Tag: ಅರಸಿಕೆರೆ

  • ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

    ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

    ಹಾಸನ: ಶಂಕಿತ ಡೆಂಗ್ಯೂಗೆ (Suspected Dengue) ಯುವತಿ (Young Woman) ಬಲಿಯಾದ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

    ಸುಪ್ರೀತಾ (26) ಶಂಕಿತ ಡೆಂಗ್ಯೂನಿಂದ ಸಾವನ್ನಪ್ಪಿದ ಯುವತಿ. ಈಕೆ ಹಾಸನ ಜಿಲ್ಲೆ ಅರಸಿಕೆರೆ (Arasikere) ತಾಲೂಕಿನ ಮುದುಡಿ ತಾಂಡ್ಯ ಗ್ರಾಮದವಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸುಪ್ರೀತಾ ಜೂಲುನಾಯ್ಕ-ಸುಮಿತ್ರಾದೇವಿ ಎಂಬವರ ಪುತ್ರಿಯಾಗಿದ್ದಾಳೆ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಸುಪ್ರೀತಾ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಳು. ಇದನ್ನೂ ಓದಿ: ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

    ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರೀತಾಗೆ ಬಹು ಅಂಗಾಂಗ ವೈಫಲ್ಯ ಕಾಣಿಸಿಕೊಂಡಿದೆ. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಆಕೆಯ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಪ್ರೀತಾ ಸಾವನ್ನಪ್ಪಿದ್ದಾಳೆ. ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಸಾವಿನ ಸಂಖ್ಯೆ ಏಳಕ್ಕೆ ಏರಿದೆ. ಈ ಪೈಕಿ ಮೂರು ಮಕ್ಕಳು ಡೆಂಗ್ಯೂವಿನಿಂದ ಸಾವನ್ನಪ್ಪಿರುವುದು ದೃಢವಾಗಿದೆ. ಇದನ್ನೂ ಓದಿ: ಗದಗದಲ್ಲಿ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

  • ಮನೆ ಬಾಗಿಲು ಮುರಿದು ಬಂದೂಕು ಕದ್ದ ಕಳ್ಳರು

    ಮನೆ ಬಾಗಿಲು ಮುರಿದು ಬಂದೂಕು ಕದ್ದ ಕಳ್ಳರು

    ಹಾಸನ: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಬಂದೂಕನ್ನು ಕದ್ದಿರುವ ಘಟನೆ ಅರಸೀಕೆರೆಯ (Arsikere) ಕೆ.ಕೆಂಗನಹಳ್ಳಿಯಲ್ಲಿ ನಡೆದಿದೆ.

    ಅನಿಲ್‍ಕುಮಾರ್ ಎಂಬವರಿಗೆ ಸೇರಿದ ಬಂದೂಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಅನಿಲ್ ಅವರು ತಂದೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಳ್ಳರು ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಈ ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ರಿಲೀಸ್

    ಮನೆಯಲ್ಲಿ ಯಾರು ಇಲ್ಲದಿರುವುದು ಗ್ರಾಮಸ್ಥರಿಗೆ ಗೊತ್ತಿತ್ತು. ಆದರೆ ಬೆಳಗ್ಗೆ ಬಾಗಿಲು ತೆರೆದಿರುವುದನ್ನು ನೋಡಿದ ಗ್ರಾಮಸ್ಥರು ಮನೆಯ ಬಳಿ ತೆರಳಿ ನೋಡಿದ್ದಾರೆ. ಈ ವೇಳೆ ಬಾಗಿಲು ಒಡೆದಿರುವ ವಿಚಾರ ತಿಳಿದಿದೆ. ಕೂಡಲೇ ಗ್ರಾಮಸ್ಥರು ಅನಿಲ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.

    ಬೆಂಗಳೂರಿನಿಂದ ಅನಿಲ್ ವಾಪಾಸ್ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ 20,000 ರೂ. ಬೆಲೆ ಬಾಳುವ ಡಿಬಿಬಿಎಲ್ ಬಂದೂಕನ್ನು ಕದ್ದಿರುವುದು ತಿಳಿದಿದೆ.

    ಈ ಸಂಬಂಧ ಜಾವಗಲ್ (Javagal) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 110 ಅಡಿ ತಲುಪಿದ KRS ನೀರಿನ ಮಟ್ಟ – ಡ್ಯಾಂ ಭರ್ತಿಗೆ 14 ಅಡಿಯಷ್ಟೇ ಬಾಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ: ರೇವಣ್ಣ

    ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ: ರೇವಣ್ಣ

    ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ. ನಮ್ಮಲ್ಲಿ ಕಚ್ಚಾಟವಿಲ್ಲ, ಆರಾಮಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.

    ಕೋವಿಡ್ ಹೆಸರಿನಲ್ಲಿ ಗ್ರಾ.ಪಂ. ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್‍ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

    ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಹೇಳುತ್ತಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜೆಡಿಎಸ್ ಸದಸ್ಯರಿಂದ ಬಿಜೆಪಿಗೆ ಬೆಂಬಲ
    ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು ಹಾಗೂ ಒಬ್ಬ ಪಕ್ಷೇತರ ಸದಸ್ಯ ಬಂಡಾಯ ಬಾವುಟ ಹಾರಿಸಿದ್ದಾರೆ. ತಮಗೆ ಪ್ರತ್ಯೇಕ ಆಸನ ನೀಡುವಂತೆ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. 31 ಸದಸ್ಯರನ್ನು ಒಳಗೊಂಡಿರುವ ಅರಸೀಕೆರೆ ನಗರಸಭೆಯಲ್ಲಿ 21 ಮಂದಿ ಜೆಡಿಎಸ್ ನಿಂದ ಗೆದ್ದುಬಂದಿದ್ದು, ಬಿಜೆಪಿಯಿಂದ 6 ಹಾಗೂ ಪಕ್ಷೇತರ 3 ಮತ್ತು ಕಾಂಗ್ರೆಸ್ ಒಬ್ಬರು ಆಯ್ಕೆಯಾಗಿದ್ದಾರೆ.

    ಜೆಡಿಎಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಮುನಿಸಿಕೊಡಿರುವ ಜೆಡಿಎಸ್‍ನ ಏಳು ಸದಸ್ಯರು, ತಮಗೆ ಯಾವುದೇ ರೀತಿ ಸ್ಪಂದನೆಯನ್ನು ಈಗಿರೋ ನಾಯಕರು ನೀಡುತ್ತಿಲ್ಲ. ಮೀಸಲಾತಿಯನ್ವಯ ಈಗ ಬಿಜೆಪಿಯವರು ಅರಸೀಕೆರೆ ನಗರಸಭೆ ಅಧ್ಯಕ್ಷರಾಗಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡಬೇಕಾದರೆ ನಮ್ಮೆಲ್ಲರ ಸಹಕಾರ ಬೇಕಾಗಿರುತ್ತದೆ. ಇದರಿಂದ ನಾವೂ ಉತ್ತಮವಾಗಿ ಜನಸೇವೆ ಮಾಡಬಹುದು ಎಂಬ ಕಾರಣ ನೀಡಿ, ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿ, ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಡಿಸಿಗೆ ಮನವಿ ಮಾಡಿದ್ದಾರೆ. ಜೊತೆಗೆ ಅರಸೀಕೆರೆ ನಗರಸಭೆಗೆ ಜೆಡಿಎಸ್‍ನಿಂದ 21 ಜನ ಆಯ್ಕೆಯಾಗಿದ್ದು, ಆ ಸಂಖ್ಯೆಯ ಮೂರನೇ ಒಂದು ಭಾಗವಾಗಿ ನಾವು ಏಳುಜನ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ನೀಡಿದ್ದೇವೆ. ಹೀಗಾಗಿ ನಾವು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದಂತೆ ಆಗುವುದಿಲ್ಲ ಎನ್ನುತ್ತಿದ್ದಾರೆ.

    ಶಿವಲಿಂಗೇಗೌಡ ಆಕ್ರೋಶ
    ಈ ಬೆಳವಣಿಗೆಯಿಂದ ಕೆರಳಿದ ಶಾಸಕ ಶಿವಲಿಂಗೇಗೌಡ, ಈ ರಾಜಕೀಯ ಕುಚೇಷ್ಟೆ ಹಿಂದೆ ನೇರವಾಗಿ ಬಿಜೆಪಿ ಇದೆ ಎಂದು ಆರೋಪ ಮಾಡಿದ್ದಾರೆ. ಜೊತೆಗೆ ಅರಸೀಕೆರೆಗೆ ರಾಜಕೀಯ ಆಸರೆ ಪಡೆಯಲು ಬಂದವರೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಸಮ್ಮಿಶ್ರ ಸರ್ಕಾರವನ್ನೇ ಕೆಡವಿದವರಿಗೆ ಅರಸೀಕೆರೆ ನಗರಸಭೆ ಕೆಡವಲು ಆಗಲ್ವೇ ಎಂದು ಪರೋಕ್ಷವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ರಾಜಕೀಯ ದಾಳದ ಬಗ್ಗೆ ತಿರುಗಿಬಿದ್ದಿದ್ದಾರೆ. ಈ ವಿಚಾರವಾಗಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಈ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಅರಸೀಕೆರೆಯಲ್ಲಿ ಜೆಡಿಎಸ್ ಸಂಖ್ಯಾ ಬಲ ಜಾಸ್ತಿ ಇದ್ದರೂ ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಅಲಂಕರಿಸಿದ್ದಾರೆ. ಆದರೆ ಜೆಡಿಎಸ್ ಭದ್ರ ಕೋಟೆಯಾಗಿರುವ ಅರಸೀಕೆರೆಯಲ್ಲಿ ಬಿಜೆಪಿ ಇಷ್ಟೆಲ್ಲಾ ಕಸರತ್ತು ಮಾಡುತ್ತಿದೆ ಎಂದರೆ ಅದರ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಇದ್ದಾರೆ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಎನ್.ಆರ್.ಸಂತೋಷ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ, ಅರಸೀಕೆರೆಯಿಂದ ಸ್ಪರ್ಧೆಗೆ ಸಿದ್ಧ ಎಂದು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದರು. ಅಲ್ಲದೆ ನಿರಂತರವಾಗಿ ಅರಸೀಕೆರೆಯಲ್ಲಿ ಓಡಾಡುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್, ಈಗ ತೆರೆಮರೆಯಲ್ಲೇ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಜೆಡಿಎಸ್ ನಾಯಕರು ತಮ್ಮ ಸದಸ್ಯರನ್ನು ಹೇಗೆ ಮನವೊಲಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

  • ನಗರಸಭೆ ಆಯುಕ್ತರೇ ಎದುರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಗಲಾಟೆ

    ನಗರಸಭೆ ಆಯುಕ್ತರೇ ಎದುರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಗಲಾಟೆ

    ಹಾಸನ: ನಗರಸಭೆ ಆಯುಕ್ತರ ಎದುರೇ ಬಿಜೆಪಿ ಕಾರ್ಯಕರ್ತ ಮತ್ತು ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಬೆಂಬಲಿಗರ ನಡುವೆ ವಾಕ್ಸಮರ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯ ನಗರಸಭೆಯಲ್ಲಿ ನಡೆದಿದೆ.

    ಅರಸೀಕೆರೆ ನಗರಸಭೆಯಲ್ಲಿ ಇಂದು ಶಾಸಕ ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ರಘು ಸಭೆಗೆ ಹಾಜರಾಗಿದ್ದರು. ನೀನು ಸದಸ್ಯನಲ್ಲ ಹೀಗಾಗಿ ಸಭೆಗೆ ಹಾಜರಾಗುವಂತಿಲ್ಲ ಎಂದು ರಘು ಅವರನ್ನು ಶಾಸಕ ಶಿವಲಿಂಗೇಗೌಡ ಆಚೆಗೆ ಕಳುಹಿಸಿದ್ದರು.

    ಸಭೆ ನಂತರ ಈ ಬಗ್ಗೆ ಆಯುಕ್ತರಾದ ಕಾಂತರಾಜ್ ಬಳಿ ಪ್ರಶ್ನಿಸಿದ್ದ ಬಿಜೆಪಿ ಕಾರ್ಯಕರ್ತ ರಘು, ಸಭೆಯನ್ನು ಬಾಗಿಲು ಹಾಕಿಕೊಂಡು ಮಾಡುವ ಉದ್ದೇಶ ಏನಿತ್ತು? ಇಲ್ಲಿ ಕೆಲವರು ಸದಸ್ಯರಲ್ಲದವರು ಕುಳಿತಿದ್ದರು ನನ್ನನ್ನು ಮಾತ್ರ ಹೊರಗೆ ಕಳುಹಿಸಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ರು. ಈ ವೇಳೆ ಅಲ್ಲಿಯೇ ಇದ್ದ ಶಾಸಕರ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ರಘು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆಯುಕ್ತರ ಎದುರೇ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

  • ಬಿಎಂಟಿಸಿ ಡ್ರೈವರ್​ಗೆ ಕೊರೊನಾ ಸೋಂಕು ಹಾಸನದಲ್ಲಿ ದೃಢ

    ಬಿಎಂಟಿಸಿ ಡ್ರೈವರ್​ಗೆ ಕೊರೊನಾ ಸೋಂಕು ಹಾಸನದಲ್ಲಿ ದೃಢ

    ಹಾಸನ: ಬಿಎಂಟಿಸಿ ಚಾಲಕರೊಬ್ಬರಿಗೆ ಹಾಸನದಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನಾಗಿದ್ದ ವ್ಯಕ್ತಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 14ರಂದು ರಜೆ ಹಾಕಿ ಅರಸೀಕೆರೆ ತಾಲೂಕಿನ ಸ್ವಗ್ರಾಮಕ್ಕೆ ಬಂದಿದ್ದರು. ಸ್ವಗ್ರಾಮಕ್ಕೆ ಆಗಮಿಸಿದ ಕೂಡಲೇ ಮೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಡ್ರೈವರ್ ಗುಣಮುಖವಾಗದ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಚಾಲಕನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.

    ಸೋಂಕು ತಗುಲಿರೋದು ದೃಢಪಡುತ್ತಿದ್ದಂತೆ ಚಾಲಕ ವಾಸವಾಗಿದ್ದ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ಬಿಎಂಟಿಸಿ ಡ್ರೈವರ್ ಕರ್ತವ್ಯ ನಿರ್ವಹಿಸಿದ ಸ್ಥಳ, ಅವರು ಯಾರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.