ತೆಲುಗು ನಟ ಅಲ್ಲು ಅರ್ಜುನ್ (Allu Arjun) ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್‌ಗೆ (Allu Aravind) ಜಾರಿ ನಿರ್ದೇಶನಾಲಯ ಗ್ರಿಲ್ ಮಾಡಿದೆ. ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಬ್ಯಾಂಕ್‌ನಿಂದ 101.4 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ 3 ಗಂಟೆಗಳ ವಿಚಾರಣೆ ನಡೆಸಿದ್ದಾರೆ.
ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದಾಗ ಪ್ರಮುಖ ಹಣಕಾಸಿನ ದಾಖಲೆಗಳನ್ನು ಸಲ್ಲಿಸಲು ವಿಫಲರಾಗಿದ್ದರು. ಇದೀಗ ಅದರ ಮುಂದುವರಿದ ಭಾಗದ ವಿಚಾರಣೆಯಲ್ಲಿ ಅಲ್ಲು ಅರವಿಂದ್ ಹಾಜರಾಗಿದ್ದರು. ಮುಂದಿನವಾರ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.
ವಿಚಾರಣೆ ಬಳಿಕ ಮಾತಾಡಿದ ಅಲ್ಲು ಅರವಿಂದ್, 2017ರಲ್ಲಿ ಒಂದು ಮೈನರ್ ಷೇರುದಾರನಾಗಿದ್ದ ಒಂದು ಆಸ್ತಿ ಖರೀದಿಸಿದ್ದೆ. ಆಸ್ತಿ ವಿಚಾರವಾಗಿ ತನಿಖೆ ಇದೆ ಎಂದು ತಿಳಿದಿರಲಿಲ್ಲ. ಬ್ಯಾಂಕ್ ಸಾಲವನ್ನು ಪಾವತಿಸಲಿಲ್ಲ. ಅಕೌಂಟ್ಸ್ ಬುಕ್‌ನಲ್ಲಿ ನನ್ನ ಹೆಸರು ಇರುವುದರಿಂದ ಇಡಿ ವಿಚಾರಣೆಗೆ ಕರೆದಿತ್ತು. ಜವಾಬ್ದಾರಿಯಿರುವ ನಾಗರಿಕರಿಗೆ ಹಾಜರಾಗಿ ವಿವರಣೆಯನ್ನು ನೀಡಿದ್ದೇನೆ ಅಂದಿದ್ದಾರೆ.
ಇನ್ನೂ ಓಪನ್ ಕ್ಯಾಶ್ ಕ್ರೆಡಿಟ್ ಸೌಲಭ್ಯವನ್ನು ದುರ್ಬಳಕೆ ಮಾಡಿ, 101 ಕೋಟಿ ರೂ.ವರೆಗೆ ತಮ್ಮ ವೈಯಕ್ತಿಕ ಖಾತೆಗಳಿಗೆ ಬದಲಾಸಿಕೊಂಡಿದ್ದಾರೆ ಎಂಬ ಆರೋಪ ಇದೆ. 2018-19ರಲ್ಲಿ ಈ ಬ್ಯಾಂಕ್ ವಂಚನೆ ನಡೆದಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿತ್ತು.
ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ (Allu Aravind) ಅವರು ಇಂದು (ಜ.10) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ತಂದೆ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಅಲ್ಲು ಅರ್ಜುನ್ (Allu Arjun) ವಿಶ್ ಮಾಡಿದ್ದಾರೆ. ಇದನ್ನೂ ಓದಿ:ದರ್ಶನ್ ಸರ್‌ಗೆ 2025 ಒಳ್ಳೆಯದಾಗುತ್ತದೆ: ಶರಣ್
76ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ತಂದೆಗೆ ‘ಪುಷ್ಪ ಕಾ ಬಾಪ್’ ಎಂದು ಕೇಕ್ ಮೇಲೆ ಬರೆದು ಅಲ್ಲು ಅರ್ಜುನ್ ವಿಶೇಷವಾಗಿ ಶುಭಹಾರೈಸಿದ್ದಾರೆ. ಹ್ಯಾಪಿ ಬರ್ತ್‌ಡೇ ಎಂದು ನಟ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ಇನ್ನೂ ನಿರ್ಮಾಪಕ ಅಲ್ಲು ಅರವಿಂದ್ ಕುಟುಂಬಸ್ಥರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲು ಅರ್ಜುನ್ ತಂದೆಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.
