Tag: ಅಲ್ಲಮಪ್ರಭು ಪಾಟಿಲ್

  • ಕಲಬುರಗಿ ಕಾಂಗ್ರೆಸ್‍ನಲ್ಲಿ ಭಿನ್ನಮತ – ಅಲ್ಲಮಪ್ರಭುಗೆ ಟಿಕೆಟ್ ನೀಡದಂತೆ ಎಐಸಿಸಿ ಅಧ್ಯಕ್ಷರಿಗೆ ಪತ್ರ

    ಕಲಬುರಗಿ ಕಾಂಗ್ರೆಸ್‍ನಲ್ಲಿ ಭಿನ್ನಮತ – ಅಲ್ಲಮಪ್ರಭುಗೆ ಟಿಕೆಟ್ ನೀಡದಂತೆ ಎಐಸಿಸಿ ಅಧ್ಯಕ್ಷರಿಗೆ ಪತ್ರ

    ಕಲಬುರಗಿ: ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election)ಟಿಕೆಟ್ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)ಅವರಿಗೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಪತ್ರ ಬರೆದಿದ್ದಾರೆ.

    ಚುನಾವಣೆಗೂ ಮುನ್ನ ಕಲಬುರಗಿ (Kalaburagi) ಕಾಂಗ್ರೆಸ್ (Congress) ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ ಪಾಟೀಲ್ ಅವರಿಗೆ ಟಿಕೆಟ್ ನೀಡದಂತೆ ಇನ್ನುಳಿದ ಟಿಕೆಟ್ ಆಕಾಂಕ್ಷಿಗಳಾದ ಸಂತೋಷ ಬಿಲಗುಂದಿ, ಸಂತೋಷ ಪಾಟೀಲ್, ಕೃಷ್ಣ ಕುಲಕರ್ಣಿ ಮತ್ತು ಅಶೋಕ್ ಗೂಳಿ ಅವರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: 2 ದಶಕಗಳಿಂದ ಹಾಲಿ ಶಾಸಕರಿಗೆ ಸೋಲು – ಇದು ಆಳಂದ ವಿಶೇಷತೆ

    ಪತ್ರದಲ್ಲಿ ಅಲ್ಲಮಪ್ರಭು ಪಾಟೀಲ್ ಹೆಸರು ಹೇಳದೇ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.