Tag: ಅರುಣಾಚಲ ಪ್ರದೇಶ

  • ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

    ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

    ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ (BJP) ಮುನ್ನಡೆ ಕಾಯ್ದುಕೊಂಡಿದೆ.

    ರಾಜ್ಯದ 60 ಸ್ಥಾನಗಳ ಪೈಕಿ ಬಿಜೆಪಿ 47 ರಲ್ಲಿ ಮುಂದಿದೆ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

    ಅರುಣಾಚಲ ಪ್ರದೇಶದ 50 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಭಾರೀ ಭದ್ರತೆಯಲ್ಲಿ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ.

    ರಾಜ್ಯದಾದ್ಯಂತ ಭಾರೀ ಮಳೆಯ ನಡುವೆ 24 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ತಿಳಿಸಿದ್ದಾರೆ. ಇದನ್ನೂ ಓದಿ: ಅಬ್ಕಿ ಬಾರ್ ಚಾರ್ ಸೌ ಪಾರ್ – ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್‌ ಚಾಣಕ್ಯ

    ಖೋನ್ಸಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ವಂಗ್ಲಾಮ್ ಸವಿನ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕಮ್ರಾಂಗ್ ತೇಸಿಯಾ ಅವರನ್ನು 2,216 ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ. ಸವಿನ್‌ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

    ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು. ಈಶಾನ್ಯ ರಾಜ್ಯವು 60 ವಿಧಾನಸಭಾ ಸ್ಥಾನಗಳನ್ನು ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಅಂದಾಜು 82.71 % ರಷ್ಟು ಮತದಾರರು ಮತ ಚಲಾಯಿಸಿದ್ದರೆ, ರಾಜ್ಯದ ಎರಡು ಲೋಕಸಭಾ ಸ್ಥಾನಗಳಿಗೆ 77.51 % ರಷ್ಟು ಮತದಾನವಾಗಿದೆ.

  • ಅರುಣಾಚಲ ಪ್ರದೇಶದಲ್ಲಿ ಭೂಕುಸಿತ- ಕೊಚ್ಚಿ ಹೋಯ್ತು ಚೀನಾ ಗಡಿ ಸಂಪರ್ಕಿಸೋ ಹೆದ್ದಾರಿ

    ಅರುಣಾಚಲ ಪ್ರದೇಶದಲ್ಲಿ ಭೂಕುಸಿತ- ಕೊಚ್ಚಿ ಹೋಯ್ತು ಚೀನಾ ಗಡಿ ಸಂಪರ್ಕಿಸೋ ಹೆದ್ದಾರಿ

    ನವದೆಹಲಿ: ಅರುಣಾಚಲ ಪ್ರದೇಶದಲ್ಲಿ (Arunachala Pradesh) ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ.

    ಹೌದು. ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು (Pema Khandu) ಕಳವಳ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

    ಮೂರು ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡುತ್ತೇವೆ ಎಂದು ಜಿಲ್ಲಾಡಳಿತವು ದಿಭಾಂಗ್ ಕಣಿವೆಯ ನಿವಾಸಿಗಳಿಗೆ ನೋಟಿಸ್‌ ನೀಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರೋಯಿಂಗ್‌ಗೆ ಸಂಪರ್ಕಿಸುವ NH 313 ರ ಪ್ರಮುಖ ಭಾಗವು ಬುಧವಾರದಂದು ಕೊಚ್ಚಿಹೋಗಿದೆ ಎಂದು ದಿಭಾಂಗ್ ಕಣಿವೆಯ ಎಲ್ಲಾ ನಿವಾಸಿಗಳಿಗೆ ತಿಳಿಸಲಾಗಿದೆ. ಇದನ್ನು ಸರಿಪಡಿಸಲು ಕನಿಷ್ಟ ಮೂರು ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ರಸ್ತೆಯನ್ನು ಪುನಃಸ್ಥಾಪಿಸುವವರೆಗೆ ಮತ್ತು ಮಳೆ ಸಹಜ ಸ್ಥಿತಿಗೆ ಮರಳುವವರೆಗೆ ಸಹಕರಿಸಬೇಕಾಗಿ ನೋಟಿಸ್‌ನಲ್ಲಿ ತಿಳಿಸಲಾಗಿದೆ.

  • ವಿರೋಧಿಗಳೇ ಇಲ್ಲ – ಅರುಣಾಚಲ ಪ್ರದೇಶ ಸಿಎಂ ಸೇರಿ 5 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

    ವಿರೋಧಿಗಳೇ ಇಲ್ಲ – ಅರುಣಾಚಲ ಪ್ರದೇಶ ಸಿಎಂ ಸೇರಿ 5 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

    ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿ ಪೆಮಾ ಖಂಡು (CM Pema Khandu) ಸೇರಿದಂತೆ ಐವರು ಬಿಜೆಪಿ (BJP) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

    ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಇಂದು ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಚುನಾವಣಾ ಆಯೋಗ (Election Commission) ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆಯಿದೆ.  ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ

    ಕೇಂದ್ರ ಸಚಿವ ಕಿರಣ್‌ ರಿಜಿಜು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ರಾಷ್ಟ್ರದ ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

  • ಅರುಣಾಚಲ, ಸಿಕ್ಕಿಂ ಅಸೆಂಬ್ಲಿ ಎಲೆಕ್ಷನ್ ಮತ ಎಣಿಕೆ ದಿನಾಂಕ ಬದಲಾವಣೆ

    ಅರುಣಾಚಲ, ಸಿಕ್ಕಿಂ ಅಸೆಂಬ್ಲಿ ಎಲೆಕ್ಷನ್ ಮತ ಎಣಿಕೆ ದಿನಾಂಕ ಬದಲಾವಣೆ

    – ಜೂ.4ರ ಬದಲು ಜೂ.2ರಂದು ಮತ ಎಣಿಕೆ

    ನವದೆಹಲಿ: ಲೋಕಸಭಾ ಚುನಾವಣೆ (Lok sabha Election) ಹಾಗೂ ಮತ ಎಣಿಕೆ (Vote Counting) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ (Election Commission Of India) ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ.

    ಏಪ್ರಿಲ್ 19ರಿಂದ ಮತದಾನ ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಆದರೆ ಇದೀಗ ಅರುಣಾಚಲ (Arunachal Pradesh) ಹಾಗೂ ಸಿಕ್ಕಿಂ (Sikkim) ವಿಧಾನಸಭೆ ಚುನಾವಣೆಯ (Assembly Election) ಮತ ಎಣಿಕೆಯನ್ನು ಜೂ.4ರ ಬದಲು ಜೂ.2ರಂದು ನಡೆಸುವಂತೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಹೊಸ ದತ್ತಾಂಶ ರಿಲೀಸ್‌ – ಅತಿಹೆಚ್ಚು ದೇಣಿಗೆ ಪಡೆದ ಪಕ್ಷ ಯಾವುದು?

    ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಯ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳುವ ಹಿನ್ನೆಲೆ ಈ ಮಹತ್ತರ ಬದಲಾವಣೆ ತರಲಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗೆ ಏಪ್ರಿಲ್ 19ರಂದು ಒಂದೇ ಹಂತದ ಮತದಾನ ನಡೆಯಲಿದೆ. ಇನ್ನು ಅರುಣಾಚಲ ಮತ್ತು ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್

  • ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ

    ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ

    ಇಟಾನಗರ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ನಿರ್ಮಾಣಗೊಂಡ ವಿಶ್ವದ ಅತೀ ಉದ್ದದ ದ್ವಿಪಥ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡಿದ್ದಾರೆ.

    ಇಟಾನಗರದಲ್ಲಿ (Itanagar) ನಡೆದ ʼವಿಕಾಸಿತ ಭಾರತ ವಿಕಾಸಿತ ಈಶಾನ್ಯʼ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಸೆಲಾ ಸುರಂಗವನ್ನು (Sela Tunnel) ಉದ್ಘಾಟಿಸಿದರು. ಈ ಸಮಯದಲ್ಲಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.

    ಚೀನಾಗೆ ಠಕ್ಕರ್‌ ಹೇಗೆ?
    ಚೀನಾ ಗಡಿ (China Border) ಭಾಗದಲ್ಲಿ ವಿಶೇಷವಾಗಿ ಈಶಾನ್ಯ ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗದ ಕಾರಣ ರಾಜ್ಯಗಳು ಹಿಂದುಳಿದಿತ್ತು. ಅಷ್ಟೇ ಅಲ್ಲದೇ ಗಡಿ ಭಾಗಕ್ಕೆ ಕ್ಷೀಪ್ರವಾಗಿ ಸೈನಿಕರನ್ನು ಕಳುಹಿಸುವುದು ಸವಾಲಿನ ಕೆಲಸವಾಗಿತ್ತು.

    ಅರುಣಾಚಲ ಪ್ರದೇಶದಲ್ಲಿ ಚೀನಾ ಆಗಾಗ ಕ್ಯಾತೆ ತೆಗೆಯುತ್ತಿದ್ದ ಹಿನ್ನೆಲೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿತ್ತು. ಈ ಯೋಜನೆಯ ಭಾಗವಾಗಿ ಈ ಸೆಲಾ ಸುರಂಗವನ್ನು ನಿರ್ಮಾಣ ಮಾಡಲಾಗಿದೆ.