ಇನ್ನೂ ಅಲ್ಲು ನಟನೆಯ ‘ಪುಷ್ಪ 2’ 1800 ಕೋಟಿ ರೂ. ಗಳಿಸಿರುವ ಖುಷಿ ಒಂದು ಕಡೆಯಾದ್ರೆ, ಅಪ್ಪನ ಬರ್ತ್‌ಡೇ ಮತ್ತೊಂದು ಸಂಭ್ರಮ. ಈ ಎರಡು ವಿಚಾರ ನಟನ ಮನೆಯಲ್ಲಿ ಖುಷಿಯನ್ನು ದುಪ್ಪಟ್ಟು ಮಾಡಿದೆ.
‘ಪುಷ್ಪ 2′ (Pushpa 2) ಕಾಲ್ತುಳಿತ ಪ್ರಕರಣವು ಹಲವು ರೋಚಕ ತಿರುವುಗಳನ್ನು ಪಡೆದ ಬಳಿಕ ರಾಜಿ ಸಂಧಾನಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು (Revanth Reddy) ಟಾಲಿವುಡ್ ಸ್ಟಾರ್ಸ್ ಭೇಟಿಯಾಗಿದ್ದಾರೆ. ಈ ಪ್ರಕರಣದ ಸಂಬಂಧ ಟಾಲಿವುಡ್‌ಗೆ ಸಿಎಂ ರೇವಂತ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಕಾಲ್ತುಳಿತ ಪ್ರಕರಣ: ಸಿಎಂ ರೇವಂತ್ ರೆಡ್ಡಿರನ್ನು ಭೇಟಿಯಾದ ಅಲ್ಲು ಅರ್ಜುನ್ ತಂದೆ
ಕಾಲ್ತುಳಿತ ಪ್ರಕರಣದ ಬಳಿಕ ಸರ್ಕಾರ ವರ್ಸಸ್ ಚಿತ್ರರಂಗ ಎನ್ನುವ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಸಂಧಾನಕ್ಕೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ನಾಗಾರ್ಜುನ, ವೆಂಕಟೇಶ್ ಸೇರಿದಂತೆ ಅನೇಕರು ಸಿಎಂರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲು ಅರ್ಜುನ್ (Allu Arjun) ಅವರನ್ನು ಬಹಿರಂಗವಾಗಿಯೇ ಟೀಕಿಸಿದ್ದ ಸಿಎಂ ರೇವಂತ್ ರೆಡ್ಡಿ ಅವರು ತೆಲುಗಿನ ಕಲಾವಿದರಿಗೆ ಸಾಮಾಜಿಕ ಜವಾಬ್ದಾರಿಯ ಪಾಠ ಮಾಡಿದ್ದರು.
ಇನ್ನು ಮಾತುಕತೆ ವೇಳೆ, ನಟನ ವರ್ತನೆ ಬಗ್ಗೆ ಸಿಎಂ ರೇವಂತ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಸೆಲೆಬ್ರಿಟಿಗಳು ಹೊಂದಿರಬೇಕು ಮತ್ತು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಚಿತ್ರರಂಗದ ಬಗ್ಗೆ ನಮಗೆ ತಕರಾರುಗಳಿಲ್ಲ. ತೆಲುಗು ಚಿತ್ರ ನಿರ್ಮಾಪಕರು ಮತ್ತು ನಟರ ಜೊತೆ ಸರ್ಕಾರ ನಿಂತಿದೆ ಎಂದು ಅವರು ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ, ತೆಲುಗು ಚಿತ್ರರಂಗದ ವರ್ತನೆಗೂ ಸಿಎಂ ರೇವಂತ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಅಲ್ಲು ಅರ್ಜುನ್ ಅವರ ಮನೆಗೆ ಇಡೀ ಚಿತ್ರರಂಗ ಸಾಲುಗಟ್ಟಿ ನಿಂತಿದ್ದೀರಿ. ಆದರೆ ಆಸ್ಪತ್ರೆಯಲ್ಲಿರುವ ತೀವ್ರ ಅಸ್ವಸ್ಥವಾಗಿದ್ದ ಮೃತ ರೇವತಿ ಪುತ್ರ ಶ್ರೀತೇಜ ಬಗ್ಗೆ ಯಾರು ಯೋಚಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿತ್ರರಂಗ ಕನಿಷ್ಠ ಪ್ರಮಾಣದ ಸಮಾಜಿಕ ಜವಾಬ್ದಾರಿಯನ್ನು ತೋರಿಸಬೇಕು. ಅಂತಿಮವಾಗಿ ಸಿಎಂ ಜೊತೆಗೆ ಮಾತುಕತೆ ನಡೆಸುವ ಮೂಲಕ ಸರ್ಕಾರ ಮತ್ತು ಚಿತ್ರರಂಗದ ನಡುವೆ ಮೂಡಿರುವ ಕಾರ್ಮೋಡವನ್ನು ತಿಳಿಗೊಳಿಸುವ ಪ್ರಯತ್ನ ನಡೆದಿದೆ. ಇದು ಫಲಕಾರಿಯಾಗಲಿದ್ಯಾ? ಅನ್ನೊದು ಮುಂದೆ ಕಾದು ನೋಡಬೇಕಿದೆ.
