Tag: ಅವಳಿ ಮಕ್ಕಳು

  • ಪತ್ನಿ ಜೊತೆ ಜಗಳ; ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ

    ಪತ್ನಿ ಜೊತೆ ಜಗಳ; ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ

    ಮುಂಬೈ: ಪತ್ನಿ ಜೊತೆ ಜಗಳ ಮಾಡಿಕೊಂಡು ವ್ಯಕ್ತಿಯೊಬ್ಬ ತನ್ನ ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ವಾಶಿಮ್‌ ಜಿಲ್ಲೆಯ ನಿವಾಸಿ ರಾಹುಲ್‌ ಚವಾಣ್‌ ಕೊಲೆ ಆರೋಪಿ. ಚವಾಣ್ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದಾಗ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಜಗಳದ ಬಳಿಕ ಆತನ ಪತ್ನಿ ತನ್ನ ಹೆತ್ತವರ ಮನೆಗೆ ಹೋಗಿದ್ದಾರೆ. ಆದರೆ, ಚವಾಣ್ ತನ್ನ ಹೆಣ್ಣುಮಕ್ಕಳೊಂದಿಗೆ ಏಕಾಂಗಿಯಾಗಿ ಪ್ರಯಾಣ ಮುಂದುವರಿಸಿದ್ದಾನೆ. ನಂತರ ಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಕೊನೆಗೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ.

    ಕೋಪದಿಂದ ಚವಾಣ್ ಅವಳಿ ಮಕ್ಕಳನ್ನು ಬುಲ್ಧಾನಾ ಜಿಲ್ಲೆಯ ಅಂಚಾರ್ವಾಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳ ಶವಗಳನ್ನು ವಶಪಡಿಸಿಕೊಂಡಿದೆ. ಪ್ರಾಥಮಿಕ ತನಿಖೆಯಲ್ಲಿ ಶವಗಳು ಭಾಗಶಃ ಸುಟ್ಟುಹೋಗಿವೆ ಎಂದು ತಿಳಿದುಬಂದಿದೆ. ಕೊಲೆ ನಂತರ ಚವಾಣ್ ಬೆಂಕಿ ಹಚ್ಚುವ ಮೂಲಕ ಸಾಕ್ಷ್ಯಗಳನ್ನು ನಾಶಮಾಡಲು ಪ್ರಯತ್ನಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

    ಆದಾಗ್ಯೂ, ಪೊಲೀಸ್ ಅಧಿಕಾರಿಗಳು ತನಿಖೆಯ ಈ ಅಂಶವನ್ನು ಇನ್ನೂ ದೃಢಪಡಿಸಿಲ್ಲ. ಮಕ್ಕಳನ್ನು ಕೊಂದ ಬಳಿಕ ಸುಟ್ಟು ಹಾಕಲಾಗಿದೆಯೇ ಎಂಬುದು ವಿಧಿವಿಜ್ಞಾನ ಪರೀಕ್ಷೆ ಮತ್ತು ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ.

    ಆರಂಭಿಕ ವಿಚಾರಣೆಯ ಭಾಗವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಮನೀಷಾ ಕದಮ್ ಮತ್ತು ಇತರರು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು. ಪೊಲೀಸರು ಸ್ಥಳದಲ್ಲೇ ಪರಿಶೀಲನೆ ನಡೆಸಿ, ಪ್ರದೇಶದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

  • ಅವಳಿ ಮಕ್ಕಳ ತಾಯಿ ಆಗುತ್ತಿದ್ದಾರೆ ನಟಿ ಅಮಲಾ ಪೌಲ್

    ಅವಳಿ ಮಕ್ಕಳ ತಾಯಿ ಆಗುತ್ತಿದ್ದಾರೆ ನಟಿ ಅಮಲಾ ಪೌಲ್

    ನ್ನಡವೂ ಸೇರಿದಂತೆ ಹಲವಾರು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ಅಮಲಾ ಪೌಲ್ (Amala Paul), ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ತಾವು ಅವಳಿ ಮಕ್ಕಳ (Twins) ತಾಯಿ ಆಗುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಸುದ್ದಿಯನ್ನು ಕೇಳಿದ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

    ಒಂದು ಕಡೆ ಅವಳಿ ಮಕ್ಕಳ ತಾಯಿ ಆಗುತ್ತಿರುವುದು ಖುಷಿ ಇದ್ದರೆ, ಮತ್ತೊಂದು ಕಡೆ ಅಮಲಾ ನಟನೆಯ ‘ಆಡುಜೀವಿತಂ’ (Aadujeevitham) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರ್‌ಗೆ ಅಮಲಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬೋಲ್ಡ್ ಬಟ್ಟೆಯಲ್ಲಿ ಕಾಣಿಸಿಕೊಂಡ ಅಮಲಾಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಬಟ್ಟೆ ಮ್ಯಾಟರ್‌ಗೆ ನಟಿಯ ಹಿಗ್ಗಾಮುಗ್ಗಾ ಟ್ರೋಲ್‌ ಮಾಡಿದ್ದಾರೆ.

