Tag: ಅವಕಾರಿ ಇಲಾಖೆ

  • ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಮಹಿಳೆಯರ ದಾಳಿ

    ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಮಹಿಳೆಯರ ದಾಳಿ

    ಬೆಳಗಾವಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಮಹಿಳೆಯರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹೊಸ ಶಿರಹಟ್ಟಿ ಗ್ರಾಮದಲ್ಲಿ ಘಟನೆದಿದೆ.

    ಗ್ರಾಮದ ಗುರುಲಿಂಗ ಅಂಬಿ ಎಂಬ ವ್ಯಕ್ತಿಯ ಮನೆ ಮೇಲೆ ದಾಳಿ ನಡೆಸಿದ ಮಹಿಳೆಯರು, ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

    ಹಲವು ದಿನಗಳಿಂದ ಗುರುಲಿಂಗ ಅಂಬಿ ಎಂಬವರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದರು, ದಿನನಿತ್ಯ ಅಕ್ರಮ ಮದ್ಯ ಮಾರಾಟದಿಂದ ರೋಸಿ ಹೋಗಿದ್ದ ಗ್ರಾಮದ ಮಹಿಳೆಯರು ತಾವೇ ಮನೆ ಮೇಲೆ ದಾಳಿ ನಡೆಸಿ ಅಧಿಕಾರಿಗಳ ಕಣ್ತೆರೆಸುವ ಪ್ರಯತ್ನ ಮಾಡಿದ್ದಾರೆ.

    ಗ್ರಾಮದಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ನಡೆಸಯುತ್ತಿರೋ ಮದ್ಯ ಮಾರಾಟದ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದಾರೆ.

    ಅಕ್ರಮ ಮದ್ಯ ಮಾರಾಟ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಇನ್ನು ಚಿಕ್ಕೋಡಿ ಉಪ ವಿಭಾಗದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ನಡೆದಿದ್ದರೂ, ಅಬಕಾರಿ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸದ ಸಂಗತಿಯಾಗಿದೆ.