ಅಂದಹಾಗೆ, ಈ ಮಾತುಕತೆಯಲ್ಲಿ ಸಿಎಂ ರೇವಂತ್ ರೆಡ್ಡಿ ಅವರನ್ನ ತೆಲುಗು ಚಿತ್ರರಂಗದ ಪ್ರಮುಖ ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಭೇಟಿಯಾದರು. ಈ ನಿಯೋಗದಲ್ಲಿ ಅಲ್ಲು ಅರ್ಜುನ್ ತಂದೆ ಮತ್ತು ನಿರ್ಮಾಪಕರಾದ ಅಲ್ಲು ಅರವಿಂದ್, ಸುರೇಶ್ ದಗ್ಗುಬಾಟಿ, ಸುನಿಲ್ ನಾರಂಗ್, ಸುಪ್ರಿಯಾ, ನಾಗ ವಂಶಿ, ‘ಪುಷ್ಪ 2’ ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ರವಿಶಂಕರ್ ಭಾಗಿಯಾಗಿದ್ದರು. ಇವರೊಂದಿಗೆ ನಟರಾದ ವೆಂಕಟೇಶ್ ದಗ್ಗುಬಾಟಿ, ನಿತಿನ್, ವರುಣ್ ತೇಜ್, ಸಿದ್ದು ಜೊನ್ನಲಗಡ್ಡ, ಕಿರಣ್ ಅಬ್ಬಾವರಂ ಮತ್ತು ಶಿವ ಬಾಲಾಜಿ ನಿರ್ದೇಶಕರಾದ ತ್ರಿವಿಕ್ರಮ್ ಶ್ರೀನಿವಾಸ್, ಹರೀಶ್ ಶಂಕರ್, ಅನಿಲ್ ರವಿಪುಡಿ ಮತ್ತು ಬಾಬಿ ಸಾಥ್ ನೀಡಿದರು.
ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರವನ್ನು ಅಲ್ಲು ಅರವಿಂದ್ ಘೋಷಿಸಿದ್ದಾರೆ. ಇದನ್ನೂ ಓದಿ:ಪೂಜಾ ಹೆಗ್ಡೆ ಜೊತೆ ‘ರೆಟ್ರೋ’ ಕಥೆ ಹೇಳಲು ಹೊರಟ ಸೂರ್ಯ
ಡಿ.4ರಂದು ‘ಪುಷ್ಪ 2’ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತ ರೇವತಿ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದು, ಈಗಾಗಲೇ ಅಲ್ಲು ಅರ್ಜುನ್ ತಂದೆ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಈ ಹಿಂದೆ 25 ಲಕ್ಷ ರೂ. ಕೊಡೋದಾಗಿ ತಿಳಿಸಿದ್ದರು. ಆದರೆ ಈಗ ಮೃತಪಟ್ಟ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡೋದಾಗಿ ಅಲ್ಲು ಅರವಿಂದ್ (Allu Arvind) ತಿಳಿಸಿದ್ದಾರೆ.
ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಜೊತೆಗೆ ‘ಪುಷ್ಪ 2’ ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂ.ವನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.
ಅಂದಹಾಗೆ, ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ರಿಲೀಸ್ ಆಗಿದ್ದರು. ನಿನ್ನೆಯಷ್ಟೇ (ಡಿ.24) ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಬಂದಿದ್ದರು.
ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಸಕಲ ತಯಾರಿ ಮಾಡಿಕೊಂಡಿದ್ದಾರೆ. ಕೇವಲ ಎರಡೇ ದಿನದಲ್ಲಿ ಮತ್ತೊಂದು ಟೀಸರ್ ಹೊರ ಬಿಡಲಿದ್ದಾರೆ. ಗ್ಲೋಬಲ್ ಸಿನಿಮಾ ‘ಯುಐ’ ಈ ಬಾರಿ ಜಗತ್ತಿನ ತುಂಬಾ ಸದ್ದು ಮಾಡಲಿದೆ. ಜನವರಿ 8ರಂದು ‘ಯುಐ’ (UI Film) ಟೀಸರ್ ಅನಾವರಣ ಆಗಲಿದೆ. ಹೇಗಿರಲಿದೆ ಟೀಸರ್ ? ಯಾರ‍್ಯಾರು ಬರಲಿದ್ದಾರೆ ಆ ಸಂಭ್ರಮಕ್ಕೆ? ಇಲ್ಲಿದೆ ಮಾಹಿತಿ. ಇದನ್ನೂ ಓದಿ:ನನ್ನ ಪತ್ನಿ ನಿಮ್ಮಂತೆಯೇ ಇರಬೇಕು ಎಂದ ಅಭಿಮಾನಿಗೆ ರಶ್ಮಿಕಾ ಏನಂದ್ರು ಗೊತ್ತಾ?
‘ಯುಐ’ ಸಿನಿಮಾ ಇದು ಉಪೇಂದ್ರ ನಿರ್ದೇಶನದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಅದಕ್ಕಿಂತ ಹೆಚ್ಚಾಗಿ ಗ್ಲೋಬಲ್ ಸಿನಿಮಾ. ಉಪ್ಪಿಯ ತಾಕತ್ತು ಏನೆಂದು ದಕ್ಷಿಣ ಭಾರತಕ್ಕೆ ಹೆಚ್ಚು ಗೊತ್ತು. ಈ ಬಾರಿ ಬಾಲಿವುಡ್ ಮಾತ್ರ ಅಲ್ಲ. ಇಡೀ ವಿಶ್ವಕ್ಕೇ ಉಪ್ಪಿ ಮೇಧಾವಿತನ ತಿಳಿಯಲಿದೆ. ಅದಕ್ಕಾಗಿಯೇ ‘ಯುಐ’ ಸಿನಿಮಾಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಹಗಲು ರಾತ್ರಿ ಒದ್ದಾಡಿದ್ದಾರೆ. ಅದರ ಪರಿಣಾಮದ ಚಿತ್ರದ ಟೀಸರ್ ಜ.8ರಂದು ಅನಾವರಣ ಆಗಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಯುಐ ಟೀಸರ್ ಜಗತ್ತಿನ ಮುಂದೆ ರಿವೀಲ್ ಆಗಲಿದೆ. ಟಾಲಿವುಡ್ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್(Allu Aravind), ಕನ್ನಡದ ಶಿವಣ್ಣ (Shivarajkumar), ಡಾಲಿ (Daali) ಕೂಡ ಹಾಜರಿ ಹಾಕಲಿದ್ದಾರೆ.
ಕಿಚ್ಚ ಸುದೀಪ್ (Sudeep) ಕೂಡ ‘ಯುಐ’ ಚಿತ್ರಕ್ಕೆ ಕೈ ಜೋಡಿಸಲಿದ್ದಾರೆ. ಚಿತ್ರೀಕರಣಕ್ಕಾಗಿ ಹೊರಗಿರುವ ಕಿಚ್ಚ ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಹೇಗಿರಲಿದೆ ಟೀಸರ್ ಎನ್ನುವುದನ್ನು ನೋಡಿದ ಮೇಲೆಯೆ ಹೇಳಬೇಕು. ಒಟ್ಟಿನಲ್ಲಿ ಕಳೆದ ಬಾರಿ ಟೀಸರ್‌ನಲ್ಲಿ ಬರೀ ಸೌಂಡ್ ಇತ್ತು. ಈ ಬಾರಿ ದೃಶ್ಯ ಕೂಡ ಇರಲಿವೆ. ಅಲ್ಲಿಗೆ ಏನು ಹೊಸದನ್ನು ಕೊಡಲಿದ್ದಾರೆ ಉಪ್ಪಿ? ಅದು ಗೊತ್ತಾಗಲಿದೆ ಏನಾದರಾಗಲಿ. ‘ಯುಐ’ ಸಿನಿಮಾ ಈಗಿನಿಂದಲೇ ಮೆರವಣಿಗೆ ಹೊರಟಿದೆ. ಅದಕ್ಕೆ ಕೋಟಿ ಕೋಟಿ ಕಾಸು ಸುರಿದಿದ್ದಾರೆ ಲಹರಿ ಸಂಸ್ಥೆಯ ಮನೋಹರ್ ನಾಯ್ಡು- ಸಲಗ ಕೆ.ಪಿ.ಶ್ರೀಕಾಂತ್.