    ಇತ್ತೀಚೆಗೆ ನಟಿ ಅಮಲಾ ಅವರು ಉದ್ಯಮಿ ಜಗತ್ ದೇಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಒಂದು ತಿಂಗಳ ನಂತರ ತಾಯಿಯಾಗಿರುವ ಗುಡ್ ನ್ಯೂಸ್ ತಿಳಿಸಿದ್ದರು. ಚೊಚ್ಚಲ ಮಗುವಿನ ಆಗಮನಕ್ಕೆ ಎದುರು ನೋಡ್ತಿರುವಾಗ ತಾವು ನಟಿಸಿರುವ ಸಿನಿಮಾಗೂ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ.

    ಇದೀಗ ಸಂದರ್ಶನಕ್ಕೆ ಬರುವಾಗ ಕಡುನೀಲಿ ಬಣ್ಣದ ಸ್ಲೀವ್‌ಲೆಸ್ ಡ್ರೆಸ್ ಧರಿಸಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಹಾಕಿದ್ದಾರೆ. ಇದೆಂಥಾ ಡ್ರೆಸ್ ಬೆಡ್‌ನಿಂದ ಎದ್ದ ಕೂಡಲೇ ಬಾತ್‌ರೂಮ್‌ಗೆ ಹಾಕಿಕೊಂಡು ಹೋಗುವ ಡ್ರೆಸ್ ಎಂದು ನೆಟ್ಟಿಗರೊಬ್ಬರು ಕುಟುಕಿದ್ದಾರೆ. ನಾನು ಅಮಲಾ ಪೌಲ್ ದೊಡ್ಡ ಅಭಿಮಾನಿಯಾಗಿದ್ದೆ. ಈಗ ಅಭಿಮಾನಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ನಟಿಯ ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಆದರೆ ನೆಗೆಟಿವ್ ಕಾಮೆಂಟ್‌ಗೆ ನಟಿ ಕ್ಯಾರೆ ಎನ್ನದೇ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡುಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

     

    ನಿರ್ದೇಶಕ ಬ್ಲೆಸ್ಸಿ ಅವರ 15 ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ;ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

  • ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ತುಮಕೂರು: ಪ್ರಸವ ವೇಳೆ ಅನಾಥ ಬಾಣಂತಿ ಹಾಗೂ ಅವಳಿ ಶಿಶುಗಳು (twin babies) ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ (Hospital) ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

    ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ವಾಸವಿದ್ದ ತುಂಬು ಗರ್ಭಿಣಿ ಕಸ್ತೂರಿ (30) ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಕಸ್ತೂರಿಯವರನ್ನು ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಿದ್ದಾರೆ.

     

    ಇಂದು ಬೆಳಗ್ಗೆ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಆದರೆ ಸೂಕ್ತ ಚಿಕಿತ್ಸೆ ಸಿಗದೇ ಅವಳಿ ಶಿಶುಗಳ ಜೊತೆಗೆ ಬಾಣಂತಿಯೂ ಮೃತಪಟ್ಟಿದ್ದಾರೆ. ಕಸ್ತೂರಿ ಮೂಲತಃ ತಮಿಳುನಾಡಿನವರಾಗಿದ್ದು, ಕಳೆದ 1 ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ – 2 ವರ್ಷ ವಯೋಮಿತಿ ಸಡಿಲ

    ಇದೀಗ ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಕಾರಣವಾಗಿರುವ ಆರೋಗ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ತಪ್ಪಿತಸ್ಥರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಘಟನಾ ಸ್ಥಳಕ್ಕೆ ಡಿ.ಹೆಚ್.ಒ ಡಾ. ಮಂಜುನಾಥ್ ಹಾಗೂ ಡಾ. ವೀಣಾ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಮಂಜುನಾಥ್, ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡುಬಂದಿರುವುದರಿಂದ ಆ ವೇಳೆ ಕರ್ತವ್ಯದಲ್ಲಿದ್ದ ಡಾ.ಉಷಾ ಸೇರಿ ನರ್ಸ್ಗಳನ್ನು ಅಮಾನತುಗೊಳಿಸಲಾಗುವುದು. ತುರ್ತು ಸಂದರ್ಭದಲ್ಲಿ ದಾಖಲಾತಿ ಕೇಳುವ ಅಗತ್ಯ ಇಲ್ಲ. ಯಾವುದೇ ಮುಲಾಜಿಲ್ಲದೆ ಅವರನ್ನು ಅಮಾನತುಗೊಳಿಸಲಾಗುವುದು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ (Nayantara) ಮೂರ್ನಾಲ್ಕು ತಿಂಗಳ ಹಿದೆಯಷ್ಟೇ ಮದುವೆ ಆಗಿದ್ದಾರೆ. ಮದುವೆ ಆಗಿ ನಾಲ್ಕೇ ತಿಂಗಳಿಗೆ ತಾವು ಜವಳಿ ಮಕ್ಕಳ ಪಾಲಕರಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎರಡೂ ಮಕ್ಕಳ ಕಾಲುಗಳ ಫೋಟೋವನ್ನು ಅಪ್ ಲೋಡ್ ಮಾಡಿ, ಟ್ರೋಲ್ ಗೆ ಗುರಿಯಾಗಿದ್ದಾರೆ.

    ಬಾಡಿಗೆ ತಾಯಿ (Surrogate mother) ಮೂಲಕ ಜವಳಿ (twins) ಮಕ್ಕಳಿಗೆ ತಾವು ತಾಯಿ ಆಗಿದ್ದೇನೆ ಎಂದು ನಯನತಾರಾ ಘೋಷಿಸುತ್ತಿದ್ದಂತೆಯೇ ಶುಭ ಹಾರೈಸಿದ್ದವರಿಗಿಂತ ನೆಗೆಟಿವ್ ಕಾಮೆಂಟ್ ಮಾಡಿದವರೇ ಹೆಚ್ಚಾಗಿದ್ದಾರೆ. ಕೆಲವರು ತಾಯ್ತನದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ಅನೇಕರು ಮನೆಗೆ ಬರುತ್ತಿರುವ ಹೊಸ ಅತಿಥಿಗೆ ಶುಭ ಹಾರೈಸಿದ್ದಾರೆ. ಎರಡೂ ಮಕ್ಕಳು ನಿಮ್ಮಂತೆಯೇ ಸಿನಿಮಾ ರಂಗದಲ್ಲೇ ಮುಂದುವರೆಯಲಿ ಎಂದು ಕಾಮೆಂಟ್ ಮಾಡಿದ್ದಾರೆ.

    ಮದುವೆಯಾದ 4 ತಿಂಗಳಿಗೆ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan), ನಟಿ ನಯನತಾರಾ ದಂಪತಿ ಅಭಿಮಾನಿಗಳಿಗಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಯನತಾರ ಅವಳಿ ಮಕ್ಕಳ ತಾಯಿ ಎಂದು ಇನ್ಸ್ಟಾದಲ್ಲಿ ದಂಪತಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರೇ, ಮದುವೆಯಾದ 4 ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವವರಿಗೆ ಉತ್ತರವನ್ನೂ ಕೊಟ್ಟಿರುವ ದಂಪತಿ, ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪಾಲಕರಾಗಿದ್ದಾರೆ ಈ ಜೋಡಿ.

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಈ ದಂಪತಿ ಹನಿಮೂನ್ ಗೆ ಹೋದಾಗಲೂ ಮಗುವಿನ ಪಾದಗಳಿರುವ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆಗಲೂ ಕೂಡ ಅಷ್ಟೇ ಕುತೂಹಲಕ್ಕೆ ಕಾರಣವಾಗಿತ್ತು ಆ ಪೋಸ್ಟ್. ಇದೀಗ ಅದು ಕೂಡ ನಿಜವಾಗಿದೆ. ಅಭಿಮಾನಿಗಳು ಮತ್ತು ಆಪ್ತರು ಈ ಜೋಡಿಗೆ ಶುಭಾಶಯ ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮೂಲ್ಯಗೆ ‘ಅವಳಿ ಮಕ್ಕಳು’ ಎಂದು ವೈದ್ಯರು ಹೇಳಿದಾಗ ಖುಷಿಗಿಂತ ಕುಟುಂಬಕ್ಕೆ ಚಿಂತೆಯಾಗಿತ್ತಂತೆ

    ಅಮೂಲ್ಯಗೆ ‘ಅವಳಿ ಮಕ್ಕಳು’ ಎಂದು ವೈದ್ಯರು ಹೇಳಿದಾಗ ಖುಷಿಗಿಂತ ಕುಟುಂಬಕ್ಕೆ ಚಿಂತೆಯಾಗಿತ್ತಂತೆ

    ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ (Amulya) ಸಿನಿಮಾ ರಂಗದಿಂದ ದೂರವಾದರೂ, ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿರುತ್ತಾರೆ. ಸಿನಿಮಾ ಸಂಬಂಧಿ ವಿಷಯಗಳಿಗಿಂತಲೂ ತಮ್ಮ ಕುಟುಂಬದ ಬಗೆಗಿನ ಸಂಭ್ರಮಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳುತ್ತಲೇ ಇರುತ್ತಾರೆ. ಅಲ್ಲದೇ, ಈಗಂತೂ ತಮ್ಮ ಮುದ್ದಾದ ಮಕ್ಕಳ ಫೋಟೋಗಳನ್ನು ಆಗಾಗ್ಗೆ ಅಪ್ ಲೋಡ್ ಮಾಡುತ್ತಾರೆ.

