Tag: ಅಯೋಧ್ಯೆ ಕೇಸ್
-

ಅಯೋಧ್ಯೆ ತೀರ್ಪು ಸಮಾಧಾನ ತಂದಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
ನವದೆಹಲಿ: ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲರಾದ ಜಫ್ರಯಾಬ್ ಗಿಲಾನಿ, ನ್ಯಾಯಾಧೀಶರು ಸಂಕ್ಷಿಪ್ತವಾಗಿ ತೀರ್ಪನ್ನು ಓದಿದ್ದರಿಂದ ಸಂಪೂರ್ಣ ಪ್ರತಿಯನ್ನು ಪಡೆದುಕೊಂಡು ಓದಿ ಮುಂದಿನ ನಿರ್ಧಾರವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು. ಇದು ನ್ಯಾಯವಾದ ತೀರ್ಪು ಎಂದು ಒಪ್ಪಿಕೊಳ್ಳಲು ಆಗುತ್ತಿಲ್ಲ. ಷರಿಯಾ ಕಾನೂನಿನ ಪ್ರಕಾರ ಮಸೀದಿಯನ್ನು ಯಾರಿಗೂ ಕೊಡುಗೆಯಾಗಿ ನೀಡಲು ಬರಲ್ಲ. ಆದರೂ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ವಿವಾದಿತ ಜಮೀನಿನ ಹಕ್ಕು ರಾಮಲಲ್ಲಾಗೆ ನೀಡಿದೆ. ಸುಪ್ರೀಂಕೋರ್ಟ್ ಅದೇ ಮಸೀದಿಯಲ್ಲಿ ನಮಾಜ್ ಮಾಡಿದ್ದರು ಎಂಬುದನ್ನು ತನ್ನ ಆದೇಶದಲ್ಲಿ ಹೇಳುತ್ತದೆ ಎಂದು ತಿಳಿಸಿದರು.
Zafaryab Jilani, All India Muslim Personal Law Board: We will file a review petition if our committee agrees on it. It is our right and it is in Supreme Court's rules as well. #AyodhyaJudgment https://t.co/ICu8y7fOzI pic.twitter.com/iAoOIcjMTz
— ANI (@ANI) November 9, 2019
ನ್ಯಾಯಾಲಯ ನೀಡಿದ ಐತಿಹಾಸಿಕ ತೀಪನ್ನು ಎಲ್ಲರೂ ಸ್ವಾಗತಿಸಬೇಕಿದೆ. ಎಲ್ಲರೂ ಶಾಂತಿ ಕಾಪಾಡಿಕೊಳ್ಳಬೇಕು. ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಭೆ ನಡೆಸಲಾಗುತ್ತದೆ. ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡಲಾಗಿದೆ ಎಂದು ಹೇಳಿದರೂ ಆ ಸ್ಥಳವನ್ನು ಬೇರೆಯವರಿಗೆ ನೀಡಲಾಗಿದೆ. ತೀರ್ಪಿನ ಕೆಲ ಅಂಶಗಳ ಬಗ್ಗೆ ಮಾತ್ರ ನಮಗೆ ಅಸಮಾಧಾನವಿದೆ. ಅದೇ ಸ್ಥಳದಲ್ಲಿ ಹಿಂದೂಗಳು ಪೂಜೆ ಮಾಡಿರುವ ಸಾಕ್ಷ್ಯವನ್ನು ಒಪ್ಪಿಕೊಳ್ಳುವ ಸುಪ್ರೀಂಕೋರ್ಟ್ ನಮಾಜ್ ಮಾಡಿರುವುದನ್ನು ಒಪ್ಪಿಕೊಂಡಿಲ್ಲ. ಈ ರೀತಿಯ ಕೆಲವೊಂದು ಅಂಶಗಳ ಬಗ್ಗೆ ಸಣ್ಣ ಗೊಂದಲಗಳಿವೆ. ತೀರ್ಪಿನ ಪ್ರತಿಯನ್ನು ಓದಿದಾಗಲೇ ಎಲ್ಲವೂ ಬಗೆಹರಿಯಲಿದೆ ಎಂದು ತಿಳಿಸಿದರು.
Zafaryab Jilani, Sunni Waqf Board Lawyer: We respect the judgement but we are not satisfied, we will decide further course of action. #AyodhyaJudgment pic.twitter.com/5TCpC0QXl6
— ANI (@ANI) November 9, 2019
ತೀರ್ಪಿನ ಪ್ರಮುಖ ಅಂಶಗಳು:
ಮುಸ್ಲಿಮರಿಗೆ 5 ಎಕ್ರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.
ಸುಪ್ರೀಂ ತೀರ್ಪಿನ ಲಾಭವನ್ನು ಕೇಂದ್ರ ಪಡೆದುಕೊಳ್ಳಬಾರದು: ಉದ್ಧವ್ ಠಾಕ್ರೆhttps://t.co/P2rPNIlI9c#AyodhyaJudgement #BabriMasjid #AyodhyaCase #RamMandirVerdict #SupremeCourt #UddhavThackeray #UnionGovernment @BJP4Karnataka @INCKarnataka #Shivasena
— PublicTV (@publictvnews) November 9, 2019
ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.
ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.
ದೇವಾಲಯ ನಿರ್ಮಾಣಕ್ಕೆ ಅನುಮತಿ -ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಭೂಮಿ ನೀಡಿhttps://t.co/v8HCPvPULt#AyodhyaCase #AyodhyaJudgment #AyodyaVerdict #SupremeCourt
— PublicTV (@publictvnews) November 9, 2019
ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.
ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ. ನಿರ್ಮೋಹಿ ಅಖಾಡದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾಡಕ್ಕೆ ಪ್ರತಿನಿಧ್ಯ ನೀಡಬೇಕು.
-

ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು – ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ: ಅಯೋಧ್ಯೆಯಲ್ಲಿನ 2.77 ಎಕ್ರೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕ್ರೆ ಪ್ರತ್ಯೇಕ ಜಾಗ ನೀಡಬೇಕೆಂದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನಿಕಾ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.
ಆದೇಶದ ಪ್ರಮುಖ ಅಂಶಗಳು
ಮುಸ್ಲಿಮರಿಗೆ 5 ಎಕ್ರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.
ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.
ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.
ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ.
Kartik Chopra, spokesperson, Nirmohi Akhara: Nirmohi Akhara is grateful that SC has recognised our fight of last 150 years and has given the Nirmohi Akhara adequate representation in the trust to be set up by the Central Government to build & manage the Shri Ram Janmasthan Temple
— ANI (@ANI) November 9, 2019
ನಿರ್ಮೋಹಿ ಅಖಾಡದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾಡಕ್ಕೆ ಪ್ರತಿನಿಧ್ಯ ನೀಡಬೇಕು.

ಏನಿದು ಪ್ರಕರಣ?
2010 ರಲ್ಲಿ ಅಲಹಾಬಾದ್ ಹೈಕೋರ್ಟ್ 2.77 ಎಕರೆಗಳ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಜಾಗವನ್ನು ಮೂರು ಭಾಗಗಳಾಗಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ, ರಾಮ್‍ಲಲ್ಲಾಗೆ ಸಮಾನ ಹಂಚಿಕೆ ಮಾಡಲಾಗಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ 14 ಮೇಲ್ಮನವಿ ಅರ್ಜಿಗಳು ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಂಧಾನ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸೂಚನೆ ನೀಡಿತ್ತು. ಆದರೆ ಈ ಸಂದರ್ಭದಲ್ಲೇ ಹಿಂದೂ ಧರ್ಮದ ಸಂಘಟನೆಗಳು 1950 ರಿಂದಲೂ ತೀರ್ಪಿಗಾಗಿ ಕಾಯುತ್ತಿದ್ದು, ಸಂಧಾನದಿಂದ ಇದರ ಪರಿಹಾರ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದರು. ಅಯೋಧ್ಯೆ ವಿಚಾರ ಬಹಳ ಸೂಕ್ಷ್ಮವಾಗಿರುವ ಕಾರಣ ಸಂವಿಧಾನ ಪೀಠ ಸಂಧಾನದ ಮೂಲಕ ಬಗೆಹರಿಸಲು ಮಧ್ಯಸ್ಥಿಕೆ ತಂಡವನ್ನು ರಚಿಸಿತು. ಈ ತಂಡ ನಡೆಸಿದ ಸಂಧಾನ ಪ್ರಕ್ರಿಯೆ ವಿಫಲವಾದ ಹಿನ್ನೆಲೆಯಲ್ಲಿ ಅಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. -