ಉಪ್ಪಿ ಫ್ಯಾನ್ಸ್ ಮಾತ್ರ ‘ಯುಐ’ ಚಿತ್ರದಲ್ಲಿನ ಉಪೇಂದ್ರ ಗೆಟಪ್ ನೋಡೋದ್ದಕ್ಕೆ ರೆಡಿಯಾಗಿದ್ದಾರೆ. ಉಪೇಂದ್ರ ಅವತಾರ ಹೇಗಿರಲಿದೆ ಎಂಬುದನ್ನು ತಿಳಿಯಲು ಕಾತರದಿಂದ ಎದುರು ನೋಡ್ತಿದ್ದಾರೆ.
ಒಂದು ಸಾವಿರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಾಸ್ಯನಟರಾಗಿ ಕೆಲಸ ಮಾಡಿದ ಹೆಗ್ಗಳಿಕೆ ಅಲ್ಲು ರಾಮಲಿಂಗಯ್ಯ (Allu Ramalingaiah) ಅವರದ್ದು. ತೆಲುಗು ಸಿನಿಮಾ ರಂಗದಲ್ಲಿ ಅಲ್ಲು ರಾಮಲಿಂಗಯ್ಯ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. 1922ರಲ್ಲಿ ಹುಟ್ಟಿದ್ದ ರಾಮಲಿಂಗಯ್ಯ ಬಣ್ಣದ ಬದುಕಿಗೆ ಕಾಲಿಟ್ಟು ತೆಲುಗು ಮತ್ತು ತಮಿಳಿನಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರ ಕುಟುಂಬ 101ನೇ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದೆ.
ಸಿನಿಮಾ ರಂಗಕ್ಕೂ ಬರುವ ಮುನ್ನ ರಾಮಲಿಂಗಯ್ಯ ಹೋಮಿಯೋಪತಿ ವೈದ್ಯರಾಗಿದ್ದರು. ವೈದ್ಯ ವೃತ್ತಿಯನ್ನು ಮಾಡುತ್ತಲೇ ಸಿನಿಮಾ ರಂಗಕ್ಕೂ ಕಾಲಿಟ್ಟರು. ಕೇವಲ ನಟರಾಗಿ ಉಳಿಯದೇ ಗೀತಾ ಆರ್ಟ್ಸ್ ನಿರ್ಮಾಣ ಸಂಸ್ಥೆಯನ್ನೂ ಶುರು ಮಾಡಿ, ನೂರಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ತೆಲುಗು ಚಿತ್ರೋದ್ಯಮದಲ್ಲಿ ಗೀತಾ ಆರ್ಟ್ಸ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ರಾಮಲಿಂಗಯ್ಯನವರ ಮಗ ಅಲ್ಲು ಅರವಿಂದ್ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ.
ಅಲ್ಲು ಅರವಿಂದ್ (Allu Arvind) , ಅಲ್ಲು ನರೇಶ್, ಅಲ್ಲು ಅರ್ಜುನ್ ಹೀಗೆ ರಾಮಲಿಂಗಯ್ಯ ಅವರ ಕುಟುಂಬ ಸಿನಿಮಾ ರಂಗಕ್ಕಾಗಿಯೇ ಮೀಸಲಿಟ್ಟಿದೆ. ಪದ್ಮಶ್ರೀ ಗೌರವ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದಿರುವ ಅಲ್ಲು ರಾಮಲಿಂಗಯ್ಯ ಅವರು ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಲ್ಲು ಬ್ಯುಸಿನೆಸ್ ಪಾರ್ಕ್ (Allu Park) ಉದ್ಘಾಟನೆ ಮತ್ತು ಅವರ ಕಂಚಿನ ಪ್ರತಿಮೆ ಅನಾವರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಅವರ ಕುಟುಂಬ ರಾಮಲಿಂಗಯ್ಯ ಅವರ ಮಗ ಅಲ್ಲು ಅರವಿಂದ್, ಅಲ್ಲು ನರೇಶ್, ಮಕ್ಕಳು, ಮೊಕ್ಕಳು ಸೇರಿದಂತೆ ಇಡೀ ಕುಟುಂಬವೇ ಭಾಗಿಯಾಗಿತ್ತು.
ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ (Naga Chaitanya) 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ (Chandu Mondeti) ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ (Allu Arvind) ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.
ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.
ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರೀ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಚೈ ಮತ್ತು ಮಲರ್ ಬ್ಯೂಟಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.
ಟಾಲಿವುಡ್ (Tollywood) ಯಂಗ್ ಹೀರೋ ನಾಗಚೈತನ್ಯ (Nagachaitanya) ಇತ್ತೀಚೆಗೆ 2ನೇ ಮದುವೆ ವಿಚಾರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ಬೆನ್ನಲ್ಲೇ ನಟಿ ಸಾಯಿ ಪಲ್ಲವಿ (Sai Pallavi) ಜೊತೆ ಹೊಸ ಸಿನಿಮಾವೊಂದನ್ನ ಒಪ್ಪಿಕೊಂಡಿದ್ದಾರೆ. ಸತತ ಸೋಲಿನಿಂದ ಬೇಸತ್ತ ನಾಗಚೈತನ್ಯ ಈಗ ಮತ್ತೆ ‘ಲವಸ್ಟೋರಿ’ (Love Story) ಸಹನಟಿ, ಸಾಯಿ ಪಲ್ಲವಿ ಜೊತೆ ಕೈಜೋಡಿಸಿದ್ದಾರೆ.
ನಾಗಚೈತನ್ಯ- ಸಾಯಿ ಪಲ್ಲವಿ ಹೊಸ ಸಿನಿಮಾಗೆ ಅಲ್ಲು ಅರವಿಂದ್ (Allu Aravind) ನಿರ್ಮಾಣ ಮಾಡ್ತಿದ್ದಾರೆ. ಈ ಚಿತ್ರಕ್ಕೆ ಚಂದು ಮೊಂಡೇಟಿ ನಿರ್ದೇಶನ ಮಾಡಲಿದ್ದಾರೆ. ಸದ್ಯ ಅವರು ಕಾರ್ತಿಕೇಯ 3 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾರೆ. ಬಳಿಕ ನಾಗಚೈತನ್ಯ ಜೊತೆಗಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಇದನ್ನೂ ಓದಿ:ಕಣ್ಮುಂದೆಯೇ ರಶ್ಮಿಕಾ ಇದ್ದರೂ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್
ಈ ಸಿನಿಮಾದ ಕುರಿತು ಸಾಯಿ ಪಲ್ಲವಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಿದ್ದಾರೆ. ಇಷ್ಟು ಪ್ರೀತಿಸುವ ತಂಡವನ್ನು ಸೇರಿಕೊಳ್ಳುತ್ತಿರುವುದು ಬಹಳ ಖುಷಿಯ ವಿಷಯ. ಬೆಚ್ಚನೆಯ ಸ್ವಾಗತಕ್ಕೆ ಗೀತಾ ಆರ್ಟ್ಸ್, ಬನ್ನಿ ವಾಸು, ಚಂದು ಮೊಂಡೇಟಿಗೆ ಧನ್ಯವಾದ. ನಾಗ ಚೈತನ್ಯ ಅವರೇ ನಿಮ್ಮೊಂದಿಗೆ ಮತ್ತೊಂದು ಸಿನಿಮಾ ಮಾಡುತ್ತಿರುವುದು ಖುಷಿಯ ಸಂಗತಿ. ನನ್ನ ಪ್ರಿಯವಾದ ತೆಲುಗು ಪ್ರೇಕ್ಷಕರೇ, ನಿಮ್ಮನ್ನು ನಾನು ಬಹಳ ಮಿಸ್ ಮಾಡಿಕೊಂಡಿದ್ದೆ. ಈಗ NC 23 ಸಿನಿಮಾ ಮೂಲಕ ನಿಮ್ಮನ್ನು ಭೇಟಿ ಆಗುತ್ತಿರುವುದು ಬಹಳ ಖುಷಿ ನೀಡಿದೆ ಎಂದು ಬರೆದುಕೊಂಡಿದ್ದಾರೆ. ‘ಲವ್‌ಸ್ಟೋರಿ’ ಸಕ್ಸಸ್ ನಂತರ ಮತ್ತೆ ಒಂದಾಗ್ತಿರೋ ಈ ಜೋಡಿ ಮಗದೊಮ್ಮೆ ಗೆದ್ದು ಬೀಗುತ್ತಾರಾ ಕಾಯಬೇಕಿದೆ.
ಕಮಲ್ ಹಾಸನ್ (Kamal Haasan) ನಿರ್ಮಾಣದ ಸಿನಿಮಾದಲ್ಲಿ ಶಿವ ಕಾರ್ತಿಕೇಯನ್‌ಗೆ ನಾಯಕಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹೊಸ ಚಿತ್ರಕ್ಕೆ ರೌಡಿ ಬೇಬಿ ಫೈನಲ್ ಆಗಿದ್ದಾರೆ ಎನ್ನಲಾಗುತ್ತಿದೆ.
ತೆಲುಗಿನ ಹೆಸರಾಂತ ನಟ ರಾಜಶೇಖರ್ (Rajasekhar) ಮತ್ತು ಅವರ ಪತ್ನಿ ಜೀವಿತಾಗೆ (Jeevita) ನಾಂಪಲ್ಲಿ ಕೋರ್ಟ್ ನ ಮುಖ್ಯ ಮ್ಯಾಜಿಸ್ಟ್ರೇಟ್ ಒಂದು ವರ್ಷ ಜೈಲು ಶಿಕ್ಷೆ (Jail sentence) ಮತ್ತು ಐದು ಲಕ್ಷ ರೂಪಾಯಿ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ರಾಜಶೇಖರ್ ಮತ್ತು ಪತ್ನಿ ಜೀವಿತಾ ಮಾಡಿರುವ ಆರೋಪ ಸುಳ್ಳು ಎಂದು ಸಾಬೀತಾಗಿದೆ.
2011ರಲ್ಲಿ ನಟ ರಾಜಶೇಖರ್ ಮತ್ತು ಅವರ ಪತ್ನಿ ಒಟ್ಟಾಗಿ ಚಿರಂಜೀವಿ (Chiranjeevi) ಬ್ಲಡ್ ಬ್ಯಾಂಕ್ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಇಲ್ಲಿಗೆ ಬರುವ ರಕ್ತವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರು. ಈ ಕುರಿತು ಚಿರಂಜೀವಿ ಅವರ ಭಾವ ಅಲ್ಲು ಅರವಿಂದ್ (Allu Arvind) ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನೂ ಓದಿ:ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್
ನಟ ಚಿರಂಜೀವಿ ಕಂಡರೆ ನಟ ರಾಜಶೇಖರ್ ಅವರಿಗೆ ಆಗುವುದಿಲ್ಲ. ಕಾರಣ ಸಿಕ್ಕಾಗೆಲ್ಲ ಚಿರಂಜೀವಿಯನ್ನು ಟೀಕಿಸುತ್ತಲೇ ಇರುತ್ತಾರೆ ರಾಜಶೇಖರ್. ಇದಕ್ಕೆ ವೃತ್ತಿ ವೈಷಮ್ಯ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ತೆಲುಗು ಚಿತ್ರೋದ್ಯಮದ ಕಲಾವಿದರ ಸಂಘದಲ್ಲೂ ಈ ಇಬ್ಬರೂ ಬಹಿರಂಗವಾಗಿ ಕಿತ್ತಾಡಿಕೊಂಡಿದ್ದರು.
ಅದರ ಮುಂದುವರೆಕೆಗಾಗಿ ಚಿರಂಜೀವಿ ಹೆಸರಿನ ಬ್ಲಡ್ ಬ್ಯಾಂಕ್ ನಲ್ಲಿ ರಕ್ತವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದರು ರಾಜಶೇಖರ್. ಈ ಮಾತಿನ ವಿರುದ್ದ ಅಲ್ಲು ಅರವಿಂದ್ ದೂರು ನೀಡಿದ್ದರು. ನಿನ್ನೆ ತೀರ್ಪು ಹೊರಬಂದಿದೆ. ಕೂಡಲೇ ದಂಪತಿ ಜಾಮೀನು ಪಡೆದುಕೊಂಡು ಹೊರ ಬಂದಿದ್ದಾರೆ.
‘ಲಾಲ್ ಸಿಂಗ್ ಚಡ್ಡಾ’ (Lal Singh Chadha) ಸಿನಿಮಾದ ಸೋಲಿನ ನಂತರ ಆಮೀರ್ ಖಾನ್ (Aamir Khan) ಬ್ರೇಕ್ ತೆಗೆದುಕೊಂಡಿದ್ದರು. ಈ ಸಿನಿಮಾದ ಸೋಲು ಅವರನ್ನ ನಟನೆಯಿಂದ ದೂರಯುಳಿವಂತೆ ಮಾಡಿತ್ತು. ಇದೀಗ ಮತ್ತೆ ಕಂಬ್ಯಾಕ್ ಆಗುವ ಆಲೋಚನೆಯಲ್ಲಿದ್ದಾರೆ. ಸೂಪರ್ ಡೂಪರ್ ಹಿಟ್ ‘ಗಜನಿ’ ಸೀಕ್ವೆಲ್ ಮಾಡಲು ಆಮೀರ್ ಮುಂದಾಗಿದ್ದಾರೆ.
