Tag: ಅಯೋಧ್ಯೆ ರಾಮಮಂದಿರ

  • ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

    ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

    ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ (Rama lalla Pran Pratishtha) ನೆರವೇರಲು ಕೌಂಟ್‌ಡೌನ್‌ ಶುರುವಾಗಿದೆ. ಅಯೋಧ್ಯೆಯ ಬೀದಿ ಬೀದಿಗಳು ತಳಿರು ತೋರಣಗಳಿಂದ ಕಂಗೊಳಿಸುತ್ತಿವೆ. ಇಡೀ ವಿಶ್ವದಾದ್ಯಂತ ಶ್ರೀರಾಮನ ಭಕ್ತರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿವೆ.

    ಈ ಬೆನ್ನಲ್ಲೇ ದೆಹಲಿಯ ಏಮ್ಸ್ ಆಸ್ಪತ್ರೆ (AIIMS Hospital) ಅರ್ಧ ದಿನ ರಜೆ ಘೋಷಿಸಿದೆ. ಜನವರಿ 22ರಂದು ಮಧ್ಯಾಹ್ನ 2.30ರಿಂದ ದೆಹಲಿ ಏಮ್ಸ್ ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆದರೆ ಸೋಮವಾರ 2.30ರ ವರಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

    ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಭಕ್ತರು ಸಜ್ಜಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳೂ ಪವಿತ್ರ ಕಾರ್ಯಕ್ರಮವನ್ನ ವೀಕ್ಷಿಸಲು ಹಾಗೂ ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿದೆ.

    ಉತ್ತರ ಪ್ರದೇಶ ಸರ್ಕಾರ ಆರಂಭದಲ್ಲಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿತ್ತು. ನಂತರ ಪ್ರಾಣಪ್ರತಿಷ್ಠೆ ದಿನ ಸಾರ್ವಜನಿಕ ರಜೆ ಘೋಷಿಸಿದೆ. ಸರ್ಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು, ಖಾಸಗಿ ಸಂಸ್ಥೆ, ಕೇಚರಿಗಳಿಗೂ ರಜೆ ನೀಡಲಾಗಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೆ ಕೌಂಟ್‌ಡೌನ್ – ಬೆಂಗ್ಳೂರಿನಿಂದ ಅಯೋಧ್ಯೆಗೆ ಹೆಚ್ಚುವರಿ ರೈಲು ಸೇವೆ, ಇಲ್ಲಿದೆ ಡಿಟೇಲ್ಸ್‌ 

  • ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು

    ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು

    ಚಾಮರಾಜನಗರ: ಅತ್ತ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜಾಮರಾಜನಗರ ಬಂಧಿಖಾನೆ ವಿಭಿನ್ನ ಆಚರಣೆಗೆ ಸಾಕ್ಷಿಯಾಗಿದೆ.

    ವಿಚಾರಣಾಧೀನ ಕೈದಿಗಳಿಗೆ ಅಯೋಧ್ಯೆಯ ಮಂತ್ರಾಕ್ಷತೆ, ರಾಮ ಕಥಾ ಮಹಿಮೆ ಪುಸ್ತಕ ಹಾಗೂ ತುಳಸಿಮಾಲೆ ವಿತರಿಸಲಾಗಿದ್ದು ಕೈದಿಗಳ ಬಾಯಲ್ಲಿ ರಾಮ ನಾಮ ಜಪ ಮೂಡಿಬಂದಿದೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ಅಗ್ನಿ ಪರೀಕ್ಷೆ; ಚುನಾವಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸುಪ್ರೀಂನಲ್ಲಿ ಇಂದು ವಿಚಾರಣೆ

    ನಗರದ ಜನಾರ್ಧನ ಪ್ರತಿಷ್ಠಾನ ಆಯೋಜಿಸಿದ್ದ ಈ ವಿಭಿನ್ನ ಕಾರ್ಯಕ್ರಮದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳೂ ಆದ ನ್ಯಾಯಾಧೀಶ ಎಂ.ಶ್ರೀಧರ್ ಭಾಗಿಯಾಗಿ ಕೈದಿಗಳಿಗೆ ಅಯೋಧ್ಯೆಯ ಮಂತ್ರಾಕ್ಷತೆ, ರಾಮ ಕಥಾ ಮಹಿಮೆ ಪುಸ್ತಕ, ತುಳಸಿ ಜಪಮಾಲೆ ವಿತರಿಸಿದರು. ಇದನ್ನೂ ಓದಿ: Annapoorni: ರಾಮನ ಕುರಿತು ವಿವಾದಾತ್ಮಕ ಡೈಲಾಗ್- ಕೊನೆಗೂ ಮೌನ ಮುರಿದ ನಯನತಾರಾ

    ಯಾವುದೋ ಸಂದರ್ಭದಲ್ಲಿ ಮಾಡಿದ ತಪ್ಪಿಗೆ ಮನಃ ಪರಿವರ್ತನೆಯಾಗಿ ಹೊಸ ಜೀವನ ನಡೆಸಿ ಎಂದು ನ್ಯಾಯಾಧೀಶರು ತಿಳಿಹೇಳಿದರು. ಕೈದಿಗಳಿಗೆ ಜನಾರ್ಧನ ಪ್ರತಿಷ್ಠಾನದ ಅರ್ಚಕ ಅನಂತ್ ಪ್ರಸಾದ್‌ರಿಂದ ರಾಮ ನಾಮ ಮಂತ್ರ ಬೋಧನೆ ಮಾಡಿಸಲಾಯಿತು. ರಾಮನಾಮ ಜಪಿಸಿದ ಕೈದಿಗಳು ಭಾವುಕರಾದರು ಕಾರ್ಯಕಮಕ್ಕೂ ಮುನ್ನ ಹರಳುಕೋಟೆ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಇದನ್ನೂ ಓದಿ: ಆನೇಕಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ – 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ 

  • ಎಳನೀರು ಸೇವನೆ, ನೆಲದಲ್ಲೇ ನಿದ್ದೆ, ಸಾತ್ವಿಕ ಆಹಾರ- ರಾಮನ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ

    ಎಳನೀರು ಸೇವನೆ, ನೆಲದಲ್ಲೇ ನಿದ್ದೆ, ಸಾತ್ವಿಕ ಆಹಾರ- ರಾಮನ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ

    ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆ (Pran Pratistha) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕಠಿಣ ವ್ರತ ಕೈಗೊಂಡಿದ್ದಾರೆ. ವ್ರತದ ಭಾಗವಾಗಿ ಮೋದಿಯವರು (Narendra Modi) ಕೇವಲ ಎಳನೀರು ಸೇವನೆ ಮಾಡುತ್ತಿದ್ದಾರೆ. ಅಲ್ಲದೇ ಕೇವಲ ಹೊದಿಕೆಯೊಂದಿಗೆ ನೆಲದ ಮೇಲೆ ಮಲಗುತ್ತಿದ್ದಾರೆ.

    11-ದಿನಗಳ ಈ ವಿಶೇಷ ವ್ರತದಲ್ಲಿ, ಧ್ಯಾನ ಮತ್ತು ವಿಶೇಷ ಸಾತ್ವಿಕ ಆಹಾರದೊಂದಿಗೆ ಮನಸ್ಸು ಮತ್ತು ದೇಹವನ್ನು ಶುದ್ಧೀಕರಿಸುವುದು ಸೇರಿದೆ. ಈ ನಿಯಮಗಳ ಪ್ರಕಾರ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಹಲವಾರು ಇತರ ವಸ್ತುಗಳ ಸೇವನೆಯನ್ನು ನಿಬರ್ಂಧಿಸಲಾಗುತ್ತದೆ. ಮೋದಿಯವರು ಈ ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಇದನ್ನೂ ಓದಿ: ರಾಮ ಮಂದಿರದ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

    ಜನವರಿ 12ರಿಂದ ರಾಮಂದಿರದಲ್ಲಿ ವಿಧಿ-ವಿಧಾನಗಳು ಆರಂಭಗೊಂಡಿವೆ. ಜ.22ರಂದು ಪ್ರಧಾನಿ ಮೋದಿಯವರು ಪ್ರಾಣ ಪ್ರತಿಷ್ಠಾಪನೆಗೆ ಪೂಜೆ ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಾಣಪ್ರತಿಷ್ಠೆಯ ಮುಖ್ಯ ವಿಧಿಗಳನ್ನು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

    ಪ್ರಾಣ ಪ್ರತಿಷ್ಠಾ ಎಂದರೆ ವಿಗ್ರಹಕ್ಕೆ ದೈವಿಕ ಅಂಶಗಳನ್ನು ತುಂಬುವುದು. ಜ.22ರ ಮಧ್ಯಾಹ್ನ 12:30ಕ್ಕೆ ರಾಮಮದಿರದಲ್ಲಿ ಅದರ ಶುಭ ಮುಹೂರ್ತವಾಗಿದೆ. ಈ ವಿಧಿವಿಧಾನ ದೇವಾಲಯದಲ್ಲಿ ಪೂಜಿಸುವ ಪ್ರತಿಯೊಂದು ವಿಗ್ರಹಕ್ಕೂ ಅತ್ಯಗತ್ಯವಾಗಿರುತ್ತದೆ.

