Tag: ಅರವಿಂದ ಬೆಲ್ಲದ

  • ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

    ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

    ಧಾರವಾಡ: (Dharwad) ಅಪಘಾತದಲ್ಲಿ ಗಾಯಗೊಂಡಿದ್ದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ (Arvind Bellad) ಅವರ ಚಿಕ್ಕಪ್ಪ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಸಹೋದರರೂ ಆಗಿದ್ದ ಶಿವಣ್ಣ ಬೆಲ್ಲದ ಅವರು ಅಪಘಾತದಲ್ಲಿ ಗಾಯಗೊಂಡಿದ್ದರು‌‌. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ!

    ಧಾರವಾಡದ ಎಸ್‌ಪಿ ಕಚೇರಿ ಬಳಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಬೆಲ್ಲದ ಅವರು ತೀವ್ರವಾಗಿ ಗಾಯಗೊಂಡಿದ್ದರು. ನಿನ್ನೆ ರಾತ್ರಿಯೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಶಿವಣ್ಣ ಬೆಲ್ಲದ ಅವರು ನಿಧನರಾಗಿದ್ದಾರೆ.

    ಶಿವಣ್ಣ ಬೆಲ್ಲದ ಅವರು ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಹೋದರರಾದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ವಿರುದ್ಧ ಇವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಇದನ್ನೂ ಓದಿ: ಮತ್ತದೇ ಎಡವಟ್ಟು – ಗುಜಿರಿ BMTC ಬಸ್‍ಗಳಿಗೆ CCTV ಭಾಗ್ಯ

    Live Tv
    [brid partner=56869869 player=32851 video=960834 autoplay=true]

  • ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

    ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

    ಧಾರವಾಡ: ನಾನು ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಕೆಲ ಮಾಧ್ಯಮಗಳಲ್ಲಿ ಬಂದಿತ್ತು. ನಾನು ಅದನ್ನ ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಮತ್ತೆ-ಮತ್ತೆ ಮಾಧ್ಯಮಗಳಲ್ಲಿ ಬರುತ್ತಿದೆ. ಅದಕ್ಕೆ ನಾನು ಸ್ಪಷ್ಟನೆ ಕೊಡುತ್ತಿದ್ದೇನೆ. ನಾನು ಹಿಂದುತ್ವವಾದಿ. ನನಗೆ ಬಿಜೆಪಿ ಪಕ್ಷ ಗುರುತಿಸಿ ಟಿಕೆಟ್ ಕೊಟ್ಟು ಗೆಲ್ಲಿಸಿದೆ. ನನಗೆ ಬೇಡದವರು ಈ ರೀತಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್

    ನಮ್ಮ ಭಾಗದ ಜನರಿಗೆ ಹಾಗೂ ಕ್ಷೇತ್ರದ ಜನರಿಗೆ ಸ್ಪಷ್ಟಪಡಿಸುತ್ತೇನೆ. ಪಕ್ಷದ ವರಿಷ್ಠರಿಗೆ ಇದನ್ನ ಗಮನಕ್ಕೆ ತಂದಿದ್ದೇನೆ. ನನ್ನ ಬದ್ಧತೆ ಬಗ್ಗೆ ಅವರು ಕೂಡಾ ಮಾತನಾಡಿದ್ದಾರೆ. ನನ್ನ ಅಭಿವೃದ್ಧಿ ನೋಡಿ ಕೆಲವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಎರಡು ಬಾರಿ ನಾನು ಶಾಸಕನಾಗಿದ್ದೇನೆ. ಈ ಬಾರಿ ಹೆಚ್ಚಿನ ಮತದಿಂದ ಗೆದ್ದಿದ್ದೇನೆ ಎಂದ ಅವರು, ನನ್ನ ಏಳಿಗೆ ಸಹಿಸಲಾರದೇ ಈ ರೀತಿ ಮಾಡಿದ್ದಾರೆ. ಬೇರೆ ಪಕ್ಷದಿಂದಲೇ ನಮ್ಮ ಪಕ್ಷಕ್ಕೆ ಕೆಲವರು ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಯಾರೂ ಹೋಗುತ್ತಿಲ್ಲ. ತಿಂಗಳ ಕೊನೆಯಲ್ಲಿ ಯಾರೆಲ್ಲ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ತಿಳಿಯಲಿದೆ ಎಂದರು.