    ಸುರಂಗ ಮಾರ್ಗದ ವಿಶೇಷತೆ ಏನು?
    ತೇಜ್‌ಪುರದಿಂದ ತವಾಂಗ್‌ಗೆ ಸಂಪರ್ಕ ಕಲ್ಪಿಸುವ ಸೆಲಾ ಸುರಂಗವು 13,000 ಅಡಿ ಎತ್ತರದಲ್ಲಿ 825 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಗಡಿ ರಸ್ತೆಗಳ ಸಂಸ್ಥೆ (BRO) ನಿರ್ಮಾಣ ಮಾಡಿದ್ದು, ಒಂದು ಸುರಂಗ 1,003 ಮೀಟರ್‌ ಉದ್ದವಿದ್ದರೆ ಎರಡನೇ ಸುರಂಗ 1,595 ಮೀಟರ್‌ ಉದ್ದದ ಟ್ವಿನ್‌ಟ್ಯೂಬ್‌ ಹೊಂದಿದೆ.  ಇದನ್ನೂ ಓದಿ: ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

    ಈ ಯೋಜನೆಯೂ 8.6 ಕಿಮೀ ಉದ್ದದ ಎರಡು ರಸ್ತೆಗಳನ್ನು ಸಹ ಒಳಗೊಂಡಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್‌ ಉದ್ದದ ಲಿಂಕ್‌ ರೋಡ್‌ ಕೂಡ ಇದೆ. ದಿನಕ್ಕೆ 3,000 ಕಾರುಗಳು ಮತ್ತು 2,000 ಟ್ರಕ್‌ಗಳು ಸಂಚರಿಸಬಹುದು ಎಂದು ಅಂದಾಜಿಸಲಾಗಿದೆ. ಸುರಂಗ ಮಾರ್ಗದಲ್ಲಿ ಗಂಟೆಗೆ 80 ಕಿ.ಮೀ ಗರಿಷ್ಠ ವೇಗದ ಮಿತಿಯನ್ನು ಹೇರಲಾಗಿದೆ.

    ಚೀನಾ ಗಡಿಯಲ್ಲಿರುವ ತವಾಂಗ್‌ಗೆ ಎಲ್ಲಾ ಹವಾಮಾನದಲ್ಲೂ ಈ ಸಂಪರ್ಕ ಕಲ್ಪಿಸಬಹುದಾಗಿದೆ. ಇದು ಭಾರತ-ಚೀನಾ ಮಧ್ಯೆ ಇರುವ ಗಡಿ ವಾಸ್ತವ ರೇಖೆ (ಎಲ್‍ಎಸಿ) ಬಳಿಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆ ಸೈನಿಕರನ್ನು ಕ್ಷಿಪ್ರವಾಗಿ ಕಳುಹಿಸಲು, ಸೇನೆಯ ಭಾರೀ ಗಾತ್ರದ ವಾಹನಗಳ ಸಂಚಾರ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ನೆರವಾಗಲಿದೆ.

    ಚಳಿಗಾಲದಲ್ಲಿ ಭಾರೀ ಹಿಮಪಾತ ಸಂಭವಿಸಿದಾಗ ಅರುಣಾಚಲ ಪ್ರದೇಶದ ಹಲವು ಮಾರ್ಗಗಳಲ್ಲಿ ಸಂಚಾರ ಬಂದ್‌ ಆಗುತ್ತದೆ. ಹಿಮಪಾತ ಮತ್ತು ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಬಲಿಪರಾ-ಚಾರಿದ್ವಾರ-ತವಾಂಗ್ ರಸ್ತೆಯು ವರ್ಷದ ದೀರ್ಘಾವಧಿಯವರೆಗೆ ಮುಚ್ಚಲ್ಪಟ್ಟಿರುವುದರಿಂದ ಸೆಲಾ ಪಾಸ್ ಬಳಿ ಸುರಂಗ ನಿರ್ಮಾಣದ ಅಗತ್ಯವಿತ್ತು.

    ತೇಜ್‌ಪುರದಿಂದ ತವಾಂಗ್‌ಗೆ 90 ಕಿ.ಮೀ ದೂರವಿದ್ದು ಈಗ ಈ ಅಂತರ 12 ಕಿ.ಮೀ ಇಳಿಕೆಯಾಗಿದೆ. ಕನಿಷ್ಠ 1 ಗಂಟೆಯ ಪ್ರಯಾಣದ ಸಮಯ ಉಳಿತಾಯವಾಗಲಿದೆ.

