Tag: ಅಲ್ಪಸಂಖ್ಯಾತ ಸ್ಥಾನಮಾನ

  • ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಕೇಸ್‌ – ವಿವಿ ಯಾರು ಸ್ಥಾಪಿಸಿದ್ರು ಅನ್ನೋದರ ಮೇಲೆ ನಿರ್ಧರಿಸಲಾಗುತ್ತೆ: ಸುಪ್ರೀಂ

    ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಕೇಸ್‌ – ವಿವಿ ಯಾರು ಸ್ಥಾಪಿಸಿದ್ರು ಅನ್ನೋದರ ಮೇಲೆ ನಿರ್ಧರಿಸಲಾಗುತ್ತೆ: ಸುಪ್ರೀಂ

    ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವ ವಿದ್ಯಾನಿಲಯದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ (AMU Minority Status) ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ಸಾಂವಿಧಾನಿಕ ಪೀಠ 4:3 ಬಹುಮತದ ತೀರ್ಪು ನೀಡಿದ್ದು, 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾದ ತೀರ್ಪನ್ನು ರದ್ದುಗೊಳಿಸಿದೆ. ವಿಶ್ವವಿದ್ಯಾಲಯವನ್ನು ಯಾರು ಸ್ಥಾಪಿಸಿದರು ಎಂಬುವುದರ ಮೇಲೆ ಅಲ್ಪಸಂಖ್ಯಾತ ಸ್ಥಾನಮಾನ ನಿರ್ಧರಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

    ವಿಶ್ವ ವಿದ್ಯಾನಿಲಯವನ್ನು (Aligarh Muslim University) ಸ್ಥಾಪಿಸಿದವರು ಯಾರು? ಮತ್ತು ಅದರ ಹಿಂದಿನ ಕರ್ತೃ ಯಾರು? ಎಂಬುವುದನ್ನು ನ್ಯಾಯಾಲಯವು ಪರಿಶೀಲಿಸಬೇಕು. ಪರಿಶೀಲನೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಸ್ಥಾಪಿಸಿರುವುದು ಸಾಬೀತಾದರೆ, ಸಂಸ್ಥೆಯು 30ನೇ ವಿಧಿಯ ಪ್ರಕಾರ ಅಲ್ಪಸಂಖ್ಯಾತ ಸ್ಥಾನಮಾನ ಪಡೆಯಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: Waqf Amendment Bill | ವಿಪಕ್ಷ ನಾಯಕರಿಂದ ಜೆಪಿಸಿ ರಾಜ್ಯ ಪ್ರವಾಸ ಬಹಿಷ್ಕಾರ

    ಎಎಂಯು ಕಾನೂನಿನಿಂದ ರಚಿಸಲ್ಪಟ್ಟಿರುವುದರಿಂದ ಎಎಂಯು ಅಲ್ಪಸಂಖ್ಯಾತ ಸ್ಥಾನಮಾನ ಪಡೆಯಲು ಸಾಧ್ಯವಿಲ್ಲ ಎಂದು 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಅದನ್ನು ಈಗ ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪರವಾಗಿ ಬಹುಮತದ ತೀರ್ಪು ಬರೆದಿರುವ ಸಿಜೆಐ ಚಂದ್ರಚೂಡ್ (DY Chandrachud) ಅವರು, ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನು ತಳ್ಳಿ ಹಾಕಿದೆ. ಆದರೆ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ ಮತ್ತು ಎಸ್‌ಸಿ ಶರ್ಮಾ ಅವರು ಭಿನ್ನಾ ತೀರ್ಪುಗಳನ್ನು ಬರೆದಿದ್ದಾರೆ.

    ಎಎಂಯು ಅಲ್ಪಸಂಖ್ಯಾತ ಸಂಸ್ಥೆಯೇ? ಎಂಬ ವಿಷಯವನ್ನು ನಿರ್ಧರಿಸಲು ಸಾಮಾನ್ಯ ಪೀಠಕ್ಕೆ ಅವಕಾಶ ನೀಡಲಾಗಿದೆ. ಈ ತೀರ್ಪಿನ ಪ್ರಕಾರ, ಎಎಂಯು ಅಲ್ಪಸಂಖ್ಯಾತ ಸ್ಥಾನಮಾನದ ಮೌಲ್ಯಮಾಪನ ಮಾಡಲು ಮತ್ತು 2006ರ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಮರುಮೌಲ್ಯಮಾಪನ ಮಾಡಲು ಮುಖ್ಯ ನ್ಯಾಯಾಧೀಶರು ಹೊಸ ಪೀಠವನ್ನು ರಚಿಸಲಿದ್ದಾರೆ. ಇದನ್ನೂ ಓದಿ: ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ

    ಎಎಂಯು ಕೇಂದ್ರೀಯ ಕಾನೂನು ಮೂಲಕ ಸ್ಥಾಪಿತಗೊಂಡಿರುವುದರಿಂದ, ಅದನ್ನು ಅಲ್ಪಸಂಖ್ಯಾತರ ಸಂಸ್ಥೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು 1967ರಲ್ಲಿ ತೀರ್ಪು ನೀಡಿತ್ತು. 1981ರಲ್ಲಿ ಸಾಂವಿಧಾನಿಕ ತಿದ್ದುಪಡಿ ಮೂಲಕ ಅಂದಿನ ಕೇಂದ್ರ ಸರ್ಕಾರ ಎಎಂಯುಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿತ್ತು. ಅಲಹಾಬಾದ್ ಹೈಕೋರ್ಟ್ ಈ ಸ್ಥಾನಮಾನವನ್ನು ರದ್ದುಪಡಿಸಿ 2006ರಲ್ಲಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಯುಪಿಎ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

  • ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದೇ ವೇಳೆ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ್ರೆ ಹೆಚ್ಚು ಸೌಲಭ್ಯ ಸಿಗುತ್ತೆ ಎನ್ನವು ಚರ್ಚೆ ನಡೆಯುತ್ತದೆ. ಆದರೆ ಪ್ರತ್ಯೇಕ ಧರ್ಮ ಸ್ಥಾನ ಜೊತೆಗೆ ಯಾವ ಸೌಲಭ್ಯಗಳಿ ಸಿಗುತ್ತೆ ಎಂಬುದರ ಮಾಹಿತಿ ಇಲ್ಲಿದೆ.

    ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ಒಂದು ವೇಳೆ ಕೇಂದ್ರ ರಾಜ್ಯ ಸರ್ಕಾರದ ಶಿಫಾರಸಿಗೆ ಒಪ್ಪಿಗೆ ನೀಡಿದರು ಅಲ್ಪ ಸಂಖ್ಯಾತರಿಗೆ ಸಿಗುವ ವಿಶೇಷ ಸೌಲಭ್ಯಗಳು ಲಿಂಗಾಯತ, ವೀರಶೈವರಿಗೆ ಸಿಗುವುದಿಲ್ಲ. ಉದ್ಯೋಗದಲ್ಲೂ ಯಾವುದೇ ಸೌಲಭ್ಯಗಳು ಸಿಗಲ್ಲ. ಆದರೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯ ಸಿಗುತ್ತೆ.

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನದಿಂದ ಹಾಲಿ ಇರುವ ಪ್ರವರ್ಗ ಬದಲಾಗುವುದಿಲ್ಲ. ಪ್ರಸ್ತುತ ಇರುವ 3ಬಿ ಅಡಿಯಲ್ಲಿಯೇ ಲಿಂಗಾಯತ, ವೀರಶೈವ ಸಮುದಾಯ ಮುಂದುವರೆಯುತ್ತದೆ. ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕರೇ ಮುಸ್ಲಿಮರಿಗೆ ಹಾಲಿ ಇರುವ ಸೌಲಭ್ಯಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರಸ್ತುತ 4%ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಓದಿ: ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಸಚಿವ ಸಂಪುಟದ ನಿರ್ಣಯಗಳೇನು?
    * ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
    * ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
    * ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
    * ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
    * ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ

    ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
    * ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
    * ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
    * ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
    * ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ! ಇದನ್ನು ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