Tag: ಅಯ್ಯಪ್ಪ ದೇವಸ್ಥಾನ

  • ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ತುಲಾ ಮಾಸ ಪೂಜೆಯ ಕೊನೆಯ ದಿನವಾದ ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ (Sabarimala Ayyappa Temple) ಭೇಟಿ ನೀಡಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ (Kerala) ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22 ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ.  ಇದನ್ನೂ ಓದಿ:  ಆರ್‌ಎಸ್‌ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿಷೇಧಿಸಬೇಕು: ದಿನೇಶ್‌ ಗುಂಡೂರಾವ್‌

    ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಿ ಮಧ್ಯಾಹ್ನ 12:20 ರಿಂದ 1 ಗಂಟೆಯ ಒಳಗೆ ಅಯ್ಯಪ್ಪ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಶೇಷ ವಾಹನದಲ್ಲಿ ಪಂಪಾದಿಂದ ನೀಲಕ್ಕಲ್‌ಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತಿರುವನಂತಪುರಕ್ಕೆ ಮರಳಲಿದ್ದಾರೆ. ಇದನ್ನೂ ಓದಿ:  ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ರಾಷ್ಟ್ರಪತಿಗಳು ಅಕ್ಟೋಬರ್ 24 ರವರೆಗೆ ರಾಷ್ಟ್ರಪತಿಗಳು ಕೇರಳದಲ್ಲಿ ಇರಲಿದ್ದು ಈ ಸಮಯದಲ್ಲಿ ತಿರುವನಂತಪುರಂ ಮತ್ತು ಕೊಟ್ಟಾಯಂ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    ತುಲಾಮಾಸ ಪೂಜೆಗಾಗಿ ಶಬರಿಮಲೆ ದೇಗುಲದ ಬಾಗಿಲುಗಳನ್ನು ಅ.17 ರಂದು ತೆರೆದು ಅ.22 ರಂದು ಮುಚ್ಚಲಾಗುತ್ತದೆ.

  • ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

    ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

    – 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶನ

    ತಿರುವನಂತಪುರಂ: ಶಬರಿಮಲೆ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ಆರಂಭಿಸಲು ಕೇರಳ ಹೈಕೋರ್ಟ್ ಸೂಚನೆ ನೀಡಿದೆ.

    ನ್ಯಾ.ರಾಜಾ ವಿಜಯರಾಘವನ್, ನ್ಯಾ.ಕೆವಿ ಜಯಕುಮಾರ್ ಇದ್ದ ಪೀಠ, ದ್ವಾರಗಳಿಗೆ ಚಿನ್ನ ಲೇಪನ ವೇಳೆ ಚಿನ್ನ (Gold) ಕಳುವಾಗಿದೆ ಅನ್ನೋದನ್ನು ಗಮನಿಸಿ ಈ ನಿರ್ದೇಶನ ನೀಡಿದ್ದಾರೆ. ಅಲ್ಲದೇ, 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯದ ನಿರ್ದೇಶನ ನೀಡಿದೆ.

    Sabarimala Temple

    ತನಿಖೆಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು. ತನಿಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಸೋರಿಕೆ ಮಾಡಬಾರದು. ವಿಶೇಷ ತನಿಖಾ ತಂಡವು ನೇರವಾಗಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಶಬರಿಮಲೆ ವಿಷಯದ ಕುರಿತು ಚಿನ್ನದ ಲೇಪನಕ್ಕೆ ಮುಂದಾಗಿದ್ದ ಉನ್ನಿಕೃಷ್ಣನ್ ಪೊಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸೋದನ್ನು ಹೈಕೋರ್ಟ್ (Kerala High Court) ನಿಷೇಧಿಸಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಹ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.

    Sabarimala Temple

    ಏನಿದು ಪ್ರಕರಣ?
    ಇತ್ತೀಚೆಗಷ್ಟೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ (Sabarimala Ayyappan Temple) ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದರು.

    2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ.

  • ಚಂದ್ರನ ಮೇಲೆ ಭಾರತದ ಮುದ್ರೆ – ಚಂದ್ರಯಾನ 3 ಸಕ್ಸಸ್ ಮುಂದೇನು?

    ಚಂದ್ರನ ಮೇಲೆ ಭಾರತದ ಮುದ್ರೆ – ಚಂದ್ರಯಾನ 3 ಸಕ್ಸಸ್ ಮುಂದೇನು?

    ಬೆಂಗಳೂರು: ಚಂದ್ರಯಾನ-3 (Chandrayaan-3) ಲ್ಯಾಂಡರ್ ಚಂದ್ರನ (Moon) ಮೇಲ್ಮೈಯನ್ನು ಸ್ಪರ್ಶಿಸಿದ ನಂತರ ಮುಂದೆ ಏನು ಎನ್ನುವ ಕುತೂಹಲ ಜನರಲ್ಲಿ ಮೂಡಿದೆ. ಪ್ರಸ್ತುತ ಈ ಲ್ಯಾಂಡರ್ ಮಾಡ್ಯೂಲ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಸುರಕ್ಷಿತವಾಗಿ ಇಳಿದಿದೆ. ಈ ಲ್ಯಾಂಡಿಂಗ್ ನಂತರವೇ ನಿಜವಾದ ಕೆಲಸಗಳು ಪ್ರಾರಂಭವಾಗಿವೆ. ಸದ್ಯಕ್ಕೆ ವಿಜ್ಞಾನಿಗಳು ಒಂದು ಚಂದ್ರನ ದಿನಕ್ಕೆ ಅಂದರೆ 14 ದಿನಗಳ ರೋವರ್ ಕಾರ್ಯಾಚರಣೆಗಳ ತಿಳಿಯುವ ಪ್ಲಾನ್ ಮಾಡಿದ್ದಾರೆ.

    ವಿಕ್ರಮ್ ಲ್ಯಾಂಡರ್‌ನಲ್ಲಿ ಡೇಟಾವನ್ನು ಒದಗಿಸುವ ಐದು ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿದ್ದು, ಲ್ಯಾಂಡಿಂಗ್ ನಂತರ ಪ್ರಗ್ಯಾನ್ ರೋವರ್‌ಗಾಗಿ ರಾಂಪ್ ಅನ್ನು ರಚಿಸುತ್ತದೆ. ಆರು ಚಕ್ರಗಳ ಪ್ರಗ್ಯಾನ್ ರೋವರ್‌ನಲ್ಲಿ ಎರಡು ಚಕ್ರಗಳಲ್ಲಿ ಒಂದರಲ್ಲಿ ಅಶೋಕ ಚಕ್ರದ (Ashoka Emblem) ಚಿಹ್ನೆಯಿದ್ದು, ಮತ್ತೊಂದರಲ್ಲಿ ಇಸ್ರೋ (ISRO) ಲಾಂಛನವಿದ್ದು, ಇವುಗಳು ಚಂದ್ರನ ಮೇಲ್ಮೈ ಮೇಲೆ ಭಾರತದ ಮುದ್ರೆಯನ್ನು ಅಚ್ಚು ಒತ್ತುತ್ತವೆ. ಈ ಮುದ್ರೆ ಸಾವಿರಾರು ವರ್ಷಗಳ ಕಾಲ ಹಾಗೆ ಇರಲಿದೆ. ಏಕೆಂದರೆ ಚಂದ್ರನ ಮೇಲೆ ಗಾಳಿ, ನೀರು ಇಲ್ಲ ಅಂತಾ ವಿಜ್ಞಾನಿಗಳು ಹೇಳುತ್ತಾರೆ.  ಇದನ್ನೂ ಓದಿ: ಬೆಂಗಳೂರಿನ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳು ಯಾರು? ಅವರ ಪಾತ್ರ ಏನು?

     

     

    ಈ ರೋವರ್ ಚಂದ್ರನ ಮೇಲ್ಮೈಯನ್ನು ಸ್ಕ್ಯಾನ್ ಮಾಡಲು ನ್ಯಾವಿಗೇಷನ್ ಕ್ಯಾಮೆರಾಗಳನ್ನು ಬಳಸುತ್ತದೆ. ರೋವರ್‌ನ ವೈಜ್ಞಾನಿಕ ಪೇಲೋಡ್‍ಗಳು ಚಂದ್ರನ ಅಂಶಗಳು, ವಾತಾವರಣ ಮತ್ತು ಇತರ ಅಂಶಗಳನ್ನು ಅಧ್ಯಯನ ಮಾಡುತ್ತದೆ. ಇದು ಚಂದ್ರಯಾನದ ವಸ್ತು, ಸ್ಯಾಂಪಲ್ ಗಳನ್ನು ನೀಡಲಿದೆ. ಚಂದ್ರನ ಮೇಲಿನ ಕಂಪನಗಳು,ಚಂದ್ರನ ಒಳರಚನೆ ಬಗ್ಗೆ ಸುಳಿವು ತಿಳಿಯುತ್ತದೆ. ಚಂದ್ರನ ಮಣ್ಣಿನಿಂದ ರಾಸಾಯನಿಕ ಸಂಯೋಜನೆ ಸಿಗುತ್ತದೆ. ಉಷ್ಣ ಗುಣಲಕ್ಷಣಗಳನ್ನು ಅಧ್ಯಯನ ಮಾಡುತ್ತದೆ ಮತ್ತು ಭೂಕಂಪನ ಚಟುವಟಿಕೆಯನ್ನು ಅಳೆಯುತ್ತದೆ. ಚಂದ್ರ ಮತ್ತು ಭೂಮಿಯ ನಡುವಿನ ಅಂತರವನ್ನು ಮಾಪನ ಮಾಡಲು ಸಹಾಯ ಮಾಡುತ್ತದೆ. ಇದು ಚಂದ್ರನ ಡೈನಾಮಿಕ್ಸ್‍ನ ಬಗ್ಗೆ ಮಾಹಿತಿ ನೀಡಲಿದೆ.

    ಒಟ್ಟಿನಲ್ಲಿ ಚಂದ್ರಯಾನ-3 ಚಂದ್ರನ ಸಂಯೋಜನೆ, ಇತಿಹಾಸ ಮತ್ತು ಭವಿಷ್ಯದ ಕಾರ್ಯಾಚರಣೆಗಳ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡಲಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿನ ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

    ಬೆಂಗಳೂರಿನ ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

    ಬೆಂಗಳೂರು: ಜಾಲಹಳ್ಳಿಯ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗರ್ಭಗುಡಿಯ ಚಿನ್ನ ಲೇಪನ ಲೋಕಾರ್ಪಣೆ ಕಾರ್ಯಕ್ರಮ ದೇವಾಲಯದ ಆಡಳಿತ ಮಂಡಳಿಯಿಂದ ನೆರವೆರಿತು.

    ದಕ್ಷಿಣ ಭಾರತದಲ್ಲೇ ಶಬರಿಮಲೆಯ ಬಳಿಕ ಅತ್ಯಂತ ಪ್ರಸಿದ್ಧಿ ಪಡೆದಿರುವ ಅಯ್ಯಪ್ಪನ ದೇವಾಲಯವಾಗಿರುವ ಬೆಂಗಳೂರಿನ ಜಾಲಹಳ್ಳಿನಲ್ಲಿರುವ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೊತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಿತು. ಶಬರಿ ಮಲೆಯ ಅಯ್ಯಪ್ಪ ದೇವಸ್ಥಾನದ ಮಾದರಿಯಲ್ಲೇ ಜಾಲಹಳ್ಳಿಯ ಅಯ್ಯಪ್ಪ ದೇಗುಲದ ಗರ್ಭಗುಡಿಯಲ್ಲೂ ಚಿನ್ನದ ಲೇಪನ ಮಾಡಲಾಗಿತ್ತು.

    ಈ ಚಿನ್ನದ ಲೇಪನ ಲೋಕಾರ್ಪಣೆ ಕಾರ್ಯಕ್ರಮವನ್ನು ಕೇರಳದ ಶಬರಿ ಮೆಲೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ತಾಳಮನ್‌ ಮಡಮ್‌ ರಾಜೀ ಅವರು ಧಾರ್ಮಿಕ ಪದ್ಧತಿಯಂತೆ ನೆರೆವೆಸಿ ಕಳಸದ ಪ್ರತಿಷ್ಠಾಪನೆ ಮಾಡಿದರು. ನೂರಾರು ಅಯ್ಯಪ್ಪ ಸ್ವಾಮಿಯ ಭಕ್ತರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

    ಸುಮಾರು 15 ವರ್ಷಗಳ ಚಿನ್ನದ ಲೇಪನದ ಕನಸು ಇಂದು ಈಡೇರಿದೆ. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನದ ತಗಡನ್ನು ಯಶಸ್ವಿಯಾಗಿ ಆಳವಡಿಕೆ ಮಾಡಲಾಗಿದ್ದು, ಇಂದು ಬೆಳಗ್ಗೆ ಭಕ್ತರ ದರ್ಶನಕ್ಕೆ ಲೋಕಾರ್ಪಣೆ ಮಾಡಲಾಯಿತು ಎಂದು ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

  • ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ತಿರುವನಂತಪುರಂ: ಸುಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ.

    ಕೊರೊನಾ 2ನೇ ಅಲೆ ಮಧ್ಯೆ ತಿಂಗಳ ಪೂಜೆಯನ್ನು ನೆರವೇರಿಸಲು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ದೇವಸ್ಥಾನವನ್ನು ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್‌ ದೇವಸ್ವಂ ಮಂಡಳಿ ತಿಳಿಸಿದೆ.

    ಕೊರೊನಾ ಹೊಸ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಸರ್ಟಿಫಿಕೇಟ್ ಅಥವಾ 48 ಗಂಟೆಗಳೊಳಗೆ ಟೆಸ್ಟ್ ಮಾಡಿಸಿದ ಕೋವಿಡ್-19 ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಅಲ್ಲದೆ ಆನ್‍ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

    ಕೇರಳ ಪೊಲೀಸರು ಹಾಗೂ ದೇವಸ್ವಂ ಮಂಡಳಿ ಕಳೆದ ವರ್ಷ ಹೊಸ ಆನ್‍ಲೈನ್ ಪೋರ್ಟಲ್ ಲಾಂಚ್ ಮಾಡಿದ್ದು, ಇದರ ಮೂಲಕವೇ ವಚ್ರ್ಯೂಲ್ ಕ್ಯೂ, ಪ್ರಸಾದ, ಪೂಜೆ, ವಾಸ್ತವ್ಯ, ಕಾಣಿಕೆ ಬುಕ್ ಮಾಡಬೇಕು. ಈ ಮೂಲಕ ಗಲಾಟೆ ಮುಕ್ತ ದರ್ಶನಕ್ಕೆ ದೇವಸ್ಥಾನ ಮಂಡಳಿ ವ್ಯವಸ್ಥೆ ಕಲ್ಪಿಸಿದೆ. ರಿಜಿಸ್ಟ್ರೇಶನ್ ಮಾಡಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯವಾಗಿದೆ.

  • ಜೂನ್ 14ರಿಂದ ಅಯ್ಯಪ್ಪನ ದರ್ಶನ ಇಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ

    ಜೂನ್ 14ರಿಂದ ಅಯ್ಯಪ್ಪನ ದರ್ಶನ ಇಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ

    ತಿರುವನಂತಪುರಂ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸದ್ಯ ತೆರೆಯದಿರಲು ನಿರ್ಧರಿಸಿದೆ. ಇಂದು ನಡೆದ ಮಹತ್ವದ ಸಭೆ ಬಳಿಕ ಈ ನಿರ್ಧಾರವನ್ನು ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಪ್ರಕಟಿಸಿದ್ದಾರೆ.

    ಜೂನ್ 14ರಿಂದ ಮಾಸಿಕ ಪೂಜೆ ಆರಂಭವಾಗಬೇಕಿದ್ದು, ದೇವಸ್ಥಾನ ತೆರೆಯುವ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಸಭೆ ನಡೆಸಿತು. ಈ ಸಭೆಯಲ್ಲಿ ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸೇರಿದಂತೆ ಎಲ್ಲ ಅರ್ಚಕರು ಭಾಗಿಯಾಗಿದ್ದರು.

    ಭಾರತ ಅನ್‍ಲಾಕ್ ಬಳಿಕ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಷರತ್ತುಗಳೊಂದಿಗೆ ಅವಕಾಶ ನೀಡಿತ್ತು. ಈ ಹಿನ್ನೆಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯುವ ಸಂಬಂಧ ಚರ್ಚೆ ನಡೆಸಲಾಯಿತು. ಜೂನ್ 14ರಿಂದ ಶಬರಿಮಲೆಯಲ್ಲಿ ಮಾಸಿಕ ಪೂಜೆ ನಡೆಸಬೇಕಿತ್ತು. ಈ ಪೂಜೆ ನಡೆದರೆ ಕೇವಲ ಕೇರಳ ಮಾತ್ರವಲ್ಲದೆ ದೇಶದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸುತ್ತಾರೆ. ಶಬರಿಮಲೈ ದೇವಸ್ಥಾನದಲ್ಲಿ ಮಾರ್ಗಸೂಚಿಗಳ ಪಾಲನೆ ಕಷ್ಟ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಯಿತು.

