ಮಂಡ್ಯ: ಶಿಲ್ಪಿಗಳು ಅಥವಾ ಸರ್ಕಾರಿ ದೇವಸ್ಥಾನಗಳ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಾಸ್ತು ಶಿಲ್ಪಕಲೆಯಲ್ಲಿ ಪದವಿ ಪ್ರಮಾಣ ಪತ್ರ ನೀಡಬೇಕಾಗುತ್ತದೆ. ನಾವು ಕೆಲಸದಲ್ಲಿ ಎಷ್ಟೇ ಪರಿಣಿತರಾದರೂ ಪದವಿ ಪ್ರಮಾಣ ಪತ್ರವಿಲ್ಲದಿದ್ದರೇ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ದೇವಾಲಯದ ಶಿಲ್ಪಕಲೆ ಪದವಿ ಕಾಲೇಜಿನ (Sculpture Degree College) ಅಗತ್ಯವಿದೆ ಎಂದು ಬಾಲರಾಮನ ಮೂರ್ತಿ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಹೇಳಿದ್ದಾರೆ.
ಮಂಡ್ಯ (Mandya) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಶಿಲ್ಪಕಲೆಯ ನಾಡು ಕಲೆಗಳ ಬೀಡು ಎಂದು ನಮ್ಮ ರಾಜ್ಯವನ್ನು ಕರೆಯುತ್ತೇವೆ. ನಮ್ಮಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ – ವಿಜಯೇಂದ್ರ ಆಗ್ರಹ
ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ, ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ. ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು. ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ಅಸ್ತಿತ್ವ ಕಾಪಾಡಿಕೊಂಡಿವೆ. ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತವೆ. ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲ, ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಮತ್ತು ಶ್ರಮಕ್ಕೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: Bharat Mobility Global Expo | ವಿನೂತನ ವಾಹನಗಳ ವಿಶ್ವರೂಪವನ್ನೇ ನೋಡ್ತಿದ್ದೇನೆ: ಹೆಚ್‌ಡಿಕೆ
ಮೈಸೂರು: ಚಾಮುಂಡಿ ಬೆಟ್ಟ (Chamundi Hill) ನಮ್ಮ ಸಂಸ್ಥಾನಕ್ಕೆ ಸೇರಿದ್ದು ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಹೇಳಿದ್ದಾರೆ.
ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ (Temple) ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.
ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ತಿರಸ್ಕೃತವಾಗಿದೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕೇಂದ್ರ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಾಲ ರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಣೆ
ಮೈಸೂರು: ಅಯೋಧ್ಯೆಯಲ್ಲಿ (Ayodhya Ram Mandir) ಬಾಲ ರಾಮನ ಮೂರ್ತಿಯನ್ನು ಕೆತ್ತಿದ್ದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರಿಗೆ ಅಮೆರಿಕ (USA) ವೀಸಾ ನೀಡಲು ನಿರಾಕರಿಸಿದೆ.
ಹೌದು. ಅಮೇರಿಕದಲ್ಲಿರುವ ಕನ್ನಡಿಗರು ನಡೆಸುವ 12ನೇ ವಿಶ್ವ ಅಕ್ಕ (Association of Kannada Kootas of America -AKKA) ಸಮ್ಮೇಳನದ ಮುಖ್ಯ ಅತಿಥಿಯಾಗಿ ಅರುಣ್ ಯೋಗಿರಾಜ್ ಅಮೆರಿಕಕ್ಕೆ ತೆರಳಬೇಕಿತ್ತು. ಈ ಸಂಬಂಧ ಅವರು ವೀಸಾ (Visa) ಪಡೆಯಲು ಅರ್ಜಿ ಹಾಕಿದ್ದರು. ಈ ವೇಳೆ ಅವರಿಗೆ ಅಮೆರಿಕ ವೀಸಾ ನೀಡಲು ನಿರಾಕರಿಸಿದೆ. ಇದನ್ನೂ ಓದಿ: ನಾಗಾರಾಧನೆ ವೇಳೆ ಭಾವೋದ್ವೇಗಕ್ಕೆ ಒಳಗಾದ ಹಿರಿಯ ನಟಿ ಜ್ಯೋತಿ
ಅರುಣ್ ಯೋಗಿರಾಜ್ ಅವರ ಪತ್ನಿ ವಿಜೇತಾ ಅಮೆರಿಕಕ್ಕೆ ತೆರಳಿದ್ದಾರೆ. ಆದರೆ ಯಾವ ಕಾರಣಕ್ಕೆ ಅರುಣ್ ಯೋಗಿರಾಜ್ ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದೆ ಎನ್ನುವುದು ತಿಳಿದು ಬಂದಿಲ್ಲ.
ಅಮೇರಿಕದ ವರ್ಜೀನಿಯಾದ ರಿಚ್‌ಮಂಡ್‌ನಲ್ಲಿರುವ ಗ್ರೇಟರ್ ರಿಚ್‌ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆ.30 ರಿಂದ ಸೆ. 1ರವರೆಗೆ ಅಕ್ಕ ಸಮ್ಮೇಳನ ಆಯೋಜನೆಗೊಂಡಿದೆ.
ಉಡುಪಿ: ಅಯೋಧ್ಯೆ ಬಾಲರಾಮನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರಿಗೆ ಹೊಯ್ಸಳ ಮಹಾಶಿಲ್ಪಿ ಮಲ್ಲಿತಮ್ಮ ರಾಷ್ಟ್ರೀಯ ಪ್ರಶಸ್ತಿ (Mallitamma Award) ನೀಡಿ ಗೌರವಿಸಲಾಗಿದೆ. ಕಟಪಾಡಿಯ ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠ ಈ ಪ್ರಶಸ್ತಿ ಪ್ರದಾನ ಮಾಡಿದೆ.
ಪ್ರಶಸ್ತಿ ಪಡೆದು ಮಾತನಾಡಿದ ಅರುಣ್ ಯೋಗಿರಾಜ್, ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ನಂತರ ಅನೇಕ ವಿದ್ವಾಂಸರು, ಹಿರಿಯರ ಸಂಪರ್ಕ ಹಾಗೂ ಆಶೀರ್ವಾದ ಸಿಗುತ್ತಿದೆ. ಅಮರನಾಥದ ಉದ್ಭವ ಶಿವಲಿಂಗದ ಮುಂದೆ ನಂದಿಯ ವಿಗ್ರಹ ರಚಿಸುವ ಅವಕಾಶ ಸಿಕ್ಕಿದೆ ಇದೆಲ್ಲವೂ ಪುಣ್ಯದ ಕಾರ್ಯ ಎಂದರು. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ
ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ 14ನೇ ವರ್ಷದ ವಧರ್ಂತ್ಯುತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಶಿಲ್ಪಕಲೆಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯುತ್ತಿದೆ. ಮೈಸೂರಿನ ಕಲಾವಿದ ಅರುಣ್ ಯೋಗಿರಾಜ್ ಅವರನ್ನು ಮುಖ್ಯ ಅತಿಥಿಯಾಗಿ ಆಯ್ಕೆ ಮಾಡಲಾಗಿತ್ತು.
ಅಯೋಧ್ಯೆ: ನಾಳೆ ರಾಮನವಮಿ (Rama Navami) ಹಬ್ಬದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ ವಿಶೇಷ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಮಲಲ್ಲಾ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ (Sculptor Arun Yogiraj) ಕುಟುಂಬ ಈಗಾಗಲೇ ಅಯೋಧ್ಯೆ ತಲುಪಿದೆ.
ಹೌದು. ರಾಮಂದಿರದಲ್ಲಿ ರಾಮಲಲ್ಲಾ (Rama Lalla) ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಮೊದಲ ರಾವನವಮಿ ಹಬ್ಬ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ (Ayodhya Ram Mandir) ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದಲ್ಲಿ ಭಾಗಿಯಾಗಲು ಅರುಣ್ ಕುಟುಂಬ ಆಗಮಿಸಿದೆ.
#WATCH | Ram Lalla idol sculptor Arun Yogiraj along with his family arrived in Ayodhya, Uttar Pradesh. pic.twitter.com/dJVojrjCHE
ಈ ಹಿಂದೆ ಬೆಂಗಳೂರಿನಲ್ಲಿ ಮಾತನಾಡಿದ್ದ ಶಿಲ್ಪಿ, ಜನವರಿ 22 ರ ಬಳಿಕ ಅಯೋಧ್ಯೆಗೆ ಭೇಟಿ ನೀಡಿಲ್ಲ. ಇದೀಗ ರಾಮಲಲ್ಲಾ ವಿಗ್ರಹವನ್ನು ವೀಕ್ಷಿಸಲು ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದೊಯ್ಯಲು ಉತ್ಸುಕನಾಗಿದ್ದೇನೆ. ಹೊಸ ಬಟ್ಟೆ ಖರೀದಿಸುವುದು ಸೇರಿದಂತೆ ತಮ್ಮ ಸಿದ್ಧತೆಗಳ ಜೊತೆಗೆ ತಮ್ಮ ಕುಟುಂಬ ಪ್ರವಾಸದ ಉತ್ಸಾಹವನ್ನು ಹಂಚಿಕೊಂಡಿದ್ದರು. ವಿಶೇಷವಾಗಿ ವಿಗ್ರಹದ ನೋಟದಲ್ಲಿನ ಬದಲಾವಣೆಗಳ ಬಗ್ಗೆ ಸ್ನೇಹಿತರಿಂದ ಕೇಳಿದ ನಂತರ ರಾಮಲಲ್ಲಾನನ್ನು (Rama Lalla) ಮತ್ತೆ ನೋಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದರು.
#WATCH | Ayodhya: Ram Lalla idol sculptor Arun Yogiraj says, "We are here for the first time after the 'pran pratishtha' ceremony. My family was very happy after seeing my work… We are anxiously waiting for the Ram Navami celebration…" https://t.co/CqdUoHkJ1Dpic.twitter.com/a87Nzf72qz
ನನ್ನ ಕುಟುಂಬದವರು ರಾಮಲಲ್ಲಾನನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ಹೇಳುತ್ತಾ ಇರುತ್ತಾರೆ. ಆದರೆ ನಾನು ಮುಂದೂಡುತ್ತಲೇ ಇದ್ದೆ. ಹಾಗಾಗಿ ಈ ಬಾರಿ ನಾನು ಅವರನ್ನು ಕರೆದುಕೊಂಡು ಹೋಗುತ್ತೇನೆ. ಅವರನ್ನು ಬಿಟ್ಟು ನಾನು ಅಯೋಧ್ಯೆಗೆ (Ayodhya) ಹೋದರೆ ಅವರು ನನ್ನನ್ನು ಶಿಕ್ಷಿಸುತ್ತಾರೆ ಎಂದು ನಗುತ್ತಲೇ ಅರುಣ್ ಅವರು ಹೇಳಿದ್ದರು. ಇದನ್ನೂ ಓದಿ: Ram Navami: ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡು
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ‘ಬೊಂಬಾಟ್ ಭೋಜನ’ದಲ್ಲಿ (Bombat Bhoja) ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ.
ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಹೇಳಿದ್ದಾರೆ.
ಬೊಂಬಾಟ್ ಭೋಜನದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು (Sihi Kahi Chandru)ರವರು ಅರುಣ್ ಯೋಗಿರಾಜ್ Arun Yogiraj ಗೆ ಗೌರವಾರ್ಪಣೆಯೊಂದಿಗೆ, ಸನ್ಮಾನಿಸಿದ್ದಾರೆ. ಜೊತೆಗೆ ಈ ವಿಶೇಷ ಸಂಚಿಕೆಯಲ್ಲಿ ಗಾಯಕರಾದ ಶ್ರೀ ಚಿನ್ಮಯಿ ಅತ್ರೇಯಸ್ ರವರು ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿ ಮನರಂಜಿಸಿದ್ದಾರೆ.
ಬೊಂಬಾಟ್ ಭೋಜನದಲ್ಲಿ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ (ಏ.17) ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Sculptor Arun Yogiraj) ಅವರು ಏಪ್ರಿಲ್ 17 ರಂದು ರಾಮನವಮಿ (Rama Navami) ಹಬ್ಬವನ್ನು ಅಯೋಧ್ಯೆಯಲ್ಲಿ ತಮ್ಮ ಕುಟುಂಬದೊಂದಿಗೆ ಆಚರಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜನವರಿ 22 ರ ಬಳಿಕ ಅಯೋಧ್ಯೆಗೆ ಭೇಟಿ ನೀಡಿಲ್ಲ. ಇದೀಗ ರಾಮಲಲ್ಲಾ ವಿಗ್ರಹವನ್ನು ವೀಕ್ಷಿಸಲು ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದೊಯ್ಯಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ.
ಹೊಸ ಬಟ್ಟೆ ಖರೀದಿಸುವುದು ಸೇರಿದಂತೆ ತಮ್ಮ ಸಿದ್ಧತೆಗಳ ಜೊತೆಗೆ ತಮ್ಮ ಕುಟುಂಬ ಪ್ರವಾಸದ ಉತ್ಸಾಹವನ್ನು ಹಂಚಿಕೊಂಡರು. ವಿಶೇಷವಾಗಿ ವಿಗ್ರಹದ ನೋಟದಲ್ಲಿನ ಬದಲಾವಣೆಗಳ ಬಗ್ಗೆ ಸ್ನೇಹಿತರಿಂದ ಕೇಳಿದ ನಂತರ ರಾಮಲಲ್ಲಾನನ್ನು (Rama Lalla) ಮತ್ತೆ ನೋಡಲು ತುಂಬಾ ಉತ್ಸುಕನಾಗಿದ್ದೇನೆ. ಇಂತಹ ಐತಿಹಾಸಿಕ ಸ್ಥಳಕ್ಕಾಗಿ ವಿಗ್ರಹವನ್ನು ಕೆತ್ತಲು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ
ನನ್ನ ಕುಟುಂಬದವರು ರಾಮಲಲ್ಲಾನನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ಹೇಳುತ್ತಾ ಇರುತ್ತಾರೆ. ಆದರೆ ನಾನು ಮುಂದೂಡುತ್ತಲೇ ಇದ್ದೆ. ಹಾಗಾಗಿ ಈ ಬಾರಿ ನಾನು ಅವರನ್ನು ಕರೆದುಕೊಂಡು ಹೋಗುತ್ತೇನೆ. ಅವರನ್ನು ಬಿಟ್ಟು ನಾನು ಅಯೋಧ್ಯೆಗೆ (Ayodhya) ಹೋದರೆ ಅವರು ನನ್ನನ್ನು ಶಿಕ್ಷಿಸುತ್ತಾರೆ ಎಂದು ನಗುತ್ತಲೇ ಅರುಣ್ ಅವರು ಹೇಳಿದರು.
ಇದೇ ವೇಳೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದನ್ನು ನೆನಪಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಕೃಪಾಶೀರ್ವಾದದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ವಿಧಿವಿಧಾನಗಳ ನಡುವೆ ವಿಗ್ರಹ ಅನಾವರಣಗೊಳಿಸಲಾಯಿತು ಎಂದರು.
ಕಾರವಾರ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಷನ್ ವತಿಯಿಂದ ಸೋಮವಾರ ಪ್ರತಿಷ್ಠಿತ “ಅಭಿನವ ಅಮರಶಿಲ್ಪಿ” ಬಿರುದು ನೀಡಿ ಗೌರವಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಗರ್ ದರ್ಶನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರನ್ನು ಪುರಸ್ಕರಿಸಲಾಯಿತು.
ದಾಂಡೇಲಿಯ ಮ್ಯಾಕ್ಸಿಲೋಫೇಷಿಯಲ್ ಸರ್ಜನ್ ಡಾ.ವಿಶ್ವನಾಥ ಹಿರೇಮಠ ಅವರು ಈ ಪ್ರತಿಷ್ಠಾನದ ನೇತೃತ್ವ ವಹಿಸಿಕೊಂಡಿದ್ದಾರೆ. ಇದು ರಾಜ್ಯದಾದ್ಯಂತ ಆಸ್ಪತ್ರೆಗಳ ಜಾಲವನ್ನು ಹೊಂದಿದೆ. ಮೈಸೂರು ಜಿಲ್ಲೆಯಿಂದ ತೆಗೆದುಕೊಂಡು ಹೋಗಿರುವ ಕೃಷ್ಣ ಶಿಲೆಯಿಂದ ಕೆತ್ತಿದ 51 ಇಂಚಿನ ರಾಮಲಲ್ಲಾನ ಮೂರ್ತಿಗೆ ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಅರುಣ್ ಯೋಗಿರಾಜ್ ಅವರು ಈ ಮೂರ್ತಿ ನಿರ್ಮಿಸಿದ್ದು, ಜನವರಿ 22ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಾಣಪ್ರತಿಷ್ಠಾಪನೆ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು, ಅಯೋಧ್ಯೆಯಲ್ಲಿ ಇಡೀ ದೇಶವೇ ಬೆರಗಾಗುವಂತಹ ಅದ್ಭುತ ಶ್ರೀರಾಮ ಮಂದಿರ ನಿರ್ಮಿಸಿ ಉದ್ಘಾಟಿಸಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಮೋದಿಯವರಲ್ಲದೇ ಮತ್ಯಾರಿಂದಲೂ ಈ ಕೆಲಸ ಕೈಗೂಡುವುದು ಅಸಾಧ್ಯದ ಮಾತಾಗಿತ್ತು. ದೇಶದ ಜನತೆ ಶ್ರೀ ರಾಮನ ಮೇಲಿಟ್ಟಿರುವ ಶೃದ್ಧಾಭಕ್ತಿಗೆ ಬೆರಗಾಗಿದ್ದೇನೆ. ತಿಂಗಳೊಪ್ಪತ್ತಿನಲ್ಲಿ 65 ಲಕ್ಷ ಜನರು ಈಗಾಗಲೇ ಅಯೋಧ್ಯೆಯ ನೂತನ ರಾಮಮಂದಿರಕ್ಕೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ. ಈ ಪ್ರಶಸ್ತಿ ದೊರಕಿರುವುದು ನನಗೆ ಅತೀವ ಸಂತೋಷ ತಂದಿದೆ. ಇದಕ್ಕೆ ಕಾರಣೀಕರ್ತರಾದ ನನ್ನ ಸಹ ಕಲಾವಿದರು, ತಂತ್ರಜ್ಞರು ಹಾಗೂ ತಂಡದ ಪ್ರತಿ ಸದಸ್ಯರಿಗೂ ಈ ಐತಿಹಾಸಿಕ ಕ್ಷಣದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ನನ್ನಲ್ಲಿರುವ ಕಲೆ ಹಾಗೂ ಜ್ಞಾನವನ್ನು ಮುಂದಿನ ಪೀಳಿಗೆಗೆ ಕಲಿಸಿಕೊಟ್ಟು, ಅದನ್ನು ಉಳಿಸಲು ಪಣ ತೊಡಲಿದ್ದೇನೆ ಎಂದರು.
ಬೇಲೂರು ಮತ್ತು ಹಳೆಬೀಡಿನ ಐತಿಹಾಸಿಕ ದೇವಸ್ಥಾನಗಳಲ್ಲಿ ಸುಂದರ ಶಿಲ್ಪಗಳನ್ನು ಕೆತ್ತಿರುವ ಶಿಲ್ಪಿ ಜಕಣಾಚಾರಿಗೆ ಅಮರಶಿಲ್ಪಿ ಎಂಬ ಬಿರುದು ಹೊಂದಿದ್ದಾರೆ. ಅದಕ್ಕೆ ಸಮಾನಾರ್ಥವಾಗಿ ಅಯೋಧ್ಯೆಯ ರಾಮಮಂದಿರದ ಬಾಲಕ ರಾಮನ ಸುಂದರ ಮೂರ್ತಿಯನ್ನು ಕೆತ್ತಿರುವ ಮೈಸೂರು ಮೂಲದ ಅರುಣ್ ಯೋಗಿರಾಜ್ ಗೆ ಡಾ. ಹಿರೇಮಠ ಫೌಂಡೇಷನ್ ಅಭಿನವ ಅಮರಶಿಲ್ಪಿ ಬಿರುದು ನೀಡಿ ಗೌರವಿಸಿತು.
ಇದೇ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ 200ಕ್ಕೂ ಅಧಿಕ ಧಾರ್ಮಿಕ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಮಾತನಾಡಿದರು. ಡಾ. ಹಿರೇಮಠ ಫೌಂಡೇಷನ್ ನ ಡಾ. ವಿಶ್ವನಾಥ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ಬಾಲ ರಾಮನ ಕಣ್ಣನ್ನು ಕೆತ್ತಲು ಬಳಸಿದ ಚಿನ್ನದ ಉಳಿ (Golden Chisel) ಮತ್ತು ಬೆಳ್ಳಿಯ ಸುತ್ತಿಗೆಯನ್ನು (Silver Hammer) ಅರುಣ್ ಯೋಗಿರಾಜ್ (Arun Yogiraj) ಇಂದು ಬಹಿರಂಗ ಪಡಿಸಿದ್ದಾರೆ.
ಅರುಣ್ ಯೋಗಿರಾಜ್ ಅವರು ಎಕ್ಸ್‌ನಲ್ಲಿ, “ಬೆಳ್ಳಿಯ ಸುತ್ತಿಗೆ, ಚಿನ್ನದ ಉಳಿಯನ್ನು ಹಂಚಿಕೊಳ್ಳಲು ನಾನು ಯೋಚಿಸಿದೆ. ಇದರಲ್ಲಿ ನಾನು ರಾಮ ಲಲ್ಲಾನ (Ram lalla) ದೈವಿಕ ಕಣ್ಣುಗಳನ್ನು (ನೇತ್ರೋನ್ಮಿಲನ) ಕೆತ್ತಿದ್ದೇನೆ” ಎಂದು ಬರೆದಿದ್ದಾರೆ.
Thought of sharing this Silver hammer with the golden chisel using which I carved the divine eyes (Netronmilana )of Ram lalla, Ayodhya pic.twitter.com/95HNiU5mVV
ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್‌ಆರ್ ರಂಗನಾಥ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನೇತ್ರೋನ್ಮಿಲನ ಮಾಡಲೆಂದೇ ಒಂದು ಮುಹೂರ್ತ ನೀಡಿದ್ದರು. ಆ ಮುಹೂರ್ತದಲ್ಲೇ ಬೆಳ್ಳಿಯ ಸುತ್ತಿಗೆ ಮತ್ತು ಚಿನ್ನದ ಉಳಿಯನ್ನು ಬಳಸಿ ಕಣ್ಣನ್ನು ಕೆತ್ತಿದ್ದೆ ಎಂದು ವಿವರಿಸಿದರು. ಇದನ್ನೂ ಓದಿ: ಅಯೋಧ್ಯೆಗೆ ವೀಕೆಂಡ್‌ನಲ್ಲಿ ಭಕ್ತಸಾಗರ- VIP ಗೇಟ್ ತೆರೆದ ಆಡಳಿತ ಮಂಡಳಿ
ರಾಮ ದೇಹವನ್ನು ಎಲ್ಲಾ ಕೆತ್ತಿದ್ದರೂ ಕಣ್ಣು ಕೆತ್ತಲು ಬಹಳ ಭಯವಾಗಿತ್ತು. ಯಾಕೆಂದರೆ ಮಗುವಿನ ಕಣ್ಣು ಕೆತ್ತುವುದು ಬಹಳ ಸವಾಲಾಗಿತ್ತು. ಮೈಸೂರಿನಲ್ಲಿ ನಡೆದ ಚಿಣ್ಣರ ಮೇಳದಲ್ಲಿ ಬಹಳಷ್ಟು ಸಮಯ ಕಳೆದಿದ್ದೆ. ಕೃಷ್ಣ ಜನ್ಮಾಷ್ಟಮಿ ಸಮಯದಲ್ಲಿ ಪುಟಾಣಿ ಮಕ್ಕಳು ಕೃಷ್ಣ ವೇಷ ಧರಿಸಿದ ಫೋಟೋ ನೋಡಿ ನನಗೆ ಒಂದು ಕಲ್ಪನೆ ಬಂತು. ಈ ಕಲ್ಪನೆಯನ್ನು ಆಧಾರಿಸಿ ನಾನು ಮುಖ, ಕಣ್ಣನ್ನು ಕೆತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: 25 ಲಕ್ಷ ಜನರಿಂದ ಬಾಲಕ ರಾಮನ ದರ್ಶನ – 11 ಕೋಟಿ ರೂ. ಕಾಣಿಕೆ ಸಂಗ್ರಹ
ಅರುಣ್ ಶಿಲ್ಪ ಕೆತ್ತನೆ ಮಾಡುವಾಗ ಒಂದು ಕಣ್ಣನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಿತ್ತು. ಮೂರ್ತಿ ಕೆತ್ತನೆ ಮಾಡುವಾಗ ಒಂದು ಕಲ್ಲಿನ ಚೂರು ಅರುಣ್ ಯೋಗಿರಾಜ್ ಕಣ್ಣಿನ ಗುಡ್ಡೆಗೆ ಬಡಿದಿತ್ತು. ಕಣ್ಣಿಗೆ ಗಾಯ ಸಹ ಆಗಿತ್ತು. ತಕ್ಷಣ ಅಯೋಧ್ಯೆ ಟ್ರಸ್ಟ್‌ನವರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿಸಿ, ಕಲ್ಲಿನ ಚೂರನ್ನು ಹೊರ ತೆಗೆಸಿದ್ದರು ಎಂದು ಅರುಣ್ ಅವರ ಪತ್ನಿ ವಿಜೇತಾ ತಿಳಿಸಿದ್ದರು.
ಸರಿಸುಮಾರು 15 ದಿನಗಳ ಕಾಲ ಅರುಣ್ ಒಂದು ಕಣ್ಣು ಮುಚ್ಚಿಕೊಂಡೇ ಶಿಲ್ಪ ಕೆತ್ತನೆ ಮಾಡಿದ್ದರು. ಈ ಬಗ್ಗೆ ನನಗಾಗಲಿ ನಮ್ಮ, ಕುಟುಂಬಸ್ಥರಿಗಾಗಿ ಹೇಳಿರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿದ್ದವರು ವಿಷಯ ತಿಳಿಸಿದಾಗ ತುಂಬಾ ಭಯವಾಗಿತ್ತು. ಚಿಕಿತ್ಸೆ ಪಡೆದ ಒಂದೆರಡು ದಿನಗಳಲ್ಲಿ ಅವರೇ ಕರೆ ಮಾಡಿ ವಿಷಯ ತಿಳಿಸಿ ಆರಾಮಾಗಿದ್ದೇನೆ ಎಂದು ಹೇಳಿದರು. ನಂತರ ನಮಗೆ ಸಮಾಧಾನವಾಯಿತು. ಅಷ್ಟಾದರೂ ವಿಶ್ರಾಂತಿ ತೆಗೆದುಕೊಳ್ಳದೇ ಶಿಲ್ಪ ಕೆತ್ತನೆ ಮಾಡಿದ್ದರು. ಇದೆಲ್ಲವು ಆ ಭಗವಂತನದ್ದೇ ಕೃಪೆ ಎಂದು ಹೇಳಿ ಪತ್ನಿ ಭಾವುಕರಾಗಿದ್ದರು.