2005ರಲ್ಲಿ ಬಂದ ತಮಿಳಿನ ‘ಗಜನಿ’ (Ghajini) ಚಿತ್ರವನ್ನು ಅದೇ ಹೆಸರಲ್ಲಿ ಹಿಂದಿಗೆ 2008ರಲ್ಲಿ ರಿಮೇಕ್ ಮಾಡಲಾಯಿತು. ತಮಿಳಿನಲ್ಲಿ (Tamil) ಸೂರ್ಯ (Suriya) ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್ ಮಾಡಿದರು. ಈಗ ಚಿತ್ರಕ್ಕೆ ಈಗ ಸೀಕ್ವೆಲ್ ತರಲು ಸಿದ್ಧತೆ ನಡೆದಿದೆ. ಆಮಿರ್ ಖಾನ್ ಅವರು ಸೀಕ್ವೆಲ್‌ನಲ್ಲಿ ನಟಿಸುತ್ತಿದ್ದು, ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ
ತಮಿಳಿನ ‘ಗಜನಿ’ (Ghajini) ಚಿತ್ರವನ್ನು ನಿರ್ಮಾಣ ಮಾಡಿದ್ದು ಸೇಲಮ್ ಚಂದ್ರಶೇಖರನ್. ಅವರು ಈಗ ನಮ್ಮೊಂದಿಗೆ ಇಲ್ಲ. 2021ರಲ್ಲಿ ಅವರು ತೀರಿಕೊಂಡರು. ಈ ಚಿತ್ರಕ್ಕೆ ಸೀಕ್ವೆಲ್ ಮಾಡಲು ಅಲ್ಲು ಅರವಿಂದ್ ಮುಂದಾಗಿದ್ದಾರೆ. ಈ ವಿಷ್ಯವಾಗಿಯೇ ಆಮೀರ್ ಅವರು ಪದೇ ಪದೇ ಹೈದರಾಬಾದ್‌ಗೆ ಭೇಟಿ ನೀಡ್ತಿದ್ದಾರೆ. ಕಥೆಯ ಬಗ್ಗೆ ತಂಡದ ಜೊತೆ ಆಮೀರ್ ಚರ್ಚೆ ಮಾಡ್ತಿದ್ದಾರೆ. ಹಿಂದಿಯ ‘ಗಜನಿ’ ಸಿನಿಮಾದಲ್ಲಿ ಆಮಿರ್ ಖಾನ್ (Aamir Khan) ಅವರು ಸಂಜಯ್ ಸಿಂಘಾನಿಯಾ ಆಗಿ ಕಾಣಿಸಿಕೊಂಡಿದ್ದರು. ಈಗ ಚಿತ್ರದ ಕಥೆ ಮುಂದುವರಿಯಲಿದೆ. ಈ ರೀತಿಯಲ್ಲಿ ಕಥೆ ಸಿದ್ಧಪಡಿಸಲಾಗಿದೆ ಎನ್ನಲಾಗುತ್ತಿದೆ.
ಅಲ್ಲು ಅರವಿಂದ್ ಅವರು ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಈಗಾಗಲೇ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಈಗ ಅವರು ‘ಗಜನಿ 2’ ಚಿತ್ರವನ್ನು ನಿರ್ಮಿಸಲು ಹೊರಟಿದ್ದಾರೆ ಎನ್ನಲಾಗುತ್ತಿದೆ. ನಟ ಆಮೀರ್‌ಗೂ ಗಜನಿ ಪಾರ್ಟ್ 2 ಕಥೆ ಸಾಕಷ್ಟು ಇಷ್ಟ ಆಗಿದೆಯಂತೆ. ಈ ಚಿತ್ರದ ಭಾಗವಾಗಲು ಓಕೆ ಎಂದಿದ್ದಾರೆ. ಸದ್ಯ ಈ ಬಗ್ಗೆ ಅಂತೆ- ಕಂತೆ ಸುದ್ದಿ ಹರಿದಾಡುತ್ತಿದೆ. ಚಿತ್ರತಂಡ ಅಧಿಕೃತ ಅಪ್‌ಡೇಟ್ ನೀಡುವವೆರೆಗೂ ಕಾದು ನೋಡಬೇಕಿದೆ.