Tag: ಅಲ್ಪಸಂಖ್ಯಾತರು

  • ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

    ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

    ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರತಿ ಜೋಡಿಗೆ 50 ಸಾವಿರ ರೂ. ಕೊಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ.ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

    ರಾಜ್ಯ ಬಜೆಟ್‌ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ, ಪ್ರತಿ ಜೋಡಿಗೆ 5 ಸಾವಿರ ರೂ. ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ 5 ಸಾವಿರ ಜೋಡಿ ಮಿತಿವರೆಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ ಎಂದು ತಿಳಿಸಿದೆ.

    ಇದೇ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೆ ತರಗತಿ ಪ್ರಾರಂಭಿಸಲು ಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಜಾದ್ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶ ಹೊರಡಿಸಲಾಗಿದೆ.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

  • 50 ಮೌಲಾನ ಆಜಾದ್ ಮಾದರಿ ಶಾಲೆ ತೆರೆಯಲು ಸರ್ಕಾರ ಆದೇಶ – ವಿಪಕ್ಷಗಳ ಕಿಡಿ

    50 ಮೌಲಾನ ಆಜಾದ್ ಮಾದರಿ ಶಾಲೆ ತೆರೆಯಲು ಸರ್ಕಾರ ಆದೇಶ – ವಿಪಕ್ಷಗಳ ಕಿಡಿ

    ಬೆಂಗಳೂರು: ಅಲ್ಪಸಂಖ್ಯಾತರಿಗೆ (Minorities) ಮತ್ತೊಂದು ಬಂಪರ್ ಕೊಡುವ ಮೂಲಕ ರಾಜ್ಯ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು (Moulana Azad Model School) ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.

    2024-25ರ ಬಜೆಟ್‌ನಲ್ಲಿ ಘೋಷಿಸಿದ್ದ 100 ಆಜಾದ್ ಶಾಲೆಗಳ ಪೈಕಿ ಬಾಕಿ 50 ಶಾಲೆಗಳನ್ನು 25 ಜಿಲ್ಲೆಗಳ 43 ತಾಲೂಕುಗಳಲ್ಲಿ ತೆರೆಯಲು ಮುಂದಾಗಿದೆ. ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಒಟ್ಟು 350 ಬೋಧಕ ಹುದ್ದೆಗಳೊಂದಿಗೆ ತೆರೆಯಲು ಆದೇಶಿಸಿದೆ. ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಮಾತ್ರ ಮೀಸಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ವಸತಿ ಸಹಿತ ಶಿಕ್ಷಣ ಒದಗಿಸಲಾಗುತ್ತದೆ. ಈಗಾಗಲೇ ಅಲ್ಪಸಂಖ್ಯಾತರಿಗೆ 4% ಗುತ್ತಿಗೆ ಮೀಸಲಾತಿ, ವಸತಿ ಯೋಜನೆ ಮನೆಗಳಿಗೆ 15% ಮೀಸಲು ಹೆಚ್ಚಳ ಬಳಿಕ ಸರ್ಕಾರದ ಮತ್ತೊಂದು ನಿರ್ಧಾರ ಇದೀಗ ವಿವಾದಕ್ಕೆ ಗುರಿಯಾಗಿದೆ. ಇದನ್ನೂ ಓದಿ: 111.8 ಕೋಟಿ ಅನುದಾನದ ಬಳಿಕವೂ ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ಸರ್ಕಾರ

    ಬಿಜೆಪಿ (BJP) ನಾಯಕರು ಸರ್ಕಾರದ ಈ ನಡೆಯನ್ನು ಅಲ್ಪಸಂಖ್ಯಾತರ ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದ್ದಾರೆ. ಈ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆಗೆ ಹೋಗಿದೆ. ಕೇವಲ ಒಂದೇ ಸಮಯದಾಯದ ಓಲೈಕೆಗೆ ಮುಂದಾಗಿದೆ. ಸರ್ಕಾರ ಇದುವರೆಗೆ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಎಷ್ಟು ಶಾಲೆ, ಎಷ್ಟು ಲ್ಯಾಪ್‌ಟಾಪ್, ಎಷ್ಟು ಸ್ಕಾಲರ್ ಶಿಪ್ ಕೊಟ್ಟಿದೆ ಹೇಳಲಿ. ಹಿಂದುಳಿದ ವರ್ಗದ ಮಕ್ಕಳನ್ನು ಸರ್ಕಾರ ಮರೆತೇ ಬಿಟ್ಟಿದೆ ಎಂದು ಬಿಜೆಪಿ ನಾಯಕ ಪಿ.ರಾಜೀವ್ ಕೆಂಡ ಕಾರಿದ್ದಾರೆ. ಇದನ್ನೂ ಓದಿ: ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

