Tag: ಅಯ್ಯಪ್ಪ ದೇಗುಲ

  • ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    – ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು

    ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ(Sabarimala Ayyappa Temple) ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ(Kerala) ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ಪಂಪಾ ಬೇಸ್ ಕ್ಯಾಂಪ್‌ನಿಂದ ದೇವಾಲಯಕ್ಕೆ ತೆರಳುವ ಪ್ರಯಾಣ ವಿಧಾನದ ಕುರಿತು ಅಂತಿಮ ನಿರ್ಧಾರವನ್ನು ಭದ್ರತಾ ವ್ಯವಸ್ಥೆಯ ವಿಶೇಷ ರಕ್ಷಣಾ ಗುಂಪು ತೆಗೆದುಕೊಳ್ಳಲಿದೆ. ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು ಇದೇ ಮೊದಲು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ರಾಷ್ಟ್ರಪತಿ ಅವರ ಭೇಟಿಯ ಬಗ್ಗೆ ಕೆಲವು ವಾರಗಳಿಂದ ಗಾಳಿ ಸುದ್ದಿ ಹರಿದಾಡುತ್ತಿದ್ದವು. ಅಧಿಕೃತ ಮಾಹಿತಿ ಬಂದ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಅವರು ಸಭೆಯನ್ನು ಕರೆಯಲಿದ್ದಾರೆ. ಅಲ್ಲದೇ ನಾವು ದೇವಾಲಯಕ್ಕೆ ತೆರಳುವ ರಸ್ತೆಯ ತುರ್ತು ದುರಸ್ತಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ ಎಂದು ರಾಷ್ಟ್ರಪತಿ ಭೇಟಿಯ ಕುರಿತು ಬಹಿರಂಗಪಡಿಸಿದರು.

  • ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ತಿರುವನಂತಪುರಂ: ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.

    ಸಂಜೆ 6.30ರಿಂದ 6.45ರ ವೇಳೆಗೆ ದೀಪಾರಾಧನೆ ವೇಳೆ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನವಾಗಿದೆ. ಮಕರ ಜ್ಯೋತಿ ದರ್ಶನವನ್ನು ಶಬರಿಮಲೆ ಪಡೆದುಕೊಂಡಿದೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಪೊನ್ನಂಬಲ ಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಭಕ್ತರು ಜ್ಯೋತಿ ರೂಪದಲ್ಲಿ ದರ್ಶನ ಪಡೆದು ಕಣ್ತುಂಬಿಕೊಂಡಿದ್ದಾರೆ. ‘ಮಕರ ವಿಳಕ್ಕು’ ದರ್ಶನವನ್ನು ಭಕ್ತರು ಪಡೆದುಕೊಂಡಿದ್ದಾರೆ. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾನೆ.

  • ಅಯ್ಯಪ್ಪ ದೇಗುಲಕ್ಕೆ ಭೇಟಿ -ಅನ್ನದಾನಕ್ಕೆ 50 ಸಾವಿರ ನೀಡಿದ್ರು ಜಮೀರ್

    ಅಯ್ಯಪ್ಪ ದೇಗುಲಕ್ಕೆ ಭೇಟಿ -ಅನ್ನದಾನಕ್ಕೆ 50 ಸಾವಿರ ನೀಡಿದ್ರು ಜಮೀರ್

    ಬೆಂಗಳೂರು: ಸದಾ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರು ಇದೀಗ ಅಯ್ಯಪ್ಪ ದೇಗುಲಕ್ಕೆ 50 ಸಾವಿರ ರೂ. ನೀಡಿದ್ದಾರೆ.

    ಹೌದು. ಚಾಮರಾಜಪೇಟೆಯ ಅಯ್ಯಪ್ಪ ದೇವಸ್ಥಾನಕ್ಕೆ ಇಂದು ಶಾಸಕರು ಭೇಟಿ ನೀಡಿದ್ದಾರೆ. 45 ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು, ಅನ್ನದಾನಕ್ಕೆ 50 ಸಾವಿರ ರೂ. ಕಾಣಿಕೆಯಾಗಿ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿಕೊಂಡಿರುವ ಮಾಜಿ ಸಚಿವರು, ಚಾಮರಾಜಪೇಟೆ ಕ್ಷೇತ್ರದ 140ನೇ ವಾರ್ಡ್ ನಲ್ಲಿರುವ ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡಿದೆ. ದೇವಸ್ಥಾನದ 45ನೇ ವರ್ಷದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅನ್ನದಾನಕ್ಕೆಂದು 50 ಸಾವಿರ ರೂ. ನೀಡಿರುವುದಾಗಿ ತಿಳಿಸಿದ್ದಾರೆ.

    ಸದ್ಯ ಮಗಳ ಮದುವೆಯ ಬ್ಯುಸಿಯಲ್ಲಿರುವ ಶಾಸಕರು, ರಾಜಕೀಯ ನಾಯಕರು ಹಾಗೂ ಗಣ್ಯರಿಗೆ ಮದುವೆಯ ಆಮಂತ್ರಣ ನೀಡುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಿ ಧನಸಹಾಯ ಮಾಡಿದ್ದಾರೆ.

    https://twitter.com/BZZameerAhmed/status/1346722781413695490