Tag: ಅಯ್ಯಪ್ಪ ಮಾಲಾಧಾರಿಗಳು

  • 8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) 8 ಮಂದಿ ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ (Relief) ಘೋಷಿಸಲಾಗಿದೆ.

    ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santhosh Lad) ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ – ವಿಶೇಷತೆ ಏನು?

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಘೋಷಣೆ ಮಾಡಲಾಗಿದೆ. ಸಂತೋಷ್ ಲಾಡ್ ಫೌಂಡೇಶನ್‌ನಿಂದಲೂ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಗ್ಯಾರಂಟಿ ಶಾಕ್ – ದರ ಏರಿಕೆಗೆ ಸರ್ಕಾರ ಹೇಳೋದು ಏನು?

    ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಅಶೋಕ್ ಕಿಡಿ

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ.

    ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸಕಾಲದಲ್ಲಿ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮ್ಸ್ ನಿರ್ದೇಶಕ ಎಸ್.ಎಫ್. ಕಮ್ಮಾರ ನೇತೃತ್ವದ ತಂಡ ಗಾಯಾಳುಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಡಿ.23ರಿಂದ 31 ರ ನಡುವೆ, ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ.

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    – ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರ

    ಹುಬ್ಬಳ್ಳಿ: ಕಳೆದ ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣ (Hubballi Cylinder Blast Case) ಇಡೀ ಹುಬ್ಬಳ್ಳಿ-ಧಾರವಾಡ ಜನರನ್ನು ಬೆಚ್ಚಿ ಬಿಳಿಸಿತ್ತು.

    ಈಶ್ವರ ದೇವಸ್ಥಾನದಲ್ಲಿ ಮಲಗಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಬೆಂಕಿಗೆ ಬೆಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಮೂವರು ಮೃತಪಟ್ಟಿದ್ರು. ಉಳಿದವರಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದು, ಸಾವಿನ ಸಂಖ್ಯೆ 6ಕ್ಕೇರಿದೆ. ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್

    30 ವರ್ಷದ ಶಂಕರ್, 22 ವರ್ಷದ ಮಂಜುನಾಥ ವಾಗ್ಮೋಡೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಶಂಕರ್ ಕಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ರು. ಬಾಲ್ಯದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥವಾಗಿದ್ದ ಶಂಕರ್ ದೊಡ್ಡಮ್ಮನ ಮನೆಯಲ್ಲಿ ವಾಸವಿದ್ದ. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

    ಇನ್ನೂ ಮಂಜುನಾಥ ವಾಗ್ಮೋಡೆಯ ದೇಹ ಶೇ.70ರಷ್ಟು ಸುಟ್ಟಿತ್ತು. 2ನೇ ವರ್ಷ ಡಿಪ್ಲೊಮಾ ಕೋರ್ಸ್ ವಿದ್ಯಾರ್ಥಿಯಾಗಿದ್ದ ಮಂಜುನಾಥ್. ಅಯ್ಯಪ್ಪ ಮಾಲೆ ಧರಿಸಿದ್ರು. ಒಂದು ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ರೂ ಇಂದು ಮೃತಪಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ಕೂಡ ತಮ್ಮ ಸಹೋದ್ಯೋಗಿಯ ಅಂತಿಮ ದರ್ಶನ ಪಡೆದು ಕಣ್ಣಿರು ಹಾಕಿದ್ದಾರೆ. ಪ್ರಕಾಶ್ ಬಾರಕೇರ್ ದೇಹ ಶೇ.91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ.74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ.25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

  • ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

    ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

    ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ ಮುಸ್ಲಿಮರ ನಡುವಿನ ಭಾವೈಕ್ಯತೆ ಸಾರಿದ್ದಾರೆ. ಕವಿತಾಳ ಮತ್ತು ಪಾತಾಪೂರದ ಅಯ್ಯಪ್ಪ ಸ್ವಾಮಿ ಪೀಠದ 40ಕ್ಕೂ ಹೆಚ್ಚು ಮಾಲಾಧಾರಿಗಳಿಗೆ ಹೋಳಿಗೆ ತುಪ್ಪ, ಲಾಡು ಸೇರಿ ಬಗೆಬಗೆಯ ತಿಂಡಿ ತಿನಿಸುಗಳನ್ನು ಮಾಡಿ ಸ್ವತಃ ಬಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: UI ಸಕ್ಸಸ್ ಬೆನ್ನಲ್ಲೇ ಉಪೇಂದ್ರ ಟೆಂಪಲ್ ರನ್

    ಅಯ್ಯಪ್ಪ ಮಾಲೆ ಧರಿಸಿದ ಭಕ್ತರಿಗೆ ಸ್ವಚ್ಛತೆ ಹಾಗೂ ಮಡಿಯಿಂದ ಅಡುಗೆ ಮಾಡಿ ಉಣ ಬಡಿಸಿದ್ದಾರೆ. ಕರೀಂಸಾಬ್ ಆತಿಥ್ಯ ಸ್ವೀಕರಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

  • ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಹುಬ್ಬಳ್ಳಿ: ಸಿಲಿಂಡರ್‌ ಸೋರಿಕೆಯಿಂದ (Hubballi Cylinder Blast) ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ (Ayyappa Devotee) ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

    ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇವರು ಕಳೆದ ಏಳು ದಿನಗಳಿಂದ ಹುಬ್ಬಳ್ಳಿಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

    ಬಾಲ್ಯದಲ್ಲೇ ತಂದೆ-ತಾಯಿಯನ್ನ ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಶಂಕರ್‌ ಬೆಳೆದಿದ್ದ. ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದ. ಕಳೆದ ಭಾನುವಾರ ರಾತ್ರಿ ಸಿಲಿಂಡರ್‌ ಸೋರಿಕೆ ಅವಘಡ ನಡೆದಿತ್ತು.

    ಸಾಯಿನಗರದ ಅಚ್ಚವ್ವಳ ಕಾಲೊನಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಗ್ಯಾಸ್‌ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದಲ್ಲಿ 9 ಮಾಲಾಧಾರಿಗಳಿಗೆ ತೀವ್ರ ಗಾಯವಾಗಿತ್ತು. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ಇದುವರೆಗೆ 5 ಮಂದಿ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.

  • ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    – ಕಿಮ್ಸ್‌ಗೆ ಸಚಿವ ಸಂತೋಷ್‌ ಲಾಡ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ (Cylinder Blast) ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಸಂತೈಸಿದರು. ಈ ವೇಳೆ ಸಚಿವರ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಾಡ್, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ್ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರನ್ನ ಬದುಕಿಸಲು ಪ್ರಯತ್ನ ಮಾಡಿದೆವು. 4 ನುರಿತ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪ್ರಮಾಣ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

     

    ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದರು. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್‌ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ

    ಸದ್ಯ ಕಿಮ್ಸ್ ಶವಾಗಾರದಿಂದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ರವಾನಿಸಲಾಗಿದೆ. ಸಂಜಯ್ ಸವದತ್ತಿ ಅಂತ್ಯಕ್ರಿಯೆ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದ್ದು, ನಿಜಲಿಂಗಪ್ಪ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ

  • Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು (Cylinder Blast) 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

    ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ (Hubballi) ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಾರಿಗಳು ಸೇರಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆ ಮಕ್ಕಳನ್ನ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

  • Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

    Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

    ಹುಬ್ಬಳ್ಳಿ: ಮಲಗಿದ್ದ ವೇಳೆ ಏಕಾಏಕಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡ (Cylinder Blast) ಪರಿಣಾಮ 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotess) ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ (Hubballi)  ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.

    ಭಾನುವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಅಯ್ಯಪ್ಪ ಸ್ವಾಮಿಗಳು ಮಲಗಿದ್ದ ವೇಳೆ ಸಿಲಿಂಡರ್ ಬಾಸ್ಟ್ಗೊಂಡಿದೆ. ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

    ಘಟನೆಯಲ್ಲಿ ಗಂಭೀರ ಗಾಯಗೊಂಡ ಮಾಲಾಧಾರಿಗಳಿಗೆ ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