    ಇಂತಹ ಅಮೂಲ್ಯ ಅಭಿಮಾನಿಗಳಿಗೆ ಒಂದು ಸುವರ್ಣಾವಕಾಶ ನೀಡಿದ್ದರು. ನನ್ನ ಬಗ್ಗೆ ಏನು ಬೇಕಾದರೂ ಪ್ರಶ್ನೆ ಕೇಳಿ, ಉತ್ತರಿಸುತ್ತೇನೆ ಎಂದು ಅಭಿಮಾನಿಗಳಿಗೆ ಹೇಳಿದ್ದರು. ಇಂತಹ ಅವಕಾಶವನ್ನು ಅಭಿಮಾನಿಗಳು ಕೂಡ ಸಖತ್ತಾಗಿಯೇ ಬಳಸಿಕೊಂಡಿದ್ದಾರೆ. ಅದರಲ್ಲೂ ಅಭಿಮಾನಿಯೊಬ್ಬ, ಮೊದಲ ಬಾರಿಗೆ ನಿಮಗೆ ಅವಳಿ ಮಕ್ಕಳು ಎಂದು ಗೊತ್ತಾದಾಗ ನಿಮ್ಮ ರಿಯಾಕ್ಷನ್ ಹೇಗಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೂ ಅಮೂಲ್ಯ ಉತ್ತರ ಕೊಟ್ಟಿದ್ದಾರೆ. ಆ ಉತ್ತರವೇ ಮಜವಾಗಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಈಗಲೂ ಅಮೌಲ್ಯ ಒಂದು ಪುಟ್ಟ ಮಗುವಿನ ರೀತಿಯಲ್ಲೇ ಇದ್ದಾರೆ. ಇಷ್ಟು ಬೇಗ ಅವರು ಮದುವೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಡನ್ನಾಗಿ ಹೊಸ ಜೀವನಕ್ಕೆ ಕಾಲಿಡುವ ಮೂಲಕ ಅಸಂಖ್ಯಾತ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಮದುವೆಯ ನಂತರ ಮತ್ತೆ ಸಿನಿಮಾ ರಂಗಕ್ಕೆ ಬರುತ್ತಾರೆ ಎಂದು ಹೇಳಲಾಗಿತ್ತು. ಅದು ಆಗಲಿಲ್ಲ. ತಾವು ತಾಯಿ ಆಗುತ್ತಿರುವ ಕುರಿತು ಘೋಷಿಸಿದರು. ಈಗಲೂ ಅಭಿಮಾನಿಗಳು ಅವರು ಸಿನಿಮಾ ರಂಗಕ್ಕೆ ಬರುವುದಕ್ಕಾಗಿ ಕಾಯುತ್ತಿದ್ದಾರೆ.

    ಇದೀಗ ಅಮೂಲ್ಯ ಅವಳಿ (Twins) ಮಕ್ಕಳ ತಾಯಿ. ಮೊದಲ ಬಾರಿಗೆ ವೈದ್ಯರು ಈ ವಿಷಯವನ್ನು ತಿಳಿಸಿದಾಗ ಅಮೂಲ್ಯ ನಕ್ಕರಂತೆ. ಅವರ ಪತಿ ಜಗದೀಶ್ (Jagdish) ಟೆನ್ಷನ್ ಮಾಡಿಕೊಂಡರಂತೆ. ಇಡೀ ಫ್ಯಾಮಿಲಿಗೆ ಒಂದು ರೀತಿಯಲ್ಲಿ ಆತಂಕವಾಗಿತ್ತಂತೆ. ಅಮೂಲ್ಯ ಪುಟಾಣಿ ಹುಡುಗಿ. ಎರಡು ಮಕ್ಕಳನ್ನು ಹೇಗೆ ಮ್ಯಾನೇಜ್ ಮಾಡ್ತಾರೆ ಅನ್ನುವುದು ಕುಟುಂಬಕ್ಕೆ (Anxiety) ಚಿಂತೆಯಾಗಿತ್ತಂತೆ. ಇದೀಗ ಹಾಗೇನೂ ಇಲ್ಲ. ಎರಡೂ ಮಕ್ಕಳ ಜೊತೆ ಖುಷಿಯಾಗಿರುವೆ ಎಂದಿದ್ದಾರೆ ಅಮೂಲ್ಯ.

    Live Tv
    [brid partner=56869869 player=32851 video=960834 autoplay=true]

  • ‘ಅವಳಿ’ ಅಪ್ಪ, ಜವಳಿ ಮಕ್ಕಳು – 8 ತಿಂಗಳ ನಂತ್ರ 19ರ ಯುವತಿಯ ರಹಸ್ಯ ಬಯಲು

    ‘ಅವಳಿ’ ಅಪ್ಪ, ಜವಳಿ ಮಕ್ಕಳು – 8 ತಿಂಗಳ ನಂತ್ರ 19ರ ಯುವತಿಯ ರಹಸ್ಯ ಬಯಲು

    ಬ್ರೆಸಿಲಿಯಾ: ಒಂದೇ ದಿನ ಇಬ್ಬರು ಪುರುಷರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ 19 ವರ್ಷದ ಯುವತಿಯೊಬ್ಬಳು ಇಬ್ಬರಿಂದಲೂ ಅವಳಿ ಮಕ್ಕಳಿಗೆ ಜನ್ಮ ನೀಡಿರುವುದಾಗಿ ತಿಳಿಸಿದ್ದಾಳೆ.

