Tag: ಅರಣ್ಯ ರಕ್ಷಕ

  • ಕ್ಷುಲ್ಲಕ ಕಾರಣಕ್ಕೆ ಜಗಳ ಅರಣ್ಯ ರಕ್ಷಕನ ಕೈ ತುಂಡು

    ಕ್ಷುಲ್ಲಕ ಕಾರಣಕ್ಕೆ ಜಗಳ ಅರಣ್ಯ ರಕ್ಷಕನ ಕೈ ತುಂಡು

    ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯ ಇಲಾಖೆಯ ರಕ್ಷಕನ ಕೈಯನ್ನು ಕತ್ತರಿಸಿದ ಘಟನೆ ಮಡಿಕೇರಿ ತಾಲೂಕಿನ ಕಾಲೂರು ಸಮೀಪದ ಕಾನೆಕಂಡಿ ಬಳಿ ನಡೆದಿದೆ.

    ಗಾಳಿಬೀಡು ಅರಣ್ಯ ವಲಯದ ಗಾರ್ಡ್ ಆಗಿರುವ ಸಂಜೀವ(ಅಣ್ಣಪ್ಪ ರೈ-59) ಗಾಯಾಳು ಆಗಿದ್ದು, ಕೈ ಕತ್ತರಿಸಿದ ಆರೋಪಿ ತಿಮ್ಮಯ್ಯ(ಸಣ್ಣಕ್ಕ-52) ಕೃತ್ಯ ನಡೆಸಿ ಅರಣ್ಯದಲ್ಲಿ ತಲೆಮರೆಸಿ ಕೊಂಡಿದ್ದಾನೆ. ಗಾಯಾಳು ಸಂಜೀವ ಹಾಗೂ ಆರೋಪಿ ತಿಮ್ಮಯ್ಯ ಇಬ್ಬರು ಒಂದೇ ಊರಿನವರಾಗಿದ್ದಾರೆ. ಇದನ್ನೂ ಓದಿ:  ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ 

    CRIME 2

    ತಿಮ್ಮಯ್ಯ ಮನೆ ಪಕ್ಕದಲ್ಲಿ ಕಸ ವಿಲೇವಾರಿ ಘಟಕ ಮಾಡಲು ಉದ್ದೇಶಿಸಲಾಗಿದೆ. ಇದೇ ವಿಚಾರ ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕತ್ತಿಯಿಂದ ತಿಮ್ಮಯ್ಯ ಸಂಜೀವನ ಎಡಗೈಗೆ ಬೀಸಿದ್ದಾನೆ. ಪರಿಣಾಮ ಎಡಗೈನ ಹಸ್ತದ ಪೂರ್ಣ ಭಾಗ ತುಂಡಾಗಿ ನೆಲಕ್ಕೆ ಬಿದ್ದಿದೆ.

    ತುಂಡಾಗಿರುವ ಹಸ್ತದ ಭಾಗವನ್ನು ಜೋಡಿಸಲು ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಈ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಸಂಜೀವನನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಯಾರು ದೀಪ ಬೆಳಗಿಸಲು ಕೆಲಸ ಮಾಡುತ್ತಿಲ್ಲ: ಟ್ವಿಟ್ಟರ್ ಸಿಇಒ

  • ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು

    ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು

    -ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ

    ಕಾರವಾರ: ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ರಸ್ತೆಯ ಕುಳಿಬಿಡು ಬಳಿ ನಡೆದಿದೆ.

    ಅರಣ್ಯ ರಕ್ಷಕ ಶಶಿಧರ್ (58) ಮೃತ ದುರ್ದೈವಿ. ಇಂದು ಕರ್ತವ್ಯದ ನಿಮಿತ್ತ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬೈಕ್ ಮೇಲೆ ಮರ ಬಿದ್ದು ಮರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೃಹದಾಕಾರದ ಮರ ಬಿದ್ದಿದ್ದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು, ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದ ಐದು ತಾಲೂಕುಗಳ ಶಾಲಾ ಕಾಲೇಜಿಗೆ ಇಂದು ರಜೆಯನ್ನು ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.

    ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಶುಕ್ರವಾರದಿಂದಲೂ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆಯಂತೆ ರಜೆ ಘೋಷಣೆ ಮಾಡಲಾಗಿದೆ.

  • ಗುಂಡ್ಯದಲ್ಲಿ ಮರಗಳ್ಳರಿಂದ ಅರಣ್ಯ ರಕ್ಷಕನ ಮೇಲೆ ಗಂಭೀರ ಹಲ್ಲೆ

    ಗುಂಡ್ಯದಲ್ಲಿ ಮರಗಳ್ಳರಿಂದ ಅರಣ್ಯ ರಕ್ಷಕನ ಮೇಲೆ ಗಂಭೀರ ಹಲ್ಲೆ

    ಮಂಗಳೂರು: ಅಕ್ರಮ ಮರ ಸಾಗಾಟ ನಡೆಸುತ್ತಿದ್ದ ಲಾರಿಯೊಂದನ್ನು ನಿಲ್ಲಿಸಿದ ಅರಣ್ಯ ರಕ್ಷಕ ಸಿಬ್ಬಂದಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಗುಂಡ್ಯದಲ್ಲಿ ನಡೆದಿದೆ.

    ರಾಜೇಶ್ ಗಾಯಗೊಂಡ ಅರಣ್ಯ ರಕ್ಷಕ ಸಿಬ್ಬಂದಿಯಾಗಿದ್ದಾರೆ. ಇವರು ಎಂದಿನಂತೆ ಬುಧವಾರ ಶಿರಾಡಿ ಘಾಟ್ ಬಳಿಯ ಗುಂಡ್ಯದ ಅರಣ್ಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ತಡರಾತ್ರಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಶಂಕೆ ಮೇರೆಗೆ ಲಾರಿಯೊಂದನ್ನು ತಡೆದು ತಪಾಸಣೆ ನಡೆಸಿದ್ದಾರೆ. ಲಾರಿಯಲ್ಲಿ ಮರದ ದಿಮ್ಮಿಗಳು ಕಂಡುಬಂದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದವರಿಗೆ ಮರದ ದಾಖಲೆಗಳನ್ನು ತೋರಿಸುವಂತೆ ಹೇಳಿದ್ದಾರೆ.

    ಈ ವೇಳೆ ಲಾರಿಯಲ್ಲಿದ್ದ ಮೂವರು ರಾಜೇಶ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಸಮವಸ್ತ್ರವನ್ನು ಸಹ ಹರಿದು ಹಾಕಿದ್ದಾರೆ. ಹಲ್ಲೆ ಬಳಿಕ ಮರಗಳ್ಳರು ಲಾರಿಯೊಂದಿಗೆ ಹಾಸನ ಕಡೆಗೆ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ರಾಜೇಶ್‍ನನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮರಗಳ್ಳರಿಂದ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರಣ್ಯ ರಕ್ಷಕ ಸಿಬ್ಬಂದಿಯನ್ನು ಇದುವರೆಗೂ ಯಾವುದೇ ಅರಣ್ಯಾಧಿಕಾರಿಗಳು ಭೇಟಿಯಾಗಿಲ್ಲ. ಇದರಿಂದಾಗಿ ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.