Tag: ಅರಣ್ಯ ಇಲಾಖೆ ಅಧಿಕಾರಿಗಳು

  • ಕಚೇರಿಯಲ್ಲೇ ಕುಳಿತು ಆನೆಗಳನ್ನು ಕಾಡಿಗಟ್ಟಲು ಪ್ಲ್ಯಾನ್‌ – `ಡಿವೈಸ್’ ಬಳಕೆಗೆ ಮುಂದಾದ ಅರಣ್ಯ ಇಲಾಖೆ!

    ಕಚೇರಿಯಲ್ಲೇ ಕುಳಿತು ಆನೆಗಳನ್ನು ಕಾಡಿಗಟ್ಟಲು ಪ್ಲ್ಯಾನ್‌ – `ಡಿವೈಸ್’ ಬಳಕೆಗೆ ಮುಂದಾದ ಅರಣ್ಯ ಇಲಾಖೆ!

    – 15 ರಿಂದ 20 ಮೀ. ದೂರದಲ್ಲಿರುವಾಗಲೇ ವಿಚಿತ್ರ ಶಬ್ದ, ಪಟಾಕಿಯಂತೆ ಬೆಳಕು ಚೆಲ್ಲುತ್ತೆ ಈ ಡಿವೈಸ್

    ಚಿಕ್ಕಮಗಳೂರು: ಹಾಸನ, ಚಿಕ್ಕಮಗಳೂರು (Chikkamagaluru) ಸೇರಿದಂತೆ ಮಲೆನಾಡ ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು (Forest Department) ಆಫೀಸ್‌ನಲ್ಲಿ ಕುಳಿತುಕೊಂಡು ಆನೆಗಳನ್ನು ಓಡಿಸಲು ಹೊಸ ಡಿವೈಸ್ ಅನ್ನು ಬಳಸಿ, ಈ ಮೂಲಕ ಚಿತ್ರ ವಿಚಿತ್ರ ಶಬ್ದದಿಂದ ಆನೆಗಳನ್ನು ಬೆದರಿಸಿ ಕಾಡಿಗಟ್ಟುವ ಪ್ಲ್ಯಾನ್‌ ಹಾಕಿಕೊಂಡಿದ್ದಾರೆ.

    ಈ ಮೊದಲು ಆನೆ ನಡೆದಿದ್ದೇ ದಾರಿ ಎನ್ನುವ ಕಾಲವಿತ್ತು. ಇದೀಗ ನಾವು ನಡೆದ ದಾರಿಯಲ್ಲಿಯೇ ಆನೆ ಕೂಡ ನಡೆಯಬೇಕು ಎನ್ನುವ ಕಾಲಬಂದಿದೆ. ಹೌದು ಕಳೆದೊಂದು ವರ್ಷದಿಂದ ಕಾಫಿನಾಡು ಮಲೆನಾಡು ಭಾಗದಲ್ಲಿ ಆನೆ ಹಾವಳಿಗೆ ಜನರು ಹೈರಾಣಾಗಿದ್ದಾರೆ. ಜೊತೆಗೆ ಅರಣ್ಯ ಅಧಿಕಾರಿಗಳು ಕೂಡ ಹಗಲಿರುಳು ನಿದ್ದೆಗೆಟ್ಟು ಕಂಗಾಲಾಗಿದ್ದಾರೆ. ಆದರೆ ಇದೀಗ ಆಫೀಸ್‌ನಲ್ಲಿಯೇ ಕುಳಿತುಕೊಂಡು 20 ಆನೆಗಳಿದ್ದರೂ ಸಲೀಸಾಗಿ ದಾರಿ ತಪ್ಪಿಸಿ, ಪಾಠ ಕಲಿಸಲು ಮುಂದಾಗಿದ್ದಾರೆ.ಇದನ್ನೂ ಓದಿ:ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಮನಸೋಯಿಚ್ಛೆ ದಾಳಿ ಮಾಡುವ ಪುಂಡಾನೆಗಳನ್ನು ಓಡಿಸಲು ಅಧಿಕಾರಿಗಳು ನೂತನ ಪ್ಲ್ಯಾನ್‌ ಮಾಡಿದ್ದಾರೆ. ಆನೆಗಳನ್ನು ಓಡಿಸುವ ಸಲುವಾಗಿಯೇ ಅಧಿಕಾರಿಗಳು ಹೊಸ ಡಿವೈಸ್ ಉಪಯೋಗಿಸಲಿದ್ದಾರೆ. ಡ್ರೋನ್ ಕ್ಯಾಮರಾದಲ್ಲಿ ಆನೆಗಳ ಚಲನ-ವಲನ ಗಮನಿಸುವ ಅಧಿಕಾರಿಗಳು, ಆನೆಗಳು ಊರು-ತೋಟಗಳಿಗೆ ಬರುವ ಮಾರ್ಗದಲ್ಲಿ ಮರದ ಮೇಲೆ 6-8 ಅಡಿ ಎತ್ತರದಲ್ಲಿ ಈ ಡಿವೈಸ್ ಕಟ್ಟಿರುತ್ತಾರೆ. ಆನೆಗಳು 15-20 ಮೀ. ದೂರದಲ್ಲಿ ಇರುವಾಗಲೇ ಡಿವೈಸ್ ನಿರಂತರವಾಗಿ ಚಿತ್ರ-ವಿಚಿತ್ರ ಶಬ್ಧ ಮಾಡುತ್ತದೆ. ಆ ಶಬ್ದಕ್ಕೆ ಹೆದರಿ ಆನೆಗಳ ಹಿಂಡು ಬಂದ ದಾರಿಯಲ್ಲಿ ವಾಪಸ್ ಹೋಗುತ್ತವೆ. ಈಗಾಗಲೇ ಮಲೆನಾಡಿನಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದು, ಜನರು ಹಾಗೂ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

    ಸದ್ಯಕ್ಕೆ ಅರಣ್ಯ ಅಧಿಕಾರಿಗಳು ಈ ಡಿವೈಸ್‌ನಿಂದ ಕಾಡಾನೆಗಳು ನಾಡಿನತ್ತ ಬರದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪೂರ್ಣ ಪ್ರಮಾಣದಲ್ಲಿ ಸಕ್ಸಸ್ ಆದರೆ, ಕೃಷಿಕರು ಕಾಡಾನೆಗಳಿಂದ ಬೆಳೆ ಉಳಿಸಿಕೊಳ್ಳಬಹುದು ಹಾಗೂ ಅರಣ್ಯ ಅಧಿಕಾರಿಗಳು (Forest Department) ಸ್ವಲ್ಪ ನೆಮ್ಮದಿಯಿಂದ ಇರಬಹುದು. ಈ ಸೋಲಾರ್ ಡಿವೈಸ್ ಸೆನ್ಸಾರ್ ಮೂಲಕವೇ ಕೆಲಸ ಮಾಡುತ್ತದೆ. ಆನೆಗಳು ಈ ಡಿವೈಸ್ ಬಳಿ ಬರ್ತಿದ್ದಂತೆ ಶಬ್ಧ ಮಾಡಲು ಶುರುಮಾಡುತ್ತದೆ. ರಾತ್ರಿಯಾದರೂ ಕೂಡ ಇದರ ಲೈಟ್ ಬೆಳಕು ಪಟಾಕಿಯಲ್ಲಿ ಬರುವ ಬೆಳಕಿನಂತೆ ಕಾಣುವುದರಿಂದ ಆನೆಗಳು ಹಿಂದೆ ಹೋಗುತ್ತವೆ. ಈಗಾಗಲೇ ಇದರ ಪ್ರಯೋಗ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ರೈತರಿಗೂ ಈ ಡಿವೈಸ್ ಸಬ್ಸಿಡಿಯಲ್ಲಿ ಕೊಡುವುದಕ್ಕೆ ಅರಣ್ಯ ಇಲಾಖೆ ಚಿಂತಿಸಿದೆ.ಇದನ್ನೂ ಓದಿ:ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

  • Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿ

    Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿ

    ಬೆಂಗಳೂರು: ಕಳೆದ ಮೂರು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ಉಂಟುಮಾಡಿದ್ದ ಚಿರತೆಯನ್ನು (Leopard) ಅರಣ್ಯ ಇಲಾಖೆ ಅಧಿಕಾರಿಗಳು (Leopard Operation) ಸತತ ಕಾರ್ಯಾಚರಣೆ ನಂತರ ಸೆರೆಹಿಡಿದಿದ್ದಾರೆ.

    ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆ ಸೆರೆ ಹಿಡಿಯಲಾಗಿದೆ. ಅರವಳಿಕೆ ಮದ್ದು ನೀಡಿದ ನಂತರವೂ ಅರೆಪ್ರಜ್ಞಾವಸ್ಥೆಯಲ್ಲಿದ್ದ ಚಿರತೆ ಪಶುವೈದ್ಯರ ಮೇಲೂ ದಾಳಿ ನಡೆಸಿತ್ತು. ಕೊನೆಗೂ ಹರಸಾಹಸಪಟ್ಟು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಬಳಿಕ ಅರವಳಿಕೆ ತಜ್ಞ ಕಿರಣ್‌ ಅವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದರು. ನಂತರ ಲೆಪರ್ಡ್ಸ್ ಟಾಸ್ಕ್‌ಫೋರ್ಸ್‌ ವಾಹನಕ್ಕೆ ಚಿರತೆಯನ್ನು ಶಿಫ್ಟ್ ಮಾಡಿ ಕರೆದೊಯ್ಯಲಾಯಿತು.

    ಕಾರ್ಯಾಚರಣೆ ನಡೆದಿದ್ದು ಹೇಗೆ..?
    ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಅಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೆ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು.

    ಈ ಎಲ್ಲ ಘಟನಾವಳಿಗಳ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ದಿನವಾದರೂ ಚಿರತೆಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈ ನಡುವೆ ಮಂಗಳವಾರ ಸಂಜೆ ಥರ್ಮಲ್ ತಂತ್ರಜ್ಞಾನದ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಲಾಯಿತು. ಈ ತಂತ್ರಜ್ಞಾನ ಆ ಪ್ರದೇಶದಲ್ಲಿ ಚಿರತೆ ಇರುವುದರ ಸುಳಿವು ನೀಡಿದ್ದರೂ ಸರಿಯಾಗಿ ಗುರುತಿಸಲು ಸಾಧ್ಯವಾಗಿರಲಿಲ್ಲ.

    ಮಂಗಳವಾರ ಸಂಜೆಯವರೆಗೂ ಚಿರತೆಗಾಗಿ ಇಡೀ ಕಟ್ಟಡ ಜಾಲಾಡಿದ್ದ ಅಧಿಕಾರಿಗಳಿಗೆ ಹೆಚ್ಚಿನ ಸುಳಿವು ಸಿಕ್ಕಿರಲಿಲ್ಲ. ಆದ್ರೆ ಗೋಡೆಯ ವೇಲೆ ಓಡಾಡಿದ್ದ ಗುರುತು ಪತ್ತೆಯಾಗಿತ್ತು. ಪಾಳು ಬಿದ್ದ ಕಟ್ಟಡದ ಸುತ್ತಮುತ್ತಲಿನ ಕಡೆ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದರು.

    ಮಂಗಳವಾರ ಸಂಜೆ ಕಾರ್ಯಾಚರಣೆಗೆ ವಿರಾಮ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮತ್ತೆ ಶುರು ಮಾಡಿದರು. ಸಾರ್ವಜನಿಕರು ರಸ್ತೆಯಲ್ಲಿ ಓಡಾಡದಂತೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮುಚ್ಚಲಾಗಿತ್ತು.

    ಬುಧವಾರದ ಕಾರ್ಯಾಚರಣೆಗೆ ಮೈಸೂರಿನ ವಿಶೇಷ ತಂಡವನ್ನು ಕರೆಸಿಕೊಳ್ಳಲಾಗಿತ್ತು. ಹುಣಸೂರಿನಿಂದ ಆಗಮಿಸಿದ ವನ್ಯ ಜೀವಿ ರಕ್ಷಣಾ ತಂಡ ಪಾಳುಬಿದ್ದಿರುವ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸಿತ್ತು. ವಿಶೇಷವೇನೆಂದರೆ ವನ್ಯಜೀವಿ ಸಂರಕ್ಷಣಾ ವಿಭಾಗದ ಶಾರ್ಪ್ ಶೂಟರ್ಸ್ ಸಹ ಎಂಟ್ರಿ ಕೊಟ್ಟಿದ್ದರು. ಇವರ ಸಹಾಯದಿಂದ ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!

    ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!

    ಕಾರವಾರ: ಆಹಾರ ಅರಸಿ ಬಂದಿದ್ದ ಚಿರತೆ ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬೋನಿನಲ್ಲೇ ಬಂಧಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ.

    ರಾತ್ರಿ ನಾಯಿ ಹಿಡಿಯಲು ಬಂದಿದ್ದ ಚಿರತೆಯನ್ನು ನಾಯಿ ಬೋನಿನೊಳಗೆ ಹೋದದ್ದನ್ನ ಗಮನಿಸಿದ ಮನೆಯ ಮಾಲೀಕರು ತಕ್ಷಣ ಬೋನನ್ನು ಲಾಕ್ ಮಾಡಿದ್ದಾರೆ. ಅದೃಷ್ಟವಶಾತ್ ಬೋನಿನಲ್ಲಿ ಇದ್ದ ನಾಯಿ ತಪ್ಪಿಸಿಕೊಂಡಿದ್ದು, ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ: ಎಸ್‍ಡಿಪಿಐ

    ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭಿಸಿದ್ದು, ಬೋನಿನ ಸಮೇತ ಚಿರತೆಯನ್ನು ಸೆರೆಹಿಡಿದು ಕುಮಟಾದ ಸ್ಥಳೀಯ ಕಾಡಿನಲ್ಲಿ ಬಿಟ್ಟಿದ್ದಾರೆ. ಇದನ್ನೂ ಓದಿ:  ಔರದ್‍ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

     

  • ನಾಯಿ ಮರಿ ಹೊತ್ತೊಯ್ದ ಚಿರತೆ- ಗ್ರಾಮಸ್ಥರಲ್ಲಿ ಆತಂಕ

    ನಾಯಿ ಮರಿ ಹೊತ್ತೊಯ್ದ ಚಿರತೆ- ಗ್ರಾಮಸ್ಥರಲ್ಲಿ ಆತಂಕ

    ನೆಲಮಂಗಲ: ಚಿರತೆಯೊಂದು ಹೊಂಚುಹಾಕು ಹಾಕಿ ನಾಯಿ ಮರಿಯನ್ನು ಹೊತ್ತೊಯ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಂಟನಕುರ್ಚಿ ಗ್ರಾಮದಲ್ಲಿ ನಡೆದಿದೆ.

    ಮಂಟನಕುರ್ಚಿ ಗ್ರಾಮದ ಮಂಜುನಾಥ್ ಎಂಬುವವರ ತೋಟದ ಮನೆಯ ಮುಂದೆ ಕಾಣಿಸಿಕೊಂಡಿರುವ ಚಿರತೆ ಮನೆಯ ಬಾಗಿಲ ಮುಂದೆ ಮಲಗಿದ್ದ ಎರಡು ನಾಯಿ ಮರಿಗಳಲ್ಲಿ ಒಂದು ಮರಿಯನ್ನು ಸಂಚು ಹಾಕಿ ಕ್ಷಣ ಮಾತ್ರದಲ್ಲಿ ಹೊತ್ತೋಯ್ದಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

    ಚಿರತೆಯ ಚಲನವಲಗಳು ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ನೆಲಮಂಗಲ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳ ಭೇಟಿ ವೇಳೆ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿ ಆತಂಕ ವ್ಯಕ್ತಪಡಿಸಿದ್ದು ಚಿರತೆ ಸೆರೆಗೆ ಬೋನ್ ಇಡಲು ಮನವಿ ಮಾಡಿದ್ದಾರೆ.

