Tag: ಅರವಿಂದ್ ಕುಪ್ಳಿಕರ್

  • ಅರವಿಂದ್ ಕುಪ್ಳಿಕರ್- ಶರಣ್ ಚಿತ್ರಕ್ಕೆ ಯೋಗಿ ದ್ವಾರಕೀಶ್ ನಿರ್ಮಾಪಕ

    ಅರವಿಂದ್ ಕುಪ್ಳಿಕರ್- ಶರಣ್ ಚಿತ್ರಕ್ಕೆ ಯೋಗಿ ದ್ವಾರಕೀಶ್ ನಿರ್ಮಾಪಕ

    ನ್ನಡದ ಪ್ರತಿಭಾವಂತ ನಿರ್ದೇಶಕ ಅರವಿಂದ್ ಕುಪ್ಳಿಕರ್ (Arvind Kuplikar) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರಕ್ಕೆ ಯೋಗಿ ದ್ವಾರಕೀಶ್ (Yogi Dwarkeesh) ಹಣ ಹೂಡುತ್ತಿದ್ದಾರೆ. ಶರಣ್ (Sharan) ಹಾಗೂ ಅಮೃತಾ ಅಯ್ಯಂಗರ್ (Amruta Iyengar)ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಹೆಸರಾಂತ ತಾರಾಗಣವೇ ಚಿತ್ರದಲ್ಲಿದೆ. ಅಚ್ಯುತ್ ಕುಮಾರ್, ರಂಗಾಯಣ ರಘು, ರಾಜು ತಾಳಿಕೋಟೆ ಸೇರಿದಂತೆ ಹಲವು ಕಲಾವಿದರು ಪಾತ್ರ ಮಾಡಲಿದ್ದಾರೆ.

    ಶರಣ್ ಹುಟ್ಟುಹಬ್ಬದ ದಿನದಂದು ಸಿನಿಮಾ ಘೋಷಣೆ ಮಾಡಿದ್ದ ನಿರ್ದೇಶಕ ಅರವಿಂದ್ ಕುಪ್ಳಿಕರ್ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುವೆ ಎಂದಿದ್ದರು. ಇದೀಗ ಸಿನಿಮಾದ ಶೂಟಿಂಗ್ ಪ್ರಾರಂಭಿಸುತ್ತಿದ್ದಾರೆ. ಬೆಂಗಳೂರು, ಬಾಗಲಕೋಟೆ ಸೇರಿದಂತೆ ಹಲವು ಕಡೆ ಚಿತ್ರೀಕರಣ ನಡೆಯಲಿದೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಯೋಗಿ ದ್ವಾರಕೀಶ್ ನಿರ್ಮಾಪಕರು. ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.

    ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.

  • ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

    ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

    ನ್ನಡದ ಹೆಸರಾಂತ ನಟ ಶರಣ್ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಆಯ್ಕೆಯಾಗಿದ್ದಾರೆ. ಇದು ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿ ಬರಲಿರುವ ಚಿತ್ರವಾಗಿದ್ದು, ಈ ಸಿನಿಮಾದಲ್ಲಿ ಅವರು ಪತ್ರಕರ್ತೆಯ ಪಾತ್ರ ಮಾಡಲಿದ್ದಾರಂತೆ. ಈ ಪಾತ್ರಕ್ಕಾಗಿ ಅವರು ಆ ಶೈಲಿಯ ಭಾಷೆಯನ್ನು ಕಲಿಯಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೊಂದು ವಿಭಿನ್ನ ಪಾತ್ರ ಹಾಗಾಗಿ ಈ ಸಿನಿಮಾವನ್ನು ಒಪ್ಪಿಕೊಂಡೆ ಎನ್ನುವುದು ಅಮೃತಾ ಮಾತು.

    ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

    ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

    ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉತ್ತರ ಕರ್ನಾಟಕ ಶೈಲಿಯ ಕಥೆಯಲ್ಲಿ ನಟ ಶರಣ್ ಎಲೆಕ್ಟ್ರಿಷಿಯನ್

    ಉತ್ತರ ಕರ್ನಾಟಕ ಶೈಲಿಯ ಕಥೆಯಲ್ಲಿ ನಟ ಶರಣ್ ಎಲೆಕ್ಟ್ರಿಷಿಯನ್

    ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇಂದು ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ.

    ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

    ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ

    ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ

    ನ್ನಡ ಸಿನಿಮಾ ರಂಗದ ಹೆಸರಾಂತ ನಟ ಶರಣ್, ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ‘ಪುಕ್ಸಟ್ಟೆ ಲೈಫ್’ ಚಿತ್ರ ಖ್ಯಾತಿಯ ನಿರ್ದೇಶಕ ಅರವಿಂದ್ ಕುಪ್ಳಿಕರ್ ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು.

    ತಮ್ಮ ಹೊಸ ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿರುವ ಅರವಿಂದ್, ‘ಒಂದು ಕತೆಯ ಜೊತೆ ಒಂದು, ಒಂದೂವರೆ ವರ್ಷದಿಂದ ನಮ್ಮ ಪಯಣ. ಸಾಕಷ್ಟು ಅಡೆ ತಡೆಗಳು. ನಲಿವು ನೋವುಗಳು ಏನೇ ಇದ್ದರೂ ನಮಗೆ ಧೈರ್ಯ ತುಂಬಿ ಜೊತೆ ನಿಂತವರು ಶರಣ್ ಮತ್ತು ತರುಣ್. ನಮ್ಮ ತಂಡದ ಮುಂದಿನ ಚಿತ್ರ ನಾಯಕ ನಟರಾದ ಶರಣ್ ಅವರ ಜೊತೆ. ಅದೇ ನಂಬಿಕೆ, ಭಯ, ದುಗುಡದಿಂದಲೇ ನಿಮ್ಮನ್ನು ತಲುಪುವ ಪ್ರಯತ್ನ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

    ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಬಿ.ಬಸವರಾಜ ಮತ್ತು ಶ್ರೀಧರ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.

    ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k