    ಪ್ರಾಣಪ್ರತಿಷ್ಠಾಪನೆಗೆ ದೇವಾಲಯದ ಟ್ರಸ್ಟ್‍ನಿಂದ ವಿಶೇಷವಾಗಿ ಆಹ್ವಾನಿಸಲ್ಪಟ್ಟ ದೇಶ ಮತ್ತು ವಿದೇಶಗಳಿಂದ ಸಾವಿರಾರು ಅತಿಥಿಗಳು ಭಾಗಿಯಾಗಲಿದ್ದಾರೆ. ಈ ಸಮಾರಂಭದ ದಿನ ಕೇಂದ್ರ ಸರ್ಕಾರ ತನ್ನ ಎಲ್ಲಾ ಕಚೇರಿಗಳನ್ನು ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದೆ. ಇದನ್ನೂ ಓದಿ: ಜ.22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ

  • ಶ್ರೀರಾಮನ ಕಟೌಟ್‌ಗೆ ಬ್ಲೇಡ್‌ನಿಂದ ಹಾನಿ – ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

    ಶ್ರೀರಾಮನ ಕಟೌಟ್‌ಗೆ ಬ್ಲೇಡ್‌ನಿಂದ ಹಾನಿ – ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

    ಕೋಲಾರ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಹಲವೆಡೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್‌ಗಳಿಗೆ ಬ್ಲೇಡ್‌ನಿಂದ ಹಾನಿಗೊಳಿಸಿರುವ (Shri Ram Cut Out) ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ.

    ಮಂಗಳವಾರ ತಡರಾತ್ರಿ 10.44ರ ಸುಮಾರಿಗೆ ಬ್ಲೇಡ್ ಹಾಕಿರುವ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ (Ayodhya Ram Lalla) ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಕ್ರಾಂತಿ ಹಬ್ಬದ ದಿನದಂದು ಕಟೌಟ್‌ಗಳನ್ನ ಅಳವಡಿಸಲಾಗಿತ್ತು. ಆದ್ರೆ ಕಿಡಿಗೇಡಿಗಳು ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್‌ಗಳಿಗೆ ಬ್ಲೇಡ್ ಹಾಕಿ ಹಾನಿಗೊಳಿಸಿದ್ದಾರೆ. ಇದನ್ನೂ ಓದಿ: ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ – ನಾನೂ ಅಯೋಧ್ಯೆಗೆ ಹೋಗ್ತೀನಿ: ಲಕ್ಷ್ಮಿ ಹೆಬ್ಬಾಳ್ಕರ್‌

    ಶ್ರೀರಾಮನ ಕಟೌಟ್‌ಗಳು ಹಾನಿಗೊಂಡಿರುವ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಯುವಕರು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರತಿದಿನ ಒಂದೊಂದು ಕೆಜಿ ಮೀಸಲು – ಶ್ರೀರಾಮನ ನೈವೇದ್ಯಕ್ಕೆ 1,265 KG ತೂಕದ ಲಡ್ಡು ಅರ್ಪಿಸಿದ ರಾಮಭಕ್ತ

    ಇದೇ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಇದನ್ನೂ ಓದಿ: ಶ್ರೀರಾಮನ ಜಪಿಸಿ ಎಂದು ಕರೆ ನೀಡಿದ ಗಾಯಕಿ ಚಿತ್ರಾಗೆ ಭಾರೀ ಟೀಕೆ

  • ʻಸ್ವಚ್ಛತೀರ್ಥ ಅಭಿಯಾನʼಕ್ಕೆ ರಾಜ್ಯ ನಾಯಕರು ಸಾಥ್‌ – ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಪ್ರಹ್ಲಾದ್‌ ಜೋಶಿ

    ʻಸ್ವಚ್ಛತೀರ್ಥ ಅಭಿಯಾನʼಕ್ಕೆ ರಾಜ್ಯ ನಾಯಕರು ಸಾಥ್‌ – ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಪ್ರಹ್ಲಾದ್‌ ಜೋಶಿ

    ಹುಬ್ಬಳ್ಳಿ: ಅಯೋಧ್ಯೆಯಲ್ಲಿ (Ayodhya) ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಭಾಗವಾಗಿ ಬಿಜೆಪಿ ದೇಶಾದ್ಯಂತ ದೇವಾಲಯಗಳು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಚಿಗೊಳಿಸುವ ʻಸ್ವಚ್ಛ ತೀರ್ಥʼ ಅಭಿಯಾನ (Swachh Teerth Campaign) ಹಮ್ಮಿಕೊಂಡಿದೆ.