    ಈ ಹಿನ್ನೆಲೆಯಲ್ಲಿ ಶಬರಿಮಲೈ ದೇವಸ್ಥಾನ ತೆರೆಯದಿರಲು ಮತ್ತು ತಿಂಗಳ ಪೂಜೆಗೆ ಭಕ್ತಾದಿಗಳಿಗೆ ಅವಕಾಶ ನೀಡದರಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ದೇವಸ್ಥಾನ ಉತ್ಸವ ರದ್ದು ಮಾಡಲು ಕೂಡಾ ಒಮ್ಮತದ ತಿರ್ಮಾನ ತೆಗೆದುಕೊಳ್ಳಲಾಗಿದೆ.

  • ಅಯ್ಯಪ್ಪನಿಗೆ ಪೂಜೆ ಸಲ್ಲಿಸಲು ಬಂದವರ ಮೇಲೆ ಕಾಂಪೌಂಡ್ ಕುಸಿತ – ಓರ್ವ ಸಾವು

    ಅಯ್ಯಪ್ಪನಿಗೆ ಪೂಜೆ ಸಲ್ಲಿಸಲು ಬಂದವರ ಮೇಲೆ ಕಾಂಪೌಂಡ್ ಕುಸಿತ – ಓರ್ವ ಸಾವು

    ಬೆಂಗಳೂರು: ಸೇನೆಯ ವಿಂಗ್ ಕಮಾಂಡರ್ ಮನೆ ಬಳಿಯ 10 ಅಡಿ ಎತ್ತರದ ಕಾಂಪೌಂಡ್ ಗೋಡೆ ಕುಸಿದು, ವ್ಯಕ್ತಿ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಜಾಲಹಳ್ಳಿ ಬಳಿಯ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ.

    ಪರಮೇಶ್ವರ್ ಸಾವನ್ನಪ್ಪಿದ್ದು ವರುಣ್ ಮತ್ತು ಕಲ್ಯಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾಲಹಳ್ಳಿ ರಸ್ತೆಯಲ್ಲಿರುವ ಸೇನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

    ಸೇನೆಯ ಎತ್ತರದ ಕಾಂಪೌಂಡ್ ಬಿದ್ದ ತಕ್ಷಣ ಪರಮೇಶ್ವರ್ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಮತ್ತು ಕಲ್ಯಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಪೌಂಡ್ ಕುಸಿಯುತ್ತಿದ್ದಂತೆ ಗೋಡೆ ಪಕ್ಕದಲ್ಲಿದ್ದ ಬೈಕ್‍ಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಘಟನೆ ನಡೆಯುತ್ತಿದಂತೆ ಸ್ಥಳೀಯರೇ ರಕ್ಷಣಾ ಕಾರ್ಯ ನಡೆಸಿದ್ದು, ಈ ಸಂಬಂಧ ಗಂಗಮ್ಮನಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೊಮ್ಮಗನ ಹೆಸರಲ್ಲಿ ವಿಶೇಷ ಪೂಜೆ ಮಾಡಿಸೋದಾಗಿ ಕುಟುಂಬ ಹರಕೆ ಹೊತ್ತಿತ್ತು. ವಿಜಯದಶಮಿ ಹಬ್ಬದ ಪ್ರಯುಕ್ತ ಇಂದು ಕೆಆರ್ ಪುರದಿಂದ ಜಾಲಹಳ್ಳಿಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ಬಂದಿದ್ದರು.

    ಹರಕೆ ತೀರಿಸಿ, ಪೂಜೆ ನೆರವೇರಿಸಿ ಪರಮೇಶ್, ಕಲ್ಯಾಣಿ, ಪ್ರಸಾದ್, ವರುಣ್ ಹೊರ ಬಂದಿದ್ದರು. ಸೇನೆಯ ಕಾಂಪೌಂಡ್ ಬಳಿ ಪಾರ್ಕ್ ಮಾಡಿದ್ದ ಕಾರನ್ನು ತೆಗೆದುಕೊಂಡು ಬರಲು ಮಗ ಪ್ರಸಾದ್ ಹೋಗಿದ್ದ. ಈ ವೇಳೆ ಬಿಸಿಲು ಎಂಬ ಕಾರಣಕ್ಕೆ ಉಳಿದ ಮೂವರು ಗೋಡೆ ಬದಿಯ ನೆರಳಿಗೆ ಹೋಗಿದ್ದರು. ಈ ವೇಳೆ ಏಕಾಏಕಿ 10 ಅಡಿ ಎತ್ತರದ ಕಾಂಪೌಂಡ್ ಗೋಡೆ ಕುಸಿದಿದೆ.