  • ಬಹಿರ್ದೆಸೆಗೆ ತೆರಳಿದಾಗ ನರಭಕ್ಷಕ ಚಿರತೆ ದಾಳಿ- ಯುವಕ ಬಲಿ

    ಬಹಿರ್ದೆಸೆಗೆ ತೆರಳಿದಾಗ ನರಭಕ್ಷಕ ಚಿರತೆ ದಾಳಿ- ಯುವಕ ಬಲಿ

    ಕೊಪ್ಪಳ: ಚಿರತೆ ದಾಳಿಗೆ ಯುವಕನೋರ್ವ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ಬರುವ ದುರ್ಗಾದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಹುಲಗೇಶ್ ಚಿರತೆಗೆ ಬಲಿಯಾದ ಯುವಕನಾಗಿದ್ದಾನೆ. ಮೃತ ಹುಲಗೇಶ್ ದುರ್ಗಾದೇವಿ ದೇವಸ್ಥಾನದಲ್ಲಿ ಹಲವಾರು ವರ್ಷಗಳಿಂದ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಬುಧವಾರ ಸಹ ದೇವಸ್ಥಾನದ ಕೆಲಸ ಕಾರ್ಯಗಳನ್ನ ಮುಗಿಸಿ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದೆ.

    ಯುವಕನನ್ನು ಎಳೆದುಕೊಂಡು ಹೋಗಿ ನರಭಕ್ಷಕ ಚಿರತೆ ಇಡೀ ದೇಹವನ್ನ ತುಂಡು ತುಂಡು ಮಾಡಿದೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲಿಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದು. ದೇಹದ ಅವಶೇಷಗಳು ಪತ್ತೆಯಾಗಿದೆ.

    ಕೆಲ ದಿನಗಳ ಹಿಂದೆಯಷ್ಟೆ ಮಗುವಿನ ಮೇಲೆ ಮತ್ತು ವೃದ್ಧೆಯ ಮೇಲೆ ಚಿರತೆ ದಾಳಿ ಮಾಡಿತ್ತು. ಅದೃಷ್ಟವಶಾತ್ ಅವರು ಬದುಕುಳಿದಿದ್ದರು. ಈ ಘಟನೆಗಳು ಮಾಸುವ ಮುನ್ನವೆ ಈಗ ಯುವಕನನ್ನೆ ಬಲಿಪಡೆದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ. ನರಭಕ್ಷಕ ಚಿರತೆಯನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

  • 20ಕ್ಕೂ ಹೆಚ್ಚು ಜಾನುವಾರು ಕೊಂದಿದ್ದ ವ್ಯಾಘ್ರ ಸೆರೆ- ನಿಟ್ಟುಸಿರು ಬಿಟ್ಟ ಕಾಡಂಚಿನ ಜನ

    20ಕ್ಕೂ ಹೆಚ್ಚು ಜಾನುವಾರು ಕೊಂದಿದ್ದ ವ್ಯಾಘ್ರ ಸೆರೆ- ನಿಟ್ಟುಸಿರು ಬಿಟ್ಟ ಕಾಡಂಚಿನ ಜನ

    ಚಾಮರಾಜನಗರ: ಕಾಡಂಚಿನ ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದ್ದಾರೆ.

    ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ, ವಡ್ಡಗೆರೆ, ಚಿರಕನಹಳ್ಳಿ ಭಾಗದಲ್ಲಿ ಹೆಚ್ಚಾಗಿದ್ದ ಹುಲಿ ಭೀತಿ ಕಾಡುತ್ತಿತ್ತು. ಹುಲಿ 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿತ್ತು. ಕಳೆದ ಒಂದು ವಾರದಿಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಸಚಿವ ಆನಂದ್ ಸಿಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರಿಗೆ ಕಂಟಕವಾಗಿರುವ ಹುಲಿ ಸೆರೆ ಹಿಡಿಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮೊನ್ನೆಯಷ್ಟೆ ಅರಣ್ಯಾಧಿಕಾರಿಗಳಿಗೆ ಹುಲಿ ಸೆರೆಹಿಡಿಯಲು ಹಿರಿಯ ಅಧಿಕಾರಿಗಳಿಂದ ಅನುಮತಿ ಕೂಡ ಸಿಕ್ಕಿತ್ತು.

    ಬಂಡೀಪುರದ ಅರಣ್ಯಾಧಿಕಾರಿಗಳು ಆನೆಗಳನ್ನು ಬಳಸಿ ಕೂಂಬಿಂಗ್ ನಡೆಸುವ ವೇಳೆ ಕಣ್ಣಿಗೆ ಬಿದ್ದ ಹುಲಿಗೆ ಅರವಳಿಕೆ ಇಂಜೆಕ್ಟ್ ಮಾಡಿ ಹುಲಿಯ ಪ್ರಜ್ಞೆ ತಪ್ಪಿಸಿ ಸೆರೆ ಹಿಡಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆ ಹಿಡಿದಿರುವುದರಿಂದ ಕಾಡಂಚಿನ ಗ್ರಾಮಗಳ ಜನ ನಿಟ್ಟುಸಿರು ಬಿಟ್ಟಿದ್ದಾರೆ.

    ಹುಲಿ ಸೆರೆಯಿಂದ ಈ ಭಾಗದ ಜನರು ನಿರಾಳರಾಗಿದ್ದಾರೆ. ಹುಲಿಯನ್ನು ಮೈಸೂರಿಗೆ ಸ್ಥಳಾಂತರಿಸುವ ಕುರಿತು ಅಧಿಕಾರಿಗಳು ತೀರ್ಮಾನ ಕೈಗೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಚೌಡಹಳ್ಳಿ ಗ್ರಾಮದಲ್ಲಿ ಇಬ್ಬರನ್ನು ಕೊಂದಿದ್ದ ಹುಲಿಯನ್ನೂ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ, ಮೈಸೂರಿನ ಕೂರ್ಗಳ್ಳಿಯ ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿತ್ತು.

  • ಗ್ರಾಮದ ಬಳಿ 12 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ- ರಕ್ಷಣೆ ವಿಡಿಯೋ ವೈರಲ್

    ಗ್ರಾಮದ ಬಳಿ 12 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ- ರಕ್ಷಣೆ ವಿಡಿಯೋ ವೈರಲ್

    ಗಾಂಧಿನಗರ: ಜನವಸತಿ ಪ್ರದೇಶಕ್ಕೆ ಧಾವಿಸಿದ್ದ 12 ಅಡಿ ಉದ್ದದ ಮೊಸಳೆಯನ್ನು ರಕ್ಷಿಸಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಗುಜರಾತ್‍ನ ವಡೋದರಾ ಬಳಿಯ ರಾವಲ್ ಗ್ರಾಮದ ಬಳಿ ಮೊಸಳೆ ಪ್ರತ್ಯಕ್ಷವಾಗಿದ್ದು, ವನ್ಯಜೀವಿ ಸಂರಕ್ಷಕರು ರಕ್ಷಿಸಿ ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯು ಸುಮಾರು 5-6 ಗಂಟೆಗಳ ಕಾಲ ನಡೆದಿದ್ದು, ಕಡೆಗೂ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಬೃಹತ್ ಮೊಸಳೆಯು ರಾವಲ್ ಗ್ರಾಮದ ಬಳಿ ಇರುವ ನರ್ಮದಾ ನದಿ ಕ್ಯಾನಲ್‍ನ ಸೋಲಾರ್ ಪ್ಲಾಂಟ್‍ನಿಂದ ಬಂದಿದ್ದು, ಗ್ರಾಮಸ್ಥರು ಈ ನೀರನ್ನು ಕೃಷಿಗಾಗಿ ಬಳಸುತ್ತಾರೆ.