    ಜ.14ರ ಭಾನುವಾರದಿಂದ ಈ ಅಭಿಯಾನ ಚಾಲನೆಗೊಂಡಿದ್ದು, ಪಕ್ಷದ ನಾಯಕರು (BJP Leaders), ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು ದೇಶದ ವಿವಿಧ ಭಾಗಗಳಲ್ಲಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಖ್ಯಾತ ಬಾಲಿವುಡ್‌ ನಟರೂ ಈ ಅಭಿಯಾನಕ್ಕೆ ಸಾಥ್‌ ನೀಡಿದ್ದಾರೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನ ಸಮೀಪಿಸುತ್ತಿರುವಾಗ ದೇಶಾದ್ಯಂತ ಸಂಭ್ರಮದ ವಾತಾವರಣ ಮೂಡಿಸಲು ಬಿಜೆಪಿ ಈ ಅಭಿಯಾನ ಕೈಗೊಂಡಿದೆ.

    ಕರ್ನಾಟಕದಲ್ಲಿಯೂ ಬಿಜೆಪಿ ಹಿರಿಯ ನಾಯಕರು, ಕಾರ್ಯಕರ್ತರು ಈ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಸೋಮವಾರ ಹುಬ್ಬಳ್ಳಿಯ ಸಾಯಿನಗರ ರಸ್ತೆಯಲ್ಲಿರುವ ಶ್ರೀ ಸಿದ್ದಪ್ಪಾಜಿ ಮೂಲ ಗದ್ದುಗೆ ಮಠದ ಆವರಣದಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿ ತಮ್ಮ ಸೇವೆ ಸಲ್ಲಿದ್ದಾರೆ. ಬಿಜೆಪಿ ಹುಬ್ಬಳ್ಳಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಹಾನಗರ ಪಾಲಿಕೆಯ ಸದಸ್ಯ ಸಂತೋಷ್‌ ಚೌಹಾಣ್‌ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಕೈಜೋಡಿಸಿದ್ದಾರೆ. ಈ ಕುರಿತ ಫೋಟೋಗಳನ್ನು ಜೋಶಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಅಷ್ಟೇ ಅಲ್ಲದೇ ರಾಮಮಂದಿರದ ಉದ್ಘಾಟನೆಯ ದಿನದವರೆಗೆ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಹಿಂದೂ ದೇವಸ್ಥಾನಗಳಲ್ಲಿ ವಿಶೇಷ ಭಜನೆ-ಕೀರ್ತನೆ’ಯಲ್ಲೂ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಗಾಂಧಿನಗರದ ದೇವಸ್ಥಾನದಲ್ಲಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಒಡಿಶಾದ ಬಾಲೇಶ್ವರದ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದರು. ಇದನ್ನೂ ಓದಿ: ಹಾಸನಕ್ಕುಂಟು ಶ್ರೀರಾಮನ ನಂಟು – ರಾವಣನ ಸಂಹರಿಸಿ ದೋಷ ನಿವಾರಣೆಗೆ ಇಲ್ಲಿಗೆ ಬಂದಿದ್ದನಂತೆ ಶ್ರೀರಾಮ

    ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸಹ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೀರ್ಥ ಅಭಿಯಾನಕ್ಕೆ ಸಾಥ್‌ ನೀಡಿದರು. ರಾಜ್ಯದೆಲ್ಲೆಡೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನೆರವೇರಲಿ. ಜನವರಿ 22 ರಂದು ಶ್ರೀರಾಮ ಜ್ಯೋತಿ ಬೆಳಗಲು ಸಿದ್ಧತೆಗಳು ಭಕ್ತಿಪೂರ್ವಕವಾಗಿ ಸಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಕಲಬುರಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮನೆಗೆಲಸ, ಟಾಯ್ಲೆಟ್ ಕ್ಲಿನಿಂಗ್ – ಮುಖ್ಯಶಿಕ್ಷಕಿ ವಿರುದ್ಧ FIR

  • ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ಲಕ್ನೋ: ಅಯೋಧ್ಯೆ ರಾಮಮಂದಿರವನ್ನು (Ayodhya Ram Mandir) ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ ಆರೋಪಿಗಳನ್ನು ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಆರೋಪಿಗಳು ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಆಯ್ಕೆ ಅಂತಿಮವಾಗಿಲ್ಲ – ಟ್ರಸ್ಟ್‌ನಿಂದ ಸ್ಪಷ್ಟನೆ

    ಆರೋಪಿಗಳು ಎಕ್ಸ್‌ನಲ್ಲಿ, ಆದಿತ್ಯನಾಥ್ (Yogi Adityanath), ಎಸ್‍ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಬೆದರಿಕೆ ಹಾಕಿದ್ದರು. ಬೆದರಿಕೆ ಬಂದ ಎಕ್ಸ್ ಖಾತೆ ಹಾಗೂ ಇಮೇಲ್ ಐಡಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾನೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬುದು ತಿಳಿದು ಬಂದಿದೆ.