    ಫೆಬ್ರವರಿ 2019ರಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ್ದರು. ಕೋವಿಡ್ -19 ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸುರಂಗ ನಿರ್ಮಾಣದ ಕೆಲಸ ವಿಳಂಬವಾಗಿತ್ತು. 

  • Asian Games 2023: ಅರುಣಾಚಲ ಪ್ರದೇಶದ ಮೂವರು ಅಥ್ಲೆಟ್‌ಗಳಿಗೆ ಪ್ರವೇಶ ನಿರಾಕರಿಸಿದ ಚೀನಾ

    Asian Games 2023: ಅರುಣಾಚಲ ಪ್ರದೇಶದ ಮೂವರು ಅಥ್ಲೆಟ್‌ಗಳಿಗೆ ಪ್ರವೇಶ ನಿರಾಕರಿಸಿದ ಚೀನಾ

    ಹ್ಯಾಂಗ್‌ಜೂ: ಚೀನಾದ (China) ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games) ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ಅರುಣಾಚಲ ಪ್ರದೇಶದ ಮೂವರು ವೂಶೂ ಕ್ರೀಡಾಪಟುಗಳಿಗೆ ಚೀನಾ ಪ್ರವೇಶ ನಿರಾಕರಿಸಿದೆ.

    10 ಆಟಗಾರರನ್ನೊಳಗೊಂಡ ತಂಡದಲ್ಲಿ ಮೂವರು ಮಹಿಳಾ ಆಟಗಾರರಿಗೆ ಪ್ರವೇಶ ನಿರಾಕರಿಸಿದ್ದು, ಉಳಿವರು ಹ್ಯಾಂಗ್‌ಜೂಗೆ ತೆರಳಿದ್ದಾರೆ. ವೂಶೂ ಕ್ರೀಡಾಪಟುಗಳಾದ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರ ಪ್ರವೇಶ ನಿರಾಕರಿಸಿದೆ. ಚೀನಾ ಅರುಣಾಚಲ ಪ್ರದೇಶದ (Arunachal Pradesh) ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ತಮ್ಮ ನಿಗದಿತ ಚೀನಾ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. ಇದು ಪ್ರತಿಭಟನೆಯ ಸಂಕೇತವೆಂದೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

    ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಪ್ರವೇಶ ವೀಸಾವಾಗಿ ಕಾರ್ಯನಿರ್ವಹಿಸುವ ಹ್ಯಾಂಗ್‌ಜೂ ಏಷ್ಯನ್ ಗೇಮ್ಸ್ ಆರ್ಗನೈಸಿಂಗ್ ಕಮಿಟಿಯಿಂದ ತಮ್ಮ ಮಾನ್ಯತೆ ಕಾರ್ಡ್ಗಳನ್ನು ಪಡೆದಿದ್ದರು. ಈ ಮಾನ್ಯತಾ ಪತ್ರವನ್ನ ಪ್ರವೇಶ ವೀಸಾ ಎಂದು ಪರಿಗಣಿಸಲಾಗುತ್ತದೆ. ಅಥ್ಲೀಟ್‌ಗಳು ತಮ್ಮ ಪ್ರಯಾಣ ದಾಖಲೆಯನ್ನ ಡೌನ್‌ಲೋಡ್ ಮಾಡಿಕೊಳ್ಳಬೇಕಿತ್ತು. ಏಕೆಂದರೆ ಇದು ಆಟಗಾರರು ಆಗಮಿಸುವ ವೇಳೆ ದೃಢೀಕರಿಸಲಾಗುತ್ತದೆ. ಆದ್ರೆ ಬುಧವಾರ ಏಷ್ಯನ್ ಗೇಮ್ಸ್‌ಗೆ ತೆರಳಬೇಕಿದ್ದಾಗ ಅರುಣಾಚಲ ಪ್ರದೇಶದ ಮೂವರು ಆಟಗಾರರು ತಮ್ಮ ಪ್ರಯಾಣದ ದಾಖಲೆಗಳನ್ನ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮೂವರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ತಿಳಿದುಬಂದಿದೆ. 10 ಆಟಗಾರರನ್ನೊಳಗೊಂಡ ತಂಡದಲ್ಲಿ ಉಳಿದ ಯಾವುದೇ ಆಟಗಾರರು ಮತ್ತು ಸಿಬ್ಬಂದಿಗೆ ಈ ಸಮಸ್ಯೆ ಎದುರಾಗಿಲ್ಲ.

