Tag: ಅರ್ಜುನ್ ರಾಮ್ ಮೇಘವಾಲ್

  • ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ತೆರಿಗೆ ಹೇರಿಕೆ – ಕೇಂದ್ರ ಕಾನೂನು ಸಚಿವರ ಜೊತೆ ಹೆಚ್‌ಡಿಕೆ ಸಭೆ

    ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ತೆರಿಗೆ ಹೇರಿಕೆ – ಕೇಂದ್ರ ಕಾನೂನು ಸಚಿವರ ಜೊತೆ ಹೆಚ್‌ಡಿಕೆ ಸಭೆ

    ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರ್ಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರೊಂದಿಗೆ ಮಹತ್ವದ ಸಭೆ ನಡೆಸಿದರು.

    ನವದೆಹಲಿಯ (Newdelhi) ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಗುರುವಾರ (ಜ.9) ನಡೆದ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿ: ತಿರುಪತಿಯಲ್ಲಿ ಕಾಲ್ತುಳಿತ ದುರಂತ – ಬೆಂಗಳೂರಿನ ಟಿಟಿಡಿ ದೇವಸ್ಥಾನದ ಭದ್ರತೆ ಪರಿಶೀಲಿಸಿದ ಪೊಲೀಸರು

    ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ ಎಂದರು.

    ಮುಖ್ಯವಾಗಿ 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂತಹ ಮಹತ್ವಾಕಾಂಕ್ಷೆಯ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

    ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.ಇದನ್ನೂ ಓದಿ: ಶರಣಾದ ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ ಆಗ್ರಹ

    :

  • ಜು.1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ – ಅರ್ಜುನ್ ರಾಮ್ ಮೇಘವಾಲ್

    ಜು.1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ – ಅರ್ಜುನ್ ರಾಮ್ ಮೇಘವಾಲ್

    ಕೋಲ್ಕತ್ತಾ: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ತಿಳಿಸಿದ್ದಾರೆ.

    ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮುಂದುವರಿದು ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಇಂದಿನ ಕಾಲದ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಮೂರು ಕಾಯ್ದೆಗಳನ್ನು ಜಾರಿ ಮಾಡಲಾಗುತ್ತದೆ. ಈಗಾಗಲೇ ಬಿಪಿಆರ್‌ಡಿ, ಜ್ಯೂಡಿಷಿಯಲ್ ಅಕಾಡೆಮಿಗಳು, ಕಾನೂನು ವಿಶ್ವವಿದ್ಯಾಲಯಗಳು ಅಧಿಕಾರಿಗಳಿಗೆ ತರಬೇತಿ ನೀಡುತ್ತಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸ್ಪೀಕರ್‌ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್‌ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?

    2023ರ ಡಿಸೆಂಬರ್‌ನಲ್ಲಿ ಈ ಮೂರು ಕಾನೂನುಗಳನ್ನು ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಬಳಿಕ ಈ ಮೂರು ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಆದ್ರೆ ಕೇಂದ್ರ ಸರ್ಕಾರ ಅಧಿಸೂಚನೆ ಮುಂದೂಡಿದ್ದರಿಂದ ಅಧಿಕೃತವಾಗಿ ಜಾರಿಗೆ ಬಂದಿರಲಿಲ್ಲ. ಪ್ರಸಕ್ತ ವರ್ಷಾರಂಭದಲ್ಲಿ ಮೂರು ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‍ಕೌಂಟರ್ – ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ

  • ಕೇಂದ್ರ ಸಚಿವರನ್ನು ಭೇಟಿಯಾದ 6 ವರ್ಷದ ʼರೈಲ್‌ ಮಂತ್ರಿʼ!

    ಕೇಂದ್ರ ಸಚಿವರನ್ನು ಭೇಟಿಯಾದ 6 ವರ್ಷದ ʼರೈಲ್‌ ಮಂತ್ರಿʼ!

    ನವದೆಹಲಿ: ʼರೈಲ್‌ ಮಂತ್ರಿʼಯೆಂದೇ (Rail Mantri) ಕರೆಯಲ್ಪಡುವ 6 ವರ್ಷದ ಬಾಲಕ ಇದೀಗ ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಡಾ. ಸುಭಾಷ್ ಸರ್ಕಾರ್ ಅವರನ್ನು ಭೇಟಿಯಾಗಿದ್ದಾನೆ.

    ಬಾಲಕ ದೀನದಯಾಳ್ ಕುಮಾರ್ ಗುಪ್ತಾ (Deendayal Kumar Gupta) ಶುಕ್ರವಾರ ಸಂಸತ್ತಿನಲ್ಲಿ ಸಚಿವರನ್ನು ಭೇಟಿಯಾಗಿದ್ದಾನೆ. ಈ ವೇಳೆ ತಾನು ದೊಡ್ಡವನಾದ ಮೇಲೆ ರೈಲ್ವೆ ಸಚಿವರಾಗುವ ಆಸೆಯಿದೆ ಎಂದು ಹೇಳಿದ್ದಾನೆ.

    ರೈಲ್‌ ಮಂತ್ರಿ ಎಂಬ ಹೆಸರು ಬರಲು ಕಾರಣವೇನು..?: ತುಂಬು ಗರ್ಭಿಣಿಯಾಗಿದ್ದ ಜಾರ್ಖಂಡ್‌ ಮೂಲದ ದೇವಿ 2017ರ ಡಿಸೆಂಬರ್ 24 ರಂದು ಗಂಡನ ಮನೆಯಿಂದ ಪಶ್ಚಿಮ ಬಂಗಾಳದ ಬಂಕುರಾಗೆ ಪ್ರಯಾಣಿಸುತ್ತಿದ್ದರು. ಅಂತೆಯೇ ಚಕ್ರಧರಪುರ-ಹೌರಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ʻಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿʼ – ಪ್ರಚೋದನಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಕೇಸ್‌

    ‌ಇದೇ ರೈಲಿನಲ್ಲಿ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಸುಭಾಷ್ ಸರ್ಕಾರ್ (Arjun Ram Meghwal and Dr Subhash Sarkar) ಒಂದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇತ್ತ ದೇವಿಗೆ ಹೆರಿಗೆ ನೋವು ಕಾಣಿಸಿಕೊಂಡ ನಂತರ ರೈಲನ್ನು ಪುರುಲಿಯಾದಲ್ಲಿ ನಿಲ್ಲಿಸಲಾಯಿತು. ಈ ವೇಳೆ ಡಾ.ಸರ್ಕಾರ್ ಅವರು  ಸ್ತ್ರೀರೋಗತಜ್ಞ ಎಂದು ಮೇಘವಾಲ್ ಅವರು ರೈಲ್ವೆ ಸಿಬ್ಬಂದಿಗೆ ತಿಳಿಸಿದರು. ಅದರಂತೆ ಮಹಿಳೆಗೆ ಹೆರಿಗೆ ಮಾಡಿಸಲು ಬೇಕಾದ ಉಪಕರಣಗಳನ್ನು ಸಿದ್ಧಪಡಿಸಿದ್ದು, ಮಹಿಳೆ ಗಂಡು ಮಗುವಿಗೆ ಜನ್ಮ ನೀಡುವಲ್ಲಿ ಸಹಾಯ ಮಾಡಿದ್ದರು. ಇದೇ ವೇಳೆ ಅರ್ಜುನ್ ರಾಮ್ ಮೇಘವಾಲ್ ಅವರು ಮಗುವಿಗೆ ದೀನದಯಾಳ್ ಎಂದು ಹೆಸರಿಸಿದರು.

    ಸದ್ಯ ಈತ ರೈಲಿನಲ್ಲಿ ಹುಟ್ಟಿದ್ದರಿಂದ ‘ರೈಲ್ ಮಂತ್ರಿ’ ಎಂಬ ಅಡ್ಡಹೆಸರಿನಿಂದ ಗುರುತಿಸಿಕೊಂಡಿದ್ದಾನೆ. ಇದೀಗ 6 ವರ್ಷದ ಬಳಿಕ ರೈಲಿನಲ್ಲಿ ತನ್ನ ಜನ್ಮಕ್ಕೆ ಸಹಾಯ ಮಾಡಿದ ಇಬ್ಬರನ್ನು ನಿನ್ನೆ ಭೇಟಿಯಾಗಿದ್ದಾನೆ.

  • ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆ – ಅರ್ಜುನ್ ಮೇಘವಾಲ್‍ಗೆ ಕಾನೂನು, ರಿಜಿಜುಗೆ ಭೂ ವಿಜ್ಞಾನ

    ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆ – ಅರ್ಜುನ್ ಮೇಘವಾಲ್‍ಗೆ ಕಾನೂನು, ರಿಜಿಜುಗೆ ಭೂ ವಿಜ್ಞಾನ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಂಪುಟ ಪುನರ್‌ರಚನೆಯಾಗಿದ್ದು (Cabinet) ಸಚಿವರಾದ ರಿಜಿಜು (Kiren Rijiju) ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.

    ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರಿಗೆ ಕಾನೂನು ಸಚಿವ (Law Minister) ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

    ರಿಜಿಜು 2021ರ ಜು.8 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು, ಅವರು ಮೇ 2019 ರಿಂದ ಜು. 2021 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಖಾತೆ)ಯನ್ನು ನೋಡಿಕೊಳ್ಳುತ್ತಿದ್ದರು.

    ಈ ವಾರ ನ್ಯಾಯಾಧೀಶರ ನೇಮಕಾತಿ ನಡೆಸುವ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ರಿಜಿಜು ನೀಡಿದ್ದ ಹೇಳಿಕೆಗಳ ವಿರುದ್ಧ ಬಾಂಬೆ ವಕೀಲರ ಸಂಘ (ಬಿಎಲ್‍ಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹೇಳಿಕೆ ಮತ್ತು ನಡವಳಿಕೆಯಿಂದಾಗಿ ಕೇಂದ್ರ ಸಚಿವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಬಿಎಲ್‍ಎ ಆರೋಪಿಸಿತ್ತು. ಅಷ್ಟೇ ಅಲ್ಲದೇ ಬಿಎಲ್‍ಎ ರಿಜಿಜು ಅವರು ಕಾನೂನು ಖಾತೆಯನ್ನು ನಿರ್ವಹಿಸದಂತೆ ಆದೇಶ ನೀಡಬೇಕೆಂದು ಮನವಿ ಮಾಡಿತ್ತು.

    ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಈ ಹಿಂದೆ ರಿಜಿಜು ಪತ್ರ ಬರೆದಿದ್ದರು. ಇದನ್ನೂ ಓದಿ: ಡಿಕೆಶಿಗೆ ಡಿಸಿಎಂ ಸ್ಥಾನ ನೀಡಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ ಸುರೇಶ್

  • ಹಪ್ಪಳ ಪ್ಯಾಕೇಟ್ ಬಿಡುಗಡೆ ಮಾಡಿ ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ

    ಹಪ್ಪಳ ಪ್ಯಾಕೇಟ್ ಬಿಡುಗಡೆ ಮಾಡಿ ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ

    ನವದೆಹಲಿ: ಕೊರೊನಾ ವೈರಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಗಲು ರಾತ್ರಿ ಹೋರಾಟ ನಡೆಸುತ್ತಿದ್ದರೆ, ಇತ್ತ ಅವರದ್ದೇ ಸಂಪುಟದ ಸಚಿವ ಅರ್ಜುನ್ ರಾಮ್ ಮೇಘವಾಲ್ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಕೆಲಸ ಮಾಡಿದ್ದಾರೆ.

    ಕೊರೊನಾ ಬಿಕ್ಕಿಟ್ಟಿನ ವೇಳೆ ಹಪ್ಪಳದ ಪ್ಯಾಕೇಟ್ ಬ್ರ್ಯಾಂಡ್‍ವೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈ ಹಪ್ಪಳ ಕೊರೊನಾ ವಿರುದ್ಧ ದೇಹದಲ್ಲಿ ಪ್ರತಿಕಾಯಗಳನ್ನು ಉತ್ಪಾದಿಸಲಿದೆ ಎಂದು ಸಂಸದೀಯ ಸಹಾಯಕ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

    ‘ಭಾಭಿ ಜಿ ಪಪಾಡ್’ ಹೆಸರಿನ ಹಪ್ಪಳ ಆತ್ಮ ನಿರ್ಭರ್ ಭಾರತ್ ಅಡಿಯಲ್ಲಿ ಉತ್ಪಾದನೆ ಮಾಡಲಾಗಿದೆ. ಇದು ಕೊರೊನಾ ವಿರುದ್ಧ ಹೋರಾಡಲು ಸಹಕಾರಿಯಾಗಲಿದೆ ಎಂದು ವಿಡಿಯೋ ಒಂದರಲ್ಲಿ ಹೇಳಿದ್ದಾರೆ. ಈ ಹಪ್ಪಳ ಬಿಡುಗಡೆಯ ವಿಡಿಯೋ ವೈರಲ್ ಆಗಿದ್ದು ಸಚಿವರ ವಿರುದ್ಧ ಟೀಕೆಗಳು ಕೇಳಿ ಬಂದಿದೆ.