    ಎಸ್‍ಟಿಎಫ್ ಅಧಿಕಾರಿಗಳು ಅರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ

  • ಅತ್ಯಾಧುನಿಕ ಅಯೋಧ್ಯೆ ರೈಲು ನಿಲ್ದಾಣಕ್ಕೆ ನಮೋ ಚಾಲನೆ – ಏನಿದರ ವಿಶೇಷತೆ?

    ಅತ್ಯಾಧುನಿಕ ಅಯೋಧ್ಯೆ ರೈಲು ನಿಲ್ದಾಣಕ್ಕೆ ನಮೋ ಚಾಲನೆ – ಏನಿದರ ವಿಶೇಷತೆ?

    ಅಯೋಧ್ಯೆ: ರಾಮಮಂದಿರ ಉದ್ಘಾಟನೆಗೂ ಮುನ್ನವೇ ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಡಿ.30) ಸಂಪೂರ್ಣ ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾದ ಅಯೋಧ್ಯಧಾಮ ಜಂಕ್ಷನ್ ರೈಲು ನಿಲ್ದಾಣದ (Railway Station) ಉದ್ಘಾಟನೆ ನೆರವೇರಿಸಿದರು.

    ಬಳಿಕ ರೈಲು ನಿಲ್ದಾಣವನ್ನ ಪರಿಶೀಲಿಸಿದ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ 2 ಅಮೃತ್‌ ಭಾರತ್‌ ರೈಲು ಹಾಗೂ 6 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೂ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌, ಸಚಿವ ಅಶ್ವಿನಿ ವೈಷ್ಣವ್‌ ಸೇರಿದಂತೆ ಪ್ರಮುಖ ಗಣ್ಯರು ಜೊತೆಯಲ್ಲಿದ್ದರು.

    ಏರ್‌ಪೋರ್ಟ್ ವ್ಯವಸ್ಥೆಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ (Ayodhya Dham Junction) ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ. ರಾಮ ಮಂದಿರದಿಂದ 2.1 ಕಿ.ಮೀ. ದೂರದಲ್ಲಿ ನಿರ್ಮಾಣಗೊಂಡಿದ್ದು, ಮೊದಲ ಹಂತದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯ ನಡೆದಿದೆ. 10,000 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.

    ರೈಲು ನಿಲ್ದಾಣ ಅಭಿವೃದ್ಧಿಗೆ 3 ಪ್ಲಾಟ್‌ ಫಾರಂಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ. 3 ಅಂತಸ್ತಿನ ಕಟ್ಟಡ, ಲಿಫ್ಟ್, ಎಸ್ಕಲೇಟರ್, ಮಕ್ಕಳ ಆರೈಕೆ ಕೊಠಡಿ, ಫುಡ್ ಪ್ಲಾಜಾ, ಪೂಜಾ ಪರಿಕರ ಅಂಗಡಿಗಳಿವೆ. 2ನೇ ಹಂತದಲ್ಲಿ 480 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯಲಿದೆ.

    ಮೋದಿಗೆ ದಾರಿಯುದ್ಧಕ್ಕೂ ಪುಷ್ಪಾರ್ಚನೆ:
    ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಆಗಮಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಲುಹೊದಿಸಿ ಪ್ರಧಾನಿ ಮೋದಿ ಅವರನ್ನ ಸ್ವಾಗತಿಸಿದರು. ರೈಲ್ವೆ ನಿಲ್ದಾಣ ಉದ್ಘಾಟನೆಗೂ ಮುನ್ನ ನಡೆದ ರೋಡ್‌ ಶೋನಲ್ಲಿ ಹಲವು ಅಂಶಗಳು ಗಮನ ಸೆಳೆದವು.

    ಮೋದಿ ಬರುವ ದಾರಿಯಲ್ಲಿ ನಿರ್ಮಿಸಲಾಗಿದ್ದ ಸುಮಾರು 40 ವೇದಿಕೆಗಳಲ್ಲಿ 1,400ಕ್ಕೂ ಹೆಚ್ಚು ಕಲಾವಿದರು ವಿವಿಧ ಸಾಂಸ್ಕೃತಿಕ ನೃತ್ಯಗಳಿಗೆ ಹೆಜ್ಜೆ ಹಾಕಿದರು. ಅಲ್ಲದೇ ಮೋದಿ ಅವರ ಬರುವಿಕೆಗಾಗಿ ಕಾದು ಕುಳಿತಿದ್ದ ಜನರು ರೋಡ್‌ಶೋ ಹಾದಿಯುದ್ಧಕ್ಕೂ ವಿವಿಧ ಹೂಗಳಿಂದ ಮೋದಿಗೆ ಪುಷ್ಪಾರ್ಚನೆ ಮಾಡಿ ಜಯಘೋಷ ಹಾಕಿದರು.

