Tag: ಅಲಹಬಾದ್

  • ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ದಿ ಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಹಾಗೂ ನವೀನ್ ಧವನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾನ್ ಮತ್ತು ಪ್ರಕಾಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ  ಜುಲೈ 27ಕ್ಕೆ ಸಿನಿಮಾದ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ಬರಹಗಾರ ಮನೋಜ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

    ಅಲ್ಲದೇ, ಈ ಸಿನಿಮಾವು ಸಾರ್ವಜನಿಕರ ಭಾವನೆಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಿದ ಐವರು ಸದಸ್ಯರಿರುವ ಸಮಿತಿಯನ್ನು ನೇಮಿಸಬೇಕು ಎಂದು ಸರಕಾರಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣಪತ್ರವನ್ನು ಮರುಪರಿಶೀಲಿಸಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

    ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

    ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಂಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಕ್ಸಿಜನ್ ಕೊರತೆಯಿಂದ ಸಾಯುವುದು ಯಾವ ನರಮೇಧಕ್ಕೂ ಕಮ್ಮಿಯಲ್ಲ: ಅಲಹಬಾದ್ ಹೈ ಕೋರ್ಟ್ ಚಾಟಿ

    ಆಕ್ಸಿಜನ್ ಕೊರತೆಯಿಂದ ಸಾಯುವುದು ಯಾವ ನರಮೇಧಕ್ಕೂ ಕಮ್ಮಿಯಲ್ಲ: ಅಲಹಬಾದ್ ಹೈ ಕೋರ್ಟ್ ಚಾಟಿ

    – ಆಕ್ಸಿಜನ್ ಕೊರತೆಯಿಂದ ಜನ ಸಾವನ್ನಪ್ಪಿದರೆ ಅಪರಾಧ ಕೃತ್ಯವೆಂದು ಪರಿಗಣಿಸಲಾಗುವುದು

    ಲಕ್ನೋ: ಕೊರೊನಾ ಎರಡನೇ ಅಲೆಗೆ ತತ್ತರಿಸಿ ಜನ ಆಕ್ಸಿಜನ್ ಕೊರತೆಯಿಂದ ನರಳಾಡಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಪ್ರದೇಶದ ಅಲಹಬಾದ್ ಹೈ ಕೋರ್ಟ್, ಆಕ್ಸಿಜನ್‍ನಿಂದ ವ್ಯಕ್ತಿ ಮರಣ ಹೊಂದುವುದನ್ನು ಅಪರಾಧ ಕೃತ್ಯವೆಂದು ಪರಿಗಣಿಸಲಾಗುವುದು. ಅಲ್ಲದೆ ಇದು ಯಾವ ನರಮೇಧಕ್ಕಿಂತ ಕಡಿಮೇ ಏನಲ್ಲ ಎಂದು ಎಚ್ಚರಿಸಿದೆ.

    ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆ ದೇಶಾದ್ಯಂತ ಆಕ್ಸಿಜನ್ ಕೊರತೆ ಕಾಡುತ್ತಿರುವುದನ್ನು ಅರಿತ ಕೋರ್ಟ್, ಈ ಕುರಿತು ಬೇಸರ ವ್ಯಕ್ತಪಡಿಸಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ನರಳಾಡಿ ಜನ ಸಾಯುತ್ತಿರುವುದನ್ನು ಕಂಡು ತುಂಬಾ ನೋವಾಗಿದೆ. ಆಮ್ಲಜನಕವಿಲ್ಲದೆ ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯವಾಗಿದೆ, ಇದು ನರಮೇಧಕ್ಕಿಂತಲೂ ಕಡಿಮೆ ಏನಲ್ಲ. ಆಕ್ಸಿಜನ್ ನಿರಂತರ ಸಂಗ್ರಹಣೆ ಹಾಗೂ ಪೂರೈಕೆ ಸರಪಳಿಯನ್ನು ಖಚಿತಪಡಿಸಿಕೊಳ್ಳುವ ಕೆಲಸ ವಹಿಸಿಕೊಂಡವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಅಜಿತ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಿದ್ಧಾರ್ಥ್ ವರ್ಮಾ ಅವರಿದ್ದ ಪೀಠ ಕಳವಳ ವ್ಯಕ್ತಪಡಿಸಿದೆ.