    ಈ ನಡುವೆ 19ನೇ ಏಷ್ಯನ್ ಗೇಮ್ಸ್ಗೆ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎನ್ನುವ ಬಗ್ಗೆ ಹಿರಿಯ ಭಾರತ ಸರ್ಕಾರದ ಅಧಿಕಾರಿ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿದ್ದಾರೆ.

    ಚೀನಾದ ಹಾಂಗ್‌ಜೂನಲ್ಲಿ ನಡೆಯುತ್ತಿರಯುವ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಭಾರತ ಸರ್ಕಾರ ತಿಳಿದುಕೊಂಡಿದೆ. ವಾಸಸ್ಥಳ, ಜನಾಂಗೀಯತೆಯ ಆಧಾರದ ಮೇಲೆ ನಾಗರಿಕರನ್ನು ಭೇದ-ಭಾವದಿಂದ ನೋಡುವುದನ್ನ ದೃಢವಾಗಿ ತಿರಸ್ಕರಿಸುತ್ತದೆ. ಈ ಕುರಿತು ನವದೆಹಲಿ ಮತ್ತು ಬೀಜಿಂಗ್‌ನಲ್ಲೂ ಪ್ರತಿಭಟನೆ ದಾಖಲಿಸಲಾಗಿದೆ. ಇದನ್ನೂ ಓದಿ: ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ

    ಚೀನಾ ನಮ್ಮ ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದೆ. ಚೀನಾದ ಈ ನಡೆಯು ಏಷ್ಯನ್ ಗೇಮ್ಸ್ನ ಉತ್ಸಾಹ ಹಾಗೂ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ಭಾರತ ಅಸಮಾಧಾನ ಹೊರಹಾಕಿದೆ. ಅಲ್ಲದೇ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚೀನಾಕ್ಕೆ ತಮ್ಮ ನಿಗದಿತ ಭೇಟಿಯನ್ನ ರದ್ದುಗೊಳಿಸಿದ್ದಾರೆ. ಜೊತೆಗೆ ನಮ್ಮ ಹಿತಾಸಕ್ತಿಯನ್ನ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವು ಹಕ್ಕನ್ನು ಭಾರತ ಸರ್ಕಾರ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚೀನಾ, ಎಲ್ಲಾ ದೇಶಗಳ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುವಂತೆ ಕೋರುವುದಾಗಿ ತಿಳಿಸಿದೆ. ಇದನ್ನೂ ಓದಿ: ಬಂಗಾರಪ್ಪ ಸಿಎಂ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು: ಮಧು ಬಂಗಾರಪ್ಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಧಿಕೃತ ಮ್ಯಾಪ್‌ನಲ್ಲಿ ಅರುಣಾಚಲ ಪ್ರದೇಶ ಸೇರಿಸಿಕೊಂಡ ಚೀನಾ – ದಕ್ಷಿಣ ಟಿಬೆಟ್ ಎಂದು ನಾಮಕರಣ

    ಅಧಿಕೃತ ಮ್ಯಾಪ್‌ನಲ್ಲಿ ಅರುಣಾಚಲ ಪ್ರದೇಶ ಸೇರಿಸಿಕೊಂಡ ಚೀನಾ – ದಕ್ಷಿಣ ಟಿಬೆಟ್ ಎಂದು ನಾಮಕರಣ

    ನವದೆಹಲಿ: ಗಡಿಯಲ್ಲಿ ಆಗಾಗ ಕಿರಿಕ್ ಮಾಡುತ್ತಿರುವ ಚೀನಾ (China) ಈಗ ಮತ್ತೊಮ್ಮೆ ತನ್ನ ಕಿರಿಕ್ ಬುದ್ಧಿಯನ್ನು ಪ್ರದರ್ಶಿಸಿದೆ. ಅರುಣಾಚಲ ಪ್ರದೇಶ (Arunachal Pradesh), ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ ‘ಸ್ಟ್ಯಾಂಡರ್ಡ್ ಮ್ಯಾಪ್’ನ 2023ರ ಆವೃತ್ತಿಯನ್ನು ಚೀನಾ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಅರುಣಾಚಲ ಪ್ರದೇಶದ ಮೇಲೆ ತನ್ನ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವ ಪ್ರಯತ್ನ ಮಾಡಲಾಗಿದೆ.

    ಚೀನಾ ಸ್ಟ್ಯಾಂಡರ್ಡ್ ಮ್ಯಾಪ್‌ನ (Standard Map) 2023ರ ಆವೃತ್ತಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯವು ಸ್ಟ್ಯಾಂಡರ್ಡ್ ಮ್ಯಾಪ್ ಅನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಯೇ ವಿಶೇಷ ರಾಜ್ಯ ಸ್ಥಾನಮಾನ ರದ್ದುಪಡಿಸಲು ಪ್ರೇರೇಪಿಸಿತು: ಸುಪ್ರೀಂಗೆ ಕೇಂದ್ರ

    ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿರುವ ನಕ್ಷೆಯಲ್ಲಿ 1962ರ ಯುದ್ಧದಲ್ಲಿ ಅಕ್ಸಾಯ್ ಚಿನ್ ಆಕ್ರಮಿಸಿಕೊಂಡಿದ್ದು, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಂಡಿದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಅವಿಭಾಜ್ಯ ಅಂಗವಾಗಿ ಉಳಿಯುತ್ತದೆ ಎಂದು ಭಾರತ ಸರ್ಕಾರ ಒತ್ತಿ ಹೇಳಿತ್ತಿರುವಾಗಲೂ ಚೀನಾ ಈ ಪ್ರಯತ್ನಕ್ಕೆ ಕೈ ಹಾಕಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರ ಕ್ರಮ

    ನಕ್ಷೆಯು ತೈವಾನ್ ಅನ್ನು ಚೀನಾವು ತನ್ನ ಮುಖ್ಯ ಭೂಭಾಗದ ಭಾಗವೆಂದು ಹೇಳಿಕೊಂಡಿದೆ ಮತ್ತು ಮುಖ್ಯ ಭೂಭಾಗದೊಂದಿಗೆ ವಿಲೀನಗೊಳ್ಳುವುದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಅವರ ಗುರಿಯಾಗಿದೆ. ಆದರೆ ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನೈ ಮತ್ತು ತೈವಾನ್ ದಕ್ಷಿಣ ಚೀನಾ ಸಮುದ್ರದಲ್ಲಿ ಪ್ರತಿವಾದ ಹಕ್ಕುಗಳನ್ನು ಹೊಂದಿವೆ. ಇದನ್ನೂ ಓದಿ: ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಜಾಮೀನು ನೀಡಿದ್ದಕ್ಕೆ ಹೈಕೋರ್ಟ್ ಕಿಡಿ

    21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಜಾಮೀನು ನೀಡಿದ್ದಕ್ಕೆ ಹೈಕೋರ್ಟ್ ಕಿಡಿ

    ಇಟಾನಗರ್: ವಸತಿ ಶಾಲೆಯ ವಾರ್ಡ್‍ನ್ ಒಬ್ಬ 21 ಶಾಲಾ (School) ವಿದ್ಯಾರ್ಥಿಗಳ (Student) ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಗುವಾಹಟಿ ಹೈಕೋರ್ಟ್  (High Court) ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಆರೋಪಿಗೆ ಪೋಕ್ಸೋ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದು ಪಡಿಸಿದೆ.

    6 ರಿಂದ 12 ವರ್ಷ ವಯಸ್ಸಿನ 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಹಾಸ್ಟೆಲ್ ವಾರ್ಡನ್ ಯುಮ್ಕೆನ್ ಬಾಗ್ರಾ ಎಂಬಾತ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಜಾಮೀನಿನ ಮೇಲೆ ಹೊರಗಿದ್ದಾನೆ. ಈ ವಿಚಾರ ಮುಖ್ಯ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠದ ಗಮನಕ್ಕೆ ಬಂದಿದ್ದು ಕೆಳ ಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಇದನ್ನೂ ಓದಿ: ಮುತ್ತು ಕೊಡುವ ವೇಳೆ ನೆನಪಾದ ಸೇಡು – ಗಂಡನ ನಾಲಿಗೆಗೆ ಹಲ್ಲಿನಲ್ಲೇ ಕತ್ತರಿ

    ಆರೋಪಿ 2019 ರಿಂದ 2022ರ ನಡುವೆ 6 ರಿಂದ 12 ವರ್ಷ ವಯಸ್ಸಿನ 21 ಮಕ್ಕಳ ಮೇಲೆ (15 ಬಾಲಕಿಯರು ಮತ್ತು 6 ಬಾಲಕರು) ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹೆಚ್ಚಿನ ಮಕ್ಕಳ ವೈದ್ಯಕೀಯ ವರದಿಗಳಲ್ಲಿ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ. ಆದರೂ ಫೆಬ್ರವರಿ 23 ರ ಜಾಮೀನು ಆದೇಶವನ್ನು ಪರಿಶೀಲಿಸಿದಾಗ ವಿಶೇಷ ಪೋಕ್ಸೋ ನ್ಯಾಯಾಲಯವು 2012ರ ಪೋಕ್ಸೊ ಕಾಯಿದೆಯ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಡ್ಡಾಯ ನಿಬಂಧನೆಗಳನ್ನು ನಿರ್ಲಕ್ಷಿಸಿದೆ ಎಂದು ಹೈಕೋರ್ಟ್ ಚಾಟಿ ಬೀಸಿದೆ. ಅಲ್ಲದೇ ಅರುಣಾಚಲ ಅಡ್ವೊಕೇಟ್ ಜನರಲ್ ಕುಟುಂಬದ ಸದಸ್ಯರಿಗೆ ಸಂಪೂರ್ಣ ಭದ್ರತೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ.

    ಆರೋಪಿ ಸುಮಾರು 3 ವರ್ಷಗಳ ಅವಧಿಯಲ್ಲಿ ಅಮಾನುಷ ರೀತಿಯಲ್ಲಿ ವರ್ತಿಸಿ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇಂತಹ ಗಂಭೀರ ವಿಚಾರವಿದ್ದಾಗ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕಾಯಬೇಕಾಗಿಲ್ಲ. ವಿಚಾರಣೆಗಳನ್ನು ಪ್ರತ್ಯೇಕಿಸುವ ಮೂಲಕವೂ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

    ವಿಶೇಷ ನ್ಯಾಯಾಧೀಶರು ನೀಡಿದ ಆದೇಶವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅಸ್ಸಾಂನ ಪೋಕ್ಸೋ (POCSO) ನ್ಯಾಯಾಲಯಗಳಲ್ಲಿ ನಿಯೋಜಿಸಲಾದ ವಿಶೇಷ ನ್ಯಾಯಾಧೀಶರನ್ನು ಸಂವೇದನಾಶೀಲಗೊಳಿಸುವ ತುರ್ತು ಅಗತ್ಯವಿದೆ ಎಂದು ಪೀಠ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ ನ್ಯಾಯಾಂಗ ಅಧಿಕಾರಿಗಳಿಗೆ ಶೀಘ್ರದಲ್ಲೇ ತರಬೇತಿ ಆಯೋಜಿಸಲಿರುವುದಾಗಿ ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ: 5 ವರ್ಷಗಳಲ್ಲಿ ಕಾನೂನು ಹೋರಾಟಕ್ಕೆ ಕೇಂದ್ರ ಖರ್ಚು ಮಾಡಿದ್ದೆಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಅಮಿತ್ ಶಾ

    ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಅಮಿತ್ ಶಾ

    – ಅಮಿತ್ ಶಾ ಭೇಟಿಗೆ ಚೀನಾ ವಿರೋಧ

    ಇಟಾನಗರ: ಅರುಣಾಚಲ ಪ್ರದೇಶ ಭೇಟಿಗೆ ಚೀನಾ (China) ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದರು.

    ಅರುಣಾಚಲ ಪ್ರದೇಶದ (Arunachal Pradesh) ಗಡಿ ಗ್ರಾಮವಾದ ಕಿಬಿತೂದಿಂದ ವೈಬ್ರಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲು ಸಾಧ್ಯವಿಲ್ಲ. 2014ರ ಮೊದಲು, ಇಡೀ ಈಶಾನ್ಯ ಪ್ರದೇಶವು ಪ್ರಕ್ಷುಬ್ಧ ಪ್ರದೇಶವೆಂದು ಕರೆಯಲ್ಪಟ್ಟಿತು. ಆದರೆ ಕಳೆದ 9 ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ಯೋಜನೆಯಿಂದಾಗಿ, ಈಶಾನ್ಯವನ್ನು ಈಗ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರದೇಶವೆಂದು ಪರಿಗಣಿಸಲಾಗಿದೆ ಎಂದು ಹೇಳಿದರು.

    ಐಟಿಬಿಪಿ ಯೋಧರು ಹಾಗೂ ಸೇನೆಯು ನಮ್ಮ ಗಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರಣದಿಂದ ಇಂದು ದೇಶದ ಜನರು ಅವರ ಮನೆಗಳಲ್ಲಿ ಶಾಂತಿಯುತವಾಗಿ ಮಲಗಲು ಸಾಧ್ಯವಾಗಿದೆ ಎಂದು ಇಂದು ನಾವು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದು ಸೇನೆ ಹಾಗೂ ಗಡಿ ಪೊಲೀಸರನ್ನು ಶ್ಲಾಘಿಸಿದರು.

    ಕಳೆದ ವಾರ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳನ್ನು ಚೀನಾ ತನ್ನ ಭೂಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಮೂಲಕ ಮರುನಾಮಕರಣ ಮಾಡಿದೆ. ಅಷ್ಟೇ ಅಲ್ಲದೇ ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯನ್ನು ಚೀನಾ ದೃಢವಾಗಿ ವಿರೋಧಿಸುತ್ತದೆ. ಈ ಪ್ರದೇಶದಲ್ಲಿ ಅವರ ಚಟುವಟಿಕೆಗಳು ಬೀಜಿಂಗ್‍ನ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ಇದನ್ನೂ ಓದಿ: `ನಂದಿನಿ’ ನಮ್ಮವಳು – ನಮ್ಮ ಹಾಲು ನಮ್ಮ ಬದುಕು; ನಂದಿನಿ ಉಳಿಸಿ ಎಂದ ಡಿಕೆಶಿ

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರ ವಾಂಗ್ ವೆನ್ಬಿನ್ ಮಾತನಾಡಿ, ಜಾಂಗ್ನಾನ್ ಚೀನಾದ ಪ್ರದೇಶವಾಗಿದೆ. ಜಂಗ್ನಾನ್‍ಗೆ ಭಾರತೀಯ ಅಧಿಕಾರಿಯ ಭೇಟಿಯು ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ. ಗಡಿ ಪರಿಸ್ಥಿತಿಯ ಶಾಂತಿ ಮತ್ತು ನೆಮ್ಮದಿಗೆ ಅನುಕೂಲಕರವಾಗಿಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ನನಗೆ ಟಿಕೆಟ್ ಸಿಗೋ ವಿಶ್ವಾಸವಿದೆ, ಯಾರಿಗೆ ಸಿಕ್ಕಿದ್ರೂ ಒಟ್ಟಾಗಿ ಕೆಲಸ ಮಾಡ್ತೀವಿ: ಸ್ವರೂಪ್

  • ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ

    ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ

    ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ಈ ಮೂಲಕ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾವು (China) ಇದು ಮೂರನೇ ಬಾರಿಗೆ ಮರುನಾಮಕರಣ ಮಾಡಿದೆ. ಅದನ್ನು ಜಂಗ್ನಾನ್, ಟಿಬೆಟ್‍ನ ದಕ್ಷಿಣ ಭಾಗ (Southern Tibet) ಎಂದು ಕರೆದಿದೆ.

    ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಸೋಮವಾರ ಚೀನಾದ ಕ್ಯಾಬಿನೆಟ್, ಸ್ಟೇಟ್ ಕೌನ್ಸಿಲ್ ನೀಡಿದ ಭೌಗೋಳಿಕ ಹೆಸರುಗಳ ಮೇಲಿನ ನಿಯಮಗಳಿಗೆ ಅನುಸಾರವಾಗಿ ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಬಿಡುಗಡೆ ಮಾಡಿದೆ. ಚೀನಾ ಬಿಡುಗಡೆ ಮಾಡಿರುವ ಹೆಸರುಗಳ ಪಟ್ಟಿಯಲ್ಲಿ ಅರುಣಾಚಲ ಪ್ರದೇಶದ 5 ಪರ್ವತ ಶಿಖರಗಳು, 2 ಭೂ ಪ್ರದೇಶಗಳು, 2 ವಸತಿ ಪ್ರದೇಶಗಳು ಮತ್ತು 2 ನದಿಗಳು ಸೇರಿವೆ.

    ಈ ಮೊದಲು 2018 ಹಾಗೂ 2021ರಲ್ಲಿ ಮೊದಲ 2 ಪಟ್ಟಿಗಳನ್ನು ಚೀನಾ ಬಿಡುಗಡೆ ಮಾಡಿತ್ತು. 2018ರಲ್ಲಿ 6 ಹೆಸರಗಳನ್ನು ಹಾಗೂ 2021ರಲ್ಲಿ ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಮರುನಾಮಕರಣ ಮಾಡಿತ್ತು. ಇದನ್ನೂ ಓದಿ: ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ – ಸಾತನೂರಿಗೆ ಐಜಿಪಿ ಭೇಟಿ

    ಈ ಹಿಂದೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, ಚೀನಾವು ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವುದರಿಂದ ಈ ಸತ್ಯವನ್ನು ಬದಲಾಯಿಸುವುದಿಲ್ಲ ಎಂದು ತಿಳಿಸಿದ್ದರು. ಆದರೆ ಈ ಹೇಳಿಕೆಯನ್ನ ಚೀನ ಬಲವಾಗಿ ತಿರಸ್ಕರಿಸಿತ್ತು. ಇದನ್ನೂ ಓದಿ: ಅಬಕಾರಿ ಇಲಾಖೆ ಅಧಿಕಾರಿಗಳಿಂದ ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