  • ಅಲ್ಪಸಂಖ್ಯಾತ ಇಲಾಖೆಯಲ್ಲಿ ಪೆಟ್ರೋಲ್ ಗೋಲ್ಮಾಲ್ ಆರೋಪ – ಕ್ರಮಕ್ಕೆ ಆಗ್ರಹಿಸಿ ಸಿಎಸ್‌ಗೆ ಯತ್ನಾಳ್ ಪತ್ರ

    ಅಲ್ಪಸಂಖ್ಯಾತ ಇಲಾಖೆಯಲ್ಲಿ ಪೆಟ್ರೋಲ್ ಗೋಲ್ಮಾಲ್ ಆರೋಪ – ಕ್ರಮಕ್ಕೆ ಆಗ್ರಹಿಸಿ ಸಿಎಸ್‌ಗೆ ಯತ್ನಾಳ್ ಪತ್ರ

    – ವಕ್ಫ್‌ ವಿರುದ್ಧ ಮುಂದುವರಿದ ಬಿಜೆಪಿ ರೆಬಲ್‌ ನಾಯಕರ ಹೋರಾಟ

    ಬೆಂಗಳೂರು: ಬಿಜೆಪಿ ಭಿನ್ನಮತೀಯ ನಾಯಕರ ವಕ್ಫ್ ಹೋರಾಟ ಮುಂದುವರಿದಿದೆ. ಬೆಂಗಳೂರಿನ ಕುಮಾರ್ ಬಂಗಾರಪ್ಪ (Kumar Bangarappa) ನಿವಾಸದಲ್ಲಿ ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಜಿ.ಎಂ ಸಿದ್ದೇಶ್ವರ ಸಭೆ ನಡೆಸಿದ್ದಾರೆ.

    ವಕ್ಫ್ ಹೋರಾಟ, ಸಮಾವೇಶ, ದೆಹಲಿ (New Delhi) ಭೇಟಿ ಕುರಿತು ಸಮಾಲೋಚನೆ ಮಾಡಿದ್ದಾರೆ. ಇನ್ನೂ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ಹಜ್ ಇಲಾಖೆಯಲ್ಲಿ ಪೆಟ್ರೋಲ್ ದುರ್ಬಳಕೆ ಆರೋಪ ಕೇಳಿಬಂದಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ.

    ಈ ಇಲಾಖೆಗಳಲ್ಲಿ ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್‌ಗಳು (Petrol Service Stations) ದೊಡ್ಡ ಭ್ರಷ್ಟಾಚಾರ ಎಸಗಿವೆ. ಪೆಟ್ರೋಲ್ ಬಳಕೆಗೆ ಮಿತಿ ಹಾಗೂ ಮಾರ್ಗಸೂಚಿ ನಿಗದಿ ಮಾಡುವಂತೆ ಒತ್ತಾಯಿಸಿದ್ದಾರೆ. ಕಾರಿಗೆ ಪೆಟ್ರೋಲ್ ಹಾಕಿಸುವಾಗ ಸಂಬಂಧಪಟ್ಟ ಇಲಾಖೆಯ ಮೊಹರು, ಮುಖ್ಯಸ್ಥರ ಸಹಿ ಇರಬೇಕು. ಆದರೆ, ವಕ್ಫ್ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್‌ರ ವಾಹನ ಸಂಖ್ಯೆ ಕೆಎ-01 ಜಿಎಸ್ 9990ಗೆ ಇಂಡೆಂಟ್‌ಗಳು ಇಲ್ಲದಿದ್ದರೂ ಪೆಟ್ರೋಲ್ ತುಂಬಿಸಲಾಗಿದೆ.

    3 ತಿಂಗಳಿಗೊಮ್ಮೆ ವಾಹನ ಕ್ರಮಿಸಿರುವ ಕಿಲೋಮೀಟರ್, ಉಪಯೋಗಿಸುವ ಇಂಧನ ಆಡಿಟ್ ಮಾಡಬೇಕೆಂದು ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.

  • ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    – ಚನ್ನಗಿರಿ ಪ್ರಕರಣದಲ್ಲಿ ಮಾತ್ರ ಪೊಲೀಸರ ಮೇಲೆ ಕ್ರಮ ಯಾಕೆ?
    – ರಾಜ್ಯ ಸರ್ಕಾರದ ವಿರುದ್ಧ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ಯಾರು ಎಲ್ಲೇ ಗಲಭೆ ಮಾಡಿದರೂ ತಪ್ಪು, ಅದನ್ನು ಖಂಡಿಸಬೇಕು. ಆದ್ರೆ ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನ ಪ್ರಶ್ನೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಲಾಕಪ್‌ ಡೆತ್ (Channagiri Lockup Death) ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ. ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಆಗಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಯಾಕೆ ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

    ಒತ್ತಡ ಹಾಕಿದ್ರೆ ಪೊಲೀಸರೇ ಓಡಿ ಹೋಗ್ತಾರೆ:
    ಸಿದ್ದರಾಮಯ್ಯನವರೇ ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದೀರಿ, ನಿಮ್ಮ ಈ ತುಷ್ಟಿಕರಣ ರಾಜಕೀಯದಿಂದ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಯಾರೇ ಗಲಭೆ ಮಾಡಿದ್ರೂ ತಪ್ಪು, ಅದನ್ನು ಖಂಡಿಸಲೇಬೇಕು. ಆದ್ರೆ ಈ ವಿಚಾರದಲ್ಲಿ ಪೊಲೀಸರ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಠಾಣೆ ಬಿಟ್ಟು ಓಡಿಹೋಗ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನೂ ಪೊಲೀಸರು ಪ್ರತಿ 2 ಗಂಟೆಗೆ ಡ್ರಿಲ್‌ ಮಾಡಬೇಕು ಎಂಬ ಸಿಎಂ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ಸಿಎಂಗೆ ಮತ್ತು ಗೃಹಸಚಿವರಿಗೆ ಡ್ರಿಲ್‌ ಮಾಡಿಸಬೇಕು. ರಾಜ್ಯ ಪೊಲೀಸರಿಂದು ಒತ್ತಡದಲ್ಲಿ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಔರಾಧ್ ಕರ್ ವರದಿಯನ್ನೇ ಇನ್ನೂ ಜಾರಿ ಮಾಡಿಲ್ಲ, 2 ಗಂಟೆಗೊಮ್ಮೆ ಡ್ರಿಲ್‌ ಮಾಡಿ ಅಂದರೆ ಅವರು ಎಲ್ಲಿಂದ ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

    ಪೊಲೀಸರು ಹುಚ್ಚರಂತೆ ರಸ್ತೆಯಲ್ಲಿ ಓಡಾಡಬೇಕಾ? ಹೀಗೆ ಮಾಡಿದರೆ ಜನ ಏನು ಹೇಳತ್ತಾರೆ? ಕರ್ನಾಟಕ ಸರ್ಕಾರ ಮತಿಭ್ರಮಣೆಗೊಂಡಿದೆ. ಆದೇಶ ಮಾಡುವುದಕ್ಕೂ ಮುನ್ನ ಯೋಚನೆ ಮಾಡುತ್ತಿಲ್ಲ. ಪೊಲೀಸರಿಗೆ ಹೊರಡಿಸಿರುವ ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.  ಇದನ್ನೂ ಓದಿ: ಕುರಾನ್ ಸತ್ಯವಾಗಿ ನನ್ನ ಗಂಡನಿಗೆ ಯಾವ್ದೇ ರೋಗ ಇರಲಿಲ್ಲ, ಪೊಲೀಸರೇ ಹೊಡೆದು ಕೊಂದಿದ್ದಾರೆ: ಮೃತ ಆದಿಲ್ ಪತ್ನಿ

  • ನಾನು ಬದುಕಿರುವವರೆಗೂ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲು ಬಿಡಲ್ಲ – HD ರೇವಣ್ಣ ಗುಡುಗು

    ನಾನು ಬದುಕಿರುವವರೆಗೂ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲು ಬಿಡಲ್ಲ – HD ರೇವಣ್ಣ ಗುಡುಗು

    ಹಾಸನ: ನಾನು ಬದುಕಿರುವವರೆಗೂ ಅಲ್ಪ ಸಂಖ್ಯಾತರಿಗೆ (Minorities) ಅನ್ಯಾಯ ಆಗಲು ಬಿಡಲ್ಲ ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಹೇಳಿದ್ದಾರೆ.

    ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ (BJP-JDS) ಮೈತ್ರಿ ವಿಚಾರವಾಗಿ ಮಾತನಾಡುತ್ತಲೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಜೊತೆ ನಮ್ಮ ಪಕ್ಷವನ್ನ ವಿಲೀನ ಮಾಡಲು ಹೋಗಿಲ್ಲ. ಜೆಡಿಎಸ್ (JDS) ಪಕ್ಷವಾಗಿಯೇ ಉಳಿಯುತ್ತೆ. ನಾನು ಬದುಕಿರುವವರೆಗೂ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಲು ಬಿಡಲ್ಲ. ನಾವು ಅವರ ಜೊತೆ ಇದ್ದೇ ಇರುತ್ತೇವೆ. ಇದು ನನ್ನ ಧರ್ಮ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ಅಂಧರ ಕ್ರಿಕೆಟ್‌ನಲ್ಲಿ ಚಿನ್ನಗೆದ್ದ ಕರ್ನಾಟಕದ ಯುವತಿಗೆ ವಿಶೇಷ ಸನ್ಮಾನ

    ಇದೇ ವೇಳೆ ಹಾಸನ (Hassan) ಜಿಲ್ಲೆಯಲ್ಲಿ 1.15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜೋಳ, 75,000. ಹೆಕ್ಟೇರ್ ಪ್ರದೇಶದಲ್ಲಿ ರಾಗಿ, ಇತರೆ ಬೆಳೆ ಬೆಳೆದಿದ್ದಾರೆ. ಒಟ್ಟು 2.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಂಪೂರ್ಣ ಬೆಳೆ ಉಳಿದಿಲ್ಲ. ಆದರೂ ಸರ್ಕಾರ ಇವತ್ತಿನವರೆಗೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

    ರೈತರು ಹಾಳು ಬಿದ್ದು ಹೋಗಲಿ ಅನ್ನೋ ಪರಿಸ್ಥಿತಿಗೆ ಬಂದಿರುವ ಸರ್ಕಾರ, ಬರೀ ಗ್ಯಾರಂಟಿ ಕಡೆಗೆ ಗಮನ ಕೊಡುತ್ತಿದೆ. ನಾವೇನಾದ್ರೂ ಮಾತನಾಡಿದ್ರೆ ಜೆಡಿಎಸ್ ಮುಗಿದು ಹೋಗುತ್ತೆ, ಅವರತ್ರ ಹೋಗ್ತಾರೆ, ಇವರತ್ರ ಹೋಗ್ತಾರೆ ಅಂತಾರೆ. ನಾವು ಎಲ್ಲಾದ್ರೂ ಹೋಗ್ತಿವಿ. ನೀವು ಮೊದಲು ರೈತರನ್ನ ಉಳಿಸಿಕೊಳ್ಳಿ. ಇಲ್ಲದಿದ್ದರೆ ರೈತರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಆಗಲಿದೆ. ಆದ್ದರಿಂದ ಸರ್ಕಾರ ಕೂಡಲೇ ಅಧಿವೇಶನ ಕರೆದು ಚರ್ಚೆ ಮಾಡಬೇಕು ಎಂದು ಎಚ್ಚರಿಸಿದ್ದಾರೆ.

    ತಮಿಳುನಾಡಿಗೆ 20 ಟಿಎಂಸಿ ನೀರು ಬಿಟ್ಟರು. ಹೇಮಾವತಿ ನದಿಯಿಂದ ತುಮಕೂರಿಗೆ (Tumakur) ಎರಡು ತಿಂಗಳಿನಿಂದ ನೀರು ಬಿಟ್ಟಿದ್ದಾರೆ. ಜೆಡಿಎಸ್‌ಗೆ ವೋಟು ಹಾಕಿದ್ದಾರೆ ಎಂದು ಹಾಸನ ಜಿಲ್ಲೆಗೆ ನೀರು ಹರಿಸಿಲ್ಲ. ನೀರು ಬಿಡುವುದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಲ್ಲೂ ಬರಗಾಲವಿದೆ. 7 ಕ್ಷೇತ್ರಗಳಿಗೂ ಬರ ಘೋಷಣೆ ಮಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ, ಕಣ್ಣು ಕಿತ್ತುಹಾಕಬೇಕು: ಗಜೇಂದ್ರ ಸಿಂಗ್‌ ಶೇಖಾವತ್‌

    ಜಿಲ್ಲೆಯಲ್ಲಿ 1,18,292 ಹೆಕ್ಟೇರ್‌ನಲ್ಲಿ ತೆಂಗಿನ ಮರಗಳಿದ್ದು, ಮಳೆ ಕೊರತೆಯಿಂದ ಹಾಳಾಗ್ತಿವೆ. ಅರಸೀಕೆರೆ, ಹಾಸನ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ಹೆಚ್ಚು ನಷ್ಟವಾಗಿದೆ. ಈ ನಡುವೆ ಶೇ.60 ರಷ್ಟು ತೆಂಗಿನ ಮರಗಳಿಗೆ ರೋಗ ತಗುಲಿದ್ದು, ನಿಯಂತ್ರಣಕ್ಕೆ ಔಷಧಿ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿದ್ದರಾಮಯ್ಯ

    ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿದ್ದರಾಮಯ್ಯ

    ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ (Minorities) ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

    ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಶುಕ್ರವಾರ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂದರ್ಭದಲ್ಲಿ ಮಾತನಾಡಿದರು. ಸರ್ಕಾರ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು. ಇದನ್ನೂ ಓದಿ: 3 ವಲಯ, 3 ಪ್ರತ್ಯೇಕ ಸಭೆ – ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ

    ಕಳೆದ 5 ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಶಕ್ತಿ ಯೋಜನೆ ರದ್ದು ಮಾಡಿ- ಸಿಎಂಗೆ ಆಟೋ ಚಾಲಕರ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳಿಂದ ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ; ನೀವು ಭಯಪಡಬೇಕಾಗಿಲ್ಲ – ಮೋಹನ್‌ ಭಾಗವತ್‌

    ಹಿಂದೂಗಳಿಂದ ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ; ನೀವು ಭಯಪಡಬೇಕಾಗಿಲ್ಲ – ಮೋಹನ್‌ ಭಾಗವತ್‌

    ಮುಂಬೈ: (Mumbai) ಸಮಾಜದ ಹಿತದೃಷ್ಟಿಯಿಂದ ಯೋಚಿಸುವ ಪ್ರತಿಯೊಬ್ಬರೂ ‘ವರ್ಣ’ ಮತ್ತು ‘ಜಾತಿ’ ವ್ಯವಸ್ಥೆಯು ಹಳೇ ವಿಷಯ ಎಂದು ಹೇಳಬೇಕು. ಎಲ್ಲರೂ ಅದನ್ನು ಮರೆಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

    ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವರ್ಣ, ಜಾತಿ ಪರಿಕಲ್ಪನೆಗಳನ್ನು ಮರೆತುಬಿಡಬೇಕು. ಇಂದು ಯಾರಾದರೂ ಅದರ ಬಗ್ಗೆ ಕೇಳಿದರೆ, ಸಮಾಜದ ಹಿತಾಸಕ್ತಿಯಿಂದ ಯೋಚಿಸುವ ಪ್ರತಿಯೊಬ್ಬರೂ ಇದು ಹಳೇ ವಿಷಯ ಎಂದು ಹೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಕ್‍ಗೆ ಬಸ್ ಡಿಕ್ಕಿ – ಬೆಂಕಿ ಹೊತ್ತಿ 11 ಸಾವು, 38 ಮಂದಿಗೆ ಗಾಯ

    ಅಲ್ಪಸಂಖ್ಯಾತರನ್ನು ಅಪಾಯಕ್ಕೆ ಸಿಲುಕಿಸುವುದು ಸಂಘ ಅಥವಾ ಹಿಂದೂಗಳ ಸ್ವಭಾವವಲ್ಲ. ಆರ್‌ಎಸ್‌ಎಸ್ ಸಹೋದರತ್ವದ ಪರವಾಗಿ ನಿಲ್ಲಲು ನಿರ್ಧರಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

    ನಮ್ಮಿಂದಾಗಲಿ ಅಥವಾ ಹಿಂದೂಗಳಿಂದಾಗಲಿ ಅಪಾಯವಿದೆ ಎಂದು ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಇದು ಹಿಂದೆಯೂ ಆಗಿಲ್ಲ, ಮುಂದೆಯೂ ಆಗುವುದಿಲ್ಲ. ಇದು ಸಂಘದ ಅಥವಾ ಹಿಂದೂಗಳ ಸ್ವಭಾವವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ

    ದ್ವೇಷವನ್ನು ಹರಡುವ, ಅನ್ಯಾಯ, ದೌರ್ಜನ್ಯ ಎಸಗುವ, ಸಮಾಜದ ಮೇಲೆ ಗೂಂಡಾಗಿರಿ ಮತ್ತು ದ್ವೇಷದ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ನಮ್ಮದೇ ಆದ ಆತ್ಮರಕ್ಷಣೆ ಮತ್ತು ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಲ್ಲಿ ಯಾವ ಬೆದರಿಕೆಯೂ ಇಲ್ಲ. ಹಿಂದೂ ಸಮಾಜವು ಪ್ರಸ್ತುತ ಕಾಲದ ಅಗತ್ಯವಾಗಿದೆ. ಇದು ಯಾರ ವಿರೋಧಿಯೂ ಅಲ್ಲ. ಸಹೋದರತ್ವ, ಸೌಹಾರ್ದತೆ ಮತ್ತು ಶಾಂತಿಯನ್ನು ಸಂಘ ಪ್ರತಿಪಾದಿಸುತ್ತದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಭಜನೆ ನೋವಿನಿಂದ ಕೂಡಿದೆ – ಪಾಕ್, ಬಾಂಗ್ಲಾದೇಶ, ಭಾರತ ಒಂದಾಗಬಹುದು: ಮನೋಹರ್ ಲಾಲ್ ಖಟ್ಟರ್

    ವಿಭಜನೆ ನೋವಿನಿಂದ ಕೂಡಿದೆ – ಪಾಕ್, ಬಾಂಗ್ಲಾದೇಶ, ಭಾರತ ಒಂದಾಗಬಹುದು: ಮನೋಹರ್ ಲಾಲ್ ಖಟ್ಟರ್

    ಗುರುಗ್ರಾಮ: ಪೂರ್ವ ಜರ್ಮನಿ ಮತ್ತು ಪಶ್ಚಿಮ ಜರ್ಮನಿಯ ಏಕೀಕರಣದಂತೆಯೇ, ಭಾರತದೊಂದಿಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿಲೀನವೂ ಸಾಧ್ಯ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

    ಗುರುಗ್ರಾಮದಲ್ಲಿ ಬಿಜೆಪಿಯ ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾದ ಮೂರು ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, 1947ರಲ್ಲಿ ನಡೆದ ದೇಶದ ವಿಭಜನೆ ಕುರಿತು ನೋವಿನ ಮಾತುಗಳನ್ನು ಆಡಿದರು. ಭಾರತವು ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಒಂದಲ್ಲ, ಎರಡಲ್ಲ 6 ಮಂದಿಯ ಜೊತೆ ವಿವಾಹ – ಪತ್ನಿಯರಿಗೂ ಬಂದಿಲ್ಲ ಅನುಮಾನ, ಕೊನೆಗೆ ಸಿಕ್ಕಿ ಬಿದ್ದ 

    ಪೂರ್ವ ಮತ್ತು ಪಶ್ಚಿಮಗಳು ಏಕೀಕರಣದಂತೆಯೇ, ಭಾರತದೊಂದಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿಲೀನವೂ ಸಾಧ್ಯ. ಬಹಳ ಹಿಂದೆಯೇ ಅಂದರೆ 1991ರಲ್ಲಿ ಸಂಭವಿಸಿತ್ತು. ಆದರೆ ಕೆಲವರು ಅದನ್ನು ಕೆಡಿಸಿದರು. ದೇಶದ ವಿಭಜನೆ ನೋವಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಅಲ್ಪಸಂಖ್ಯಾತ ಸಮುದಾಯದ ಜನರು ಭಯ ಮತ್ತು ಅಭದ್ರತೆಯ ಭಾವನೆ ಬೆಳೆಸಿಕೊಳ್ಳದಂತೆ ಅಲ್ಪಸಂಖ್ಯಾತರನ್ನು ಟ್ಯಾಗ್ ನೀಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮನೋಹರ್ ಲಾಲ್ ಖಟ್ಟರ್, ಹಳೆಯ ಪಕ್ಷವು ಸಂಘದ ಶಕ್ತಿ ಪ್ರದರ್ಶಿಸುವ ಮೂಲಕ ಅಲ್ಪಸಂಖ್ಯಾತರಲ್ಲಿ ಅಭದ್ರತೆಯ ಭಾವನೆ ಮೂಡಿಸಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಪಕ್ಷವು ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಭಾರತೀಯರು, ಸಿಖ್ ದೇಶಬಾಂಧವರು ಆಫ್ಘಾನ್‍ಗೆ ಮರಳಿ: ತಾಲಿಬಾನ್

    Live Tv
    [brid partner=56869869 player=32851 video=960834 autoplay=true]

  • ಏಕರೂಪ ನಾಗರಿಕ ಸಂಹಿತೆಯು ಅಲ್ಪಸಂಖ್ಯಾತರ ವಿರೋಧಿ ಕ್ರಮ: ಮುಸ್ಲಿಂ ಕಾನೂನು ಮಂಡಳಿ

    ಏಕರೂಪ ನಾಗರಿಕ ಸಂಹಿತೆಯು ಅಲ್ಪಸಂಖ್ಯಾತರ ವಿರೋಧಿ ಕ್ರಮ: ಮುಸ್ಲಿಂ ಕಾನೂನು ಮಂಡಳಿ

    ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಅಸಾಂವಿಧಾನಿಕ ಮತ್ತು ಅಲ್ಪಸಂಖ್ಯಾತರ ವಿರೋಧಿ ಕ್ರಮ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ವಿರೋಧ ವ್ಯಕ್ತಪಡಿಸಿದೆ.

    ಕೇಂದ್ರ ಸರ್ಕಾರ ಹಾಗೂ ಉತ್ತರಾಖಂಡ, ಉತ್ತರ ಪ್ರದೇಶ ಸರ್ಕಾರಗಳು ದೇಶದಲ್ಲಿನ ಹಣದುಬ್ಬರದಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ. ದೇಶದಲ್ಲಿ ಆರ್ಥಿಕತೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ವಿಚಾರವಾಗಿ ಜನತೆ ಪ್ರಶ್ನೆ ಮಾಡುತ್ತಾರೆ ಎಂಬ ಕಾರಣಕ್ಕೆ ವಿಷಯ ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದೆ. ಅಲ್ಲದೇ ಏಕರೂಪ ನಾಗರಿಕ ಸಂಹಿತೆ ಕೈಬಿಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಇದನ್ನೂ ಓದಿ: ಗಾಂಧಿ ಕುಟುಂಬ ರಜೆಯಲ್ಲಿ ತೆರಳಿದೆಯೇ: ಅನೂರಾಗ್ ಠಾಕೂರ್ ಪ್ರಶ್ನೆ

    ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅವರ ಧರ್ಮದ ಪ್ರಕಾರ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ. ಅದನ್ನು ಮೂಲಭೂತ ಹಕ್ಕುಗಳಲ್ಲಿ ಸೇರಿಸಲಾಗಿದೆ. ಈ ಹಕ್ಕಿನ ಅಡಿಯಲ್ಲಿ ಅಲ್ಪಸಂಖ್ಯಾತರು, ಬುಡಕಟ್ಟು ವರ್ಗಗಳಿಗೆ ಅವರ ಇಚ್ಛೆ ಮತ್ತು ಸಂಪ್ರದಾಯಗಳ ಪ್ರಕಾರ ವಿಭಿನ್ನ ವೈಯಕ್ತಿಕ ಕಾನೂನುಗಳನ್ನು ರೂಪಿಸಲಾಗಿದೆ. ಇದು ದೇಶಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ ಎಂದು ಎಐಎಂಪಿಎಲ್‌ಬಿ ಪ್ರಧಾನ ಕಾರ್ಯದರ್ಶಿ ಹಜರತ್ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ತಿಳಿಸಿದ್ದಾರೆ.

    ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವೆ ಪರಸ್ಪರ ಏಕತೆ, ನಂಬಿಕೆಯನ್ನು ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – ಮೌಲ್ವಿ ವಾಸೀಂ ಪಠಾಣ್ ಇಂದು ಕೋರ್ಟ್‍ಗೆ

    ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಅವರು, ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆ (UCC) ಕರಡು ತಯಾರಿಸಲು ಉನ್ನತ ಅಧಿಕಾರ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದರು. ಅಂತೆಯೇ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಕೂಡ ರಾಜ್ಯದಲ್ಲಿ ಯುಸಿಸಿ ಅನುಷ್ಠಾನದ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದರು.

    ಏಕರೂಪ ನಾಗರಿಕ ಸಂಹಿತೆಯು ಭಾರತದಲ್ಲಿನ ನಾಗರಿಕರ ವೈಯಕ್ತಿಕ ಕಾನೂನುಗಳನ್ನು ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಂದು ಪ್ರಸ್ತಾಪವಾಗಿದೆ. ಅದು ಅವರ ಧರ್ಮ, ಲಿಂಗ, ಲೈಂಗಿಕ ದೃಷ್ಟಿಕೋನವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಸಮಾನವಾಗಿ ಅನ್ವಯಿಸುತ್ತದೆ. ಪ್ರಸ್ತುತ ವಿವಿಧ ಸಮುದಾಯಗಳ ವೈಯಕ್ತಿಕ ಕಾನೂನುಗಳು ಅವರ ಧಾರ್ಮಿಕ ಗ್ರಂಥಗಳಿಂದ ನಿಯಂತ್ರಿಸಲ್ಪಡುತ್ತವೆ ಎಂದು ಸಂಹಿತೆ ಪರವಾಗಿರುವವರ ಅಭಿಪ್ರಾಯವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) 2019 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಯುಸಿಸಿ ಅನುಷ್ಠಾನಕ್ಕೆ ಭರವಸೆ ನೀಡಿತ್ತು. ಇದನ್ನೂ ಓದಿ: ಸರ್ಕಾರಿ ಶಾಲೆ ಬಾಗಿಲು ಮುರಿದು ಪುಂಡರ ಎಣ್ಣೆ ಪಾರ್ಟಿ