    ತಮ್ಮ ಪ್ರೀತಿ ಪಾತ್ರರ ಪ್ರಾಣ ಉಳಿಸಿಕೊಳ್ಳಲು ಆಮ್ಲಜನಕ ಸಿಲಿಂಡರ್ ಗಳ ಸಂಗ್ರಹಣೆಗಾಗಿ ಭಿಕ್ಷೆ ಬೇಡುತ್ತಿದ್ದಾರೆ. ಆಕ್ಸಿಜನ್ ಕೇಳಲು ಬಂದ ಬಡ ಜನರಿಗೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಿರುಕುಳ ನೀಡಿದ್ದಾರೆ. ಈ ವೀಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ ಎಂದು ಕೋರ್ಟ್ ಕಿಡಿಕಾರಿದೆ.

    ಭಾರತದಲ್ಲಿ ನಿತ್ಯ ನಾಲ್ಕು ಲಕ್ಷದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದು, ಬೆಡ್ ಹಾಗೂ ಆಕ್ಸಿಜನ್ ಕೊರತೆಯಿಂದ ಜನ ನರಳಾಡಿ ಪ್ರಾಣ ಬಿಡುತ್ತಿದ್ದಾರೆ. ಇಷ್ಟಾದರೂ ಆಡಳಿತ ಸರ್ಕಾರಗಳು ಮಾತ್ರ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ. ಹೀಗಾಗಿ ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

  • 10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    ಲಕ್ನೋ: ಬಡಜನರಿಗೆ ಕಡಿಮೆ ದರದಲ್ಲಿ ಊಟ ಸಿಗುವ ಯೋಜನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೆ ತಂದಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಾರಂಭಿಕವಾಗಿ ಅಲಹಾಬಾದ್‍ನಲ್ಲಿ 10 ರೂಪಾಯಿಗೆ ಊಟ ನೀಡುವ ಕ್ಯಾಂಟಿನನ್ನು ಆರಂಭಿಸಿದ್ದಾರೆ. ಭಾನುವಾರ ನೂತನ ಕ್ಯಾಂಟಿನನ್ನು  ಮೇಯರ್ ಅಭಿಲಾಷ ಗುಪ್ತಾರವರು ಉದ್ಘಾಟಿಸಿದ್ದಾರೆ. ಈ ಯೋಜನೆಗೆ ಯೋಗಿ ಥಾಲಿ ಎಂದು ಹೆಸರಿಡಲಾಗಿದೆ.

    ಉದ್ಘಾಟನೆಯ ನಂತರ ಮಾತನಾಡಿದ ಮೇಯರ್ ಗುಪ್ತರವರು, ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬಡ ವರ್ಗ ಹಾಗೂ ಅಂಗವೈಕಲ್ಯಕ್ಕೆ ತುತ್ತಾದ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಯೋಜನೆ ರೂವಾರಿ ದಿಲೀಪ್ ಅಲಿಯಾಸ್ ಕಾಕೆ, ಖಾಲಿ ಹೊಟ್ಟೆಯಲ್ಲಿ ಯಾರೂ ಮಲಗಬಾರದು ಎಂಬ ಉದ್ಧೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಬಡ ಜನರಿಗಾಗಿ ದುಡಿಯುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಅವರ ಹೆಸರಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಪ್ರಾರಂಭಿಕವಾಗಿ ಅಲಹಾಬಾದ್‍ನ ಅಟಾರ್ಸುಯಿಯಾ ಭಾಗದಲ್ಲಿರುವ ಮಳಿಗೆಯಲ್ಲಿ ಕ್ಯಾಂಟೀನ್ ಆರಂಭಗೊಳಿಸಲಾಗಿದ್ದೇವೆ ಎಂದು ತಿಳಿಸಿದರು.

    ಈಗಾಗಲೇ ಕರ್ನಾಟಕದಲ್ಲಿ ಇಂದಿರಾ, ತಮಿಳುನಾಡಿನಲ್ಲಿ ಅಮ್ಮಾ, ಆಂಧ್ರಪ್ರದೇಶದಲ್ಲಿ ಅಣ್ಣಾ ಕ್ಯಾಂಟೀನ್ ಆರಂಭಗೊಂಡಿದ್ದು, ಕಡಿಮೆ ಬೆಲೆಗೆ ಬಡವರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv