Tag: ಅರ್ಚಕರು

  • ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಬೆಂಗಳೂರು: ಜೈನ ಮಂದಿರಗಳ (Jain Temples) ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರಿಗೆ (Priests) ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

    ರಾಜ್ಯದ 1,043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರಿಗೆ ತಲಾ 5 ಸಾವಿರ ರೂ. ವೇತನ ನೀಡಲಾಗುವುದು. ಇದನ್ನೂ ಓದಿ: ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

    ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1,043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವರು ಆದೇಶ ಹೊರಡಿಸಿದರು. ಇದನ್ನೂ ಓದಿ: Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

  • ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.

    ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

    ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಷಯ್ ಕುಮಾರ್ ಸಿನಿಮಾ ವಿರುದ್ಧ ಸಿಡಿದೆದ್ದ ಉಜ್ಜಯಿನಿ ಅರ್ಚಕರು

    ಅಕ್ಷಯ್ ಕುಮಾರ್ ಸಿನಿಮಾ ವಿರುದ್ಧ ಸಿಡಿದೆದ್ದ ಉಜ್ಜಯಿನಿ ಅರ್ಚಕರು

    ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ‘ಓ ಮೈ ಗಾಡ್’ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸಿದ್ದ ಚಿತ್ರತಂಡ, ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ (Ujjain Mahakaleshwar) ದೇವಾಲಯದ ಅರ್ಚಕರ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ವಯಸ್ಕರ ಚಿತ್ರದ ಪ್ರಮಾಣ ಪತ್ರ ನೀಡಿರುವುದರಿಂದ ಅರ್ಚಕರು ಸಿಡಿದೆದ್ದಿದ್ದಾರೆ.

    ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಶಿವನ (Shiva) ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಶಿವತಾಂಡವ ನೃತ್ಯ ಕೂಡ ಮಾಡುತ್ತಾರಂತೆ. ಆ ದೃಶ್ಯಗಳನ್ನು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಆ ದೃಶ್ಯಗಳನ್ನು ಚಿತ್ರದಿಂದ ಕೈ ಬಿಡಬೇಕು ಎಂದು ಅರ್ಚಕರು (Priests) ಆಗ್ರಹ ಮಾಡಿದ್ದಾರೆ. ಒಂದು ವೇಳೆ ದೃಶ್ಯಗಳನ್ನು ಡಿಲೀಟ್ ಮಾಡದೇ ಇದ್ದರೆ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಓ ಮೈ ಗಾಡ್ ವಯಸ್ಕರ ಸಿನಿಮಾ

    ಬಾಲಿವುಡ್ (Bollywood) ಹೆಸರಾಂತ ನಟ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಓ ಮೈ ಗಾಡ್ 2’ (Oh My God 2)  ಸಿನಿಮಾ ವಿವಾದಿತ ಅಂಶಗಳು ಇರುವ ಕಾರಣದಿಂದಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ (ಸಿ.ಬಿ.ಎಫ್.ಸಿ) ಸೆನ್ಸಾರ್ ಪತ್ರವನ್ನು (Censor) ಕೊಡಲು ನಿರಾಕರಿಸಿತ್ತು (Denial). ಜೊತೆಗೆ ಈ ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿ ಕೊಡಲಾಗಿತ್ತು. ಪರಿಶೀಲನಾ ಸಮಿತಿಯು ಕೊನೆಗೂ ಚಿತ್ರಕ್ಕೆ ಪ್ರಮಾಣ ಪತ್ರ ದಯಪಾಲಿಸಿದೆ.

    ಸಿಬಿಎಫ್ಸಿ ಸಿನಿಮಾದ ಒಟ್ಟು 20 ಕಡೆ ದೃಶ್ಯಗಳನ್ನು ಕತ್ತರಿಸಲು ತಿಳಿಸಲಾಗಿತ್ತು. ಕೆಲವು ಕಡೆ ಮಾತುಗಳನ್ನು ಮ್ಯೂಟ್ ಮಾಡಲು ಹೇಳಲಾಗಿತ್ತು. ಇಷ್ಟೆಲ್ಲ ಮಾಡಿದರೂ ಚಿತ್ರಕ್ಕೆ ವಯಸ್ಕರು ನೋಡಬಹುದಾದ ಸಿನಿಮಾ ಎಂದು ‘ಎ’ ಸರ್ಟಿಫಿಕೇಟ್ ನೀಡಲಾಗಿತ್ತು. ಇದೀಗ ಒಂದಷ್ಟು ಬದಲಾವಣೆಯನ್ನು ಮಾಡಿಕೊಳ್ಳಲು ಹೇಳುವ ಮೂಲಕ ಪರಿಶೀಲನಾ ಸಮಿತಿಯೂ ‘ಎ’ ಪ್ರಮಾಣ ಪತ್ರ ನೀಡಿದೆ. ಹಾಗಾಗಿ 18 ವರ್ಷ ತುಂಬಿದವರು ಮಾತ್ರ ಈ ಸಿನಿಮಾ ನೋಡಬಹುದಾಗಿದೆ.

     

    ಅಕ್ಷಯ್ ಕುಮಾರ್ ಈ ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಈ ಪಾತ್ರದ ಮೂಲಕ ಲೈಂಗಿಕ ಶಿಕ್ಷಣವನ್ನು ಹೇಳಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಸೆನ್ಸಾರ್ ಪತ್ರವನ್ನು ನೀಡಲು ನಿರಾಕರಿಸಿತ್ತು. ಲೈಂಗಿಕ ಶಿಕ್ಷಣದ ಕುರಿತಾಗಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಇಂತಹ ವಿಷಯವನ್ನು ಶಿವನ ಮೂಲಕ ಹೇಳಲು ಹೊರಟಿರುವುದು ಸೆನ್ಸಾರ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮಗೆ ರಿಟೈರ್‌ಮೆಂಟ್‌ ಬೇಡ- ರಾಮಲಿಂಗಾ ರೆಡ್ಡಿಗೆ ಅರ್ಚಕರು ಮನವಿ

    ನಮಗೆ ರಿಟೈರ್‌ಮೆಂಟ್‌ ಬೇಡ- ರಾಮಲಿಂಗಾ ರೆಡ್ಡಿಗೆ ಅರ್ಚಕರು ಮನವಿ

    ಬೆಂಗಳೂರು: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಗೆ ಹಲವು ಬೇಡಿಕೆಗಳ ಈಡೇರಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ.

    ಬಳಿಕ ಒಕ್ಕೂಟದ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಮಾತನಾಡಿ, ಸರ್ಕಾರದಿಂದ ಧಾರ್ಮಿಕ ಪರಿಷತ್ ಮಾಡಿದ್ದಾರೆ ಅದು ರದ್ದಾಗಬೇಕು. ಧಾರ್ಮಿಕ ಪರಿಷತ್ ನಿಂದ ಸಚಿವರು, ಎಕ್ಸಿಕ್ಯೂಟಿವ್ ಆಫೀಸರ್, ಕಮೀಷನರ್‍ಗೆ ಪವರ್ ಇರಲಿಲ್ಲ. ಆದ್ದರಿಂದ ಈ ಧಾರ್ಮಿಕ ಪರಿಷತ್ ಅನ್ನು ತೆಗೆಯಬೇಕು ಎಂದಿದ್ದಾರೆ.

    ಅರ್ಚಕರಿಗೆ 60 ವರ್ಷಕ್ಕೆ ರಿಟೈರ್‌ ಮೆಂಟ್‌ (Priest Retirement) ತಂದಿದ್ದಾರೆ. ನಮಗೆ ರಿಟೈರ್‌ ಮೆಂಟ್‌ ಬೇಡ. ನಾವು ಸರ್ಕಾರಿ ನೌಕರರಲ್ಲ. ಗ್ರಾಮೀಣ ಭಾಗದ ದೇವಾಲಯಗಳ ಅರ್ಚಕರಿಗೆ ಎಲ್ಲಾ ಸಾಮಗ್ರಿಗಳನ್ನು ತಂದು ಪೂಜೆ ಮಾಡಲು ತಿಂಗಳಿಗೆ 5 ಸಾವಿರ ಕೊಡುತ್ತಿದ್ದಾರೆ. ಅದನ್ನು 10 ಸಾವಿರಕ್ಕೆ ಸಂಬಳ ಏರಿಸಬೇಕು ಎಂದು ಸಚಿವರ ಮುಂದೆ ಮನವಿ ಮಾಡಿದ್ದಾರೆ.

    ಈ ವೇಳೆ ಸಚಿವರು ಕೂಡಲೇ ತಮ್ಮ ಬೇಡಿಕೆಗಳನ್ನು ಸಭೆ ಕರೆದು ಪೂರೈಸತ್ತೇವೆ ಅಂತಾ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆ ಶಿವಕುಮಾರ್

  • ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ಪ್ರಭಾಸ್ ನಟಿಸಿರುವ ‘ಆದಿಪುರುಷ್’ (Adipurush) ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಈ ಹಿಂದೆ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗಿತ್ತು. ಇದೀಗ ಪ್ರತಿಭಟನೆಯ (Protest) ಅಖಾಡಕ್ಕೆ ಅಯೋಧ್ಯ (Ayodhya) ಅರ್ಚಕರು ಇಳಿದಿದ್ದು, ಈ ಸಿನಿಮಾವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಮನಿಗೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದ್ದಾರೆ.

    ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಟೀಸರ್ ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾ ಬೆನ್ನು ಬಿದ್ದಿದ್ದು, ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಆದ ಪ್ರಮಾದಗಳನ್ನು ಪಟ್ಟಿ ಮಾಡಿರುವ ಅವರು, ತಪ್ಪುಗಳನ್ನು ತಿದ್ದಿಕೊಳ್ಳಲು ಸೂಚಿಸಿದ್ದಾರೆ.

    ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಮಿಶ್ರಾ, ಲೆದರ್ ಬಟ್ಟೆಗಳನ್ನು ಹಾಕಿರುವ ಕುರಿತು ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಪತ್ರ ಬರೆಯುವುದಾಗಿ ತಿಳಿಸಿರುವ ಅವರು, ಒಂದು ವೇಳೆ ಆ ದೃಶ್ಯಗಳನ್ನು ತಗೆದು ಹಾಕದೇ ಇದ್ದರೆ ಕಾನೂನು ಕ್ರಮಕ್ಕೂ ತಾವು ಹಿಂಜರಿಯುವುದಿಲ್ಲ ಎನ್ನುತ್ತಾರೆ.  ಇಂತಹ ಅಪಮಾನಗಳನ್ನು ಯಾವತ್ತಿಗೂ ಹಿಂದೂಗಳ ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ಆದಿ ಪುರುಷ್ ಟೀಸರ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಪ್ರಭಾಸ್ (Prabhas) ಕೂಡ ಕೋಪ ಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭ ಮುಗಿದ ನಂತರ ನಿರ್ದೇಶಕರನ್ನು ತಮ್ಮ ರೂಮ್ ಗೆ ಕರೆದು ಬೈದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಸೈಫ್ ಅಲಿ ಖಾನ್ ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾವಣನ ರೀತಿಯಲ್ಲಿ ಅವರು ಕಾಣುತ್ತಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇದಾರನಾಥನ ಗರ್ಭಗುಡಿಗೆ ಚಿನ್ನದ ಲೇಪ ಬೇಡ- ಅರ್ಚಕರ ವಿರೋಧ

    ಕೇದಾರನಾಥನ ಗರ್ಭಗುಡಿಗೆ ಚಿನ್ನದ ಲೇಪ ಬೇಡ- ಅರ್ಚಕರ ವಿರೋಧ

    ಡೆಹ್ರಾಡೂನ್: ಉತ್ತರಾಖಂಡದ(Uttarakhand) ಜಗತ್ಪ್ರಸಿದ್ಧ ಕೇದಾರನಾಥ ದೇವಾಲಯದ(Kedarnath Temple) ಗರ್ಭಗುಡಿಯೊಳಗಿನ ಗೋಡೆಗೆ ಚಿನ್ನದ ಲೇಪನ(Gold Plating) ಮಾಡುವುದಕ್ಕೆ ಕೆಲ ಅರ್ಚಕರು(Priests) ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಶತಮಾನಗಳಷ್ಟು ಹಳೆಯ ಸಂಪ್ರದಾಯವನ್ನು ಹಾಳು ಮಾಡುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ಕೇದಾರನಾಥ ದೇವಾಲಯದ ಗರ್ಭಗುಡಿಯಲ್ಲಿ ಗೋಡೆಯ ನಾಲ್ಕೂ ಬದಿಗಳಲ್ಲಿ ಬೆಳ್ಳಿಯ ತಟ್ಟೆಗಳಿಂದ ಮುಚ್ಚಲಾಗಿದೆ. ಇದೀಗ ಚಿನ್ನದ ಲೇಪವನ್ನು ಅಳವಡಿಸಲು ಈ ಬೆಳ್ಳಿಯ ತಟ್ಟೆಗಳನ್ನು ತೆಗೆಯಬೇಕಾಗುತ್ತದೆ. ಚಿನ್ನದ ಲೇಪವನ್ನು ಹಾಕುವ ಪ್ರಕ್ರಿಯೆಯಲ್ಲಿ ದೊಡ್ಡ ಕೊರೆಯುವ ಯಂತ್ರಗಳನ್ನು ಬಳಸಲಾಗುತ್ತದೆ. ಇವುಗಳಿಂದ ದೇವಾಲಯದ ಗೋಡೆಗೆ ಹಾನಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಹಾರಾಷ್ಟ್ರದ ಶಿವಭಕ್ತರೊಬ್ಬರು ದೇವಾಲಯದ ಗರ್ಭಗುಡಿಯ ಗೋಡೆಗೆ ಚಿನ್ನದ ಲೇಪಕ್ಕೆ ಚಿನ್ನವನ್ನು ಅರ್ಪಣೆ ಮಾಡಿದ್ದಾರೆ. ಈ ಪ್ರಸ್ತಾಪವನ್ನು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ರಾಜ್ಯ ಸರ್ಕಾರದ ಅನುಮತಿಯೊಂದಿಗೆ ಅಂಗೀಕರಿಸಿದ್ದು, ದೇವಾಲಯದ ಗೋಡೆಗೆ ಚಿನ್ನದ ಲೇಪ ಮಾಡಲಾಗುತ್ತಿದೆ. ಇದನ್ನೂ ಓದಿ: ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    ಆದರೆ ಈ ಚಿನ್ನದ ಲೇಪದಿಂದ ದೇವಾಲಯದ ಗೋಡೆಗೆ ಹಾನಿಯಾಗುತ್ತಿದೆ. ಈ ಉದ್ದೇಶಕ್ಕಾಗಿ ದೊಡ್ಡ ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಲಾಗುತ್ತಿದೆ. ದೇವಾಲಯದ ಶತಮಾನಗಳ ಹಳೆಯ ಸಂಪ್ರದಾಯವನ್ನು ಈ ರೀತಿಯಾಗಿ ಹಾಳು ಮಾಡುವುದನ್ನು ನಾವು ಸಹಿಸುವುದಿಲ್ಲ ಎಂದು ಯಾತ್ರಾರ್ಥಿ ಸಂತೋಷ್ ತ್ರಿವೇದಿ ಕೇದಾರನಾಥದಲ್ಲಿ ಹೇಳಿದ್ದಾರೆ.

    ಗರ್ಭಗುಡಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕೆಲ ಅರ್ಚಕರು ಮಾತ್ರವೇ ವಿರೋಧ ವ್ಯಕ್ತಪಡಿಸಿದ್ದು, ಕೆಲ ಹಿರಿಯ ಅರ್ಚಕರು ಈ ನಿರ್ಧಾರಕ್ಕೆ ಒಲವು ತೋರಿದ್ದಾರೆ. ಇದರಿಂದಾಗಿ ಕೇದಾರನಾಥದ ಅರ್ಚಕರಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗದೆ. ಇದನ್ನೂ ಓದಿ: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ದೇಹದಾನ ಮಾಡಿ ಸಾರ್ಥಕತೆ ಮೆರೆದ ಅಭಿಮಾನಿ ಶಿಲ್ಪಾ

    ಈ ಬಗ್ಗೆ ಮಾತನಾಡಿದ ಹಿರಿಯ ಅರ್ಚಕ ಶ್ರೀನಿವಾಸ್ ಪೋಸ್ತಿ ಹಾಗೂ ಕೇದಾರಸಭಾ ಮಾಜಿ ಅಧ್ಯಕ್ಷ ಮಹೇಶ್ ಬಗ್ವಾಡಿ, ದೇವಾಲಯವು ಸನಾತನ ನಂಬಿಕೆಯ ಪ್ರಮುಖ ಕೇಂದ್ರವಾಗಿದೆ. ಅದರ ಗೋಡೆಗಳಿಗೆ ಚಿನ್ನದ ಲೇಪವನ್ನು ಅಳವಡಿಸುತ್ತಿರುವುದು ಹಿಂದೂ ನಂಬಿಕೆ ಹಾಗೂ ಸಂಪ್ರದಾಯಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಬೆಂಗಳೂರು: 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರನ್ನ (Siddaramaiah) ಆಶೀರ್ವದಿಸಲು ಆಗಮಿಸಿದ್ದ ಅರ್ಚಕರು ಮತ್ತೆ ಮುಖ್ಯಂತ್ರಿಯಾಗುವಂತೆ (Chief Minister) ಆಶೀರ್ವಾದಿಸಿದ್ದಾರೆ.

    ಅಖಿಲ ಕರ್ನಾಟಕ ಮುಜರಾಯಿ ದೇವಾಲಯಗಳ (Muzarai Temple) ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಮುಜರಾಯಿ ದೇವಾಲಯಗಳಿಂದ 70ಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಇಲ್ಲಿನ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ 70ಕ್ಕೂ ಹೆಚ್ಚು ಅರ್ಚಕರು (Priests), ಎಲ್ಲಾ ದೇವಸ್ಥಾನಗಳ (Temple) ಆಶೀರ್ವಾದ ನಿಮಗಿದೆ. ನೀವು ಮತ್ತೆ ಮುಖ್ಯಮಂತ್ರಿಯಾಗಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್‌ (JDS)ನಿಂದ ಭರ್ಜರಿ ತಯಾರಿ ನಡೆಯುತ್ತಿವೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಸಮಾವೇಶಗಳ ಪರ್ವ ಆರಂಭವಾಗಿದೆ. ಎಲ್ಲ ಪಕ್ಷಗಳು ರಾಜಕೀಯ ಘಟಾನುಘಟಿಗಳಿಗೆ ಸಂಘಟನೆಯ ಉಸ್ತುವಾರಿ ನೀಡಿದ್ದು ಪಕ್ಷ ಸಂಘಟನೆಯ ತಯಾರಿ ನಡೆಸಿವೆ. ಇದೇ ಸಂದರ್ಭದಲ್ಲಿ ಅರ್ಚಕರು ಸಿದ್ದರಾಮಯ್ಯರನ್ನ ಬೆಂಬಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು

    ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು

    ಚಾಮರಾಜನಗರ: ಸರ್ವೇಜನ ಸುಖಿನೋಭವಂತು ಎಂದು ಹೇಳಿ ದೇವರನ್ನು ಪೂಜಿಸುವವರು ಅರ್ಚಕರು. ಆದ್ರೆ ಅವರ ಜೀವನವೇ ಸುಖದಲ್ಲಿಲ್ಲ. ಯಾಕಂದ್ರೆ ಮುಜರಾಯಿ ಇಲಾಖೆಗೆ ಸೇರಿರುವ ಸಿ ದರ್ಜೆಯ ದೇವಾಲಯಗಳ ಅರ್ಚಕರ ಸಂಬಳ ಕೇಳಿದ್ರೆ ನೀವೆಲ್ಲಾ ನಿಬ್ಬೆರಗಾಗ್ತೀರಾ.

    ಮುಜರಾಯಿ ಇಲಾಖೆಯ ಸುಪರ್ದಿಗೆ ಒಳಪಡುವ ಸಿ ಗ್ರೇಡ್ ದೇವಾಲಯದ ಅರ್ಚಕರ ತಿಂಗಳ ಸಂಬಳ ಕೇವಲ 2.50 ಪೈಸೆ ಮಾತ್ರ. ಇಂದು ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಚಾಮರಾಜನಗರದ ಹೊರವಲಯದಲ್ಲಿರುವ ಹರಳುಕೋಟೆಯ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಅರ್ಚಕ ಅನಂತ ಪ್ರಸಾದ್ ತಮ್ಮ ಸಂಕಷ್ಟವನ್ನು ತೋಡಿಕೊಂಡರು. ನಮಗೆ ನಮ್ಮ ತಂದೆ ಕಾಲದಿಂದಲೂ ತಿಂಗಳಿಗೆ ಕೇವಲ 2.50 ಪೈಸೆ ಸಂಬಳ, ಪಡಿತರಕ್ಕೆ 4.74 ಪೈಸೆ ಬರುತ್ತದೆ. ಇದರಿಂದ ಜೀವನ ನಿರ್ವಹಣೆ ಮಾಡಲು ಕಷ್ಟ. ಇನ್ನು ಮುಂದಾದರೂ ನಮ್ಮ ಸಿ ಗ್ರೇಡ್ ದೇವಾಲಯದ ಅರ್ಚಕರ ಸಂಬಳ ಜಾಸ್ತಿ ಮಾಡಿಸುವಂತೆ ಮನವಿ ಮಾಡಿಕೊಂಡರು. ಇದನ್ನೂ ಓದಿ: ನಾನು ಕಾಂಗ್ರೆಸ್ ಕಾರ್ಯಕರ್ತ – ಮೊಟ್ಟೆ ಎಸೆದಿದ್ದಕ್ಕೆ ಸಂಪತ್ ಕೊಟ್ಟ ಸ್ಪಷ್ಟನೆ ಏನು..?

    ದೇವಾಲಯದ ಪಡಿತರಕ್ಕೆಂದು ತಿಂಗಳಿಗೆ 4.74 ಪೈಸೆ ನೀಡಲಾಗುತ್ತದೆ. ಈ ಹಣದಲ್ಲಿ ಒಂದು ದಿನದ ಎಣ್ಣೆ ಬತ್ತಿಗೂ ಸಾಲುವುದಿಲ್ಲ. 5 ವರ್ಷದಿಂದ ಅರ್ಚಕರಿಗೆ ಸಂಬಳ ಬಂದಿಲ್ಲ ಎಂದರು. ಇದನ್ನೆಲ್ಲಾ ಕೇಳಿಸಿಕೊಂಡ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಒಂದು ಕ್ಷಣ ತಬ್ಬಿಬ್ಬಾದರು. ಅಲ್ಲದೇ ಇಂತಹ ಮುಂದುವರಿದಿರುವ ಕಾಲದಲ್ಲೂ ಇಷ್ಟು ಕಡಿಮೆ ಸಂಬಳ ಅಂದ್ರೆ ಅವರ ಜೀವನ ಹೇಗೆ. ಪರಿಸ್ಥಿತಿ ಹೀಗಿದ್ರೂ ನಾವೆಲ್ಲಾ ಏನು ಮಾಡುತ್ತಿದ್ದೇವೆ ಎಂದು ಬೇಸರಗೊಂಡ ಉಪಲೋಕಾಯುಕ್ತರು 15 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ.. ಸೇದಿ ಬಿಸಾಕಿದ ಬೀಡಿ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ಬನಶಂಕರಿ ದೇಗುಲದಲ್ಲಿ ಕಲಹ – ಮುಜರಾಯಿ ಆಯುಕ್ತರಿಗೆ ಅರ್ಚಕರ ವಿರುದ್ಧವೇ ದೂರು

