ನವದೆಹಲಿ: ಮೈಸೂರು ಕೃಷ್ಣಶಿಲೆಯ ಬಾಲರಾಮನ ಎದುರು ಸೋತ ವೈಟ್ ಮಾರ್ಬಲ್ ಬಾಲರಾಮ ಮೂರ್ತಿಯ ಲುಕ್ ವೈರಲ್ ಆಗಿದೆ. ರಾಜಸ್ಥಾನದ (Rajasthan) ಶಿಲ್ಪಿ ಕೆತ್ತಿದ ಮೂರ್ತಿ ಇದು.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರುವ ಕಪ್ಪು ಶಿಲೆಯ ರಾಮಲಲ್ಲಾ (Ram Lalla) ವಿಗ್ರಹ ಅಯೋಧ್ಯೆಯ ಭವ್ಯ ಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನವಾಗಿದೆ. ಇನ್ನು ಎರಡು ವಿಗ್ರಹಗಳನ್ನು ದೇವಾಲಯದ ಇತರ ಭಾಗಗಳಲ್ಲಿ ಇರಿಸಲಾಗುವುದು. ಅವುಗಳಲ್ಲಿ ಒಂದು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಕೆತ್ತಿದ ಬಿಳಿ ಅಮೃತಶಿಲೆಯ ವಿಗ್ರಹವೂ ಇದೆ. ಈ ವಿಗ್ರಹದ ಛಾಯಾಚಿತ್ರಗಳು ವೈರಲ್ ಆಗಿವೆ. ಇದನ್ನೂ ಓದಿ: ಕಬ್ಬಿಣ, ಸಿಮೆಂಟ್ ಬಳಸಿಲ್ಲ – ಕಲ್ಲಿನಿಂದಲೇ ಭವ್ಯ ರಾಮಮಂದಿರ ನಿರ್ಮಾಣ; ಯಾಕೆ ಗೊತ್ತಾ?
ರಾಜಸ್ಥಾನದ ಶಿಲ್ಪಿ ಕೆತ್ತಿರುವ ವಿಗ್ರಹವು ದೇವಾಲಯದ ‘ಗರ್ಭಗೃಹ’ಕ್ಕೆ ಬರಲು ಮೈಸೂರು ಶಿಲ್ಪಿಯ ಮೂರ್ತಿ ಎದುರು ಪೈಪೋಟಿ ನಡೆಸಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಈ ಮೂರ್ತಿಯನ್ನು ರಾಮಮಂದಿರದಲ್ಲಿ ಬೇರೆಡೆ ಇರಿಸಲಾಗುತ್ತದೆ.
ಬಿಳಿ ಅಮೃತಶಿಲೆಯ ವಿಗ್ರಹವು ಪ್ರಸ್ತುತ ಟ್ರಸ್ಟ್‌ನಲ್ಲಿದೆ. ರಾಮಲಲ್ಲಾ ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದಿರುವ ವಿಗ್ರಹ ಇದಾಗಿದೆ. ಬಾಲರಾಮನ ಹಿಂದೆ ಕಮಾನಿನಂತಿರುವ ರಚನೆಯು ವಿಷ್ಣುವಿನ ವಿವಿಧ ಅವತಾರಗಳನ್ನು ಚಿತ್ರಿಸುವ ಸಣ್ಣ ಶಿಲ್ಪಗಳನ್ನು ಒಳಗೊಂಡಿದೆ. ಬಾಲರಾಮನನ್ನು ಅಲಂಕರಿಸುವ ಆಭರಣಗಳು ಮತ್ತು ಬಟ್ಟೆಗಳನ್ನು ಅಮೃತಶಿಲೆಯಲ್ಲಿ ಕೆತ್ತನೆ ಮಾಡಲಾಗಿದೆ. ಇದು ವಿಗ್ರಹ ಕೂಡ ಗಮನಾರ್ಹ ಕುಶಲತೆಗೆ ಹಿಡಿದ ಕೈಗನ್ನಡಿಯಂತಿದೆ. ಇದನ್ನೂ ಓದಿ: ರಾಮಮಂದಿರದಲ್ಲಿರೋ ಮೂರ್ತಿಗೆ `ಬಾಲಕ ರಾಮ’ ಹೆಸರು: ಪ್ರತಿಷ್ಠಾಪನೆಯ ಅರ್ಚಕ ಅರುಣ್ ದೀಕ್ಷಿತ್ ಮಾಹಿತಿ
ಈಗ ದೇವಾಲಯದ ಗರ್ಭಗುಡಿಯಲ್ಲಿ ವಿರಾಜಮಾನವಾಗಿರುವ 51 ಇಂಚಿನ ಕಪ್ಪು ಗ್ರಾನೈಟ್ ವಿಗ್ರಹವನ್ನು 2.5 ಶತಕೋಟಿ ವರ್ಷಗಳಷ್ಟು ಹಳೆಯದಾದ ಬಂಡೆಯಿಂದ ಕೆತ್ತಲಾಗಿದೆ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಹೆಚ್.ಎಸ್.ವೆಂಕಟೇಶ್ ತಿಳಿಸಿದ್ದಾರೆ.
ಮಂಡ್ಯ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ, ಇಲ್ಲಿನ (Mandya) ಲೇಬರ್ ಕಾಲೋನಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್‍ರಿಂದ (Arun Yogiraj) ಕೆತ್ತಲ್ಪಟ್ಟ ರಾಮನ ದೇವಾಲಯ ಉದ್ಘಾಟನೆಗೆ ಸಿದ್ಧತೆ ನಡೆದಿದೆ.
ಲೇಬರ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕೈಯಿಂದ ರಾಮ, ಸೀತೆ, ಲಕ್ಷ್ಮಣ, ಹನುಮ, ಸರಸ್ವತಿ ಹಾಗೂ ಗಣಪತಿ ದೇವರ ವಿಗ್ರಹಗಳು ಕೆತ್ತಲ್ಪಟ್ಟಿವೆ. ಈ ವಿಗ್ರಹಗಳಿಗೆ ಶಾಸ್ತ್ರೋಕ್ತವಾಗಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಶಿಷ್ಯ ವೃಂದದಿಂದ ಪೂಜೆ ಹಾಗೂ ವಿಧಿವಿಧಾನಗಳು ನೆರವೇರುತ್ತಿದೆ. ಇದನ್ನೂ ಓದಿ: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್‌ಡಿಕೆ
ಬೆಳಿಗ್ಗೆ 10:30ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ರಾಮದೇವರ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೂ ಹೋಮ ಹವನಗಳು ನಡೆಯುತ್ತಿವೆ. ಪೂಜೆಗೆ ನಾದಸ್ವರಗಳ ಹಿಮ್ಮೇಳ ಸಹ ಇದ್ದು, ಹಬ್ಬದ ವಾತಾವರಣ ಮನೆ ಮಾಡಿದೆ.
ಅಯೋಧ್ಯೆ (ರಾಮಮಂದಿರ): ಜನವರಿ 22 ರಂದು ಅಯೋಧ್ಯೆಯ (Ayodhya Ram Mandir) ರಾಮಮಂದಿರದಲ್ಲಿ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾಪನೆ’ ಮಹೋತ್ಸವ ಜರುಗಲಿದೆ. ಈಗಾಗಲೇ ರಾಮಮಂದಿರದ ಗರ್ಭಗುಡಿಯಲ್ಲಿ ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ವಿರಾಜಮಾನವಾಗಿದೆ. ಬಾಲರಾಮನ ಪೂರ್ಣ ಭಂಗಿಯ ವಿಗ್ರಹದ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ರಾಮಲಲ್ಲಾ (Ram Lalla Idol) ವಿಗ್ರಹದ ದಿವ್ಯ ದರ್ಶನವೇ ಆಗಿದೆ. ‘ಜೈ ಶ್ರೀರಾಮ್’ ಘೋಷಣೆ ಮೊಳಗುತ್ತಿದೆ.
ದಶಕಗಳ ಕನಸು ಈಗ ನನಸಾಗಿದೆ. ಪ್ರಭು ರಾಮಲಲ್ಲಾ ಅವರ ಮೊದಲ ನೋಟ. ಜೈ ಶ್ರೀ ರಾಮ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ರಾಮಲಲ್ಲಾ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್
ಶ್ರೀರಾಮ ಜಯ ರಾಮ ಜಯ ಜಯ ರಾಮ! ಲಕ್ಷಾಂತರ ಜನರ ಆಕಾಂಕ್ಷೆಗಳು, ಶತಮಾನಗಳ ಹಂಬಲ, ಅಂತಿಮವಾಗಿ ಪ್ರಭು ರಾಮಲಲ್ಲಾ ಅವರ ದಿವ್ಯ ದರ್ಶನ! ಜೈ ಶ್ರೀ ರಾಮ್ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಎಕ್ಸ್ ಖಾತೆ ಬರೆದುಕೊಂಡಿದ್ದಾರೆ.
ನಾವು 500 ವರ್ಷಗಳಿಂದ ತಾಳ್ಮೆಯಿಂದ ಕಾಯುತ್ತಿದ್ದೇವೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಮುಂದಿನ 50 ಗಂಟೆಗಳು 500 ವರ್ಷಗಳಂತೆ ಗೋಚರವಾಗುತ್ತಿದೆ. ಈ ಧಾರ್ಮಿಕ ಉತ್ಸಾಹ ಮತ್ತು ಜೀವಮಾನದ ಘಟನೆಯನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಅತ್ಯಂತ ಅದೃಷ್ಟಶಾಲಿ ಮತ್ತು ಧನ್ಯವಾಗಿದೆ ಎಂದು ರಾಮಭಕ್ತರು ಬರೆದುಕೊಂಡು ವಿಗ್ರಹದ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos
ರಾಮಲಲ್ಲಾ ವಿಗ್ರಹದ ವಿಶೇಷತೆಯೇನು?
51 ಇಂಚು ಎತ್ತರವಿರುವ ಮಂದಸ್ಮಿತ ಮುಖ ಹೊಂದಿರುವ ರಾಮನ ಮೂರ್ತಿಯು ಬಲಗೈಯಲ್ಲಿ ಬಾಣ, ಎಡಗೈಯಲ್ಲಿ ಬಿಲ್ಲು ಹಿಡಿದಿರುವ ಭಂಗಿಯಲ್ಲಿದೆ. ಬಾಲರಾಮನ ಹಣೆಯ ಮೇಲೆ ತಿಲಕವಿದೆ. ಬಾಲರಾಮನ ಮೂರ್ತಿಯ ಮೇಲ್ಭಾಗ ಸೂರ್ಯ ವಂಶದ ಶ್ರೀರಾಮಚಂದ್ರನನ್ನು ಬಿಂಬಿಸುವಂತಹ ಸೂರ್ಯದೇವರ ಕೆತ್ತನೆ ಮಾಡಲಾಗಿದೆ. ಬಾಲರಾಮನ ಮೂರ್ತಿ ಚಂದ್ರನ ನಾಚಿಸುವಷ್ಟು ಕಾಂತಿ ಅದ್ಭುತ ಕಳೆಯಲ್ಲಿದೆ. ಬಾಲರಾಮನ ಕಿರೀಟದ ಮೇಲೆ ನರಸಿಂಹ ದೇವರ ಕೆತ್ತನೆ ಇದೆ. ದಶವತಾರ ಬಿಂಬಿಸುವ ಮತ್ಸ್ಯ, ಕೂರ್ಮ, ವರಾಹ, ವಾಮನ, ಕೃಷ್ಣ, ಕಲ್ಕಿ, ಬುದ್ಧ, ಪರಶುರಾಮ, ಬ್ರಹ್ಮ, ಓಂ, ಆದಿಶೇಷ, ಚಕ್ರ ಹಾಗೂ ಈಶ್ವರ ಕೆತ್ತನೆಯು ವಿಗ್ರಹದ ಪ್ರಭಾವಳಿ ಬಲಭಾಗದಲ್ಲಿದೆ. ಇನ್ನು ವಿಗ್ರಹದ ಎಡಭಾಗದ ಪ್ರಭಾವಳಿಯಲ್ಲಿ ಮೇಲ್ಗಡೆ ಶಂಕ, ಗಧೆ, ಸ್ವಸ್ತಿಕ್, ವಿಷ್ಣು, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕ್ಲಕಿ, ಹಾಗೂ ನೆತ್ತಿನ ಮೇಲೆ ಸೂರ್ಯನಿದ್ದಾನೆ.
ಗರ್ಭಗುಡಿಯಲ್ಲಿ ರಾಮಲಲ್ಲಾ ವಿರಾಜಮಾನ
ಈಗಾಗಲೇ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪೂರ್ವಭಾವಿ ವಿಧಿವಿಧಾನಗಳು ನಡೆಯುತ್ತಿವೆ. ರಾಮಲಲ್ಲಾ ವಿಗ್ರಹವನ್ನು ಬುಧವಾರ ರಾಮಮಂದಿರಕ್ಕೆ ತರಲಾಯಿತು. ದೇಶದ ನದಿಗಳ ನೀರಿನಿಂದ ವಿಗ್ರಹಕ್ಕೆ ಪವಿತ್ರ ಸ್ನಾನ ಮಾಡಿಸಲಾಯಿತು. ಜೊತೆಗೆ ಔಷಧೀಯ ಗುಣಗಳಿರುವ ಸಸ್ಯಗಳನ್ನು ನೆನೆಸಿರುವ ನೀರಿನಿಂದ ಸ್ವಚ್ಛಗೊಳಿಸಲಾಯಿತು. ಇದನ್ನೂ ಓದಿ: Ayodhya Ram Mandir: ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ
ಗುರುವಾರ ರಾಮಮಂದಿರದ ಗರ್ಭಗುಡಿಯಲ್ಲಿ ‘ಗಣೇಶ ಪೂಜೆ’ ಮತ್ತು ‘ವರುಣ ಪೂಜೆ’ ನೆರವೇರಿಸಲಾಯಿತು. ನಂತರ ವಿಗ್ರಹವನ್ನು ಗರ್ಭಗುಡಿಯಲ್ಲಿ ವಿರಾಜಮಾನ ಮಾಡಲಾಯಿತು.
ಹೌದು. ಅರುಣ್ ಶಿಲ್ಪ ಕೆತ್ತನೆ ಮಾಡುವಾಗ ಒಂದು ಕಣ್ಣನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಿತ್ತು. ಮೂರ್ತಿ ಕೆತ್ತನೆ ಮಾಡುವಾಗ ಒಂದು ಕಲ್ಲಿನ ಚೂರು ಅರುಣ್ ಯೋಗಿರಾಜ್ ಕಣ್ಣಿನ ಗುಡ್ಡೆಗೆ ಬಡಿದಿತ್ತು. ಕಣ್ಣಿಗೆ ಗಾಯ ಸಹ ಆಗಿತ್ತು. ತಕ್ಷಣ ಅಯೋಧ್ಯೆ ಟ್ರಸ್ಟ್‌ನವರು ಅವರನ್ನ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿಸಿ, ಕಲ್ಲಿನ ಚೂರನ್ನು ಹೊರ ತೆಗೆಸಿದ್ದರು. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್
ಸರಿಸುಮಾರು 15 ದಿನಗಳ ಕಾಲ ಅರುಣ್ ಒಂದು ಕಣ್ಣು ಮುಚ್ಚಿಕೊಂಡೇ ಶಿಲ್ಪ ಕೆತ್ತನೆ ಮಾಡಿದ್ದರು. ಈ ಬಗ್ಗೆ ನನಗಾಗಲಿ ನಮ್ಮ, ಕುಟುಂಬಸ್ಥರಿಗಾಗಿ ಹೇಳಿರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿದ್ದವರು ವಿಷಯ ತಿಳಿಸಿದಾಗ ತುಂಬಾ ಭಯವಾಗಿತ್ತು. ಚಿಕಿತ್ಸೆ ಪಡೆದ ಒಂದೆರಡು ದಿನಗಳಲ್ಲಿ ಅವರೇ ಕರೆ ಮಾಡಿ ವಿಷಯ ತಿಳಿಸಿ, ಆರಾಮಾಗಿದ್ದೇನೆ ಎಂದು ಹೇಳಿದರು. ನಂತರ ನಮಗೆ ಸಮಾಧಾನವಾಯಿತು. ಅಷ್ಟಾದರೂ ವಿಶ್ರಾಂತಿ ತೆಗೆದುಕೊಳ್ಳದೇ ಶಿಲ್ಪ ಕೆತ್ತನೆ ಮಾಡಿದ್ದರು. ಇದೆಲ್ಲವು ಆ ಭಗವಂತನದ್ದೇ ಕೃಪೆ ಎಂದು ಭಾವುಕರಾಗಿದ್ದಾರೆ.
