Tag: ಅರಣ್ಯ ಇಲಾಖೆ ಸಚಿವ

  • ತಮ್ಮನಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ: ಸತೀಶ್ ಜಾರಕಿಹೊಳಿ

    ತಮ್ಮನಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ: ಸತೀಶ್ ಜಾರಕಿಹೊಳಿ

    – ರಮೇಶ್ ಜಾರಕಿಹೊಳಿ ಲೋಕಸಭೆ ಟಿಕೆಟ್ ಕೇಳಿದ್ರೆ ನಾಯಕರು ಕೊಡ್ತಾರೆ

    ಧಾರವಾಡ: ನಾನೇನು ಸಹೋದರ ರಮೇಶ್ ಜಾರಕಿಹೊಳಿ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ. ಮೈತ್ರಿ ಸರ್ಕಾರ, ಪಕ್ಷದ ನಾಯಕರೇ ನನಗೆ ಮಂತ್ರಿಗಿರಿ ನೀಡಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್‍ನ ಅತೃಪ್ತ ಶಾಸಕರು ನಮ್ಮೊಂದಿಗೆ ಇದ್ದಾರೆ. ನಮ್ಮೊಂದಿಗೆಯೇ ಇರುತ್ತಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಲೋಕಸಭಾ ಟಿಕೆಟ್ ಕೇಳಿದರೆ ಪಕ್ಷದ ನಾಯಕರು ಕೊಡುತ್ತಾರೆ. ಅದೇನು ದೊಡ್ಡ ವಿಷಯ ಅಲ್ಲವೇ ಅಲ್ಲ. ಶಾಸಕರ ಸಮಸ್ಯೆಯನ್ನು ಪಕ್ಷದ ವರಿಷ್ಠರೇ ಬಗೆಹರಿಸುತ್ತಾರೆ ಎಂದು ಸಹೋದರ ರಮೇಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದರು.

    ಪುಲ್ವಾಮಾದಲ್ಲಿ ಉಗ್ರರ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಇಡೀ ದೇಶವೇ ದಾಳಿಯನ್ನು ಖಂಡಿಸುತ್ತಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

    ಬೆಳಗಾವಿ ಜಿಲ್ಲೆಯ ಯುವತಿ ದೇಶದ್ರೋಹದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ. ದೇಶದ್ರೋಹ ನಡೆಯಿಂದಾಗಿ ಕೆಲವರು ಯುವತಿಯ ಮನೆಯ ಮೇಲೆ ಕಲ್ಲು ತೂರಿ, ಹಾನಿ ಮಾಡಿದ್ದಾರೆ. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು, ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಇದನ್ನು ಓದಿ: ಪಾಕಿಸ್ತಾನಕ್ಕೆ ಜೈ ಎಂದ ಶಿಕ್ಷಕಿ ಪೊಲೀಸರ ವಶಕ್ಕೆ- ಮನೆಗೆ ಬೆಂಕಿ

    ಅರಣ್ಯ ಇಲಾಖೆ ಸಿಬ್ಬಂದಿ ವೇತನ ತಾರತಮ್ಯವಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ತಾರತಮ್ಯವನ್ನು ಸರಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಂಕ್ರಾಂತಿಯ `ಕ್ರಾಂತಿ’ ಆದ್ರೆ ನೋಡೋಣ: ಸತೀಶ್ ಜಾರಕಿಹೊಳಿ

    ಸಂಕ್ರಾಂತಿಯ `ಕ್ರಾಂತಿ’ ಆದ್ರೆ ನೋಡೋಣ: ಸತೀಶ್ ಜಾರಕಿಹೊಳಿ

    ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಂಕ್ರಾಂತಿಯ ನಂತರ ಕ್ರಾಂತಿ ನಡೆಯುತ್ತದೆ ಎಂದು ಹೇಳಲಾಗುತ್ತಿದ್ದು, ಕ್ರಾಂತಿ ಆದರೆ ನೋಡೋಣ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಕ್ರಾಂತಿ ಕ್ರಾಂತಿ ಆದರೆ ನಾವು ಇಲ್ಲೇ ಇರುತ್ತೇವೆ. ದೇಶ, ರಾಜ್ಯ ಹಾಗೂ ನಮ್ಮ ಸರ್ಕಾರ ಇಲ್ಲೇ ಇರುತ್ತದೆ. ಅಲ್ಲಿಯವರೆಗೂ ಕಾದು ನೋಡೋಣ. ಆದರೆ ಆಪರೇಷನ್ ಕಮಲದ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಾಮಾನ್ಯ ಎಂದರು.

    ರಮೇಶ್ ಜಾರಕಿಹೊಳಿ ಅವರು ದೆಹಲಿಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ನನ್ನ ಸಂಪರ್ಕಕ್ಕೆ ಇದೂವರೆಗೂ ರಮೇಶ್ ಜಾರಕಿಹೊಳಿ ಅವರು ಸಿಕ್ಕಿಲ್ಲ. ಆದರೆ ಅವರು ಪಕ್ಷದಲ್ಲೇ ಇರುತ್ತಾರೆ. ದೆಹಲಿಯಿಂದ ಅವರು ವಾಪಸ್ ಆದ ಬಳಿಕ ಕುಳಿತು ಚರ್ಚೆ ಮಾಡುತ್ತೇವೆ. ಸಿದ್ದರಾಮಯ್ಯ ಅವರು ಕೂಡ ಸಂಪರ್ಕ ಮಾಡಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ರಮೇಶ್ ಅವರು ಯಾವಾಗ ಬರುತ್ತಾರೆ ನೋಡಿ ಸಂಪರ್ಕ ಮಾಡುತ್ತೇನೆ ಎಂದರು.

    ವಿರೋಧಿ ಪಕ್ಷಗಳ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ಸಮ್ಮಿಶ್ರ ರಚನೆಯಾದ ಸಮಯದಿಂದಲೂ ಅವರು ಇದನ್ನೇ ಹೇಳುತ್ತಿದ್ದಾರೆ. ಆದರೆ ಏನು ನಡೆದಿಲ್ಲ. ಇದು ಊಹಾಪೋಹ ಅಷ್ಟೇ, ನಮ್ಮ ಸರ್ಕಾರ ಸುಭದ್ರವಾಗಿದೆ. ಸಮ್ಮಿಶ್ರ ಸರ್ಕಾರ ರಚನೆ ವೇಳೆ ರಾಜಕೀಯ ತಂತ್ರಗಾರಿಕೆ ನಡೆಯುತ್ತದೆ ಆದರೆ ಅದು ಯಶಸ್ವಿಯಾಗುವುದಿಲ್ಲ ಎಂದು ಟೀಕಿಸಿದರು.

    ಇದೇ ವೇಳೆ ಅರಣ್ಯ ಇಲಾಖೆ ಬಗ್ಗೆ ಮಾಹಿತಿ ನೀಡಿದ ಸಚಿವರು, ನಮ್ಮ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ, ಅರಣ್ಯ ಬೆಳೆಸುವುದಕ್ಕೆ ಹೆಚ್ಚು ಪ್ರೋತ್ಸಾಹ ನೀಡಲಾವುದು. ಆದರೆ ಅದಕ್ಕೆ ಕಾಲಾವಕಾಶ ಬೇಕು. ಕಾನೂನು ಬದ್ಧವಾಗಿ ಹೆಚ್ಚು ಹಕ್ಕು ಪತ್ರಗಳನ್ನ ನೀಡಿದ್ದು, ಈಡೀ ರಾಜ್ಯಾದ್ಯಂತ ಹಕ್ಕು ಪತ್ರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv