Tag: ಅರುಣ್ ಅಮುಕ್ತ

  • ಮೂವರ ನಾಯಕರ ಪೈಕಿ ಒಬ್ಬರಿಗೆ ಅಮ್ಮನಾದ ಭವ್ಯಾ

    ಮೂವರ ನಾಯಕರ ಪೈಕಿ ಒಬ್ಬರಿಗೆ ಅಮ್ಮನಾದ ಭವ್ಯಾ

    ತೊಂಭತ್ತರ ದಶಕದ ಆಚೀಚಿನ ದಿನಮಾನಗಳಲ್ಲಿ ನಾಯಕಿಯಾಗಿ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದವರು ಭವ್ಯ. ಘಟಾನುಘಟಿ ನಾಯಕರ ಜೊತೆಯಲ್ಲಿ ನಟಿಸಿ, ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸುತ್ತಾ ಕನ್ನಡದ ಪ್ರೇಕ್ಷಕರ ಮನಗೆದ್ದಿದ್ದ ಅವರು, ಒಂದಷ್ಟು ಕಾಲದವರೆಗೆ ನಟನೆಯಿಂದ ದೂರ ಸರಿದಿದ್ದರು. ಆದರೂ ಕಲಾ ಜಗತ್ತಿನಲ್ಲಿ ನಾನಾ ಆಯಾಮಗಳಲ್ಲಿ ತೊಡಗಿಸಿಕೊಂಡಿರುವ ಭವ್ಯಾ, ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ (Vidyarthi Vidyarthiniyare) ಚಿತ್ರದಲ್ಲಿ ಚೆಂದದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಗಿಸಿಕೊಂಡ ಖುಷಿಯಲ್ಲಿ ಈ ಸಿನಿಮಾದ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿದೆ. ಅದರಲ್ಲಿ ಭಾಗಿಯಾಗಿದ್ದ ಭವ್ಯಾ ತಮ್ಮ ಪಾತ್ರದ ಬಗ್ಗೆ, ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿದ್ದಾರೆ. ಈವರೆಗೂ ನಾನಾ ಬಗೆಯ ಕ್ರಿಯಾಶೀಲತೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿರುವ ಈ ಸಿನಿಮಾವೀಗ ಚಿತ್ರೀಕರಣ ಮುಗಿಸಿಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ಸಮಾಪ್ತಿಯಾಗುತ್ತಲೇ ಕುಂಬಳಕಾಯಿ ಒಡೆಯಲಾಗಿದೆ. ಇದೀಗ ಪೋಸ್ಟ್ ಪ್ರಡಕ್ಷನ್ ಕಾರ್ಯಗಳಿಗೆ ಚಾಲನೆ ಕೊಟ್ಟಿರುವ ಚಿತ್ರತಂಡ, ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮ ಮಂದಿಯನ್ನು ಮುಖಾಮುಖಿಯಾಗಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ.