  • ಅಲ್ಪಸಂಖ್ಯಾತರು ಮುಗ್ಧ ಜನರು, ಅಮಾಯಕರು: ಆನಂದ್ ಸಿಂಗ್

    ಅಲ್ಪಸಂಖ್ಯಾತರು ಮುಗ್ಧ ಜನರು, ಅಮಾಯಕರು: ಆನಂದ್ ಸಿಂಗ್

    ವಿಜಯನಗರ: ಅಲ್ಪಸಂಖ್ಯಾತರ ಅಮಾಯಕತನವನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಿ ಪ್ರಚೋದನೆ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಆನಂದ್ ಸಿಂಗ್ ಅಲ್ಪಸಂಖ್ಯಾತರ ಪರ ಬ್ಯಾಟ್ ಬೀಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರು ಮುಗ್ಧ ಜನರು. ಅಮಾಯಕರು ಇರೋರಲ್ಲಿ, ಕೆಲ ಬುದ್ದಿವಂತ ಲೀಡರ್‍ಗಳಿದ್ದಾರೆ. ಅವರೆಲ್ಲಾ ಇವರನ್ನು ಕಂಟ್ರೋಲ್ ಮಾಡುತ್ತಾರೆ. ಈ ಹಿಂದೆ ಸಿಎಎ ಎನ್‍ಆರ್‍ಸಿ ಬಗ್ಗೆ ಪ್ರತಿಭಟನೆಗೆ ಕರೆದಿದ್ದರು. ನಾನು ಅವರನ್ನು ಕೇಳಿದೆ ಎಲ್ಲಿಗೆ ಹೋಗಿದ್ರಿ ಅಂತ. ಅದಕ್ಕೆ ಅವರು ಹೇಳಿದರು ಅದೇನೋ ಕರೆದಿದ್ದರು ಸರ್ ಹೋಗಿದ್ದೇವು ಅಂದರು. ಅವರು ಅಮಾಯಕರಿದ್ದಾರೆ, ಅಂತಹ ಟೈಮಲ್ಲಿ ಕೆಲವರು ಪ್ರಚೋದನೆ ಮಾಡುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಹಾಕಿದ್ದ ಕಿಡಿಗೇಡಿಗಳು

    ಕೆಲ ನಾಯಕರು ಪ್ರಚೋದನೆ ಮಾಡುವುದು ಓಟ್ ಬ್ಯಾಂಕ್ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ನಾನು ಕಾಮನ್ ಮ್ಯಾನ್ ಆಗಿ ಹೇಳ್ತೀನಿ ಅವರು ಅಮಾಯಕರು. ಅವರ ಅಮಾಯಕತನವನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಿ ಪ್ರಚೋದನೆ ಮಾಡುತ್ತಾರೆ. ಅವರ ತಲೆ ತಿಕ್ಕುವ ಕೆಲಸ ನಡೀತಾ ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ನಡೀತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

    Hubballi Riot

    ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಯಾರೇ ಆಗಿರಲಿ ಅಂಬೇಡ್ಕರ್ ಅವರು ಸಮಾನತೆಯ ಸಂವಿಧಾನ ಬರೆದುಕೊಟ್ಟಿದ್ದಾರೆ. ಆ ಸಂವಿಧಾನದ ವಿರುದ್ಧ ಯಾರೂ ಹೋಗಲ್ಲ. ಮೈನಾರಿಟೀಸ್‍ನಲ್ಲಿಯೂ ವಿದ್ಯಾವಂತರಿದ್ದಾರೆ. ಅಮಾಯಕರನ್ನು ಹಿಡಿದುಕೊಂಡು ಗಲಭೆ ಮಾಡುತ್ತಾರೆ, ಮೊನ್ನೆ ಹುಬ್ಬಳ್ಳಿಯಲ್ಲಿಯೂ ಅದೇ ಆಗಿದೆ ಎಂದರು.