    ಎರಡು ಮಗುವಿನ ತಂದೆ ಯಾರೆಂದು ಪತ್ತೆಹಚ್ಚಲು ಮುಂದಾದ ಯುವತಿ ಡಿಎನ್‍ಎ ಟೆಸ್ಟ್ ರಿಪೋರ್ಟ್ ಶಾಕ್ ಆಗಿದ್ದಾಳೆ. ತನ್ನ ಇಬ್ಬರು ಮಕ್ಕಳು ವಿಭಿನ್ನ ವ್ಯಕ್ತಿಗಳಿಂದ ಜನಿಸಿರುವ ವಿಚಾರ ತಿಳಿದುಬಂದಿದ್ದು, ಈ ರೀತಿ ಆಗುತ್ತದೆ ಅಂತ ನಾನು ಎಂದಿಗೂ ಊಹಿಸಿರಲಿಲ್ಲ ಎಂದು ಯುವತಿ ಹೇಳಿದ್ದಾಳೆ.

    ಈ ಕುರಿತಂತೆ ಯುವತಿಗೆ ಚಿಕಿತ್ಸೆ ನೀಡಿದ ವೈದ್ಯ ತುಲಿಯೊ ಜಾರ್ಜ್ ಫ್ರಾಂಕೊ ಅವರು ಪ್ರತಿಕ್ರಿಯಿಸಿ, ಈ ರೀತಿಯ ಪ್ರಕರಣಗಳು ಬಹಳ ಅಪರೂಪ. 10 ಲಕ್ಷದಲ್ಲಿ ಒಂದು ಪ್ರಕರಣ ಇಂತಹ ರೀತಿ ಇರುತ್ತದೆ. ವೈಜ್ಞಾನಿಕವಾಗಿ ಹೇಳುವುದಾದರೇ ಹೆಟೆರೊಪರೆಂಟಲ್ ಸೂಪರ್‍ಫೆಕಂಡೇಶನ್ ಪ್ರಪಂಚದಾದ್ಯಂತ ಕೇವಲ 20 ಪ್ರಕರಣಗಳಿವೆ. ವಿವಿಧ ವ್ಯಕ್ತಿಗಳ ಅವಳಿ ಮಕ್ಕಳಿಗೆ ಮಹಿಳೆ ಜನ್ಮ ನೀಡುವ ಅತ್ಯಂತ ಅಪರೂಪದ ವಿದ್ಯಮಾನವಾಗಿದೆ ಎಂದು ಹೇಳಿದ್ದಾರೆ.

    ಋತುಚಕ್ರದ ಸಮಯದಲ್ಲಿ ಬಿಡುಗಡೆಯಾದ ಎರಡನೇ ಅಂಡಾಣುವು ಪ್ರತ್ಯೇಕ ಲೈಂಗಿಕ ಸಂಭೋಗದಲ್ಲಿ ಬೇರೆ ಪುರುಷರ ವೀರ್ಯ ಕೋಶಗಳಿಂದ ಹೆಚ್ಚುವರಿಯಾಗಿ ಫಲವತ್ತಾದಾಗ ಇದು ಸಂಭವಿಸುತ್ತದೆ ಎಂದು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ವಿವರಿಸುತ್ತದೆ. ಇದನ್ನೂ ಓದಿ: ವೆಬ್ ಸರಣಿ ರೂಪದಲ್ಲಿ ಬರಲಿದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ

    ಒಂದೇ ತಾಯಿಯಿಂದ ಎರಡು ಮೊಟ್ಟೆಗಳನ್ನು ವಿಭಿನ್ನ ಪುರುಷರು ಫಲವತ್ತಾಗಿಸಿದಾಗ ಇದು ಸಂಭವಿಸಬಹುದು. ಶಿಶುಗಳು ತಾಯಿಯ ಆನುವಂಶಿಕ ವಸ್ತುಗಳನ್ನು ಹಂಚಿಕೊಳ್ಳುತ್ತವೆ, ಆದರೆ ಅವು ವಿಭಿನ್ನ ಜರಾಯುಗಳಲ್ಲಿ ಬೆಳೆಯುತ್ತವೆ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ‘ತಾಂಟ್ರೆ ನೀ ಬಾ ತಾಂಟ್’ ಖ್ಯಾತಿಯ ರಿಯಾಝ್ ಫರಂಗಿಪೇಟೆ ಮನೆಗೆ NIA ದಾಳಿ

    ಈ ವಿಚಾರವಾಗಿ ಪರತಿಕ್ರಿಯಿಸಿದ ಯುವತಿ ತನ್ನ ಇಬ್ಬರೂ ಮಕ್ಕಳಿಗೆ ಹೋಲಿಕೆ ಇರಲಿಲ್ಲ. 8 ತಿಂಗಳ ಬಳಿಕ ತಂದೆ ಯಾರಿರಬಹುದು ಎಂಬುವುದರ ಬಗ್ಗೆ ಅನುಮಾನ ಮೂಡಲು ಆರಂಭವಾಯಿತು. ಹೀಗಾಗಿ ಎಂಟು ತಿಂಗಳ ಶಿಶುಗಳನ್ನು ಡಿಎನ್‍ಎ ಪರೀಕ್ಷೆಗೆ ಒಳಪಡಿಸಿದಾಗ ಫಲಿತಾಂಶದಲ್ಲಿ ಒಂದು ಮಗು ಮಾತ್ರ ತಂದೆಯ ಹೋಲಿಕೆಯನ್ನು ಹೊಂದಿದೆ. ಅನುಮಾನದಿಂದ ಮತ್ತೆ ಪರೀಕ್ಷಿಸಿದಾಗಲೂ ಇದೇ ಫಲಿತಾಂಶ ಬಂದಿದೆ. ಈ ವೇಳೆ ಯುವತಿ ಒಂದೇ ದಿನ ಇಬ್ಬರ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ವಿಚಾರ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಉದ್ಯೋಗಿಯಿಂದ ಅವಳಿ ಮಕ್ಕಳು – 51ರ ಮಸ್ಕ್‌ ಈಗ 9 ಮಕ್ಕಳ ತಂದೆ

    ಉದ್ಯೋಗಿಯಿಂದ ಅವಳಿ ಮಕ್ಕಳು – 51ರ ಮಸ್ಕ್‌ ಈಗ 9 ಮಕ್ಕಳ ತಂದೆ

    ವಾಷಿಂಗ್ಟನ್‌: ಎಲೆಕ್ಟ್ರಿಕ್‌ ಕಾರು ಕಂಪನಿ ಟೆಸ್ಲಾ ಕಂಪನಿಯ ಮಾಲೀಕ, ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಅವರು ಕಂಪನಿಯ ಉದ್ಯೋಗಿಯೊಬ್ಬರಿಂದ ಅವಳಿ ಮಕ್ಕಳನ್ನು ಪಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

    ಎಲೋನ್‌ ಮಸ್ಕ್ ಮಾಲೀಕತ್ವದ ಬ್ರೈನ್‌ ಚಿಪ್‌ ಸ್ಟಾರ್ಟಪ್ ನ್ಯೂರಾಲಿಂಕ್‌ನ ಉನ್ನತ ಹುದ್ದೆಯಲ್ಲಿರುವ 36 ವರ್ಷದ ಶಿವೋನ್ ಜಿಲಿಸ್ ಜತೆಗಿನ ಸಂಬಂಧದಿಂದ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅವಳಿ ಮಕ್ಕಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.

    ಮಕ್ಕಳ ಹೆಸರನ್ನು ಬದಲಾವಣೆ ಮಾಡುವ ಸಂಬಂಧ ನ್ಯಾಯಾಲಯಕ್ಕೆ ಮಸ್ಕ್ ಮತ್ತು ಜಿಲಿಸ್ ಇಬ್ಬರೂ ತೆರಳಿದ್ದರಿಂದ ಈ ವಿಚಾರ ಈಗ ಬಹಿರಂಗವಾಗಿದೆ. ಅವಳಿ ಮಕ್ಕಳಿಂದಾಗಿ 51 ವರ್ಷದ ಮಸ್ಕ್‌ ಅವರು ಒಟ್ಟು 9 ಮಕ್ಕಳಿಗೆ ತಂದೆಯಾಗಿದ್ದಾರೆ.

    ಈ ಹಿಂದೆ ಕೆನಡಾದ ಗಾಯಕಿ ಗ್ರಿಮ್ಸ್ ಜತೆಗೆ ಇಬ್ಬರು ಮಕ್ಕಳನ್ನು ಮಸ್ಕ್‌ ಪಡೆದಿದ್ದಾರೆ. ಬಳಿಕ ಮಾಜಿ ಪತ್ನಿ ಕೆನಡಾದ ಲೇಖಕಿ ಜಸ್ಟಿನ್ ವಿಲ್ಸನ್ ಜತೆಗಿನ ದಾಂಪತ್ಯದಲ್ಲಿ ಐದು ಮಕ್ಕಳನ್ನು ಪಡೆದಿದ್ದರು. ಇದನ್ನೂ ಓದಿ: ಇಡಿ ದಾಳಿ ಬೆನ್ನಲ್ಲೇ ದೇಶ ತೊರೆದ ವಿವೋ ನಿರ್ದೇಶಕರು

    ಶಿವೊನ್ ಜಿಲಿಸ್ ಅವರು 2017ರ ಮೇ ತಿಂಗಳಿನಲ್ಲಿ ಮಸ್ಕ್ ಒಡೆತನದ ನ್ಯೂರಾಲಿಂಕ್ ಕಂಪನಿಗೆ ಸೇರಿದ್ದು, ನಂತರದಲ್ಲಿ ಟೆಸ್ಲಾದಲ್ಲಿ ಉನ್ನತ ಹುದ್ದೆಗೆ ಏರಿದ್ದರು.