    ಇದರಲ್ಲಿ ಭಾಗಿಯಾಗಿದ್ದ ಭವ್ಯಾ (Bhavya) ನಿರ್ದೇಶಕ ಅರುಣ್ ಅಮುಕ್ತಾರನ್ನು ಮುಕ್ತಕಂಠದಿಂದ ಮೆಚ್ಚಿಕೊಂಡಿದ್ದಾರೆ. ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಅರುಣ್ ವಿದ್ಯಾರ್ಥಿಯಾಗಿದ್ದಾಗ ಭವ್ಯಾ ಅವರ ಪ್ರಿನ್ಸಿಪಾಲ್ ಆಗಿದ್ದರಂತೆ. ತನ್ನ ವಿದ್ಯಾರ್ಥಿಯೊಬ್ಬ ಈ ಮಟ್ಟಕ್ಕೆ ಬೆಳೆದ ಖುಷಿ ಮತ್ತು ಆತನ ಚಿತ್ರದಲ್ಲಿಯೇ ಪಾತ್ರವಾಗುವ ಥ್ರಿಲ್ ನೊಂದಿಗೆ ಭವ್ಯಾ ನಟಿಸಲು ಒಪ್ಪಿಕೊಂಡಿದ್ದರಂತೆ. ಅಂದಹಾಗೆ ಇಲ್ಲ, ಅವರ ಮೂವರು ನಾಯಕರಲ್ಲಿ ಓರ್ವನ ತಾಯಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರವನ್ನು ಅನುಭವಿಸಿ ನಟಿಸಿದ್ದಾಗಿ ಹೇಳಿಕೊಂಡಿರುವ ಭವ್ಯಾ, ಈ ಸಿನಿಮಾ ಪ್ರೇಕ್ಷಕರಿಗೆಲ್ಲ ಹಿಡಿಸಿ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲೆಂದು ಹಾರೈಸಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಐವತ್ತು ದಿನಗಳ ಕಾಲ ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಸಂಪೂರ್ಣಗೊಳಿಸಿಕೊಂಡಿದೆ. ಹೀಗೆ ಕುಂಬಳಕಾಯಿ ಒಡೆದ ಬಳಿಕ ಪತ್ರಿಕಾಗೋಷ್ಠಿಯೊಂದನ್ನು ಚಿತ್ರತಂಡ ಆಯೋಜಿಸಿತ್ತು. ಅಚ್ಚುಕಟ್ಟಾಗಿ ನಡೆದ ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಿಡೀ ಚಿತ್ರತಂಡ ಹುರುಪಿನಿಂದ ಭಾಗಿಯಾಗಿತ್ತು. ವಿಶೇಷವೆಂದರೆ, ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೇ ಆ ಬಗೆಗಿನ ಬೆರಗು ಮೂಡಿಸುವ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಸಿನಿಮಾ ಹೆಸರೇ ಸೂಚಿಸುವಂತೆ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರ ಜಗತ್ತಿನಲ್ಲಿ ಕದಲುವ ಕಥಾನಕವನ್ನೊಳಗೊಂಡಿದೆ. ಪ್ರಸ್ತಿತ ಸನ್ನಿವೇಶದಲ್ಲಿನ ಯುವ ಸಮುದಾಯದ ಮನಃಸ್ಥಿತಿಗೆ ಕನ್ನಡಿ ಹಿಡಿಯುವಂಥಾ ಯೂಥ್ ಫುಲ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇತ್ತೀಚಿನ ದಿನಗಳಲ್ಲಿ ನಟನೆಯಲ್ಲಿ ಬ್ಯುಸಿಯಾಗುತ್ತಿರುವ ಪ್ರಶಾಂತ್ ಸಂಬರ್ಗಿ ಇಲ್ಲಿ ರಗಡ್ ಲುಕ್ಕಿನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರಂತೆ. ಸದರಿ ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದ ಸಂಬರ್ಗಿ (Prasanth Sambaragi) ತಮ್ಮ ಪಾತ್ರದ ಬಗ್ಗೆ ಕೆಲ ಅಂಶಗಳನ್ನು ಬಿಚ್ಚಿಡುತ್ತಲೇ, ನಿರ್ದೇಶಕ ಅರುಣ್ ಅಮುಕ್ತ ಅವರ ಕಾರ್ಯವೈಖರಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ.