-ಶಿಲ್ಪಿ ಅರುಣ್ ಯೋಗಿರಾಜ್ ಕೈಯಿಂದಲೇ ಮೂಡಿಬಂದಿರುವ ರಾಮನ ವಿಗ್ರಹ
ಮಂಡ್ಯ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠೆಗೆ ಕೇವಲ 4 ದಿನಗಳು ಬಾಕಿ ಉಳಿದಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ವಿಶೇಷವೆಂದರೆ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ (Mandya) ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ.
ಜನವರಿ 22ರಂದು ರಾಮಮಂದಿರದಲ್ಲಿ ಮೈಸೂರಿನ (Mysuru) ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಕಲ ತಯಾರಿ ನಡೆದಿವೆ. ಅದೇ ದಿನ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಳ್ಳಳಿರುವ ರಾಮಮೂರ್ತಿಯನ್ನು ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರೇ ಕೆತ್ತನೆ ಮಾಡಿರುವುದು ವಿಶೇಷ. ಇದನ್ನೂ ಓದಿ: Ayodhya Ram Mandir: ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ – ಇಂದು ಮೂರ್ತಿ ಪ್ರತಿಷ್ಠಾಪನೆ
ಮಂಡ್ಯದ ಲೇಬರ್ ಕಾಲೋನಿಯಲ್ಲಿ ನೂತನವಾಗಿ ರಾಮಮಂದಿರ ನಿರ್ಮಾಣಗೊಂಡಿದೆ. ರಾಮನ ವಿಗ್ರಹ ಸುಮಾರು ಮೂರುಕಾಲು ಅಡಿ ಎತ್ತರವಿದೆ. ರಾಮನ ಮೂರ್ತಿ ಜೊತೆ ಶಿಲ್ಪಿ ಅರುಣ್ ಯೋಗಿರಾಜ್ ಸೀತೆ, ಲಕ್ಷ್ಮಣ ಹಾಗೂ ಹನುಮಂತನ ವಿಗ್ರಹವನ್ನೂ ಕೆತ್ತನೆ ಮಾಡಿಕೊಟ್ಟಿದ್ದಾರೆ. ಈ ಮೂರ್ತಿಗಳನ್ನು ಸುಮಾರು ಒಂದು ವರ್ಷದ ಹಿಂದೆಯೇ ಕೆತ್ತನೆ ಮಾಡಿಕೊಟ್ಟಿದ್ದರು.ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನಿಗೆ ಬೆಂಗ್ಳೂರಿನಿಂದ ತುಳಸಿಮಾಲೆಯ ಸೇವೆ!
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದೇ ಮಂಡ್ಯದಲ್ಲಿಯೂ ರಾಮನ ಪ್ರತಿಷ್ಠಾಪನೆ ಮಾಡಬೇಕೆಂದು ದೇವಾಲಯದ ಟ್ರಸ್ಟ್ ತೀರ್ಮಾನಿಸಿತ್ತು. ಲೇಬರ್ ಕಾಲೋನಿ ನಿವಾಸಿಗಳೇ ಟ್ರಸ್ಟ್ ರಚಿಸಿಕೊಂಡು ಈ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಾಲಯ ಲೋಕಾರ್ಪಣೆ ದಿನ ಹತ್ತಿರವಾಗುತ್ತಿದ್ದಂತೆ ಕಾಲೋನಿ ನಿವಾಸಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಪೂಜಾ ಕೈಂಕರ್ಯದಂತೆ ಇಲ್ಲಿಯೂ ದೇಗುಲ ಲೋಕಾರ್ಪಣೆ ನಡೆಯಲಿದೆ ಎಂದು ಟ್ರಸ್ಟಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾ ದಿನದಂದು ರಜೆ ನೀಡುವಂತೆ ವಕೀಲರ ಸಂಘ ಮನವಿ
ಅಯೋಧ್ಯೆ (ಉತ್ತರ ಪ್ರದೇಶ): ಜ.22 ರಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ಕೆತ್ತಿರುವ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿದೆ. ಮಗನ ವಿಗ್ರಹ ಆಯ್ಕೆಯಾಗಿರುವುದಕ್ಕೆ ಯೋಗಿರಾಜ್ ತಾಯಿ ಸರಸ್ವತಿ ಸಂತಸ ವ್ಯಕ್ತಪಡಿಸಿದ್ದಾರೆ.
ನನಗೆ ತುಂಬಾ ಸಂತೋಷವಾಗಿದೆ. ಕಳೆದ ಆರು ತಿಂಗಳಿಂದ ಅವನು ಮಾಡಿದ ಕಾರ್ಯದ ಫಲ ಇದು. ಅವನ ತಂದೆ ಇದ್ದಿದ್ದರೆ, ಮಗನ ಕಲೆಯನ್ನು ಕಂಡು ಸಂತೋಷಪಡುತ್ತಿದ್ದರು ಎಂದು ಅರುಣ್ ಯೋಗಿರಾಜ್ ಅವರ ತಾಯಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಚಿನ್ನದ ಬಾಗಿಲು ಅಳವಡಿಕೆ ಕಾರ್ಯ ಪೂರ್ಣ
ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ಅಯೋಧ್ಯೆಯ ಐತಿಹಾಸಿಕ ದೇವಾಲಯದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಂಗಳವಾರ ತಿಳಿಸಿದೆ. ಜನವರಿ 22 ರಂದು ರಾಮಲಲ್ಲಾ ಅವರ ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದೆ.
ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣ ಶಿಲೆಯಲ್ಲಿ ಕೆತ್ತಿದ ಮೂರ್ತಿ ಭಗವಾನ್ ಶ್ರೀ ರಾಮಲಲ್ಲಾ, ಸರ್ಕಾರದ ವಿಗ್ರಹವಾಗಿ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಟ್ರಸ್ಟ್ ಆಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ನಾಳೆಯಿಂದ್ಲೇ ಪೂರ್ವಭಾವಿ ಪೂಜೆಗಳು ಆರಂಭ: ಚಂಪತ್ ರೈ
ಇದಕ್ಕೂ ಮೊದಲು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು, ಅರುಣ್ ಯೋಗಿರಾಜ್ ಅವರ ಕೆಲಸದ ಒಳನೋಟಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ವಿಗ್ರಹ ರಚನೆಯ ಸಮಯದಲ್ಲಿ ಶಿಲ್ಪಿಯ ಗಮನಾರ್ಹ ಏಕಾಗ್ರತೆ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದರು.
ಅಯೋಧ್ಯೆ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ನಿರ್ಮಿಸಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿದೆ.
ಹೌದು. ನೂತನವಾಗಿ ನಿರ್ಮಾಣವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗುವ ಮೂರ್ತಿ ಯಾವುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ.
ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಆವರಣದಲ್ಲಿಯೇ ಇಡುವುದಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಶಿಲ್ಪಿಗಳಾದ ಕರ್ನಾಟಕ ರಾಜ್ಯ ಮೈಸೂರು ಮೂಲದ ಅರುಣ್ ಯೋಗಿರಾಜ್ (Arun Yogiraj), ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಅವರ ಮೂರ್ತಿಗಳನ್ನ ಕೆತ್ತನೆ ಮಾಡಿದ್ದಾರೆ. ಕರ್ನಾಟಕ ಇಬ್ಬರು ಶಿಲ್ಪಿಗಳು ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದಾರೆ. ಸತ್ಯನಾರಾಯಣಪಾಂಡೆ ಅವರು ರಾಜಸ್ಥಾನದಿಂದ ತರಿಸಲಾಗಿದ್ದ ಕಲ್ಲನ್ನು ಬಳಕೆ ಮಾಡಿದ್ದಾರೆ ಇದನ್ನೂ ಓದಿ: ಅಯೋಧ್ಯೆಯ ಬಾಲ ರಾಮನ ಮೂರ್ತಿಗೆ ಬಳಸಿದ್ದು ಮೈಸೂರಿನ ಕೃಷ್ಣ ಶಿಲೆ
ಅಂತಿಮವಾಗಿ ಪ್ರತಿಷ್ಠಾಪಿಸಬೇಕಾದ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡುವ ಮುನ್ನ ಅದರ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿ ಪಡೆಯಲಾಗಿದೆ. ನಂತರ ಆಯ್ಕೆಯಾಗುವ ಮೂರ್ತಿಯನ್ನ ಜನವರಿ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.
ಬಾಲರಾಮನ ಆಯ್ಕೆಗೆ ಮಾನದಂಡ ಏನು?
ವಿಗ್ರಹ ಕಡೆಯಲು ಬಳಸಿದ ಶಿಲೆಯ ಗುಣಮಟ್ಟ, ರಾಮನ ಬಾಲ್ಯದ ನೋಟ, ವಿಗ್ರಹಕ್ಕೆ ಇರುವ ಸೌಂದರ್ಯ, ಆಕರ್ಷಣೆ, ವಿಗ್ರಹಕ್ಕೆ ಇರುವ ದೈವತ್ವದ ಕಳೆ, ಭಾವ, ವಿಗ್ರಹದ ರಚನಾತ್ಮಕ ಸ್ವರೂಪ, ಕೆತ್ತನೆಯ ಗುಣಮಟ್ಟ ಎಲ್ಲವನ್ನು ಪರಿಗಣಿಸಲಾಗಿದೆ.
ಈ ಹಿಂದೆ ಅರುಣ್ ಯೋಗಿರಾಜ್ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾದ ಶಂಕರಾಚಾರ್ಯರು ಹಾಗೂ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಷ್ಠಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕೂಡಾ ಕೆತ್ತುವ ಮೂಲಕ ಪ್ರಧಾನಿ ಮೋದಿ ಸೇರಿದಂತೆ ಇಡೀ ದೇಶದ ಮೆಚ್ಚುಗೆಗೆ ಪಾತ್ರರಾಗಿದ್ದರು
ಮೈಸೂರು: ಅಯೋಧ್ಯೆ ರಾಮಮಂದಿರಕ್ಕೆ (Ayodhya Ram Mandir) ರಾಮಲಲ್ಲಾ (ಬಾಲ ರಾಮ) ಮೂರ್ತಿ ಕೆತ್ತನೆ ಮಾಡಿದ ಬಳಿಕ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ತನ್ನ ಸಹದ್ಯೋಗಿಗಳೊಂದಿಗೆ ನೃತ್ಯ ಮಾಡಿ ಸಂಭ್ರಮಿಸಿರುವ ವೀಡಿಯೋ ವೈರಲ್ ಆಗಿದೆ.
6 ತಿಂಗಳ ಹಿಂದೆಯೇ ರಾಮಲಲ್ಲಾ ಮೂರ್ತಿ ಕೆತ್ತನೆಗಾಗಿ ಅರುಣ್ ಯೋಗಿರಾಜ್ ಅಯೋಧ್ಯೆಗೆ ತೆರಳಿದ್ದರು. ಮೂರ್ತಿ ಕೆತ್ತನೆ ಕಾರ್ಯ ಮುಗಿದಿದ್ದು, ಅಯೋಧ್ಯೆಯಲ್ಲಿ ಟ್ರಸ್ಟಿಯಿಂದ ಯೋಗಿರಾಜ್ ಮತ್ತು ತಂಡವನ್ನು ಸನ್ಮಾನಿಸಲಾಗಿದೆ. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಆಯ್ಕೆ ಅಂತಿಮವಾಗಿಲ್ಲ – ಟ್ರಸ್ಟ್‌ನಿಂದ ಸ್ಪಷ್ಟನೆ
ನೆನಪಿನ ಕಾಣಿಕೆ ಕೊಟ್ಟು ಅಭಿನಂದಿಸಲಾಗಿದೆ. ಅದಾದ ಬಳಿಕ ಎಲ್ಲಾ ಶಿಲ್ಪಿಗಳ ಜೊತೆ ಯೋಗಿರಾಜ್ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಇದೇ ವೇಳೆ ಮೂರ್ತಿ ಕೆತ್ತನೆ ಬಗ್ಗೆ ಮಾತನಾಡಿದ್ದಾರೆ. ತಮಗೆ ಅವಕಾಶ ಸಿಕ್ಕಿದ್ದಕ್ಕಾಗಿ ಖುಷಿ ವ್ಯಕ್ತಪಡಿಸಿದ್ದಾರೆ.
ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಯೋಗಿರಾಜ್ ಅವರು ಕೆತ್ತಿರುವ ರಾಮನ ಮೂರ್ತಿ ಆಯ್ಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಅಂತಿಮ ಆಯ್ಕೆ ಇನ್ನೂ ಆಗಿಲ್ಲ ಎಂದು ಅಯೋಧ್ಯೆ ಟ್ರಸ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರಕ್ಕೆ 24 ಅರ್ಚಕರು – ಇಬ್ಬರು SC, ಒಬ್ಬರು OBC ವರ್ಗದವರು ಆಯ್ಕೆ
ಇದೇ ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಲಿದೆ. ರಾಮಮಂದಿರ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕೂಡ ಆಗಲಿದೆ. ಅದಕ್ಕಾಗಿ ವಿವಿಧೆಡೆಯಿಂದ ಶಿಲ್ಪಿಗಳನ್ನು ಕರೆಸಿ ಮೂರ್ತಿ ಕೆತ್ತನೆ ಮಾಡಿಸಲಾಗಿತ್ತು. ಮೂರು ವಿಗ್ರಹಗಳ ಕೆತ್ತನೆಗೆ ಅವಕಾಶ ಕಲ್ಪಿಸಲಾಗಿತ್ತು. ಕೆತ್ತನೆ ಕಾರ್ಯ ಮುಗಿದಿದ್ದು, ಆಯ್ಕೆಯಾದ ಒಂದು ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಘೋಷಣೆ ಇನ್ನಷ್ಟೇ ಆಗಬೇಕಿದೆ.
ಅಯೋಧ್ಯೆ: ಜನವರಿ 22ರಂದು ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ (Ram Lalla Idols)ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ನ (Ram Janmabhoomi Teerth Kshetra Trust) ಪದಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೆ ಮೂರು ಬಾಲರಾಮನ ಮೂರ್ತಿಗಳು ಸಿದ್ಧದ್ದವಾಗಿವೆ. ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಮತ್ತು ಇತರೆ ಸ್ವಾಮೀಜಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ತೆಗೆದುಕೊಳ್ಳುವ ತೀರ್ಮಾನವನ್ನು ಸೂಕ್ತ ಕಾಲದಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ಟ್ರಸ್ಟ್‌ನ ಕಚೇರಿ ಉಸ್ತುವಾರಿಯಾಗಿರುವ ಪ್ರಕಾಶ್ ಗುಪ್ತಾ (Prakash Gupta) ಅವರು ತಿಳಿಸಿದ್ದಾರೆ.
ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಶಿಲ್ಪಿಗಳಾದ ಕರ್ನಾಟಕ ರಾಜ್ಯ ಮೈಸೂರು ಮೂಲದ ಅರುಣ್ ಯೋಗಿರಾಜ್ (Arun Yogiraj), ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಅವರ ಮೂರ್ತಿಗಳನ್ನ ಕೆತ್ತನೆ ಮಾಡಿದ್ದಾರೆ. ಕರ್ನಾಟಕ ಇಬ್ಬರು ಶಿಲ್ಪಿಗಳು ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದಾರೆ. ಸತ್ಯನಾರಾಯಣಪಾಂಡೆ ಅವರು ರಾಜಸ್ಥಾನದಿಂದ ತರಿಸಲಾಗಿದ್ದ ಕಲ್ಲನ್ನು ಬಳಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ
ಅಂತಿಮವಾಗಿ ಪ್ರತಿಷ್ಠಾಪಿಸಬೇಕಾದ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡುವ ಮುನ್ನ ಅದರ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿ ಪಡೆಯಲಾಗುತ್ತದೆ. ನಂತರ ಆಯ್ಕೆಯಾಗುವ ಮೂರ್ತಿಯನ್ನ ಜನವರಿ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್
ಈಗಾಗಲೇ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗೀರಾಜ್ ಅವರು ಕೆತ್ತನೆ ಮಾಡಿರುವ ರಾಮಲಲ್ಲಾ ಮೂರ್ತಿ ಫೈನಲ್ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾಲರಾಮನ ಆಯ್ಕೆಗೆ ಮಾನದಂಡ ಏನು?
ವಿಗ್ರಹ ಕಡೆಯಲು ಬಳಸಿದ ಶಿಲೆಯ ಗುಣಮಟ್ಟ, ರಾಮನ ಬಾಲ್ಯದ ನೋಟ, ವಿಗ್ರಹಕ್ಕೆ ಇರುವ ಸೌಂದರ್ಯ, ಆಕರ್ಷಣೆ, ವಿಗ್ರಹಕ್ಕೆ ಇರುವ ದೈವತ್ವದ ಕಳೆ, ಭಾವ, ವಿಗ್ರಹದ ರಚನಾತ್ಮಕ ಸ್ವರೂಪ, ಕೆತ್ತನೆಯ ಗುಣಮಟ್ಟ ಎಲ್ಲವನ್ನು ಪರಿಗಣಿಸಲಾಗುತ್ತದೆ.
ಬಾಲರಾಮನ ಶಿಲಾ ವಿಶೇಷತೆ ಏನು?
ಮೈಸೂರಿನ ಕೃಷ್ಣಶಿಲೆಯಲ್ಲಿ ಬಾಲರಾಮನ ಮೂರ್ತಿ ಕೆತ್ತಲಾಗಿದ್ದು ಹಾರೋಹಳ್ಳಿಯ ರಾಮ್‌ದಾಸ್ ಎಂಬವರ ಜಮೀನಲ್ಲಿ ಈ ಶಿಲೆ ಪತ್ತೆಯಾಗಿತ್ತು. ಈ ಜಮೀನನ್ನು ಶ್ರೀನಿವಾಸ್ ಎಂಬವರು ಗುತ್ತಿಗೆ ಪಡೆದಿದ್ದರು. ಗುತ್ತಿಗೆದಾರ ಶ್ರೀನಿವಾಸ್ ಅವರನ್ನು ಸುರೇಂದ್ರ ವಿಶ್ವಕರ್ಮ ಸಂಪರ್ಕಿಸಿದ್ದರು. ಇದನ್ನೂ ಓದಿ:Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು
ಮಾನಯ್ಯ ಬಡಿಗೇರ್ ಮೂಲಕ ಕೃಷ್ಣಶಿಲೆಯ ಪರೀಕ್ಷೆ ಮಾಡಿ ಅಯೋಧ್ಯೆ ಗುರುಗಳ ಸಮ್ಮುಖದಲ್ಲಿ ಮೂರ್ತಿ ಶಿಲೆಯನ್ನು ಅಂತಿಮಗೊಳಿಸಲಾಗಿತ್ತು. 19 ಟನ್ ತೂಕ, 9.8 ಅಡಿ ಉದ್ದದ ಶಿಲೆ ಅಯೋಧ್ಯೆಗೆ ರವಾನಿಸಲಾಗಿತ್ತು. ಶಿಲೆ ಕಳುಹಿಸಿದ ನಂತರ ಪ್ರಚಾರ ಪಡೆಯಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಶಿಲೆ ತೆಗೆದ ಸ್ಥಳವನ್ನು ಮಣ್ಣಿನಿಂದ ಮುಚ್ಚಿ ಭೂಮಿ ಸಮತಟ್ಟು ಮಾಡಲಾಗಿದೆ.
ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಕೇವಲ 21 ದಿನಗಳಷ್ಟೇ ಉಳಿದಿದೆ. ಇದೇ ಹೊತ್ತಲ್ಲಿ ಇಡೀ ಕರ್ನಾಟಕವೇ (Karnataka) ಹೆಮ್ಮೆ ಪಡುವ ವಿಚಾರವೊಂದು ಘಟಿಸಿದೆ. ಜನವರಿ 22ರಂದು ಪ್ರತಿಷ್ಠಾಪನೆಯಾಗಲಿರುವ ಬಾಲರಾಮನ (Ramlala) ವಿಗ್ರಹ ಯಾವುದು ಎಂಬ ಕುತೂಹಲಕ್ಕೆ ಹೆಚ್ಚು ಕಡಿಮೆ ತೆರೆ ಬಿದ್ದಿದೆ.
ಕರುನಾಡಿನ ರಾಮ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಮೈಸೂರು (Mysuru) ಮೂಲದ ಕಲಾವಿದ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರುವ ರಾಮ್‌ಲಲ್ಲಾ ವಿಗ್ರಹವನ್ನು ರಾಮಮಂದಿರ ಟ್ರಸ್ಟ್ ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.
ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರು ಮೂಲದ ಜಿಎಲ್ ಭಟ್, ರಾಜಸ್ಥಾನದ ಸತ್ಯನಾರಾಯಣ ಪಾಂಡೆಯವರಿಂದ ಮೂರು ಬಾಲರಾಮನ ವಿಗ್ರಹಗಳನ್ನು ಟ್ರಸ್ಟ್ ಕೆತ್ತಿಸಿತ್ತು. ಈ ಮೂರರಲ್ಲಿ ಅರುಣ್ ಯೋಗಿರಾಜ್ ಕೆತ್ತಿರುವ ವಿಗ್ರಹ ಫೈನಲ್ ಮಾಡಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ಹೇಳಲಾಗಿದೆ.ಹೆರಿಟೇಜ್ ಸೈನ್ಸ್ ತಜ್ಞರು, ಸಾಧುಸಂತರು, ಟ್ರಸ್ಟ್ ಸದಸ್ಯರಿಂದ ಈ ಆಯ್ಕೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?
ಬಾಲರಾಮನ ಮೂರ್ತಿ ವಿಶೇಷ ಏನು?
ಐದು ವರ್ಷದ ಬಾಲಕನ ರೂಪವನ್ನು ಹೊದಿಂದುದ್ದು ಧನುರ್ಧಾರಿ ರೂಪದಲ್ಲಿ ಕೆತ್ತಲಾಗಿದೆ. ಕಮಲದ ಮೇಲೆ ಕುಳಿತಿದ್ದು, ಪವಿತ್ರ ಕೃಷ್ಣಶಿಲೆಯಲ್ಲಿ ನಿರ್ಮಾಣವಾಗಿದೆ. 51 ಇಂಚು ಎತ್ತರವನ್ನು (4.3 ಅಡಿ) ಹೊಂದಿದೆ.
ಬಾಲರಾಮನ ಶಿಲಾ ವಿಶೇಷತೆ ಏನು?
ಮೈಸೂರಿನ ಕೃಷ್ಣಶಿಲೆಯಲ್ಲಿ ಮೂರ್ತಿ ಕೆತ್ತಲಾಗಿದ್ದು ಹಾರೋಹಳ್ಳಿಯ ರಾಮ್‌ದಾಸ್ ಜಮೀನಲ್ಲಿ ಈ ಶಿಲೆ ಸಿಕ್ಕಿತ್ತು. ಈ ಜಮೀನನ್ನು ಶ್ರೀನಿವಾಸ್ ಗುತ್ತಿಗೆ ಪಡೆದಿದ್ದರು. ಗುತ್ತಿಗೆದಾರ ಶ್ರೀನಿವಾಸ್ ಅವರನ್ನು ಸುರೇಂದ್ರ ವಿಶ್ವಕರ್ಮ ಸಂಪರ್ಕಿಸಿದ್ದರು.
ಮಾನಯ್ಯ ಬಡಿಗೇರ್ ಮೂಲಕ ಕೃಷ್ಣಶಿಲೆಯ ಪರೀಕ್ಷೆ ಮಾಡಿ ಅಯೋಧ್ಯೆ ಗುರುಗಳ ಸಮ್ಮುಖದಲ್ಲಿ ಮೂರ್ತಿ ಶಿಲೆಯನ್ನು ಅಂತಿಮಗೊಳಿಸಲಾಗಿತ್ತು. 19 ಟನ್ ತೂಕ, 9.8 ಅಡಿ ಉದ್ದದ ಶಿಲೆ ಅಯೋಧ್ಯೆಗೆ ರವಾನಿಸಲಾಗಿತ್ತು. ಶಿಲೆ ಕಳುಹಿಸಿದ ನಂತರ ಪ್ರಚಾರ ಪಡೆಯಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಶಿಲೆ ತೆಗೆದ ಸ್ಥಳವನ್ನು ಮಣ್ಣಿನಿಂದ ಮುಚ್ಚಿ ಭೂಮಿ ಸಮತಟ್ಟು ಮಾಡಲಾಗಿದೆ.