  • ಅಯೋಧ್ಯೆಗೆ ಬಂದ ಪ್ರಧಾನಿ ಮೋದಿ – ಶ್ರೀರಾಮನೂರಿನಲ್ಲಿ ʻನಮೋʼ ಹೆಜ್ಜೆ

    ಅಯೋಧ್ಯೆಗೆ ಬಂದ ಪ್ರಧಾನಿ ಮೋದಿ – ಶ್ರೀರಾಮನೂರಿನಲ್ಲಿ ʻನಮೋʼ ಹೆಜ್ಜೆ

    ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ (Narendra Modi) ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್‌ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್‌ ಶೋ ಆರಂಭಿಸಿದ್ದಾರೆ.

    ದೆಹಲಿಯಿಂದ (New Delhi) ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ (Ayodhya Airport) ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು.

    ರೋಡ್‌ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ರೋಡ್‌ ಶೋ (Road Show) ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.

    ಅಯೋಧ್ಯೆಯಲ್ಲಿಂದು ಏನೇನು ಕಾರ್ಯಕ್ರಮ?
    * ಬೆಳಗ್ಗೆ 10:45ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
    * ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
    * 2 ಹೊಸ ಅಮೃತ್ ಭಾರತ್ & 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
    * 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
    * 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
    * ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
    ( ದೀಪೋತ್ಸವ ಸ್ಥಳ, ಪ್ರವಾಸಿಗರಪಥವಾದ ರಾಮ್ ಕಿ ಪೌಡಿನಿಂದ ರಾಜ್‌ಘಾಟ್, ರಾಜ್‌ಘಾಟ್‌ನಿಂದ ರಾಮ ಮಂದಿರ ರಸ್ತೆ)
    * ಅಯೋಧ್ಯೆ ನಗರದಲ್ಲಿ 4 ಹೊಸ ರಸ್ತೆಗಳ ಉದ್ಘಾಟನೆ
    * ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ (ಜೊತೆಗೆ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ ಸೇರಿವೆ )
    * ಮಧ್ಯಾಹ್ನ 12:15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
    * ಮಧ್ಯಾಹ್ನ 1 ಗಂಟೆ ಬಳಿಕ ಮೋದಿ ಮೆಗಾ ರೋಡ್ ಶೋ
    * ಏರ್‌ಪೋರ್ಟ್‌ನಿಂದ ಅಯೋಧ್ಯೆ ನಗರದಲ್ಲಿ 15 ಕಿ.ಮೀ. ರೋಡ್ ಶೋ

  • ಮೋದಿ ಸ್ವಾಗತಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯೆ – ರಾಮನೂರಿನಲ್ಲಿ ಸಾಂಸ್ಕೃತಿಕ ವೈಭವ

    ಮೋದಿ ಸ್ವಾಗತಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯೆ – ರಾಮನೂರಿನಲ್ಲಿ ಸಾಂಸ್ಕೃತಿಕ ವೈಭವ

    ಅಯೋಧ್ಯೆ: ಅಯೋಧ್ಯೆಯಲ್ಲಿ ನೂತನ ವಿಮಾನ ನಿಲ್ದಾಣ ಹಾಗೂ ಪುನರಾಭಿವೃದ್ಧಿಗೊಂಡಿರುವ ರೈಲು ನಿಲ್ದಾಣ (Ayodhya Railaway Station) ಉದ್ಘಾಟಿಸಲು ಆಗಮಿಸುತ್ತಿರುವ ಶನಿವಾರ (ಇಂದು) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಸ್ವಾಗತಿಸಲು ಅಯೋಧ್ಯೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