    ಅಂದಹಾಗೆ, ಇಲ್ಲಿ ಪ್ರಶಾಂತ್ ಸಂಬರ್ಗಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಒಟ್ಟಾರೆ ಚಿತ್ರೀಕರಣದ ಸಂದರ್ಭದಲ್ಲಿ ಚಿತ್ರತಂಡದ ಸಿನಿಮಾ ಪ್ರೇಮ ಕಂಡು ಅವರು ಖುಷಿಕೊಂಡಿದ್ದಾರೆ. ಅದರಲ್ಲಿಯೂ ನಿರ್ಮಾಪಕರುಗಳು ಯಾವುದಕ್ಕೂ ಕಡಿಮೆಯಾಗದಂತೆ ನೋಡಿಕೊಂಡು ಕಾರ್ಪೋರೇಟ್ ಶೈಲಿಯಲ್ಲಿ ಈ ಸಿನಿಮಾವನ್ನು ಪೊರೆದ ರೀತಿಗೆ ಸಂಬರ್ಗಿ ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟಲ್ಲದೇ ಈ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೆಲ್ಲರೂ ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳುತ್ತಾರೆಂಬ ಭರವಸೆಯನ್ನೂ ಕೂಡಾ ಪ್ರಶಾಂತ್ ಸಂಬರ್ಗಿ ವ್ಯಕ್ತಪಡಿಸಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಮಹತ್ವದ ಘಟ್ಟ ತಲುಪಿಕೊಂಡಿದೆ. ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡು, ಕುಂಬಳಕಾಯಿ ಒಡೆದಾದ ನಂತರ ಪತ್ರಿಕಾ ಗೋಷ್ಠಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿ ಕೆಲ ಮಹತ್ವದ ಅಂಶಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಪಾತ್ರಗಳನ್ನು ಪರಿಚಯಿಸುವ ವಿಟಿ ಪ್ರದರ್ಶಿಸಿದ್ದಲ್ಲದೇ, ಆಯಾ ಪಾತ್ರಗಳನ್ನು ನಿರ್ವಹಿಸಿಸಿರುವ ಕಲಾವಿದರೇ, ಆ ಬಗೆಗಿನ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ಮೂಲಕವೇ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಸಿನಿಮಾದ ಸುತ್ತ ತೀವ್ರವಾದ ಕುತೂಹಲವೊಂದು ಕಾವುಗಟ್ಟಿಕೊಂಡಿದೆ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗಯ್ಯ ನಿರ್ಮಾಣ ಮಾಡಿರುವ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ. ನಿರ್ದೇಶಕ ಅರುಣ್ ಅಮುಕ್ತ ಅತ್ಯಂತ ವ್ಯವಸ್ಥಿತವಾಗಿ ಇದರ ಚಿತ್ರೀಕರಣವನ್ನು ಮಾಡಿ ಮುಗಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ನಿರಂತವಾಗಿ ಚಿತ್ರೀಕರಣ ನಡೆದಿದೆ. ಅಂದಹಾಗೆ, ಈ ಚಿತ್ರದ ಪ್ರಧಾನ ಪಾತ್ರವೊಂದರಲ್ಲಿ ಹಿರಿಯ ನಟ ಸುನೀಲ್ ಪುರಾಣಿಕ್ ನಟಿಸಿಇದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಅವರು, ಈ ಪಾತ್ರದ ಹಿಂಚುಮುಂಚಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ನಿರ್ದೇಶಕ ಅರುಣ್ ಅಮುಕ್ತ ಸುನೀಲ್ ಪುರಾಣಿಕ್ (Sunil Puranik) ಅವರ ಗರಡಿಯಲ್ಲಿಯೇ ಪಳಗಿಕೊಂಡಿರುವವರು. ಪುರಾಣಿಕ್ ನಿರ್ದೇಶನದ ಧಾರಾವಾವಾಹಿಗಳ ನಿರ್ದೇಶನ ವಿಭಾಗದಲ್ಲಿ ದುಡಿದಿದ್ದ ಅರುಣ್ ಒಂದು ಸಿನಿಮಾ ಮಾಡೋದಾಗಿ ಹೇಳಿ, ಅದರಲ್ಲೊಂದು ಪಾತ್ರದ ಬಗ್ಗೆ ವಿವರಿಸಿ, ಅದನ್ನು ನೀವೇ ಮಾಡಬೇಕು ಎಂದಾಗ ಸುನಿಲ್ ಪುರಾಣಿಕ್ ಥ್ರಿಲ್ ಆಗಿದ್ದರಂತೆ. ಅದು ವಿಲನ್ ಗಿರಿ, ಭಾವುಕತೆ ಸೇರಿದಂತೆ ಎಲ್ಲ ರಸಗಳನ್ನೂ ಎರಕ ಹೊಯ್ದಂಥಾ ಪಾತ್ರ. ಅದಕ್ಕೆ ತಕ್ಕುದಾದ ರೀತಿಯಲ್ಲಿ ತಯಾರಿ ನಡಸಿ ಜೀವ ತುಂಬಿರುವ ಖುಷಿ ಸುನೀಲ್ ಅವರಲ್ಲಿದೆ. ಜೊತೆಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ರೂಪಿಸಿರುವ ರೀತಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮದ ಬಗ್ಗೆಯೂ ಸುನೀಲ್ ಪುರಾಣಿಕ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ತಾಜಾ ಸಮಾಚಾರ ಕೇಳಿ ಎಂದ ಟೀಮ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ತಾಜಾ ಸಮಾಚಾರ ಕೇಳಿ ಎಂದ ಟೀಮ್