    ಸಿಎಂ ಬೊಮ್ಮಾಯಿ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ವರಿಷ್ಠರು ಕೂಡಾ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾರೋ ನಾನು ಪಕ್ಷ ಬಿಟ್ಟು ಹೋಗುವ ಬಗ್ಗೆ ಪತ್ರಿಕೆಗಳಿಗೆ ಈ ರೀತಿ ಮಾಹಿತಿ ನೀಡುತ್ತಿದ್ದಾರೆ ಅಂತಾ ವರಿಷ್ಠರು ತಲೆ ಕೆಡಿಸಿಕೊಳ್ಳದಂತೆ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್

    ಸಚಿವರು ಕೈಗೆ ಸಿಗಲ್ಲ ಎಂಬ ಶಾಸಕ ರೇಣುಕಾಚಾರ್ಯರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದನ್ನ ಅವರನ್ನೇ ಕೇಳಿ. ಅದು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡುವ ವಿಚಾರ. ನಾನು ಸುಖಾಸುಮ್ಮನೆ ತಲೆ ಕೆಡಿಸಿಕೊಳ್ಳಲ್ಲ. ಸಣ್ಣ-ಸಣ್ಣ ಆರೋಪ ಬರುವುದು ಸಹಜ ಎಂದು ಸ್ಪಷ್ಟನೆ ಕೊಟ್ಟರು.

  • ಆಮಿಷ ಒಡ್ಡಿ ಮತಾಂತರ – ಹುಬ್ಬಳ್ಳಿಯಲ್ಲಿ ರಾತ್ರಿ ಪ್ರತಿಭಟನೆ

    ಆಮಿಷ ಒಡ್ಡಿ ಮತಾಂತರ – ಹುಬ್ಬಳ್ಳಿಯಲ್ಲಿ ರಾತ್ರಿ ಪ್ರತಿಭಟನೆ

    – ತಮ್ಮದೇ ಸರ್ಕಾರದ ವಿರುದ್ಧ ಶಾಸಕ ಬೆಲ್ಲದ್ ತೀವ್ರ ಅಸಮಾಧಾನ

    ಹುಬ್ಬಳ್ಳಿ: ಭೈರಿದೇವರ ಕೊಪ್ಪದ ಆಲ್ ಸಿಂಬಲ್ ಆಫ್ ಗಾಡ್ ಚರ್ಚ್‍ನಲ್ಲಿ ಬಲವಂತವಾಗಿ ಹಿಂದೂಗಳನ್ನು ಮತಾಂತರ ಮಾಡಲಾಗ್ತಿದೆ ಅಂತ ಆರೋಪಿಸಿ ಹಿಂದೂಪರ ಸಂಘಟನೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾನುವಾರ ರಾತ್ರಿ ರಸ್ತೆ ಸಂಚಾರವನ್ನ ತಡೆದು ಪ್ರತಿಭಟಿಸಿದ್ದಾರೆ.

    ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮತ್ತು ಪಾದ್ರಿಯ ನಡುವೆ ಮಾತಿನ ಚಕಮಕಿ ನಡೆದಿದೆ. ನವನಗರ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ 2 ಕೋಮಿನವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಬಳಿಕ ಪ್ರಕರಣ ದಾಖಲಿಸಿಕೊಳ್ಳದೇ ಪಾದ್ರಿಯನ್ನ ಬಿಟ್ಟು ಕಳುಹಿಸಿದರು.

    ಇದರಿಂದ ಕೆರಳಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ನವನಗರ ಠಾಣೆ ಮುಂದೆ ಜಮಾಯಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು. ಶಾಸಕ ಅರವಿಂದ ಬೆಲ್ಲದ ಸ್ಥಳಕ್ಕಾಗಮಿಸಿ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ್ ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದಾಗಲೂ ಒಬ್ಬ ಆರೋಪಿ ಬಂಧಿಸುವಂತೆ ಹೋರಾಟ ಮಾಡುವ ಪರಿಸ್ಥಿತಿ ಬಂದಿದ್ದು ನಮ್ಮ ದೌರ್ಭಾಗ್ಯ ಅಂತ ಶಾಸಕ ಅರವಿಂದ ಬೆಲ್ಲದ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವ್ಯವಸ್ಥೆ ವಿರುದ್ಧ ಬೇಸರಗೊಂಡರು.

