Tag: ಅರಣ್ಯಾಧಿಕಾರಿಗಳು

  • ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಬಳ್ಳಾರಿ: ಬಿಸಿಲಿನ ಝಳಕ್ಕೆ ಕಾದು ಕೆಂಡವಾಗಿದ್ದ ತುಂಗಭದ್ರಾ ಡ್ಯಾಂ (Tungabhadra Dam) ಬಳಿಯ ಗುಡ್ಡದಲ್ಲಿ ಬುಧವಾರ ಸಂಜೆ ಬೆಂಕಿ (Fire) ಕಾಣಿಸಿಕೊಂಡಿದೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ಇದನ್ನೂ ಓದಿ: ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿರುವ ಅರಣ್ಯಾಧಿಕಾರಿಗಳು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ ಬಿಡಿ, ಸಿಗರೇಟ್ ಕಿಡಿ ಬಿದ್ದಿರಬಹುದೆಂದು ಶಂಕಿಸಿದ್ದಾರೆ. ಇದನ್ನೂ ಓದಿ: Amur Falcon | ಸೈಬೀರಿಯಾ To ಆಫ್ರಿಕಾ 22 ಸಾವಿರ ಕಿ.ಮೀ ಪ್ರಯಾಣ – ವಿಶೇಷ ಆಹಾರಕ್ಕೆ ಭಾರತದಲ್ಲಿ ನಿಲುಗಡೆ!

  • ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಮಡಿಕೇರಿ: ಇಲ್ಲಿನ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ (Igguthappa), ನಾಲಾಡಿ (Naladi) ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು ಅಂದಾಜು 20 ಎಕ್ರೆ ಪ್ರದೇಶಕ್ಕೆ ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರು | ಚಲಿಸುತ್ತಿದ್ದ ಬೈಕ್ ಮೇಲೆ ಸಿನಿಮಾ ಸ್ಟೈಲ್‍ನಲ್ಲಿ ರೊಮ್ಯಾನ್ಸ್ – ವಿಡಿಯೋ ವೈರಲ್

    ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ

  • ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ಅಕ್ರಮವಾಗಿ ಚೀನಾಗೆ (China) ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ (Khanapur) ಅರಣ್ಯದಲ್ಲಿ ನಡೆದಿದೆ.

    ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

    ನಾಲ್ಕು ಜನ ಆರೋಪಿಗಳು ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವಾಗ ಕಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರು ವರ್ಷದ ನಾಲ್ಕೂವರೆ ಕೆಜಿ ತೂಕದ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಗಳು ವಶಕ್ಕೆ ಪಡೆದಿದ್ದಾರೆ.

    ಖಾನಾಪುರ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾತನಾಡಿ, ಚಿಪ್ಪು ಹಂದಿಯನ್ನು ಪುರುಷತ್ವ ಹೆಚ್ಚಿಸುವ ಔಷಧ ತಯಾರಿಕೆಗಾಗಿ ಬಳಸಲಾಗುತ್ತದೆ. ಇದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಖಾನಾಪುರದಿಂದ ಚೀನಾವರೆಗೂ ಚಿಪ್ಪು ಹಂದಿಯನ್ನು ಸಾಗಾಟ ಮಾಡುತ್ತಿದ್ದು, ಸಾಗಾಟ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದರು.

    ಖಾನಾಪುರದಿಂದ ಕಾರವಾರಕ್ಕೆ (Karwar) ಕಳಿಸಿ ಅಲ್ಲಿಂದ ಬೋಟ್ ಮೂಲಕ ಕೋಲ್ಕತ್ತಾಗೆ (Kolkatta) ಸಾಗಿಸುತ್ತಾರೆ. ಬಳಿಕ ಹಡಗಿನಲ್ಲಿ ಚೀನಾಕ್ಕೆ ಸಾಗಾಟ ಮಾಡುತ್ತಿದ್ದರು. ಸದ್ಯ ಚಿಪ್ಪು ಹಂದಿ ಸಾಗಾಟ ತಂಡದ ಶೋಧಕ್ಕಾಗಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಒಂದು ಪ್ರತ್ಯೇಕ ತಂಡ ರಚಸಿ ಕಳ್ಳಸಾಕಾಣೆ ತಂಡದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

  • ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಚಾಮರಾಜನಗರ: ಹುಲಿ (Tiger) ದಾಳಿಗೆ ಮಹಿಳೆ (Woman) ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ (Bandipur) ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.

    ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಈ ಹುಲಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಸುಮಾರು 10 ವರ್ಷ ವಯಸ್ಸಿನ ಹುಲಿ ಸೆರೆಯಾಗಿದೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್‌ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ‍್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ

  • ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ.

    ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

    ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೃತ ಬೇಟೆಗಾರನ ಬಳಿ ಜಿಂಕೆ, ಗನ್ ಸಿಕ್ಕಿದೆ, ಪರಮಾತ್ಮನಿಂದಲೇ ಶಿಕ್ಷೆಯಾಗಿದೆ: ಸೋಮಣ್ಣ

    ಮೃತ ಬೇಟೆಗಾರನ ಬಳಿ ಜಿಂಕೆ, ಗನ್ ಸಿಕ್ಕಿದೆ, ಪರಮಾತ್ಮನಿಂದಲೇ ಶಿಕ್ಷೆಯಾಗಿದೆ: ಸೋಮಣ್ಣ

    ಚಾಮರಾಜನಗರ: ಕಾವೇರಿ ನದಿಯಲ್ಲಿ (Kaveri River) ಶವವಾಗಿ ಸಿಕ್ಕ ತಮಿಳುನಾಡು (Tamil Nadu) ಬೇಟೆಗಾರ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿಯ ಗುಂಡಿಗೆ ಬಲಿಯಾಗಿದ್ದಾನೆ ಎಂಬ ಆರೋಪವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ (V Somanna) ನಿರಾಕರಿಸಿದರು.

    ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಆತನ ಶವವನ್ನು ತಮಿಳುನಾಡಿನವರೇ ಮರಣೋತ್ತರ ಪರೀಕ್ಷೆ ಕೊಂಡೊಯ್ದಿದ್ದು, ವರದಿ ಬಂದ ನಂತರ ಸತ್ಯಾಂಶ ಏನೆಂದು ಗೊತ್ತಾಗಲಿದೆ. ಆತನ ಬಳಿ ಜಿಂಕೆ ಶವ ಹಾಗೂ ಗನ್ ಸಿಕ್ಕಿದೆ. ಏಳೆಂಟು ವರ್ಷಗಳ ಹಿಂದೆಯೂ ಇಲ್ಲೇ ಬೇಟೆಯಾಡಲು ಬಂದು ಸಿಕ್ಕಿಬಿದ್ದಿದ್ದ. ಆತ ಮಾಡಿದ ತಪ್ಪಿಗೆ ಪರಮಾತ್ಮನಿಂದ ಶಿಕ್ಷೆಯಾಗಿದೆ ಎಂದರು.

    ಮೀನು ಹಿಡಿಯಲು ಸಾವಿರಾರು ಜನ ಬರುತ್ತಾರೆ. ಯಾವ ಮೀನುಗಾರನಿಗೂ ಅನಾನುಕೂಲವಾಗಿಲ್ಲ. ಆತ ಮೀನುಗಾರನಾಗಿದ್ದರೆ ಮರಣೋತ್ತರ ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ಆತ ಅಮಾಯಕನಾಗಿದ್ದರೆ ಎರಡು ರಾಜ್ಯಗಳ ಅಧಿಕಾರಿಗಳ ಜೊತೆ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸಿಎಂ ಮಾಡ್ಬೇಕು: ಭೈರತಿ ಸುರೇಶ್

    ಘಟನೆಯೇನು?: ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    ಚಾಮರಾಜನಗರ: ತಮಿಳುನಾಡು (Tamil Nadu) ಬೇಟೆಗಾರರು (Hunters) ಹಾಗೂ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿ (Forest Officers) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಬೇಟೆಗಾರನೊಬ್ಬ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು

    ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ರಾಜು ಎಂಬವರ ಶವ ಪತ್ತೆಯಾಗಿದೆ. ಆ ವ್ಯಕ್ತಿಯ ವೈಯಕ್ತಿಕ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳಿಂದ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    ಅದೃಷ್ಟವಶಾತ್ ಗುಂಡಿನ ದಾಳಿ ವೇಳೆ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಮಹದೇಶ್ವರ ಬೆಟ್ಟದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 400 ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ

    400 ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ

    ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಆಪರೇಶನ್ ಚಿತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಮುಖಮಾಡಿದೆ. ಮಹಾನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಸರ್ಚಿಂಗ್ ಆಪರೇಷನ್ ನಡೆಯುತ್ತಿದ್ದು ಹೈ ಡೆಫೆನೆಶನ್ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.

    ಕಳೆದ 19 ದಿನಗಳಿಂದ ಕುಂದಾನಗರಿ ಜನರ ನಿದ್ದೆಗೆಡಸಿದ ಚಿರತೆ ಹುಟುಕಾಟಕ್ಕಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಶ್ರಮಪಡುತ್ತಿದೆ. ಸೋಮವಾರ ಎರಡೆರಡು ಬಾರಿ ಮುಖ ದರ್ಶನ ಮಾಡಿದ ಚಿರತೆ ಕಣ್ಣುಮುಚ್ಚಾಲೆ ಆಟವಾಡುತ್ತಿದೆ. ಚಿರತೆಯನ್ನು ಮಟ್ಟ ಹಾಕಲು ಬೆಂಗಳೂರಿನಿಂದ ಡ್ರೋಣ್ ಎಕ್ಸ್ ಪರ್ಟ್ ಕರೆಸಲಾಗಿದ್ದು ಗಾಲ್ಫ್ ಮೈದಾನದ ಮೇಲೆ ಹದ್ದಿನ ಕಣ್ಣುಗಳಿಂತಿರುವ ಎರಡು ಡ್ರೋನ್‌ಗಳು ಹಾರಾಟ ನಡೆಸುತ್ತಿವೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

    ಬೆಳ್ಳಂಬೆಳಗ್ಗೆ ಬೀದಿ ನಾಯಿಗಳನ್ನು ತಿಂದು ದಟ್ಟವಾದ ಗಿಡಮರಗಳ ಮಧ್ಯೆ ಮರೆಯಾಗುತ್ತಿದೆ. ಹಗಲಿರುಳು ಕಾರ್ಯಾಚರಣೆ ಮಾಡಿ ಚಿರತೆಯನ್ನು ಬೋನಿಗೆ ಹಾಕುವ ಪ್ರಯತ್ನಕ್ಕಾಗಿ ಸಕ್ರಬೈಲಿನಿಂದ ಎರಡು ಆನೆಗಳನ್ನು ಕರೆತರಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಬೆಳಗಾವಿ ನಗರ ಜನತೆಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಸಿಸಿಎಫ್ ಹೇಳಿದ್ದಾರೆ.

    ಮೂರು ವಾರಗಳಿಂದ ಚಿರತೆ ಬಂದ ಏರಿಯಾದ ಜನತೆಗೆ ಆತಂಕ ಇದ್ದೇ ಇದೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ 1 ರಿಂದ 4ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆನ್ ಲೈನ್ ಮೂಲಕ ತರಗತಿಗಳು ಚಾಲ್ತಿಯಲ್ಲಿವೆ. ಸಂಪೂರ್ಣ ಜಿಲ್ಲಾಡಳಿತ ಚಿರತೆ ಬೋನಿಗೆ ಹಾಕುವ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿದೆ. ಜನರು ತಮ್ಮ ಸುರಕ್ಷತೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಶಾಸಕ ಅನೀಲ ಬೆನಕೆ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

    300ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು, 100 ಪೊಲೀಸ್ ಅಧಿಕಾರಿಗಳು ಸೇರಿದಂತೆ ಡ್ರೋನ್ ಕ್ಯಾಮರಾ, ಬೇಟೆ ನಾಯಿಗಳು, ಇನ್ ಪ್ರಾ ರೆಡ್ ಕ್ಯಾಮರಾಮನ್, ನೈಟ್ ಕೊಂಬಿಂಗ್ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಸಚಿವರು ಬೆಳಗಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಚಿರತೆ ಹಿಡಿದು ಕಾಡಿಗಟ್ಟಲು ಬೇಕಾದ ಎಲ್ಲಾ ಕ್ರಮಗಳನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಯಿ ಆಸೆ ತೋರಿಸಿ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