    ರುಣ್ ಅಮುಕ್ತ (Arun Amukta) ನಿರ್ದೇಶನದ, ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥಾ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದದ್ದು ವಿಶೇಷ.

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಅವರೆಲ್ಲರೂ ಸಿನಿಮಾದ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಕೊಳ್ಳುವಂತೆ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವಿಡಿಯೋ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸೋ ವೀಟಿಯನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಲಾಯಿತು.

    ನಿರ್ದೇಶಕ ಅರುಣ್ ಅಮುಕ್ತ ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ ಕಶ್ಯಪ್ ಮಾಹಿತಿ ನೀಡಿದರು. ಕುಂಬಳ ಕಾಯಿ ಒಡೆದಾದ ನಂತರದಲ್ಲೀಗ ಬಿರುಸಿನಿಂದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ಜೂನ್ ಹೊತ್ತಿಗೆಲ್ಲ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲಿಯೇ ಈ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳ ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ಚಂದನ್ ಅವರಲ್ಲಿದೆ. ಆ ಬಗ್ಗೆ ಚಿತ್ರತಂಡದಲ್ಲೂ ಒಂದು ಮೆಚ್ಚುಗೆ ಇದ್ದೇ ಇದೆ.

     

    ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ರಿಲೀಸ್ ಮಾಡಿದ ನಿವೇದಿತಾ

    ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ರಿಲೀಸ್ ಮಾಡಿದ ನಿವೇದಿತಾ

    ಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ (Chandan Shetty) ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ  (Niveditha Gowda) ಬಿಡುಗಡೆಗೊಳಿಸಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿಯ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್ಪಿನ ಸುತ್ತ ಒಟ್ಟಾರೆ ಕಥೆಯ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ.

    ಈ ವಿಆರ್ ಪೋಸ್ಟರ್ (ವರ್ಚುವಲ್ ರಿಯಾಲಿಟಿ ಪೋಸ್ಟರ್ ಅಂತೂ ಈಗಿನ ಜನರೇಷನ್ನಿನ ಹುಡುಗರಿಗೆ ನೇರಾನೇರ ಕನೆಕ್ಟಾಗುವಂತಿದೆ. ಚಂದನ್ ಶೆಟ್ಟಿಯ ಗೆಟಪ್ಪು ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆಯನ್ನು ಒಳಗೊಂಡಿರಬಹುದಾ? ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರಿನಲ್ಲಿ ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲಕ್ಕು ಪಾತ್ರಗಳು ಎದುರುಗೊಂಡಿದ್ದವು. ಚಂದನ್ ಪಾತ್ರ ಕೈಯಲ್ಲಿ ವಿಆರ್ ಅನ್ನು ಹಿಡಿದುಕೊಂಡಿದೆ. ಇದೆಲ್ಲವನ್ನೂ ಕಂಡ ಪ್ರೇಕ್ಷಕರಿಗೆ ಇದೊಂದು ಈ ಕಾಲಮಾನದ ಆವೇಗ ಬಚ್ಚಿಟ್ಟುಕೊಂಡಿರುವ ಕಥೆಯೆಂಬ ವಿಚಾರವನ್ನು ದಾಟಿಸಿದೆ. ನಿಖರವಾಗಿ ಹೇಳಬೇಕೆಂದರೆ, ಈ ವಿಆರ್ ಪೋಸ್ಟರ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರತ್ತ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುವಂತಿದೆ.