    ಒಂದೆಡೆ ಹೂವು ತೋರಣಗಳ ಅಲಂಕಾರ ಮತ್ತೊಂದೆಡೆ ಸಾಂಸ್ಕೃತಿಕ ಕಲಾ ತಂಡಗಳ ವೈಭವ ಮೆರಗುಗೊಂಡಿದೆ. ವಿವಿಧ ಗೀತೆ, ನೃತ್ಯಗಳಿಗೆ ಹೆಜ್ಜೆಹಾಕುವ ಮೂಲಕ ಪ್ರಧಾನಿಗಳನ್ನ ಬರಮಾಡಿಕೊಳ್ಳಲು ಕಲಾ ತಂಡಗಳು ಕಾದು ಕುಳಿತಿವೆ. ಇದನ್ನೂ ಓದಿ: Ram Mandir Inauguration: ಪ್ರಾಣ ಪ್ರತಿಷ್ಠಾಪನೆಗೆ ಶ್ರೀ ರಾಮಲಲ್ಲಾ ವಿಗ್ರಹ ಆಯ್ಕೆ- ಇಂದು ಅಂತಿಮ ನಿರ್ಣಯ

    ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ರಾಮ ಪಥ ವರೆಗಿನ ಮಾರ್ಗದಲ್ಲಿ ನಿರ್ಮಿಸಲಾದ ಒಟ್ಟು 40 ವೇದಿಕೆಗಳಲ್ಲಿ 1,400ಕ್ಕೂ ಹೆಚ್ಚು ಕಲಾವಿದರು ಜನಪದ ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರಸ್ತುತಪಡಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದು, 15,700 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: Ram Mandir; ರಾಮಮಂದಿರ ಉದ್ಘಾಟನೆಯ ಕೇಂದ್ರಬಿಂದು ಗರ್ಭಗುಡಿ ವಿಶೇಷತೆ ನಿಮಗೆಷ್ಟು ಗೊತ್ತು?

    ಮೋದಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ: ಮೋದಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ 3 ದಿನಗಳಿಂದ ಭದ್ರತಾ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದ್ದಾರೆ. ಅಯೋಧ್ಯೆ ಸಂಪೂರ್ಣ ಪೊಲೀಸ್ ಭದ್ರಕೋಟೆಯಾಗಿದೆ. ಡ್ರೋನ್‌ಗಳ ಮೂಲಕವೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕೆ ಪ್ರತ್ಯೇಕ ತಂಡ ರಚಿಸಲಾಗಿದೆ. ಈಗಾಗಲೇ ರಾಮನಗರಿಯಲ್ಲಿ ಮೋದಿ ಸ್ವಾಗತಕ್ಕಾಗಿ ತಳಿರು ತೋರಣ, ಹೂವಿನ ಅಲಂಕಾರ, ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಮಿರಮಿರ ಮಿಂಚುತ್ತಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗಲಿರುವ ವಿಶ್ವದರ್ಜೆಯ ವಿಮಾನ, ರೈಲು ನಿಲ್ದಾಣದ ವಿಶೇಷತೆಗಳು ಏನು?

    ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳು ಹೇಗಿವೆ?
    * ಬೆಳಗ್ಗೆ 10:45ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
    * ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
    * 2 ಹೊಸ ಅಮೃತ್ ಭಾರತ್ & 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
    * 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
    * 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
    * ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
    ( ದೀಪೋತ್ಸವ ಸ್ಥಳ, ಪ್ರವಾಸಿಗರಪಥವಾದ ರಾಮ್ ಕಿ ಪೌಡಿನಿಂದ ರಾಜ್‌ಘಾಟ್, ರಾಜ್‌ಘಾಟ್‌ನಿಂದ ರಾಮ ಮಂದಿರ ರಸ್ತೆ)
    * ಅಯೋಧ್ಯೆ ನಗರದಲ್ಲಿ 4 ಹೊಸ ರಸ್ತೆಗಳ ಉದ್ಘಾಟನೆ
    * ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ (ಜೊತೆಗೆ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ ಸೇರಿವೆ )
    * ಮಧ್ಯಾಹ್ನ 12:15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
    * ಮಧ್ಯಾಹ್ನ 1 ಗಂಟೆ ಬಳಿಕ ಮೋದಿ ಮೆಗಾ ರೋಡ್ ಶೋ
    * ಏರ್‌ಪೋರ್ಟ್‌ನಿಂದ ಅಯೋಧ್ಯೆ ನಗರದಲ್ಲಿ 15 ಕಿ.ಮೀ. ರೋಡ್ ಶೋ

  • ರಾಮನೂರಿನಲ್ಲಿಂದು ಮೋದಿ ಮೆಗಾ ಶೋ – 15,000 ಕೋಟಿ ರೂ. ಯೋಜನೆಗೆ ಚಾಲನೆ

    ರಾಮನೂರಿನಲ್ಲಿಂದು ಮೋದಿ ಮೆಗಾ ಶೋ – 15,000 ಕೋಟಿ ರೂ. ಯೋಜನೆಗೆ ಚಾಲನೆ

    ಅಯೋಧ್ಯೆ: ರಾಮಮಂದಿರ (Ayodhya Ram Mandir) ನಿರ್ಮಾಣದ ಮೂಲಕ ಕೋಟ್ಯಾನುಕೊಟಿ ರಾಮನ ಭಕ್ತರ ಸ್ವಾಗತಕ್ಕೆ ಸಜ್ಜಾಗಿರುವ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಡಿ.30) ಭೇಟಿ ನೀಡುತ್ತಿದ್ದಾರೆ.

