Tag: ಅಲ್ಪಸಂಖ್ಯಾತ ಸಮುದಾಯ

  • ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

    ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

    ಬೆಂಗಳೂರು: ವಸತಿ ಯೋಜನೆಗಳಲ್ಲಿ (Housing Project) ಅಲ್ಪಸಂಖ್ಯಾತ ಸಮುದಾಯಕ್ಕೆ (Minority Community) ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ (Zameer Ahmed) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪೇ ಮಾಡಿಲ್ಲ, ಅಭಿಮಾನಿಗಳಿಗೆ ಮಾತ್ರ ಕ್ಷಮೆ ಕೇಳ್ತೀನಿ – ನಾಗಶೇಖರ್‌ ವಿರುದ್ಧ ರಚಿತಾ ಕಿಡಿ

     

    2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೇ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

     

  • ಪ.ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ – ಮಮತಾ ಬ್ಯಾನರ್ಜಿ ಭರವಸೆ

    ಪ.ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ – ಮಮತಾ ಬ್ಯಾನರ್ಜಿ ಭರವಸೆ

    ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf) ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

    ಕೋಲ್ಕತ್ತಾದಲ್ಲಿ (Kolkatta) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಕಾನೂನಿನ ಜಾರಿಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದರು. ವಕ್ಫ್ ಆಸ್ತಿ ಸಮಸ್ಯೆಯಿಂದ ನಿಮಗೆ ನೋವಾಗಿದೆ ಎಂದು ನನಗೆ ಅರ್ಥವಾಗಿದೆ. ನನ್ನ ಮೇಲೆ ದಯವಿಟ್ಟು ನಂಬಿಕೆ ಇಡಿ, ಬಂಗಾಳದಲ್ಲಿ ಒಡೆದು ಆಳುವಂತದ್ದು ಏನೂ ಸಂಭವಿಸುವುದಿಲ್ಲ. ದೀದಿ ಇಲ್ಲಿದ್ದಾರೆ, ದೀದಿ ನಿಮ್ಮನ್ನು ಮತ್ತು ನಿಮ್ಮ ಆಸ್ತಿಯನ್ನು ರಕ್ಷಿಸುತ್ತಾರೆ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳನ್ನು ಕಾಪಾಡುವ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

    ರಾಜಕೀಯ ಪ್ರಚೋದನೆಗಳಿಗೆ ಬಲಿಯಾಗದಂತೆ ಸಮುದಾಯಕ್ಕೆ ಎಚ್ಚರಿಕೆ ನೀಡಿದರು. ಸಹಬಾಳ್ವೆಯ ಮಹತ್ವವನ್ನು ಒತ್ತಿ ಹೇಳಿದ ಅವರು, ಬದುಕಿ ಮತ್ತು ಬದುಕಲು ಬಿಡಿ. ನಾವು ಒಗ್ಗಟ್ಟಿನಿಂದ ಇರಬೇಕು. ಬಂಗಾಳದಲ್ಲಿ ವಿಭಜಕ ರಾಜಕೀಯ ಬೇರೂರಲು ಬಿಡಬಾರದು. ಬಾಂಗ್ಲಾದೇಶದ (Bangladesh) ಪರಿಸ್ಥಿತಿ ಉಲ್ಲೇಖಿಸಿ, ವಕ್ಫ್ ಮಸೂದೆ ಅಂಗೀಕಾರಕ್ಕೆ ಈ ಸಮಯವು ಸೂಕ್ತವಲ್ಲ. ನಾವು ಈಗ ಈ ಮಸೂದೆಯನ್ನು ಅಂಗೀಕರಿಸಬಾರದಿತ್ತು ಎಂದು ಕೆಲವು ಪ್ರದೇಶಗಳಲ್ಲಿ ಇದು ಉಂಟುಮಾಡಿರುವ ಅಶಾಂತಿಯ ಬಗ್ಗೆ ಗಮನ ಸೆಳೆದರು.ಇದನ್ನೂ ಓದಿ: ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

  • ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ: ಕೇಂದ್ರ ಸರ್ಕಾರ

    ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ: ಕೇಂದ್ರ ಸರ್ಕಾರ

    ನವದೆಹಲಿ: ಹಿಂದೂಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಿಮೆ ಪ್ರಮಾಣದಲ್ಲಿರುವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಕೇಂದ್ರ ಸರ್ಕಾರ ಹೇಳಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಿಳಿಸಿದೆ.

    ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರಾಗಿರುವ ಜುದಾಯಿಸಂ, ಬಹಾಯಿಸಂ ಸಮುದಾಯವನ್ನು ಹಿಂದೂ ಧರ್ಮದ ಅನುಯಾಯಿಗಳು ಎಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಮೂಲಕ ಹೀಗೆ ಉತ್ತರಿಸಿದೆ. ಇದನ್ನೂ ಓದಿ: ತರಗತಿಗಳಲ್ಲಿ ಹಿಜಬ್ ನಿಷೇಧ – ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅರ್ಜಿ

    1992 ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಅಡಿ ಭಾಷಾವಾರು ಅಥವಾ ಧಾರ್ಮಿಕ ಸಮುದಾಯಗಳನ್ನು ‘ಅಲ್ಪಸಂಖ್ಯಾತರು’ ಎಂದು ಘೋಷಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ, ಈ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳುವುದಿಲ್ಲ. ರಾಜ್ಯ ಸರ್ಕಾರಗಳು ಈ ರಾಜ್ಯದೊಳಗೆ ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ‘ಅಲ್ಪಸಂಖ್ಯಾತ ಸಮುದಾಯ’ ಎಂದು ಘೋಷಿಸಬಹುದು ಎಂದು ತಿಳಿಸಿದೆ.  ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ

    ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರಗಳು ಸದರಿ ರಾಜ್ಯದಲ್ಲಿ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದು ಮತ್ತು ನಿರ್ವಹಿಸಬಹುದು. ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿರ್ಧರಿಸಬೇಕು ಎಂದು ಅಫಿಡವಿಟ್ ಹೇಳಿದೆ.

  • ಯುಪಿ ಉಪ ಚುನಾವಣೆಯ ಸೋಲಿನ ಬಳಿಕ ಬದಲಾಯ್ತು ಅಮಿತಾ ಶಾ ರಾಜಕೀಯ ತಂತ್ರ

    ಯುಪಿ ಉಪ ಚುನಾವಣೆಯ ಸೋಲಿನ ಬಳಿಕ ಬದಲಾಯ್ತು ಅಮಿತಾ ಶಾ ರಾಜಕೀಯ ತಂತ್ರ

    ಬೆಂಗಳೂರು: ಉತ್ತರಪ್ರದೇಶದ ಉಪ ಚುನಾವಣೆಗಳ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯಲು ಪ್ಲಾನ್ ಮಾಡುತ್ತಿದ್ದು, ಈ ನಿಟ್ಟಿನಲ್ಲಿಯೇ ಮುಂದಿನ ಚುನಾವಣೆಯ ಯೋಜನೆಗಳನ್ನು ರೂಪಿಸಲು ಅಮಿತ್ ಶಾ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ.

    ರಾಜ್ಯದಲ್ಲಿ ಮುಸ್ಲಿಂ ಮತದಾರರು ಹೆಚ್ಚಿರುವ ಕಡೆಗಳಲ್ಲಿ ಅಲ್ಪಸಂಖ್ಯಾತ ಸಮಾವೇಶ ಆಯೋಜನೆಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಮುಸ್ಲಿಂ ಮತಗಳನ್ನು ಸೆಳೆಯಲು ಮುಸ್ಲಿಮರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳ ಬಗ್ಗೆ ವ್ಯಾಪಾಕ ಪ್ರಚಾರ ಮಾಡಲಿದೆ. ಮುಸ್ಲಿಮರನ್ನು ಸೆಳೆಯುವುದಕ್ಕೆ ಬಿಜೆಪಿ ರಾಷ್ಟ್ರೀಯ ಮುಸ್ಲಿಂ ನಾಯಕರಾದ ಸಿಕಂದರ್ ಬಕ್ಷ್, ಮುಕ್ತಾರ್ ಅಬ್ಬಾಸ್ ನಖ್ವಿ, ಶಹನವಾಜ್ ಹುಸೇನ್, ಎಂ.ಜೆ.ಅಕ್ಬರ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಅಂತಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯುಪಿಯಲ್ಲಿ ಸೈಕಲ್ ಕೇಕೆ, ಪ್ರಧಾನಿ ಮೋದಿಗೆ ಎಚ್ಚರಿಕೆ – ಮಹಾ ಮೈತ್ರಿಗೆ ಇದು ವೇದಿಕೆ!

    ಏಪ್ರಿಲ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಗಮನದಲ್ಲಿ ಇಟ್ಟುಕೊಂಡು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಗಳಿವೆ. ಮುಸ್ಲಿಮರಿಗಾಗಿ ಕೇಂದ್ರ ಸರ್ಕಾರ ಜಾರಿ ಮಾಡಿದ ತ್ರಿವಳಿ ತಲಾಖ್ ರದ್ದು, ಹಜ್ ಸಬ್ಸಿಡಿ, ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ, ಮುಸ್ಲಿಂ ಮಹಿಳೆಯರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ‘ನಯೀ ರೋಶಿನಿ’ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ರಾಜ್ಯದಲ್ಲಿ ಪ್ರಚಾರ ನಡೆಸಲಿದೆ. ಶೀಘ್ರದಲ್ಲಿಯೇ ಅಮಿತ್ ಶಾ ಸಮಾವೇಶದ ದಿನಾಂಕ, ಸ್ಥಳ ಮತ್ತು ರೂಪರೇಷಗಳನ್ನು ತಯಾರಿಸಲಿದ್ದಾರೆ ಅಂತಾ ತಿಳಿದು ಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ- ಬಿಹಾರದಲ್ಲಿ ಆರ್ ಜೆಡಿಗೆ ಗೆಲುವು

    ಬಿಜೆಪಿ ಸುಮಾರು 30 ಸಾವಿರ ಮುಸ್ಲಿಂ ಕಾರ್ಯಕರ್ತರ ನೊಂದಣಿ ಮಾಡಿಸುವ ಗುರಿಯನ್ನು ಹೊಂದಿದ್ದು, ರಾಜ್ಯದ ಸುಮಾರು 30 ಕ್ಷೇತ್ರಗಳಲ್ಲಿ ಸಮಾವೇಶ ನಡೆಯುವ ಸಾಧ್ಯತೆಗಳಿವೆ.

    https://www.youtube.com/watch?v=8S_c6n7KvqE

    https://www.youtube.com/watch?v=kcmY9YR5AqY