     

    ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟ ತಲುಪಿಕೊಂಡಿದೆ.

  • ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಗಾಯಕ ಚಂದನ್ ಶೆಟ್ಟಿ (Chandan Shetty) ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತೂಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾಗಿದ್ದರಿಂದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyere ) ಎಂಬ ಶಿರ್ಷಿಕೆಯನ್ನಿಡಲಾಗಿದೆ (Title). ಅದನ್ನು ವಿದ್ಯಾರ್ಥಿಗಳೇ ಬಿಡುಗಡೆಗೊಳಿಸಿ ಸಂಭ್ರಮಿಸಿದ್ದಾರೆ.

    ಇದು ಯುವ ನಿರ್ದೇಶಕ ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ. ಈ ಹಿಂದೆ ಶ್ರೀಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದವರು ಅರುಣ್. ಅವರೀಗ ಈ ದಿನಮಾನದ ಟ್ರೆಂಡಿಗೆ ತಕ್ಕಂತೆ, ಹೊಸಾ ಬಗೆಯ ಕಥಾನಕದೊಂದಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರಂತೆ. ಈ ಶೀರ್ಷಿಕೆಯ ಅನಾವರಣದ ವಿಚಾರದಲ್ಲಿಯೇ ಚಿತ್ರತಂಡ ಒಂದಷ್ಟು ಕ್ರಿಯಾಶೀಲ ನಡೆಯನ್ನು ಅನುಸರಿಸಿದೆ. ರಾಜ್ಯದ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಈ ಶೀರ್ಷಿಕೆ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಂತಹ ಚಿತ್ರಗಳು ದೊಡ್ಡ ಪ್ರಮಾಣದಲ್ಲಿಯೇ ಗೆಲುವು ದಾಖಲಿಸಿದ್ದವು. ಆ ನಂತರ ಒಂದಷ್ಟು ವರ್ಷಗಳ ಕಾಲ ಆ ಶೈಲಿಯ ಸಿನಿಮಾಗಳು ಬಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡೇರ್ ಡೆವಿಲ್ ಮುಸ್ತಫಾದಂತಹ ಕಾಲೇಜು ಕೇಂದ್ರಿತ ಕಥನಗಳು ಸೂಪರ್ ಹಿಟ್ ಆಗಿವೆ. ಈ ಮೂಲಕ ಆ ಬಗೆಯ ಸಿನಿಮಾಗಳ ಕೊರತೆ ಒಂದು ಮಟ್ಟಿಗೆ ನೀಗಿದಂತಾಗಿದೆ. ಈ ಸಾಲಿನಲ್ಲಿ ದೊಡ್ಡ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಕನಸು, ಭರವಸೆಯೊಂದಿಗೆ, ಅರುಣ್ ಅಮುಕ್ತ ಸಾರಥ್ಯದಲ್ಲಿ ಈ ತಂಡ ಅಖಾಡಕ್ಕಿಳಿದಿದೆ. ಅಂದಹಾಗೆ, ಈ ಬಗೆಯ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವಂಥಾ ಅನೇಕ ಅಂಶಗಳು ಈ ಚಿತ್ರದಲ್ಲಿರಲಿವೆ ಎಂಬುದು ಚಿತ್ರತಂಡದ ಮಾತು.

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

     

    ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ಒಂದಷ್ಟು ಮಹತ್ವದ ಸುದ್ದಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]