    ಜನವರಿ 22ಕ್ಕೆ ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ಆದ್ರೆ ಅದಕ್ಕೂ ಮುನ್ನ ನಡೆಯಲಿರುವ ಈ ಭೇಟಿ ವೇಳೆ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ, ಅಭಿವೃದ್ಧಿಗೊಂಡಿರುವ ರೈಲು ನಿಲ್ದಾಣವನ್ನೂ (Revamped Railway Station) ಮೋದಿ ಉದ್ಘಾಟಿಸಲಿದ್ದಾರೆ.

    ಜೊತೆಗೆ 11 ಸಾವಿರ ಕೋಟಿ ರೂ. ಮೌಲ್ಯದ ಅಯೋಧ್ಯೆ ಅಭಿವೃದ್ಧಿ ಕಾಮಗಾರಿ ಹಾಗೂ ಉತ್ತರ ಪ್ರದೇಶದ 4,600 ಕೋಟಿ ರೂ.ಗಳಷ್ಟು ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಲಿದ್ದಾರೆ. ಇದರಲ್ಲಿ, ರಸ್ತೆ, ಹೆದ್ದಾರಿ, ವಿಮಾನ, ರೈಲ್ವೇ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ಒಳಗೊಂಡಿವೆ. ಹೀಗಾಗಿ ಪ್ರಧಾನಿ ಮೋದಿ ಸ್ವಾಗತಕ್ಕೆ ಶ್ರೀರಾಮಜನ್ಮಭೂಮಿ ಸಜ್ಜಾಗಿದೆ. ವಿಶೇಷವೆಂದರೆ ಇದೇ ದಿನ 6 ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹಾಗೂ 2 ಅಮೃತ್ ಭಾರತ್ ರೈಲುಗಳಿಗೂ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.

    ಮೋದಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ:
    ಮೋದಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ 3 ದಿನಗಳಿಂದ ಭದ್ರತಾ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದ್ದಾರೆ. ಅಯೋಧ್ಯೆ ಸಂಪೂರ್ಣ ಪೊಲೀಸ್ ಭದ್ರಕೋಟೆಯಾಗಿದೆ. ಡ್ರೋನ್‌ಗಳ ಮೂಲಕವೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕೆ ಪ್ರತ್ಯೇಕ ತಂಡ ರಚಿಸಲಾಗಿದೆ. ಈಗಾಗಲೇ ರಾಮನಗರಿಯಲ್ಲಿ ಮೋದಿ ಸ್ವಾಗತಕ್ಕಾಗಿ ತಳಿರು ತೋರಣ, ಹೂವಿನ ಅಲಂಕಾರ, ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಮಿರಮಿರ ಮಿಂಚುತ್ತಿದೆ.

    ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳು ಹೇಗಿವೆ?
    * ಬೆಳಗ್ಗೆ 10:45ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
    * ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
    * 2 ಹೊಸ ಅಮೃತ್ ಭಾರತ್ & 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
    * 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
    * 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
    * ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
    ( ದೀಪೋತ್ಸವ ಸ್ಥಳ, ಪ್ರವಾಸಿಗರಪಥವಾದ ರಾಮ್ ಕಿ ಪೌಡಿನಿಂದ ರಾಜ್‌ಘಾಟ್, ರಾಜ್‌ಘಾಟ್‌ನಿಂದ ರಾಮ ಮಂದಿರ ರಸ್ತೆ)
    * ಅಯೋಧ್ಯೆ ನಗರದಲ್ಲಿ 4 ಹೊಸ ರಸ್ತೆಗಳ ಉದ್ಘಾಟನೆ
    * ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ (ಜೊತೆಗೆ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ ಸೇರಿವೆ )
    * ಮಧ್ಯಾಹ್ನ 12:15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
    * ಮಧ್ಯಾಹ್ನ 1 ಗಂಟೆ ಬಳಿಕ ಮೋದಿ ಮೆಗಾ ರೋಡ್ ಶೋ
    * ಏರ್‌ಪೋರ್ಟ್‌ನಿಂದ ಅಯೋಧ್ಯೆ ನಗರದಲ್ಲಿ 15 ಕಿ.ಮೀ. ರೋಡ್ ಶೋ