    ಆಗಿದ್ದೇನು?
    ಭೈರಿದೇವರಕೊಪ್ಪದ ಬಳಿಯಿರುವ ಪ್ರೇಯರ್ ಹೌಸ್ ಫಾರ್ ಆಲ್ ಪೀಪಲ್ ಪ್ರಾರ್ಥನಾ ಮಂದಿರದಲ್ಲಿ ಬೆಳಗ್ಗೆ ಸೋಮು ಅವರಾಧಿ ಎಂಬಾತ ಮತಾಂತರಕ್ಕೆ ಯತ್ನಿಸುತ್ತಿದ್ದಾನೆ ಎಂಬ ಸುದ್ದಿ ಹರಡಿತು. ಇದರಿಂದ ಕೆರಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಅಲ್ಲಿಗೆ ತೆರಳಿ ʼಓಂ ನಮಃ ಶಿವಾಯ’ ಪಠಿಸಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದೆ. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡು ಎಲ್ಲರನ್ನೂ ಠಾಣೆಗೆ ಕರೆದೊಯ್ದಿದ್ದಾರೆ.

    ಸೋಮು ಕೂಡ ತಮ್ಮ ಬೆಂಬಲಿಗರನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ತಮ್ಮವರ ಮೇಲೆ ಹಲ್ಲೆ ನಡೆದಿದೆ ಎಂದು 108ಕ್ಕೆ ಕರೆ ಮಾಡಿ ಅಲ್ಲಿಂದ ಅಂಬುಲೆನ್ಸ್‌ ಮೂಲಕ ತೆರಳಿದ್ದಾರೆ. ಈ ವೇಳೆ ಮತಾಂತರಿ ಸೋಮು ಅವರಾದಿ ಪೊಲೀಸರ ಎದುರೆ ಪರಾರಿ ಆಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ನ ಜಯತೀರ್ಥ ಕಟ್ಟಿ ಹಾಗೂ ಕಾರ್ಯಕರ್ತರು ಠಾಣೆಯೆದುರು ಸಂಜೆಯವರೆಗೆ ಪ್ರತಿಭಟನೆ ನಡೆಸಿದ್ದಾರೆ.  ಇದನ್ನೂ ಓದಿ: ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ

    ಪ್ರಕರಣ ದಾಖಲಿಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿ ಬಂಧಿಸಿಲ್ಲ ಎಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕರೆ ಕೊಟ್ಟರು. ನೂರಾರು ಜನ ಸೇರಿ ನವನಗರ ಕ್ಯಾನ್ಸರ್ ಆಸ್ಪತ್ರೆ ಎದುರು ಹು-ಧಾ ರಸ್ತಾ ರೋಖೋ ನಡೆಸಿದರು. ಈ ವೇಳೆ ಸುಮಾರು 2 ಕಿಮೀ ವರೆಗೆ ಸಂಚಾರ ಸ್ಥಗಿತಗೊಂಡಿತ್ತು.

    ಆರ್‌ಎಸ್‌ಎಸ್ ಧರ್ಮಜಾಗರಣ ಸಂಯೋಜಕ ಸುನೀಲ್ ಚಿಲ್ಲಾಳ ಮಾತನಾಡಿ, ಸೋಮು ಅವರಾದಿ ಕ್ರಿಶ್ಚಿಯನ್ ಧರ್ಮದಿಂದ ಪಾಸ್ಟರ್ ಎಂದು ನೇಮಕಗೊಂಡಿದ್ದಾನೆ. ಈತ ಈಗಾಗಲೇ ನೂರಾರು ಜನರನ್ನು ಮತಾಂತರ ಮಾಡಿದ್ದಾನೆ. ಸರ್ವಧರ್ಮ ಪ್ರಾರ್ಥನೆಗೆ ಎಂದು ಕರೆದು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ, ಹಿಂದೂ ಧರ್ಮ ಬಿಡುವಂತೆ ತೊಂದರೆ ನೀಡುತ್ತಾನೆ ಎಂದು ದೂರಿದರು.

    ಪೊಲೀಸ್ ಠಾಣೆ ವೇಳೆ ನಡೆಯುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಧಾರವಾಡ ಜಿಲ್ಲೆಯಲ್ಲೂ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಮತಾಂತರ ತಡೆ ಕಠಿಣ ಕಾನೂನು ಜಾರಿಗಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಕಾಯ್ದೆ ರೂಪುರೇಷೆ ಸಂಬಂಧಿಸಿದಂತೆ ಹಿರಿಯ ವಕೀಲರ ಸಂಪರ್ಕಿಸಿದ್ದೇವೆ. ಅದರ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಿದ್ದೇವೆ. ಈವರೆಗೆ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಮತಾಂತರ ಪ್ರಕ್ರಿಯೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ನಮ್ಮ ಕಾರ್ಯಕರ್ತರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ನೀಡಿದ್ದಾರೆ. ಸೂಕ್ತ ಕ್ರಮಗಳನ್ನು ಜರುಗಿಸಬೇಕೆಂದು ಪೊಲೀಸರ ವಿಳಂಬ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು.

    ಘಟನೆಗೆ ಸಂಬಂಧಿಸಿ ವಿಶ್ವನಾಥ ಬುದೂರ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಾರೆ. ನನಗೆ ಕ್ರೈಸ್ತ ಧರ್ಮಕ್ಕೆ ಮತಾಂತರ ಆದರೆ ಸಾಕಷ್ಟು ಸಂಪತ್ತು, ನೌಕರಿ ಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದಾರೆ. ಅವಾಚ್ಯವಾಗಿ ಬೈದು ನಿಂದಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಜಾತಿನಿಂದನೆ ಹಾಗೂ ಮತಾಂತರ ನಿರ್ಬಂಧ ಕಾನೂನು ಅಡಿ ಪ್ರಕರಣ ದಾಖಲಾಗಿದೆ.

    ಸೋಮು ಅವರಾದಿ ಹೇಳಿದ್ದೇನು?
    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಪಿ ಸೋಮು, ನಾನು ಲಿಂಗಾಯತ. ಆದರೆ ಏಸುವನ್ನು ನಂಬುತ್ತೇನೆ. ನಾವು ಯಾವುದೇ ಮತಾಂತರ ಮಾಡಲು ಮುಂದಾಗಿಲ್ಲ. ವಿಶ್ವನಾಥ ಯಾರು ಎನ್ನುವುದೇ ನನಗೆ ಗೊತ್ತಿಲ್ಲ. ನಾಳೆ ಮುಸ್ಲಿಮ್‌ ಧರ್ಮದವರು ಇಷ್ಟಪಟ್ಟರೆ ಅಲ್ಲಿಗೆ ಹೋಗಿಯೂ ಪ್ರಾರ್ಥನೆ ಮಾಡುತ್ತೇನೆ. ನನ್ನ ಮೇಲಿರುವ ಆರೋಪ ಸುಳ್ಳು. ಪೊಲೀಸ್ ಠಾಣೆಯ ಬಳಿಯೇ ನಮ್ಮವರ ಮೇಲೆ ಹಲ್ಲೆ ನಡೆಸಲಾಗಿದೆ. ನಾನು ಕೂಡ ನಮ್ಮವರ ವಕೀಲರ ಜೊತೆ ಮಾತನಾಡಿದ್ದು, ಪ್ರತಿಯಾಗಿ ಕೇಸ್ ದಾಖಲಿಸುತ್ತೇವೆ ಎಂದರು.

  • ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

    ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

    – ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳಿಗೆ ಎನ್‍ಡಿಎ ಮಾದರಿ ತರಬೇತಿ
    – ಆನ್ ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ
    – ಶಾಸನ ಸಭೆಯಲ್ಲಿ ಮಸೂದೆ ಅನುಮೋದನೆ
    – ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

    ಹುಬ್ಬಳ್ಳಿ: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಎಫ್‍ಎಸ್‍ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಎನ್‍ಡಿಎ ಮಾದರಿ ತರಬೇತಿ ಕುರಿತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದೆ. ಪುಣೆಯ ಕಡಕ್‍ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‍ಡಿಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

    ಆಫೀಸರ್ ಆನ್ ಕ್ರೈಂ ಸೀನ್ ಎನ್ನುವ ಕಲ್ಪನೆ ಆಧಾರದ ಮೇಲೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. 16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‍ಪೆಕ್ಟರ್‍ಗಳ ನೇಮಕಾತಿ ಮಾಡಲಾಗುತ್ತಿದೆ ಎಂದರು. ಡಿವೈಎಸ್‍ಪಿ ಹಾಗೂ ಮೇಲಿನ ಹಂತದ ಅಧಿಕಾರಿಗಳು ಕೇವಲ ಕಚೇರಿ, ಆಡಳಿತ ಕೆಲಸಗಳಿಗೆ ಮಹತ್ವ ನೀಡದೆ ಪ್ರತಿಯೊಂದು ಠಾಣೆಗೆ ಭೇಟಿ ನೀಡಿ ಮೂಲ ಪೊಲೀಸ್ ವೃತ್ತಿ ನಿರ್ವಹಿಸಬೇಕು. ಎಲ್ಲರೂ ಕ್ಷೇತ್ರಕ್ಕೆ ಇಳಿದು ಕರ್ತವ್ಯ ಮಾಡಬೇಕು ಎಂದು ಸಲಹೆ ನೀಡಿದರು.

    ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕಾನೂನು ಸುವ್ಯವಸ್ಥೆ ಮುಖ್ಯ. ಇಲ್ಲಿನ ಜನ ಶಾಂತಿ ಪ್ರಿಯರು ಕೆಲವು ಕಿಡಗೇಡಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನವಾಗುತ್ತಿದೆ. ಅವುಗಳನ್ನು ನಿಯಂತ್ರಿಸುವುದು ಅಧಿಕಾರಿಗಳಿಂದ ಸಾಧ್ಯವಿದೆ. ಪೊಲೀಸ್ ಆಯುಕ್ತರು ಠಾಣೆಗಳಿಗೆ ತೆರಳಿ ಪರಿಶೀಲನೆ ಮಾಡಬೇಕು ಎಂದರು. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯವಿದೆ ಎಂದು ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡ್ತಾರೆ: ಹಾಲಪ್ಪ ಆಚಾರ್

    ಠಾಣೆಗಳಿಗೆ ಮೂಲಭೂತ ಸೌಕರ್ಯ ನೀಡಿ ಸುಧಾರಣೆ ಮಾಡಬೇಕು. ಪ್ರತಿ ವರ್ಷ ನೂರು ಠಾಣೆಗಳಂತೆ ಮುಂದಿನ ಐದು ವರ್ಷದಲ್ಲಿ 500 ಪೊಲೀಸ್ ಠಾಣೆ ನಿರ್ಮಿಸುವ ಗುರಿ ಇದೆ. 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗುವುದು. ಶ್ವಾನಗಳ ತರಬೇತಿಗೆ ಡಾಗ್ ಕ್ಯಾನಲ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬೊಮ್ಮಯಿ ತಿಳಸಿದರು.

    ಗೃಹ ಸಚಿವರಾದ ಅರಗ ಜ್ಞಾನೇಂದ್ರ ಮಾತನಾಡಿ, ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆ, ಸಂಚಾರಿ ಠಾಣೆ, ವಸತಿ ಗೃಹಗಳನ್ನು ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಗಿದೆ. ಆನ್ ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಅನುಮೋದನೆ ಆಗಿದೆ. ಕಾಗ್ನಿಜಿಬಲ್ ಪ್ರಕರಣ ಎಂದು ದಾಖಲಿಸಿಕೊಂಡು ಜಾಮೀನು ರಹಿತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್ ಲೈನ್ ಜೂಜುಕಾರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, 2015 ರಿಂದ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ಇಂದು ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳಿಗೆ ಭೂಮಿಪೂಜೆಯನ್ನು ಮುಖ್ಯಮಂತ್ರಿಯವರು ನೆರವೇರಿಸಿದ್ದಾರೆ ಇದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ

    ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ,ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ , ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ, ರಾಜ್ಯ ರೇಷ್ಮೇ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ವಾಕರಸಾಸಂ ಅಧ್ಯಕ್ಷ ವಿ.ಎಸ್.ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಮತ್ತಿತರರು ಉಪಸ್ಥಿತರಿದ್ದರು.

  • ಸಿಎಂ ರೇಸ್ ಬಗ್ಗೆ ನಾನು ಹೇಳಿಕೆ ನೀಡಲ್ಲ, 1 ಸಹಿ ಸಂಗ್ರಹ ನಡೆದಿತ್ತು: ಬೆಲ್ಲದ

    ಸಿಎಂ ರೇಸ್ ಬಗ್ಗೆ ನಾನು ಹೇಳಿಕೆ ನೀಡಲ್ಲ, 1 ಸಹಿ ಸಂಗ್ರಹ ನಡೆದಿತ್ತು: ಬೆಲ್ಲದ

    ಧಾರವಾಡ: ಶಾಸಕರ ಮಧ್ಯೆ ಯಾವುದೇ ಸಹಿ ಸಂಗ್ರಹ ನಡೆದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.

    ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಇದ್ದಾರೆ, ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಾರೆ. ಅದರ ಬಗ್ಗೆ ನಾನು ಏನೂ ಹೇಳಲಾರೆ ಎಂದರು.  ಇದನ್ನೂ ಓದಿ: ಯಡಿಯೂರಪ್ಪ ಪರವಾಗಿ 65ಕ್ಕೂ ಹೆಚ್ಚು ಶಾಸಕರ ಸಹಿ: ರೇಣುಕಾಚಾರ್ಯ

    ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸಿಎಂ ರಾಜೀನಾಮೆ ಮಾತುಗಳ ಹಿಂದಿನ ರಹಸ್ಯ ತಿಳಿಸಿದ ಶಾಸಕ ರಾಜೂಗೌಡ

    ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು. ನನ್ನ ಕ್ಷೇತ್ರದಲ್ಲಿ ಏನು ಮಾಡಬೇಕು ನಾನು ಮಾಡುತ್ತಿರುವೆ ಎಂದು ಉತ್ತರಿಸಿದರು.

  • ಮದ್ಯ ಮಾರಾಟಕ್ಕೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರೋಧ

    ಮದ್ಯ ಮಾರಾಟಕ್ಕೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರೋಧ

    ಧಾರವಾಡ: ರಾಜ್ಯದಲ್ಲಿ ಮದ್ಯ ಮಾರಾಟ ಪುನರ್ ಆರಂಭ ವಿಚಾರವಾಗಿ ಬಿಜೆಪಿ ಶಾಸಕನಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಧಾರವಾಡ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನನ್ನ ವೈಯಕ್ತಿವಾಗಿ ಕೇಳಿದರೆ ಬಾರ್ ಓಪನ್ ಬೇಡ ಎಂದಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಬಾರ್ ಗಳನ್ನು ಬಂದ್ ಮಾಡುವುದು ಒಳ್ಳೆಯದು. 20 ಸಾವಿರ ಕೋಟಿ ಲಿಕ್ಕರ್ ರೆವಿನ್ಯೂ ರಾಜ್ಯದಲ್ಲಿದೆ. ಸುಮಾರು 70-80 ಸಾವಿರ ಕೋಟಿ ಪ್ರತಿ ವರ್ಷ ಲಿಕ್ಕರ್ ಸೇಲ್ ಆಗುತ್ತೆ. ಅದರಲ್ಲಿ 10 ಸಾವಿರ ಕೋಟಿ ಮಾತ್ರ ಶ್ರೀಮಂತರು ಕುಡಿಯುತ್ತಾರೆ. ಉಳಿದಿದ್ದ ಎಲ್ಲವೂ ಬಡವರಿಂದ ಬಂದ ದುಡ್ಡು ಎಂದು ತಿಳಿಸಿದರು.

    ಸಮಾಜ ಕಲ್ಯಾಣ ಇಲಾಖೆಯಿಂದ ಬಡವರ ಯೋಜನೆಗೆ ನಾವು ಹಣ ಕೊಡುತ್ತೇವೆ. ನಾವು ಖರ್ಚು ಮಾಡುವುದಕ್ಕಿಂತ ಬಡವರೇ ಮದ್ಯಕ್ಕೆ ಹೆಚ್ಚು ಖರ್ಚು ಮಾಡುತ್ತಿದ್ದಾರೆ. ಈಗ 45 ದಿನ ಲಾಕ್‍ಡೌನ್‍ನಿಂದ ಮದ್ಯ ಬಂದ್ ಆಗಿತ್ತು. ಇದರಿಂದ ಯಾರ ಮನೆಯಲ್ಲಿಯೂ ತೊಂದರೆ ಆಗಿಲ್ಲ. ಎಲ್ಲರೂ ರೇಷನ್ ತೆಗೆದುಕೊಂಡು ಊಟ ಮಾಡಿ ಆರಾಮಾಗಿ ಇದ್ದರು. ಈಗ ಮದ್ಯ ಆರಂಭ ಆದರೆ ಪುನಃ ಹೊಡೆದಾಟ-ಬಡಿದಾಟ ಶುರು ಆಗುತ್ತೆ. ಆದ್ದರಿಂದ ದೇಶಾದ್ಯಂತ ಮದ್ಯ ನಿಷೇಧ ಆಗಬೇಕು ಎಂದು ಬೆಲ್ಲದ ಹೇಳಿದರು.

  • ಲಿಂಗಾಯತ ಭವನದಲ್ಲಿ ಶಾಸಕ ಬೆಲ್ಲದ್ ಕಾರುಬಾರು: ಒಳಗೂ-ಹೊರಗೂ ಕುಟುಂಬಸ್ಥರದ್ದೇ ಹೆಸರು

    ಲಿಂಗಾಯತ ಭವನದಲ್ಲಿ ಶಾಸಕ ಬೆಲ್ಲದ್ ಕಾರುಬಾರು: ಒಳಗೂ-ಹೊರಗೂ ಕುಟುಂಬಸ್ಥರದ್ದೇ ಹೆಸರು

    ಧಾರವಾಡ: ನಗರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ವೀರಶೈವ ಲಿಂಗಾಯತ ಭವನ ಈಗ ವಿವಾದದ ಕೇಂದ್ರಬಿಂದುವಾಗಿದೆ. ಸಮುದಾಯ ಭವನದ ಮೇಲೆ ಶಾಸಕ ಅರವಿಂದ ಬೆಲ್ಲದ್ ಹಾಗು ಅವರ ಕುಟುಂಬಸ್ಥರ ಹೆಸರುಗಳು ವಿಜೃಂಭಿಸುತ್ತಿದ್ದು, ಇದು ಲಿಂಗಾಯತ ಸಮಾಜದ ಕೆಂಗಣ್ಣಿಗೆ ಗುರಿಯಾಗಿದೆ.

    ಈ ಬಗ್ಗೆ ಮಾತನಾಡಿದ ಸಚಿವ ವಿನಯ್ ಕುಲಕರ್ಣಿ, ಇದು ಸಮಾಜದ ಎಲ್ಲರೂ ಸೇರಿ ನಿರ್ಮಾಣ ಮಾಡಿರೋ ಭವನ. ಭವನಕ್ಕೆ ಸರ್ಕಾರ 2 ಕೋಟಿ ರೂಪಾಯಿ ಅನುದಾನ ನೀಡಿದೆ. ಹೀಗಿರುವಾಗ ಯಾವುದೋ ಒಂದು ಕುಟುಂಬದ ಸದಸ್ಯರ ಹೆಸರು ಇಡೋದು ಸರಿಯಲ್ಲ. ಅಲ್ಲದೇ ಕಟ್ಟಡದ ಸಮಿತಿ ಅಧ್ಯಕ್ಷ ಸ್ಥಾನದಿಂದ ನನ್ನನ್ನ ತೆಗೆದು ಹಾಕಿದ್ದಾರೆ. ಇದು ನನ್ನ ಗಮನಕ್ಕೆ ಬಂದಿಲ್ಲ. ಇದು ಸಮಾಜದ ಕಟ್ಟಡ. ಸಮಾಜದ ಹೆಸರಿನಲ್ಲೇ ಇರಲಿ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಅರವಿಂದ್ ಬೆಲ್ಲದ್, ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಭವನ ಕಟ್ಟುವಾಗ ನಮ್ಮ ತಂದೆಯವರು 25 ಲಕ್ಷ ರೂ. ದಾನವಾಗಿ ನೀಡಿದ್ರು. ಅಂದು ಭವನಕ್ಕೆ ನಮ್ಮ ಮನೆತನದ ಹೆಸರು ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಹಾಗೆಯೇ ನಮ್ಮ ಸಹೋದರಿಯರು ಸಹ ಕಟ್ಟಡ ನಿರ್ಮಾಣಕ್ಕೆ ಧನಸಹಾಯ ಮಾಡಿದ್ದಾರೆ ಎಂದು ಹೇಳಿದರು.

    ಇನ್ನು ಈ ಕಟ್ಟಡದ ಮೇಲೆ ಬೆಲ್ಲದ್ ಕುಟುಂಬದವರ ಹೆಸರು ಹಾಕಿದ್ದಕ್ಕೆ ಅಖಿಲ ಭಾರತ ವೀರಶೈವ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