    ಕೆನಡಾ ಮೂಲದ ಶಿವೋನ್‌ ಜಿಲಿಸ್‌ ಪ್ರಸ್ತುತ ನ್ಯೂರಲಿಂಕ್‌ನಲ್ಲಿ ಆಪರೇಷನ್‌ ಮತ್ತು ಸ್ಪೆಷಲ್‌ ಪ್ರೊಜೆಕ್ಟ್‌ ಡೈರೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಮಸ್ಕ್‌ ಅವರ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಕಂಪನಿ OpenAI ಬೋರ್ಡ್‌ ಸದಸ್ಯರಾಗಿದ್ದಾರೆ.

    44 ಶತಕೋಟಿ ಡಾಲರ್‌ ಮೌಲ್ಯದ ಟ್ವಿಟ್ಟರ್‌ ಖರೀದಿಯ ಬಳಿಕ ಈ ಕಂಪನಿಯನ್ನು ಮುಂದೆ ಯಾರು ನೋಡಿಕೊಳ್ಳಬಹುದು ಎಂಬ ವಿಚಾರ ಚರ್ಚೆ ಆಗುತ್ತಿದ್ದಾಗ ಶಿವೋನ್ ಜಿಲಿಸ್ ಹೆಸರು ಮುನ್ನೆಲೆಗೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಅವಳಿ ಮಕ್ಕಳಿಗೆ ವರ್ಷದ ಅಂತರ!- ಅಚ್ಚರಿಯಾದ್ರೂ ಇದು ಸತ್ಯ

    ಅವಳಿ ಮಕ್ಕಳಿಗೆ ವರ್ಷದ ಅಂತರ!- ಅಚ್ಚರಿಯಾದ್ರೂ ಇದು ಸತ್ಯ

    ಸ್ಯಾಕ್ರಮೆಂಟೊ: ಕ್ಯಾಲಿಫೋರ್ನಿಯಾದ ಮಹಿಳೆ ಕೇವಲ 15 ನಿಮಿಷಗಳಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರಲ್ಲೇನಿದೆ ಅಂತಹ ವಿಶೇಷ ಎಂದು ನಿಮ್ಮಲ್ಲಿ ಪ್ರಶ್ನೆ ಮೂಡಬಹುದು. ಆ ಎರಡೂ ಮಕ್ಕಳೂ ಬೇರೆ ಬೇರೆ ವರ್ಷಗಳಲ್ಲಿ ಜನ್ಮ ಪಡೆದಿದ್ದಾರೆ ಎಂಬುದೇ ವಿಶೇಷ.

    ಕ್ಯಾಲಿಫೋರ್ನಿಯಾದ ಫಾತಿಮಾ ಮಾಡ್ರಿಗಲ್ ಎಂಬ ಮಹಿಳೆ ನಾಟಿವಿಡಾಡ್ ಮೆಡಿಕಲ್ ಸೆಂಟರ್‌ನಲ್ಲಿ 15 ನಿಮಿಷಗಳ ಅಂತರದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಹೆರಿಗೆ ವಿಶೇಷವಾದುದು ಎಂದು ಆಸ್ಪತ್ರೆ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಪರ್ಷಿಯನ್ ಬೆಕ್ಕುಗಳಿಗೆ ಸೀಮಂತ ಮಾಡಿ ಸುದ್ದಿಯಾದ ಉದ್ಯಮಿ!

    ಆಯ್ಲಿನ್ ಹಾಗೂ ಆಲ್ಫ್ರೆಡೋ ಕೇವಲ 15 ನಿಮಿಷಗಳ ಅಂತರದಲ್ಲಿ ಜನಿಸಿದ್ದಾರೆ. ಆದರೆ ಅವರಿಬ್ಬರೂ ಬೇರೆ ಬೇರೆ ವರ್ಷಗಳಲ್ಲಿ ಜನಿಸಿದ್ದಾರೆ. ಅವಳಿ ಸಹೋದರರಲ್ಲಿ ಮೊದಲನೆಯವ 31 ಡಿಸೆಂಬರ್ 2021ರ ರಾತ್ರಿ 11:45 ಕ್ಕೆ ಜನಿಸಿದರೆ, ಆತನ ಅವಳಿ ಸಹೋದರ 1 ಜನವರಿ 2022ರಂದು ಮಧ್ಯರಾತ್ರಿ 12 ಗಂಟೆಗೆ ಜನಿಸಿದ್ದಾನೆ ಎಂದು ಆಸ್ಪತ್ರೆಯ ಫೇಸ್‌ಬುಕ್ ಪುಟದಲ್ಲಿ ತಿಳಿಸಿದೆ. ಇದನ್ನೂ ಓದಿ: BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

    ಈ ಪೋಸ್ಟ್ಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುದ್ದಾದ ಅವಳಿ ಮಕ್ಕಳಿಗೆ ಪ್ರೀತಿ ಹಾಗೂ ಶುಭಾಶಯ ಸುರಿಮಳೆ ಹರಿಸಿದ್ದಾರೆ.

  • ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಡ್ರೈವರ್- ಅವಳಿ ಮಕ್ಕಳು ಸೇರಿ ತಾಯಿ ದುರ್ಮರಣ

    ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಡ್ರೈವರ್- ಅವಳಿ ಮಕ್ಕಳು ಸೇರಿ ತಾಯಿ ದುರ್ಮರಣ

    ಹಾಸನ: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಸರಣಿ ಅಪಘಾತ ಮಾಡಿದ ಚಾಲಕನಿಂದಾಗಿ ಇಬ್ಬರು ಮಕ್ಕಳ ಸಹಿತ ತಾಯಿ ದುರ್ಮರಣಕ್ಕೀಡಾಗಿದ್ದಾರೆ.

    ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು. ಪ್ರಣತಿ, ಪ್ರಣವ್ ಇಬ್ಬರೂ ಅವಳಿ ಮಕ್ಕಳಾಗಿದ್ದಾರೆ. ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಎರಡು ಪುಟ್ಟ ಮಕ್ಕಳಿದ್ದ ಬೈಕ್‍ಗೂ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    POLICE JEEP

    ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಇದರಿಂದ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಬೈಕ್ ಅನ್ನು ಲಾರಿ ಎಳೆದುಕೊಂಡು ಹೋಗಿದೆ. ಇದರಿಂದ ಲಾರಿಯ ಟಯರ್ ನಡಿ ಸಿಲುಕಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಸಾಗಿದ ಮಗುವಿನ ದೇಹ ಛಿದ್ರಛಿದ್ರವಾಗಿದೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

    ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್

    ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್

    ಮುಂಬೈ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮತ್ತು ಪತ್ನಿ ದೀಪಿಕಾ ಪಲ್ಲಿಕಲ್ ತಂದೆ-ತಾಯಿ ಆಗಿದ್ದಾರೆ. ಹೌದು ದಿನೇಶ್ ಮತ್ತು ದೀಪಿಕಾ ದಂಪತಿಗೆ  ಅವಳಿ ಗಂಡು ಮಕ್ಕಳು ಜನಿಸಿದೆ.

    ಈ ಸಿಹಿಯಾದ ವಿಚಾರವನ್ನು ದಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಸ್ನೇಹಿತರು ಮತ್ತು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ದಿನೇಶ್ ಕಾರ್ತಿಕ್, ಪತ್ನಿ ಮತ್ತು ಮಕ್ಕಳೊಂದಿಗೆ ಕುಳಿತುಕೊಂಡಿರುವುದನ್ನು ಕಾಣಬಹುದಾಗಿದೆ. ಜೊತೆಗೆ, ನೋಡ ನೋಡುತ್ತಿದ್ದಂತೆ ಮೂರು ಈಗ ಐದಾಗಿದೆ. ದೀಪಿಕಾ ಮತ್ತು ನನಗೆ ಇಬ್ಬರು ಮುದ್ದಾದ ಗಂಡು ಮಕ್ಕಳು ಜನಿಸಿದ್ದಾರೆ. ಕಬೀರ್ ಪಳ್ಳಿಕಲ್ ಕಾರ್ತಿಕ್, ಝಿಯಾನ್ ಪಳ್ಳಿಕಲ್ ಕಾರ್ತಿಕ್ ಇದಕ್ಕಿಂತಲೂ ಸಂಭ್ರಮ ಸಿಗಲಾರದು ಎಂದು ತಮ್ಮ ಟ್ವಿಟ್ಟರ್‍ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

    Dinesh Karthik

    ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ. ಕಾರ್ತಿಕ್ ಅವರ ಪತ್ನಿ ದೀಪಿಕಾ ಸ್ಕ್ವಾಷ್ ಆಟಗಾರ್ತಿಯಾಗಿದ್ದಾರೆ. 2012ರಲ್ಲಿ ನಿಕಿತಾ ವಂಜಾರಾ ಅವರೊಂದಿಗೆ ವಿಚ್ಛೇದನ ಪಡೆದ ನಂತರ 2013ರಲ್ಲಿ ದಿನೇಶ್, ದೀಪಿಕಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡು, 2015ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಇದನ್ನೂ ಓದಿ: ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2

    ಇತ್ತೀಚೆಗಷ್ಟೇ, ದಿನೇಶ್ ಕಾರ್ತಿಕ್ ದುಬೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಪರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆಟ ಆಡಿದ್ದರು. ಅವರ ತಂಡವು ಐಪಿಎಲ್ ಪಂದ್ಯದಲ್ಲಿ ಫೈನಲ್‍ಗೆ ತಲುಪಿ ನಂತರ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ವಿರುದ್ಧ 27 ರನ್‍ಗಳಿಂದ ಸೋಲನ್ನು ಎದುರಿಸಿತು.