಯನ್ನ ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಿದ್ದಾಗ ಯುವಕನನ್ನ ಸ್ಥಳೀಯರು ಸೆರೆಹಿಡಿಸಿದ್ದಾರೆ. ಬಳಿಕ ಮಾವಾಯಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ರೆಬೆಲ್ ಯತ್ನಾಳ್‍ಗೆ ಹೈಕಮಾಂಡ್ ಮತ್ತೆ ಮಾಫಿ- ಓನ್ಲಿ ವಾರ್ನಿಂಗ್, ನೋ ಆಕ್ಷನ್

    ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅಮರೇಂದ್ರ ಇತರ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿರ್ಜನ ಪ್ರದೇಶದಲ್ಲಿ ಮಹಿಳೆಯರು ಒಂಟಿಯಾಗಿ ಕಂಡಾಗೆಲ್ಲಾ ಅಪರಾಧ ಎಸಗಿದ್ದಾಗಿ ಹೇಳಿದ್ದಾನೆ.

    ತನಿಖೆ ಬಳಿಕ ಆರೋಪಿ ಅಮರೇಂದ್ರ ಯಾವುದೇ ಸ್ಪಷ್ಟ ಉದ್ದೇಶ ಹೊಂದಿಲ್ಲ. ಲೈಂಗಿಕ ಉದ್ದೇಶದಿಂದ ಅತ್ಯಾಚಾರ ಎಸಗಿ ಮಹಿಳೆಯರನ್ನು ಕೊಂದಿರುವುದು ಸ್ಪಷ್ಟವಾಗಿದೆ. ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ

    ಸೈಕೋ ಕಿಲ್ಲರ್ ಕಥೆಯೇ ರೋಚಕ: 2022ರ ಡಿಸೆಂಬರ್ 5 ರಂದು ಮೊದಲ ಮಹಿಳೆಯ ಕೊಲೆ ಬಹಿರಂಗವಾಯಿತು. ಮಾವಾಯಿಯ ಖುಶೆಟಿ ಗ್ರಾಮದ 60 ವರ್ಷದ ಮಹಿಳೆ ಬೆಳಗ್ಗೆ ಮನೆಯಿಂದ ಹೋದ ನಂತರ ಹಿಂದಿರುಗಲಿಲ್ಲ. ಮರುದಿನ ಆಕೆಯ ಬೆತ್ತಲೆ ದೇಹವು ಮುಖ ಮತ್ತು ತಲೆಯ ಮೇಲೆ ಗಾಯದ ಗುರುತುಗಳೊಂದಿಗೆ ಪೊಲೀಸರಿಗೆ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಗೊತ್ತಾಗಿತ್ತು.

    CRIME COURT

    ಇದಾದ ನಂತರ ಡಿಸೆಂಬರ್ 17 ರಂದು ಇಬ್ರಾಹಿಂಬಾದ್ ಗ್ರಾಮದ ಹೊಲವೊಂದರಲ್ಲಿ 62 ವರ್ಷದ ಮಹಿಳೆಯ ಮೃತದೇಹ ಇದೇ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಂತರ ಡಿ.29 ರಂದು 55 ವರ್ಷದ, ಡಿಸೆಂಬರ್ 29 ರಂದು ಥಥರ್ಹಾ ಗ್ರಾಮದಿಂದ ಮಹಿಳೆಯೊಬ್ಬರು ಕಾಣೆಯಾಗಿದ್ದರು. ಮರುದಿನ ಹೊಲದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಎಲ್ಲ ಕೊಲೆಗಳೂ ಒಂದೇ ಮಾದರಿಯಲ್ಲಿ ಇತ್ತೆಂದು ಗುರುತಿಸಲಾಗಿತ್ತು. ನಂತರ ಪೊಲೀಸ್ ಇಲಾಖೆ ಶೀಘ್ರವೇ ಹಂತಕನನ್ನು ಹಿಡಿಯಲು 6 ವಿಶೇಷ ತಂಡಗಳನ್ನು ರಚಿಸಿತ್ತು. ಕೊನೆಗೆ ಸಾರ್ವಜನಿಕರ ಗುಂಪೊಂದರ ಸಹಾಯದಿಂದ ಪೊಲೀಸರು ಕಾಮುಕ ಹಂತಕನನ್ನ ಬಂಧಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು – ಪೇಜಾವರ ಶ್ರೀ

    ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು – ಪೇಜಾವರ ಶ್ರೀ

    ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು (Political Parties) ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (VishwaPrasanna Tirtha Swamiji) ಕರೆ ನೀಡಿದ್ದಾರೆ.

    ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ (Lord Rama) ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.

    ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (RamMandir) ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

    ಚರ್ಚಿಸಿ ತೀರ್ಮಾನ ಕೈಗೊಳ್ಳಿ: ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು, ಶಿಕ್ಷಣ ತಜ್ಞರು ಹಾಗೂ ಮನಶಾಸ್ತ್ರಜ್ಞರು ಇದ್ದಾರೆ, ಅವರೊಂದಿಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಇದನ್ನ ಕೇವಲ ಒಬ್ಬರು ಮಾತ್ರ ತೀರ್ಮಾನ ಮಾಡಬಾರದು. ಇದರಿಂದ ಸಮಾಜದಲ್ಲಿ ಗೊಂದಲ ನಿರ್ಮಾಣ ಆಗುತ್ತದೆ. ಎಲ್ಲರೂ ಚರ್ಚಿಸಿ ತೀರ್ಮಾನ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ಪ್ರಭಾಸ್ ನಟಿಸಿರುವ ‘ಆದಿಪುರುಷ್’ (Adipurush) ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಈ ಹಿಂದೆ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗಿತ್ತು. ಇದೀಗ ಪ್ರತಿಭಟನೆಯ (Protest) ಅಖಾಡಕ್ಕೆ ಅಯೋಧ್ಯ (Ayodhya) ಅರ್ಚಕರು ಇಳಿದಿದ್ದು, ಈ ಸಿನಿಮಾವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಮನಿಗೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದ್ದಾರೆ.

    ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಟೀಸರ್ ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾ ಬೆನ್ನು ಬಿದ್ದಿದ್ದು, ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಆದ ಪ್ರಮಾದಗಳನ್ನು ಪಟ್ಟಿ ಮಾಡಿರುವ ಅವರು, ತಪ್ಪುಗಳನ್ನು ತಿದ್ದಿಕೊಳ್ಳಲು ಸೂಚಿಸಿದ್ದಾರೆ.

    ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಮಿಶ್ರಾ, ಲೆದರ್ ಬಟ್ಟೆಗಳನ್ನು ಹಾಕಿರುವ ಕುರಿತು ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಪತ್ರ ಬರೆಯುವುದಾಗಿ ತಿಳಿಸಿರುವ ಅವರು, ಒಂದು ವೇಳೆ ಆ ದೃಶ್ಯಗಳನ್ನು ತಗೆದು ಹಾಕದೇ ಇದ್ದರೆ ಕಾನೂನು ಕ್ರಮಕ್ಕೂ ತಾವು ಹಿಂಜರಿಯುವುದಿಲ್ಲ ಎನ್ನುತ್ತಾರೆ.  ಇಂತಹ ಅಪಮಾನಗಳನ್ನು ಯಾವತ್ತಿಗೂ ಹಿಂದೂಗಳ ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ಆದಿ ಪುರುಷ್ ಟೀಸರ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಪ್ರಭಾಸ್ (Prabhas) ಕೂಡ ಕೋಪ ಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭ ಮುಗಿದ ನಂತರ ನಿರ್ದೇಶಕರನ್ನು ತಮ್ಮ ರೂಮ್ ಗೆ ಕರೆದು ಬೈದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಸೈಫ್ ಅಲಿ ಖಾನ್ ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾವಣನ ರೀತಿಯಲ್ಲಿ ಅವರು ಕಾಣುತ್ತಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]