    ನಾಯಿ ಆಸೆ ತೋರಿಸಿ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

    ಚಿಕ್ಕಬಳ್ಳಾಪುರ: ನಾಯಿ ಆಸೆಯನ್ನ ತೋರಿಸಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ತೋಟದ ಮನೆಯಲ್ಲಿ ಕಟ್ಟಿ ಹಾಕಲಾಗಿದ್ದ ಸಾಕುನಾಯಿಯ ಮೇಲೆ ದಾಳಿ ಮಾಡಿ ಭಕ್ಷಿಸಿದ್ದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ ಹಲವು ದಿನಗಳಿಂದ ಕೋಳೂರು ಸಮೀಪದ ಅರಣ್ಯ ಇಲಾಖೆ ನಿರ್ಮಿಸಿರುವ ಪ್ಲಾಂಟೇಷನ್ ಬಳಿ ಚಿರತೆ ಕಂಡುಬಂದಿತ್ತು. ಮೇ 29 ರ ಭಾನುವಾರ ರಾತ್ರಿ ಹರೀಶ್ ಅವರ ತೋಟದ ಮನೆಗೆ ನುಗ್ಗಿ, ಸಾಕುನಾಯಿಯನ್ನು ಕೊಂದು ಹಾಕಿತ್ತು. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ 

    ಶ್ರೀನಿವಾಸಪುರ, ಮರಳೇನಹಳ್ಳಿ, ಕಮಲೂರು, ಶಿರವಾರ, ಅಂತರಹಳ್ಳಿ, ಕೋಳೂರು ಸುಮಾರು ಎರಡು, ಮೂರು ಕಿಮೀ ಅಂತರದ ಅಕ್ಕಪಕ್ಕದ ಗ್ರಾಮಗಳಲ್ಲಿ ಚಿರತೆ ಇರುವುದು ಪತ್ತೆಯಾಗಿತ್ತು. ಈ ಕುರಿತಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ತ್ವರಿತವಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.

    ಹೀಗಾಗಿ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ಅದೇ ದಿನ ಕೋಳೂರು ಪ್ಲಾಂಟೇಷನ್ ಬಳಿ ಬೋನ್ ಅಳವಡಿಸಿ, ಚಿರತೆ ಸೆರೆಗೆ ಕ್ರಮಕೈಗೊಂಡಿದ್ದರು. ಇದರ ಬೆನ್ನಲ್ಲೇ ರಾತ್ರಿ ಭಾನುವಾರ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ. ಇದನ್ನೂ ಓದಿ:  ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

  • ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್

    ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್

    ತುಮಕೂರು: ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರಣ್ಯಾಧಿಕಾರಿಗಳನ್ನು ಕಂಡು ಪರಾರಿಯಾಗುವಾಗ ಬಂಧನಕ್ಕೊಳಗಾದ ಘಟನೆ ಮಧುಗಿರಿ ತಾಲೂಕಿನ ತಿಪ್ಪಾಪುರದಲ್ಲಿ ನಡೆದಿದೆ.

    ಬ್ರಹ್ಮದೇವರಹಳ್ಳಿಯ ಶಿವಕುಮಾರ್, ಚಿನ್ನೇನಹಳ್ಳಿಯ ಆದರ್ಶ ಬಂಧಿತ ಆರೋಪಿಗಳು. ಇಬ್ಬರು ವ್ಯಕ್ತಿಗಳು ಬೈಕ್‍ನಲ್ಲಿ ಜಿಂಕೆ ಮಾಂಸ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖದೀಮರು ತಿಪ್ಪಾಪುರ ಗ್ರಾಮದ ಬಳಿ ಗಂಡು ಜಿಂಕೆಯೊಂದನ್ನು ಬೇಟೆಯಾಡಿದ್ದರು. ಈ ವೇಳೆ 5 ಕೆ.ಜಿ. ಜಿಂಕೆ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಆರೋಪಿಗಳು ಬೇಟೆಯಾಡಲು ಬಳಸುತ್ತಿದ್ದ ವಸ್ತುಗಳು ಸೇರಿ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.