    ನರ್ಮದಾ ಕ್ಯಾನಲ್ ಸೋಲಾರ್ ಪ್ಲಾಂಟ್‍ನ ಎಂಜಿನಿಯರ್ ಬೆಳಗ್ಗೆ 10.30ಕ್ಕೆ ಕರೆ ಮಾಡಿ ರಾವಲ್ ಗ್ರಾಮದ ಬಳಿ 12 ಅಡಿ ಮೊಸಳೆ ಪ್ರತ್ಯಕ್ಷವಾಗಿರುವುದನ್ನು ತಿಳಿಸಿದರು. ತಕ್ಷಣವೇ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಪ್ರಾರಂಭಿಸಿದೆವು. ಮೊಸಳೆಯನ್ನು ರಕ್ಷಿಸಲು ಐದರಿಂದ ಆರು ತಾಸು ಸಮಯ ಹಿಡಿಯಿತು ಎಂದು ವನ್ಯ ಜೀವಿ ಸಂರಕ್ಷಕ ಹೇಮಂತ್ ವಧ್ವಾನ ತಿಳಿಸಿದ್ದಾರೆ.

    ಬೃಹತ್ ಮೊಸಳೆ ಕಾಣುತ್ತಿದ್ದಂತೆ ಗ್ರಾಮಸ್ಥರು ಭಯಭೀತರಾಗಿದ್ದು, ಕೂಗಾಡಲು ಪ್ರಾರಂಭಿಸಿದ್ದಾರೆ. ನಂತರ ವನ್ಯ ಜೀವಿ ಸಂರಕ್ಷಣಾ ಕೇಂದ್ರಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಆಗಮಿಸಿ ಮೊಸಳೆಯನ್ನು ಹಿಡಿದಿದ್ದಾರೆ. ಐದಾರು ಗಂಟೆಗಳ ಕಾಲ ಹರ ಸಾಹಸ ಪಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ರಕ್ಷಿಸಿದ ಮೊಸಳೆಯನ್ನು ಹಲವು ಮೊಸಳೆಗಳಿರುವ ಕೆರೆಗೆ ಬಿಡಲಾಗಿದೆ. ಈ ರೀತಿ ನಡೆಯುತ್ತಿರುವ ಮೂರನೇ ಘಟನೆ ಇದಾಗಿದೆ. ಇದೇ ಸ್ಥಳದಲ್ಲಿ ಕಳೆದ ವರ್ಷ ಇಂತಹದ್ದೇ ಘಟನೆ ನಡೆದಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

  • ಸಕ್ಕರೆ ನಾಡಲ್ಲಿ ಕಾಡಾನೆಗಳ ಅಬ್ಬರ – ತೈಲೂರು ಕೆರೆಯಲ್ಲಿ ಬೀಡುಬಿಟ್ಟ ಗಜ ಪಡೆ

    ಸಕ್ಕರೆ ನಾಡಲ್ಲಿ ಕಾಡಾನೆಗಳ ಅಬ್ಬರ – ತೈಲೂರು ಕೆರೆಯಲ್ಲಿ ಬೀಡುಬಿಟ್ಟ ಗಜ ಪಡೆ

    ಮಂಡ್ಯ: ಸಕ್ಕರೆ ನಾಡಲ್ಲಿ ಕಾಡಾನೆಗಳ ಅಬ್ಬರ ಶುರವಾಗಿದ್ದು, ಸುಮಾರು ಆರು ಆನೆಗಳು ಕಾಡಿನಿಂದ ನಾಡಿಗೆ ಬಂದು ತೈಲೂರು ಕೆರೆಯಲ್ಲಿ ಬೀಡು ಬಿಟ್ಟಿವೆ.

    ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ಕೆರೆಯಲ್ಲಿ ಆನೆಗಡು ಬೀಡುಬಿಟ್ಟು, ನೀರಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿವೆ. ಎರಡು ಮರಿಯಾನೆ ಹಾಗೂ ನಾಲ್ಕು ದೊಡ್ಡ ಆನೆಗಳು ಕೆರೆಯ ನೀರಿನಲ್ಲಿ ಓಡಾಡುತ್ತಿವೆ. ಆನೆಗಳು ಎರಡು ದಿನಗಳ ಹಿಂದೆ ಮದ್ದೂರಿನ ಬ್ಯಾಡರಹಳ್ಳಿ ಮತ್ತು ಚಂದಳ್ಳಿಯಲ್ಲಿ ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡಿದ್ದವು. ಇದೀಗ ಆನೆಗಳು ಕೆರೆಯಲ್ಲಿ ಬೀಡುಬಿಟ್ಟಿವೆ. ಮುತ್ತತ್ತಿ ಅರಣ್ಯ ಪ್ರದೇಶದಿಂದ ಆನೆಗಳು ಬಂದಿರಬಹುದು ಎಂದು ಹೇಳಲಾಗುತ್ತಿದೆ.

    ಆನೆಗಳು ಕೆರೆಯಲ್ಲಿರುವ ವಿಚಾರ ತಿಳಿದು ಜನರು ಕುತೂಹಲದಿಂದ ಕೆರೆಯ ಬಳಿ ಜಮಾಯಿಸಿದ್ದಾರೆ. ಆನೆಗಳಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ.

  • ಮರ ಕಡಿಯುವಾಗ ಕೈಕೊಟ್ಟ ಮಿಷನ್- ಆಂಬುಲೆನ್ಸ್ ನಲ್ಲೇ 1 ಗಂಟೆ ನರಳಾಡಿದ ಗರ್ಭಿಣಿ

    ಮರ ಕಡಿಯುವಾಗ ಕೈಕೊಟ್ಟ ಮಿಷನ್- ಆಂಬುಲೆನ್ಸ್ ನಲ್ಲೇ 1 ಗಂಟೆ ನರಳಾಡಿದ ಗರ್ಭಿಣಿ

    ಬೀದರ್: ಮರ ಕಡಿಯುವಾಗ ಮಿಷನ್ ಕೈಕೊಟ್ಟಿದ್ದರಿಂದ ಸುಮಾರು 1 ಗಂಟೆಗಳ ಕಾಲ ಗರ್ಭಿಣಿ ಆಂಬುಲೆನ್ಸ್ ನಲ್ಲೇ ನರಳಾಟ ಅನುಭವಿಸಿರುವ ಘಟನೆ ಬೀದರ್ ತಾಲೂಕಿನ ಕೌಠೌ ಗ್ರಾಮದ ಬಳಿ ನಡೆದಿದೆ.

    ಕೌಠೌ ಗ್ರಾಮದ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಂದು ಗಂಟೆಗಳ ಕಾಲ ಆಂಬುಲೇನ್ಸ್ ನಲ್ಲಿ ಗರ್ಭಿಣಿಯ ನರಳಾಟ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.

    ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯುವ ಮುನ್ನ ಮುನ್ನೆಚ್ಚರಿಕೆಯಾಗಿ ಜೆಸಿಬಿ ತರದೆ ಮರ ಕಡಿಯಲು ಹೋಗಿದ್ದಾರೆ. ಆದರೆ ಮರ ಕಡಿಯುತ್ತಿದ್ದಂತೆ ಮಿಷನ್ ಕೈಕೊಟ್ಟಿದೆ. ಇದರಿಂದ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಅದೇ ಮಾರ್ಗವಾಗಿ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲಿ ಹೆರಿಗೆಗಾಗಿ ಬೀದರ್ ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದರು. ಆದರೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅರ್ಧ ಕಿಲೋಮೀಟರ್ ದೂರದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ಗರ್ಭಿಣಿ ನರಳಾಟ ಅನುಭವಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಗರ್ಭಿಣಿಯ ನರಳಾಟ ನೋಡಿ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ಕೈ ಜೋಡಿಸಿ ರಸ್ತೆಯಲ್ಲಿದ್ದ ಮರವನ್ನು ಪಕಕ್ಕೆ ಸರಿಸಿ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾನವೀಯತೆ ಮರೆದಿದ್ದಾರೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು  ಜೆಸಿಬಿ ತರಿಸಿ ರಸ್ತೆ ಕ್ಲೀನ್ ಮಾಡಿದ್ದಾರೆ.