ಅಯೋಧ್ಯೆ ಕೇಸ್ ಇಂದು ತೀರ್ಪು ಪ್ರಕಟ – ಶನಿವಾರವೇ ತೀರ್ಪು ಪ್ರಕಟಗೊಳ್ಳುತ್ತಿರುವುದು ಯಾಕೆ?
ನವದೆಹಲಿ: ಸಾಧಾರಣವಾಗಿ ಸುಪ್ರೀಂ ಕೋರ್ಟ್ ಶನಿವಾರ ತೀರ್ಪು ಪ್ರಕಟಿಸುವುದಿಲ್ಲ. ಆದರೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸುವ ಮೂಲಕ ಮುಖ್ಯ ನ್ಯಾ. ರಂಜನ್ ಗೊಗೋಯ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ನವೆಂಬರ್ 17ರಂದು ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿ ಆಗಲಿರುವ ಹಿನ್ನೆಲೆಯಲ್ಲಿ ಈ ವಾರ ಅಥವಾ ಮುಂದಿನ ವಾರ ತೀರ್ಪು ಪ್ರಕಟವಾಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಶನಿವಾರವೇ ಪ್ರಕಟವಾಗಬಹುದು ಎನ್ನುವ ನಿರೀಕ್ಷೆ ಇರಲಿಲ್ಲ. ಗೊಗೋಯ್ ಅವರ ಕೊನೆಯ ಕೆಲಸದ ದಿನಾಂಕ ನ.16 ಶನಿವಾರ ಆಗಿದ್ದರಿಂದ ಈ ವಾರ ತೀರ್ಪು ಪ್ರಕಟವಾಗದ ಕಾರಣ ನವೆಂಬರ್ 14, 15 ರಂದು ತೀರ್ಪು ಪ್ರಕಟವಾಗಬಹುದು ಎನ್ನುವ ನಿರೀಕ್ಷೆ ಇತ್ತು. ಇದನ್ನೂ ಓದಿ:ಸಂವಿಧಾನ ಪೀಠದಿಂದ ಅಯೋಧ್ಯೆ ತೀರ್ಪು – ಐವರು ನ್ಯಾಯಾಧೀಶರ ಕಿರು ಪರಿಚಯ ಓದಿ

ಅಯೋಧ್ಯೆ ವಿಚಾರ ಬಹಳ ಸೂಕ್ಷ್ಮವಾಗಿರುವ ಕಾರಣ ಸಂವಿಧಾನ ಪೀಠ ಸಂಧಾನದ ಮೂಲಕ ಬಗೆಹರಿಸಲು ಮಧ್ಯಸ್ಥಿಕೆ ತಂಡವನ್ನು ರಚಿಸಿತು. ಈ ತಂಡ ನಡೆಸಿದ ಸಂಧಾನ ಪ್ರಕ್ರಿಯೆ ವಿಫಲವಾದ ಹಿನ್ನೆಲೆಯಲ್ಲಿ ಅಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು.

ಇಂದು ತೀರ್ಪಿನ ದಿನಾಂಕ ಪ್ರಕಟಗೊಳ್ಳುವ ಮೊದಲೇ ರಂಜನ್ ಗೊಗೋಯ್ ಅವರು ಶುಕ್ರವಾರ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಮತ್ತು ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಸಿಂಗ್ ಅವರನ್ನು ಭೇಟಿಯಾಗಿ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದ್ದರು. ಸುಪ್ರೀಂ ನ್ಯಾಯಮೂರ್ತಿಗಳೇ ಸರ್ಕಾರದ ಪ್ರತಿನಿಧಿಗಳ ಜೊತೆ ಕಾನೂನು ಬಗ್ಗೆ ಚರ್ಚೆ ನಡೆಸಿರುವುದು ಬಹಳ ಅಪರೂಪ.

ಸಾಧಾರಣವಾಗಿ ಒಂದು ದಿನ ಅಥವಾ ಎರಡು ದಿನದ ಮೊದಲು ತೀರ್ಪು ಪ್ರಕಟಗೊಳ್ಳುವ ದಿನಾಂಕವನ್ನು ಸುಪ್ರೀಂ ಕೋರ್ಟ್ ಪ್ರಕಟಿಸುತ್ತದೆ. ಆದರೆ ಈ ಪ್ರಕರಣದಲ್ಲಿ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶುಕ್ರವಾರ ರಾತ್ರಿ ನ್ಯಾಯಮೂರ್ತಿಗಳು ದಿನಾಂಕ ಪ್ರಕಟಿಸಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.

ಮೊದಲೇ ದಿನಾಂಕ ಪ್ರಕಟಿಸಿದರೆ ಸಮಾಜ ವಿರೋಧಿ ಜನರಿಗೆ ಅವಕಾಶ ಸಿಗುತ್ತದೆ. ಅಷ್ಟೇ ಅಲ್ಲದೇ ನ.10 ಭಾನುವಾರ ಸಾರ್ವಜನಿಕ ರಜೆಯಿದೆ. ಹೀಗಾಗಿ ಯಾವುದೇ ರೀತಿಯಲ್ಲಿ ಯಾರಿಗೂ ಸಮಸ್ಯೆ ಆಗದೇ ಇರಲು ರಂಜನ್ ಗೊಗೋಯ್ ಅವರು ದಿಢೀರ್ ಆಗಿ ಶುಕ್ರವಾರ ರಾತ್ರಿ ತೀರ್ಪು ಪ್ರಕಟಿಸುವ ದಿನಾಂಕವನ್ನು ಘೋಷಣೆ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ.