    ಬನಶಂಕರಿ ದೇಗುಲದಲ್ಲಿ ಕಲಹ – ಮುಜರಾಯಿ ಆಯುಕ್ತರಿಗೆ ಅರ್ಚಕರ ವಿರುದ್ಧವೇ ದೂರು

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶ್ರೀಮಂತ ದೇಗುಲಗಳಲ್ಲಿ ಬನಶಂಕರಿ ದೇವಾಲಯ ಕೂಡ ಒಂದಾಗಿದೆ. ಇದೀಗ ಬನಶಂಕರಿ ದೇಗುಲದಲ್ಲಿ ಆಂತರಿಕ ಕಲಹ ಎದ್ದಿದೆ. ದೇವಿಯ ಅಭಿಷೇಕಕ್ಕೆ ಭಕ್ತರು ತಂದ ಹಾಲು ಹೂವಿನ ಹಾರ ನಿಂಬೆಹಣ್ಣು ದೇವಿಗೆ ಸಮರ್ಪಣೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಬನಶಂಕರಿ ದೇಗುಲದ ಅಂಗಳದಲ್ಲಿ ದೇವಿಗಾಗಿ ಭಕ್ತರು ತಂದಿದ್ದ ಹೂವಿನ ದೊಡ್ಡ ದೊಡ್ಡ ಹಾರ, ಜೊತೆಗೆ ನಿಂಬೆಹಣ್ಣಿನ ಹಾರ ಹೀಗೆ ಎಲ್ಲವನ್ನು ಹೆಗಲ ಮೇಲೆ ಹೊತ್ತೊಯ್ದು ಚಾಲಕನೋರ್ವ ಕಾರಿನಲ್ಲಿ ತುಂಬಿಕೊಂಡು ಹೋಗಿದ್ದಾನೆ. ಮತ್ತೊಂದೆಡೆ ದೇವಿಗಾಗಿ ತಂದ ಹಾಲು ಕೂಡ ಸಾಗಾಟ ಮಾಡಲಾಗುತ್ತಿದೆ. ಜೊತೆಗೆ ಸೆಕ್ಯೂರಿಟಿಗಳ ಸಹಾಯದಿಂದ ಅರ್ಚಕರು ದೇವಿಗೆ ಭಕ್ತರು ಅರ್ಪಿಸಿದ ಹೂವಿನ ಹಾರ ಮಡಿಲಕ್ಕಿ, ಸೀರೆಯನ್ನು ಕದ್ದು ಮನೆಗೆ ಸಾಗಿಸುತ್ತಾರೆ ಎಂದು ಧಾರ್ಮಿಕ ಪರಿಷತ್ ಸದಸ್ಯ ವೆಂಕಟೇಶ್ ಗಂಭೀರ ಆರೋಪವನ್ನು ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಮುಜರಾಯಿ ಇಲಾಖೆ ಹಾಗೂ ಡಿಸಿಗೆ ಕೂಡ ದೂರು ನೀಡಲಾಗಿದೆ.  ಇದನ್ನೂ ಓದಿ: ಏಕೆ ಗುರಾಯಿಸ್ತಿದ್ಯಾ ಅಂದಿದ್ದಕ್ಕೆ ಯುವಕನಿಗೆ ಚಾಕು ಇರಿತ

    ಈ ರೀತಿ ಸಾಗಾಟದ ದೃಶ್ಯವನ್ನು ಕೂಡ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಇನ್ನು ಸಾಕಷ್ಟು ದಿನದಿಂದ ಈ ರೀತಿ ದೇವಿಗೆ ಭಕ್ತರು ಅರ್ಪಿಸಿದ ವಸ್ತುಗಳನ್ನು ದುರುಪಯೋಗವಾಗುತ್ತಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಹೂಡಿಕೆ ಉತ್ತೇಜನಕ್ಕೆ ಭಾರತೀಯ ಹೂಡಿಕೆದಾರರಿಗೆ ವೀಸಾ ನೀಡಿದ ಶ್ರೀಲಂಕಾ

    Live Tv

  • ದೇವರ ಹೆಸರಲ್ಲಿ ಅರ್ಚಕರಿಂದಲೇ ಭಕ್ತರಿಗೆ ಪಂಗನಾಮ – ಕೋಟಿ ಕೋಟಿ ವಂಚನೆ

    ದೇವರ ಹೆಸರಲ್ಲಿ ಅರ್ಚಕರಿಂದಲೇ ಭಕ್ತರಿಗೆ ಪಂಗನಾಮ – ಕೋಟಿ ಕೋಟಿ ವಂಚನೆ

    ಕಲಬುರಗಿ: ದೇವರು ಎಂದರೆ ಭಯಭಕ್ತಿ ಹೆಚ್ಚು. ಆದರೆ ಇಲ್ಲಿ ಕೆಲ ವಂಚಕರು ಭಯಭಕ್ತಿ ಎಲ್ಲವನ್ನು ಬಿಟ್ಟು ದೇವರ ಹೆಸರಿನಲ್ಲಿಯೇ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದೇವರ ಹೆಸರಿನಲ್ಲಿ ಭಕ್ತರಿಗೆ ವಂಚಿಸಿರುವುದು ಸ್ವತಃ ಅರ್ಚಕರು ಎನ್ನುವುದು ಇಲ್ಲಿ ಬೆಚ್ಚಿಬೀಳಿಸುವ ಸಂಗತಿ.

    ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆಮೂಲೆಗಳಲ್ಲಿ ಭಕ್ತರಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗಾಣಗಾಪುರದ ಕೆಲ ಅರ್ಚಕರು ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು, ದೇವರ ಜೊತೆಗೆ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದತ್ತಾತ್ರೇಯ ದೇವಸ್ಥಾನಕ್ಕೆ ಕಲಬುರಗಿ ಡಿಸಿ ಯಶವಂತ್ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ. ಇದನ್ನೂ ಓದಿ: ಮೈಸೂರು ಆಯ್ತು ಈಗ ಹೈದರಾಬಾದ್‌ ಕರ್ನಾಟಕದತ್ತ ಕಣ್ಣು – ಬಿಜೆಪಿಯಿಂದ ಟಾರ್ಗೆಟ್‌ 25 ಫಿಕ್ಸ್‌

    ದೇವಸ್ಥಾನದ ಅಧಿಕೃತ ವೆಬ್‌ಸೈಟ್ www.devalgangapur.com (Shri dattatreya temple.ghanagapur) ಎಂದಿದೆ. ಆದರೆ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ ಅರ್ಚಕರೇ 7-8 ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿ ಮಾಡಿದ್ದಾರೆ. ದರ್ಶನ, ವಿಶೇಷ ಪೂಜೆ, ಅರ್ಚನೆ ಸೇರಿ ದೂರದ ಊರಿನಲ್ಲಿಯೇ ಕುಳಿತು ಆನ್‌ಲೈನ್ ಬುಕ್ ಮಾಡುವ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ದೇವಸ್ಥಾನಕ್ಕೆ ಸಲ್ಲಿಸುವ ದಾನವನ್ನು ಕೂಡಾ ವಂಚಕರು ತಮ್ಮ ಖಾತೆಗಳಿಗೆ ಹಾಕಿಸಿಕೊಂಡು ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆಯೂ ಮೋಸ ಮಾಡಿರುವಂತೆ ಕಂಡುಬಂದಿದೆ. ಎಣಿಕೆ ವೇಳೆ ಸಿಸಿ ಕ್ಯಾಮೆರಾ ಕಣ್ಣುಗಳನ್ನು ಮುಚ್ಚಿ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ದೇವಸ್ಥಾನದ ಅಧ್ಯಕ್ಷ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಸೂಚನೆ ಮೇರೆಗೆ ದೇವಲಗಾಣಗಾಪುರ ಠಾಣೆಯಲ್ಲಿ ಗಂಗಾಧರ್ ಪೂಜಾರಿ, ಶರತ್ ಭಟ್ ಪೂಜಾರಿ, ವಲ್ಲಭ ಪೂಜಾರಿ, ಅಂಕುರ ಪೂಜಾರಿ, ಪ್ರತಿಕ್ ಪೂಜಾರಿ ಸೇರಿದಂತೆ ಒಟ್ಟು 7 ವಂಚಕರ ಮೇಲೆ ದೂರು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಇಂದು ಚಾಲನೆ – 3 ದಿನಗಳ ಶೈಕ್ಷಣಿಕ ಮೇಳಕ್ಕೆ ಬನ್ನಿ

    ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲೇ ನಕಲಿ ವೆಬ್‌ಸೈಟ್‌ಗಳು ಬಂದ್ ಆಗಿದೆ. ಸುಮಾರು 3-4 ವರ್ಷಗಳಿಂದ ವಂಚನೆ ನಡೆದಿದ್ದು, ದೇವಸ್ಥಾನದಿಂದ ಮುಜರಾಯಿ ಇಲಾಖೆಗೆ ಬರಬೇಕಾದ ಕೋಟ್ಯಂತರ ರೂ. ಆದಾಯ ಖದೀಮರು ನುಂಗಿಹಾಕಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.

    Live Tv